ನಾಪೋಕ್ಲು ಏ.19 NEWS DESK : ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಭಾಗ್ಯವತಿ ಗ್ರಾಮ ಪಂಚಾಯಿತಿ ಸದಸ್ಯರ ಪೋಷಕರ ದಾನಿಗಳ ಜೊತೆಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡು ಅಂಗನವಾಡಿ ಕೇಂದ್ರ ಉತ್ತಮ ಮಟ್ಟದಲ್ಲಿ ನಡೆಯಲು ಕಾರಣಕರ್ತರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಹೇಳಿದರು. ನಾಪೋಕ್ಲು ಭಗವತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಲ್ಲಮಾವಟ್ಟಿ ವೃತ್ತದ ಹಳೆ ತಾಲ್ಲೂಕು ಅಂಗನವಾಡಿ ಕೇಂದ್ರದ ಗ್ರಾಜುಯೇಷನ್ ಡೇ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಮಾತನಾಡಿದರು. ಭಾಗ್ಯವತಿ ಅವರು ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸುವಂತಾಗಲಿ ಎಂದು ಆಶಿಸಿದರು. ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಪ್ರೊ.ಕಲ್ಯಾಣ ಪೂಣಚ್ಚ ಉದ್ಘಾಟಿಸಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯುವರಾಜ್, ಮೇಪಡಂಡ ಸವಿತಾ ಕೀರ್ತನ್, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸೀತಾಲಕ್ಷ್ಮಿ, ದಂತ ವೈದ್ಯೆ ನೂರ್ ಫಾತಿಮಾ, ಬಾಲ ವಿಕಾಸ ಸಮಿತಿಯವರು ದಾನಿಗಳು…
ಲೇಖಕ: admin
ನಾಪೋಕ್ಲು ಏ.19 NEWS DESK : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ 25ನೇ ವರ್ಷದ ಮುದ್ದಂಡ ಕಪ್ 2025, ಹಾಕಿ ಪಂದ್ಯಾವಳಿಯಲ್ಲಿ ಹಲವರು ದಿನನಿತ್ಯ ಕಾರ್ಯನಿರ್ವಹಿಸಿ ಶ್ರಮಿಸುತ್ತಿದ್ದಾರೆ. ಇದರಲ್ಲಿ ವೀಕ್ಷಕ ವಿವರಣೆ ಕೊಡುವುದು ಸುಲಭದ ಮಾತಲ್ಲ. ಕ್ರೀಡೆಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿರಬೇಕು ಮಾತ್ರವಲ್ಲದೆ ಎಲ್ಲವನ್ನು ಸರಿದೂಗಿಸಿಕೊಂಡು ಮುನ್ನಡೆಸುವ ಜಾಣ್ಮೆಯು ಅಷ್ಟೇ ಮುಖ್ಯವಾಗಿದೆ. ಹಾಕಿ ಪಂದ್ಯಾವಳಿಯಲ್ಲಿ ಈ ಕಾರ್ಯವನ್ನು ಖ್ಯಾತ ಕ್ರೀಡಾ ವೀಕ್ಷಕ (ವರದಿ) ವಿವರಣೆಗಾರೂ ಹಾಗೂ ಬರಹಗಾರರು ಆಗಿರುವ ಚೆಪ್ಪುಡೀರ ಕಾರ್ಯಪ್ಪ ಹಾಗೂ ಮಾಳೇಟಿರ ಶ್ರೀನಿವಾಸ್ ಇವರ ಜೊತೆ ಚೋಕಿರ ಅನಿತಾ, ಬೊಟ್ಟೋಳಂಡ ಸೌಮ್ಯ, ಮೂಡೆರ ಹರೀಶ್ ಕಾಳಯ್ಯ, ಕುಲ್ಲೇಟಿರ ಅರುಣ್ ಬೇಬ, ಅಜ್ಜೇಟಿರ ವಿಕ್ರಮ್ ಹಾಗೂ ಚೆಯ್ಯಂಡ ಬನಿತ್ ಬೋಜಣ್ಣ ಇವರನ್ನು ಒಳಗೊಂಡ ವೀಕ್ಷಕ ವಿವರಣೆ ತಂಡ ಮುದ್ದಂಡ ಹಾಕಿ ಹಬ್ಬದಲ್ಲಿ ಅದ್ಭುತವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನ ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಏ.19 NEWS DESK : ಪಾಲೂರು ಗ್ರಾಮದ ಶ್ರೀಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಏ.13 ರಂದು ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಂತರ ಗಣ ಹೋಮ ಮತ್ತು ಕೊಡಿಮರ ಏರಿಸುವುದು, ಬೆಳಿಗ್ಗೆ ಮಧ್ಯಾಹ್ನ ಮತ್ತು ರಾತ್ರಿ ಉತ್ಸವ ಬಲಿ ಮತ್ತು ರಾತ್ರಿ ದೀಪಾರಾಧನೆ ನೆರವೇರಿತು. ಮರುದಿನ ಪಟ್ಟಣಿ ಹಬ್ಬ ಉತ್ಸವದ ಅಂಗವಾಗಿ ಬೆಳಿಗ್ಗೆ ತುಲಾ ಭಾರಸೇವೆ ಸೇರಿದಂತೆ ವಿವಿಧ ಹರಕೆ ಸೇವೆ ಕಾಣಿಕೆಗಳನ್ನು ಒಪ್ಪಿಸಿ ಮಧ್ಯಾಹ್ನ ಎತ್ತು ಪೆÇೀರಾಟ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಮಹಾಪೂಜೆ, ವಿಶೇಷ ಸೇವೆಗಳು ಜರುಗಿ ಮಹಾಮಂಗಳಾರತಿ ತೀರ್ಥ, ಪ್ರಸಾದ ವಿತರಣೆ ಮತ್ತು ಉತ್ಸವದಲ್ಲಿ ಪಾಲ್ಗೊಂಡ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಂತರ ಜೋಡಿ ದೇವರ ನೃತ್ಯೋತ್ಸವ ನಡೆಯಿತು. ದೇವಾಲಯದ ಮುಖ್ಯ ಅರ್ಚಕ ದೇವಿಪ್ರಸಾದ್, ತಂತ್ರಿಗಳಾಗಿ ಕೃಷ್ಣ ಮತ್ತು ಸತ್ಯಮೂರ್ತಿ ಸರಳಾಯ, ಕೃಷ್ಣಮೂರ್ತಿ ಇನ್ನಿತರರು ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಜಾತ್ರಾ…
ಮೈಸೂರು NEWS DESK ಏ. 18: ಕರ್ನಾಟಕ ಸಾಂಸ್ಕೃತಿಕ ಹಾಗೂ ಪಾರಂಪರಿಕ ರಾಜಧಾನಿ ಮೈಸೂರಿನಲ್ಲಿ ನಡೆಯುತ್ತಿರುವ ಮರಗಳ ಮಾರಣಹೋಮವನ್ನು ತೀವ್ರವಾಗಿ ಖಂಡಿಸಿರುವ *ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಅವರು ಈ ಸಂಬಂಧ ನಿರ್ಧಾರ ಮರು ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ನಜರಾಬಾದ್ ವ್ಯಾಪ್ತಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ವೃತ್ತದ ಬಳಿ 40 ಮರಗಳನ್ನು ಕಡಿದಿರುವ ಬಗ್ಗೆ ಇನ್ನಷ್ಟು ಮರಗಳಿಗೆ ಕೊಡಲಿ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಯದುವೀರ್ ಒಡೆಯರ್, “ಮರ”ಮೇಧ ನಿಲ್ಲಿಸಲು ನಡೆಯುತ್ತಿರುವ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದು ಸಾಧುವಲ್ಲ. ಪರಿಸರ ಹಾಗೂ ಪ್ರಕೃತಿಯನ್ನು ಸಂರಕ್ಷಿಸಿಕೊಂಡೇ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ. ಯಾವುದೇ ಕಾರಣಕ್ಕೂ ನಾವು ಮರಗಳನ್ನು ಕಡಿಯಲು ಬಿಡುವುದಿಲ್ಲ. ಒಂದು ವೇಳೆ ಈ ರೀತಿಯ ಕ್ರಮಗಳನ್ನು ಕೈಗೊಳ್ಳಲೇಬೇಕಾಗುತ್ತದೆ ಎಂದು ತಿಳಿಸಿದರೆ ಇದಕ್ಕೆ ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಂಸದರು ತಿಳಿಸಿದ್ದಾರೆ. ಪರಿಸರ ತಜ್ಞರು,…
ಸಿದ್ದಾಪುರ NEWS DESK ಏ.18 : ಹುಲಿ ದಾಳಿಗೆ ಒಂದೂವರೆ ವರ್ಷದ ಕರುವೊಂದು ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ. ಗ್ರಾಮದ ಸಿ.ಟಿ.ಪೊನ್ನಪ್ಪ ಎಂಬುವವರಿಗೆ ಸೇರಿದ ಕರು ಇದಾಗಿದ್ದು, ಮೇಯಲು ಬಿಟ್ಟ ಸಂದರ್ಭ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಕಳೆದ ಒಂದು ತಿಂಗಳಲ್ಲಿ ಮಾಲ್ದಾರೆ ಮತ್ತು ಚೆನ್ನಯ್ಯನ ಕೋಟೆ ಗ್ರಾಮ ವ್ಯಾಪ್ತಿಯಲ್ಲಿ ಐದು ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ. ಜೀವಭಯದಲ್ಲಿರುವ ಈ ಭಾಗದ ಜನ ಅರಣ್ಯ ಇಲಾಖೆ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಹುಲಿಯನ್ನು ಶೀಘ್ರ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ. ಹುಲಿಯ ಚಲನವಲನ ಪರಿಶೀಲಿಸಲು ಕ್ಯಾಮರಾ ಅಳವಡಿಸಲಾಗಿದ್ದು, ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶನಿವಾರವೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆರ್.ಎಫ್.ಒ ಗಂಗಾಧರ್ ನೇತೃತ್ವದಲ್ಲಿ ಡಿಆರ್‌ಎಫ್‌ಒ ಶಶಿ, ರಾಜೇಶ್, ವಾಚರ್ ಸುನಿಲ್, ಆರ್‌ಆರ್‌ಟಿ ತಂಡದ ಶಂಕರ್, ಮುತ್ತ, ರಂಜಿತ್, ಭರತ್, ರೋಷನ್, ಪ್ರದೀಪ್ ಇದ್ದರು.
ಮಡಿಕೇರಿ NEWS DESK ಏ.18 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರು ಕೊಡವ ಸಮಾಜದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು. ಎ.ಎಸ್.ಪೊನ್ನಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಪ್ರಮುಖ ಖಾತೆ ನೀಡುವಂತೆ ಒತ್ತಾಯಿಸಿ ಕೊಡವ ಸಮಾಜ ಸರ್ವಾನುಮತದಿಂದ ತೆಗೆದುಕೊಂಡ ನಿರ್ಣಯದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಮುಖರು ಸಚಿವ ಸ್ಥಾನದ ಅಗತ್ಯತೆಯ ಬಗ್ಗೆ ವಿವರಿಸಿದರು. ಅಲ್ಪಸಂಖ್ಯಾತ ಕೊಡವ ಜನಾಂಗದ ಪ್ರಮುಖ ಹಾಗೂ ಬಲಿಷ್ಠ ಪ್ರತಿನಿಧಿಯಾಗಿರುವ ಎ.ಎಸ್.ಪೊನ್ನಣ್ಣ ಅವರು ಈಗಾಗಲೇ ಮುಖ್ಯಮಂತ್ರಿಗಳ ಕಾನೂನು ಸಲಹಗಾರರಾಗಿ ನಾಡಿನಾದ್ಯಂತ ಹೆಸರು ಮಾಡಿದ್ದಾರೆ. ಅವರು ಸಚಿವ ಸ್ಥಾನಕ್ಕೆ ಯೋಗ್ಯರು ಎಂಬ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಭಾಷಿಕ ಅಲ್ಪಸಂಖ್ಯಾತರೂ ಆಗಿರುವ ಕೊಡವ ಜನಾಂಗದವರು ಶತಮಾನಗಳಿಂದ ಕ್ರೀಡೆ, ಸೈನ್ಯ ಹಾಗೂ ಇನ್ನಿತರ ಪ್ರಮುಖ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತಾ ಬಂದಿದ್ದಾರೆ. ಕೊಡವ ಸಮುದಾಯದ ಪ್ರತಿನಿಧಿಯಾಗಿರುವ ಪೊನ್ನಣ್ಣ ಅವರಿಗೆ ಪ್ರಮುಖ ಖಾತೆಯನ್ನು ನೀಡಿ ಸಚಿವರನ್ನಾಗಿಸಿ ತಮ್ಮ…
ಮಡಿಕೇರಿ ಏ.18 NEWS DESK : ಸ್ನೇಹಿತರ ಯುವಕ ಸಂಘದ 42ನೇ ವರ್ಷದ ವಾರ್ಷಿಕೋತ್ಸವ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಗಾಳೀಬೀಡು ಗ್ರಾಮದ ಅಡ್ಕದ ಬಾಣೆಯಲ್ಲಿ ಯಶಸ್ವಿಯಾಗಿ ನಡೆಯಿತು. ನೆಹರು ಯುವ ಕೇಂದ್ರ ಮಡಿಕೇರಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ, ಜಿಲ್ಲಾ ಮತ್ತು ತಾಲೂಕು ಯುವ ಒಕ್ಕೂಟ ಇದರ ಸಹಯೋಗದೊಂದಿಗೆ ಸ್ನೇಹಿತರ ಯುವಕ ಸಂಘದ ಅಧ್ಯಕ್ಷ ಕೋಳುಮುಡಿಯದ ಎ.ಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ನಿವೃತ್ತ ಡಿವೈಎಸ್‍ಪಿ ಯಾಲದಾಳು ಕೇಶವಾನಂದ ಉದ್ಧಾಟಿಸಿದರು. ಸಭಾಕಾರ್ಯಕ್ರಮದ ನಂತರ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ಮುಕ್ತ ಹಗ್ಗಜಗ್ಗಾಟ ನಡೆಯಿತು. ಅಲ್ಲದೇ, ಪುರುಷರಿಗೆ ವಾಲಿಬಾಲ್ ಪಂದ್ಯಾಟ, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟ ನಡೆಯಿತು. ಪುರುಷರಿಗೆ, ಮಹಿಳೆಯರಿಗೆ, ಹಿರಿಯ ಬಾಲಕ-ಬಾಲಕಿಯರಿಗೆ ಪ್ರತ್ಯೇಕ ವಿಭಾಗದಲ್ಲಿ ಓಟದ ಸ್ಪರ್ಧೆ ನಡೆಯಿತು. ಅಲ್ಲದೇ, ಬಾರದ ಕಲ್ಲು ಎಸೆತ, ಬಕೇಟ್‍ಗೆ ಚೆಂಡು ಹಾಕುವುದು, 1,500 ಮೀಟರ್ ಓಟ, 100*4 ರಿಲೆ ಓಟ, ವಯಸ್ಕರಿಗೆ ಓಟ, ಪಟ್ಟಣಕ್ಕೆ ಬಾಂಬ್, ಕೋಳಿ ಜಗಳ ಸೇರಿದಂತೆ…
ಮಡಿಕೇರಿ NEWS DESK ಏ.18 : ಕೊಡಗು ಗೌಡ ಸಮಾಜಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆನಂದ್ ಕರಂದ್ಲಾಜೆ ಅಧಿಕಾರ ಸ್ವೀಕಾರಿಸಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ಅಧಿಕಾರ ಹಸ್ತಾಂತರಿಸಿದರು.
*ಮೈದಾನ 1 :: ಚೋಯಮಾಡಂಡ ಮತ್ತು ಕೋಟೇರ ನಡುವಿನ ಪಂದ್ಯದಲ್ಲಿ ಕೋಟೇರ ತಂಡ 1-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಕೋಟೇರ ಪರ ಕೌಶಿಕ್ 1 ಗೋಲು ದಾಖಲಿಸಿದರು. ಚೋಯಮಾಡಂಡ ಬಿಪಿನ್ ಅಯ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಮ್ಮಂಡ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಪ್ರಧಾನ್ ಸೋಮಣ್ಣ ಹಾಗೂ ಸೂರತ್ ಬೋಜಣ್ಣ ತಲಾ 1 ಗೋಲು ದಾಖಲಿಸಿದರು. ಕುಮ್ಮಂಡ ಬೋಸು ಚಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುಕ್ಕಾಟಿರ (ಬೋಂದ) ಮತ್ತು ಚಂಗುಲಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಚಂಗುಲಂಡ ಗೆಲುವು ಸಾಧಿಸಿತು. ಚಂಗುಲಂಡ ಪರ ಡಿಶಿನ್ ಗಣಪತಿ ಹಾಗೂ ಗೌತಮ್ ತಲಾ 1 ಗೋಲು ದಾಖಲಿಸಿದರು. ಮುಕ್ಕಾಟಿರ ಪರ ನಿಶಾಂತ್ ತಿಮ್ಮಯ್ಯ 1 ಗೋಲು ಬಾರಿಸಿ, ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಟ್ರಂಗಡ ಮತ್ತು ಮಳವಂಡ ನಡುವಿನ…
*ಮೈದಾನ 1 :: ಬೆಳಿಗ್ಗೆ 9 ಗಂಟೆಗೆ ಚೆಪ್ಪುಡಿರ ಮತ್ತು ಕರ್ತಮಾಡ, 10 ಗಂಟೆಗೆ ಮಾದಂಡ ಮತ್ತು ಮೇಚಿಯಂಡ, 11 ಗಂಟೆಗೆ ಬೊಳ್ಳಂಡ ಮತ್ತು ಬೊಟ್ಟೋಳಂಡ, ಮಧ್ಯಾಹ್ನ 12 ಗಂಟೆಗೆ ಕೊಂಗೇಟಿರ ಮತ್ತು ಚೇಂದಂಡ, 1 ಗಂಟೆಗೆ ಐಚೆಟ್ಟೀರ ಮತ್ತು ನಾಳಿಯಂಡ, 2 ಗಂಟೆಗೆ ನೆಲ್ಲಮಕ್ಕಡ ಮತ್ತು ನಾಪಂಡ, 3 ಗಂಟೆಗೆ ಕೋಳೇರ ಮತ್ತು ಚೆಕ್ಕೇರ *ಮೈದಾನ 2 :: ಬೆಳಿಗ್ಗೆ 8.30 ಗಂಟೆಗೆ ಪರದಂಡ ಮತ್ತು ಐನಂಡ, 9 ಗಂಟೆಗೆ ಬಯವಂಡ ಮತ್ತು ಕರವಂಡ, 10 ಗಂಟೆಗೆ ಕಳ್ಳಿಚಂಡ ಮತ್ತು ಕಂಬೀರಂಡ, 11 ಗಂಟೆಗೆ ಕೋನೇರಿರ ಮತ್ತು ಇಟ್ಟೀರ, ಮಧ್ಯಾಹ್ನ 1 ಗಂಟೆಗೆ ಕಾಂಡಂಡ ಮತ್ತು ಕುಲ್ಲೇಟಿರ, 2 ಗಂಟೆಗೆ ಕುಪ್ಪಂಡ (ಕೈಕೇರಿ) ಮತ್ತು ಮತ್ರಂಡ






