ಲೇಖಕ: admin

ಮಡಿಕೇರಿ ಮಾ.10 NEWS DESK :  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಾಗೂ ಸುಲೋಚನಾ ಡಾ. ಎಂ.ಜಿ.ನಾಗರಾಜ್ ದಂಪತಿ ದತ್ತಿ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಸಾಹಿತ್ಯ, ಕಲೆ, ಜಾನಪದ, ಪರಿಸರ ಮತ್ತು ಪುರಾತತ್ವ ಕುರಿತ ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾ.11 ರಂದು  ಮಡಿಕೇರಿಯಲ್ಲಿ ನಡೆಯಲಿದೆ. ಮಡಿಕೇರಿಯ ಎಫ್.ಎಂ.ಸಿ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ವಿಭಾಗದ  ಮಾಜಿ ಮುಖ್ಯಸ್ಥ ಡಾ.ಕೋಡಿರ ಲೋಕೇಶ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು  ಅಧ್ಯಕ್ಷ  ಎಂ.ಪಿ ಕೇಶವ ಕಾಮತ್  ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿರಾಜಪೇಟೆಯ ಸಂತ ಅನಮ್ಮ ಪದವಿ ಕಾಲೇಜಿನ ಉಪನ್ಯಾಸಕರಾದ ಪ್ರತಿಮಾ ರೈ‌ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ, ಖ್ಯಾತ…

Read More

ಬೆಂಗಳೂರು ಮಾ.10 NEWS DESK : ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಪತ್ರ ಮತ್ತು 10 ಲಕ್ಷದ ಚೆಕ್ ನೀಡಿ, ಗೌರವಿಸಿದರು. ವಿಶ್ವ ವಿಖ್ಯಾತ ಕವಿ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾದುಕೋಕಿಲ, ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್  ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.10 NEWS DESK : ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಬೇಕೆಂದು ಒತ್ತಾಯಿಸಿ ಕೊಡಗು ವಿವಿ ಹಿತರಕ್ಷಣಾ ಬಳಗ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿತು. ಉಪ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ವಿವಿ ಕುರಿತು ಸಮಾಲೋಚನೆ ನಡೆಸಿದ ನಿಯೋಗ ಕೊಡಗಿನ ಏಕೈಕ ವಿಶ್ವವಿದ್ಯಾನಿಲಯವನ್ನು ಉಳಿಸುವಂತೆ ಕೋರಿ ಮನವಿ ಸಲ್ಲಿಸಿದರು. ನಂತರ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ  ದಿನೇಶ್ ಗುಂಡೂರಾವ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ನಿಯೋಗ ಕೊಡಗು ವಿವಿಯನ್ನು ರದ್ದುಗೊಳಿಸದಂತೆ ಕೋರಿತು. ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು, ಕೊಡಗು ವಿವಿಯನ್ನು ಉಳಿಸುವ ವಿಶ್ವಾಸವಿದೆ ಎಂದು ನಿಯೋಗ ತಿಳಿಸಿದೆ. ಶಾಸಕ ಡಾ.ಮಂತರ್…

Read More

ವಿರಾಜಪೇಟೆ ಮಾ.10 NEWS DESK : ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದ ಕುಂದ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವೀಣಾ ಹಾಗೂ ರಮ್ಯಾ ಅವರು ತೀವ್ರ ತೊಂದರೆಗೆ ಒಳಗಾದ ಸಂದರ್ಭ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ವೈಯುಕ್ತಿಕ ಸಹಾಯ ಹಸ್ತ ಚಾಚಿದರು. ಬಾಡಿಗೆ ಮನೆಯ ಮಾಲೀಕರಿಗೆ ನೆರವಾಗುವ ಉದ್ದೇಶದಿಂದ ಶಾಸಕರ ಸೂಚನೆ ಮೇರೆಗೆ ಅವರ ಜೇಷ್ಠ ಸಹೋದರ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರೀರ ನವೀನ್ ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಅಲಿರಾ ರಶೀದ್ ಅವರು ಶಾಸಕರಿಗೆ ವೈಯುಕ್ತಿಕ ಸಹಾಯ ಹಸ್ತ ಹಸ್ತಾಂತರಿಸುವ ಮೂಲಕ, ಮನೆಯವರಿಗೆ ಉಪಯೋಗವಾಗಲಿ ಎಂದು ಸಂಪೂರ್ಣ ಮನೆಯ ಮೇಲ್ಚಾವಣಿಯ ದುರಸ್ತಿಗೆ ಅಗತ್ಯವಿರುವ ಟಾಟಾ ಶೀಟ್‍ಗಳನ್ನು ಒದಗಿಸಿದರು.

Read More

ನಾಪೋಕ್ಲು ಮಾ.10 NEWS DESK : ಚೇರಂಬಾಣೆ, ಕಾರುಗುಂದ ಗೌಡ ಸಮಾಜದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ, ಮಹಿಳಾ ದಿನಾಚರಣೆಯನ್ನು ಇದೇ ಮೊದಲ ಬಾರಿಗೆ ಸಮಾಜದ ವತಿಯಿಂದ ಆಯೋಜಿಸಿದ್ದು, ಸಮಾಜದ ಸರ್ವತೋಮುಖ ಬೆಳವಣಿಗೆಗೆ ಮಹಿಳೆಯರು ನೀಡುತ್ತಿರುವ ಸಹಕಾರವನ್ನು ಸ್ಮರಿಸಿಕೊಂಡರು. ಚೇರಂಬಾಣೆ ಗೌಡ ಸಮಾಜ ಲೋಕಾರ್ಪಣೆಗೊಂಡು ಎರಡು ವರ್ಷ ಕಳೆದಿದ್ದರೂ ಇದರಲ್ಲಿ ಯಾವುದೇ ಉಪಸಮಿತಿಗಳು ಇರುವುದಿಲ್ಲ ಇನ್ನು ಮುಂದೆ ಮಹಿಳಾ ಒಕ್ಕೂಟ ಹಾಗೂ ಯುವ ಒಕ್ಕೂಟ ರಚನೆಯಾದಲ್ಲಿ ಸಮಾಜಕ್ಕೆ ಇನ್ನಷ್ಟು ಬಲ ಸಿಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.  ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಮಹಿಳೆಯರ ಸಾಧನೆಯನ್ನು ಗುರುತಿಸುವ ದಿನ ವಿಶ್ವ ಮಹಿಳಾ ದಿನ ತೊಟ್ಟಿಲ ತೂಗುವ ಕೈ ದೇಶವನ್ನಾಳುವುದು ಎನ್ನುವ ಮಾತಿಗೆ ಉದಾಹರಣೆಯಂತೆ ಇಂದು ದೇಶದ ಅತ್ಯುನ್ನತ ಪದವಿಯಲ್ಲಿ ಮಹಿಳೆಗೆ ಸ್ಥಾನಮಾನ ದೊರೆತಿರುವುದು ಸಾಕ್ಷಿಯಾಗಿದೆ. ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಚಾಪು ಮೂಡಿಸಿ ಪುರುಷ ಪ್ರಧಾನ…

Read More

ಮಡಿಕೇರಿ NEWS DESK  ಮಾ.10 :  ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಕುಟ್ಟ ಗ್ರಾಮದ ಶಿವುಮಾದಪ್ಪ ಅವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಾಹಿದ್ ತೆಕ್ಕಿಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದ ಸಂದರ್ಭ ಹಲವು ಬಾರಿ ಶಿವು ಮಾದಪ್ಪ ಅವರ ಮನೆಗೆ ಭೇಟಿ ನೀಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದೇನೆ. ಅವರ ನಿಧನ ಕೊಡಗು ಜಿಲ್ಲೆಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಶಿವಮಾದಪ್ಪ ಅವರ ಕುಟುಂಬಕ್ಕೆ, ಹಿತೈಷಿಗಳಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ತುಂಬಲಿ ಎಂದು ಸಂತಾಪ ಸೂಚಕದಲ್ಲಿ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ.

Read More

ನಾಪೋಕ್ಲು ಮಾ.10 NEWS DESK : ಅಸಹಾಯಕರನ್ನು ಗುರುತಿಸಿ ಅವರ ನೆರವಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಬಲರನ್ನಾಗಿ ಮಾಡಲಾಗುತ್ತಿದೆ ಎಂದು ಗ್ರಾಮ ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಹೇಳಿದರು. ಹೊದ್ದೂರು ಗ್ರಾಮ ಪಂಚಾಯಿತಿಯ ಭಗವತಿ ಕಾಲೋನಿಯ ನಿವಾಸಿ ವೃದ್ಧೆ ಹೆಚ್.ಬಿ.ಬೊಮ್ಮಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಯೋಜನೆಯ ಮೂಲಕ ನಿರ್ಮಾಣ ಮಾಡಿಕೊಟ್ಟ ವಾತ್ಸಲ್ಯ ಗೃಹ ಉದ್ಘಾಟನೆ ಮಾಡಿ ಮಾತನಾಡಿದರು. ನಮ್ಮ ಗ್ರಾಮ ಅಭಿವೃದ್ಧಿ ಯೋಜನೆಯಾ ಮೂಲಕ ಹೆಚ್.ಬಿ.ಬೊಮ್ಮಿ ಅವರನ್ನು ಗುರುತಿಸಿ ಕೇವಲ 20 ದಿನಗಳಲ್ಲಿ ಮನೆ ನಿರ್ಮಾಣ ಮಾಡಿ ಇಂದು ಅವರಿಗೆ ಹಸ್ತಾಂತರಿಸಲಾಗಿದೆ ಎಂದ ಅವರು ರಾಜ್ಯದಲ್ಲಿ 78,023.ಮಾಸಾಸನ ನೀಡಲಾಗುತ್ತಿದೆ. ಸರಕಾರಿ ಶಾಲೆಗಳಿಗೆ ಡೆಸ್ಕ್ ಮತ್ತು ಬೆಂಚ್‍ಗೆ ಶ್ರೀ ಕ್ಷೇತ್ರದಿಂದ ಶೇ.80. ಶಾಲಾ ಅಭಿವೃದ್ಧಿ ಸಂಘದಿಂದ ಶೇ.20 ಸಹಾಯಧನದೊಂದಿಗೆ ರಾಜ್ಯದಲ್ಲಿ ಒಟ್ಟು 73534 ಸೆಟ್ ಡೆಸ್ಕ್ ಮತ್ತು ಬೆಂಚ್ ವಿತರಿಸಲಾಗಿದೆ. ಈ ವರ್ಷ ಕೊಡಗು ಜಿಲ್ಲೆಗೆ 10 ಕೋಟಿ ರೂ.ವೆಚ್ಚದಲ್ಲಿ…

Read More

ನಾಪೋಕ್ಲು ಮಾ.10 NEWS DESK : ಕೋಟೇರಿಯ ಕಾಫಿ ತೋಟದಲ್ಲಿ ಕಾಡಾನೆ ದಾಳಿ ಮಾಡಿ, ಬಾಳೆ, ಕಾಫಿ, ಅಡಿಕೆ ಗಿಡಗಳನ್ನು ನಾಶಪಡಿಸಿ, ಆತಂಕ ಸೃಷ್ಟಿಸಿದೆ. ಕೊಳಕೇರಿ ಗ್ರಾಮದ ಕೋಟೆರಿಯ ಕಾಫಿ ತೋಟಗಳಲ್ಲಿ ರಾತ್ರಿ ಅಡ್ಡಾಡಿದ ಕಾಡಾನೆ ಅಪ್ಪಾರಂಡ ಸುಧೀರ್ ಅಪ್ಪಯ್ಯ ಅವರ ಕಾಫಿ ತೋಟಗಳಲ್ಲಿದ್ದ ತೆಂಗು, ಬಾಳೆ, ಅಡಿಕೆ, ಕಾಫಿ ಸೇರಿದಂತೆ ಕಬ್ಬಿಣದ ಗೇಟನ್ನು ಮುರಿದು ಹಾಕಿ ನಷ್ಟಪಡಿಸಿದೆ. ಅಲ್ಲದೇ ಇನ್ನಿತರ ತೋಟಕ್ಕೂ ದಾಲಿ ಮಾಡಿ ನಷ್ಟ ಸಂಭವಿಸಿದ್ದು, ಕಾಡಾನೆ ಅಕ್ಕಪಕ್ಕದ ತೋಟಗಳಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಾಡಾನೆಗಳ ಹಾವಳಿಯಿಂದ ನೆಮ್ಮದಿ ಇಲ್ಲದಂತ್ತಾಗಿದೆ ಎಂದು ಬೆಳೆಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಕಾಫಿ ಕೊಯ್ಲು ಮುಗಿಯುವ ಹಂತ ತಲುಪಿದ್ದು, ತೋಟಗಳಿಗೆ ನೀರು ಹಾಯಿಸುವ ಕೆಲಸಕ್ಕೆ ಬೆಳೆಗಾರರು ಮುಂದಾಗಿದ್ದಾರೆ. ಕಾಡಾನೆ ತೋಟಗಳಲ್ಲಿ ಸುತ್ತಾಡುತ್ತಿರುವುದರಿಂದಾಗಿ ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಬೆಳೆಗಾರರು ಆಂತಕ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಗ್ರಾಮಸ್ಥರು ಎಚ್ಚರಿಕೆಯಲ್ಲಿರುವಂತೆ ಮನವಿ ಮಾಡಿಕೊಂಡಿದ್ದಾರೆ. ವರದಿ…

Read More

ಮಡಿಕೇರಿ ಮಾ.10 NEWS DESK  : ಏಷ್ಯಾ ಖಂಡದ ಬೃಹತ್ ಸಾಹಿತ್ಯೋತ್ಸವ ‘ಫೆಸ್ಟಿವಲ್ ಆಫ್ ಲೆಟರ್ಸ್’ ಸಾಹಿತ್ಯೋತ್ಸವದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಮುಲ್ಲೇಂಗಡ ರೇವತಿ ಪೂವಯ್ಯ  ಕೊಡಗನ್ನು ಪ್ರತಿನಿಧಿಸಲಿದ್ದಾರೆ.  ಕೇಂದ್ರ ಸಾಹಿತ್ಯ ಅಕಾಡೆಮಿ ಮಾ.11 ರಂದು ದೆಹಲಿಯಲ್ಲಿ ಆಯೋಜಿಸಿರುವ “ಫೆಸ್ಟಿವಲ್ ಆಫ್ ಲೆಟರ್ಸ್” ಸಾಹಿತ್ಯೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಆಹ್ವಾನಿತ ಕೊಡವ ಭಾಷಾ ಕವಯಿತ್ರಿಯಾಗಿ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮಾ.10 NEWS DESK : ಕಲೆ, ಸಾಹಿತ್ಯ, ಶಿಕ್ಷಣ, ಆರೋಗ್ಯ, ಸಮಾಜ ಸೇವೆ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕರುನಾಡ ಕನ್ನಡ ಕಲಾ ಸಿರಿ ಬಳಗ ಹಾಗೂ ಎಜಿಎಸ್ ಚಾರಿಟೇಬಲ್ ಟ್ರಸ್ಟ್ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು,  ಈ ಬಾರಿ ಕೊಡಗಿನ ಪತ್ರಕರ್ತ ಪ್ರಶಾಂತ್.ಟಿ.ಆರ್ ವಿರಚಿತ ಹೊನ್ನಮ್ಮನ ಕನಸು ಕಾದಂಬರಿಗೆ ಅತ್ಯುತ್ತಮ ಕಾದಂಬರಿ ಪ್ರಶಸ್ತಿ ಲಭಿಸಿದೆ. ಹಳ್ಳಿಯ ವೃದ್ದ ಮಹಿಳೆಯೊಬ್ಬಳ ಮಾನಸಿಕ ತೊಳಲಾಟದ ಜೊತೆಗೆ ಸಾಮಾಜಿಕ ಕಳಕಳಿಯೂ ಈ ಕಾದಂಬರಿಯ ಕಥಾ ವಸ್ತುವಾಗಿದೆ.  ವಿಶೇಷ ಎಂದರೆ ಈ ಕಾದಂಬರಿಯನ್ನು ಮೆಚ್ಚಿದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್, ಬೆನ್ನುಡಿ ಬರೆದಿದ್ದಾರೆ. ಪ್ರಶಾಂತ್ ಅವರು ವಿಶ್ವವಾಣಿ ಪತ್ರಿಕೆಯಲ್ಲಿ ಸಿನಿಮಾ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಕೆಲವು ಸಿನಿಮಾಗಳಲ್ಲಿಯೂ ನಟಿಸುವ ಮೂಲಕ ನಟನಾಗಿಯೂ ಗುರುತಿಸಿಕೊಂಡಿದ್ದಾರೆ. ಏ.13 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‍ನ ಶ್ರೀಕೃಷ್ಣರಾಜ ಸಭಾಂಗದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಜ್ಯದ ವಿವಿಧ ಸಾಧಕರು, ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Read More