ಕುಶಾಲನಗರ ಏ.20 NEWS DESK : ಸಿಇಟಿ ಪರೀಕ್ಷೆ ಬರೆಯಲು ತೆರಳಿದ ಸಂದರ್ಭ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆದು ಅವಮಾನಿಸಿದ ಪ್ರಕರಣವನ್ನು ಖಂಡಿಸಿ ಕುಶಾಲನಗರದಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.ಬೀದರ್ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿ ಧರಿಸಿದ್ದ ಜನಿವಾರವನ್ನು ತೆಗೆಯಲು ತಿಳಿಸಿದ್ದಲ್ಲದೆ ಅವರ ಮನಸ್ಸಿಗೆ ಆಘಾತ ಉಂಟು ಮಾಡಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪರೀಕ್ಷೆ ಬರೆಯಲು ಅವಕಾಶ ನೀಡದೆ ಭವಿಷ್ಯ ದ ಜೊತೆ ಚೆಲ್ಲಾಟ ಆಡಿರುವ ಅಧಿಕಾರಿ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗೆ ಮತ್ತೆ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು ಎಂದು ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಕೆ.ಎಸ್.ರಾಜಶೇಖರ್ ಒತ್ತಾಯಿಸಿದರು. ಕುಶಾಲನಗರ ಗಣಪತಿ ದೇವಾಲಯದ ಮುಂಭಾಗ ಸೇರಿದ ಸಂಘದ ಪ್ರಮುಖರು ಸದಸ್ಯರು ಹಾಗೂ ಪಟ್ಟಣದ ಅರ್ಚಕ ಸಮುದಾಯದ ಸದಸ್ಯರು ಹಿಂದೂ ಧರ್ಮದ ಮೇಲೆ ಧಾರ್ಮಿಕ ನಂಬಿಕೆಗೆ ಅಪಮಾನ ಎಸಗಿರುವ ವ್ಯಕ್ತಿಗಳ ವಿರುದ್ಧ ಘೋಷಣೆ ಕೂಗಿದರು. ಮುಂದೆ ಇಂತಹ ಘಟನೆ ನಡೆಯದಂತೆ…
ಲೇಖಕ: admin
ಮಡಿಕೇರಿ ಏ.20 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ಆಂಟಿಮೈಕ್ರೋಬಯಲ್ ರೆಸಿಸ್ಟೆನ್ಸ್: ಸ್ಟ್ರಾಟಜೀಸ್ ಫಾರ್ ಪ್ರಿವೆನ್ಸನ್ ಮತ್ತು ಅಲ್ಟಾರ್‍ನೇಟಿವ್ಸ್’ ವಿಷಯದ ಮೇಲೆ ಮೇ, 14 ರಿಂದ 16 ರವಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ರಿಸರ್ಚ್ ಪೇಪರ್ ಪ್ರೆಸೆಂಟೇಷನ್ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್‍ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದ್ದು. ಆಸಕ್ತ ಪತ್ರಿನಿಧಿಗಳು ಮೇ, 6 ರಳೊಗಾಗಿ Google from- https://forms.gle/nphLXewAESvuPP5Y8 ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ಅಧಿಕಾರಿಗಳನ್ನು (ಮೊ.9845258894, 9743084194 ಮತ್ತು 9686449019) ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್‍ಸೈಟ್ https//:kstacademy.in ವೀಕ್ಪಿಸಬಹುದು ಎಂದು ಕರ್ನಾಟಕ ವಿಜ್ಞಾನ…
ಮಡಿಕೇರಿ ಏ.20 NEWS DESK : ಸ್ಥಳೀಯ ಸಂಸ್ಥೆಗಳಿಂದ ರೆಡ್ ಕ್ರಾಸ್ ಗೆ ನಿಯಮ ಪ್ರಕಾರ ಸಲ್ಲಬೇಕಾದ ಅನುದಾನವನ್ನು ವಿಳಂಭರಹಿತವಾಗಿ ಪಡೆದುಕೊಂಡು ನಿಯಮಾನುಸಾರ ಜನರಿಗೆ ಪ್ರಯೋಜನಕಾರಿಯಾಗುವ ಯೋಜನೆಗಳಿಗೆ ಬಳಸಿಕೊಳ್ಳುವಂತೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕನಾ೯ಟಕ ರಾಜ್ಯದ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಸೂಚಿಸಿದ್ದಾರೆ. ನಗರದಲ್ಲಿನ ಕೊಡಗು ರೆಡ್ ಕ್ರಾಸ್ ಭವನಕ್ಕೆ ಭೇಟಿ ನೀಡಿದ ಬಳಿಕ ರೆಡ್ ಕ್ರಾಸ್ ನಿದೇ೯ಶಕರೊಂದಿಗೆ ಸಮಾಲೋಚನೆ ನಡೆಸಿ ಜಿಲ್ಲೆಯಲ್ಲಿ ರೆಡ್ ಕ್ರಾಸ್ ಕಾಯ೯ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ರಾಜೀವ್ ಶೆಟ್ಟಿ, ಸ್ಥಳೀಯ ಸಂಸ್ಥೆಗಳಾದ ಜಿ.ಪಂ. ಗ್ರಾ..ಪಂ. ತಾ.ಪಂ. ನಗರ ಮತ್ತು ಪುರಸಭೆ, ಪ.ಪಂ.ಗಳಿಂದ ಇನ್ನು ಕೂಡ ನಿಯಮಪ್ರಕಾರ ರೆಡ್ ಕ್ರಾಸ್ ಗೆ ಪಾವತಿಸಬೇಕಾದ ವಾಷಿ೯ಕ ಅನುದಾನ ಪಾವತಿಯಾಗದೇ ಇರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ವಿಳಂಭರಹಿತವಾಗಿ ಕಾಯ೯ಪ್ರವೖತ್ತವಾಗಿ ರಡ್ ಕ್ರಾಸ್ ಗೆ ಸಲ್ಲಿಸಬೇಕಾದ ಅನುದಾನವನ್ನು ನೀಡುವಂತೆಯೂ ಅವರು ಸೂಚಿಸಿದರು. ರಾಜ್ಯದ 31 ಜಿಲ್ಲೆಗಳಲ್ಲಿಯೂ ಮುಂದಿನ ದಿನಗಳಲ್ಲಿ ಯೂತ್ ರೆಡ್ ಕ್ರಾಸ್…
ಮಡಿಕೇರಿ ಏ.19 NEWS DESK : ಮಡಿಕೇರಿ ನಗರಸಭೆಗೆ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಈಗಾಗಲೇ ಹಲವು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಹಾಗೂ ನಗರಸಭೆಯ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುದಾನ ತಂದಿರುವ ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಪ್ರಯತ್ನ ಅಭಿನಂದನಾರ್ಹ, ಮುಂದಿನ ದಿನಗಳಲ್ಲಿಯೂ ಕೇಂದ್ರದಿಂದ ಮತ್ತಷ್ಟು ಅನುದಾನ ಬರಲಿದೆ ಎಂದರು. ಸ್ವಚ್ಛ ಭಾರತ ಮಿಷನ್ 1 (ಭಾಗ 1) 6.69 ಕೋಟಿ ಬಿಡುಗಡೆಯಾಗಿದ್ದು, ಇದರಲ್ಲಿ ಮಡಿಕೇರಿ ಸಭೆಯ ಪಾರಂಪರಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಇದರ ಕಾಮಗಾರಿ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಸ್ವಚ್ಚ ಭಾರತ ಮಿಷನ್ 1 (ಭಾಗ 2)ರಲ್ಲಿ 5.71 ಕೋಟಿ ನಿರ್ವಹಣೆಗೆ ಅನುದಾನ ಇರಿಸಲಾಗಿದೆ. ಈಗಾಗಲೇ ಇದರಲ್ಲಿ 4.98 ಕೋಟಿ ಘನ ತ್ಯಾಜ್ಯ ಕಾಮಗಾರಿಗಳ ಟೆಂಡರ್ ಕರೆಯಲಾಗಿದೆ ಮತ್ತು ಮಡಿಕೇರಿ ನಗರಸಭೆಗೆ…
*ಮೈದಾನ 1* ಚೆಪ್ಪುಡಿರ ಮತ್ತು ಕರ್ತಮಾಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ಸಾಧಿಸಿತು. ಚೆಪ್ಪುಡಿರ ಪರ ವಚನ್ 2, ಚೇತನ್ ಚಿಣ್ಣಪ್ಪ ಹಾಗೂ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಕರ್ತಮಾಡ ತರುಣ್ ಚಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾದಂಡ ಮತ್ತು ಮೇಚಿಯಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಮೇಚಿಯಂಡ ತಂಡ ಜಯ ಸಾಧಿಸಿತು. ಮೇಚಿಯಂಡ ಪರ ವಿನಿತ್ ನಾಣಯ್ಯ ಹಾಗೂ ಸುನೀಲ್ ನಾಣಯ್ಯ ಗೋಲು ದಾಖಲಿಸಿದರು. ಮಾದಂಡ ಪರ ಸೈನಾ ಪೊನ್ನಪ್ಪ 1 ಗೋಲು ಬಾರಿಸಿದರು. ಮಾದಂಡ ಮಿಲನ್ ಪೂಣಚ್ಚ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಳ್ಳಂಡ ಮತ್ತು ಬೊಟ್ಟೋಳಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಬೊಟ್ಟೋಳಂಡ ಜಯ ಸಾಧಿಸಿತು. ಬೊಟ್ಟೋಳಂಡ ಪರ ಸೂರಜ್ ಅಯ್ಯಪ್ಪ ಹಾಗೂ ಮುತ್ತಣ್ಣ ತಲಾ 1 ಗೋಲು ದಾಖಲಿಸಿದರು. ಬೊಳ್ಳಂಡ ಪರ ರತುಲ್ ತಿಮ್ಮಯ್ಯ 1 ಗೋಲು ಬಾರಿಸಿದರು.…
ಮಡಿಕೇರಿ ಏ.19 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತ ಕಾರ್ಯಾಗಾರ ನಡೆಯಿತು. ಕಾಲೇಜು ಸೇಮಿನಾರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ವೃತ್ತಿಪರ ಕೋರ್ಸ್‍ಗಳಲ್ಲಿ ವಿವಿಧ ಸಾಕಷ್ಟು ವಿಪುಲ ಅವಕಾಶಗಳಿದ್ದು, ಗುರುಗಳ ಮಾರ್ಗದರ್ಶನ ಮತ್ತು ಸಲಹೆಗಳನ್ನು ಪಡೆದುಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದರು. ನಿತ್ಯ ಪತ್ರಿಕೆಗಳನ್ನು ಓದುವ ಮೂಲಕ ಹೆಚ್ಚಿನ ವಿಷಯ ಅರಿಯಬೇಕು. ಜೀವನದಲ್ಲಿ ಪರಿಪೂರ್ಣತೆಯನ್ನು ಪಡೆಯಲು ಶಾಲಾ ಹಂತದಲ್ಲಿಯೇ ವೌಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೆ. ಡಾ.ಬಿ.ರಾಘವ, ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಅತ್ಯವಶ್ಯಕ ಎಂದರು. ಮಹಾನಗರಗಳಲ್ಲಿ ವಿದ್ಯಾರ್ಥಿಗಳು ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿರುತ್ತಾರೆ. ಆದರೆ ಗ್ರಾಮೀಣ…
ಬೆಂಗಳೂರು ಏ.19 NEWS DESK : ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಕಾರ್ಯಾಗಾರ ಇಂದು ನಡೆಯಿತು. ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯಸಭಾ ಮಾಜಿ ಸದಸ್ಯ ಡಾ. ವಿನಯ್ ಸಹಸ್ರಬುದ್ಧೆ, ಮಾಜಿ ಸಂಸದ ಮುನಿಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷರಾದ ಮಾಳವಿಕಾ ಅವಿನಾಶ್, ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಏ.19 NEWS DESK : ಮುದ್ದಂಡ ಕಪ್ ಹಾಕಿ ಉತ್ಸವದ ಫೈನಲ್ ಪಂದ್ಯಾವಳಿ ಮತ್ತು ಸಮಾರೋಪ ಸಮಾರಂಭ ನಡೆಯುವ ಏ.27 ರಂದು ಪ್ರತಿಷ್ಠಿತ ಪ್ರಶಸ್ತಿ ವಿಜೇತ, ಶ್ರೇಷ್ಠ ಆಟಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. 1975ರ ವಿಶ್ವಕಪ್ ಹಾಕಿ ವಿಜೇತ, ವಿಶ್ವದಲ್ಲೇ ಅತಿ ಹೆಚ್ಚು ಪದಕ ಗಳಿಸಿರುವ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ಸಿಡಿಲಮರಿ ಖ್ಯಾತಿಯ ಬಿ.ಪಿ.ಗೋವಿಂದ ಅವರು ಮುದ್ದಂಡ ಹಾಕಿ ಹಬ್ಬಕ್ಕೆ ಆಗಮಿಸಲಿದ್ದಾರೆ. 1972 ಮ್ಯುನಿಚ್ ಒಲಂಪಿಕ್ಸ್, 1973 ವಿಶ್ವಕಪ್, 1976 ಮಾಂಟ್ರಿಲ್ ಒಲಂಪಿಕ್ಸ್ ನ ಎಲ್ಲಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪದಕ ಗಳಿಸಿದ ಖ್ಯಾತಿ ಇವರದ್ದು. ವಿಶ್ವಕಪ್ ಹಾಕಿ ಭೂಪಟದಲ್ಲಿ ಭಾರತ ಹಾಕಿ ತಂಡದ ಹೆಸರನ್ನು ಅಜರಾಮರಗೊಳಿಸಿದ ಕೊಡಗಿನ ವೀರ, 1975 ವಿಶ್ವಕಪ್ ಹಾಕಿ ವಿಜೇತ ತಂಡದ ಆಟಗಾರ ಪೈಕೇರ ಕಾಳಯ್ಯ, 1980 ಮಾಸ್ಕೋ ಒಲಂಪಿಕ್ಸ್ ನಲ್ಲಿ ಚಿನ್ನ ಗೆದ್ದ ನಾಯಕ, ಭಾರತ ತಂಡದ ತರಬೇತುದಾರ, ವಿಶ್ವಕಪ್…
ಮಡಿಕೇರಿ ಏ.19 NEWS DESK : ಕೊಡಗು ಗೌಡ ಸಮಾಜಗಳ ಒಕ್ಕೂಟದ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಆನಂದ್ ಕರಂದ್ಲಾಜೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಜೇಶ್ ತೇನನ, ಎರಡನೇ ಬಾರಿಗೆ ಕಾರ್ಯದರ್ಶಿಯಾಗಿ ಉದಯ್ ಪೇರಿಯನ, ಖಜಾಂಚಿಯಾಗಿ ನವೀನ್ ಅಂಬೆಕಲ್, ಜಂಟಿ ಕಾರ್ಯದರ್ಶಿಯಾಗಿ ಕೊಡಪಾಲು ಗಣಪತಿ, ನಿರ್ದೇಶಕರುಗಳಾಗಿ ಪೇರಿಯನ ಜಯಾನಂದ, ಚಿಲ್ಲನ ಗಣಿಪ್ರಸಾದ್, ಕೊಡಗನ ಹರ್ಷ, ಕುಯ್ಯಮುಡಿ ಅಶ್ವಿನಿ ಕುಮಾರ್, ಬೇಕಲ್ ಬಿಪಿನ್, ಪುಳಕಂಡ್ರ ಸುದೀಪ್, ಕುಯ್ಯಮುಡಿ ರಂಜು ಪಾಣತ್ತಲೆ, ಜಗದೀಶ್ ಮಂದಪ್ಪ, ಕೊಂಬಾರನ ರೋಷನ್, ಮೊಟ್ಟನ ಕರುಣ, ಪುದಿಯನೆರವನ ರೇವತಿ ರಮೇಶ್ ಹಾಗೂ ಕುಂಬುಗೌಡನ ಜಲಜ ವಿನೋದ್ ನೇಮಕಗೊಂಡಿದ್ದಾರೆ. ಮಡಿಕೇರಿಯ ಗೌಡ ಸಮಾಜದಲ್ಲಿ ನಡೆದ ಕೊಡಗು ಗೌಡ ಸಮಾಜಗಳ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮಾಜಿ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ನೂತನ ಅಧ್ಯಕ್ಷ ಆನಂದ್ ಕರಂದ್ಲಾಜೆ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಆನಂದ್ ಕರಂದ್ಲಾಜೆ ಅವರು ಗೌಡ ಸಮಾಜಗಳ…
ಸುಂಟಿಕೊಪ್ಪ, ಏ.19 NEWS DESK : ಶುಭಶುಕ್ರವಾರದ ಅಂಗವಾಗಿ ಸಂತ ಮೇರಿ ಶಾಲಾ ಸಭಾಂಗಣದಲ್ಲಿ ಕ್ರೈಸ್ತ ಭಾಂದವರು ಆರಾಧನೆ, ದ್ಯಾನ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮಗುರುಗಳಾದ ವಿಜಯಕುಮಾರ್ ಹಾಗೂ ಕನ್ಯಾಸ್ತ್ರಿಯರು ವಿಶೇಷ ಪ್ರಾರ್ಥನೆ ನೇರವೇರಿಸಿದರು. ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ದಿನದ ಸಾಂಘ್ಯವನ್ನು ನೇರವೇರಿಸಿದರು. ಮಧ್ಯಾಹ್ನ ಸಂತ ಅಂತೋಣಿ ಶಾಲಾವರಣದಿಂದ ದೇವಾಲಯದಿಂದ ಕ್ರೈಸ್ತ ಶಿಲುಬೆ ಮೆರವಣಿಗೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಪಾಲ್ಗೊಂಡಿದ್ದರು.






