ಲೇಖಕ: admin

ಮಡಿಕೇರಿ ಮಾ.11 NEWS DESK : ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸಲು ಸಭೆಯು ಮಾ.13 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆಯವರೆಗೆ ಮಡಿಕೇರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್, ಚಾ.ವಿ.ಸ.ನಿ.ನಿ., ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ, ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.  

Read More

ಮಡಿಕೇರಿ ಮಾ.11 NEWS DESK : 2025-26ನೇ ಸಾಲಿನ ಆಯವ್ಯಯ ಮಂಜೂರಾತಿ ಸಂಬಂಧ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಮಾ.11 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ಹೆಚ್.ಎಲ್.ರಮೇಶ್ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.11 NEWS DESK :  ಕೂಡಿಗೆ ಗ್ರಾ.ಪಂ ವ್ಯಾಪ್ತಿಯ ಮದಲಾಪುರದ ಸಮೀಪದ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಶ್ರೀ ಮುನೇಶ್ವರ ಸ್ವಾಮಿ ಮತ್ತು ಚೌಡೇಶ್ವರಿ ದೇವರ ವಾರ್ಷಿಕ ಮಹಾಪೂಜೆ ಶ್ರದ್ದಾಭಕ್ತಿಯಿಂದ ನೆರವೇರಿತು. ಎರಡು ದಿನಗಳ‌ ಕಾಲ ನಡೆದ ಪೂಜಾ‌ ಮಹೋತ್ಸವದಲ್ಲಿ ಸೋಮವಾರಪೇಟೆ ವಿರಕ್ತ ‌ಮಠದ ಶ್ರೀ ನಿಶ್ಚಲ ನಿರಂಜನ ದೇಶೀಕೇಂದ್ರ ಮಹಾಸ್ವಾಮಿ ಹಾಗೂ ಅಖಿಲ‌ಭಾರತ ಸಂತ ಸಮಿತಿ ರಾಜ್ಯ ಪ್ರಧಾನ‌ ಕಾರ್ಯದರ್ಶಿ ರಾಜೇಶ್ ನಾಥ್ ಗುರೂಜೀ ಪಾಲ್ಗೊಂಡು ಭಕ್ತರಿಗೆ ಆಶೀರ್ವಚನ ನೀಡಿದರು. ಧಾರ್ಮಿಕವಾಗಿ‌ ಹಿಂದೂ‌ ಧರ್ಮ ಶ್ರೇಷ್ಠ ಧರ್ಮ. ಸಂಸ್ಕಾರಯುತ  ಹಿಂದೂ ಧರ್ಮದ ಉಳಿವಿಗೆ ಎಲ್ಲರೂ ಕಟಿಬದ್ದರಾಗಬೇಕಿದೆ. ಜೀವನದೊಂದಿಗೆ ಧರ್ಮದ ಅಭಿವೃದ್ದಿಗೆ ಕೂಡ ಎಲ್ಲರೂ ಮುಂದಾಗಬೇಕಿದೆ. ಮೌಲ್ಯಗಳು ಅಡಕಗೊಂಡಿರುವ ಹಿಂದೂ ಧರ್ಮ ಹೊರತುಪಡಿಸಿ‌ ಇತರೆ ಧರ್ಮದತ್ತ ಮುಖಮಾಡದಂತೆ ನಿಶ್ಚಲ ನಿರಂಜನ ಸ್ವಾಮೀಜಿ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಹಿಂದೂಗಳ ನೆಮ್ಮದಿಯ ಜೀವನಕ್ಕೆ ಸನಾತನ ಧರ್ಮ ಉಳಿಯಬೇಕಿದೆ. ಹಸಿರು ಉಳಿದರೆ ಉಸಿರು‌ ಎನ್ನುವ…

Read More

ಮಡಿಕೇರಿ ಮಾ.11 NEWS DESK :  ಶಿರಂಗಾಲದ ಗ್ರಾಮದೇವತೆ ಶ್ರೀ ಮಂಟಿಗಮ್ಮ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾದ್ವಾರವನ್ನು ಲೋಕಾರ್ಪಣೆಗೊಳಿಸಲಾಯಿತು. ಬಸವಾಪಟ್ಟಣದ ತೊಟ್ಟಿಮನೆ ಬಾಲಣ್ಣ ಕುಟುಂಬಸ್ಥರು ನಿರ್ಮಿಸಿರುವ ಮಹಾದ್ವಾರ ಹಾಗೂ ಗೋಪುರವನ್ನು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಶಾಸ್ತ್ರೋಕ್ತವಾಗಿ ಪೂಜೆ‌ ಸಲ್ಲಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬಸವಾಪಟ್ಟಣ ತೊಟ್ಟಿಮನೆ ಬಾಲಣ್ಣ ಕುಟುಂಬಸ್ಥರು ಸುಮಾರು ರೂ. 16 ಲಕ್ಷ ವೆಚ್ಚದಲ್ಲಿ ಸುಂದರವಾದ ಮಹಾದ್ವಾರವನ್ನು ನಿರ್ಮಾಣ ಮಾಡಿದ್ದು, ಇದು ದೇವಾಲಯದ ಮೆರುಗನ್ನು ಹೆಚ್ಚಿಸಿದೆ. ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಸಾವಿರಾರು ಭಕ್ತರು ತಮ್ಮ ತನುಧನ ಅರ್ಪಿಸಿ ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ ಎಂದರು. ಶಿರಂಗಾಲ ಗ್ರಾಮದ ದೇವತೆ ಶ್ರೀ ಮಂಟಿಗಮ್ಮ ದೇವಿಯ ಜಾತ್ರೋತ್ಸವ ಒಂದು ವಾರಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ.ಈ ಹಬ್ಬಕ್ಕೆ ಗ್ರಾಮದ ಜನರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು, ಹಾಸನ ಹಾಗೂ ಮೈಸೂರು ಜಿಲ್ಲೆಯ ಗಡಿಗ್ರಾಮಗಳ ಜನರು ಸೇರಿದಂತೆ 30 ಸಾವಿರಕ್ಕೂ ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಜೊತೆಗೆ ಪ್ರತಿನಿತ್ಯ ದಾನಿಗಳಿಂದ ಅನ್ನ…

Read More

ಮಡಿಕೇರಿ ಮಾ.11 NEWS DESK : ಇದೇ ಮಾ.21 ರಿಂದ ಏ.4 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಷಷ್ಟ ನಿರ್ದೇಶನ ನೀಡಿದ್ದಾರೆ. ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1 ಸಂಬಂಧ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಶೇಕಡಾವಾರು ಉತ್ತೀರ್ಣ ಜೊತೆಗೆ ಕಳೆದ ಬಾರಿಯಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಮತ್ತು ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು.  ಪರೀಕ್ಷಾ ಮೌಲ್ಯ ಉಳಿಸಿಕೊಳ್ಳಬೇಕು. ಶಿಕ್ಷಕರೇ ಮಕ್ಕಳ ಬೇಸ್‍ಮೆಂಟ್ ಆಗಿದ್ದಾರೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ವೆಂಕಟ್ ರಾಜಾ ತಿಳಿಸಿದರು.  ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಜೊತೆಗೆ ಸಿಸಿಟಿವಿ ಸಮರ್ಪಕವಾಗಿ…

Read More

ಮಡಿಕೇರಿ ಮಾ.11 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನಿಂದ ಸಹಕಾರ ಕ್ಷೇತ್ರದ ವಿವಿಧ ವಲಯಗಳ ಬವಲರ್ಧನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯ ಸಹಕಾರ ಸಂಘಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಎನ್.ಎಂ.ಉಮೇಶ್ ಉತ್ತಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಸಹಕಾರ ಸಂಘಗಳ ನಿರ್ವಹಣೆಗೆ ಅಗತ್ಯವಿರುವ ಕಾಯ್ದೆ-ಕಾನೂನು ಮತ್ತು ಸೈಬರ್ ಭದ್ರತೆ ಕುರಿತು ನಗರದ ಮಯೂರ ವ್ಯಾಲಿ ವ್ಯೂ ಹೊಟೇಲ್‍ನಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಕ್ಷೇತ್ರದೊಂದಿಗೆ ಸಾಮಾಜಿಕ ವಲಯದ ಹಲವು ಸಮಸ್ಯೆಗಳಿಗೂ ಸರ್ಕಾರದ ಮಟ್ಟಿನಲ್ಲಿ ಪರಿಹರಿಸಲು ಸಹ ಪ್ರಯತ್ನಿಸಲಾಗುತ್ತಿರುವ ಯೂನಿಯನ್ ಅಧ್ಯಕ್ಷರ ಕಾರ್ಯ ಶ್ಲಾಘನೀಯ ಎಂದರು. ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆ. ಉತ್ತಮ ಜೀವನಕ್ಕಾಗಿ ಸದಾ ಕಾಲ ನಾವು ಕಲಿಯುತ್ತಿದಲ್ಲಿ…

Read More

ಮಡಿಕೇರಿ ಮಾ.10 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎಸ್ ಎಸ್ ಎಸ್ ಘಟಕ ಉದ್ಘಾಟಿಸಲಾಯಿತು. ಕಾಲೇಜಿನ ಆಡಿಟೋರಿಯಂ ನಲ್ಲಿ ನಡೆದ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ಲೋಗೋ ಅನಾವಣಗೊಳಿಸುವ ಮೂಲಕ ಉದ್ಘಾಟಿಸಿದರು.  ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 1969 ರಲ್ಲಿ ಎನ್ ಎಸ್ ಎಸ್ ಆರಂಭವಾಯಿತು. ಅಂದಿನಿಂದ ಇಂದಿನವರೆಗೆ ರಾಷ್ಟ್ರ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ, ದೇಶದ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯ. ಎನ್ ಎಸ್ ಎಸ್ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದ್ದು, ಅದೆಷ್ಟೋ ನಾಯಕರನ್ನು ರಾಷ್ಟ್ರಕ್ಕೆ ನೀಡಿದೆ. ನನಗಲ್ಲ ನಿನಗೆ ಎನ್ನುವ ಧ್ಯೇಯವನ್ನಿಟ್ಟುಕೊಂಡು ಸಮಾಜವನ್ನು ತಿದ್ದುವುದರೊಂದಿಗೆ, ಯಾವುದೇ ಆಕಾಂಕ್ಷೆಯನ್ನಿಟ್ಟುಕೊಳ್ಳದೆ ಇತರರಿಗಾಗಿ ಬದುಕುವುದನ್ನು  ಧಾರೆಯೆರೆಯುವ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರ ಕುರಿತು ಹೆಮ್ಮೆಯೆನಿಸುತ್ತದೆ ಎಂದರು. ಸೂಕ್ಷ್ಮಾಣು ಜೀವ ವಿಜ್ಞಾನ ವಿಭಾಗದ ಸಹಾಯಕ ಪ್ರಾದ್ಯಾಪಕಿ ಡಾ. ಪಿ.ಎ.ಗೀತಾಂಜಲಿ ಮಾತನಾಡಿ ಎನ್ ಎಸ್ ಎಸ್ ನಾನು ಸೇವೆಗೆ ಸಿದ್ದ ಎನ್ನುವುದನ್ನು…

Read More

ಮಡಿಕೇರಿ ಮಾ.10 NEWS DESK : ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿದ್ದ ರಾಜ್ಯದ ಆರ್ಥಿಕ ಸ್ಥಿತಿಯನ್ನು ಸರಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 2 ವರ್ಷಗಳನ್ನು ತೆಗೆದುಕೊಂಡಿದ್ದು, ರಾಜ್ಯ ಪ್ರಗತಿಯತ್ತ ಸಾಗುತ್ತಿದೆ. ಆದರೂ ಸರ್ಕಾರದ ವಿರುದ್ಧ ಬಿಜೆಪಿ ಸುಳ್ಳು ಆರೋಪಗಳನ್ನು ಮಾಡಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರೀ ಪ್ರಮಾಣದ ಸಾಲವನ್ನು ಪಡೆದಿರುವುದಾಗಿ ಪ್ರತಿಪಕ್ಷ ಬಿಜೆಪಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಯಮಗಳನ್ನು ಮೀರಿ 350 ಲಕ್ಷ ಕೋಟಿ ರೂ. ಸಾಲವನ್ನು ಮಾಡಲಾಗಿತ್ತು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಬಾರಿ 1.16 ಲಕ್ಷ ಕೋಟಿ ರೂ. ಸಾಲ ಪಡೆಯುವ ಉದ್ದೇಶವನ್ನು ಹೊಂದಿತ್ತು. ಆದರೆ ಪಡೆದದ್ದು 65 ಸಾವಿರ ಕೋಟಿ ರೂ. ಸಾಲ ಮಾತ್ರವೆಂದು ಪ್ರತಿಪಾದಿಸಿದರು. ಬಿಜೆಪಿಯ ಪ್ರಮುಖರಾದ ಆರ್.ಅಶೋಕ್, ಚಲವಾದಿ…

Read More

ಮಡಿಕೇರಿ ಮಾ.10 NEWS DESK : ಕೊಡಗಿನ ಪ್ರವಾಸೋದ್ಯಮವನ್ನು ಪರಿಸರ ಸ್ನೇಹಿಯಾಗಿ ಮುನ್ನಡೆಸುವುದು ಮತ್ತು ಸ್ಥಳೀಯ ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸುವ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೂರ್ಗ್ ಹೊಟೇಲ್ಸ್ ಮತ್ತು ರೆಸಾರ್ಟ್ಸ್ ಅಸೋಸಿಯೇಷನ್ ಕಾರ್ಯಯೋಜನೆ ರೂಪಿಸಿದೆ ಎಂದು ಸಂಘಟನೆಯ ಅಧ್ಯಕ್ಷ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಸೋಸಿಯೇಷನ್ 1990ರಿಂದ ಕಾರ್ಯನಿರ್ವಹಿಸುತ್ತಿದ್ದು, ಪ್ರವಾಸೋದ್ಯಮವನ್ನು ಪರಿಸರ ಸ್ನೇಹಿಯಾಗಿ ಬೆಳೆಸಲು ಮುಂದಾಗಿದೆ. ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಕಾರದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದರು.  ಮಡಿಕೇರಿ ನಗರಸಭೆ ‘ಪ್ಲಾಸ್ಟಿಕ್ ಮುಕ್ತ ನಗರ’ ಚಿಂತನೆಯಡಿ ಯೋಜನೆಗಳನ್ನು ರೂಪಿಸುತ್ತಿದ್ದು, ಇದಕ್ಕೆ ಸಂಘಟನೆ ಸಹಕರಿಸಲಿದೆ. ಇಡೀ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡುವ ಹಾಗೂ ಪ್ಲಾಸ್ಟಿಕ್‍ಗೆ ಬದಲು ಪರ್ಯಾಯ ವ್ಯವಸ್ಥೆಗಳನ್ನು ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಸರ್ಕಾರ ಮತ್ತು ಪ್ರತಿಷ್ಠಿತ ಸಂಸ್ಥೆಗಳ ಸಹಕಾರದೊಂದಿಗೆ ‘ಪ್ರೈವೇಟ್ ಪಬ್ಲಿಕ್ ಪ್ರೋಗ್ರಾಂ’ನಡಿ ಜಿಲ್ಲೆಯ ಪ್ರವಾಸಿತಾಣಗಳನ್ನು ಅಭಿವೃದ್ಧಿಪಡಿಸುವ ಮತ್ತು ಹೊಸ ಪ್ರವಾಸಿ ಕೇಂದ್ರಗಳನ್ನು ಗುರುತಿಸುವ ಕಾರ್ಯ ನಡೆಯಲಿದೆ ಎಂದು ತಿಳಿಸಿದರು. ಅಸೋಸಿಯೇಷನ್…

Read More

ಮಡಿಕೇರಿ ಮಾ.10 NEWS DESK : ಕೊಡಗು ಗೌಡ ಯುವ ವೇದಿಕೆ ಆಯೋಜಿಸುತ್ತಿರುವ GPL ಸೀಸನ್ 3 ಒಕ್ಕಲಿಗರ ಲೆದರ್ ಬಾಲ್ ಕ್ರೀಡಾಕೂಟಕ್ಕೆ ಆಟಗಾರರ ಹರಾಜು ಪ್ರಕ್ರಿಯೆ ಗೌಡ ಸಮಾಜದ ಸಭಾಭವನದಲ್ಲಿ ನಡೆಯಿತು.‌ ಕಾರ್ಯಕ್ರಮವನ್ನು ಕೊಡಗು‌ ಗೌಡ ಸಮಾಜ ಮಡಿಕೇರಿಯ ಕಾರ್ಯದರ್ಶಿ ಕೋಳುಮುಡಿಯನ ಅನಂತಕುಮಾರ್ ಉದ್ಘಾಟಿಸಿ ಶುಭಹಾರೈಸಿದರು. ಕೊಡಗು ಜಿಲ್ಲಾ ಒಕ್ಕಲಿಗ ಯುವ ವೇದಿಕೆಯ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ, ಎಒಎಲ್ಇ ಯ ಜನರಲ್ ಸೆಕ್ರೆಟರಿ ಕುರುಂಜಿ ಅಕ್ಷಯ್ ಚಿದಾನಂದ ಭಾಗವಹಿಸಿ ಕ್ರೀಡಾಕೂಟದ ಯಶಸ್ಸಿಗೆ ಹಾರೈಸಿ ಯುವ ವೇದಿಕೆಯ ಕಾರ್ಯವನ್ನು ಶ್ಲಾಘಿಸಿದರು. ಮಡಿಕೇರಿಯ ಯುವ ವಕೀಲರಾದ ಕೊಟ್ಟಕೇರಿಯನ ಶ್ರೀಜಾ ದಯಾನಂದ್ ಗಂಟೆ ಬಾರಿಸುವ ಮೂಲಕ ಬಿಡ್ಡಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದರು. ಯುವ ವೇದಿಕೆಯ ಅಧ್ಯಕ್ಷರಾದ ಪಾಣತ್ತಲೆ ಜಗದೀಶ್ ಮಂದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನವೀನ್ ದೇರಳ ಸ್ವಾಗತಿಸಿದರು. ಪರಿಚನ ಸತೀಶ್ ವಂದಿಸಿದರು. ಈ ಬಾರಿ 10 ಫ್ರಾಂಚೈಸಿಗಳು, 180 ಆಟಗಾರರನ್ನು ಹರಾಜು…

Read More