ಲೇಖಕ: admin

ಮಡಿಕೇರಿ ಮಾ.11 NEWS DESK  : ಮಡಿಕೇರಿ ಟ್ರಾಫಿಕ್ ಪೊಲೀಸ್ ಠಾಣೆ ವತಿಯಿಂದ ಲಾರಿ ಮಾಲೀಕರು ಮತ್ತು ಚಾಲಕರು, ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು, ಜೀಪ್ ಮಾಲೀಕರು ಮತ್ತು ಚಾಲಕರು, ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಸಭೆ ಕರೆದು ರಸ್ತೆ ಸುರಕ್ಷತೆ, ಸುರಕ್ಷಿತ ಚಾಲನೆ, ರಸ್ತೆ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.

Read More

ಬೆಂಗಳೂರು NEWS DESK : ದುರ್ಘಟನೆಗಳು ಸಂಭವಿಸಿದರೆ ಹೋಂಸ್ಟೇ ಮಾಲೀಕರೇ ನೇರ ಹೊಣೆ : ಸರ್ಕಾರದ ಹೊಸ ಆದೇಶ

Read More

ಪುತ್ತೂರು ಮಾ.11 NEWS DESK : ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಬಿ.ಪ್ರೇಮಾ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಶಿಕ್ಷಣವು ಮಾನವನ ಜೀವನವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಅದರಂತೆಯೇ ಕ್ರೀಡೆಗಳೂ ಸಹ ಯಶಸ್ಸಿನ ದೊಡ್ಡ ಮೂಲವಾಗಿದೆ. ಆದರೆ ಕೇವಲ ಸಂಪತ್ತಿನ ಹಿಂದೆ ಓಡುವ ನಾವು ದೈಹಿಕ ಸಮತೋಲನವೂ ಒಂದು ಸಂಪತ್ತೆಂದು ತಿಳಿದುಕೊಳ್ಳದೇ ಇರುವುದು ವಿಪರ್ಯಾಸ ಎಂದರು. ಶಿಕ್ಷಣದೊಂದಿಗೆ ಕ್ರೀಡೆಗೂ ಸಮಾನ ಮಹತ್ವವನ್ನು ನೀಡುವುದರ ಜತೆಯಲ್ಲಿ ಯುವಜನತೆ ದೇಶದ ಪ್ರಜ್ಞಾವಂತ ನಾಗರಿಕರಾಗುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ನಿರಂತರ ಪ್ರೋತ್ಸಾಹ, ಉತ್ತಮ ತರಬೇತಿ ಹಾಗೂ ಉನ್ನತ ಸಾಧನೆ ಇದ್ದಾಗ ನಾವು ಖಂಡಿತವಾಗಿಯೂ ಮೇಲ್ಮಟ್ಟಕ್ಕೆ ಏರಬಲ್ಲೆವು…

Read More

ಬೆಂಗಳೂರು ಮಾ.11 NEWS DESK : ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು. ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ. ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು. ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ…

Read More

ಮಡಿಕೇರಿ ಮಾ.11 NEWS DESK : ಮೂರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಕ್ಕಳ ಸುರಕ್ಷತೆ ಮತ್ತು ಭದ್ರತೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಸಂಚಾರ ಸುರಕ್ಷತೆ ಬಗ್ಗೆ ಬಗ್ಗೆ ಅರಿವು ಮೂಡಿಸಿದರು.

Read More

ಮಡಿಕೇರಿ ಮಾ.11 NEWS DESK : ಸುಂಟಿಕೊಪ್ಪ ಬಳಿಯ ಸ್ವಸ್ಥ ಶಾಲೆಗೆ ಸುಂಟಿಕೊಪ್ಪ ಠಾಣೆಯ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ಮಕ್ಕಳ ಸಂಚಾರ ಸುರಕ್ಷತೆ, ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಸೈಬರ್‌ ಜಾಗೃತಿ, ಮುಂತಾದ ವಿಷಯಗಳ ಕುರಿತು ಅರಿವು ಮೂಡಿಸಿದರು. 

Read More

ಮಡಿಕೇರಿ NEWS DESK ಮಾ.11 : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಲುಕುಪ್ಪೆ ಹೆದ್ದಾರಿಯಲ್ಲಿ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆ ನಿವಾಸಿ, ದೇವಾಂಗ ಸಂಘದ ಸಂಚಾಲಕ ಡಿ.ಎನ್.ಶಶಿ (47) ಮೃತ ದುರ್ದೈವಿ. ಅಪಘಾತದ ತೀವ್ರತೆಗೆ ಶಶಿ ಅವರ ತಲೆ ನಜ್ಜುಗುಜ್ಜಾಗಿದೆ. ಬೈಲುಕುಪ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಪೋರ್ಟ್ ಲೂಯಿಸ್ ಮಾ.11 NEWS DESK : ಎರಡು ದಿನಗಳ ಭೇಟಿಗಾಗಿ ಮಾರಿಷಸ್‌ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾರಿಷಸ್‌ನಲ್ಲಿರುವ ಭಾರತೀಯ ವಲಸಿಗರು ಆತ್ಮೀಯವಾಗಿ ಸ್ವಾಗತಿಸಿದರು. ಇಂದು ಮಾರಿಷಸ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಸಮುದಾಯದ ಮಹಿಳೆಯರು ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿಯೊಂದಿಗೆ ಸ್ವಾಗತಿಸಿದರು. ಈ ವೇಳೆ ಹಾಡುಗಳನ್ನು ಹಾಡುತ್ತಿರುವವರೊಂದಿಗೆ ಪ್ರಧಾನಿ ಮೋದಿ ಚಪ್ಪಾಳೆ ತಟ್ಟುತ್ತಾ ಆನಂದಿಸಿದರು. ಗೀತ್ ಗವಾಯಿ ಎಂಬುದು ಭಾರತದ ಭೋಜ್‌ಪುರಿ ಪಟ್ಟಿಯ ಮಹಿಳೆಯರು ಮಾರಿಷಸ್‌ಗೆ ತಂದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಾಕಾರಗೊಳಿಸುವ ಸಾಂಪ್ರದಾಯಿಕ ಭೋಜ್‌ಪುರಿ ಸಂಗೀತ ಮೇಳವಾಗಿದೆ.  “ಮಾರಿಷಸ್‌ನಲ್ಲಿರುವ ಭಾರತೀಯ ಸಮುದಾಯದಿಂದ ಬಂದ ಆತ್ಮೀಯ ಸ್ವಾಗತದಿಂದ ನಾನು ತುಂಬಾ ಭಾವುಕನಾಗಿದ್ದೇನೆ. ಭಾರತೀಯ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳಿಗೆ ಅವರ ಬಲವಾದ ನಂಟು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Read More

ಬೆಂಗಳೂರು, ಮಾ.11 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ Mo-Jo-Kit ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ…

Read More

ಮಡಿಕೇರಿ ಮಾ.11 NEWS DESK : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022-2023 ಮತ್ತು 2024 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಪ್ರಕಾಸಕರು/ ಮುದ್ರಕರು/ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ,ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಲಾಸ/ದೂರವಾಣಿ ಸಂಖ್ಯೆ- ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್, 29 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ  ಪ್ರಾಧಿಕಾರ ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560 002 – ಈ ವಿಲಾಸಕ್ಕೆ ಕಲುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ…

Read More