ಲೇಖಕ: admin

ಮಡಿಕೇರಿ NEWS DESK ಏ.6 : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಶಾಸಕದ್ವಯರನ್ನು ಅವಹೇಳನ ಮಾಡುವ ಮೂಲಕ ಸಾವಿನಲ್ಲೂ ಬಿಜೆಪಿ ರಾಜಕೀಯ ಲಾಭದ ಲೆಕ್ಕಾಚಾರ ಮಾಡುತ್ತಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಅತ್ಯಂತ ಬೇಸರದ ಬೆಳವಣಿಗೆಯಾಗಿದೆ, ಕಾಂಗ್ರೆಸ್ ಪಕ್ಷ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಬಿಜೆಪಿ ಸಾವಿನಲ್ಲೂ ರಾಜಕೀಯ ಲಾಭ ಹುಡುಕುವುದು ಸರಿಯಲ್ಲ, ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸ್ ನಡೆಸುತ್ತಾರೆ. ತನಿಖಾ ವರದಿ ಬರುವ ಮೊದಲೇ ಬಿಜೆಪಿ ಮಂದಿ ತನಿಖಾಧಿಕಾರಿಗಳಂತೆ ವರ್ತಿಸಿ ಶಾಸಕದ್ವಯರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಖಂಡನೀಯ. ಜಿಲ್ಲೆಯ ಇಬ್ಬರು ಶಾಸಕರು ಅತ್ಯಂತ ಸಜ್ಜನ ರಾಜಕಾರಣಿಗಳಾಗಿದ್ದಾರೆ, ಇವರ ಬೆಳವಣಿಗೆ ಮತ್ತು ಜನಪ್ರಿಯತೆಯನ್ನು ಬಿಜೆಪಿ ಪ್ರಮುಖರು ಸಹಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ದಕ್ಕೆ ಬರುತ್ತದೆ ಎನ್ನುವ ಕಾರಣಕ್ಕಾಗಿ ಪ್ರತಿಯೊಂದು ವಿಚಾರದಲ್ಲಿ ಶಾಸಕರುಗಳನ್ನು ಗುರಿ ಮಾಡುತ್ತಿರುವ ಬಿಜೆಪಿ ಮಂದಿ ಹೋರಾಟದ ಹೆಸರಿನಲ್ಲಿ ಸಾರ್ವಜನಿಕರಿಗೆ…

Read More

ಮಡಿಕೇರಿ NEWS DESK ಏ.6 : ಬಿಜೆಪಿ ಕಾರ್ಯಕರ್ತ ವಿನಯ್ ಅವರ ಆತ್ಮಹತ್ಯೆ ವಿಚಾರದಲ್ಲಿ ವಿನಾಕಾರಣ ಜಿಲ್ಲೆಯ ಇಬ್ಬರು ಶಾಸಕರನ್ನು ತೇಜೋವಧೆ ಮಾಡುತ್ತಿರುವ ಬಿಜೆಪಿ ಪ್ರಮುಖರ ನಡೆ ಖಂಡನೀಯ ಎಂದು ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಯ್ ಆತ್ಮಹತ್ಯೆಯಿಂದ ಎಲ್ಲರ ಮನಸ್ಸಿಗೆ ನೋವಾಗಿದೆ, ಘಟನೆಯನ್ನು ಮಾನವೀಯ ದೃಷ್ಟಿಕೋನದಲ್ಲಿ ನೋಡಬೇಕೆ ಹೊರತು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಈ ಪ್ರಕರಣಕ್ಕೂ ಇಬ್ಬರು ಶಾಸಕರಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಹುರುಳಿಲ್ಲದ ಆರೋಪಗಳನ್ನು ಮಾಡುವ ಮೂಲಕ ಬಿಜೆಪಿ ತನ್ನ ಕ್ಷುಲ್ಲಕ ರಾಜಕಾರಣವನ್ನು ಪ್ರದರ್ಶಿಸುತ್ತಿದೆ. ದೇಶದ ಸಂವಿಧಾನ ಮತ್ತು ಕಾನೂನಿನ ಮೇಲೆ ಗೌರವವಿಲ್ಲದ ಬಿಜೆಪಿ ಮಂದಿ ನಿಯಮ ಮೀರಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಅವರು ಅಧಿಕಾರಕ್ಕೆ ಬಂದ ಎರಡೇ ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಹೆಚ್ಚು ಜನಪ್ರಿಯತೆಯನ್ನು ಗಳಿಸಿಕೊಂಡಿದ್ದಾರೆ. ಜನರ ನೋವಿಗೆ ತಕ್ಷಣ ಸ್ಪಂದಿಸುವ ಇಬ್ಬರು…

Read More

ಸೋಮವಾರಪೇಟೆ NEWS DESK ಏ.5 : ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಸಮೀಪದ ಯಡೂಂಡೆ ಗ್ರಾಮದ ನಿವಾಸಿ ಬಿಜೆಪಿ ಕಾರ್ಯಕರ್ತ ಕಡವಡಿರ ವಿನಯ್ ಸೋಮಯ್ಯ(40) ಅವರ ಅಂತ್ಯಕ್ರಿಯೆ ಅರೆಭಾಷಿಕ ಗೌಡ ಜನಾಂಗದ ಸಂಪ್ರದಾಯದಂತೆ ಸ್ವಗ್ರಾಮದಲ್ಲಿ ಶನಿವಾರ ಸಂಜೆ ನೆರವೇರಿತು. ಅಪರಾಹ್ನ 12.30ಗಂಟೆಗೆ ಪಾರ್ಥೀವ ಶರೀರವನ್ನು ಮನೆಗೆ ತರಲಾಯಿತು. ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸುವ ಮೂಲಕ ಕುಟುಂಬಸ್ಥರು ಗೌರವ ಸಲ್ಲಿಸಿದರು. ಅವಳಿ ಸಹೋದರ ವಿವೇಕ್ ಅಂತಿಮ ವಿಧಿವಿಧಾನ ನೆರವೇರಿಸಿದರು. ಮೃತನ ತಾಯಿ ಚಂಡಿರ ದೇವಕ್ಕಿ, ಪತ್ನಿ ಶೋಭಿತ ಪೂಜೆ ಸಲ್ಲಿಸಿದರು. ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಶಾಸಕ ಶ್ರೀವತ್ಸ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಬಿಜೆಪಿ ಪ್ರಮುಖರಾದ ಬಿ.ಸಿ.ನವೀನ್, ಗೌತಮ್, ಭಾರತೀಶ್ ಮತ್ತಿತರರು ಅಂತಿಮ ನಮನ ಸಲ್ಲಿಸಿದರು. ನೂರಾರು ಮಂದಿ ವಿನಯ್ ಗೆ ಅಂತಿಮ ನಮನ ಸಲ್ಲಿಸಿದರು. ಸಹೋದರ ವಿವೇಕ್ ಅಗ್ನಿಸ್ಪರ್ಶ ಮಾಡಿದರು.

Read More

*ಮೈದಾನ 1* ಬೆಳಿಗ್ಗೆ 9 ಗಂಟೆಗೆ ಮೊಳ್ಳೇರ ಮತ್ತು ಅಪ್ಪನೆರವಂಡ, 10 ಗಂಟೆಗೆ ಪಾಂಡಂಡ ಮತ್ತು ಕುಮ್ಮಂಡ, 11 ಗಂಟೆಗೆ ತಂಬುಕುತ್ತೀರ ಮತ್ತು ಕಳ್ಳಂಗಡ, ಮಧ್ಯಾಹ್ನ 12 ಗಂಟೆಗೆ ಸಿದ್ದಂಡ ಮತ್ತು ಮಲ್ಲಂಗಡ, 1 ಗಂಟೆಗೆ ಮೊಣ್ಣಂಡ ಮತ್ತು ಚೀರಂಡ, 2 ಗಂಟೆಗೆ ಕೈಪಟ್ಟಿರ ಮತ್ತು ಬೈರಾಜಂಡ, 3 ಗಂಟೆಗೆ ಅರಮಣಮಾಡ ಮತ್ತು ಮೇವಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಕೆಲೇಟಿರ ಮತ್ತು ಚೆಯ್ಯಂಡ, 10 ಗಂಟೆಗೆ ಅದೇಂಗಡ ಮತ್ತು ಪುಗ್ಗೇರ, 11 ಗಂಟೆಗೆ ಪುಚ್ಚಿಮಾಡ ಮತ್ತು ನಾಪಂಡ, ಮಧ್ಯಾಹ್ನ 12 ಕೊಟೇರ ಮತ್ತು ಕಾಳೆಂಗಡ, 1 ಗಂಟೆಗೆ ಕಂಗಂಡ ಮತ್ತು ಕುಪ್ಪಂಡ (ನಂಗಾಲ), 2 ಗಂಟೆಗೆ ಚೆಟ್ಟಿಯಾರಂಡ ಮತ್ತು ಶಾಂತೆಯಂಡ, 3 ಗಂಟೆಗೆ ಅಚ್ಚಪಂಡ ಮತ್ತು ಮರ್ಚಂಡ *ಮೈದಾನ 3* ಬೆಳಿಗ್ಗೆ 9 ಗಂಟೆಗೆ ಉದ್ದಿನಾಡಂಡ ಮತ್ತು ಕಲಿಯಂಡ, 10 ಗಂಟೆಗೆ ಕರಿನೆರವಂಡ ಮತ್ತು ಕನ್ನಿಕಂಡ, 11 ಗಂಟೆಗೆ ಕಳ್ಳಿರ ಮತ್ತು ಕರವಂಡ, ಮಧ್ಯಾಹ್ನ 1 ಗಂಟೆಗೆ ಬಯವಂಡ…

Read More

ಮಡಿಕೇರಿ ಏ.5 NEWS DESK : ಬಾಬು ಜಗಜೀವನ್ ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿ, ರಕ್ಷಣಾ ಸಚಿವರಾಗಿ ಉತ್ತಮ ಕೆಲಸ, ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗದ ಹಿತರಕ್ಷಣೆ, ಸಮಾಜದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಗಳನ್ನು ಪ್ರತಿಯೊಬ್ಬರೂ ಸ್ಮರಿಸುವಂತಾಗಬೇಕು ಎಂದು ಡಾ.ಮಂತರ್‍ಗೌಡ ಅವರು ತಿಳಿಸಿದ್ದಾರೆ.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ಸ್ವಾತಂತ್ರ್ಯ ಹೋರಾಟಗಾರರಾಗಿ ಶೋಷಿತರ ಧ್ವನಿಯಾಗಿ, ಮುತ್ಸದ್ದಿ ರಾಜಕಾರಣಿಯಾಗಿ ಡಾ.ಬಾಬು ಜಗಜೀವನ್ ರಾಂ ಅವರ ಬದುಕು ಆದರ್ಶ ಮತ್ತು ಮಾದರಿಯಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು.  ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಬಾಬು ಜಗಜೀವನ್ ರಾಂ ಅವರು ಶ್ರಮಿಸಿದ್ದು, ಇಂತಹ ಮಹಾನ್ ನಾಯಕರನ್ನು ಸದಾ…

Read More

ಮಡಿಕೇರಿ ಏ.5 NEWS DESK  : ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ತಿಳಿಸಿದ್ದಾರೆ.   ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕೊಡಗು ಜಿಲ್ಲಾಡಳಿತ ಇವರ ಸಹಯೋಗದೊಂದಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಶನಿವಾರ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ಭೂ ಕಬಳಿಕೆ ನಿರಂತರವಾಗಿ ನಡೆದಿದ್ದು, ಭೂ ಕಬಳಿಕೆ ಆಗದಂತೆ ತಡೆಯುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡುವುದು ಅಥವಾ ಭೂಕಬಳಿಕೆ ಆಗದಂತೆ ಗಮನಹರಿಸುವುದು ವಿವಿಧ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಬಿ.ಎ.ಪಾಟೀಲ್ ಅವರು ಹೇಳಿದರು.   ಭೂ ಕಬಳಿಕೆ…

Read More

ಮೈದಾನ 1 ::  ಅಪ್ಪಂಡೇರಂಡ ಮತ್ತು ಕಾಳಿಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಳಿಮಾಡ ತಂಡ 2-1 ಗೋಲುಗಳ ಅಂತರದಲ್ಲಿ ಗೆಲುವು ದಾಖಲಿಸಿತು. ಕಾಳಿಮಾಡ ತಂಡದ ಪರ ಶರತ್ ಮುತ್ತಪ್ಪ ಎರಡು ಗೋಲು ದಾಖಲಿಸಿದರು. ಅಪ್ಪಂಡೇರಂಡ ಬೋಪಣ್ಣ ಒಂದು ಗೋಲು ಬಾರಿಸಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ತಾಪಂಡ ಮತ್ತು ಬಲ್ಲಂಡ ತಂಡಗಳ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ತಾಪಂಡ ಗೆಲುವು ಸಾಧಿಸಿತು. ತಾಪಂಡದ ಪರ ಸೋಮೇಶ್ 2 ಹಾಗೂ ವಿಜು 1 ಗೋಲು ದಾಖಲಿಸಿದರು. ಬಲ್ಲಂಡ ಚೆಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಚೇನಂಡ ಮತ್ತು ಚೀಯಂಡಿರ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಚೇನಂಡ ಗೆಲುವು ಸಾಧಿಸಿತು. ಚೇನಂಡ ಪರ ಪುಟ್ಟ ಉತ್ತಪ್ಪ, ಮೌರ್ಯ ತಿಮ್ಮಯ್ಯ ಹಾಗೂ ಚಮನ್ ಮಂದಣ್ಣ ತಲಾ 1 ಗೋಲು ದಾಖಲಿಸಿದರು. ಕಿಲನ್ ನಾಚಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೋಯಮಾಡಂಡ ಮತ್ತು ಮೂಡೇರ ತಂಡಗಳ ನಡುವಿ…

Read More

ಮಡಿಕೇರಿ NEWS DESK ಏ.5 : ಬಿಜೆಪಿ ಕಾರ್ಯಕರ್ತ ವಿನಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಇಬ್ಬರು ಶಾಸಕರ ವಿರುದ್ಧ ಹುರುಳಿಲ್ಲದ ಆರೋಪ ಮಾಡುತ್ತಿರುವ ಬಿಜೆಪಿ ಮಂದಿಯ ನಡೆ ಖಂಡನೀಯವೆದು ಎನ್‌ಎಸ್‌ಯುಐನ ಮಡಿಕೇರಿ ನಗರ ಘಟಕದ ಅಧ್ಯಕ್ಷ ಅರ್ಜುನ್ ಟಿ.ಆರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಯ್ ಅವರ ಸಾವಿನ ಕುರಿತು ನಮಗೂ ದು:ಖವಿದೆ, ಆತ್ಮಹತ್ಯೆ ಪ್ರಕರಣವನ್ನು ಈಗಾಗಲೇ ತನಿಖೆಗೆ ಒಳಪಡಿಸಲಾಗಿದೆ. ಪೊಲೀಸರ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ ಇದರ ನಡುವೆಯೇ ಬಿಜೆಪಿ ರಾಜಕೀಯ ದುರುದ್ದೇಶಕ್ಕಾಗಿ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವುದನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅನೇಕ ವರ್ಷಗಳ ನಂತರ ಜಿಲ್ಲೆಯಲ್ಲಿ ಇಬ್ಬರು ಶಾಸಕರುಗಳ ಶತ ಪ್ರಯತ್ನದಿಂದ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿದೆ. ಇದೇ ಕಾರಣಕ್ಕೆ ಶಾಸಕದ್ವಯರು ಜನರಿಗೆ ಹತ್ತಿರವಾಗುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ ವಿನಯ್ ಅವರ ಪ್ರಕರಣವನ್ನು ನೆಪಮಾಡಿಕೊಂಡು ಶಾಸಕರುಗಳ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡುತ್ತಿದೆ…

Read More

ಮಡಿಕೇರಿ NEWS DESK ಏ.5 : ಬಿಜೆಪಿ ಕಾರ್ಯಕರ್ತ ವಿನಯ್ ಅವರ ಆತ್ಮಹತ್ಯಾ ಪ್ರಕರಣ ವಿಷಾದನೀಯ. ಆದರೆ ಈ ಪ್ರಕರಣದಲ್ಲಿ ಯಾವುದೇ ತಪ್ಪು ಎಸಗದ ಕೊಡಗಿನ ಇಬ್ಬರು ಶಾಸಕರನ್ನು ಎಳೆದು ತರುತ್ತಿರುವ ಬಿಜೆಪಿ ನಡೆ ಖಂಡನೀಯವೆಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಾಗೂ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿನಯ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುಃಖಕರ ಬೆಳವಣಿಗೆಯಾಗಿದೆ. ನೋವಿನಲ್ಲಿರುವ ಅವರ ಕುಟುಂಬಕ್ಕೆ ಪಕ್ಷ ಸಾಂತ್ವನ ಹೇಳುತ್ತದೆ. ಆದರೆ ಆತ್ಮಹತ್ಯೆ ಪ್ರಕರಣವನ್ನು ನೆಪಮಾಡಿಕೊಂಡು ಬಿಜೆಪಿ ಮಂದಿ ಶಾಸಕರಿಬ್ಬರ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ ಹಾಗೂ ಬಿಜೆಪಿಯ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಟೀಕಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡಿರುವ ಬಿಜೆಪಿ ಹತಾಶ ಮನೋಭಾವದಿಂದ ಹೊರಬರಲಾಗದೆ ಪ್ರತಿಯೊಂದು ಪ್ರಕಟಣದಲ್ಲೂ ಶಾಸಕರುಗಳನ್ನು ಗುರಿಮಾಡಿ ಪ್ರತಿಭಟನೆಯನ್ನು ನಡೆಸುತ್ತಿದೆ. ವಿನಯ್ ಪ್ರಕರಣದಲ್ಲಿ ವಿನಾಕಾರಣ ಶಾಸಕರಿಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಡ ಹೇರಲಾಗುತ್ತಿದೆ. ಬೆಂಗಳೂರು ಪೊಲೀಸರು ಈಗಾಗಲೇ ಪ್ರಕರಣದ…

Read More

ಮಡಿಕೇರಿ NEWS DESK ಏ.5 : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಪ್ರಮುಖರ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ.ಮೋಹನ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಯ್ ಆತ್ಮಹತ್ಯೆ ಪ್ರಕರಣದಲ್ಲಿ ಜಿಲ್ಲೆಯ ಶಾಸಕರಿಬ್ಬರ ಪಾತ್ರ ಇಲ್ಲದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ಕಾನೂನಿಗೆ ವಿರುದ್ಧವಾದ ಆರೋಪಗಳನ್ನು ಮಾಡುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆ ಗಳಿಸುತ್ತಿರುವ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವ್ಯಕ್ತಿತ್ವಕ್ಕೆ ಚ್ಯುತಿ ತರಬಹುದೆನ್ನುವ ಹಗಲುಗನಸನ್ನು ಬಿಜೆಪಿ ಮಂದಿ ಕಾಣುತ್ತಿದ್ದಾರೆ. ಈಗಾಗಲೇ ವಿನಯ್ ಪ್ರಕರಣದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದ್ದು, ತಪ್ಪು ಯಾರಿಂದ ನಡೆದಿದೆ ಎಂದು ಸಾಬೀತಗಲಿದೆ. ತನಿಖೆಯ ಆರಂಭದಲ್ಲೆ ಶಾಸಕರಿಬ್ಬರನ್ನು ತಪ್ಪಿತಸ್ಥರೆಂದು ಬಿಜೆಪಿ ಪ್ರತಿಬಿಂಬಿಸುತ್ತಿರುವುದು ಸರಿಯಲ್ಲ.…

Read More