ಲೇಖಕ: admin

ಮಡಿಕೇರಿ ಏ.11 NEWS DESK : 2024-25ನೇ ಸಾಲಿನ ದ್ವಿತೀಯ ಪಿಯುಸಿ ಪಿಸಿಎಂಸಿ ಪರೀಕ್ಷೆಯಲ್ಲಿ ಕೊಡಗಿನ ಟಿ.ಎಸ್.ರೋಹಿತ್ ರಾಜ್ಯಕ್ಕೆ 7ನೇ ಸ್ಥಾನ ಪಡೆದಿದ್ದಾನೆ. ಮಂಗಳೂರಿನ ಪ್ರೆಸಿಡೆನ್ಸಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಟಿ.ಎಸ್.ರೋಹಿತ್ 600 ಅಂಕಗಳಿಗೆ 593 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ರೋಹಿತ್ ಮೂಲತಃ ಕೊಡಗಿನ ಕುಂಬಳದಾಳು ಗ್ರಾಮದ ತೆಕ್ಕಡೆ ಸುಗುಗಣಪತಿ ಮತ್ತು ಜ್ಯೋತಿ ದಂಪತಿಯ ಪುತ್ರ.

Read More

ಮಡಿಕೇರಿ NEWS DESK ಏ.10 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ 10ನೇ ದಿನದ ಪಂದ್ಯದಲ್ಲಿ ಕೊಡವ ರೈಸಿಂಗ್ ಸ್ಟಾರ್ಸ್ ಮತ್ತು ಟೀಮ್ ಲಿವರೇಜ್ ಗೆಲುವು ಸಾಧಿಸಿತು. ಟೀಮ್ ವೈಲ್ಡ್ ಫ್ಲವರ್ ಮತ್ತು ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೈಲ್ಡ್ ಫ್ಲವರ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಕೊಡವ ರೈಸಿಂಗ್ ಸ್ಟಾರ್ಸ್ 17.1 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 70 ರನ್ ದಾಖಲಿಸಿ ಜಯ ಸಾಧಿಸಿತು. ಕೊಡವ ರೈಸಿಂಗ್ ಸ್ಟಾರ್ಸ್ ನ ಬೊಳ್ಳೆರ ದಿಶಾನ್ ಕುಟ್ಟಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಟೀಮ್ ಕೊಡವ ಟ್ರೈಬ್ಸ್ ಮತ್ತು ಟೀಮ್ ಲಿವರೇಜ್ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು…

Read More

ಮಡಿಕೇರಿ ಏ.10 NEWS DESK : ಸಮಾಜದಲ್ಲಿ ಎಲ್ಲರೂ ಬದುಕಬೇಕು, ಹಾಗೆಯೇ ಇತರರನ್ನೂ ಬದುಕಲು ಬಿಡಬೇಕು’ ಎಂಬುದು ಭಗವಾನ್ ಮಹಾವೀರರ ಸಂದೇಶವಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಹೇಳಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಗವಾನ್ ಮಹಾವೀರರು ಅಹಿಂಸಾ ಧರ್ಮದ ಪ್ರವರ್ತಕರಾಗಿದ್ದು, ಸನ್ಮತಿ, ವರ್ಧಮಾನ ಹಾಗೂ ವೀರ ಹೆಸರುಗಳಿಂದ ಮಹಾವೀರರನ್ನು ಕರೆಯುತ್ತಾರೆ ಎಂದು ತಿಳಿಸಿದರು.  ಕ್ರಿ.ಪೂ.6ನೇ ಶತಮಾನದಲ್ಲಿ  ರಾಜಪುತ್ರನಾಗಿ ಜನಿಸಿದರೂ, ಜನ ಕಲ್ಯಾಣಕ್ಕಾಗಿ ರಾಜತ್ವವನ್ನೂ ತ್ಯಾಗಮಾಡಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಭಗವಾನ್ ಮಹಾವೀರರು ಜೀವನ ನಡೆಸಿದರು ಎಂದು ಉಪ ವಿಭಾಗಾಧಿಕಾರಿ ಹೇಳಿದರು.   ಭಗವಾನ್ ಮಹಾವೀರರು ಸತ್ಯ, ಅಹಿಂಸೆ, ಅಪರಿಗ್ರಹ, ಅಸ್ತೇಯ ಮತ್ತು ಬ್ರಹ್ಮಚರ್ಯ ಈ ಪಂಚ ವ್ರತಗಳ ಅನುಷ್ಠಾನದ ಅಡಿಪಾಯ ಹಾಕಿದರು ಎಂದು ಅವರು ವಿವರಿಸಿದರು.  ಅಹಿಂಸೆಯೇ ಪರಮ ಧರ್ಮ ಎಂಬುದು ದಿವ್ಯ ಮಂತ್ರವಾಗಿ ಅಳವಡಿಸಿಕೊಂಡಿದ್ದ ಮಹಾವೀರರು ಅದರಂತೆ ನಡೆದುಕೊಂಡರು…

Read More

ಮಡಿಕೇರಿ ಏ.10 NEWS DESK : ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು ರೂ.10 ಕೋಟಿ ಮೌಲ್ಯದ 10 ಕೆ.ಜಿ 390 ಗ್ರಾಂ ಅಂಬರ್‍ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರಂನಿಂದ ಅಕ್ರಮವಾಗಿ ಅಂಬರ್‍ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ಕೇರಳ ರಾಜ್ಯದ ತಿರುವನಂತಪುರಂ ನ ಶಂಶುದ್ದೀನ್.ಎಸ್, (45) ಎಂ.ನವಾಜ್, (54), ಕಣ್ಣೂರು ಜಿಲ್ಲೆಯ ವಿ.ಕೆ.ಲತೀಶ್ (53) ರಿಜೇಶ್.ವಿ. (40) ಪ್ರಶಾಂತ್.ಟಿ (52), ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ರಾಘವೇಂದ್ರ ಎ.ವಿ. (48) ವರ್ಷ, ಕಾಸರಗೋಡಿನ ಬಾಲಚಂದ್ರ ನಾಯಕ್ (55), ಕ್ಯಾಲಿಕಟ್ ನ ಸಾಜುಥಾಮೋಸ್ (58), ಕಣ್ಣೂರಿನ ಜೋಬಿಸ್.ಕೆ.ಕೆ (33) ಹಾಗೂ ಜಿಜೇಸ್.ಎಂ, (40) ಬಂಧಿತ ಆರೋಪಿಗಳು. ಬಂಧಿತರಿಂದ ಅಂದಾಜು ರೂ.10 ಕೋಟಿ ಮೌಲ್ಯದ 10 ಕೆ.ಜಿ…

Read More

*ಮೈದಾನ 1* ಮದ್ರೀರ ಮತ್ತು ಜಮ್ಮಡ ತಂಡಗಳ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ನಡೆದ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಮದ್ರೀರ ತಂಡ ಜಯ ದಾಖಲಿಸಿತು. ಜಮ್ಮಡ ತಶಿನ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಳಂಗಂಡ ಮತ್ತು ಚಪ್ಪಂಡ ನಡುವಿನ ಪಂದ್ಯದಲ್ಲಿ 6-1 ಗೋಲುಗಳ ಅಂತರದಲ್ಲಿ ಅಳಂಗಂಡ ತಂಡ ಜಯ ಸಾಧಿಸಿತು. ಪಳಂಗಂಡ ಪರ ಕಾಳಪ್ಪ, ಶಶಾಂಕ್ ಸುಬ್ಬಯ್ಯ ತಲಾ 2, ಅಜಯ್ ಅಯ್ಯಪ್ಪ ಹಾಗೂ ಮಂದಣ್ಣ ತಲಾ 1 ಗೋಲು ದಾಖಲಿಸಿದರು. ಚಪ್ಪಂಡ ಸಾಯಿ ನಾಚಪ್ಪ ಮ್ಯಾನ್ ಆಪ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾಚಿಮಾಡ ಮತ್ತು ಮೇಚಿಯಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಮೇಚಿಯಂಡ ತಂಡ ಗೆಲುವು ದಾಖಲಿಸಿತು. ಮೇಚಿಯಂಡ ಪರ ಸೂರಜ್ ಸೋಮಯ್ಯ 2 ಗೋಲು ದಾಖಲಿಸಿದರು. ಮಾಚಿಮಾಡ ಪರ ಚಂಗಪ್ಪ 1 ಗೋಲು ಬಾರಿಸಿದರು. ಮಾಚಿಮಾಡ ಶ್ರೇಯಸ್ ಮ್ಯಾನ್ ಆಫ್ ದಿ…

Read More

ನಾಪೋಕ್ಲು ಏ.10 NEWS DESK : ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಪೂಜಾ ಕೈಂರ್ಕುಗಳೊಂದಿಗೆ ಸಂಪನ್ನಗೊಂಡಿತು. ಮಂಗಳವಾರ ಮಹಾಪೂಜೆ ಧ್ವಜಾರೋಹಣ ದೀಪಾರಾಧನೆ, ದೇವರ ಪ್ರದಕ್ಷಣೆ  ಬಲಿಯೊಂದಿಗೆ ಉತ್ಸವಕ್ಕೆ ಚಾಲನೆ ನೀಡಿ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಬುಧವಾರ ಬೆಳಿಗ್ಗೆ ದೇವರ ದರ್ಶ  ಬಲಿ, ಮಹಾಭಿಷೇಕ, ಮತ್ತು ಮಧ್ಯಾಹ್ನ ಮಹಾಪೂಜೆ, ವಿಶೇಷ ಸೇವೆಗಳು, ದೇವರ ಪ್ರದಕ್ಷಣೆ  ನೃತ್ಯ  ಜರುಗಿ ಮಹಾಮಂಗಳಾರತಿ ನಂತರ ತೀರ್ಥ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನೆರವೇರಿತು. ಸಂಜೆ ಪಟ್ಟಣದಲ್ಲಿ  ದೇವರ ಉತ್ಸವ ಮೂರ್ತಿಯನ್ನು ಚೆಂಡೆ, ವಾದ್ಯಗೋಷ್ಠಿಗಳೊಂದಿಗೆ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕಾವೇರಿನದಿಯಲ್ಲಿ ಅವಭೃತಸ್ನಾನದ ಬಳಿಕ ಸನ್ನಿಧಿಗೆ ಹಿಂತುರುಗಿ ದೇವರ ಪ್ರದಕ್ಷಣೆ ನೃತ್ಯ  ಬಲಿ ಜರುಗಿತು.  ಗುರುವಾರ ಶುದ್ಧ ನವಕ ಕಲಶ, ಮಹಾಪೂಜೆ, ಮಂತ್ರಾಕ್ಷತೆಯೋಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ದೇವಾಲಯದ ಮುಖ್ಯ ಅರ್ಚಕ ಸುಧೀರ, ತಂತ್ರಿಗಳಾದ ರಮೇಶ್ ಶರ್ಮಾ, ಸುರೇಶ್ ಶರ್ಮ, ಸತ್ಯಮೂರ್ತಿ ಸರಳಾಯ ಧಾರ್ಮಿಕ  ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.…

Read More

ಸುಂಟಿಕೊಪ್ಪ,ಏ.10 NEWS DESK : ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಮುಖ್ಯ ಮಂತ್ರಿಗಳ ವಿಶೇಷನಿಧಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ಕಾಂಕ್ರಿಟ್ ರಸ್ತೆ ಕಾಮಗಾರಿ 93 ಲಕ್ಷ ರೂಗಳಲ್ಲಿ ನಿರ್ಮಿಸಲಾಗಿದೆ ಎಂದು ವಲಯ ಕಾಂಗ್ರೆಸ್ ಅಧ್ಯಕ್ಷ ಮೇದೂರ ಹರೀಶ್ ಸುಬ್ಬಯ್ಯ ತಿಳಿಸಿದ್ದಾರೆ. ಶಾಸಕ ಮಂತರ್‍ಗೌಡ ಪ್ರಯತ್ನದಿಂದ ಮಾದಾಪುರ ಮಠದ ರಸ್ತೆ 40 ಲಕ್ಷ ರೂ ವೆಚ್ಚದಲ್ಲಿ, ಚರ್ಚ್ ದೊಡ್ಡಿಬಾಣೆ ರಸ್ತೆ, ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಂಕ್ರಿಟ್ ರಸ್ತೆ ಸೇರಿದಂತೆ 93 ಲಕ್ಷದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದೆ. ಇದರಿಂದ ಈ ವಿಭಾಗದ ಜನತೆಯ ಬಹುದಿನದ ನಿರೀಕ್ಷೆಗೆ ಮನ್ನಣೆ ಸಿಕ್ಕಿದೆ ಎಂದು ಮಾದಾಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಪಿ.ಡಿ.ಅಂತೋಣಿ (ತಂಗಚ್ಚ)ವಲಯ ಕಾಂಗ್ರೆಸ್ ಕಾರ್ಯದರ್ಶಿ ನಾಸಿರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಏ.10 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್‍ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಹಾಗೂ ಸಮಾರೋಪ ಸಮಾರಂಭವು ಏ.13 ರಂದು ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ಪಾಟಿಬೆಟ್ಟದ ಟಾಟಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ರಿಪಬ್ಲಿಕ್ ಟಿವಿ ಮತ್ತು ಆರ್ ಕನ್ನಡ ವಿತರಣಾ ಅಧ್ಯಕ್ಷರು ಹಾಗೂ ಕೂರ್ಗ್ ಕ್ರಿಕೆಟ್ ಫೌಂಡೇಶನ್‍ನ ಮುಖ್ಯ ಮಾರ್ಗದರ್ಶಕ ಚೇರಂಡ ಕಿಶನ್ ಮಾದಪ್ಪ, ಕ್ಯೂರೆಮಾರ್ವೆಲ್ ನಿರ್ದೇಶಕಿ ಪೂಜಿತಾ ಉತ್ತಪ್ಪ, ಮಾಜಿ ಹಾಕಿ ಒಲಿಂಪಿಯನ್ ಲೆಫ್ಟಿನೆಂಟ್ ಕರ್ನಲ್ ಬಾಳೆಯಡ ಸುಬ್ರಮಣಿ, ರಾಜ್ಯ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕ ತೀತಿರ ರೋಶನ್ ಅಪ್ಪಚ್ಚು, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ, ಉದ್ಯಮಿ ಕುಪ್ಪಂಡ ಚಿಣ್ಣಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಬಿಜೆಪಿ…

Read More

ಮಡಿಕೇರಿ ಏ.10 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವಿರಾಜಪೇಟೆ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಅಧ್ಯಕ್ಷ ವಿಜಯ್ ಕುಮಾರ್ ತಿಳಿಸಿದ್ದಾರೆ.  ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನಿರ್ದೇಶನದಂತೆ ವಿರಾಜಪೇಟೆ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ಮುಕ್ಕಾಟಿರ ಕಾವೇರಮ್ಮ ಕರಂಬಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಜೆ.ಸವಿತಾ  ಹಾಗೂ ಸದಸ್ಯರಾಗಿ ಕೆ.ಎಚ್.ಪವಿತ್ರ , ಪಿ.ಕೆ.ಪೂವಮ್ಮ , ಕಡೇಮಡ ಸುವಿತ್, ನಝೀರ್ ಚೊಕ್ಕಂಡ, ಇಸ್ಮಾಯೀಲ್ ಎಂ.ಎಂ.ಡ್ಯಾನಿ ಕುಶಾಲಪ್ಪ ಕರಿನೆರವಂಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಜಯ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಏ.10 NEWS DESK : ನಗರದ ಕಾಲೇಜು ರಸ್ತೆಯ ಹೃದಯ ಭಾಗದಲ್ಲಿ ಮನೆಯೊಂದಕ್ಕೆ ನುಗ್ಗಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಂಧಿತ ವ್ಯಕ್ತಿಗೆ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ನಗರದ ಹೊರ ವಲಯದ ಪ್ರತಿಷ್ಠಿತ ರೆಸಾರ್ಟ್‍ನಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ನಿವಾಸಿ ವಿಕಾಸ್ ಜೋರ್ಡಿಯಾ(35) ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಯಾಗಿದ್ದಾನೆ. ::: ಪ್ರಕರಣದ ಹಿನ್ನೆಲೆ ::: ಸಾಕಮ್ಮ ಪ್ರಭಾಕರ್ ಎಂಬುವವರು 2023ರ ನವೆಂಬರ್ 5ರಂದು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಪರಿಚಿತ ವ್ಯಕ್ತಿ ಏಕಾಏಕಿ ನುಗ್ಗಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಅಲ್ಲದೆ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು ಕೈ ಬೆರಳಿನಲ್ಲಿದ್ದ ಉಂಗುರವನ್ನು ಕಸಿದುಕೊಂಡು ಹೋಗಿರುವ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ರೆಸಾರ್ಟ್ ಒಂದರಲ್ಲಿ…

Read More