ಮಡಿಕೇರಿ ಏ.17 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪತ್ರಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆ ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5419 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5411 ಪ್ರಕರಣಗಳು ಇತ್ಯರ್ಥ ಗೊಂಡಿದೆ. 2024-25 ನೇ ಆರ್ಥಿಕ ಸಾಲಿನಲ್ಲಿ 301 ಪ್ರಕರಣಗಳು ದಾಖಲಾಗಿ, 293 ಪ್ರರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 8 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ. 12,00,500 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ…
ಲೇಖಕ: admin
*ಮೈದಾನ 1 : ಕುಪ್ಪಂಡ (ಕೈಕೇರಿ) ಮತ್ತು ನಾಗಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಕುಪ್ಪಂಡ ತಂಡ ಗೆಲುವು ದಾಖಲಿಸಿತು. ಕುಪ್ಪಂಡ ಪರ ಸೋಮಯ್ಯ 2, ನಾಚಪ್ಪ, ಚಂಗಪ್ಪ ಹಾಗೂ ದ್ಯಾನ್ ತಲಾ 1 ಗೋಲು ದಾಖಲಿಸಿದರು. ನಾಗಂಡ ಪರ ದೀಕ್ಷಿ ಸುಬ್ಬಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮತ್ರಂಡ ಮತ್ತು ಅಮ್ಮಂಡ ನಡುವಿನ ಪಂದ್ಯದಲ್ಲಿ 2 ತಂಡಗಳು ನಿಗದಿತ ಸಮಯದಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಮತ್ರಂಡ ಜಯ ಸಾಧಿಸಿತು. ಅಮ್ಮಂಡ ಕಾರ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅನ್ನಡಿಯಂಡ ಮತ್ತು ಪರದಂಡ ನಡುವಿನ ಪಂದ್ಯದಲ್ಲಿ 6-2 ಗೋಲುಗಳ ಅಂತದಲ್ಲಿ ಪರದಂಡ ಜಯ ಸಾಧಿಸಿತು. ಪರದಂಡ ಪರ ಕುಶಾಲಪ್ಪ ಹಾಗೂ ಅಯ್ಯಪ್ಪ ತಲಾ 2, ಉತ್ತಪ್ಪ ಹಾಗೂ ಪೂವಣ್ಣ ತಲಾ 1 ಗೋಲು ದಾಖಲಿಸಿದರು. ಅನ್ನಡಿಯಂಡ ಪರ ಪ್ರಕ್ಷಿತ್ ಪೊನ್ನಪ್ಪ ಹಾಗೂ ನವೀನ್…
ಮಡಿಕೇರಿ ಏ.17 NEWS DESK : ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿ ಚಾಲನೆ ನೀಡಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದರು. ಬಳಿಕ ಮಾತನಾಡಿದ ಶಾಸಕರು ಆರೋಗ್ಯಯುತ ಬದುಕಿಗೆ ಕ್ರೀಡೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟವು ಪ್ರತೀ ತಿಂಗಳು ನಡೆಯುವಂತಾಗಬೇಕು ಎಂದು ಸಲಹೆ ನೀಡಿದರು. ಸರ್ಕಾರಿ ನೌಕರರು ಪ್ರತೀ ನಿತ್ಯ ಕಚೇರಿ ಹಾಗೂ ಕುಟುಂಬದ ಒತ್ತಡ ನಡುವೆ ಕೆಲಸ ಮಾಡುತ್ತಾರೆ. ಆದ್ದರಿಂದ ಆರೋಗ್ಯ ಹಾಗೂ ಮನಃಶಾಂತಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ…
ಕುಶಾಲನಗರ ಏ.17 NEWS DESK : ಹನ್ನೆರಡನೇ ಶತಮಾನದ ಮಹಾಶಿವಶರಣೆ ಅಕ್ಕಮಹಾದೇವಿ ಇಡೀ ಮನುಕುಲದ ಮಹಾಬೆಳಕು. ಮಹಿಳೆಯರ ಪಾಲಿಗೆ ಸದಾ ಹಿರಿಯಕ್ಕ ಎಂದು ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಾವೇರಿ ಪ್ರಕಾಶ್ ಹೇಳಿದರು. ಕುಶಾಲನಗರದ ಮಹಾತ್ಮಗಾಂಧಿ ಪದವಿ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಕುರಿತು ಉಪನ್ಯಾಸ ನೀಡಿದ ಅವರು, ಮಹಾದೇವಿಯ ಸಹಜ ಸೌಂದರ್ಯಕ್ಕೆ ಮರುಳಾದ ಕೌಶಿಕ ಮಹಾರಾಜ ಮಹಾದೇವಿಯನ್ನು ವಿವಾಹ ವಾಗಲು ಪರಿತಪಿಸಿದಾಗ, ಮಹಾದೇವಿ ಒಡ್ಡಿದ್ದ ಷರತ್ತುಗಳನ್ನು ಧಿಕ್ಕರಿಸಿ ಲೈಂಗಿಕ ಕ್ರೌರ್ಯ ಮೆರೆಯಲು ಮುಂದಾದ ಕೌಶಿಕ ರಾಜನ ವಿರುದ್ಧ ಬಂಡೆದ್ದು ದಿಂಗಂಬರಳಾಗಿಯೇ ಕಲ್ಯಾಣಕ್ಕೆ ಹೆಜ್ಜೆ ಹಾಕುವ ಮಹಾದೇವಿ ತನ್ನ ಇಷ್ಟಾರ್ಥ ದೈವ ಶ್ರೀಚೆನ್ನಮಲ್ಲಿಕಾರ್ಜುನ ನನ್ನು ನೆನೆಯುತ್ತಾ ಇಡೀ ಜೀವನ ಕಳೆದು ಅಲ್ಲಮ ಪ್ರಭುಗಳಿಂದ ಅನುಭವ ಮಂಟಪದಲ್ಲಿ ಅಕ್ಕ ಮಹಾದೇವಿಯಾಗಿ ರೂಪುಗೊಂಡ ಬಗೆಯನ್ನು ಡಾ.ಕಾವೇರಿ ವಿಶ್ಲೇಷಿಸಿದರು. ಹುಟ್ಟು ಮತ್ತು ಮುಟ್ಟು ವಿಷಯದಲ್ಲಿ ಮೈಲಿಗೆಯ ಸೂತಕವನ್ನು ಆಚರಿಸುತ್ತಾ ಬಂದ ಕೆಟ್ಟ…
ಮಡಿಕೇರಿ ಏ.17 NEWS DESK : ಮಡಿಕೇರಿಯಲ್ಲಿ ನಡೆಯುತ್ತಿರುವ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಇಂದು ಶ್ವಾನ ಪ್ರದರ್ಶನ ಮೆರುಗು ನೀಡಿತು. ವಿವಿಧ ತಳಿಯ ಶ್ವಾನಗಳು ಹಾಕಿ ಮೈದಾನದಲ್ಲಿ ಆಕರ್ಷಣೆ ಮತ್ತು ಚಾಕಚಕ್ಯತೆಯಿಂದ ನೋಡುಗರ ಗಮನ ಸೆಳೆದವು. ಪಶುವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ನಡೆದ ಶ್ವಾನ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಮಾನವನ ವಿಶ್ವಾಸ, ನಂಬಿಕೆಗೆ ಅರ್ಹವಾದ ನಿಷ್ಠಾವಂತ ಸಾಕು ಪ್ರಾಣಿಗಳಲ್ಲಿ ಶ್ವಾನ ಅಗ್ರ ಸ್ಥಾನ ಪಡೆದಿದೆ. ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದರಿಂದ ನಿಷ್ಕಲ್ಮಶವಾದ ಪ್ರೀತಿ ಬೆಳೆಯುತ್ತದೆ. ಪ್ರತಿಯೊಬ್ಬರು ಪ್ರಾಣಿಗಳನ್ನು ಉತ್ತಮ ರೀತಿಯಲ್ಲಿ ಪೋಷಣೆ ಮಾಡಬೇಕು ಎಂದರು. ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಡಾ.ಲಿಂಗರಾಜು ಹಾ.ದೊಡ್ಡಮನಿ ಮಾತನಾಡಿ, ಪ್ರಾಣಿಗಳನ್ನು ರೇಬಿಸ್ ಕಾಯಿಲೆಯಿಂದ ರಕ್ಷಿಸಲು ಲಸಿಕೆ ಏಕೈಕ ಮಾರ್ಗವಾಗಿದ್ದು, ಜಿಲ್ಲೆಯ ಎಲ್ಲಾ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತ ಲಸಿಕೆ ನೀಡಲಾಗುತ್ತಿದೆ. ಸಾರ್ವಜನಿಕರು ತಮ್ಮ ಪ್ರಾಣಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಮಾರಣಾಂತಿಕ ಕಾಯಿಲೆಯಿಂದ…
ಮಡಿಕೇರಿ ಏ.17 NEWS DESK : ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ಹಿಂಬದಿ ಕುಳಿತ್ತಿದ್ದ ಮಡಿಕೇರಿ ತಾಲ್ಲೂಕಿನ ಸಾಮ್ವೆಲ್ (22) ಮೃತ ದುರ್ದೈವಿಯಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ಸವಾರ ನವೀನ(23) ನನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ಬೈಲುಕುಪ್ಪೆ ಕಡೆಯಿಂದ ಕೊಪ್ಪ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಕೊಪ್ಪ ಆರೋಗ್ಯ ಕೇಂದ್ರದ ಸಮೀಪ ಈ ದುರ್ಘಟನೆ ನಡೆದಿದೆ. ಬೈಲುಕುಪ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಶಾಲನಗರ ಏ.17 NEWS DESK : ಅಂಕನಹಳ್ಳಿ ತಪೋವನ ಕ್ಷೇತ್ರದ ಶ್ರೀ ಗುರುಸಿದ್ಧ ವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಧಾರ್ಮಿಕ ಹಾಗೂ ಗುರುವಂದನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿಶ್ರಾಂತ ನ್ಯಾಯಾಧೀಶರಾದ ಎಂ ಆರ್ ದೇವಪ್ಪ, ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ವಿರೂಪಾಕ್ಷಯ್ಯ ಖೋ ಖೋ ತಂಡದ ಆಟಗಾರ್ತಿ ವಿಶ್ವಕಪ್ ವಿಜೇತೆ ಕುಮಾರಿ ಚೈತ್ರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ವಿಕ್ರಂ ಖಾತ, ಭಾರತ ಕಿರಿಯರ ಹಾಕಿ ತಂಡದ ತರಬೇತುದಾರ ಏಷ್ಯಾ ಕಪ್ ವಿಜೇತ ಸಿ ಬಿ ಜನಾರ್ಧನ್, ಭರತನಾಟ್ಯ ಕಲಾವಿದೆ ಮಿಲನ ಭರತ್ ,ಪ್ರಗತಿಪರ ಕೃಷಿಕ ಡಿ ಬಿ ಧರ್ಮಪ್ಪ ,ನಿವೃತ್ತ ಸೈನಿಕ ಲೋಕೇಶ್ ಸುವರ್ಣ, ಸಾಹಿತಿ ಉಳುವಂಗಡ ಕಾವೇರಿ ಉದಯ್, ಗೋರಕ್ಷಕರಾದ ಡಾ. ರಾಜಾರಾಮ್, ಡಿ ವೈ ಎಸ್ ಪಿ ಪರಶಿವಮೂರ್ತಿ, ಹಿರಿಯ ಪತ್ರಕರ್ತರಾದ ಕೆ ವಿ ಪರಮೇಶ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ…
ಮಡಿಕೇರಿ ಏ.17 NEWS DESK : ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ರೋಚಕ ಹಾಕಿ ಪಂದ್ಯಗಳೊಂದಿಗೆ ವೈವಿಧ್ಯಮಯ ಕಾರ್ಯಕ್ರಮಗಳು ಕೂಡ ನಡೆಯುತ್ತಿದ್ದು, ಏ.26ರಂದು ಟೂರ್ ಆಫ್ ಸ್ಟಾರ್ಸ್ ಕೂರ್ಗ್ ಕ್ಲಾಸಿಕ್ ರೇಸ್ ಸೈಕ್ಲೋಥಾನ್ ನ್ನು ಆಯೋಜಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ಅವರು ಖ್ಯಾತ ಸೈಕಲ್ ಪಟುಗಳು ಸೇರಿದಂತೆ ನೂರಾರು ಮಂದಿ ಸೈಕ್ಲೋಥಾನ್ ರೇಸ್ ನಲ್ಲಿ ಪಾಲ್ಗೊಳ್ಳಳಿದ್ದಾರೆ. 100 ಕಿ.ಮೀ ಮತ್ತು 30 ಕಿ.ಮೀ ವಿಭಾಗಗಳಲ್ಲಿ (5 ವಿಭಾಗಗಳು ಎಲೈಟ್ / ಹವ್ಯಾಸಿ) ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ನಗದು ಬಹುಮಾನ ಮತ್ತು ಪಾರಿತೋಷಕ ನೀಡಲಾಗುವುದು. ಮಡಿಕೇರಿ, ಮೂರ್ನಾಡು, ವಿರಾಜಪೇಟೆ, ಗೋಣಿಕೊಪ್ಪ, ಪಾಲಿಬೆಟ್ಟ ಮಾರ್ಗದಲ್ಲಿ ಈ ಜಾಥಾ ಸಾಗಲಿದೆ. ಆಸಕ್ತರು ಏ.22ರ ಒಳಗಾಗಿ https://www.tourofstars.com/register ನೋಂದಾಯಿಸಿಕೊಳ್ಳಬಹುದಾಗಿದೆ.
ಸೋಮವಾರಪೇಟೆ ಏ.17 NEWS DESK : ಜಾತಿ ಜನಗಣತಿ ಜಾತಿ, ಜಾತಿಗಳ ನಡುವೆ ವಿಷಬೀಜ ಬಿತ್ತಿ ಒಡೆದು ಆಳುವ ಹುನ್ನಾರ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯ ಸರ್ಕಾರ ಜಾತಿ ಜನಗಣತಿ ನಡೆಸಿರುವುದೇ ಸೋಜಿಗದ ಸಂಗತಿಯಾಗಿದೆ ಏಕೆಂದರೆ ಈ ರಾಜ್ಯದಲ್ಲಿ ಯಾರು, ಯಾವಾಗ ಜಾತಿ ಜನಗಣತಿ ನಡೆಸಿದರು ಎಂಬುದು ಯಾರಿಗೂ ಗೊತ್ತಿಲ್ಲಾ, ನಮ್ಮ ಮನೆಗೂ ಯಾರು ಬಂದು ಜಾತಿ ಜನಗಣತಿ ನಡೆಸಿಲ್ಲ ಹೀಗಿರುವಾಗ ಮಾಹಿತಿ ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು, ಜಾತ್ಯಾತೀತ ರಾಷ್ಟ್ರ ಎಂಬುವವರೇ ಜಾತಿಯ ವಿಷಬೀಜ ಬಿತ್ತಿ ಒಡೆದು ಆಳುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಒಂದು ವೇಳೆ ಇವರು ಜಾತಿ ಜನಗಣತಿ ನಡೆಸಿದ್ದರೆ ಅದು ಅಸಮರ್ಪಕ ವಾಗಿದ್ದು, ಅದನ್ನು ಕೈ ಬಿಟ್ಟು ಹೊಸದಾಗಿ ನಡೆಸಿ ಎಂದು ಮಹೇಶ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚಾಗಿರುವ ವೀರಶೈವ ಲಿಂಗಾಯತ ಜನಾಂಗವನ್ನು…
ಕುಶಾಲನಗರ ಏ.17 NEWS DESK : ಕುಶಾಲನಗರ ಪುರಸಭೆ ವತಿಯಿಂದ 2025 ಮತ್ತು 2026 ರ ಆಸ್ತಿ ತೆರಿಗೆಯಲ್ಲಿ ಬಹಳ ಹೆಚ್ಚಳವಾಗಿದ್ದು, ಅದು ಅವೈಜ್ಞಾನಿಕವಾಗಿದೆ. ಅದನ್ನು ಸರಿಪಡಿಸಿಕೊಂಡು ಜನರಿಂದ ತೆರಿಗೆ ಸಂಗ್ರಹ ಮಾಡಬೇಕೆಂದು ಕುಶಾಲನಗರ ಪುರಸಭೆ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳಿಗೆ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಮನವಿ ಮಾಡಿಕೊಳ್ಳಲಾಯಿತು. ಕಳೆದ ವರ್ಷದ ತೆರಿಗೆಗೆ ಈ ವರ್ಷ ಶೇ.3 ಹೆಚ್ಚಳ ಮಾಡಲಾಗಿದ್ದರು ಅಂತಿಮ ಹಂತದ ತೆರಿಗೆ ನೋಡಿದಾಗ ಅದು ಶೇ.15 ರಿಂದ ಶೇ.20 ಹೆಚ್ಚಳವಾಗಿರುವುದು ಕಂಡು ಬಂದಿದೆ. ಅದು ಅವೈಜ್ಞಾನಿಕ ಹೆಚ್ಚಳ ಮತ್ತು ಸಾರ್ವಜನಿಕರಿಗೆ ಹೊರೆಯಾಗುತ್ತಿದೆ. ಅದನ್ನು ಆದ್ಯತೆ ಮೇರೆಗೆ ತಪ್ಪಿಸಲು ಅಧ್ಯಕ್ಷ ಕೆ.ಎಸ್.ನಾಗೇಶ್ ಅಧಿಕಾರಿಗಳಿಗೆ ತಿಳಿಸಿದರು. ಮುಂದುವರಿದು ಉದ್ದಿಮೆದಾರ ಟ್ರೇಡ್ ಲೈಸನ್ಸ್ ಗೂ ವಿಪರೀತ ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡಬಲ್ ಆಗಿರುವುದನ್ನು ತಿಳಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಮಾತನಾಡಿ, ತೆರಿಗೆ ಹೆಚ್ಚಳ ಮಾಡುವುದಕ್ಕೆ ಸರಿಯಾಗಿ ಜನರ ಅವಶ್ಯಕತೆಗಳನ್ನು…






