ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಸಾಲದ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, ಜನರನ್ನು ಸಾಲದಲ್ಲಿ ಮುಳುಗಿಸಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಕೂಡ ಕೊಡಗು ಜಿಲ್ಲೆಗೆ ನಿರಾಶೆಯಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರೀಕ್ಷೆ ಮಾಡಿತ್ತು, ಆದರೆ ಅದೆಲ್ಲವೂ ಹುಸಿಯಾಗಿದೆ ಎಂದು ತಿಳಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿಗೆ ಸಮುದಾಯ ಆಸ್ಪತ್ರೆ, ವಿರಾಜಪೇಟೆಗೆ 400 ಹಾಸಿಗೆಗಳ ಆಸ್ಪತ್ರೆ, ಕುಶಾಲನಗರ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಘೋಷಣೆ ಸ್ವಾಗತಾರ್ಹ. ಆದರೆ ಬಜೆಟ್ ನಲ್ಲಿ ಕಾಯ್ದಿರಿಸಿದ ಅನುದಾನ ಯಾವುದಕ್ಕೂ ಸಾಲುವುದಿಲ್ಲ. ಒಂದು ವರ್ಷದ ಅಕಾಲಿಕ ಮಳೆಯಿಂದ ಜಿಲ್ಲೆಯ ರಸ್ತೆಗಳು ಗುಂಡಿ ಬಿದ್ದಿವೆ. ರಸ್ತೆ ಅಭಿವೃದ್ಧಿಗೆ ಕೇವಲ 20 ಕೋಟಿ ರೂ. ನೀಡಿದ್ದಾರೆ. ಜಿಲ್ಲೆಯ ಕೃಷಿಕರ ಬೆಳೆ ನಷ್ಟ ಪರಿಹಾರಕ್ಕೆ ಅನುದಾನ ನೀಡಿಲ್ಲ, ವನ್ಯಜೀವಿ ದಾಳಿ…
ಲೇಖಕ: admin
ಮಡಿಕೇರಿ ಮಾ.7 NEWS DESK : ಕೊಡಗು ಜಿಲ್ಲೆಯ ಶಾಸಕದ್ವಯರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಬಿಜೆಪಿ ಮಂದಿ ಜಿಲ್ಲೆಯ ಜನರ ಹಾದಿ ತಪ್ಪಿಸುವುದಕ್ಕಾಗಿ ರಾಜಕೀಯ ಪ್ರೇರಿತವಾದ ಧರಣಿ ಸತ್ಯಾಗ್ರಹ ನಡೆಸಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ.ಮೋಹನ್ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನಿಂದ ಹತಾಶೆಗೊಂಡಿರುವ ಬಿಜೆಪಿ ನಾಯಕರು ಇಬ್ಬರು ಕಾಂಗ್ರೆಸ್ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ನಿತ್ಯ ಪ್ರತಿಭಟನೆಯ ಪ್ರಹಸನ ಮಾಡುತ್ತಿದ್ದಾರೆ. ತಮ್ಮ ಸುದೀರ್ಘ ಕಾಲದ ಅಧಿಕಾರವಧಿಯಲ್ಲಿ ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಸೂಚಿಸದವರು ಇಂದು ಅದೇ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ನಡೆಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಆರೋಪಿಸಿದ್ದಾರೆ. ಸಿ ಮತ್ತು ಡಿ ಭೂಮಿಯ ಗೊಂದಲ, ವನ್ಯಜೀವಿಗಳ ಹಾವಳಿ, ಬೆಳೆಗಾರರ ಕಡೆಗಣನೆ, ಪರಿಶಿಷ್ಟರ ಸಂಕಷ್ಟ ಇವುಗಳೆಲ್ಲವು ಇಂದು ಸೃಷ್ಟಿಯಾದ ಸಮಸ್ಯೆಗಳಲ್ಲ. ಕಳೆದ ಎರಡು ದಶಕಗಳಿಂದಲೂ ಈ ಸಮಸ್ಯೆ ಶಾಶ್ವತವಾಗಿಯೇ ಉಳಿದುಕೊಂಡಿವೆ. ಕಳೆದ 20 ವರ್ಷಗಳಿಂದ ಅಭಿವೃದ್ಧಿ ಕಾಣದ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದ ರಸ್ತೆಗಳೆಲ್ಲವೂ ಶಾಸಕರಾದ…
ಮಡಿಕೇರಿ ಮಾ.7 NEWS DESK : ಬಿದ್ದು ಸಿಕ್ಕಿದ ಪರ್ಸ್ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಡಿಎಆರ್ ಸಿಬ್ಬಂದಿ ನದಾಫ್ ಪ್ರಮಾಣಿಕತೆ ಮೆರೆದಿದ್ದಾರೆ. ಕಟ್ಟೆಮಾಡು ದೇವಾಲಯಕ್ಕೆ ದೇವರ ದರ್ಶನಕ್ಕೆ ಭೇಟಿ ನೀಡಿದ ಮಹಿಳೆಯೊಬ್ಬರು ಮೊಬೈಲ್ ಮತ್ತು ಹಣ ಇದ್ದ ಪರ್ಸ್ ಕಳೆದುಕೊಂಡಿದ್ದರು. ಇದೇ ಸಂದರ್ಭ ಕರ್ತವ್ಯದಲ್ಲಿದ್ದ ಡಿಎಆರ್ ಸಿಬ್ಬಂದಿ ನದಾಫ್ ಅವರಿಗೆ ದೇವಾಲಯದ ಆವರಣದಲ್ಲಿ ಪರ್ಸ್ ದೊರೆತ್ತಿದ್ದು, ಮಹಿಳೆಯನ್ನು ಹುಡುಕಿ ಪರ್ಸ್ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 16ನೇ ಬಜೆಟ್, ರಾಜ್ಯದ ಎಲ್ಲಾ ಜನತೆಯ ನಿರೀಕ್ಷೆಯನ್ನು ಮತ್ತಷ್ಟು ಪುಷ್ಟೀಕರಿಸುವುದರೊಂದಿಗೆ ಆರೋಗ್ಯ, ಶಿಕ್ಷಣ, ಸಾಮಾಜಿಕ ನ್ಯಾಯ, ರೈತ ಕೇಂದ್ರೀಕೃತ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಹಾಗೂ ಮಾನವ-ಪ್ರಾಣಿ ಸಂಘರ್ಷ ನಿವಾರಣೆಗೆ ವಿಶೇಷ ಒತ್ತು ನೀಡಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್, ಮುಖ್ಯಮಂತ್ರಿಗಳ ಸಾಮಾಜಿಕ ಬದ್ಧತೆ, ಆರ್ಥಿಕ ಕ್ಷೇತ್ರದಲ್ಲಿನ ವಿಶೇಷ ಅನುಭವ ಹಾಗೂ ಆಡಳಿತದಲ್ಲಿನ ಪ್ರಬುದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದಿರುವ ಅವರು, ರಾಜ್ಯದ ಕಟ್ಟ ಕಡೆಯ ಅಶಕ್ತ ಹಾಗೂ ಶೋಷಿತ ವ್ಯಕ್ತಿಯನ್ನು ಸಶಕ್ತಗೊಳಿಸುವ ದೂರದೃಷ್ಟಿ ಹೊಂದಿರುವ ಈ ಬಜೆಟ್, ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಅಭೂತಪೂರ್ವ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಿಶ್ಲೇಷಿಸಿದ್ದಾರೆ. ಕೊಡಗಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಗೆ ಅಧಿಕ ಅನುದಾನ ಒದಗಿಸುವುದರೊಂದಿಗೆ, ಕೊಡಗಿನ ಜಲ್ವಂತ ಸಮಸ್ಯೆಗಳಲ್ಲಿ ಒಂದಾಗಿರುವ ಮಾನವ-ಪ್ರಾಣಿ ಸಂಘರ್ಷದ…
ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು. ಕುಶಾಲನಗರ ತಾಲ್ಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು. ರಾಜ್ಯದ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಒಟ್ಟು 650 ಕೋಟಿ ರೂ. ಗಳನ್ನು ಘೋಷಿಸಲಾಗಿದೆ. ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮಥ್ರ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು ವಿವರಿಸಿದ್ದಾರೆ. ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು. ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ…
ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಕೊಡಗಿನ ಮಟ್ಟಿಗೆ ನಿರಾಶಾದಾಯಕವಾಗಿದೆ ಮತ್ತು ಅಲ್ಪಸಂಖ್ಯಾತರನ್ನು ಓಲೈಸಿ ಪರಿಶಿಷ್ಟರನ್ನು ಕಡೆಗಣಿಸಲಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಆರೋಪಿಸಿದ್ದಾರೆ. ಬಜೆಟ್ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು ಕೆಲವು ಆಸ್ಪತ್ರೆಗಳು ಮತ್ತು ರಸ್ತೆಗಳ ಅಭಿವೃದ್ಧಿಯ ಕುರಿತು ಬಜೆಟ್ ನಲ್ಲಿ ಉಲ್ಲೇಖಿಸಲಾಗಿದೆಯೇ ಹೊರತು ಕೊಡಗು ಜಿಲ್ಲೆಗೆ ಬೇರೆ ಯಾವುದೇ ವಿಶೇಷ ಕೊಡುಗೆಯನ್ನು ನೀಡಿಲ್ಲ. ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸುವ ಭರವಸೆ ನೀಡಿಲ್ಲ. ಮಿತಿ ಮೀರಿರುವ ವನ್ಯಜೀವಿಗಳ ದಾಳಿ ತಡೆಗೆ ಯಾವುದೇ ಯೋಜನೆಯನ್ನು ಘೋಷಿಸಿಲ್ಲ. ಕಾಫಿ ಬೆಳೆಗಾರರ ಹಾಗೂ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ರಾಜ್ಯಕ್ಕೆ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನದಿಯ ಸ್ವಚ್ಛತೆಯನ್ನು ಕಾಪಾಡಲು ಅನುದಾನ ಮೀಸಲಿಟ್ಟಿಲ್ಲ. ಪ್ರವಾಸೋದ್ಯಮದ ಬೆಳವಣಿಗೆಗೆ ಅನುದಾನ ಘೋಷಣೆ ಮಾಡಿಲ್ಲ. ಜಿಲ್ಲೆಯಲ್ಲಿರುವ ಕಾಲೇಜುಗಳ ಅಭಿವೃದ್ಧಿಗೆ ಆಸಕ್ತಿ ತೋರಿಲ್ಲ ಎಂದು ಟೀಕಿಸಿದ್ದಾರೆ. ಅಲ್ಪಸಂಖ್ಯಾತರನ್ನು ಓಲೈಸುವ ಭರದಲ್ಲಿ ಪರಿಶಿಷ್ಟರನ್ನು ಕಡೆಗಣಿಸಲಾಗಿದೆ,…
ಮಡಿಕೇರಿ ಮಾ.7 NEWS DESK : 16ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶುಭಕೋರಿದರು.
ಮಡಿಕೇರಿ ಮಾ.7 NEWS DESK : ಇತಿಹಾಸ ಪ್ರಸಿದ್ಧ ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿಯ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವವು ಮಾ.8 ರಿಂದ 19ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಹನ್ನೆರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.8 ರಂದು ಬೆಳಿಗ್ಗೆ 6 ಗಂಟೆಗೆ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ, ಊರಿನವರು ಮತ್ತು ಊರಿನ ಮಹಿಳೆಯರಿಂದ 12 ತಳಿಯತಕ್ಕಿ, ಬೊಳ್‍ಚ್ಚ, ದುಡಿಕೊಟ್ಟ್ ಪಾಟ್‍ನೊಂದಿಗೆ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಬೆಳಿಗ್ಗೆ 6.30 ಗಂಟೆಯಿಂದ ಊರಿನ ಪರವಾಗಿ ಶತರುದ್ರಾಭಿಷೇಕ, ಪ್ರಸಾದ ವಿತರಣೆ ನಡೆಯದ್ದು, ರಾತ್ರಿ 8 ಗಂಟೆಗೆ ಆರಿದ್ರ ನಕ್ಷತ್ರದ ಮೂಹೂರ್ತದಲ್ಲಿ “ಕೊಡಿಮರ” ನಿಲ್ಲಿಸುವುದು, ಶುದ್ಧ ಕಲಶ, ಉತ್ಸವ ಮೂರ್ತಿ ದರ್ಶನ, ಪ್ರಸಾದ ವಿತರಣೆ ಹಾಗೂ ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ಜರುಗಲಿದೆ. ಮಾ.9 ರಂದು ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ, ಸಂಜೆ 7 ಗಂಟೆಗೆ ತೂಚಂಬಲಿ ನಡೆಯಲಿದೆ. ಮಾ.10 ರಂದು ಪ್ರಾತಃಕಾಲ 5 ಗಂಟೆಗೆ ಉತ್ಸವ ಮೂರ್ತಿದರ್ಶನ, ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ,…
ಮಡಿಕೇರಿ ಮಾ.7 NEWS DESK : ವಿನಾಕಾರಣ ಟೀಕೆಗೆ ಗುರಿಯಾಗುತ್ತಿರುವ ಖ್ಯಾತ ಚಲನಚಿತ್ರ ನಟಿ, ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಸರ್ಕಾರ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದ ರಶ್ಮಿಕಾ ಮಂದಣ್ಣ ಅವರು ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಅನಾವರಣದ ಮೂಲಕ ಭಾರತೀಯ ಚಲನಚಿತ್ರೋದ್ಯಮದಲ್ಲಿ ಅಪಾರ ಯಶಸ್ಸನ್ನು ಸಾಧಿಸಿದ್ದಾರೆ. ಇವರ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನು ಅರಿಯದ ಶಾಸಕರು ವಿನಾಕಾರಣ ಟೀಕೆ ಮಾಡುವ ಮೂಲಕ ಮಾನಸಿಕ ಕಿರುಕುಳ ನೀಡಿರುವುದು ಘೋರ ಸ್ವರೂಪ ಮತ್ತು ಬೆದರಿಕೆಗೆ ಸಮವಾಗಿದೆ ಎಂದು ಆರೋಪಿಸಿದ್ದಾರೆ. ಅಮಿತಾಬ್ ಬಚ್ಚನ್, ಸಲ್ಮಾನ್ ಖಾನ್ ರಂತಹ ಮೇರು ನಟರೊಂದಿಗೆ ಅಭಿನಯಿಸಿ ಸೈ ಎನಿಸಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು ಭಾರತೀಯ ಚಲನಚಿತ್ರ ರಂಗಕ್ಕೆ ದೊರೆತ ಅಪೂರ್ವ ಕೊಡುಗೆ ಹಾಗೂ ಶ್ರೇಷ್ಠ ನಟಿಯಾಗಿದ್ದಾರೆ. ಅವರ ಸ್ವಂತ ನಿರ್ಧಾರದ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವು…
ವಿರಾಜಪೇಟೆ ಮಾ.7 NEWS DESK : ಕದನೂರು ಗ್ರಾಮದ ಶ್ರೀ ಚೈತನ್ಯ ಮಠಪುರ ಆದಿ ಮುತ್ತಪ್ಪ ದೇವಾಲಯದ ವಾರ್ಷಿಕ ತೆರೆ ಮೋಹೊತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ಬಳಿಕ ಪೈಂಗುತ್ತಿ ಕಾರ್ಯಕ್ರಮ ನಡೆಯಿತು. ಸಂಜೆ ಶ್ರೀ ಮುತ್ತಪ್ಪನ್ ವೆಳ್ಳಾಟಂ, ಗುಳಿಗ ವೆಳ್ಳಾಟಂ ತೆರೆಗಳು ನಡೆಯಿತು. ಸಂಜೆ 6.30ಕ್ಕೆ ಆರಂಭವಾದ ತೆರ ಪ್ರದರ್ಶನಗಳು ರಾತ್ರಿ 11 ಗಂಟೆಯ ವೇಳೆಗೆ ಸಮಾಪ್ತಿಯಾಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಮತ್ತು ಉತ್ಸವ ಸಮಿತಿಯಿಂದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ






