ವಿರಾಜಪೇಟೆ ಜು.14 NEWS DESK : ಮಗ್ಗುಲ ಗ್ರಾಮದ ವಿದ್ಯಾಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯಿತು. ಸಂಸ್ಥೆಯು ತನ್ನ ಸಾಮಾಜಿಕ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ನೂತನವಾಗಿ ಆರಂಭಿಸಿರುವ ‘ಎಲ್ ಎಸ್ ಎ ಕೇರ್’ (LSA Care) ಘಟಕದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಘಟಕದ ಪ್ರಪ್ರಥಮ ಯೋಜನೆಯಾದ ‘ಪೀಪಲ್ ಹೌಸ್ ವಿದ್ಯಾರ್ಥಿ ತಂಡ’ದ ಅಡಿಯಲ್ಲಿ ಹೆಗ್ಗಳದ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. :: ತಿಂಗಳಿಗೊಂದು ಸಮಾಜಮುಖಿ ಕಾರ್ಯಕ್ರಮ: : ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಅವರು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿ, ”ಸಂಸ್ಥೆಯು ‘ಎಲ್ ಎಸ್ ಎ ಕೇರ್’ ಮೂಲಕ ಪ್ರತೀ ತಿಂಗಳು ವೈವಿಧ್ಯಮಯ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿ ಹೊಂದಿದೆ. ಈ ಹಿಂದೆಯೂ ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆ ಸೇರಿದಂತೆ ವಿವಿಧೆಡೆ…
ಲೇಖಕ: admin
ಮಡಿಕೇರಿ ಜು.14 NEWS DESK : ಕೊಡಗು ಜಿಲ್ಲಾ ಪೊಲೀಸರು 2026ನೇ ಸಾಲಿನಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸುಮಾರು 36.807 ಕೆ.ಜಿ. ಗಾಂಜಾ ಮತ್ತು 18 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ರೂ.20,20,350 ಮೊತ್ತದ ವಿವಿಧ ಮಾದಕ ವಸ್ತುಗಳನ್ನು ಮೈಸೂರಿನ ಜಿಐಬಿಎಸ್ ಘಟಕದಲ್ಲಿ ನಿಯಮಾನುಸಾರ ನಾಶಪಡಿಸಲಾಯಿತು.
ಸೋಮವಾರಪೇಟೆ ಜು.14 NEWS DESK : ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಕಚೇರಿ ಕಾರ್ಯಾರಂಭವಾಯಿತು. ಸಂಘದ ಅಧ್ಯಕ್ಷ ಎಸ್.ಬಿ.ಭರತ್‍ಕುಮಾರ್ ಉದ್ಘಾಟಿಸಿದರು. ಸರ್ವ ಸದಸ್ಯರ ಅಪೇಕ್ಷೆಯಂತೆ 1.50 ಕೋಟಿ ರೂ,ವೆಚ್ಚದಲ್ಲಿ ಸಂಘದ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. 1956ನೇ ಇಸವಿಯಲ್ಲಿ ಅನೇಕ ಗಣ್ಯರ ಶ್ರಮದಿಂದ ಸಹಕಾರ ಸಂಘ ಪ್ರಾರಂಭವಾಗಿದ್ದು, ಅಂದಿನಿಂದ ಇಲ್ಲಿಯ ವರೆಗೆ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಎಚ್.ಎಸ್. ನೇತ್ರಾವತಿ, ನಿರ್ದೇಶಕರುಗಳಾದ ಎಚ್.ಆರ್.ಸುರೇಶ್, ಬಿ.ಪಿ.ಮೊಗಪ್ಪ, ಕೆ.ಕೆ.ಶಿವಪ್ರಕಾಶ್, ಜಿ.ಎಂ.ಹೂವಯ್ಯ, ಎ.ಎಸ್.ನವೀನ್ ಕುಮಾರ್, ಜಿ.ಎಸ್.ನಾಗರಾಜ್, ಕೆ.ಜಿ.ದಿನೇಶ್, ಎಸ್.ಸಿ.ಸುನೀತಾ, ಜಿ.ಈ.ಸುರೇಶ್, ಜಿ.ಬಿ.ಗಿರೀಶ್, ಕೆ.ಎಲ್.ರಕ್ಷಿತ್, ಸಿ.ಇ.ಒ. ಎಂ.ಎಚ್.ಕಿರಣ್ ಇದ್ದರು.
ಸೋಮವಾರಪೇಟೆ ಜು.14 NEWS DESK : ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಆಚರಿಸಿ, ಆಸ್ಪತ್ರೆಯ ವೈದ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಜಮೀರ್, ಸೋಮವಾರಪೇಟೆಯಲ್ಲಿ ಸೇವೆ ಸಲ್ಲಿಸುವುದು ಸಂತೋಷ ತಂದಿದ್ದು, ಸಾರ್ವಜನಿಕರು ಆಸ್ಪತ್ರೆಯ ಸಿಬ್ಬಂದಿಯೊಂದಿಗೆ ಸೌಜನ್ಯದಿಂದ ವರ್ತಿಸಿ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ಕೆಲವು ವೈದ್ಯರ ಕೊರತೆ ಇದ್ದರೂ, ಲಭ್ಯವಿರುವ ವೈದ್ಯರು ಎಲ್ಲ ರೋಗಿಗಳಿಗೂ ಉತ್ತಮ ಚಿಕಿತ್ಸೆ ನೀಡಲು ಶ್ರಮಿಸುತ್ತಿದ್ದಾರೆ ಎಂದರು. ವೈದ್ಯರ ದಿನಾಚರಣೆಯ ಅಂಗವಾಗಿ ತಮ್ಮನ್ನು ಸನ್ಮಾನಿಸಿರುವುದು ವೈದ್ಯರ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ಕೊಡಗು ಜಿಲ್ಲೆಗೆ ವೈದ್ಯರು ಸೇವೆಗೆ ಬರಲು ಹಿಂದೇಟು ಹಾಕುತ್ತಿರುವುದು ಸವಾಲಿನ ವಿಷಯವಾಗಿದೆ. ಈ ಕುರಿತು ಜಿಲ್ಲೆಯ ಶಾಸಕರು ಸರ್ಕಾರದ ಗಮನ ಸೆಳೆದಿದ್ದಾರೆ ಎಂದು ಹೇಳಿದರು. ಈಗಾಗಲೇ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ಬಹುತೇಕ ನೀಗಿಸಲಾಗಿದ್ದು, ಪ್ರಸ್ತುತ ಒಂಬತ್ತು ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.…
ಸೋಮವಾರಪೇಟೆ ಜು.14 NEWS DESK : ಅರೆಯೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಸೋಮೇಶ್ವರ ದೇವಸ್ಥಾನದ ನೂತನ ಗರ್ಭಗೃಹ ನಿರ್ಮಾಣದ ಗರ್ಭನ್ಯಾಸ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನೆರವೇರಿತು. ತಂತ್ರಿಗಳಾದ ವೇದಮೂರ್ತಿ ಕೆಮ್ಮಂಜೆ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ಹಾಗೂ ವಾಸ್ತುಶಿಲ್ಪಿ ಪಿ.ಜೆ. ಜಗನ್ನಿವಾಸ ರಾವ್ ಅವರ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳಲ್ಲಿ ಗರ್ಭನ್ಯಾಸ ನೆರವೇರಿಸಲಾಯಿತು. ಈ ಸಂದರ್ಭ ಅರೆಯೂರು ದೇವಸ್ಥಾನ ಸಮಿತಿಯ ಅಧ್ಯಕ್ಷ ಕೆ.ಎನ್. ಪಾಪಯ್ಯ, ಉಪಾಧ್ಯಕ್ಷ ವೆಂಕಟೇಶ್, ಕಿರಣ್, ದರ್ಶನ್ ಕುಮಾರ್, ಯಶವಂತ್, ಉತ್ತಪ್ಪ, ವಿನೋದ್, ಹರೀಶ್ ಸೇರಿದಂತೆ ಸಂಘದ ಸದಸ್ಯರು, ಗ್ರಾಮಸ್ಥರು ಹಾಗೂ ಮಹಿಳೆಯರು ಇದ್ದರು.
ಸೋಮವಾರಪೇಟೆ NEWS DESK ಜು.14 : ತಾಲೂಕಿನ ಕಾಂಡನಕೊಲ್ಲಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಐದು ಕಾಡಾನೆಗಳ ಹಿಂಡು ನುಗ್ಗಿ ವ್ಯಾಪಕ ಹಾನಿ ಉಂಟುಮಾಡಿದೆ. ಮoಗಳವಾರ ತಡರಾತ್ರಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳು ಮಾಜಿ ಸಚಿವರ ತೋಟದ ಪ್ರವೇಶ ದ್ವಾರದ ಗೇಟ್‌ಗಳನ್ನು ಧ್ವಂಸಗೊಳಿಸಿವೆ. ಗೇಟ್‌ನ ಕಬ್ಬಿಣದ ಕಂಬಗಳು ಹಾಗೂ ಪಿಲ್ಲರ್‌ಗಳನ್ನು ಉರುಳಿಸಿ, ಕಬ್ಬಿಣದ ಗೇಟ್‌ಗಳನ್ನು ತುಳಿದು ಒಳನುಗ್ಗಿದ ಆನೆಗಳು ಹಲವು ಕಾಫಿ ಗಿಡಗಳನ್ನು ಕಿತ್ತು ನಾಶಪಡಿಸಿವೆ. ಇದರಿಂದ ತೋಟಕ್ಕೆ ಗಮನಾರ್ಹ ಪ್ರಮಾಣದ ಹಾನಿಯಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಡನಕೊಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊAಡಿದ್ದಾರೆ. ರಾತ್ರಿ ವೇಳೆಯಲ್ಲಿ ಹೊರಗಡೆ ಓಡಾಡಲು ಭಯದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗೆ ಮರಳಿಸುವ ಹಾಗೂ ಶಾಶ್ವತ ನಿಯಂತ್ರಣ ಕ್ರಮ…
ಸೋಮವಾರಪೇಟೆ NEWS DESK ಜು.14 : ಪಟ್ಟಣದ ಬಸವೇಶ್ವರ ರಸ್ತೆಯ ವಾರ್ಡ್ ಸಂಖ್ಯೆ–1ರಲ್ಲಿ ವಾಸವಿರುವ ರಾಜಣ್ಣ ಅವರ ಮನೆಯ ಒಂದು ಬದಿಯ ಗೋಡೆ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಗೆ ಸಂಪೂರ್ಣ ಕುಸಿದಿದೆ. ಘಟನಾ ಸ್ಥಳಕ್ಕೆ ಮಂಗಳವಾರ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರಿಗೆ ಮನೆಯ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಪರಿಹಾರ ಮಂಜೂರಾತಿಗಾಗಿ ಸಂಬoಧಪಟ್ಟ ಅಧಿಕಾರಿಗಳಿಗೆ ತಕ್ಷಣ ಶಿಫಾರಸು ಸಲ್ಲಿಸುವಂತೆ ಸೂಚಿಸಿದರು. ಅಲ್ಲದೆ, ಸ್ಥಳದಿಂದಲೇ ತಹಸೀಲ್ದಾರ್ ಅವರಿಗೆ ದೂರವಾಣಿ ಕರೆ ಮಾಡಿ ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಹಾಗೂ ಮಳೆಯಿಂದ ಹಾನಿಗೊಳಗಾದ ಮನೆಗಳ ಬಗ್ಗೆ ತಕ್ಷಣ ಗಮನಹರಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್, ಖಜಾಂಚಿ ಚೇತನ್, ಆರೋಗ್ಯ ನಿರೀಕ್ಷಕ ಜಾಸೀಂ ಖಾನ್ ಇದ್ದರು.
ಮಡಿಕೇರಿ NEWS DESK ಜು.14 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಆ ದಿಸೆಯಲ್ಲಿ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 552 ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ‘ಗಣತಿ ನಮೂನೆ’ಯನ್ನು ಮತದಾರರಿಗೆ ವಿತರಿಸುವ ಕಾರ್ಯವನ್ನು ಶೇ.99 ರಷ್ಟು ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಸಂಬAಧಿಸಿದAತೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಕಾರ್ಯದ ಬಗ್ಗೆ ಹಲವು ನಿರ್ದೇಶನ ನೀಡಿದರು. ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಯನ್ನು ಸಂಗ್ರಹಿಸಿ ಬಿಎಲ್‌ಒ ಆಪ್‌ನಲ್ಲಿ ಡಿಜಿಟಲೀಕರಣ ಮಾಡಲಾಗುತ್ತಿದೆ. ಮನೆ ಮನೆಗೆ ಭೇಟಿ ನೀಡುವ ಕಾರ್ಯವು ಜುಲೈ, 29 ರವರೆಗೆ ನಡೆಯಲಿದೆ. ಜೊತೆಗೆ ಡಿಜಿಟಲೀಕರಣ ಕಾರ್ಯವೂ…
ಮಡಿಕೇರಿ NEWS DESK ಜು.14 : ಯುನೈಟೆಡ್ ಕೊಡವ ಆರ್ಗನೈಸೇಷನ್ ಯುಕೊ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರ ನೇತೃತ್ವದ ನಿಯೋಗ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು. ಪೊನ್ನಣ್ಣಗೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಸಲ್ಲಿಸಿದ ಪ್ರಮುಖರು ಸುದೀರ್ಘ ಚರ್ಚೆ ನಡೆಸಿದರು. ಈ ಸಂದರ್ಭ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ಒಬ್ಬ ದಕ್ಷ ಹಾಗೂ ಪ್ರಾಮಾಣಿಕ ಯುವ ಮುಖಂಡರಾಗಿದ್ದಾರೆ. ನಾನು ಅವರ ಮೇಲೆ ಭರವಸೆಯನ್ನಿಟ್ಟು ಟಿಕೆಟ್ ನೀಡಿದ್ದೆ, ಅವರು ಬಂದ ನಂತರ ಕನಿಷ್ಠ ಕೊಡಗಿನಲ್ಲಿ ವಾರಕ್ಕೆ ಎರಡು ದಿನ ಇರಲೇಬೇಕೆಂದಿದ್ದೆ. ಆದರೆ ಅವರು ಗರಿಷ್ಠ ಸಮಯವನ್ನು ಕೊಡಗಿಗೆ ಮೀಸಲಿಡುವುದರ ಮೂಲಕ ನಮ್ಮ ಭರವಸೆಯನ್ನು ಉಳಿಸಿಕೊಂಡಿದ್ದಾರೆ ಎಂದರು. ಪೊನ್ನಣ್ಣ ಅವರಿಗೆ ಮಂತ್ರಿ ಸ್ಥಾನ ನೀಡುವ ಕುರಿತು ಒಲವಿದೆ, ಮುಂದೇನಾಗುತ್ತದೋ ನೋಡುವಾ, ಅವರು ಮಂತ್ರಿಯಾದರೆ ನಿಮ್ಮಷ್ಟೇ ನನಗೂ ಸಂತೋಷವಾಗುತ್ತದೆ ಎಂದು ಹೇಳಿದರು. ನಿಯೋಗದಲ್ಲಿ ಅಪ್ಪಾರಂಡ ವೇಣು ಪೊನ್ನಪ್ಪ, ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ನೆಲ್ಲಮಕ್ಕಡ…
ಮಡಿಕೇರಿ NEWS DESK ಜು.14 : ಯರವನಾಡು ಗ್ರಾಮದ ದೇವಯಿರ ವಿನಯ್ ಅವರ ಮನೆಯ ಬಳಿ ಹುಲ್ಲುಗುಡ್ಡೆಯಲ್ಲಿ ಅಡಗಿದ್ದ 16 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಪಿಯೂಷ್ ಪೆರೆರಾ ರಕ್ಷಿಸಿದರು. ಸೆರೆ ಸಿಕ್ಕ ಕಾಳಿಂಗ ಸರ್ಪವನ್ನು ಅರಣ್ಯ ಅಧಿಕಾರಿಗಳು ಸುರಕ್ಷಿತವಾಗಿ ಅರಣ್ಯಕ್ಕೆ ಸ್ಥಳಾಂತರಿಸಿದರು. (ಪಿಯೂಷ್ ಪೆರೆರಾ ಮೊ.ಸಂ 94819 52253)






