ಮಡಿಕೇರಿ ಏ.8 NEWS DESK : ಮಾದಾಪುರದ ಹಾಡಗೇರಿ ಶ್ರೀ ಭದ್ರಕಾಳಿ ದೇವರ ವಾರ್ಷಿಕ ಉತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಲೇಖಕ: admin
ವಿರಾಜಪೇಟೆ ಏ.8 NEWS DESK : ದಾನಗಳನ್ನು ಮಾಡುವುದರಿಂದ ಮಾನವನ ಜೀವನ ಸಾರ್ಥಕವಾಗುತ್ತದೆ ಎಂದು ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ.ಫಾ. ಜೇಮ್ಸ್ ಡೊಮಿನಿಕ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ಸಂತ ಅನ್ನಮ್ಮ ದ್ವಿಶತಮಾನೋತ್ಸವ ಸಭಾಂಗಣದಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯನು ದಾನ ಧರ್ಮಗಳನ್ನು ಹೆಚ್ಚು ಮಾಡುವುದು ಸತ್ಕಾರ್ಯವಾಗಿದ್ದು. ದೇವರ ಆಶೀರ್ವಾದವು ಲಭಿಸುತ್ತದೆ. ಸಮಾಜಮುಖಿ ಚಿಂತನೆಗಳಿಂದ ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಆ ನಿಟ್ಟಿನಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿಯು ಶ್ಲಾಘನೀಯವಾಗಿದೆ ಎಂದರು. ಇನ್ನು ಮುಂದೆಯೂ ಸಮಾಜಮುಖಿ ಕಾರ್ಯಗಳು ನಡೆಯುವಂತಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮದರ್ ತೆರೇಸಾ ಸೇವಾ ಕೇಂದ್ರದ ಅಧ್ಯಕ್ಷ ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಪೆರಿಗ್ರೀನ್ ಎಸ್ ಮಚ್ಚಾಡೋ, ಕಳೆದ ಮೂರು ವರ್ಷಗಳಿಂದ ನಮ್ಮ ಸೇವಾ ಕೇಂದ್ರದ ವತಿಯಿಂದ ಪುಸ್ತಕಗಳನ್ನು ವಿತರಣೆ ಮಾಡುತ್ತ ಬಂದಿದ್ದು, ಮೊದಲನೇ ವರ್ಷ 85…
ಮಡಿಕೇರಿ ಏ.8 NEWS DESK : ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಹಬ್ಬದ ಸಂಭ್ರಮದ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಪರಿಸರ ಜಾಗೃತಿಗೆ ಮೊದಲ ಆದ್ಯತೆ ನೀಡಲಾಗಿದೆ. ಹಾಕಿ ಉತ್ಸವ ನಡೆಯುತ್ತಿರುವ ಪ್ರದೇಶದಲ್ಲಿ ಕಳೆದ 10 ದಿನಗಳಲ್ಲಿ 2 ಟನ್ ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್ ಟ್ರಸ್ಟ್ ಕೈಜೋಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಹಾಕಿ ಉತ್ಸವದಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಯ ನಮ್ಮ ವಿನೂತನ ಪ್ರಯತ್ನ ಇಡೀ ಜಿಲ್ಲೆಗೆ ಮಾದರಿಯಾಗಲಿದೆ. ಜನರಲ್ಲಿ ಪರಿಸರದ ಕುರಿತು ಕಾಳಜಿ ಮೂಡಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು. ಮುದ್ದಂಡ ಹಾಕಿ ಉತ್ಸವ ಆರಂಭಗೊಂಡು 10 ದಿನಗಳೇ ಕಳೆದಿದ್ದು, ಈ ಅವಧಿಯಲ್ಲಿ ವೇದನ್ ಟ್ರಸ್ಟ್ ನ ಸ್ವಯಂ ಸೇವಕರ ಮೂಲಕ 2 ಟನ್ ತ್ಯಾಜ್ಯ ಸಂಗ್ರಹಿಸಲಾಗಿದೆ. ಇದರಿಂದ ಪ್ರಕೃತಿಗೆ ನಾಲ್ಕು ಮರಗಳನ್ನು ಉಳಿಸಿದಷ್ಟು ಲಾಭವಾಗಿದೆ. ಹಾಕಿ ಉತ್ಸವ…
ಬೆಂಗಳೂರು ಏ.8 NEWS DESK : 2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ. 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪಉಡುಪಿ ಮೊದಲ ಸ್ಥಾನ ಪಡೆದಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ. 93.90 ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (ಶೇ. 93.57), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(ಶೇ. 85.36) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (ಶೇ.73.45) ಪಡೆದುಕೊಂಡಿದೆ. ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಉನ್ನತ ಶ್ರೇಣಿ- 1,00,571, ಪ್ರಥಮ ದರ್ಜೆ- 2,78,054,…
ಸುಂಟಿಕೊಪ್ಪ ಏ.8 NEWS DESK : ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 47ನೇ ವಾರ್ಷಿಕ ಮಹೋತ್ಸವವು ಏ.21 ರಿಂದ 23 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಏ.21 ರಂದು ಪೂರ್ವಾಹ್ನ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಸಂಜೆ 7 ಗಂಟೆಯಿಂದ ದೀಪರಾಧನೆ, ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ಜರುಗಲಿದೆ. ಏ.22 ರಂದು ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆ ನಡೆಯಲಿದ್ದು, ರಾತ್ರಿಯಿಂದ ವಿವಿಧ ದೈವಗಳ ಕೋಲ ಜರುಗಲಿದೆ. ಏ.23 ರಂದು ಪೂರ್ವಾಹ್ನ ಅಜ್ಜಪ್ಪ ಕೋಲ ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲ ನಡೆಯಲಿದ್ದು, ರಾತ್ರಿ 8 ಗಂಟೆಗೆ ಶ್ರೀ ದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ಶ್ರೀಕುಂದುರುಮೊಟ್ಟೆ ಚಾಮುಂಡೇಶ್ವರಿ…
ಸುಂಟಿಕೊಪ್ಪ ಏ.8 NEWS DESK : ಕೊಡಗಿನ ಏಕೈಕ ಬೈತೂರಪ್ಪ ದೇವಾಲಯ ಎಂಬ ಖ್ಯಾತಿ ಪಡೆದಿರುವ ಕುಶಾಲನಗರ ತಾಲೂಕು ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಗ್ರಾಮದಲ್ಲಿರುವ ಶ್ರೀ ಬೈತೂರಪ್ಪ ಮತ್ತು ಪೊವ್ವದಿ ದೇವಾಲಯದಲ್ಲಿ ಏ.14 ರಂದು ವಾರ್ಷಿಕ ಹಬ್ಬ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ವಾರ್ಷಿಕ ಹಬ್ಬದ ಪ್ರಯುಕ್ತ ಏ.11 ರಂದು ಶ್ರೀ ಬಸವೇಶ್ವರ ದೇವರ ಪರವು ನಡೆಯಲಿದ್ದು, ಅಂದು ದೇವತಕ್ಕರಾದ ಜಗ್ಗಾರಂಡ ಹ್ಯಾರಿ ಕಾರ್ಯಪ್ಪ ಅವರ ಮನೆಯಿಂದ ಎತ್ತು ಪೋರಾಟದೊಂದಿಗೆ ವಾರ್ಷಿಕೋತ್ಸವ ನಡೆಯಲಿದೆ. ಏ.14ರಂದು ಪೂರ್ವಾಹ್ನ ಗಣಪತಿ ಹೋಮದೊಂದಿಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, 12 ಗಂಟೆಗೆ ಮಹಾಪೂಜೆಯೊಂದಿಗೆ ಅನ್ನಸಂತರ್ಪಣೆ ಕೂಡ ನೆರವೇರಲಿದೆ. ಅಪರಾಹ್ನ 2 ಗಂಟೆಯಿಂದ ದೇವರ ಬಂಡಾರ ಒಪ್ಪಿಸುವುದರೊಂದಿಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ವಾರ್ಷಿಕ ಜಾತ್ರೆಯ ಹಿನ್ನಲೆಯಲ್ಲಿ ಏ.4 ರಂದು ಹಬ್ಬದ ಕಟ್ಟು ತೆಗೆಯಲಾಗಿದ್ದು, 11 ದಿನಗಳ ಕಾಲ ಪ್ರತಿನಿತ್ಯ ಬೆಳಗಿನಜಾವ ದೇವಾಲಯದಲ್ಲಿ ಬೊಳಕಾಟ್ ಸೇವೆ…
ನಾಪೋಕ್ಲು ಏ.8 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಕಿ ಅಕಾಡೆಮಿ ವತಿಯಿಂದ ಏ.10 ರಂದು ಹಾಕಿ ತರಬೇತಿ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 6.30 ಗಂಟೆಗೆ ಕೆ.ಪಿ.ಎಸ್ ಶಾಲಾ ಮೈದಾನದಲ್ಲಿ ಶಿಬಿರ ಪ್ರಾರಂಭಗೊಳ್ಳಲಿದ್ದು, ನುರಿತ ತರಬೇತುದಾರರಾದ ಅಕಾಡೆಮಿಯ ಕಾರ್ಯದರ್ಶಿ, ನಿವೃತ ಸೈನಿಕ ಕೋಟೋಳಿರ ಡಾಲಿ ಅಪ್ಪಚ್ಚ ಹಾಗೂ ಅರೆಯಡ ಗಣೇಶ್ ಬೆಳ್ಳಿಯಪ್ಪ ಹಾಗೂ ಇನ್ನಿತರರು ತರಬೇತಿ ನಿರ್ವಹಿಸಲಿದ್ದಾರೆ. ಈ ಸಂದರ್ಭ ಶಿಬಿರಾರ್ಥಿಗಳಿಗೆ ಹಾಲು, ಮೊಟ್ಟೆ ಇನ್ನಿತರ ಸೌಲಭ್ಯಗಳಿದ್ದು, ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ ನೀಡಲಾಗುತ್ತದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಕಾಡೆಮಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಏ.8 NEWS DESK : ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಶ್ರೀನಿವಾಸ ರೈ ಇಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶ್ರೀನಿವಾಸ ರೈ ನಗರದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.
ಕುಶಾಲನಗರ ಜ.8 NWES DESK : ಡಾ.ಅಂಬೇಡ್ಕರ್ ಅವರ ಜನ್ಮದಿನವನ್ನು ಮನೆ ಮನದ ಹಬ್ಬವಾಗಿ ಆಚರಿಸಲಾಗುತ್ತದೆ ಎಂದು ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಹೆಚ್.ಬಿ.ಗಣೇಶ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಏಪ್ರಿಲ್ 14 ಇಡೀ ವಿಶ್ವವೇ ಸಂಭ್ರಮಿಸುವ ದಿನವಾಗಿದ್ದು, ಅಂಬೇಡ್ಕರ್ ಅವರ ಸಾಧನೆಗಳನ್ನು ಸ್ಮರಿಸಿ ಯುವ ಜನಾಂಗಕ್ಕೆ ಸಮಗ್ರ ಮಾಹಿತಿ ಒದಗಿಸುವ ದಿನವಾಗಿದೆ ಎಂದು ಹೇಳಿದರು. ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಿ ಸಂಭ್ರಮಿಸಿ ಅವರ ಆಶಯದ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಪಣತೊಡಬೇಕಾಗಿದೆ ವಿಶೇಷವಾಗಿ ಭಾರತ ದೇಶದ ಶೋಷಿತ ಜನ ಅವರನ್ನು ನೆನೆಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಣೆಯಲ್ಲಿ ತೊಡಗಬೇಕಾಗಿದೆ ಎಂದರು. ಈ ಸಂಬಂಧ ಈಗಾಗಲೇ ಸಂಘದ ವತಿಯಿಂದ ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು. ದಲಿತ ಮುಖಂಡರು ಮತ್ತು ಸಂಘದ ಪ್ರಮುಖರಾದ ಕೆ.ಬಿ.ರಾಜು ಮಾತನಾಡಿ, ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರತಿ ಗ್ರಾಮ ಗ್ರಾಮಗಳಲ್ಲಿ ಅದ್ದೂರಿಯಾಗಿ ಆಚರಣೆಯಾಗಬೇಕು. ಆ ದಿನವನ್ನು ಮಧ್ಯಪಾನ ಮುಕ್ತ ದಿನವನ್ನಾಗಿ ಸರ್ಕಾರ ಘೋಷಿಸಬೇಕು. ಕಾರ್ಯಕ್ರಮಗಳು…
ಸುಂಟಿಕೊಪ್ಪ ಏ.8 NEWS DESK : ಸುಂಟಿಕೊಪ್ಪ ಉಲುಗುಲಿ ಪನ್ಯ ಗ್ರಾಮದಲ್ಲಿ ನೆಲೆನಿಂತಿರುವ ಗ್ರಾಮ ದೇವತೆಯಾದ ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವರ ವಾರ್ಷಿಕೋತ್ಸವವು 7 ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ಎತ್ತು ಪೋರಾಟ್, ಚೌರಿಕುಣಿತ, ಶ್ರೀ ದೇವರ ಉತ್ಸವ ಮೂರ್ತಿಯ ನೃತ್ಯ ಬಲಿ ಹಾಗೂ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಉತ್ಸವದ ಅಂಗವಾಗಿ ಸುಂಟಿಕೊಪ್ಪ, ಉಲುಗುಲಿ, ಆಂಜನಗೇರಿ ಬೆಟ್ಟಗೇರಿ, ಹರದೂರು ಗ್ರಾಮದ ಗ್ರಾಮಸ್ಥರು ವ್ರತದಲ್ಲಿದ್ದು, ವಾಡಿಕೆಯಂತೆ ವಾರದ ನಂತರ ದೇವಾಲಯದಲ್ಲಿ ವೃತಾಚರಣೆಯ ವಿಶೇಷ ನೆರವೇರಿಸಿದರು. ಗ್ರಾಮದ ಮಂದನ ರಮೇಶ್ ಅವರ ಮನೆಯಿಂದ ಎತ್ತಿನ ಮೇಲೆ ಇರಿಸುವ ಮೂಲಕ ವಾದ್ಯಗೋಷ್ಠಿಯೊಂದಿಗೆ ದೇವಾಲಯಕ್ಕೆ ಮೆರವಣಿಗೆಯೊಂದಿಗೆ ತಂದು ದೇವಾಲಯದಲ್ಲಿ ಭಂಡಾರವನ್ನು ಸಮರ್ಪಿಸಿ, ನಂತರ ಗ್ರಾಮದ ಜನತೆಯಿಂದ ಈಡುಗಾಯಿ ಎತ್ತು ಪೋರಾಟ್, ಚೌರಿಕುಣಿತದಲ್ಲಿ ಪುರುಷರು ಯುವಕರು ಪಾಲ್ಗೊಂಡು ನಂತರ ಬೆಳ್ಳಾರಿಕ್ಕಮ್ಮ ಉತ್ಸವ ಮೂರ್ತಿಯನ್ನು ದೇವಸ್ಥಾನಕ್ಕೆ ಪ್ರದಕ್ಷಿಣೆ ನಡೆಸಿ ದೇವಿಗೆ ಪೂಜೆ ಮಹಾಮಂಗಳಾರತಿ ಪ್ರಸಾದ ವಿತರಣೆಯನ್ನು ನಡೆಸಲಾಯಿತು. ದಿನದ ಪೂಜಾ ಕೈಂಕರ್ಯವನ್ನು…






