ಲೇಖಕ: admin

*ಮೈದಾನ 1* ಬೆಳಿಗ್ಗೆ 9 ಗಂಟೆಗೆ ಕುಪ್ಪಂಡ (ಕೈಕೇರಿ) ಮತ್ತು ನಾಗಂಡ, 10 ಗಂಟೆಗೆ ಮತ್ರಂಡ ಮತ್ತು ಅಮ್ಮಂಡ, 11 ಗಂಟೆಗೆ ಅನ್ನಾಡಿಯಂಡ ಮತ್ತು ಪರದಂಡ, ಮಧ್ಯಾಹ್ನ 12 ಗಂಟೆಗೆ ಬೊಳ್ಳೇರ ಮತ್ತು ಮುಕ್ಕಾಟಿರ (ಬೊಂದ), 1 ಗಂಟೆಗೆ ಪಡೆಯಂಡ ಮತ್ತು ಐನಂಡ, 2 ಗಂಟೆಗೆ ಕನ್ನಂಡ ಮತ್ತು ಚೇದಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ನೆಲ್ಲಮಕ್ಕಡ ಮತ್ತು ಮುಕ್ಕಾಟಿರ (ಕಡಗದಾಳು), 10 ಗಂಟೆಗೆ ಕುಂಡ್ಯೋಳಂಡ ಮತ್ತು ನಾಪಂಡ, 11 ಗಂಟೆಗೆ ಕೇಲೇಟಿರ ಮತ್ತು ಕೋಳೆರ, ಮಧ್ಯಾಹ್ನ 1 ಗಂಟೆಗೆ ಚೆಕ್ಕೇರ ಮತ್ತು ಶಾಂತೆಯಂಡ, 2 ಗಂಟೆಗೆ ಕೂತಂಡ ಮತ್ತು ಅಲ್ಲಪಂಡ, 3 ಗಂಟೆಗೆ ಕುಲ್ಲಚಂಡ ಮತ್ತು ಪೆಮ್ಮಂಡ

Read More

ಮಡಿಕೇರಿ ಏ.16 NEWS DESK : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.  ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲಾ ಫೈಝಿ ಹಾಗೂ ಜಿಲ್ಲಾ ಜಮಾಯತ್ ಉಲಮಾ ಅಧ್ಯಕ್ಷ ಸೈಯ್ಯದ್ ಶಿಹಾಬುದ್ದೀನ್ ಹೈದ್ರೋಸಿ ಅವರುಗಳ ನೇತೃತ್ವದಲ್ಲಿ, ಜಿಲ್ಲಾ ಸುನ್ನಿ ಸಮನ್ವಯ ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದವರೆಗೆ ಘೋಷಣೆಗಳ ಸಹಿತ ಪ್ರತಿಭಟನಾ ಮೆರವಣಿಗೆ ನಡೆಯಿತು. ವಕ್ಫ್ ತಿದ್ದುಪಡಿ ಮಸೂದೆಗೆ ಪ್ರತಿಭಟನಾಕಾರರು ತೀವ್ರ ವಿರೋಧ ವ್ಯಕ್ತಪಡಿಸಿದರು. ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಪಾರ ಸಂಖ್ಯೆಯ ಮುಸ್ಲಿಂ ಬಾಂಧವರು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದೆಂದು ಒತ್ತಾಯಿಸಿದರು. ಗಾಂಧಿ ಮೈದಾನದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲಾ ಫೈಝಿ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಲ್ಲಿ ಅದು ಮುಸ್ಲಿಂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುತ್ತದೆ. ಅಲ್ಲದೆ ದೇವರ ಹೆಸರಿನಲ್ಲಿ ವಕ್ಫ್‍ಗೆ ನೀಡಿದ…

Read More

ಮಡಿಕೇರಿ ಏ.16 NEWS DESK  : ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ಕಡತಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು, ಅಧಿಕಾರಿಗಳು ಆಯಾ ಕಡತಗಳಿಗೆ ಯಾವ ಯಾವ ದಾಖಲೆಗಳನ್ನು ತರಬೇಕು ಎನ್ನುವುದರ ಕುರಿತು ಸಾರ್ವಜನಿಕವಾಗಿ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಮಾಹಿತಿಯ ಕೊರತೆಯಿಂದಾಗಿ ಮಡಿಕೇರಿ ತಾಲ್ಲೂಕು ಕಚೇರಿಗೆ ಸಾರ್ವಜನಿಕರು ನಿತ್ಯ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಪ್ರಮುಖ ಕಾರಣ ವಿವಿಧ ಕಡತಗಳ ಅರ್ಜಿಗಳಿಗೆ ಬೇಕಾಗಿರುವ ದಾಖಲೆಗಳ ಮಾಹಿತಿಯ ಕೊರತೆ. ಅಲ್ಲದೆ ಲಂಚಕ್ಕಾಗಿ ಕಡತ ವಿಲೇವಾರಿ ವಿಳಂಬವಾಗುತ್ತಿದೆ ಎನ್ನುವ ಸಂಶಯ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ನೂತನ ತಾಲ್ಲೂಕು ಕಚೇರಿ ಕಟ್ಟಡದಲ್ಲಿ ಯಾವ ಅರ್ಜಿಗೆ ಯಾವ ದಾಖಲೆಗಳನ್ನು ತರಬೇಕು ಮತ್ತು ಯಾವ ಅರ್ಜಿ ಎಷ್ಟು ದಿನಗಳಲ್ಲಿ ವಿಲೇವಾರಿಯಾಗುತ್ತದೆ ಎನ್ನುವ ಬಗ್ಗೆ ಬಹಿರಂಗವಾಗಿ ಫಲಕಗಳನ್ನು ಅಳವಡಿಸಬೇಕು. ಈ ಕ್ರಮದಿಂದ…

Read More

ಮಡಿಕೇರಿ ಏ.16 NEWS DESK  : ಮಡಿಕೇರಿಯ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಏ.18 ಮತ್ತು 19ರಂದು ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ನಡೆಯಲಿದೆ. ಕೇರಳದ ಶ್ರೀ ಈಶ್ವರ ನಂಬೂದರಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಏ.18ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆಯಾಗಲಿದೆ. ಸಂಜೆ ದೇವಾಲಯ ಸಮಿತಿ ವತಿಯಿಂದ ಶ್ರೀ ಕಂಚಿ ಕಾಮಾಕ್ಷಿಯಮ್ಮ ಹಾಗೂ ಶ್ರೀ ಮುತ್ತು ಮಾರಿಯಮ್ಮ ದೇವಿಯ ಮೂಲ ವಿಗ್ರಹಗಳಿಗೆ ಸ್ವರ್ಣ ಕಾಸಿನ ಮಾಲೆಯನ್ನು ಸಮರ್ಪಿಸಲಾಗುವುದು. ಏಪ್ರಿಲ್ 19 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಮಹಾ ಗಣಪತಿ ಹೋಮ, ಐಕ್ಯಮತ್ಯ ಸುಕ್ರದ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಮತ್ತು ಮಹಾ ಮಂಗಳಾರತಿ ನೆರವೇರಲಿದೆ. ನಂತರ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯಾಗಲಿದೆ.

Read More

ಚೆಟ್ಟಳ್ಳಿ ಏ.16 NEWS DESK : ಶ್ರೀಮಂಗಲ-ಚೆಟ್ಟಳ್ಳಿ ಶ್ರೀ ಭಗವತಿ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಏ.14 ರಂದು ಪಟ್ಟಣಿ ಹಬ್ಬದ ಅಂಗವಾಗಿ ಅಂದು ಮೂಲ ನೆಲೆಯಲ್ಲಿ ಪೂಜೆಸಲ್ಲಿಸಲಾಯಿತು. ಮುಳ್ಳಂಡ ಐನ್ ಮನೆಯಿಂದ ತಕ್ಕರಾದ ಮುಳ್ಳಂಡ ಕರಣ್ ಕಾವೇರಪ್ಪ  ದೇವರ ಭಂಡಾರವನ್ನು ಊರಿನವರ ಸಮ್ಮುಖದಲ್ಲಿ ದುಡಿಕೊಟ್ಟ್ ಹಾಗೂ ವಾಲಗ ಎತ್ತ್ ಪೋರಾಟದೊಂದಿಗೆ ದೇವಾಲಯಕ್ಕೆ ತರಲಾಯಿತು. ವಿಶೇಷ ಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು.  ಮಳೆದೇವರೆಂದೇ ಹೆಸರುವಾಸಿಯಾದ ಭಗವತಿ ದೇವಿಯ ಉತ್ಸವದಂದು ಹೆಚ್ಚಾಗಿ ಮಳೆ ಸುರಿಯುವ ಮೂಲಕ ದೇವರ ಶಕ್ತಿಯನ್ನು ಪ್ರದರ್ಶನಕ್ಕೆ ಕಾರಣವಾಯಿತು. ಏ.15 ರ ದೊಡ್ಡ ಹಬ್ಬದಂದು ಮಧ್ಯಾಹ್ನ ದೇವ ಭಂಡಾರವನ್ನು ದೇವಾಲಯಕ್ಕೆ ತರಲಾಯಿತು. ದೇವಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆಯನ್ನು ನೆರವೇರಿಸಲಾಯಿತು. ನಂತರ ಕೋವಿಗೆ ಪೂಜೆ ಸಲ್ಲಿಸಿ ತೆಂಗಿನ ಕಾಯಿಗೆ ಗುಂಡುಹೊಡೆಯುವ ಸ್ಪರ್ಧೆ ಹಾಗೂ ಚೌರಿಯಾಟ್ ನಡೆಯಿತು. ದೇವರ ಬೊಳಕ್ ಮರವನ್ನು ತೆಗೆದು ಗರ್ಭಗುಡಿಯಲ್ಲಿಡಲಾಯಿತು. ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು.

Read More

ಸೋಮವಾರಪೇಟೆ ಏ.16 NEWSDESK : ಪವಿತ್ರ ತಪೋವನ ಕ್ಷೇತ್ರ ಮನೆಹಳ್ಳಿ ಮಠ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು ಬೇಡಿಕೆ ಈಡೇರಿಸಿಕೊಳ್ಳುವ ಜತೆ ನಿಷ್ಠೆ ಮತ್ತು ಶ್ರದ್ಧೆ ಇರುವಂತದ್ದೇ ಪವಿತ್ರ ಕ್ಷೇತ್ರ ಎಂದು ತುಮಕೂರು ಸಿದ್ಧಗಂಗಾ ಮಠಾಧೀಶ ಶ್ರೀಸಿದ್ಧಲಿಂಗ ಮಹಾ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಅಂಕನಹಳ್ಳಿ ತಪೋವನ ಕ್ಷೇತ್ರದ ಧಾರ್ಮಿಕ ಹಾಗೂ ಗುರುವಂದನಾ ಸಮಾರಂಭದ ಸಾನಿಧ್ಯ ವಹಿಸಿದ್ದ ಅವರು ಆಶೀರ್ವಚನ ನೀಡಿದರು. ಭಾರತೀಯ ಸಂಸ್ಕೃತಿ ಆಧ್ಯಾತ್ಮ ಮತ್ತು ಸಾತ್ವಿಕತೆಯ ತಳಹದಿಯ ಮೇಲೆ ರೂಪಿತವಾಗಿದ್ದು;ಸಂಸ್ಕೃತಿಯಲ್ಲಿ ಋಷಿಮುನಿಗಳ ಪಾತ್ರ ಮುಖ್ಯವಾಗಿದೆ. ಭಾರತ ಧರ್ಮಕ್ಕೆ ಹೆಸರಿರುವಂತದ್ದು.ವಿಶ್ವಕ್ಕೆ ಶಾಂತಿ ಬಯಸುವ ದೇಶ.ವಸುದೈವಕ ಕುಟುಂಬಕಂ ಎಂಬುದು ಭಾರತಕ್ಕೆ ಅನ್ವಯಸುತ್ತದೆ.”ಭಾ” ಎಂದರೆ ಬೆಳಕು. “ರತ” ಎಂದರೆ ಬದುಕುವುದು.ಭಾರತ ಬೆಳಕಿನಲ್ಲಿ ಬದುಕುವಂತಹ, ಎಲ್ಲರ ಹಿತ ಬಯಸುವ ದೇಶ.ಧಾರ್ಮಿಕತೆ ಭಾರತದ ಹೆಸರಿನಲ್ಲಿದೆ.ಕರ್ನಾಟಕದ ಪ್ರಗತಿಗೆ ಮೈಸೂರು ರಾಜರು ಕೊಟ್ಟ ಕೊಡುಗೆ ಅನನ್ಯ.ಕೊಡಗಿನ ಪಾವಿತ್ರತೆ ಉಳಿಸುವ ಜವಾಬ್ದಾರಿ ಜನರಲ್ಲಿದೆ ಎಂದರು. ಸಮ್ಮುಖದಲ್ಲಿದ್ದ ಅರಮೇರಿ ಕಳಂಚೇರಿ ಮಠಾಧೀಶ ಶ್ರೀಶಾಂತಮಲ್ಲಿಕಾರ್ಜುನಸ್ವಾಮೀಜಿ ಆಶಯ ನುಡಿಗಳನ್ನಾಡಿ, ಇತಿಹಾಸವನ್ನು ಹುಟ್ಟುಹಾಕಿ ಮತ್ತೆ ಜೀವಂತಿಕೆ ಕೊಟ್ಟು 25…

Read More

ಮಡಿಕೇರಿ ಏ.16 NEWS DESK : ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿಯನ್ನು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಹಾಗೂ ತಾಲ್ಲೂಕು ಸಂಘಗಳು ತೀವ್ರವಾಗಿ ವಿರೋಧಿಸಿವೆ. ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್,  ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗೂ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಕೆ.ದಿನೇಶ್ ಅವರುಗಳು ಸಚಿವ ಸಂಪುಟದಲ್ಲಿ ಮಂಡನೆಯಾದ ವರದಿ ಅವೈಜ್ಞಾನಿಕ ಸಮೀಕ್ಷೆಯಿಂದ ಕೂಡಿದ್ದು, ರಾಜ್ಯದಲ್ಲಿ ಒಕ್ಕಲಿಗರ ಸಂಖ್ಯೆ ಕೇವಲ 61 ಲಕ್ಷ ಎಂಬ ಅಂಶ ಶುದ್ಧ ಸುಳ್ಳು ಎಂದು ಟೀಕಿಸಿದ್ದಾರೆ. ನಾನು ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷನಾಗಿದ್ದೇನೆ, ಆದರೆ ನನ್ನ ಮನೆಗೆ ಯಾವುದೇ ಸಮೀಕ್ಷಾ ತಂಡ ಬಂದಿಲ್ಲ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ಪಡೆದಿಲ್ಲ. ನನ್ನನ್ನೇ ನಿರ್ಲಕ್ಷಿಸಿರುವಾಗ ಉಳಿದ ಒಕ್ಕಲಿಗರ ಮಾಹಿತಿಯನ್ನು ಸಮರ್ಪಕವಾಗಿ ಸಂಗ್ರಹಿಸಿರಲು ಹೇಗೆ ಸಾಧ್ಯ ಎಂದು ಎಸ್.ಎಂ.ಚಂಗಪ್ಪ ಪ್ರಶ್ನಿಸಿದ್ದಾರೆ. ವರದಿಯಲ್ಲಿ ಒಕ್ಕಲಿಗರನ್ನು…

Read More

ಮಡಿಕೇರಿ ಏ.16 NEWS DESK : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಏ.21 ರಿಂದ ಮಹಿಳೆಯರ 5ಎ ಸೈಡ್ ಹಾಕಿ ಉತ್ಸವ ಆರಂಭಗೊಳ್ಳಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. ಮುದ್ದಂಡ ಹಾಕಿ ಉತ್ಸವದ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಆಟಗಾರ್ತಿ ಮಂಡೇಪಂಡ ಪುಷ್ಪ ಕುಟ್ಟಣ್ಣ ಪಾಲ್ಗೊಳ್ಳಲಿದ್ದಾರೆ. 56 ಮಹಿಳಾ ತಂಡಗಳ ನಡುವೆ ರೋಚಕ ಪಂದ್ಯಗಳು ನಡೆಯಲಿವೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಸೋಮವಾರಪೇಟೆ ಏ.16 NEWS DESK  : ಶನಿವಾರಸಂತೆ ಹೋಬಳಿ ವ್ಯಾಪ್ತಿ ಯಲ್ಲಿರುವ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಕ್ಷೇತ್ರದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಭಕ್ತಿಯಿಂದ  ಗುರುಸಿದ್ಧ ವೀರೇಶ್ವರ ಹಾಗೂ  ಕ್ಷೇತ್ರ ನಾಥ ಶ್ರೀ ವೀರಭದ್ರ ಸ್ವಾಮಿಯ ಜಾತ್ರಾಮಹೋತ್ಸವ ನಡೆಯಿತು.  ಶ್ರೀ ಗುರುಸಿದ್ಧವೀರೇಶ್ವರಸ್ವಾಮಿಯವರ ದಿವ್ಯ ಪ್ರಕಾಶದಲ್ಲಿ ಶ್ರೀ ಕ್ಷೇತ್ರಾಧ್ಯಕ್ಷರಾದ ಶ್ರೀ ಮಹಾಂತ ಶಿವಲಿಂಗಸ್ವಾಮಿಗಳವರ ಸದ್ವಿಚ್ಛೆಯ ಮೇರೆಗೆ ಮೂರು ದಿನಗಳ ಕಾಲ ನಡೆದ ಜಾತ್ರಾಮಹೋತ್ಸವದಲ್ಲಿ  ಶ್ರೀ ಮದನಾಧಿ ಅನಘ ನಿರಂಜನ ಜಂಗಮ ಶ್ರೀ ಸ್ವಾಮಿಯವರ ಸೂರ್ಯ ಮಂಡಲೋತ್ಸವ, ಕ್ಷೇತ್ರನಾಥ ಶ್ರೀ ವೀರಭದ್ರೇಶ್ವರಸ್ವಾಮಿಯವರ ಪ್ರೀತ್ಯರ್ಥ ದುಗ್ಗಳ ಹಾಗೂ ಅಗ್ನಿಕೊಂಡೋತ್ಸವ‌ ಸೇವೆ, ಚಂದ್ರಮಂಡಲೋತ್ಸವ, ಅಡ್ಡಪಲ್ಲಕ್ಕಿ ಉತ್ಸವ, ಶ್ರೀ ಪ್ರಸನ್ನ ತಪೋವನೇಶ್ವರಿ ಅಮ್ಮನವರ ಪ್ರೀತ್ಯರ್ಥ ಮುತ್ತೈದೆ ಸೇವೆ, ಸುಮಂಗಲಿಯರಿಗೆ ಮಡಿಲು ತುಂಬುವ ಕಾರ್ಯಕ್ರಮ, ದಾಸೋಹ ಸೇವೆ, ಶ್ರೀಸ್ವಾಮಿಯವರ “ಪ್ರಾಕಾರ ಪಲ್ಲಕ್ಕಿ ಉತ್ಸವ” ದೊಂದಿಗೆ “ಮಹಾರಥೋತ್ಸವ” ಶ್ರೀ ವೃಷಭಲಿಂಗೇಶ್ವರಸ್ವಾಮಿಯವರ ಸನ್ನಿದಾನದಲ್ಲಿ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಶನಿವಾರಸಂತೆ ಹೋಬಳಿ ವ್ಯಾಪ್ತಿ ಯಲ್ಲಿರುವ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠವು ಧಾರ್ಮಿಕತೆಯ…

Read More

ಮಡಿಕೇರಿ ಏ.16 NEWS DESK : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಕೇಂದ್ರ ಸರ್ಕಾರದ ನಿಲುವು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಂತರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲಾ ಫೈಝಿ, ಜಿಲ್ಲಾ ಜಮಾಯತ್ ಉಲಾಮ ಅಧ್ಯಕ್ಷರಾದ ಸೈಯದ್ ಶಿಹಾಬುದ್ಧೀನ್ ಹೈದ್ರೂಸಿ, ಜಿಲ್ಲಾ ಉಲಾಮ ಅಧ್ಯಕ್ಷ ಕಿಲ್ಲೂರು ತಂಙಳ್, ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಎಂ.ಬಿ.ಹಮೀದ್, ಯೂಸುಫ್ ಹಾಜಿ ಎಮ್ಮೆಮಾಡು, ವಿಟ್ಲದ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್ , ಸಮಿತಿಯ ಉಪಾಧ್ಯಕ್ಷರಾದ ಕೆ.ಎ.ಯಾಕುಬ್,…

Read More