ಮಡಿಕೇರಿ ಏ.12 NEWS DESK : ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಪದವಿ ಪ್ರದಾನ ಮಾಡಲಾಯಿತು. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೈನೋಬ್ರೈನ್ ಕೇಂದ್ರದ 21ನೇ ಬ್ಯಾಚ್ ನ ಒಟ್ಟು 22 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ 10 ಹಂತಗಳಿರುವ ಅಬಾಕಸ್ ಕೋರ್ಸ್ ನ್ನು ಈ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ಕರ್ನಾಟಕ ಬ್ರೈನೋಬ್ರೈನ್ ಕಿಡ್ಸ್ ಅಕಾಡೆಮಿಯ ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಾಲ್ ಸ್ವರ್ಣಕರ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ಇಲ್ಲಿಯವರಿಗೆ ಮಡಿಕೇರಿ ಕೇಂದ್ರದಿಂದ ಒಟ್ಟು 700 ವಿದ್ಯಾರ್ಥಿಗಳು ಪದವಿ ಸ್ವೀಕಾರ ಮಾಡಿದ್ದಾರೆ ಎಂದರು. ಕರ್ನಾಟಕ ರಾಜ್ಯದ ಇತರ ಬ್ರೈನೋಬ್ರೈನ್ ಕೇಂದ್ರಗಳಲ್ಲೇ ಮಡಿಕೇರಿ ಕೇಂದ್ರದ ಅಬಕಾಸ್ ವಿದ್ಯಾರ್ಥಿಗಳನ್ನು ಅವರ ಶಿಸ್ತು ಪರಿಪಾಲನೆ, ಕ್ರಮಬದ್ಧವಾದ ಕಲಿಕೆಯಿಂದಲೇ ಗುರುತಿಸಲಾಗುತ್ತದೆ. ಇದೇ ಕಾರಣಕ್ಕೆ ಈ ಕೇಂದ್ರದ ವಿದ್ಯಾರ್ಥಿಗಳು ಬೇರೆ ಕೇಂದ್ರದ ಮಕ್ಕಳಿಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು. ಬೇರೆ ಕೇಂದ್ರಗಳಿಗೆ ಹೋಲಿಸಿದರೆ ಈ…
ಲೇಖಕ: admin
ಸೋಮವಾರಪೇಟೆ ಏ.12 NEWS DESK : ಒಕ್ಕಲಿಗರ ಯುವ ವೇದಿಕೆ, ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಮೂರು ದಿನಗಳ ಕಾಲ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿರುವ ರಾಷ್ರೀಯ ಮಟ್ಟದ ಹೊನಲು ಬೆಳಕಿನ 5ನೇ ವರ್ಷದ ‘ಒಕ್ಕಲಿಗರ ಕಪ್’ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಹೊರತುಪಡಿಸಿ, ಸತತ 4 ವರ್ಷಗಳಿಂದಲೂ ವ್ಯವಸ್ಥಿತವಾಗಿ ಕಬಡ್ಡಿ ಪಂದ್ಯಾವಳಿಯನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯವಾಗಿದೆ. ಗ್ರಾಮೀಣ ಕ್ರೀಡೆಗಳು ನಶಿಸದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೂ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಸೋಮವಾರಪೇಟೆಯಲ್ಲಿ ಒಳಾಂಗಣ ಕ್ರೀಡಾಂಗಣ ಅವಶ್ಯಕತೆಯಿದೆ. ಸೌಲಭ್ಯಗಳ ಕೊರತೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಹಿನ್ನೆಡೆಯಾಗುತ್ತಿದೆ. ಒಕ್ಕಲಿಗರ ಯುವವೇದಿಕೆ ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡು ಶ್ರಮಪಡಬೇಕು. ಜನಪ್ರತಿನಿಧಿಗಳು ಮತ್ತು ಸರ್ಕಾರ ಸಹಕಾರ ನೀಡಲಿದೆ ಎಂದು ಹೇಳಿದರು. ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಪಟ್ಟಣ…
ಮಡಿಕೇರಿ ಏ.12 NEWS DESK : ಕಾಂತೂರು-ಮೂರ್ನಾಡು ಶ್ರೀ ಪನ್ನಂಗಾಲ ದೇವಿಯ ವಾರ್ಷಿಕೋತ್ಸವವು ಏ.17 ಮತ್ತು 18 ರಂದು ನಡೆಯಲಿದೆ. ಏ.17 ರಂದು ಬೆಳಿಗ್ಗೆ ದೇವರ ಶುದ್ಧ ಕಳಸ ಪೂಜೆ, ಕೆರೆ ಮನೆಯಿಂದ ಭಂಡಾರ ತರುವುದು, ಎತ್ತು ಪೋರಾಟ, ದೇವರ ದರ್ಶನ ಹಾಗೂ ಸಂಜೆ 7 ಗಂಟೆಗೆ ಕುರುಂದ ಭಾರಣಿ ಜರುಗಲಿದೆ. ಏ.18 ರಂದು ಬೆಳಿಗ್ಗೆ ದೇವರ ದರ್ಶನ, ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಚಾಮುಂಡಿ ಉತ್ಸವ, ಕುರುಂದಾಟ ದೇವರ ಜಳಕ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಹಾಗೂ ತಕ್ಕ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸೋಮವಾರಪೇಟೆ ಏ.12 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂದತ್ವ ನಿಯಂತ್ರಣ ಸಂಸ್ಥೆ ಕೊಡಗು, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡಮಳ್ತೆ ಗ್ರಾಮ ಪಂಚಾಯತಿ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಕಾಗಡಿಕಟ್ಟೆ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ನಡೆಯಿತು. ಶಿಬಿರವನ್ನು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಉದ್ಘಾಟಿಸಿ, ಮಾತನಾಡಿ ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳಬೇಕು. ಅದರಲ್ಲೂ ದೃಷ್ಟಿ ದೋಷವಿದ್ದವರು, ತಜ್ಞ ವೈದ್ಯರೊಂದಿಗೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲಾ ಕಡೆ ನೇತ್ರ ಚಿಕಿತ್ಸೆ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ನೇತ್ರ ಚಿಕಿತ್ಸಾ ಶಿಬಿರಗಳು ಆಯೋಜನೆಗೊಂಡಾಗ ಸಮಸ್ಯೆಯಿದ್ದವರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಶಂಕರ್, ಸಿಬ್ಬಂದಿ ವಿಶ್ವರೂಪಚಾರ್, ಹಾಸನ ಅಮ್ಮ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಪ್ರೀತಿ, ಅಪೂರ್ವ, ಆಶಾ ಕಾರ್ಯಕರ್ತೆಯರಾದ ಈಶ್ವರಿ, ಉಷಾ, ಶೈಲಾ ವಸಂತ್ ಇದ್ದರು.
ಗೋಣಿಕೊಪ್ಪ ಏ.12 NEWS DESK : ಕ್ಷೇತ್ರದಲ್ಲಿದ್ದ ಕೆಂಪು ರಸ್ತೆಗಳೆಲ್ಲವೂ 15 ವರ್ಷಗಳಲ್ಲಿ ಕಪ್ಪು ಬಣ್ಣಗಳಾಗಿ ಬದಲಾವಣೆಗೊಂಡಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ ಬೋಪಯ್ಯ ನುಡಿದಿದ್ದಾರೆ. ಮಲ್ಲೂರು ಗ್ರಾಮಸ್ಥರು ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು. ರಾಜಕಾರಣಿಗಳಿಗೆ ಟೀಕೆಗಳು ಸಹಜವಾದುದ್ದೆ. ಆದರೆ ವಿನಾಕಾರಣ ವೈಯಕ್ತಿಕ ಟೀಕೆಗಳು ಉಪಯುಕ್ತವಲ್ಲ ಎಂದು ಹೇಳಿದರು. ಮಾಡಿರುವ ಕಾರ್ಯವನ್ನು ವಿಶಾಲ ಮನಸ್ಥಿತಿಯಿಂದ ಒಪ್ಪಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ವಿನಾಕಾರಣ ಸುಮ್ಮನೆ ಆರೋಪ ಹೊರಿಸುವ ಉದ್ದೇಶ ಗೌರವಿತವಾದದ್ದಲ್ಲ ಎಂದು ಹೇಳಿದರು. ಕಳೆದ 20 ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಮತದಾರರು ನೀಡಿದ ಆಶೀರ್ವಾದದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಸರ್ಕಾರದ ನಯ ಪೈಸವು ವ್ಯರ್ಥವಾಗದಂತೆ ಕ್ಷೇತ್ರಕ್ಕೆ ಬಳಸಿಕೊಳ್ಳಲಾಗಿದೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಬದಲಾವಣೆಗೆ ಹುಸಿ ಆರೋಪಗಳನ್ನ ಅಲಂಕರಿಸುತ್ತಿರುವುದು ವೇದನೆಯ ವಿಚಾರ ಎಂದರು. ಕ್ಷೇತ್ರದ ಅಭಿವೃದ್ಧಿ ಕಾಣಬೇಕೆಂಬ ಉದ್ದೇಶದಲ್ಲಿ ಪಾರದರ್ಶಕತೆಯಿಂದ ಜವಾಬ್ದಾರಿಯನ್ನು ನಿಭಾಯಿಸಲಾಗಿದೆ. ಕಾವೇರಿ ಹುಟ್ಟಿದ ಈ ಮಣ್ಣಿನಲ್ಲಿ ಯಾರೇ ಅನ್ಯಾಯ ಮಾಡಿದರು ಅದು ದೀರ್ಘಾಯುಷ್ಯವು ಅಲ್ಲ…
ಮಡಿಕೇರಿ, ಏ.12 NEWS DESK : ನಿರಂತರ ಅಭ್ಯಾಸದಿಂದ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಪರಿಪೂರ್ಣತೆ ಹೊಂದಲು ಸಾಧ್ಯವೆಂದು ಮಾಜಿ ಒಲಂಪಿಯನ್, ಭಾರತ ತಂಡದ ಮಾಜಿ ನಾಯಕ ಮನೆಯಪಂಡ ಎಂ.ಸೋಮಯ್ಯ ಹೇಳಿದರು. ದಿ. ಸಿ.ವಿ. ಶಂಕರ್ ಸ್ಮರಣಾರ್ಥ ವಾಂಡರರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಕ್ಕಳ ಉಚಿತ ಬೇಸಿಗೆ ಶಿಬಿರಕ್ಕೆ ಆಗಮಿಸಿದ ಅವರು ಶಿಬಿರಾರ್ಥಿಗಳನ್ನು ಕುರಿತು ಮಾತನಾಡಿದರು. ವಾಂಡರರ‍್ಸ್ ಕ್ಲಬ್ ವತಿಯಿಂದ ಏರ್ಪಡಿಸಿರುವ ಈ ಶಿಬಿರದಲ್ಲಿ ಶಿಸ್ತು, ವ್ಯಯಾಮ, ಯೋಗಾಭ್ಯಾಸ ಕೂಡ ಕಲಿಸಿಕೊಡಲಾಗುತ್ತದೆ. ಇದು ಮಕ್ಕಳನ್ನು ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳಿಸಲು ಸಹಕಾರಿಯಾಗಲಿದೆ. ಕೇವಲ ಒಂದು ತಿಂಗಳ ಅಭ್ಯಾಸದಿಂದ ಪರಿಪೂರ್ಣತೆ ಸಾಧ್ಯವಾಗುವದಿಲ್ಲ. ಶಿಬಿರದ ಬಳಿಕವೂ ಅಭ್ಯಾಸ ಮಾಡಬೇಕು. ನಿರಂತರ ಅಭ್ಯಾಸದಿಂದ ಮಾತ್ರ ಕ್ರೀಡೆಯಲ್ಲಿ ಪರಿಪೂರ್ಣತೆ ಹೊಂದಲು ಸಾಧ್ಯವೆಂದು ಕಿವಿ ಮಾತು ಹೇಳಿದರು. ಮಕ್ಕಳು ಉತ್ತಮ ನಡತೆ ಮೈಗೂಡಿಸಿಕೊಳ್ಳಬೇಕು. ರಾತ್ರಿ ಬೇಗನೇ ನಿದ್ರಿಸಿ, ಬೆಳಿಗ್ಗೆ ಬೇಗನೇ ಎದ್ದೇಳುವುದರಿಂದ ಅರೋಗ್ಯವಾಗಿರಲು ಸಾಧ್ಯವಾಗುತ್ತದೆ. ಉತ್ತಮ ಗೆಳೆತನ ಹೊಂದಿದವರು ಉತ್ತಮ ಕ್ರೀಡಾ ಪಟುಗಳಾಗಲು…
ಮಡಿಕೇರಿ ಏ.12 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಭಾಗಮಂಡಲ ನಾಡ್‍ಗೌಡ ಸಮಾಜ, ಕರಿಕೆ ಗೌಡ ಸಮಾಜ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡ್‍ಗೌಡ ಯುವ ಒಕ್ಕೂಟ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಂಯುಕ್ತ ಆಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ 2025 ಕಾರ್ಯಕ್ರಮವು ಏ.15 ರಂದು ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗಮಂಡಲದ ಗಡಿನಾಡು ಉತ್ಸವವು ಬೆಳಗ್ಗೆ 9 ಗಂಟೆಗೆ ಭಾಗಮಂಡಲದ ಕರಿಕೆ ಗೇಟ್ ಬಳಿಯಿಂದ ಅರೆಭಾಷೆ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಆದಿಚುಂಚನಗಿರಿ ಶಾಖಾಮಠ ಹಾಸನ ಪರಮ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಯವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ…
ವಿರಾಜಪೇಟೆ ಏ.12 NEWS DESK : 2024-25ನೇ ಶೈಕ್ಷಣಿಕ ಸಾಲಿನ ಅತ್ಯುತ್ತಮ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಪ್ರಶಸ್ತಿಯನ್ನು ವಿರಾಜಪೇಟೆ ಸಮೀಪದ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡೆದುಕೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಪುಷ್ಟಿ ಯೋಜನೆಯಡಿ ಸಮೀಕ್ಷೆ ಕೈಗೊಂಡು ಇಡೀ ಜಿಲ್ಲೆಯಲ್ಲಿ ಆಯ್ಕೆಗೊಂಡಿರುವ ಒಟ್ಟು ಮೂರು ಶಾಲೆಯ ಎಸ್ ಡಿ ಎಂ ಸಿ. ಪೈಕಿ ವಿರಾಜಪೇಟೆ ತಾಲೂಕಿನಿಂದ ಆಯ್ಕೆಗೊಂಡ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಏಕೈಕ ಶಾಲೆಯಾಗಿದೆ. ಸರಕಾರಿ ಶಾಲೆಗಳನ್ನು ಮತ್ತು ಎಸ್ ಡಿ ಎಂ ಸಿ ಗಳನ್ನು ಪ್ರೋತ್ಸಾಹಿಸಲು ಸರಕಾರ ಪ್ರಶಸ್ತಿ ಘೋಷಿಸಿತ್ತು. ಇದರಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾ ವಾಹಿನಿ ಪೋರ್ಟಲ್ ನಲ್ಲಿ ನಿರ್ದಿಷ್ಟ ಮಾನದಂಡಗಳ ಆಧಾರದಲ್ಲಿ ಎಸ್ ಡಿ ಎಂ ಸಿ ಗಳ ಸಮೀಕ್ಷೆಯನ್ನು ಆಯೋಜಿಸಿ ಇದರಲ್ಲಿ ಪಾಲ್ಗೊಳ್ಳುವ ಅವಕಾಶ ನೀಡಲಾಗಿತ್ತು. ಇದರಂತೆ ಸಮೀಕ್ಷೆಯ ಅಂತಿಮ ಘಟ್ಟದಲ್ಲಿ ದೊರೆಯುವ ಗರಿಷ್ಠ ಅಂಕಗಳ ಆಧಾರದಲ್ಲಿ ಜಿಲ್ಲಾವಾರು ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಅತ್ಯುತ್ತಮ ಎಸ್‌ಡಿಎಂಸಿ…
ಕುಶಾಲನಗರ ಏ.12 NEWS DESK : ಕುಶಾಲನಗರ ತಾಲ್ಲೂಕು ತೊರೆನೂರು ಗ್ರಾಪಂ ವ್ಯಾಪ್ತಿಯಲ್ಲಿನ ಅಳುವಾರ ಗ್ರಾಮದ ಗ್ರಾಮದೇವತೆ ಅಳುವಾರದಮ್ಮ ದೇವರ ಎರಡು ದಿನಗಳ ಅವಧಿಯ ವಾರ್ಷಿಕ ಪೂಜೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಚೈತ್ರ ಮಾಸ ಉತ್ತರ ಪಾದ ಶುಭ ನಕ್ಷತ್ರದ ಮುಂಜಾನೆ ದೇವಾಲಯದಲ್ಲಿ ವಿವಿಧ ಹೋಮ ಹಾಗೂ ಧಾರ್ಮಿಕ ವಿಧಿಗಳು ಜರುಗಿದವು. ಹಬ್ಬದ ಅಂಗವಾಗಿ ಗ್ರಾಮದ ಬಹುತೇಕ ಮನೆಗಳು ತಳಿರು ತೋರಣ ಹಾಗೂ ಅಲಂಕೃತ ವಿದ್ಯುತ್ ದೀಪಗಳೊಂದಿಗೆ ಅಲಂಕರಿಸಲಾಗಿತ್ತು. ಅಳುವಾರದ ಸುತ್ತಮುತ್ತಲಿನ ಅಳಿಲು ಗುಪ್ಪೆ, ಬಸರಿಗುಪ್ಪೆ, ಅರಿಶಿಣ ಗುಪ್ಪೆ, ತೊರೆನೂರು ದೊಡ್ಡಳುವಾರ, ಆರನೇ ಹೊಸಕೋಟೆ ಮೊದಲಾದ ಗ್ರಾಮಗಳ ಸಹಸ್ರಾರು ಭಕ್ತರು ಪೂಜೋತ್ಸವದಲ್ಲಿ ಭಾಗಿಯಾದರು. ಮರುದಿನ ಶುಕ್ರವಾರ ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹಕವು ಭಕ್ತರು ಪ್ರಾಣಿಗಳ ಬಲಿಕೊಟ್ಟು ಭಕ್ತಿ ಮೆರೆದರು. ಬಳಿಕ ತಮ್ಮ ತಮ್ಮ ಮನೆಗಳಿಗೆ ಬೇರೆ ಬೇರೆ ಊರುಗಳಿಗೆ ವಿವಾಹ ಮಾಡಿಕೊಟ್ಟಿದ್ದ ಹೆಣ್ಣು ಮಕ್ಕಳು ಒಳಗೊಂಡಂತೆ ಮಿತ್ರರು, ನೆರೆ ಹೊರೆಯ ಗ್ರಾಮಗಳ ಭಕ್ತ ಸ್ನೇಹಿತರನ್ನು ಆಹ್ವಾನಿಸಿ ವಿವಿಧ…
ಸುಂಟಿಕೊಪ್ಪ ಮಾ.11 NEWS DESK : ಪಟ್ಟಣದಲ್ಲಿ ಹೆಚ್ಚಿದ ಟ್ರಾಫಿಕ್-ಪಾರ್ಕಿಂಗ್ ಸಮಸ್ಯೆ, ಹೆದ್ದಾರಿ ಬದಿಯಲ್ಲಿ ಮಾಂಸ ಮಾರಾಟ, ತ್ಯಾಜ್ಯ ವಿಲೇವಾರಿ ವಿಳಂಬ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಅನಾವರಣಗೊಂಡಿತು. ಕೊಡಗು ಪತ್ರತರ್ಕರ ಸಂಘದ ಕುಶಾಲನಗರ ತಾಲ್ಲೂಕು ಘಟಕದಿಂದ ಸುಂಟಿಕೊಪ್ಪದ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆಯಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಹಲವಾರು ಸಮಸ್ಯೆಗಳ ಬಗ್ಗೆ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಂಬಂಧಿಸಿದವರ ಗಮನ ಸೆಳೆದರು. ಪ್ರಶ್ನೆಗಳನ್ನು ಆಲಿಸಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯತಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ತಯಾರಾಗಿದೆ. ಗ್ರಾಪಂ ವ್ಯಾಪ್ತಿಯ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಪಂ ನೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಇದಲ್ಲದೆ 29 ಇಲಾಖೆಗಳು ಕೂಡ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸುಂಟಿಕೊಪ್ಪದಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ಮಾರುಕಟ್ಟೆ ನಿರ್ಮಿಸಲಾಗುತ್ತಿದ್ದು, ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಪೊಲೀಸ್ ಇಲಾಖೆಯ ಜೊತೆಗೂಡಿ ರಸ್ತೆಯ…






