ಲೇಖಕ: admin

ಮಡಿಕೇರಿ ಮೇ 18 NEWS DESK : ವಿರಾಜಪೇಟೆ 66/33/11 ಕೆ.ವಿ.ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿದ್ದು, ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು, ಕದನೂರು, ಕೆದಮುಳ್ಳೂರು, ಬಿಟ್ಟಂಗಾಲ, ಬಿ ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಸಿದ್ದಾಪುರ ಪಟ್ಟಣ, ಮಾಲ್ದಾರೆ, ಕರಡಿಗೋಡು, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಹಾಲುಗುಂದ, ಕಣ್ಣಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಮಗ್ಗುಲ 66/33/11 ಕೆ.ವಿ.ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ 33ಕೆವಿ ಮೂರ್ನಾಡು ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು 33/11 ಕೆವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು ಹಾಗೂ ಮರಗೋಡು ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ…

Read More

ಮಡಿಕೇರಿ ಮೇ 18 NEWS DESK : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ನಿರಂತರವಾಗಿ ಮತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಹೇರೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ಮತಾಂತರ ಮಾಡಲು ತಮಿಳುನಾಡಿನಿಂದ ಬಂದು ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಚರ್ಚ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಈ ಬಗ್ಗೆ ಪರಿಶೀಲಿಸಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.  ಹೇರೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಚರ್ಚ್ ಅನ್ನು ತೆರವುಗೊಳಿಸಿ, ಹೊರರಾಜ್ಯದಿಂದ ಬಂದು ಇಲ್ಲಿಯವರೊಂದಿಗೆ ಸೇರಿಕೊಂಡು ಮತಾಂತರ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.…

Read More

ವಿರಾಜಪೇಟೆ ಮೇ 18 NEWS DESK : ಪ್ರತಿಭಾ ಪ್ರದರ್ಶನಕ್ಕೆ ಕ್ರೀಡಾಕೂಟಗಳು ವೇದಿಕೆಗಳಾಗಿವೆ ಎಂದು ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ.ಫಾ.ಜೇಮ್ಸ್ ಡೊಮಿನಿಕ್ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ಮಹಿಳಾ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರಪ್ರಥಮ ಬಾರಿಗೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಮೈದಾನದಲ್ಲಿ ಕ್ರಿಶ್ಚಿಯನ್ ಕಪ್ ಸೀಸನ್ 1 ಪ್ರಯುಕ್ತ ಜಿಲ್ಲಾ ಮಟ್ಟದ ಮಹಿಳೆಯರ ಥ್ರೋ ಬಾಲ್ ಪಂದ್ಯಾವಳಿಗೆ ಶುಭಹಾರೈಸಿ ಅವರು, ಮಾತನಾಡಿದರು. ನಮ್ಮ ಧರ್ಮ ಕೇಂದ್ರದ ವತಿಯಿಂದ ಪ್ರಪ್ರಥಮ ಬಾರಿಗೆ ಮಹಿಳೆಯರ ಥ್ರೋ ಬಾಲ್ ಪಂದ್ಯಾವಳಿಯನ್ನು ಮಹಿಳೆಯರೇ ಆಯೋಜಿಸಿದ್ದು ಗಮನಾರ್ಹವಾಗಿದೆ. ಮಹಿಳೆಯರು ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಹೊರ ಹೊಮ್ಮಿಸಲು ಇಂತಹ ಕ್ರೀಡಾಕೂಟಗಳ ಅಗತ್ಯವಿದೆ ಎಂದು ಹೇಳಿದರು. ಅಮ್ಮತ್ತಿಯ ಸಂತ ಅಂತೋಣಿ ಚರ್ಚ್ ನ ಗುರುಗಳು ಹಾಗೂ ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಅವರು ಮಾತನಾಡಿ, ಇಂದು ಸಮಾಜದಲ್ಲಿ ಅನೇಕ ಕ್ಲಬ್ ಗಳನ್ನು ಕಾಣುತ್ತಿದ್ದೇವೆ.…

Read More

ಸೋಮವಾರಪೇಟೆ ಮೇ 18 NEWS DESK : ಮಕ್ಕಳಗುಡಿ ಬೆಟ್ಟ ಸಂರಕ್ಷಣಾ ಮತ್ತು ಅಭಿವೃದ್ಧಿ ಸಮಿತಿ ಸಭೆ ತಾಲ್ಲೂಕಿನ ಕಿರಗಂದೂರು ಗ್ರಾಮದ ಮಕ್ಕಳಗುಡಿ ಬೆಟ್ಟದಲ್ಲಿ ಸಮಿತಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಪ್ರವಾಸಿ ತಾಣ ಮಕ್ಕಳಗುಡಿ ಬೆಟ್ಟದಲ್ಲಿ ಕೆಲವೊಂದು ಅಭಿವೃದ್ಧಿ ಕೆಲಸಗಳಾಗಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಣಬೇಕು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಉದ್ಯಾನ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗುವುದು. ಸಮಿತಿ ಸದಸ್ಯರು ಸಭೆ ಸೇರಿ ಅಭಿವೃದ್ಧಿ ಬಗ್ಗೆ ಸೂಕ್ತ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೇಳಿದರು. ಮಕ್ಕಳ ಗುಡಿ ಬೆಟ್ಟದ ಪ್ರದೇಶವನ್ನು ಸರ್ವೆ ಮಾಡಿಸಿ, ಮಕ್ಕಳಗುಡಿ ಬೆಟ್ಟದ ಗಡಿ ಗುರುತಿಸುವ ಕೆಲಸ ಮಾಡಿಸಿಕೊಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗುವುದು. ಮಕ್ಕಳ ಗುಡಿ ಬೆಟ್ಟದ ಸುತ್ತಲೂ ಸಾಕಷ್ಟು ತ್ಯಾಜ್ಯ ಕಂಡುಬರುತ್ತಿದ್ದು, ಒಂದು ವಾರದಲ್ಲಿ ಸ್ವಚ್ಛ ಮಾಡಿಸುವಂತೆ ಕಿರಗಂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಅವರಿಗೆ ಸೂಚಿಸಿದರು. ತ್ಯಾಜ್ಯ ಸಂಗ್ರಹಿಸಲು ಅಲ್ಲಲ್ಲಿ ತೊಟ್ಟಿಗಳು, ಆಯ್ದ ಸ್ಥಳಗಳಲ್ಲಿ ಸಿಸಿ…

Read More

ಮಡಿಕೇರಿ ಮೇ 18 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಆರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕರಾದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ತಮ್ಮ ತಂದೆ ಎ.ಕೆ. ಸುಬ್ಬಯ್ಯ ಹಾಗೂ ತಾಯಿ ಎ.ಎಸ್. ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ರಾಷ್ಟ್ರಮಟ್ಟದ ಫುಟ್ಬಾಲ್ ತೀರ್ಪುಗಾರ ಧೀರಜ್ ರೈ ಶ್ರೀನಿವಾಸ್’ ವರದಿಗೆ ಕೆ.ಎಂ. ಇಸ್ಮಾಯಿಲ್ ಕಂಡಕ್ಕರೆ ಪಡೆದುಕೊಂಡಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದ ಬಿ.ಆರ್. ಸವಿತಾ ರೈ ಅವರು ತಮ್ಮ ತಂದೆ ಕೃಷಿಕರಾಗಿದ್ದ ಬಿ.ಎಸ್. ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿಗೆ ಇಬ್ಬರು ವರದಿಗಾರರು ಜಂಟಿಯಾಗಿ ಆಯ್ಕೆಯಾಗಿದ್ದಾರೆ. ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಸಮಗ್ರ ಕೃಷಿಯಲ್ಲಿ ಯಶ ಕಂಡ ರೈತ” ವರದಿಗೆ ಪಿ.ವಿ. ಅಂತೋಣಿ ಹಾಗೂ ಟಿ.ವಿ.1 ವಾಹಿನಿಯಲ್ಲಿ…

Read More

ಮಡಿಕೇರಿ ಮೇ 18 NEWS DESK : ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ ಅಂಗವಾಗಿ `ವಸ್ತು ಸಂಗ್ರಹಾಲಯಗಳು ವಿಭಜಿತ ಜಗತ್ತನ್ನು ಒಂದುಗೂಡಿಸುತ್ತಿವೆ ಎಂಬ ಘೋಷವಾಕ್ಯದಡಿಯಲ್ಲಿ ನಾಡಿನ ಗತ ಇತಿಹಾಸವನ್ನು ಪುಷ್ಠೀಕರಿಸುವ `ಪ್ರಾಚೀನ ನಾಣ್ಯಗಳ ಪ್ರದರ್ಶನ ನಗರದ ಕೋಟೆಯ ಆವರಣದ ವಸ್ತುಸಂಗ್ರಹಾಲಯದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕೊಡಗಿನ ಖ್ಯಾತ ವೈದ್ಯರು ಹಾಗೂ ನಾಣ್ಯ ಸಂಗ್ರಹಕಾರರಾದ ಡಾ.ಎಂ.ಜಿ.ಪಾಟ್ಕರ್ ಅವರ ಸಂಗ್ರಹದ ಎರಡು ಸಾವಿರಕ್ಕೂ ಹೆಚ್ಚು ನಾಣ್ಯಗಳ ಪ್ರದರ್ಶನ ಕುತೂಹಲಕಾರಿಯಾಗಿ ಮೂಡಿ ಬಂದು, ನೂರಾರು ಸಂಖ್ಯೆಯ ಜನರನ್ನು ಆಕರ್ಷಿಸಿತು. ಖ್ಯಾತ ನಾಣ್ಯ-ನೊಟು ಸಂಗ್ರಹಕಾರರಾದ ಹುಣಸೂರು ಪಿ.ಕೆ.ಕೇಶವಮೂರ್ತಿ ಅವರು ಪ್ರಾಚೀನ ನಾಣ್ಯಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಪ್ರಾಚೀನ ನಾಣ್ಯಗಳ ಪ್ರದರ್ಶನದಿಂದ ವಿದ್ಯಾರ್ಥಿಗಳು ಪುಸ್ತಕದಲ್ಲಿ ಓದುವ ಇತಿಹಾಸವನ್ನು ಕಣ್ಣಾರೆ ನೋಡಿ ಕಲಿಯಲು ಉತ್ತಮ ವೇದಿಕೆಯಾಗಿದೆ ಎಂದರು. ಇದು ಮುಂದಿನ ಪೀಳಿಗೆಗೆ ಇತಿಹಾಸದ ವಿವಿಧ ರಾಜವಂಶಗಳ, ಲಾಂಛನಗಳ ಹಾಗೂ ಆಯಾ ಕಾಲದ ಇತಿಹಾಸವನ್ನು ಸ್ಪಷ್ಟವಾಗಿ ತಿಳಿಯಲು ಸಹಕಾರಿಯಾಗುತ್ತದೆ. ಅಲ್ಲದೇ ವಿದ್ಯಾರ್ಥಿಗಳು ಹಾಗೂ ಇತಿಹಾಸಕಾರರ ಕಲಿಕೆಗೆ…

Read More

ಮಡಿಕೇರಿ ಮೇ 18 NEWS DESK : ದುಬಾರೆ ಮತ್ತು ಬರಪೊಳೆಯಲ್ಲಿ ರಿವರ್ ರ‍್ಯಾಪ್ಟಿಂಗ್ ನಡೆಸುವವರು ಕಡ್ಡಾಯವಾಗಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ(ಜೇತ್ನ) ರ‍್ಯಾಪ್ಟ್ ಫಿಟ್ಟ್‌ನೆಸ್ ಪ್ರಮಾಣ ಪತ್ರ ಪಡೆಯುವುದರ ಜೊತೆಗೆ ಪ್ರವಾಸೋದ್ಯಮ ಇಲಾಖೆಯಿಂದ ಪರವಾನಗಿ ನವೀಕರಣ ಪತ್ರ ಪಡೆದು ರಿವರ್ ರ‍್ಯಾಪ್ಟಿಂಗ್ (ಜಲಸಾಹಸ ಕ್ರೀಡೆ) ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ರಿವರ್ ರ‍್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಿವರ್ ರ‍್ಯಾಪ್ಟಿಂಗ್ ನಡೆಸುವವರು ಯಾವುದೇ ಕಾರಣಕ್ಕೂ ಅನುಮತಿ ಇಲ್ಲದೆ ಹಾಗೂ ನವೀಕರಣ ಪತ್ರ ಪಡೆಯದೆ ರಿವರ್ ರ‍್ಯಾಪ್ಟಿಂಗ್ ನಡೆಸಬಾರದು ಎಂದು ಎಚ್ಚರಿಸಿದರು. ಹಾಗೆಯೇ ರಿವರ್ ರ‍್ಯಾಪ್ಟಿಂಗ್ ನಡೆಸಲು ಬಳಸುವ ಪ್ರತಿ ರ‍್ಯಾಪ್ಟ್‌ಗೆ ನಿರ್ವಹಣಾ ಶುಲ್ಕವನ್ನು ಪ್ರತೀ ತಿಂಗಳು ಪಾವತಿಸುವಂತೆ ಸಹನಾ ಎಸ್.ಹಾದಿಮನಿ ಅವರು ಸೂಚಿಸಿದರು. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ರ‍್ಯಾಪ್ಟ್ ಗೈಡ್‌ಗಳ ಅಗತ್ಯ ತರಬೇತಿಯನ್ನು ಜನರಲ್…

Read More

ಮಡಿಕೇರಿ ಮೇ 18 NEWS DESK :  ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ ವೇಳೆ ಮಹಿಳೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯ ಪ್ರತಿಪಾದಿಸಿದ್ದಾರೆ. ಪರಿಸರ ಪ್ರವಾಸೋದ್ಯಮದ ಚಾರಣಪಥಗಳಲ್ಲಿ ಚಾರಣಿಗರ/ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸಲಾಗಿದ್ದು, ಈ ಎಸ್.ಓ.ಪಿ. ಜಾರಿ ಖಚಿತಪಡಿಸಿಕೊಳ್ಳುವವರೆಗೆ ಚಾರಣಪಥಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಅದೇ ಪ್ರಕಾರವಾಗಿ ಸಾಕಾನೆ ಶಿಬಿರಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಎಸ್.ಓ.ಪಿ.…

Read More

ಮಡಿಕೇರಿ ಮೇ 18 NEWS DESK : “ಆಶಾ ಕಾರ್ಯಕರ್ತೆ”ಯರಿಗೆ ಪಾವತಿಸಲು ಬಾಕಿ ಇರುವ ಗೌರವ ಧನ ಮತ್ತು ಪ್ರೋತ್ಸಾಹ ಧನವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆನ್ನುವುದು ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಯಿತು. ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರಾದ ತೆಕ್ಕಡೆ ಫೂರ್ಣಿಮಾ, ರಾಜ್ಯ ನಿರ್ದೇಶಕರು ಹಾಗೂ ಜಿಲ್ಲಾ ಸಂಚಾಲಕರಾದ ಉಮಾದೇವಿ ಅವರುಗಳ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ಜಿಲ್ಲಾ ವ್ಯಾಪ್ತಿಯಿಂದ ಆಗಮಿಸಿದ್ದ ನೂರಾರು ಆಶಾ ಕಾರ್ಯಕರ್ತೆಯರು ಜಿಲ್ಲಾಡಳಿತ ಭವನದ ಮುಂಭಾಗ ಘೋಷಣೆಗಳ ಸಹಿತಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಸಂಘದ ಅಧ್ಯಕ್ಷರಾದ ತೆಕ್ಕಡೆ ಪೂರ್ಣಿಮಾ ಅವರು ಮಾತನಾಡಿ, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 430 ಆಶಾಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿಗೆ ಸಂಬಂಧಿಸಿದ ಗೌರವ ಧನ ಇಲ್ಲಿಯವರೆಗೂ ಬಿಡುಗಡೆ ಮಾಡಿಲ್ಲ ಮತ್ತು ವಿವಿಧ…

Read More

ಮಡಿಕೇರಿ NEWS DESK ಮೇ 18 : ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಬೇಕು ಮತ್ತು ಆದಿಮಸಂಜಾತ ಕೊಡವರನ್ನು ಮರುಸ್ಥಾಪಿಸಿ ದೃಢೀಕರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಸಂದರ್ಭ ಕೊಡವರ ಪರವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮನವಿಯಲ್ಲಿ ವಿವರಿಸಿದ್ದಾರೆ. ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭ ಕೊಡಗು ಭೂಪ್ರದೇಶದಲ್ಲಿರುವ ಅಕ್ರಮ ವಲಸಿಗ ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಕೈಬಿಡಬೇಕು. ಆದಿಮಸಂಜಾತ ಕೊಡವರು ಹಾಗೂ ಇಲ್ಲಿ ನೆಲೆಸಿರುವ ಇತರ ನಾಗರೀಕರ ನಡುವಿನ ವ್ಯತ್ಯಾಸವನ್ನು ಗುರುತಿಸಬೇಕು ಎಂದು ಕೋರಿದ್ದಾರೆ. ಭಾರತದ ಮುಖ್ಯ ಚುನಾವಣಾ ಆಯೋಗವು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಗಳ ಮೂಲಕ 2026 ರ ಜೂನ್ 20 ರಿಂದ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಕೊಡಗು ಭೂಪ್ರದೇಶವು ಭೌಗೋಳಿಕ-ಕಾರ್ಯತಂತ್ರದ ಸೂಕ್ಷö್ಮ ಪ್ರದೇಶವಾಗಿದೆ. ಈ…

Read More