ಲೇಖಕ: admin

ಕುಶಾಲನಗರ ಏ.13 NEWS DESK : ಕೊಡಗು ಜಿಲ್ಲಾ ಅಕ್ಷರ ದಾಸೋಹ ಯೋಜನೆಯ ಸೋಮವಾರಪೇಟೆ ತಾಲ್ಲೂಕಿನ ಸಹಾಯಕ ನಿರ್ದೇಶಕ ( ಪ್ರೌಢಶಾಲಾ ಮುಖ್ಯ ಶಿಕ್ಷಕರ ತತ್ಸಮಾನ ಹುದ್ದೆ) ಹುದ್ದೆಯಿಂದ ಶಿಕ್ಷಣಾಧಿಕಾರಿ ಹುದ್ದೆಗೆ ಮುಂಬಡ್ತಿ ಪಡೆದು ಮೈಸೂರಿನ ಸಿಟಿಇ ಕಾಲೇಜಿನ ಉಪನ್ಯಾಸಕ ಹುದ್ದೆಗೆ ನಿಯೋಜನೆಗೊಂಡಿರುವ ಹೆಚ್.ಕಾಳನಾಯಕ್ ಅವರಿಗೆ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಶಾಲೆಯ ವತಿಯಿಂದ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭ ಮಾತನಾಡಿದ ಸೋಮಶೇಖರ್, ಸರಳ, ಸಜ್ಜನಿಕೆ ಹೊಂದಿರುವ ಕಾಳನಾಯಕ್ ‌ತಾಲ್ಲೂಕಿನಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಶಾಲಾ ಮಕ್ಕಳ ಬಿಸಿಯೂಟ ಯೋಜನೆಯನ್ನು ಸಮರ್ಥವಾಗಿ ನಡೆಸುವ ಮೂಲಕ ಶಿಕ್ಷಣ ಇಲಾಖೆಗೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು.  ಕಾಳನಾಯಕ್ ಅವರ ಮುಂದಿನ ವೃತ್ತಿ ಜೀವನವು ಉತ್ತಮವಾಗಲಿ ಎಂದು ಶುಭ ಕೋರಿದರು.  ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಪಿ.ಎಂಪೋಷಣ್ ಅಭಿಯಾನದ…

Read More

ಮಡಿಕೇರಿ ಏ.13 NEWS DESK : ಕೊಡಗು ಸೈನಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಒಕ್ಕೂಟ(ಕೊಡ್ಯಾಕ್)ದ ಸಮಾಗಮ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್, ಪ್ರೇರಣಾದಾಯಕ ಮಾತುಗಳನ್ನಾಡಿ, ಶಾಲೆಯ ಇತ್ತೀಚಿನ ಶೈಕ್ಷಣಿಕ ಸಾಧನೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಗಳ ಕುರಿತು ಹಳೇ ವಿದ್ಯಾರ್ಥಿಗಳ ಸಂಘಕ್ಕೆ ಮಾಹಿತಿ ನೀಡಿದರು. ಸೈನಿಕ ಶಾಲೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಹಸ ಪ್ರಜ್ಞೆ ಹಾಗೂ ನೈತಿಕ ಮೌಲ್ಯಗಳನ್ನು ತಮ್ಮಲ್ಲಿ ಅಳವಡಿಸಿಕೊಂಡಿರುತ್ತಾರೆ ಎಂದು ಹೇಳಿದರು. ಈ ಶಾಲೆಯಲ್ಲಿ ಕಳೆಯುವ ಪ್ರತಿ ಕ್ಷಣವೂ ಅವರಲ್ಲಿ ಸ್ಥೈರ್ಯ ಹಾಗೂ ಸಹನಶೀಲತೆಯ ಗುಣವನ್ನು ಬೆಳೆಸುತ್ತದೆ. ಈ ಗುಣಗಳೇ ಅವರ ಬದುಕಿಗೆ ಆದರ್ಶಪ್ರಾಯವಾದ ವ್ಯಕ್ತಿತ್ವವನ್ನು ರೂಪಿಸುತ್ತವೆ. ಹಳೆಯ ವಿದ್ಯಾರ್ಥಿಗಳು ಬಿಟ್ಟುಹೋಗಿರುವ ಪರಂಪರೆ ಹಾಗೂ ಸಹೋದರತ್ವ ಭಾವನೆ ಇಂದಿನ ವಿದ್ಯಾರ್ಥಿಗಳ ಬದುಕಿಗೆ ಇಂದಿಗೂ ಪ್ರೇರಣೆಯಾಗಿ ಉಳಿದಿದೆ ಎಂದ ಅವರು, ಸಹೋದರತ್ವದ ಭಾವನೆಯೇ ಈ ಶಾಲೆಯ ಬಲವಾದ ಆಧಾರ ಸ್ತಂಭವೆಂದು ತಿಳಿಸಿದರು. ಶಾಲೆಯ ಹಳೆಯ ವಿದ್ಯಾರ್ಥಿ ಮಹೇಶ್ ಹಂಚಿನಮನಿ…

Read More

ಮಡಿಕೇರಿ ಏ.13 NEWS DESK : ವೀರಶೈವ ಸಮಾಜದ ಅಕ್ಕನ ಬಳಗದ ವತಿಯಿಂದ ಹನ್ನೆರಡನೇ ಶತಮಾನದ ಮಹಾಶಿವಶರಣೆ ಪ್ರಥಮ ಕವಯತ್ರಿ ಅಕ್ಕಮಹಾದೇವಿಯವರ ಜಯಂತಿ ಕಾರ್ಯಕ್ರಮವನ್ನು ಮಹದೇವಪೇಟೆಯ ಬಸವೇಶ್ವರ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅಕ್ಕನಬಳಗದ ಅಧ್ಯಕ್ಷೆ ವದುಂಧರ ಪ್ರಸನ್ನ ಮಾತನಾಡಿ, ಚಿಕ್ಕವಯಸ್ಸಿನಲ್ಲಿಯೇ ವೈರಾಗ್ಯಮತಿಯಾದ ಮಹಾದೇವಿ ತಮ್ಮಲ್ಲಿನ ಅಗಾಧವಾದ ಜ್ಞಾನದಿಂದಾಗಿ ಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಅಲ್ಲಮ ಪ್ರಭು ಅವರಿಂದ ಅಕ್ಕಾಮಹಾದೇವಿ ಎಂದು ಕರೆಸಿಕೊಂಡ ಶ್ರೇಷ್ಠ ಶಿವಶರಣೆಯ ಆದರ್ಶಗಳನ್ನು ಮಹಿಳೆಯರು ಹಾಗೂ ಮಕ್ಕಳು ಅರಿಯಬೇಕು ಎಂದರು. ಈ ಸಂದರ್ಭ ಅಕ್ಕಮಹಾದೇವಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಅಕ್ಕನಬಳಗದ ಕಾರ್ಯದರ್ಶಿ ಬಿ.ಎಸ್.ನಾಗರತ್ನ ಶಿವಕುಮಾರ್, ಪದಾಧಿಕಾರಿಗಳಾದ ವಸುಂದರ, ಲೀಲಾ, ರೂಪ, ಶೈಲಾ, ದಿವ್ಯ, ಮಂಜುಳಾ, ಧನ್ಯ, ಕವಿತಾ, ಪ್ರೇಮ, ಶೋಭಾ ಕಮಲಾಮಣಿ, ಗೀತಾ ಬಸವರಾಜು, ಸಾಕಮ್ಮ ಪ್ರಭಾಕರ್, ಕವಿತಾ ಹರೀಶ್, ಪ್ರೇಮಾ ಜಡ.ಕೋಟಿ, ಗೀತಾ ಲೀಲಾ ಉಳ್ಳಾಗಡ್ಡಿ, ಗೀತಾ ದೇವಾಲಯ ಸಮಿತಿ ಅಧ್ಯಕ್ಷರಾದ ರುದ್ರಪ್ರಸನ್ನ, ಕಾರ್ಯದರ್ಶಿ ಪ್ರಶಾಂತ್, ಮಣಿ ಮುರುಗೇಶ್, ಅರ್ಚಕ ಪ್ರಕಾಶ್ ಪೂಜಾರಿ ಪೂಜಾ ವಿಧಿ ನಡೆಸಿಕೊಟ್ಟರು. ಈ…

Read More

ಕುಶಾಲನಗರ ಏ.13 NEWS DESK :  ನದಿ ಮೂಲ, ಜಲ ಮೂಲಗಳ ಸಂರಕ್ಷಣೆಗೆ ಕಠಿಣ ಕಾನೂನಿನ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ದೀಪಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಮಾಮಿ ಕಾವೇರಿ ತಂಡದ ಸಹಯೋಗದೊಂದಿಗೆ ನಡೆದ 171ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳ ನಡುವೆ ದಕ್ಷಿಣ ಭಾರತದ ಜೀವನದಿ ಕಾವೇರಿ ಬರಡಾಗುತ್ತಿದೆ. ಪ್ರಮುಖವಾಗಿ ಮೂಲದಲ್ಲಿಯೇ ಕಾವೇರಿ ನೇರವಾಗಿ ಕಲುಷಿತಗೊಂಡು ಹರಿಯುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ ಎಂದರು. ಕಾರ್ಯಕ್ರಮಗಳ ಮೂಲಕ ನದಿ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುತ್ತಿರುವ ಕಾವೇರಿ ಮಹಾ ಆರತಿ ಬಳಗದ ಜೊತೆ ಕರ್ನಾಟಕ ರಕ್ಷಣಾ ವೇದಿಕೆ ಕೈ ಜೋಡಿಸುವುದರೊಂದಿಗೆ ಸ್ವಚ್ಛ ಕಾವೇರಿ ಅಭಿಯಾನದಲ್ಲಿ ನಿರಂತರವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ಕಾವೇರಿ ಮಹಾ ಆರತಿ ಕಾರ್ಯಕ್ರಮದ ಉದ್ದೇಶ ಗುರಿ ಬಗ್ಗೆ ಮಾತನಾಡಿದ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್ ಶ್ರೀ ಕ್ಷೇತ್ರ…

Read More

ಮಡಿಕೇರಿ ಏ.13 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಆಯೋಜಿಸಿದ್ದ ಪತ್ರಕರ್ತರು ಹಾಗೂ ಆಯೋಜಕರ ನಡುವಿನ ಪ್ರದರ್ಶನ ಪಂದ್ಯ ಮಳೆಯ ಕಾರಣದಿಂದ ಡ್ರಾದಲ್ಲಿ ಅಂತ್ಯಗೊಂಡಿತು. ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಸನ್ – 2ರ ಸೆಮಿಫೈನಲ್ ಪಂದ್ಯಾಟದ ನಂತರ ಕೂರ್ಗ್ ಕ್ರಿಕೆಟ್ ಫೌಂಡೇಶನ್ (ಟೀಂ ಸಿ.ಸಿ.ಎಫ್) ಹಾಗೂ ಕೊಡಗು ಪತ್ರಕರ್ತರ ಸಂಘದ (ಟೀಂ ಕೆಪಿಎಸ್) ನಡುವೆ ಸೌಹಾರ್ದ ಪ್ರದರ್ಶನ ಪಂದ್ಯ ನಡೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಸಿಎಫ್ ತಂಡ 10 ಓವರ್ ಗಳಲ್ಲಿ 84 ರನ್ ಕಲೆ ಹಾಕಿತು. ಈ ಮೊತ್ತವನ್ನು ಬೆನ್ನಟ್ಟಿದ ಕೆಪಿಎಸ್ ತಂಡ 7.3 ಓವರ್ ಗಳಲ್ಲಿ 56 ರನ್ ಗಳಿಸಿತ್ತು. ಆದರೆ ಮಳೆ ಸುರಿದ ಕಾರಣ ಪಂದ್ಯವನ್ನು ಡ್ರಾ ಮಾಡಲಾಯಿತು. ಕೆಪಿಎಸ್ ತಂಡದ ಪರ ಕುಡೆಕಲ್ ಸಂತೋಷ್ ನಾಯಕತ್ವದಲ್ಲಿ ನಾಸೀರ್, ಖಲೀಲ್, ವಿಘ್ನೇಶ್ ಭೂತನಕಾಡು, ಸುರೇಶ್ ಬಿಳಿಗೇರಿ, ಸೈನುಲ್ಲ,…

Read More

ವಿರಾಜಪೇಟೆ ಏ.13 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ತಾಲ್ಲೂಕು ಕದನೂರು ಹಾಗೂ ಅರಮೇರಿ  ಗ್ರಾಮದ ಪನ್ನಂಗಾಲತಮ್ಮೆ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಕೆಲವು ಸಮಯ ದೇವಿಯ ಸನ್ನಿಧಿಯಲ್ಲಿ ಕಳೆದ ಶಾಸಕರು ಸ್ಥಳೀಯರಿಂದ ಹಾಗೂ ಅರ್ಚಕರಿಂದ ದೇವಿಯ ಮಹಾತ್ಮೆಯ ಬಗ್ಗೆ ಅರಿತುಕೊಂಡರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ, ವಲಯ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಕುಶಾಲನಗರ, ಏ.13 NEWS DESK : ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಶೃತಿ .ಎಸ್. ಮಂಜುನಾಥ್ ಮಂಡಿಸಿದ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ ನಡೆದ 43ನೇ ಘಟಿಕೋತ್ಸವದಲ್ಲಿ ಪಿ.ಎಚ್.ಡಿ.ಪದವಿಯ ಪ್ರಶಸ್ತಿಯನ್ನು ಉನ್ನತ ಶಿಕ್ಷಣ ಸಚಿವ ಸುಧಾಕರ್ ಪಡೆದುಕೊಂಡರು. ಮಂಗಳೂರು ವಿಶ್ವವಿದ್ಯಾನಿಲಯದ ರಾಸಾಯನ ಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕಿ ಪ್ರೊಫೆಸರ್ ಬಿ. ವಿಶಾಲಾಕ್ಷಿ ಅವರ ಮಾರ್ಗದರ್ಶನದಲ್ಲಿ “ಹೈಬ್ರೀಡ್ ಪಾಲಿಮರ್ ನ್ಯಾನೋಕೋಪೋಸೈಟ್ಸ್ : ಸಿಂಥೆಸೀಸ್ ಕ್ಯಾರಕ್ಟರೈಷೇಶನ್ಸ್ ಅಂಡ್ ಅಪ್ಲಿಕೇಶನ್ಸ್ ಎಂಬ ವಿಷಯದ ಮೇಲೆ ಡಾಕ್ಟರೇಟ್ ಪದವಿ ಪಡೆದರು. ಶೃತಿ ಸೋಮವಾರಪೇಟೆಯ ಪುಷ್ಪಾ ಎಸ್ ಸಾಲಿಯಾನ್ ಅವರ ಪುತ್ರಿ. ಚಿಕ್ಕ ಅಳುವಾರ ಗ್ರಾಮದ ಸಿ.ಕೆ.ಉದಯ್ ಕುಮಾರ್ ಮತ್ತು ಮಾದೇವಿ ದಂಪತಿಯ ಸೊಸೆ.

Read More

ಮಡಿಕೇರಿ NEWS DESK ಏ.13 : ಯುವ ಸಮೂಹ ಹಾದಿ ತಪ್ಪುವುದನ್ನು ತಪ್ಪಿಸಲು ಮತ್ತು ಆರೋಗ್ಯಕರ ಜೀವನ ನಡೆಸಲು ಕ್ರೀಡೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ಆಯೋಜಿಸಿರುವ ಕೊಡವ ಕ್ರಿಕೆಟ್ ಲೆದರ್‌ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಹಾಗೂ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಕೂಟಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿರುವುದಲ್ಲದೆ ಉತ್ತಮ ಬದುಕು ಕಟ್ಟಿಕೊಟ್ಟಿವೆ ಎಂದರು. ಕ್ರೀಡೆಗಳು ಯುವ ಸಮೂಹವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುತ್ತವೆ ಮತ್ತು ಆರೋಗ್ಯವನ್ನು ಕಾಪಾಡುತ್ತದೆ. ಹೆಚ್ಚು ಹೆಚ್ಚು ಕ್ರೀಡಾಕೂಟಗಳು ನಡೆಯುವುದರಿಂದ ಕೊಡಗಿನ ಆಟಗಾರರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ ಎಂದರು. ಜನಪ್ರಿಯ ಕ್ರೀಡೆಯಾಗಿರುವ ಕ್ರಿಕೆಟ್ ಗೆ ಜಿಲ್ಲೆಯಲ್ಲಿ ಉತ್ತೇಜನ ನೀಡುತ್ತಿರುವುದು ಸ್ವಾಗತಾರ್ಹ, ಕೂರ್ಗ್ ಕ್ರಿಕೆಟ್ ಫೌಂಡೇಶನ್ ಯುವ ಸಮೂಹವನ್ನು ಉತ್ತೇಜಿಸಲು ಲೆದರ್ ಬಾಲ್…

Read More

ಮಡಿಕೇರಿ ಏ.12 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ ಅಂತಿಮ ಪಂದ್ಯ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಲಿವರೇಜ್ ತಂಡಗಳ ನಡುವೆ ಏ.13 ರಂದು ನಡೆಯಲಿದೆ. ಇಂದು ನಡೆದ 12ನೇ ದಿನದ ಪಂದ್ಯದಲ್ಲಿ ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ಮತ್ತು ಟೀಮ್ ಲಿವರೇಜ್ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಲಿವರೇಜ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 144 ರನ್‌ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 114 ರನ್‌ಗಳನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು. ಟೀಮ್ ಲಿವರೇಜ್ ತಂಡದ ಅಂಜAಡ ಚೇತನ್ ಚಿಣ್ಣಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಏ.13 ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಬೆಟ್ಟದ ಟಾಟಾ ಕಾಫಿ ಮೈದಾನದಲ್ಲಿ…

Read More

*ಮೈದಾನ 1* ಮೂಕೋಂಡ ಮತ್ತು ಕುಂಡ್ಯೋಳಂಡ ಪಂದ್ಯಗಳ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಕೊಂಡ್ಯೋಳಂಡ ತಂಡ ಜಯ ಸಾಧಿಸಿತು. ಕುಂಡ್ಯೋಳಂಡ ಪರ ಪ್ರಫುಲ್ ಪೊನ್ನಪ್ಪ ಹಾಗೂ ಕಾರ್ಯಪ್ಪ ತಲಾ 1 ಗೋಲು ದಾಖಲಿಸಿದರು. ಮೂಕೋಂಡ ತಂಡದ ಮಿಥೇಶ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಆದೇಂಗಡ ಮತ್ತು ನಾಪಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ನಾಪಂಡ ಗೆಲುವು ದಾಖಲಿಸಿತು. ನಾಪಂಡ ಪರ ನಿತಿನ್ ನಾಚಪ್ಪ, ಪ್ರವೀಣ್ ಹಾಗೂ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಆದೇಂಗಡ ಶಾನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೇಲೇಟಿರ ಮತ್ತು ಕುಪ್ಪಂಡ (ನಾಂಗಾಲ) ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಕೇಲೇಟಿರ ತಂಡ ಜಯ ಸಾಧಿಸಿತು. ಕೇಲೇಟಿರ ಪರ ಸುಬ್ರಮಣಿ, ಕವನ್ ಕಾಳಪ್ಪ ಹಾಗೂ ನಿಶ್ಚಯ್ ಮುತ್ತಣ್ಣ ತಲಾ 1 ಗೋಲು ದಾಖಲಿಸಿದರು. ಕುಪ್ಪಂಡ ಪರ ಶರತ್ ಚಿಣ್ಣಪ್ಪ ಹಾಗೂ ಗೌರವ್ ಗಣಪತಿ ತಲಾ 1 ಗೋಲು ದಾಖಲಿಸಿದರು.…

Read More