ಮಡಿಕೇರಿ ಮಾ.4 NEWS DESK : ಗಣಕ ವಿಜ್ಞಾನದ ಹೊಸ ಆವಿಷ್ಕಾರವಾಗಿರುವ ಕೃತಕ ಬುದ್ಧಿಮತ್ತೆ (ಎ. ಐ.) ಇದೀಗ ವೇಗವಾಗಿ ಬೆಳೆಯುತ್ತಿದೆ. ಇದರಿಂದ ಕೃತಕತೆಯ ಹೊಸ ಪ್ರಪಂಚವೇ ಸೃಷ್ಟಿಯಾಗತೊಡಗಿದೆ. ಈ ಕೃತಕ ಬುದ್ಧಿಮತ್ತೆಯ ಲೋಕದಲ್ಲಿ ಪತ್ರಿಕೋದ್ಯಮವನ್ನು ಮುಂದುವರಿಸುವುದು ಬಹುದೊಡ್ಡ ಸವಾಲಿನ ಕೆಲಸ ಎಂದು ಹಿರಿಯ ಪತ್ರಕರ್ತ ಹಾಗೂ ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತಶಯನ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿಯ ಸತ್ಕಾರ ಸಭಾಂಗಣದಲ್ಲಿ ನಡೆದ ಪತ್ರಕರ್ತ ಯಜಾಸ್ ದುದ್ದಿಯಂಡ ಸಂಪಾದಕತ್ವದಲ್ಲಿ ನೂತನವಾಗಿ ಆರಂಭಗೊಂಡಿರುವ ಕೂರ್ಗ್ ಬಝ್ ಎಂಬ ಸುದ್ದಿಜಾಲದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಎ.ಐ.ಮೂಲಕ ಸುಳ್ಳನ್ನೇ ಸತ್ಯವಾಗಿಸುವ ವಾತಾವರಣ ಸೃಷ್ಟಿಯಾಗಿದೆ. ಮನುಷ್ಯನ ಬುದ್ಧಿಮತ್ತೆಯ ಎಲ್ಲಾ ಸಾಮರ್ಥ್ಯಗಳನ್ನು ಮರು ರಚಿಸಲು ಎ.ಐ. ಗೆ ಸಾಧ್ಯವಾಗುತ್ತಿದೆ. ಇದು ಪತ್ರಿಕೋದ್ಯಮಕ್ಕೆ ಬಹುದೊಡ್ಡ ಸವಾಲೊಡ್ಡುತ್ತದೆ. ಈ ಸವಾಲನ್ನು ಸಮರ್ಥವಾಗಿ ಎದುರಿಸಿ ತನ್ನ ಮೂಲ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕಾಗಿರುವುದು ಪತ್ರಿಕೋದ್ಯಮದ ಇಂದಿನ ಅನಿವಾರ್ಯತೆಯಾಗಿದೆ ಎಂದು ಹೇಳಿದರು. ‘ಕಿತ್ತಳೆನಾಡು’ ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕ ಕುವೇಂಡ ವೈ.ಹಂಝತುಲ್ಲಾ ಮಾತನಾಡಿ,…
ಲೇಖಕ: admin
ವಿರಾಜಪೇಟೆ ಮಾ.4 NEWS DESK : ಭಾರತ ದೇಶ ಹಬ್ಬಗಳ ನಾಡು, ಅದರಲ್ಲಿಯೂ ಶಿವರಾತ್ರಿ ಹಬ್ಬ ಬಹಳ ಶ್ರೇಷ್ಠ, ವಿಶಿಷ್ಠವಾದ ಹಬ್ಬವಾಗಿದೆ ಎಂದು ವಿರಾಜಪೇಟೆ ಬ್ರಹ್ಮಾಕುಮಾರಿ ಸೇವಾ ಕೇಂದ್ರದ ಸಂಚಾಲಕರಾದ ಕೋಮಲ ಅಭಿಪ್ರಾಯಪಟ್ಟರು. ಶಿವರಾತ್ರಿ ಹಬ್ಬದ ಪ್ರಯುಕ್ತ ವಿರಾಜಪೇಟೆ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ನಡೆದ 89ನೇ ತ್ರಿಮೂರ್ತಿ ಶಿವಜಯಂತಿ ಮಹೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿದ ಅವರು, ಆದ್ಯಾತ್ಮಿಕದ ಬಗ್ಗೆ ಮಾತನಾಡಿರು. ಮನುಷ್ಯನಿಗೆ ಜೀವನದಲ್ಲಿ ಪರಮಾತ್ಮನ ದ್ಯಾನದ ಅಗತ್ಯವಿದೆ. ಭಾರತದಲ್ಲಿ ಶಿವನ ಅವತಾರಣೆ ಕಾರಣ ಭಾರತ ಭಾಗ್ಯವಿಧಾತ ಎಂದು ಹಾಡುವುದಾಗಿದೆ. ಭಾರತ ದೇಶದಲ್ಲಿಯೇ ಶಿವರಾತ್ರಿಯನ್ನು ಆಚರಿಸುತ್ತಾರೆ. ಜ್ಞಾನ ಸಾಗರ ಪರಮಾತ್ಮನು ಮನುಷ್ಯನಿಗೆ ಜ್ಞಾನದ ಅವಶ್ಯಕತೆ ಇರುವುದನ್ನು ನೀಡಿದ್ದಾನೆ. ಕಲಿಯುಗದಲ್ಲಿ ವಿನಾಶ ಎಂದರೆ ಪ್ರಕೃತಿ ವಿಕೋಪಗಳು, 33ಕೋಟಿ ದೇವತೆಗಳು ಆದರು, ಶ್ರೀ ಪರಮಾತ್ಮ ಒಬ್ಬನೆ, ಮನುಷ್ಯರುಗಳು ಕಾಮ, ಕ್ರೋಧ, ಲೋಭ, ಮೋಹಗಳಿಂದ ಕರ್ಮವನ್ನು ಮಾಡುತ್ತಾರೆ. ನಂತರ ಪಾಪದ ಶರೀರವನ್ನು ತೊಳೆಯಲು ಅನೇಕ ನದಿಗಳಿಗೆ ತೀರ್ಥಸ್ಥಾನಕ್ಕೆಂದು ಹೋಗುತ್ತಾರೆ, ಆತ್ಮವನ್ನು…
ಮಡಿಕೇರಿ ಮಾ.4 NEWS DESK : ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸಬಾರದು, ಸಿ ಮತ್ತು ಡಿ ಭೂಮಿಯ ಗೊಂದಲ ನಿವಾರಿಸಬೇಕು, ಪರಿಶಿಷ್ಟರ ಅನುದಾನವನ್ನು ಉಚಿತ ಭಾಗ್ಯಗಳಿಗೆ ಬಳಸಬಾರದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಾ.6ರ ಬೆಳಿಗ್ಗೆ 10 ಗಂಟೆಯಿಂದ ಮಾ.7ರ ಮಧ್ಯಾಹ್ನ 2 ಗಂಟೆಯವರೆಗೆ ಅಹೋ ರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಕೊಡಗು ಜಿಲ್ಲಾ ಬಿಜೆಪಿ ನಿರ್ಧರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮೂರು ಪ್ರಮುಖ ಬೇಡಿಕೆಗಳು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ನಡೆಸುವ ಧರಣಿ ಸತ್ಯಾಗ್ರಹಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದಲ್ಲಿ ಮಾ.11 ರಂದು ಸ್ವಯಂ ಪ್ರೇರಿತ ‘ಕೊಡಗು ಬಂದ್’ ಗೆ ಕರೆ ನೀಡುವುದಾಗಿ ತಿಳಿಸಿದರು. ಕೊಡಗಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಬಿಜೆಪಿ ನಡೆಸುವ ಹೋರಾಟಕ್ಕೆ ರಾಜ್ಯ ಸರ್ಕಾರ ತನ್ನ ಬಜೆಟ್ ಅಧಿವೇಶನದಲ್ಲೇ ಸ್ಪಂದಿಸಬೇಕು. ತಪ್ಪಿದಲ್ಲಿ ಬಂದ್ ಗೆ ಕರೆ ಕೊಡುವುದು ಅನಿವಾರ್ಯವಾಗುತ್ತದೆ ಎಂದರು. ಹಿಂದಿನ ಬಿಜೆಪಿ ಸರ್ಕಾರದ…
ಮಡಿಕೇರಿ ಮಾ.4 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 9 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ವಿರಾಜಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು, ಕಿರುಗೂರು, ಚೆನ್ನಯ್ಯನಕೋಟೆ, ಪೊನ್ನಂಪೇಟೆ ತಾಲ್ಲೂಕಿನ ನಾಲ್ಕೇರಿ, ಮಡಿಕೇರಿ ತಾಲ್ಲೂಕಿನ ಕರಿಕೆ ಗ್ರಾಮ ಪಂಚಾಯತ್‍ಗಳು. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ನೀಡಿದ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಮೊಬೈಲ್ ಸಂಖ್ಯೆ 9148712473 ಇಮೇಲ್ ಐಡಿ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.4 NEWS DESK : ಕರ್ನಾಟಕದಲ್ಲಿ ಕನ್ನಡ ಪರ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ಕೊಡಗು ಜಿಲ್ಲೆಯಲ್ಲಿ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಿಸಲಾಗಿದ್ದು, ಕನ್ನಡ ಭವನದ ಕೊಡಗು ಜಿಲ್ಲಾ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕವಯತ್ರಿ, ಸಂಘಟಕಿ ಎಂ.ಎ.ರುಬೀನಾ ಅವರನ್ನು ಕೊಡಗು ಜಿಲ್ಲಾಧ್ಯಕ್ಷೆಯಾಗಿ ನಾಮನಿರ್ದೇಶನ ಮಾಡಿದ್ದಾರೆ. ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅನುಮೋದಿಸಿದರು. ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಉಪಾಧ್ಯಕ್ಷರಾಗಿ ಪೆರಿಯಂಡ ಯಶೋಧ, ಬೊಟ್ಟೋಳಂಡ ನಿವ್ಯಾ ಕಾವೇರಮ್ಮ, ಕೋಶಾಧಿಕಾರಿಯಾಗಿ ಚಂದನ್ ನಂದರಬೆಟ್ಟು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕರವಂಡ ಸೀಮಾ ಗಣಪತಿ, ಪಳಂಗೀಯಂಡ ಶರತ್ ಬೋಪಣ್ಣ, ಕಿಶೋರ್ ರೈ ಕತ್ತಲೆಕಾಡು, ಕೆ.ಎ.ಸಂಕೇತ್ , ಹೇಮಂತ್ ಪಾರೇರ, ಪಂದ್ಯoಡ ರೇಣುಕಾ ಸೋಮಯ್ಯ, ಅಮ್ಮಾಟoಡ ವಿಂದ್ಯಾ ದೇವಯ್ಯ, ಮೊಣ್ಣಂಡ ವಿನು ಕಾರ್ಯಪ್ಪ, ಕಾಣತಂಡ ಭವ್ಯ ದೇವಯ್ಯ, ಉಡುವೆರ ರೇಖಾ ರಘು ಅವರನ್ನು ಆಯ್ಕೆ ಮಾಡಿ ಸಮಿತಿಯನ್ನು ರಚಿಸಿದ್ದಾರೆ. ಮಾರ್ಚ್ ಕೊನೆಯ ವಾರದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕೇಂದ್ರದಲ್ಲಿ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಗೌರವ ಅಧ್ಯಕ್ಷ ಬೊಳ್ಳಜಿರ…
ಮಡಿಕೇರಿ ಮಾ.4 NEWS DESK : ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಕೊಡಗು ವಿವಿ ಮುಚ್ಚದಂತೆ ಒತ್ತಾಯಿಸಿ ಕೊಡಗು ವಿವಿ ಬೋಧಕರು, ಬೋಧಕೇತರರು, ಕೊಡಗು ವಿವಿ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಬೈಕ್ ಜಾಥಾದ ಮೂಲಕ ಮುಖ್ಯಮಂತ್ರಿಗಳಿಗೆ ಅಂಚೆ ಚೀಟಿ ಅಭಿಯಾನ ಮಾಡಿದರು. ಚಿಕ್ಕಅಳುವಾರದ ವಿವಿ ಕ್ಯಾಂಪಸ್ ನಿಂದ ಕುಶಾಲನಗರದ ತಹಸೀಲ್ದಾರ್ ಕಚೇರಿಯವರೆಗೆ ಸುಮಾರು 16 ಕಿಮೀ ಬೈಕ್ ಜಾಥಾದಲ್ಲಿ ಕ್ರಮಿಸಿ ತಾಲ್ಲೂಕು ಕೇಂದ್ರ ಕುಶಾಲನಗರಕ್ಕೆ ಧಾವಿಸಿದ ತಂಡ ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ವಿವಿ ಹಿತರಕ್ಷಣಾ ಸಮಿತಿ ಗೌರವ ಅಧ್ಯಕ್ಷ ವಿ.ಪಿ.ಶಶಿಧರ್, ಕೊಡಗು ವಿವಿ ಕೊಡಗಿನ ನೆಲದ ಹೆಮ್ಮೆಯ ಪ್ರತೀಕವಾಗಿದೆ. ಸರ್ಕಾರ ಯಾವುದೇ ಇರಲಿ, ತಟ್ಟೆಗೆ ಊಟ ಬಡಿಸಿ ಹಸಿದವರಿಗೆ ಕೊಟ್ಟು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಇಲ್ಲಿ ಕಳೆದ ಎರಡು ವರ್ಷಗಳಿಂದ ಸರ್ಕಾರದಿಂದ ಅನುದಾನ ಇಲ್ಲದಿದ್ದರೂ ವಿವಿ ಶೈಕ್ಷಣಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿದೆ. ಇನ್ಫೋಸಿಸ್, ಟಾಟಾ…
ಮಡಿಕೇರಿ ಮಾ.4 NEWS DESK : ರಾಮನವಮಿ ಪ್ರಯುಕ್ತ ಏ.6 ರಂದು ಮಡಿಕೇರಿಯ ಕೋದಂಡರಾಮ ದೇವಾಲಯದ ರಾಮೋತ್ಸವ ಸಮಿತಿ ವತಿಯಿಂದ ಏಪ್ರಿಲ್ 5 ಮತ್ತು 6 ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಮೋತ್ಸವ ಸಮಿತಿ ಅಧ್ಯಕ್ಷ ಕೆ.ಎಂ ಗಣೇಶ್ ತಿಳಿಸಿದ್ದಾರೆ. ರಾಮೋತ್ಸವ ಸಂಬಂಧ ಕೋದಂಡರಾಮ ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಏ.6 ರಂದು ನಡೆಯಲಿರುವ ರಾಮನವಮಿ ಪ್ರಯುಕ್ತ ಮಡಿಕೇರಿಯ ಕೋದಂಡರಾಮ ದೇವಾಲಯದ ರಾಮೋತ್ಸವ ಸಮಿತಿ ವತಿಯಿಂದ ಏ.5 ರಂದು ನಗರದಲ್ಲಿ ಬೃಹತ್ ಮೆರವಣಿಗೆ ಜರುಗಲಿದೆ. ಏ.5 ಹಾಗೂ 6 ರಂದು ಎರಡು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸುಮಾರು 10,000 ಮಂದಿಗೆ ಅನ್ನದಾನ ನಡೆಯಲಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಜಾತಿ-ಸಂಘರ್ಷ ಹೆಚ್ಚಾಗುತ್ತಿದೆ. ಹಿಂದೂ ಧರ್ಮದಡಿಯಲ್ಲಿ ಎಲ್ಲರೂ ಒಂದೇ ಎಂಬ ಮನೋಭಾವನೆಯನ್ನು ಮೂಡಿಸಲು, ಒಗ್ಗಟ್ಟನ್ನು ಪ್ರದರ್ಶಿಸಲು ಈ ಬಾರಿ ಜಿಲ್ಲೆಯಲ್ಲಿನ ಸರ್ವಜನಾಂಗದವರನ್ನು ಸೇರಿಸಿ ರಾಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಈ…
ಮಡಿಕೇರಿ ಮಾ.4 NEWS DESK : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾ.8 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದೆಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ಮಹಿಳೆಯರ ಪರವಾಗಿ ಹಕ್ಕೊತ್ತಾಯಗಳನ್ನು ಮಂಡಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕುಗಳನ್ನು ನೀಡಬೇಕು. ಸ್ವಾಯತ್ತ ಕೊಡವ ಲ್ಯಾಂಡ್ ಘೋಷಿಸಬೇಕು, ನೆಲ, ಜಲ, ಭಾಷೆ, ಸಂಸ್ಕೃತಿ, ಪರಪಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯದೊಂದಿಗೆ ಸಾಂವಿಧಾನಿಕ ಭದ್ರತೆಯನ್ನು ಖಾತ್ರಿ ಪಡಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಕೊಡವರ ಜನ್ಮಸಿದ್ಧ ಹಕ್ಕಾಗಿರುವ ಕೋವಿ ಹೊಂದುವ ವಿನಾಯಿತಿಯನ್ನು ಶಾಶ್ವತಗೊಳಿಸಬೇಕು. ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ…
ವಿರಾಜಪೇಟೆ ಮಾ.4 NEWS DESK : ಕುಟ್ಟಂದಿಯ ಹೆಗ್ಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಸುರಕ್ಷಾ ಅಧಿಕಾರಿಯಾಗಿ 36 ವರ್ಷ 8 ತಿಂಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕೆ.ಕೆ.ರಮಿತ ಅವರಿಗೆ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಯತಿರಾಜ್ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು, 1988 ರಲ್ಲಿ ಕರ್ತವ್ಯಕ್ಕೆ ಸೇರಿದ ಅವರು 36 ವರ್ಷ ಹಾಗೂ 8 ತಿಂಗಳ ಸುದೀರ್ಘ ಸೇವೆ ಸಲ್ಲಿಸಿ ಕರ್ತವ್ಯದ ಸಂದರ್ಭದಲ್ಲಿ ತಮ್ಮ ಉತ್ತಮ ಸೇವೆಗಾಗಿ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಉತ್ತಮ ಸಾಧನೆ ತೋರಿದ್ದಕ್ಕಾಗಿ ಕೇಂದ್ರ ಸರ್ಕಾರದಿಂದ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಅಲ್ಲದೆ ಸ್ಥಳೀಯ ಗ್ರಾಮೀಣ ಜನರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಕುಟ್ಟಂದಿ ಆರೋಗ್ಯ ಉಪ ಕೇಂದ್ರದ ವೈದ್ಯರಾದ ಡಾ.ಶರಣ್ ಸುಬ್ಬಯ್ಯ, ಶುಶ್ರೂಷಕಿಯರು, ಸಿಬ್ಬಂದಿಗಳು ಹಾಗೂ…
ನಾಪೋಕ್ಲು ಮಾ.4 NEWS DESK : ಮೂರ್ನಾಡು ಹೆಲ್ತ್‍ಫಸ್ಟ್ ಆಸ್ಪತ್ರೆ ವತಿಯಿಂದ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ಹೆಲ್ತ್ ಫಸ್ಟ್ ಆಸ್ಪತ್ರೆಯಲ್ಲಿ ನಡೆದ ಶಿಬಿರದಲ್ಲಿ ಅಧಿಕ ರಕ್ತದೊತ್ತಡ, ಶ್ವಾಸಕೋಶದ ಆರೈಕೆ, ಪೌಷ್ಟಿಕಾಂಶದ ಮೌಲ್ಯಮಾಪನ, ಡಯಾಬಿಟಿಸ್, ಮತ್ತು ಸ್ತನ ಕ್ಯಾನ್ಸರ್ ತಪಾಸಣೆ, ಮಹಿಳೆಯರ ಆರೋಗ್ಯ, ದೃಷ್ಟಿ ತಪಾಸಣೆ ಹಾಗೂ ಮಾರ್ಗದರ್ಶನವನ್ನು ಆಸ್ಪತ್ರೆಯ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ನೀಡಿದರು. ಈ ಸಂದರ್ಭ ಜನರಲ್ ಸರ್ಜನ್ ಡಾ. ಬಿ.ವಿ.ಧನಶ್ರೀ ಅವರು ಉಚಿತ ವೈದ್ಯಕೀಯ ಸಮಾಲೋಚನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮೂರ್ನಾಡು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕಣ್ಣು ಅಪ್ಪಚ್ಚು, ಕಾರ್ಯದರ್ಶಿ ಪಿ.ಎಂ.ಅಪ್ಪಣ್ಣ, ಖಜಾಂಚಿ ಅರುಣ್ ಅಪ್ಪಚ್ಚು, ಕೊಡವ ಪೊಮ್ಮಕ್ಕಡ ಕೂಟದ ಅಧ್ಯಕ್ಷ ರೇಖಾ ತಮ್ಮಯ್ಯ, ಕಾರ್ಯದರ್ಶಿ ಗೀತಾ ಪವಿತ್ರ ಹಾಗೂ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.






