ವಿರಾಜಪೇಟೆ ಮಾ.4 NEWS DESK : ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯನ್ನು ತಲುಪಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ದಾನಿಗಳು, ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿಯಿಂದ ನೆರವು ನೀಡುವ ಮೂಲಕ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡುತ್ತಿದ್ದು, ಶಾಲೆಯ ಆವರಣ, ಗೋಡೆಯನ್ನು ಸ್ವಚ್ಛಗೊಳಿಸಿ ವರ್ಲಿ ಚಿತ್ರಗಳನ್ನು ಬಿಡಿಸುವ ಮೂಲಕ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದೆ. ಬೆಂಗಳೂರು ಮೂಲದ ಜಾಗೃತಿ ಸಮಾಜ ಸೇವಾ ಟ್ರಸ್ಟ್ ಮತ್ತು ಸಿಸ್ಕೊ ಸಂಸ್ಥೆಯ ಸಹಯೋಗದ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದ ಗೋಡೆಯಲ್ಲಿ ವರ್ಲಿ ಚಿತ್ರಕಲೆ, ಸಾಮಾಜಿಕ ಮೌಲ್ಯ, ಪರಿಸರ ಕಾಳಜಿಯ ರೇಖಾ ಚಿತ್ರಗಳು, ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ಸ್ಥಳದಲ್ಲಿಯೇ ತಯಾರಿಸುವ ವಿಧಾನ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಸಾಮಾಗ್ರಿಗಳಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿದೆ. ಎರಡು ದಿನಗಳ ಕಾಲ ನಡೆದ ಸೇವಾ ಕಾರ್ಯಕ್ರಮದಲ್ಲಿ ಸಿಸ್ಕೋ ಮತ್ತು ಜಾಗೃತಿ ಸೇವಾ ಟ್ರಸ್ಟ್ ನ…
ಲೇಖಕ: admin
ಮಡಿಕೇರಿ ಮಾ.4 NEWS DESK : ಹಕ್ಕಿಜ್ವರ ಅಥವಾ ಕೋಳಿ ಜ್ವರ ಶೀತಜ್ವರ ಹೆಚ್5ಎನ್1 ವೈರಸ್ ನಿಂದ ಹರಡುವ ರೋಗ ಇದು ಟರ್ಕಿ ಕೋಳಿ, ಗಿನಿ ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ. ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಂದು ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಕ್ಕಿ ಜ್ವರದ ಲಕ್ಷಣಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ತಡಮಾಡದೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ, ಸೋಂಕಿರುವ ಹಸಿ ಮೊಟ್ಟೆಯನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ರೋಗ ಲಕ್ಷಣಗಳು: ಹಕ್ಕಿ ಜ್ವರದ ಲಕ್ಷಣಗಳು…
ಮಡಿಕೇರಿ ಮಾ.3 NEWS DESK : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿ 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ಬ್ಯಾಂಕ್ ಸ್ಟೇಟ್‍ಮೆಂಟ್‍ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ…
ಮಡಿಕೇರಿ ಮಾ.4 NEWS DESK : ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಕಾರದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ‘ಜನಜಾಗೃತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನರು ಮದ್ಯ ಹಾಗೂ ಮಾದಕ ವಸ್ತುಗಳ ದುಶ್ಚಟದಿಂದ ದೂರ ಇರಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂದು ತಿಳಿಸಿದರು. ಮದ್ಯ ಹಾಗೂ ಮಾದಕ ವಸ್ತುಗಳಿಗೆ ತುತ್ತಾದಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳಬೇಕಾಗುತ್ತದೆ. ಇದರಿಂದ ಕುಟುಂಬದ ನಿರ್ವಹಣೆ ಕಷ್ಟವಾಗಲಿದೆ. ಜೊತೆಗೆ ಸಮಾಜದಲ್ಲಿ ಉತ್ತಮ ಬದುಕು…
ಮಡಿಕೇರಿ ಮಾ.3 NEWS DESK : ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ನಗರದ ಕ್ರಿಯೇಟಿವ್ ಸಂಸ್ಥೆಯ ಮಾಲೀಕ ಖಲೀಲ್ ಮಾತನಾಡಿ, ಶಿಕ್ಷಣ ಎಂಬುದು ಮಾನವನ ಜೀವನದಲ್ಲಿ ಯಾರೂ ಕದಿಯಲಾಗದ ಸಂಪತ್ತು. ಶಿಕ್ಷಣ ಮಾನವನ ಸರ್ವಾಂಗಿನ ಅಭಿವೃದ್ಧಿಗೆ ಪೂರಕವಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಭಯ ಆತಂಕ ಪಡದೆ ಗುರುಗಳು ಮಾಡಿರುವ ಪಾಠ ಪ್ರವಚನಗಳನ್ನು ನೆನಪಿಟ್ಟುಕೊಂಡು ಉತ್ತಮವಾಗಿ ಪರೀಕ್ಷೆಯನ್ನು ಹಬ್ಬದಂತೆ ಸಂತೋಷದಿಂದ ಬರೆಯ ಬೇಕು ಎಂದರು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನುಗಳಿಸುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ನೀಡಿ ಶುಭ ಕೋರಿದರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಉದೇರಿ ರಾಜೇಂದ್ರ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗ ನೀಡಿರುವ ಶಿಕ್ಷಣವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ರೂಪಿಸಿಕೊಳ್ಳಬೇಕು ಕರೆ ನೀಡಿದರು. ಕಾಲೇಜು ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ…
ಸೋಮವಾರಪೇಟೆ ಮಾ.3 NEWS DESK : ಆರೋಗ್ಯವಂತರು ಪ್ರತಿ 3 ತಿಂಗಳಿಗೊಮ್ಮೆ ಸ್ವಯಂಪ್ರೇರಿತ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವವನ್ನು ಉಳಿಸಬಹುದಾಗಿದೆ ಎಂದು ಮಡಿಕೇರಿ ರಕ್ತನಿಧಿ ಕೇಂದ್ರ ವೈದ್ಯೆ ಸ್ನೇಹಾ ಹೇಳಿದರು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಮತ್ತು ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ದೊಡ್ಡಮಳ್ತೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ದಾನಿಗಳ ಆರೋಗ್ಯ ತಪಾಸಣೆ ಮಾಡಿ ನಂತರ ಮಾತನಾಡಿದರು. ಆಗಗ್ಗೆ ರಕ್ತದಾನ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಹೃದಯ ಕಾಯಿಲೆಗಳು ಮತ್ತು ಪಾಶ್ರ್ವವಾಯು ಅಪಾಯ ಕಡಿಮೆಯಾಗುತ್ತದೆ. ರಕ್ತದಾನದಿಂದ ರಕ್ತದ ದಪ್ಪ ಕಡಿಮೆಯಾಗಿ ರಕ್ತಪರಿಚಲನೆ ಹೆಚ್ಚಾಗುತ್ತದೆ. ಹೊಸ ರಕ್ತ ಉತ್ಪತ್ತಿಯಾಗುತ್ತದೆ ಎಂದು ಹೇಳಿದರು. ರಕ್ತದಾನದ ಸಂದರ್ಭ ಆರೋಗ್ಯ ತಪಾಸಣೆ ಆಗುತ್ತದೆ. ರಕ್ತದಾನಿಗಳಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳಿದ್ದರೆ, ರಕ್ತನಿಧಿ ಕೇಂದ್ರದಿಂದ ರೋಗದ ಮಾಹಿತಿ ಸಿಗುತ್ತದೆ. ನಂತರ ಚಿಕಿತ್ಸೆ ಪಡೆದುಕೊಂಡು ಅಪಾಯದಿಂದ ಪಾರಾಗಬಹುದು ಎಂದು ಹೇಳಿದರು. ರಕ್ತದಾನದಿಂದ ಅನೇಕ ಪ್ರಯೋಜನಗಳಿದ್ದು, ಕಾರ್ಯಕ್ರಮದಲ್ಲಿ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ, ಉಪಾಧ್ಯಕ್ಷೆ…
ಸೋಮವಾರಪೇಟೆ ಮಾ.3 NEWS DESK : ಕೃಷಿ ಕಾರ್ಮಿಕರು, ಪರಿಶಿಷ್ಟಜಾತಿ, ಪಂಗಡದ ನಿವೇಶನ ರಹಿತ ಬಡವರಿಗೆ ಸರ್ಕಾರ ಉಚಿತ ನಿವೇಶನ ನೀಡುವಂತೆ ಆಗ್ರಹಿಸಿ ಯುನೈಟೈಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್‍ನ ಜಿಲ್ಲಾ ಸಮಿತಿ ಹರದೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿತು. ಯೂನಿಯನ್‍ನ ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ ಅವರ ನೇತೃತ್ವದಲ್ಲಿ ಹರದೂರು ಬಾಣೆಯಿಂದ ಪಂಚಾಯಿತಿ ವರೆಗೆ ಮೆರವಣಿಗೆ ನಡೆಸಿ, ಹರದೂರು ಗ್ರಾಮ ಪಂಚಾಯಿತಿ ಮುಂಭಾಗ ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ನಿವೇಶನ ರಹಿತರು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ, ಕೊಡಗು ಜಿಲ್ಲೆಯಲ್ಲಿ ಪೈಸಾರಿ ಸೇರಿದಂತೆ ಇನ್ನಿತರ ಸರ್ಕಾರಿ ಭೂಮಿ ಬೇಕಾದಷ್ಟಿದೆ. ಕಳೆದ ಎರಡೂವರೆ ದಶಕಗಳಿಂದ ಮನೆಯಿಲ್ಲದ ಕಾರ್ಮಿಕರಿಗೆ ನಿವೇಶನ ನೀಡುವಂತೆ ನಿರಂತರ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಪೈಸಾರಿ ಜಾಗವನ್ನು ಬಲಾಡ್ಯರು ಕಬಳಿಸಿದ್ದಾರೆ. ಕೂಲಿ ಕಾರ್ಮಿಕರು ಅವರ ಮಕ್ಕಳು ಇವತ್ತಿಗೂ ಮುರುಕಲು ಗುಡಿಸಲಿನಲ್ಲಿ ಬದುಕುತ್ತಿದ್ದಾರೆ. ಲೈನ್ ಮನೆಯಲ್ಲೂ ಪ್ರಾಣಿಗಳಂತೆ ವಾಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಕಳೆದ 25 ವರ್ಷಗಳಿಂದ ಕಾರ್ಮಿಕರಿಗೆ ನಿವೇಶನ…
ಮಡಿಕೇರಿ ಮಾ.3 NEWS DESK : ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಎಎಸ್ಐ ಟಿ.ಎನ್.ದಯಾನಂದ, ಬಸವರಾಜ ಶೆಟ್ಟಿ ಮತ್ತು ಡಿಎಆರ್‌ನ ಎಆರ್‌ಎಸ್‌ಐ ಬಿ.ಸಿ.ಸೋಮಯ್ಯ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.
ಮಡಿಕೇರಿ ಮಾ.3 NEWS DESK : ಇತಿಹಾಸ ಪ್ರಸಿದ್ಧ ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿಯ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವವು ಮಾ.8 ರಿಂದ 19ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಹನ್ನೆರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.8 ರಂದು ಬೆಳಿಗ್ಗೆ 6 ಗಂಟೆಗೆ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ, ಊರಿನವರು ಮತ್ತು ಊರಿನ ಮಹಿಳೆಯರಿಂದ 12 ತಳಿಯತಕ್ಕಿ, ಬೊಳ್‍ಚ್ಚ, ದುಡಿಕೊಟ್ಟ್ ಪಾಟ್‍ನೊಂದಿಗೆ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಬೆಳಿಗ್ಗೆ 6.30 ಗಂಟೆಯಿಂದ ಊರಿನ ಪರವಾಗಿ ಶತರುದ್ರಾಭಿಷೇಕ, ಪ್ರಸಾದ ವಿತರಣೆ ನಡೆಯದ್ದು, ರಾತ್ರಿ 8 ಗಂಟೆಗೆ ಆರಿದ್ರ ನಕ್ಷತ್ರದ ಮೂಹೂರ್ತದಲ್ಲಿ “ಕೊಡಿಮರ” ನಿಲ್ಲಿಸುವುದು, ಶುದ್ಧ ಕಲಶ, ಉತ್ಸವ ಮೂರ್ತಿ ದರ್ಶನ, ಪ್ರಸಾದ ವಿತರಣೆ ಹಾಗೂ ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ಜರುಗಲಿದೆ. ಮಾ.9 ರಂದು ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ, ಸಂಜೆ 7 ಗಂಟೆಗೆ ತೂಚಂಬಲಿ ನಡೆಯಲಿದೆ. ಮಾ.10 ರಂದು ಪ್ರಾತಃಕಾಲ 5 ಗಂಟೆಗೆ ಉತ್ಸವ ಮೂರ್ತಿದರ್ಶನ, ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ,…
ಮಡಿಕೇರಿ ಮಾ.3 NEWS DESK : ಕೊಡಗು ವಿವಿ ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಗುಡ್ಡೆಹೊಸೂರು ಗ್ರಾ.ಪಂ ಆಡಳಿತ ಮಂಡಳಿ ಖಂಡಿಸಿತು. ಕೊಡಗು ವಿವಿ ಬಡ ವಿದ್ಯಾರ್ಥಿಗಳ ಪಾಲಿನ ಜ್ಞಾನದೇಗುಲವಾಗಿದ್ದು, ಯಾವ ಕಾರಣಕ್ಕೂ ಸರ್ಕಾರ ಮುಚ್ಚಲು ಮುಂದಾಗಬಾರದು. ಕೊಡಗು ವಿವಿ ಯಿಂದ ಜಿಲ್ಲೆಯ ಬಡ ಮಕ್ಕಳು ಮೈಸೂರು, ಮಂಗಳೂರು ವಿವಿ ಗಳಿಗೆ ತೆರಳುವ ಪ್ರಯಾಸದ ಪ್ರಯಾಣ ತಪ್ಪಿದೆ. ಊರ ಬಾಗಿಲಲ್ಲಿ ವಿವಿ ಇರುವಾಗ ಅಪಾರ ಮಂದಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಎಂದು ಸ್ನಾತಕೋತ್ತರ ಪದವೀಧರೆ ಹಾಗೂ ಗ್ರಾಪಂ ಸದಸ್ಯೆ ವೈ.ಬಿ.ಉಮಾ ಸಭೆಯಲ್ಲಿ ಪ್ರಸ್ತಾಪಿಸಿದಾಗ ಸದಸ್ಯರಾದ ಶಿವಪ್ಪ, ಸೌಮ್ಯ, ನಾರಾಯಣ, ಪ್ರದೀಪ್, ಚಿದಾನಂದ, ಸೇರಿದಂತೆ ಇಡೀ ಆಡಳಿತ ಮಂಡಳಿ ಮೇಜು ತಟ್ಟಿ ಸರ್ಕಾರದ ಕ್ರಮವನ್ನು ಖಂಡಿಸಿದರು. ಸಭಾಧ್ಯಕ್ಷ ಪ್ರವೀಣ್ ಕುಮಾರ್ ಈ ಬಗ್ಗೆ ಸರ್ಕಾರಕ್ಕೆ ನಿಯೋಗ ತೆರಳಲು ಸಿದ್ಧ ಎಂದರು.






