ಲೇಖಕ: admin

ಮಡಿಕೇರಿ ಮಾ.3 NEWS DESK : ಕ್ರೀಡಾಕೂಟಗಳಿಂದ ಸೌಹಾರ್ದತೆಯ ಸಮಾಜ ಸೃಷ್ಟಿಸಲು ಸಾಧ್ಯ ಎಂದು ಗೋಣಿಕೊಪ್ಪ ಗ್ರಾ.ಪಂ  ಅಧ್ಯಕ್ಷ ಹಾಗೂ ಆಲ್ ಸ್ಟಾರ್ ಯೂತ್ ಕ್ಲಬ್ ಗೌರವಾಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಭಿಪ್ರಾಯಪಟ್ಟರು.  ಗೋಣಿಕೊಪ್ಪಲಿನ ದುರ್ಗಬೋಜಿ ಸಭಾಂಗಣದಲ್ಲಿ ಆಲ್ ಸ್ಟಾರ್ ಯೂತ್ ಕ್ಲಬ್ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಅಂಗವಾಗಿ ಆಲ್ ಸ್ಟಾರ್ ತಂಡದ ನೂತನ ಜೆರ್ಸಿ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.  ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಫುಟ್ಬಾಲ್ ಕ್ರೀಡೆಗೆ ಯಥೇಚ್ಛವಾಗಿ ಆಯೋಜನೆಗೊಳುತ್ತಿದೆ. ವಿಶೇಷವಾಗಿ ಗೋಣಿಕೊಪ್ಪಲಿನಲ್ಲಿ ಫುಟ್ಬಾಲ್, ಕ್ರಿಕೆಟ್ ಹಾಗೂ ಕಬಡ್ಡಿ ಪಂದ್ಯಾಟಗಳು ನಡೆಯುತ್ತಿದೆ. ಇದೀಗ ಜಿಲ್ಲೆಯ ಫುಟ್ಬಾಲ್ ಇತಿಹಾಸದಲ್ಲಿ ಎರಡು ಲಕ್ಷ ರೂ ನಗದು ಬಹುಮಾನ ನೀಡಿ ಆಲ್ ಸ್ಟಾರ್ ಯೂತ್ ಕ್ಲಬ್ ಮೇ ತಿಂಗಳ 1 ರಿಂದ 4 ರವರೆಗೆ ಗೋಣಿಕೊಪ್ಪಲಿನ ಜಿ.ಎಂ.ಪಿ ಶಾಲಾ ಮೈದಾನದಲ್ಲಿ ಆಯೋಜಿಸಿದೆ.  ಕ್ರೀಡೆಗಳು ಎಲ್ಲಾ, ಜಾತಿ ಧರ್ಮಗಳನ್ನು ಒಂದುಗೂಡಿಸಿ ಒಂದೇ ವೇದಿಕೆಗೆ ಕರೆತರುತ್ತದೆ.  ಇತ್ತೀಚಿನ ದಿನಗಳಲ್ಲಿ ಯುವಕರು…

Read More

ಮಡಿಕೇರಿ ಮಾ.3 NEWS DESK : ಕೃತಕ ಬುದ್ಧಿ ಮತ್ತೆ ಅಥವಾ (ಎಐ) ತಂತ್ರಜ್ಞಾನದ ಬಗ್ಗೆ ಸೂಕ್ತ ಅರಿವು ಬೆಳೆಸಿಕೊಳ್ಳುವುದು ಅತೀ ಅವಶ್ಯಕ ಎಂದು ಸಿಐಟಿ ಕಾಲೇಜಿನ ಸಹ ಪ್ರಾಧ್ಯಾಪಕ ರಾಮಕೃಷ್ಣ ತಿಳಿಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಕೊಡಗು ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಗೋಣಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಫೆಬ್ರವರಿ 28 ರಂದು ಪ್ರತಿ ವರ್ಷ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಭಾರತದ ಶ್ರೇಷ್ಠ ವಿಜ್ಞಾನಿ ಡಾ. ಸಿ.ವಿ.ರಾಮನ್ ಅವರು ರಾಮನ್ ಪರಿಣಾಮದ ಆವಿಷ್ಕಾರದ ಸ್ಮರಣಾರ್ಥ ಮತ್ತು ಸಾರ್ವಜನಿಕರಲ್ಲಿ ವಿಜ್ಞಾನದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು. ಪ್ರಸ್ತುತ ನಾವು ಕೃತಕ ಬುದ್ಧಿ ಮತ್ತೆ ಅಥವಾ (ಎಐ) ತಂತ್ರಜ್ಞಾನದ ಕಾಲಘಟ್ಟದಲ್ಲಿದ್ದು, ಈ ಆವಿಷ್ಕಾರಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ಬಾಲ್ಯದಿಂದಲೇ ವಿಜ್ಞಾನದ ಅರಿವು ನಮ್ಮಲ್ಲಿ ಜಾಗೃತವಾಗಿರಬೇಕು. ಎಐ ತಂತ್ರಜ್ಞಾನವನ್ನು…

Read More

ಸೋಮವಾರಪೇಟೆ ಮಾ.3 NEWS DESK : ಮಹಾಶಿವರಾತ್ರಿ ಅಂಗವಾಗಿ ತಾಲ್ಲೂಕು ಕದಳಿ ವೇದಿಕೆ ವತಿಯಿಂದ ವಚನ ಗಾಯನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಕದಳಿ ಅಧ್ಯಕ್ಷೆ ಉಷಾರಾಣಿ, ವಚನಗಾಯನದಿಂದಾಗಿ ಮನತೃಪ್ತಿ ಹಾಗೂ ಆತ್ಮ ತೃಪ್ತಿ ಸಿಗುತ್ತದೆ. ಪ್ರತಿಯೊಬ್ಬರು ಪ್ರತಿದಿನವೂ ತಪ್ಪದೇ ದಿನಕ್ಕೊಂದು ವಚನಗಳನ್ನು ಹೇಳುವ ಮೂಲಕ ವಚನ ಜಾಗೃತಿ ಮೂಡಿಸಬೇಕೆಂದು ಕರೆಕೊಟ್ಟರು.  ವಿವಿಧ ಮಹಿಳಾ ತಂಡಗಳಿಂದ ವಚನ ಗಾಯನ ಹಾಗೂ ಶಿವಸ್ತ್ರೋತ್ರಗಳು ನೆರವೇರಿದವು‌. ಸೋಮವಾರಪೇಟೆ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಉಷಾರಾಣಿ ಗುರುಪ್ರಸಾದ್, ಪ್ರಮುಖರಾದ ಗೀತಾರಾಜು, ಜಲಜಾ ವಿಜಯಕುಮಾರ್, ನಾಗಮಣಿ ಯುವರಾಜ್, ಕವಿತಾ ಸಂಜಯ್, ಸರಿತಾ ಮಲ್ಲಿಕಾರ್ಜುನ್, ದಿವ್ಯ ದಿವಾಕರ್, ಜಗದಾಂಬ ಗುರುಪ್ರಸಾದ್, ಯಶೋಧ ನಾಗೇಶ್, ದೀಪ್ತಿ ಹಾಗೂ ತೃಪ್ತಿ ಇದ್ದರು.

Read More

ಮೈಸೂರು, ಮಾ.3 NEWS DESK : ಪ್ರಸಕ್ತ ತಿಂಗಳಿನಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಸ್‌ ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್‌, ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳಿಗೆ ಪೂರಕವಾಗಿ ಸೇವೆಯನ್ನು ಕಲ್ಪಿಸಬೇಕಾಗಿದೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆಯ ಬಸ್‌ಗಳ ಮೇಲೆ ಹೆಚ್ಚು ಅವಲಂಬಿತವಾಗಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಸೇವೆ ನೀಡಬೇಕಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಪರೀಕ್ಷೆ ಸಮಯದಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ನಿಲ್ದಾಣಕ್ಕೆ ಬರುತ್ತಿಲ್ಲ. ಒಂದು ವೇಳೆ ಬಂದರೂ ನಿಲ್ದಾಣದಲ್ಲಿ ನಿಲ್ಲಿಸದೇ ತೆರಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕೆಲವು ವಿದ್ಯಾರ್ಥಿಗಳು ನನಗೂ ದೂರು…

Read More

ಶನಿವಾರಸಂತೆ ಮಾ.3 NEWS DESK :  ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣನವರು ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಶರಣ ಸಾಹಿತ್ಯದ ತಿರುಳನ್ನು ಪ್ರಸ್ತುತ ಸಮಾಜಕ್ಕೆ ಅಳವಡಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶನಿವಾರಸಂತೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಪ್ರಜ ಗುರುಕುಲದ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯ ಸುನಂದಾದೇವಿ-ಸಂಗಮೇಶ್ವರ ಗೌಡ ದಂಪತಿಯ ಪ್ರಾಯೋಜಕತ್ವದಲ್ಲಿ ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂಗೈಕ ಮಾಗನೂರು ಬಸಪ್ಪ ದತ್ತಿ ಶರಣ ಸಂಸ್ಕೃತಿ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ.ಶರಣ ಎಂದರೆ ಸಜ್ಜನ, ಸದ್ಭಕ್ತಿ, ಅನುಭಾವಿ ಎಂಬ ವ್ಯಕ್ತಿತ್ವ.ದತ್ತಿನಿದಿಯ ಶರಣ ಮಾಗನೂರು ಬಸಪ್ಪನವರು ಹುಟ್ಟಿನಿಂದ ದೊಡ್ಡವರಾಗಿ ಹುಟ್ಟಿದವರಲ್ಲ; ಹುಟ್ಟಿ ದೊಡ್ಡವರಾಗಿ ಬದುಕಿ, ಬಾಳಿ ಶಿಸ್ತನ್ನು ರೂಢಿಸಿಕೊಂವರು.ಶಿಕ್ಷಣ, ಸಂಸ್ಕೃತಿ, ದಾಸೋಹದಂತಹ ಸಮಾಜಮುಖಿ ಕೆಲಸ ಮಾಡಿದವರು. ಕೊಡಗಿನಲ್ಲಿ ಶರಣ ಸಾಹಿತ್ಯಕ್ಕೆ…

Read More

ಚೆಟ್ಟಳ್ಳಿ NEWS DESK ಮಾ.2 : ಚೆಟ್ಟಳ್ಳಿಯ ಚೇರಳ ಶ್ರೀಭಗವತಿ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ‘ಪಟ್ಟಣಿ ಹಬ್ಬ’ ದಂದು ಕಲ್ಡಚ ಹೋಗುವ ಸಂಪ್ರದಾಯದಂತೆ ಹೆಣ್ಣು ಮಕ್ಕಳು ದೇವಾಲಯದಿಂದ ಕಳಶದೊಂದಿಗೆ ತೆರಳಿ ಚೌಂಡಿ ಬನದಲ್ಲಿ ಪೂಜೆ ಮಾಡಿದರು. ಒಡ್ಡೋಲಗ ದುಡಿಕೊಟ್ಟ್ ನೊಂದಿಗೆ ದೇವತಕ್ಕರ ಮನೆಯಿಂದ ದೇವರ ಭಂಡಾರವನ್ನು ದೇವಾಲಯಕ್ಕೆ ತಂದು ಮಾಹಾಪೂಜೆ, ಕೊಂಬಾಟ್ ಸೇವೆ ಸಲ್ಲಿಸಲಾಯಿತು. ನಂತರ ದೇವರ ಭಂಡಾರವನ್ನು ದೇವತಕ್ಕರ ಮನೆಯಲ್ಲಿ ಇಡಲಾಯಿತು. ಮಾರನೇ ದಿನ ಊರಿನವರು ಅಯ್ಯಪ್ಪ ದೇವರಬನಕ್ಕೆ ತೆರಳಿ ದೇವರಿಗೆ ಬಲಿಪೂಜೆ ಮಾಡಿ ದೇವರ ಪ್ರಸಾದವನ್ನು ಸ್ವೀಕರಿಸಿದರು. ದೇವಾಲಯಕ್ಕೆ ಬಂದ ಭಕ್ತರು ತೆಂಗಿನಕಾಯಿಗೆ ಗುಂಡುಹೊಡೆಯುವ ಮೂಲಕ ದೇವರಕಟ್ಟು ಮುರಿಯಲಾಯಿತು. ಭಾನುವಾರ ಚೇರಳ ಶ್ರೀಭಗವತಿ ದೇವರ ದೊಡ್ಡಹಬ್ಬ ನಡೆಯಿತು. ಬಿಳಿಕುಪ್ಪಸ ದಟ್ಟಿಯನ್ನು ತೊಟ್ಟ ಊರಿನ ಕೊಡವ ಮತ್ತು ಗೌಡ ಜನಾಂಗದವರು ಕೊಂಗೇಟಿರ ಐನ್ ಮನೆಯಿಂದ ಊರುತಕ್ಕರಾದ ಕೊಂಗೇಟಿರ ಹರೀಶ್ ಅಪ್ಪಣ್ಣ ಹಾಗೂ ಕೊಂಗೇಟಿರ ಕುಟುಂಬಸ್ಥರನ್ನು ಒಡ್ಡೋಲಗ ದುಡಿಕೊಟ್ಟ್ನೊಂದಿಗೆ ದೇವಾಲಯಕ್ಕೆ ಕರೆ ತಂದರು. ನಂತರ ದೇವತಕ್ಕ ಚೇರಳ ತಮ್ಮಂಡ…

Read More

ಕುಶಾಲನಗರ NEWS DESK ಮಾ.2 : ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ  ಎಂದು ಕರ್ನಾಟಕ ಸರಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅಂಗಸಂಸ್ಥೆಗಳ ಹಾಗೂ ವಿವಿಧ ಗೌಡ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವ -2025 ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ತಾಯಿನುಡಿಗಳನ್ನು ಬಳಕೆ ಮಾಡುವ ಮೂಲಕ ಉಳಿಸುವುದರೊಂದಿಗೆ ಅಕಾಡೆಮಿ ಮೂಲಕ ಭಾಷೆಯ ಅಭಿವೃದ್ಧಿಗೆ ಕಾರ್ಯಸೂಚಿ ನೀಡುವ ಕೆಲಸವಾಗಬೇಕಾಗಿದೆ ಎಂದರು. ಪ್ರಸಕ್ತ ಭಾಷೆ ಸಂಸ್ಕೃತಿ ದಿಕ್ಕಾಪಾಲಾಗಿ ಹೋಗುತ್ತಿದ್ದು, ಜನಗಣತಿ ಮೂಲಕ ತಮ್ಮ ಸಮುದಾಯದ ಜನಸಂಖ್ಯೆ ಮಾಹಿತಿಯನ್ನು ಸರಕಾರಕ್ಕೆ ಲಭಿಸುವಂತೆ ಮಾಡುವುದು, ಮುಖ್ಯ ಭಾಷೆ -ಉಪಭಾಷೆಗಳ ನಡುವೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸುವುದು ಈ ಮೂಲಕ ಭಾಷೆಗಳ ಬೆಳವಣಿಗೆ ಸಾಧ್ಯ ಎಂದ ಅವರು ಅಧಿಕಾರದ ಮೂಲಕ ಭಾಷೆಗಳನ್ನು ನಿರ್ಧಾರ ಮಾಡುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು. ಚರಿತ್ರೆಗಳು…

Read More

ಪೊನ್ನಂಪೇಟೆ NEWS DESK ಮಾ.2 : ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕ ಇವರ ವತಿಯಿಂದ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳ ಶೈಕ್ಷಣಿಕ ಉತ್ತೇಜನಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ’ ರಾಜ್ಯಮಟ್ಟದ ಸಮಾಜ ಸೇವಾ ಪ್ರಶಸ್ತಿ ಪುರಸ್ಕೃತರಾದ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ  ಕೆದಮುಳ್ಳೂರು ಗ್ರಾ. ಪಂ. ಸದಸ್ಯರಾದ ಮೀತಲತಂಡ ಎಂ. ಇಸ್ಮಾಯಿಲ್ ಅವರನ್ನು ಕೆದಮುಳ್ಳೂರು ಗ್ರಾ.ಪಂ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕೆದಮುಳ್ಳೂರು ಗ್ರಾ. ಪಂ. ಅಧ್ಯಕ್ಷರಾದ  ಮಾಳೇಟಿರ ಜಫ್ರಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಸಾಧನೆಗಾಗಿ ಇಸ್ಮಾಯಿಲ್ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಅಲ್ಲದೆ ತಾಲೂಕು ಮಟ್ಟದ ಅತ್ಯುತ್ತಮ ಕಂಪ್ಯೂಟರ್ ಆಪರೇಟರ್ ಎಂಬ ವಿಶೇಷ ಪುರಸ್ಕಾರಕ್ಕೆ ಭಾಜನರಾದ ಕೆದಮುಳ್ಳೂರು ಗ್ರಾ.ಪಂ. ಯ ಡಾಟಾ ಎಂಟ್ರಿ ಆಪರೇಟರ್ ಬಿ.ಜಿ.ಕಾವ್ಯ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಳೇಟಿರ ಜಫ್ರಿ ಉತ್ತಪ್ಪ, ಸತತವಾಗಿ 3ನೇ ಬಾರಿಗೆ…

Read More

ಮಡಿಕೇರಿ NEWS DESK ಮಾ.2 : ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರೊಂದಿಗೆ ಇತರರ ಪ್ರೋತ್ಸಾಹ ಕೂಡ ಅತ್ಯಗತ್ಯ. ಕ್ರೀಡಾಕ್ಷೇತ್ರದಲ್ಲಿಯೂ ವಿನೂತನ ಪ್ರಯತ್ನಗಳು ಆದಾಗ ಮತ್ತಷ್ಟು ಕ್ರೀಡಾಪಟುಗಳು ಬೆಳಕಿಗೆ ಬರಲು ಸಾಧ್ಯ ಎಂದು ಕೊಡಗಿನ ಹೆಸರಾಂತ ಬಾಸ್ಕೆಟ್ ಬಾಲ್ ಆಟಗಾತಿ೯  ಮಂಡೆಪಂಡ ಡಾ. ಪುಪ್ಪಾ ಕುಟ್ಟಣ್ಣ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ 55 ಲಕ್ಷ ರು. ವೆಚ್ಚದಲ್ಲಿ ಸ್ಫಾಪನೆಯಾದ ತನ್ನದೇ ಹೆಸರಿನ ಡಾ. ಪುಪ್ಪಾ ಕುಟ್ಟಣ್ಣ ಬಾಸ್ಕೆಟ್ ಬಾಲ್ ಕೋಟ್೯ ಉದ್ಘಾಟಿಸಿ ಮಾತನಾಡಿದ  ಅಂತರರಾಷ್ಟ್ರೀಯ  ಬಾಸ್ಕೆಟ್ ಬಾಲ್  ಮಾಜಿ   ಆಟಗಾತಿ೯ಯೂ ಆಗಿರುವ ಪುಪ್ಪಾಕುಟ್ಟಣ್ಮ , ಅನೇಕ ಸ್ಥಳಗಳಲ್ಲಿ ನಿಮಾ೯ಣವಾಗಿರುವ ಬಾಸ್ಕೆಟ್ ಬಾಲ್ ಕೋಟ್೯ಗಿಂತ ಕೊಡಗು ವಿದ್ಯಾಲಯದಲ್ಲಿ ನಿಮಾ೯ಣವಾದ ಕ್ರೀಡಾಂಗಣ ವಿನೂತನವಾಗಿದೆ. ಕೊಡಗಿನಲ್ಲಿ ಇಂಥ ಹೊಸತನದ ಪ್ರಯತ್ನಕ್ಕೆ ಕೊಡಗು ವಿದ್ಯಾಲಯ ಮುಂದಾಗಿರುವುದು ಶ್ಲಾಘನೀಯ ಎಂದರು. ತನ್ನ ಹೆಸರಿನಲ್ಲಿಯೇ ಬಾಸ್ಕೆಟ್ ಬಾಲ್  ಕೋಟ್೯  ನಿಮಾ೯ಣವಾಗಿರುವುದು ತನ್ನ ಕ್ರೀಡಾಜೀವನದಲ್ಲಿಯೇ ಸ್ಮರಣೀಯವಾಗಿದೆ ಎಂದೂ ಅವರು ಧನ್ಯತಾ ಭಾವದಿಂದ ಹೇಳಿದರು. ಪ್ರತೀ ಕ್ರೀಡಾಸಾಧಕರಿಗೆ ಮುಖ್ಯವಾಗಿ ಛಲ,…

Read More

ಮಡಿಕೇರಿ NEWS DESK ಮಾ.2 : ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಮತ್ತು ಜನಪರ ಅಂಶಗಳನ್ನು ಅಳವಡಿಸುವಂತೆ ಒತ್ತಾಯಿಸಿರುವ ವಿವಿಧ ಬೇಡಿಕೆಗಳ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ರಚಿಸಿರುವ “ಜನತಾ ಬಜೆಟ್” ಪ್ರತಿಯನ್ನು ಪಕ್ಷದ ಪ್ರಮುಖರು ಶಾಸಕದ್ವಯರಿಗೆ ಸಲ್ಲಿಸಿದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಸಿನ್ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ನಗರದಲ್ಲಿ ಭೇಟಿಯಾಗಿ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಮನವಿ ಮಾಡಿದರು. 2025-26 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುವ ಸಂದರ್ಭ ವನ್ಯಜೀವಿಗಳ ಸಮಸ್ಯೆ, ರೈತರ ಹಾಗೂ ಕಾರ್ಮಿಕ ಸಂಕಷ್ಟಗಳಿಗೆ ಪರಿಹಾರ, ಶಿಕ್ಷಣಕ್ಕೆ ಒತ್ತು ನೀಡಿ ಕಾನೂನು ಕಾಲೇಜು ಸ್ಥಾಪನೆ, ಉನ್ನತ ಶಿಕ್ಷಣದ ತರಬೇತಿ ಕೇಂದ್ರಗಳ ಆರಂಭ, ಕೊಡಗು ವಿವಿಯನ್ನು ಜಿಲ್ಲೆಯಲ್ಲೇ ಉಳಿಸುವುದು, ಜನರ ಆರೋಗ್ಯದ ಹಿತದೃಷ್ಟಿಯಿಂದ ಮಲ್ಟಿ ಸ್ಪೆಷಾಲಿಟಿ…

Read More