ಲೇಖಕ: admin

ವಿರಾಜಪೇಟೆ ಮಾ.5 NEWS DESK : ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ನಿಶ್ವಾರ್ಥ ಸೇವೆಯು ಸಮಾಜದಲ್ಲಿ, ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಜಿ.ಪಂ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಬೇಟೋಳಿ ಗ್ರಾಮದ ಹೆಗ್ಗಳ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಶಿಬಿರದವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸಮಾಜಕ್ಕೆ ಮೌಲ್ಯಾಧರಿತ ಸೇವೆಗಳ ಅವಶ್ಯಕತೆಯಿದೆ. ರೈತನು ಹೊಲದಲ್ಲಿ ದುಡಿದು. ಜನಸಾಮಾನ್ಯರ ಹಸಿವು ನೀಗಿಸುತ್ತಾನೆ. ಸೈನಿಕ ದೇಶದ ಗಡಿ ಕಾಯುತ್ತಾ ದೇಶವನ್ನು ಕಪಾಡುತ್ತಾನೆ. ಸಮಾಜದಲ್ಲಿ ಗುರುತಿಸಿಕೊಳ್ಳಲು ಉತ್ತಮ ನಾಯಕತ್ವ ಗುಣಗಳು, ಸೇವೆಗೆ ಮುಡಿಪಾಗಿಟ್ಟ ವ್ಯಕ್ತಿತ್ವದಿಂದ ಮಾತ್ರ ಸಾಧ್ಯ. ಆದ್ದರಿಂದ ವಿದ್ಯಾರ್ಥಿ ಜೀವನದಿಂದಲೇ ಸೇವಾ ಮನೋಭಾವ ಬೆಳಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಸಂತ ಅನ್ನಮ್ಮ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮುದಲೈ ಮುತ್ತು ಶಿಬಿರಾರ್ಥಿಗಳಿಗೆ ಪ್ರಮಾಣ ವಚನ ಭೋದಿಸಿ ಮಾತನಾಡಿ, ಯಾಂತ್ರಿಕೃತ ಸಮಾಜದಲ್ಲಿ ಕೃತಕ ಬುದ್ದಿಮತ್ತೆ…

Read More

ಗುಂಡ್ಲುಪೇಟೆ NEWS DESK ಮಾ.5 : ಕಾಡಾನೆ ದಾಳಿಗೆ ಸಿಲುಕಿದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬಂಡೀಪುರದ ಕುಂದಕೆರೆ ವಲಯ ವ್ಯಾಪ್ತಿಯ ಹಾಡಿನ ಕಣಿವೆ-ಮಂಗಲ ರಸ್ತೆಯಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ಮಸಣಿಗುಡಿ ಮೂಲದ ಕರಿಯ(48) ಎಂಬುವವರೇ ಮೃತ ದುರ್ದೈವಿ. ಕರಿಯ ಸೇರಿದಂತೆ ಮೂವರು ಮಂಗಲ ಗ್ರಾಮದ ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಿಢೀರ್ ದಾಳಿ ಮಾಡಿದೆ. ಈ ಸಂದರ್ಭ ಕಾಡಾನೆಗೆ ಸಿಲುಕಿಕೊಂಡ ಕರಿಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದವರು ಓಡಿ ಜೀವ ಉಳಿಸಿಕೊಂಡಿದ್ದಾರೆ. ಬಂಡೀಪುರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ವಿರಾಜಪೇಟೆ ಮಾ.5 NEWS DESK : ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಕೆ.ಪಿ.ದಿಥ್ಯಗೆ ಕನ್ನಡ ಮಾಣಿಕ್ಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ನಡೆದ ‘ಮೈಸೂರು ನುಡಿ ಸಡಗರ’ ಕಾರ್ಯಕ್ರಮದಲ್ಲಿ ಕೆ.ಪಿ.ದಿಥ್ಯಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿರಾಜಪೇಟೆಯ ಚಿಕ್ಕಪೇಟೆಯ ನಿವಾಸಿ ಕೆ.ಪಿ. ಪ್ರಥ್ವಿಕುಮಾರ್ ಹಾಗೂ ಭವ್ಯ ದಂಪತಿಗಳ ಪುತ್ರಿಕೊಂಪುಳೀರ ಪಳಂಗಪ್ಪ ಹಾಗೂ ತಾರಾಮಣಿಯವರ ಮೊಮ್ಮಗಳಾಗಿರುವ ದಿಥ್ಯ, ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ನಾಟ್ಯಾಂಜಲಿ ನೃತ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾಳೆ.

Read More

ವಿರಾಜಪೇಟೆ ಮಾ.5 NEWS DESK : ವಿರಾಜಪೇಟೆ ತಾಲ್ಲೂಕು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸ್ವಸಾಯ ಸಂಘಗಳ ಒಕ್ಕೂಟಗಳು ಸಂಯುಕ್ತಾಶ್ರಯದಲ್ಲಿ ಕೃಷಿ ಕಾರ್ಯಕ್ರಮದಡಿಯಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಗೋಣಿಕೊಪ್ಪ ವಲಯದ ದೇವರಪುರ ಕಾರ್ಯಕ್ಷೇತ್ರದ ಶಿವಣ್ಣ ಅವರ ಕೃಷಿ ತಾಕುವಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಶೇಖರ್ ಮಾತನಾಡಿ, ಅಣಬೆ ಕೃಷಿ ಮನೆಯಲ್ಲಿಯೇ ಬೆಳೆಯಿರಿ, ಹೆಚ್ಚು ಆದಾಯಗಳಿಸಬಹುದು, ಅಣಬೆ ಕೃಷಿಯು ಒಂದು ಲಾಭದಾಯಕ ಕೃಷಿ ಉದ್ಯಮವಾಗಿದೆ. ಮಹಿಳೆಯರಿಗೆ ಉದ್ಯೋಗವನ್ನು ಕಲ್ಪಿಸುತ್ತದೆ. ಕೋಳಿ ಸಾಕಾಣಿಕೆ ಹೇಗೆ ಮಾಡುವುದು ಮತ್ತು ವಾಣಿಜ್ಯ ನರ್ಸರಿ ಬಗ್ಗೆ ಮಾಹಿತಿ ನೀಡಿದರು. ಪ್ರಗತಿಪರ ಕೃಷಿಕರಾದ ಶಿವಣ್ಣ ಮಾತನಾಡಿ, ಬಾಳೆ ಕೃಷಿಯ ವಿವಿಧ ತಳಿಗಳ ಬಗ್ಗೆ ಮತ್ತು ಏಲಕ್ಕಿ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್, ಒಕ್ಕೂಟದ ಅಧ್ಯಕ್ಷರಾದ ನವೀನ್, ಸೇವಾ ಪ್ರತಿನಿಧಿ ಸರೋಜಾ, ಸಿಎಸ್‍ಸಿ ಸೇವಾದಾರರು ಸೌಜನ್ಯ, ಸಂಘದ ಸದಸ್ಯರು, ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಮಾ.5 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ಆದೇಶದ ಮೇರೆಗೆ ವಿರಾಜಪೇಟೆ ಹಾಗೂ ಪೊನ್ನಂಪೇಟೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ನಿಯಂತ್ರಣದ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಸಮಿತಿಯ ಪದಾಧಿಕಾರಿಗಳು ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಸರಕಾರಿ ಶಾಲೆಗಳು ಮತ್ತು ಸರಕಾರಿ ಹಾಸ್ಟೆಲ್‍ಗಳು ಮತ್ತು ಸಾರ್ವಜನಿಕರ ಸ್ಥಳಗಳಲ್ಲಿ ಹಾಡಿನ ಮೂಲಕ ಅರಿವು ಮೂಡಿಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಮಂಜುನಾಥ್ ಅಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಂಚಾಲಕ ಹೆಚ್.ಜಿ.ಗೋಪಾಲ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.5 NEWS DESK : ನಿಟ್ಟೂರು ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಕಾಟಿಮಾಡ ಶರೀನ್ ಮುತ್ತಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.ನಿಟ್ಟೂರು ಗ್ರಾ.ಪ0 ಉಪಾಧ್ಯಕ್ಷರಾಗಿದ್ದ ಚಕ್ಕೇರ ಸೂರ್ಯ ಅಯ್ಯಪ್ಪ ಅಂತರಿಕ ಒಳ ಒಪ್ಪಂದಂತೆ ಕಾಟಿಮಾಡ ಶರೀನ್ ಮುತ್ತಣ್ಣನವರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಉಪಾಧ್ಯಕ್ಷರ  ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದರು. ಇಂದು ಚುನಾವಣಾ ಅಧಿಕಾರಿಗಳಾದ ತಾಲ್ಲೂಕು ಮೀನುಗಾರಿಗೆ ಇಲಾಖೆಯ ಸಹಾಯ ನಿರ್ದೇಶಕ ಸಚಿನ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರೀಯೆಯಲ್ಲಿ ಕಾಟಿಮಾಡ ಶರೀನ್ ಮುತ್ತಣ್ಣ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾದರು. ನಂತರ ನಡೆದ ಸರಳ ಸಮಾರಂಭದಲ್ಲಿ ನಿಕಟಪೂರ್ವ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ ಅವರ ಅಧಿಕಾರ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ಶ್ಲಾಘಿಸಿ ನೂತನ ಉಪಾಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಅವರನ್ನು ಅಭಿನಂದಿಸಿದರು. ಗ್ರಾ.ಪಂ ಅದ್ಯಕ್ಷ ಅಮ್ಮಣಿ ಬೆಂಡೆಕುತ್ತಿ, ಸದಸ್ಯರುಗಳಾದ ಪಡಿಞರಂಡ ಕವಿತಾಪ್ರಭು, ರಾಜು, ಅಮ್ಮಯ್ಯ, ಸುಮತಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್, ಪ್ರಮುಖರಾದ ಕೊಟ್ಟಂಗಡ ಮಂಜುನಾಥ್, ಮಾಚಂಗಡ ವಿಕಾಸ್, ಪೊನ್ನಿಮಾಡ ಸಂತೋಷ್, ಅಳಮೇಂಡ ಸೋಮಯ್ಯ, ಚಕ್ಕೇರ…

Read More

ಮಡಿಕೇರಿ ಮಾ.4 NEWS DESK : ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ಮೈಸೂರು ವಿಭಾಗಿಯ ಕಚೇರಿ ವತಿಯಿಂದ ಕೊಡಗು ಜಿಲ್ಲಾಧಿಕಾರಿಯವರ ಕಚೇರಿ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ದಾಖಲೆಗಳ ಅಧಿನಿಯಮ-2010 ಮತ್ತು ನಿಯಮಗಳು-2013 ಹಾಗೂ ದಾಖಲೆಗಳ ನಿರ್ವಹಣೆ ಕುರಿತು ಕಾರ್ಯಾಗಾರ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಕಾಲ, ಆರ್‍ಟಿಐ, ಸೇವಾಸಿಂಧು ಯೋಜನೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಇಲಾಖೆಗಳ ಕಡತ/ ದಾಖಲೆಗಳನ್ನು ಸುಲಭವಾಗಿ ಪಡೆಯಲು ಮುಕ್ತ ಅವಕಾಶವಿದೆ. ಇಂತಹ ಸಂದರ್ಭದಲ್ಲಿ ದೈನಂದಿನ ಕಚೇರಿ ಕಡತಗಳ ನಿರ್ವಹಣೆ ಅಗತ್ಯವಾಗಿದೆ. ಸರ್ಕಾರಿ ಕಡತಗಳನ್ನು ಸಾರ್ವಜನಿಕ ಉದ್ದೇಶದಿಂದ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು. ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕರಾದ ಡಾ.ಗವಿಸಿದ್ದಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ನಾಡು ನುಡಿಗೆ ಸಂಬಂಧಿಸಿದ ಐತಿಹಾಸಿಕ ಮಹತ್ವದ ದಾಖಲೆ ಸಂಗ್ರಹಿಸಿ ಸಂರಕ್ಷಣೆ ಮಾಡುತ್ತ ಬರುತ್ತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಯ ಕಚೇರಿಗಳ ಕಡತಗಳ ನಿರ್ವಹಣೆ ಮತ್ತು ಸಂರಕ್ಷಣೆಯಲ್ಲಿ ಪಾರದರ್ಶಕತೆ ತರುವ…

Read More

ವಿರಾಜಪೇಟೆ ಮಾ.4 NEWS DESK : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ಅಲ್ಪಸಂಖ್ಯಾತರ ಸಮಿತಿ ವತಿಯಿಂದ ‘ಅಲ್ಪಸಂಖ್ಯಾತರ ಕಲ್ಯಾಣವನ್ನು ಉತ್ತೇಜಿಸುವುದು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೊಡಗು ಜಿಲ್ಲೆ ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷ ಹನೀಫ್ ಮಾತನಾಡಿ, ವಿದ್ಯಾರ್ಥಿಗಳು ಅಲ್ಪಸಂಖ್ಯಾತರಿಗಿರುವ ವಿಶೇಷ ಪ್ರೋತ್ಸಾಹ ಧನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಸಮಿತಿಯ ಸಂಚಾಲಕ ಸುಮಯ ತಬಸುಮ್ ಹಾಗೂ ಐಕ್ಯೂಎಸಿ ಸಹ ಚಂಚಾಲಕ ಡಾ.ಕೆ.ಬಸವರಾಜು, ಕಾರ್ಯಕ್ರಮ ನಿರ್ವಹಿಸಿದ ವಿದ್ಯಾರ್ಥಿಗಳಾದ ಸುಹೈರ, ನಿಶಾನ್ ಜೋಸೆಫ್, ಸಾದಿಯ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಾದ ಕೆ.ಎಸ್. ಕಾರ್ಯಪ್ಪ, ಕೆ.ಜಿ.ಧನ್ಯ ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಮಾ.4 NEWS DESK : ಗೋಣಿಕೊಪ್ಪ ಮತ್ತು ಪೊನ್ನಂಪೇಟೆ ಕಾವೇರಿ ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ  ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ ಶಾಸಕ ಎ.ಎಸ್.ಪೊನ್ನಣ್ಣ,  1968ರಲ್ಲಿ ಪ್ರಾರಂಭವಾಗಿ ಸುಮಾರು 55 ವರ್ಷಗಳಿಂದ ಕಾವೇರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು ವಿರಾಜಪೇಟೆಯಲ್ಲಿ ಎರಡು ಸಂಸ್ಥೆಗಳು ಉತ್ತಮ ಫಲಿತಾಂಶ, ಗುಣಮಟ್ಟದ ಶಿಕ್ಷಣ ಸಾಧನೆ ಮೂಲ ಸೌಕರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಸ್ಥಾನ ಗುರುತಿಸಿಕೊಂಡಿದೆ. 20 ವರ್ಷಗಳ ಹಿಂದೆ ಸರ್ಕಾರದ ಆದೇಶದಂತೆ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜುಗಳನ್ನು ಬೇರ್ಪಡಿಸಿದಾಗ ಪಿಯು ಕಾಲೇಜು ಸಿಬ್ಬಂದಿಗಳು ಪೂರ್ಣಪ್ರಮಾಣದಲ್ಲಿ ಅನುದಾನಕ್ಕೆ ಒಳಪಡಬೇಕಾಗಿತ್ತು. ಆದರೆ ಆಗಲಿಲ್ಲ ಹಾಗಾಗಿ ಈ ಎರಡು ಕಾಲೇಜುಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಆರ್ಥಿಕ ಇಲಾಖೆಗೆ ಮರು ಪ್ರಸ್ತಾವನೆ ಸಲ್ಲಿಸಿ ಸರ್ಕಾರದ ಅನುದಾನಕ್ಕೆ ಒಳಪಡಿಸಲುಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ…

Read More

ಮಡಿಕೇರಿ ಮಾ.4 NEWS DESK : ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 78 ವಿದ್ಯಾರ್ಥಿಗಳಿಗೆ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉಚಿತ ಸ್ವೆಟರ್ ವಿತರಿಸಿದರು. ನಂತರ ಮಾತನಾಡಿದ ಅವರು, ಕೊಡಗು ಜಿಲ್ಲೆಯಾದ್ಯಂತ 90,000 ಮಕ್ಕಳಿಗೆ ಸ್ವೆಟರ್ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಂದಿನ ಮಳೆಗಾಲ ಮತ್ತು ಚಳಿಗಾಲದಲ್ಲಿ ಶಾಲೆಯ ಮಕ್ಕಳಿಗೆ ಅನುಕೂಲವಾಗಲಿದೆ. ಸರ್ಕಾರಿ ಶಾಲೆಯ ಮಕ್ಕಳು ಬಡ ಕುಟುಂಬದಿಂದ ಬಂದವರಾಗಿದ್ದು, ಎಲ್ಲರೂ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇವರನ್ನು ಸಬಲರನ್ನಾಗಿ ಮಾಡುವ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.  ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪ್ರದೀಪ್, ಗ್ರಾ.ಪಂ ಅಧ್ಯಕ್ಷ ಅರುಣ ಕುಮಾರಿ, ಸದಸ್ಯ ಚಂದ್ರಶೇಖರ ಜೋಗಿ, ತೊರೆನೂರು ಗ್ರಾ.ಪಂ ಅಧ್ಯಕ್ಷೆ ಶೋಭಾ ತೊರೆನೂರು ಪಂಚಾಯತಿಯ ಮಾಜಿ ಅಧ್ಯಕ್ಷ ದೇವರಾಜು, ರೂಪ ಮಹೇಶ್, ಉಪಾಧ್ಯಕ್ಷರಾದ ಬೇಬಿ ಹೆಬ್ಬಾಲೆ, ಶಾಲಾ ಮುಖ್ಯ ಶಿಕ್ಷಕರಾದ ಎಚ್.ಎಂ.ವೆಂಕಟೇಶ, ಸಹ ಶಿಕ್ಷಕಿ ಜಾನಕಿ, ಬಬಿತ, ವಂಜಮ್ಮ, ರಮ್ಯಾ, ಶಿವಾನಂದ ಸೇರಿದಂತೆ ಗ್ರಾಮಸ್ಥರು, ಶಾಲಾ ಮಕ್ಕಳು ಹಾಜರಿದ್ದರು.…

Read More