ಲೇಖಕ: admin

ಮಡಿಕೇರಿ NEWS DESK ಮಾ.2 : ಅಮ್ಮತ್ತಿ ಫ್ರೆಂಡ್ಸ್ ಹಾಗೂ ಕೊಡಗು ಮುಸ್ಲಿಂ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ 6ನೇ ವರ್ಷದ ಕೊಡಗು ಜಿಲ್ಲಾ ಮುಸ್ಲಿಂ ಕಪ್ ಕಾಲ್ಚೆಂಡು ಪಂದ್ಯಾವಳಿ ಏಪ್ರಿಲ್ 23 ರಿಂದ 27 ರವರೆಗೆ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅಮ್ಮತ್ತಿ ಫ್ರೆಂಡ್ಸ್ ಕ್ರೀಡಾಕೂಟದ ಆಯೋಜಕ ಶಮೀರ್ ಅಮ್ಮತ್ತಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ  ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಚಾಂಪಿಯನ್ ತಂಡಕ್ಕೆ ಕೊಡಗಿನ ಮುಸ್ಲಿಂ ಕಪ್ ಇತಿಹಾಸದಲ್ಲಿ ಅತಿ ಹೆಚ್ಚು ನಗದು ರೂ.101111 ಮತ್ತು ಟ್ರೋಫಿ, ದ್ವಿತೀಯ ರೂ.50555 ಮತ್ತು ಟ್ರೋಫಿ, ತೃತೀಯ ರೂ.20222 ಮತ್ತು ಟ್ರೋಫಿ, ನಾಲ್ಕನೇ ಬಹುಮಾನ ರೂ.10111 ಮತ್ತು ಟ್ರೋಫಿ ಹಾಗೂ ಹಲವಾರು ವೈಯುಕ್ತಿಕ ಟ್ರೋಫಿಗಳನ್ನು ನೀಡಲಾಗುವುದು. ಮೈದಾನ ಶುಲ್ಕ 3 ಸಾವಿರ ರೂ. ನಿಗಧಿ ಪಡಿಸಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚಿನ‌ ಮಾಹಿತಿಗಾಗಿ 8861775265 ನ್ನು ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ NEWS DESK ಮಾ.2 : ವಿಭಿನ್ನ ನಿರೂಪಣಾ ಶೈಲಿ, ಪಾತ್ರ ಪೋಷಣೆ ಮತ್ತು ಕೊಡಗಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಥಾ ವಸ್ತುವಿನ ಚಲನಚಿತ್ರಗಳನ್ನು ನಿರ್ದೇಶಿಸುವ ಮೂಲಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ವರೆಗೂ ಸಿನಿ ಹೆಜ್ಜೆಯನ್ನು ಬೆಳೆಸಿ ಸಿನಿಮಾರಂಗದಲ್ಲಿ ಕೊಡಗಿನ ಪ್ರತಿಭೆಗಳ ಇರುವಿಕೆಯನ್ನು ಸಾಕ್ಷೀಕರಿಸಿದ ಪ್ರಶಸ್ತಿ ವಿಜೇತ ನಿರ್ದೇಶಕ, ನಟ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ “ಕಾಂಗತ ಮೂಡ್ (ದಿ ಶ್ಯಾಡೋ)” ಕೊಡವ ಚಲನಚಿತ್ರ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ “ಕಾಂಗತ ಮೂಡ್”(“(The Shadow)  16ನೇ ಚಲನಚಿತ್ರೋತ್ಸವದ ಕನ್ನಡ ಸ್ಪರ್ಧಾ ವಿಭಾಗದಲ್ಲಿ ಆಯ್ಕೆಯಾಗಿದೆ. ಬೆಂಗಳೂರಿನ ರಾಜಾಜಿನಗರದ ಒರೆಯನ್ ಮಾಲ್ ನಲ್ಲಿ ಮಾರ್ಚ್ 1 ರಿಂದ 8ರ ವರೆಗೆ ನಡೆಯುತ್ತಿರುವ ಚಲನಚಿತ್ರೋತ್ಸವದಲ್ಲಿ “ಕಾಂಗತ ಮೂಡ್” ಎರಡು ಪ್ರದರ್ಶನ ಕಾಣಲಿದೆ. ಮಾ.2 ರಂದು ಮಧ್ಯಾಹ್ನ 3 ಗಂಟೆಗೆ ರಾಜ್ ಕುಮಾರ್ ಭವನ್ ಮತ್ತು ಮಾ.6ರಂದು ಮಧ್ಯಾಹ್ನ…

Read More

ಮಡಿಕೇರಿ ಮಾ.1 NEWS DESK : ಮಡಿಕೇರಿ ಬ್ರಹ್ಮಕುಮಾರಿ ಲೈಟ್‍ಹೌಸ್‍ ನಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಶಿವ ದ್ವಜರೋಹಣ ಹಾಗೂ 89 ನೇ ತ್ರಿಮೂರ್ತಿ ಶಿವ ಜಯಂತಿ ಕಾರ್ಯಕ್ರಮ ನಡೆಯಿತು.  ಬ್ರಹ್ಮಕುಮಾರಿ ಲೈಟ್‍ಹೌಸ್‍ ನ ಜಿಲ್ಲಾ ಸಂಚಾಲಕಿ, ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿ ಜಿ, ಹಿರಿಯ ವಕೀಲರಾದ ಬಾಲ ಸುಬ್ರಮಣ್ಯ ಪಂಜರ್ಪಣೆ, ಇಎನ್‍ಟಿ ತಜ್ಞ ಡಾ.ಮೋಹನ್ ಅಪ್ಪಾಜಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಲೈಟ್‍ಹೌಸ್ ಮುಂಭಾಗ ಧ್ವಜಾರೋಹಣ ನೆರವೇರಿಸಿದರು. ನೆರೆದಿದ್ದ ಎಲ್ಲರು ವಿಶೇಷ ಜ್ಯೋತಿರ್ಲಿಂಗ ದರ್ಶನ ಪಡೆದರು. ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗೋಣಿಕೊಪ್ಪಲಿನ ಲೋಪಮುದ್ರೆ ಆಸ್ಪತ್ರೆಯ ಡಾ.ಅಮೃತ ನಾಣಯ್ಯ ಉದ್ಘಾಟಿಸಿ, ಆಸ್ಪತ್ರೆಯ ಸೇವಾ ಭಾವನೆಯ ಹಿನ್ನೆಲೆಯನ್ನು ತಿಳಿಸಿದರು. ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಶಿವ ಸ್ಮೃತಿ ಹಾಡಿ ಶುಭಹಾರೈಸಿದರು. ಕೊಡಗು ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ವಾತ್ಸಲ್ಯ ರಮೇಶ್, ಕುಮಾರಿ ಅಧಿತಿ, ಚಿನ್ಮಯಿ ಶಿವ ನೃತ್ಯ ಮಾಡಿದರು. ಕುಷಿ ನೃತ್ಯದ ಮೂಲಕ ಗಮನ ಸೆಳೆದರು. ಕಾರ್ಯಕ್ರಮದ ನಂತರ ನೆರೆದಿದ್ದವರಿಗೆ ಪ್ರಸಾದ ವಿತರಣೆ…

Read More

ಕಣಿವೆ ಮಾ.1 NEWS DESK : ಕುಶಾಲನಗರದ ಬೈಚನಹಳ್ಳಿಯ ಗ್ರಾಮದೇವತೆ ಮಾರಮ್ಮ ದೇವರ ವಾರ್ಷಿಕ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.  ದೇವಾಲಯದ ಪ್ರಧಾನ ಅರ್ಚಕ ಉಮೇಶ್ ಹೊಳ್ಳ ನೇತೃತ್ವದಲ್ಲಿ ಹರಿಶ್ಚಂದ್ರ ಭಟ್, ವೇದವ್ಯಾಸ ಭಟ್, ಸೋಮಶೇಖರ ಭಟ್, ಗಿರೀಶ್ ಭಟ್, ರಾಘವೇಂದ್ರ ಭಟ್ ಸುಬ್ರಮಣ್ಯ ಭಟ್ ಅರ್ಚಕರ ತಂಡ ಹೋಮ ಹವನಾದಿ ಧಾರ್ಮಿಕ ವಿಧಿಗಳನ್ನು ನಡೆಸಿತು. ದೇವತಾ ಸಮಿತಿ ಅಧ್ಯಕ್ಷ ರಾಮದಾಸ್, ಕಾರ್ಯದರ್ಶಿ ಎಂ.ಎಂ.ಚರಣ್, ಕೋಶಾಧಿಕಾರಿ ಮುತ್ತಣ್ಣ, ನಿರ್ದೇಶಕರಾದ ಕೆ.ಎನ್.ಅಶೋಕ್, ಜಗದೀಶ್, ರಾಮಚಂದ್ರ ಸೇರಿದಂತೆ ಬೈಚನಹಳ್ಳಿಯ ಗೆಳೆಯರ ಬಳಗದ ಸದಸ್ಯರು ಇದ್ದರು. ದೇವಾಲಯದಲ್ಲಿ ಮಹಿಳಾ ತಂಡದಿಂದ ಭಜನೆ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ, ಅನ್ನಸಂತರ್ಪಣೆ ನೀಡಲಾಯಿತು. ಪೂಜಾ ಅಂಗವಾಗಿ  ಗುಡಿಯೊಳಗಿನ ಅಮ್ಮನವರನ್ನು ಬಗೆ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ದೇವಾಲಯವನ್ನು ತಳಿರು ತೋರಣಗಳಿಂದ ಅಕಂಕರಿಸಲಾಗಿತ್ತು.

Read More

ಮಡಿಕೇರಿ ಮಾ.1 NEWS DESK : ನಗರದಲ್ಲಿರುವ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ ನೀಡಿ ವೀಕ್ಷಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗಿರುವ ಪುಸ್ತಕಗಳ ಬಗ್ಗೆ ಮಾಹಿತಿ ಪಡೆದರು. ಹಾಗೆಯೇ ಸುಳ್ಯ ಮತ್ತು ಮಡಿಕೇರಿ ತಾಲ್ಲೂಕಿನ ಸ್ಥಳನಾಮ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಅಕಾಡೆಮಿ ಚಟುವಟಿಕೆ ಸಂಬಂಧಿಸಿಸಿದಂತೆ ದಾಖಲೆಗಳ ಪುಸ್ತಕ ಇರಬೇಕು. ಜೊತೆಗೆ ಇವುಗಳ ಬಗ್ಗೆ ಅಧ್ಯಯನ ಮಾಡುವಂತಾಗಬೇಕು. ಅರೆಭಾಷೆಯಲ್ಲಿ ಉತ್ತಮ ಪುಸ್ತಕಗಳನ್ನು ಪ್ರಕಟಿಸಿರುವುದು ಶ್ಘಾಘನೀಯ ಕಾರ್ಯವಾಗಿದೆ ಎಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕಳೆದ 12 ವರ್ಷದಲ್ಲಿ ಸಂಶೋಧನಾ ಹೊತ್ತಿಗೆ, ಪ್ರಬಂಧ, ಲೇಖನ, ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ 80 ಕ್ಕೂ ಹೆಚ್ಚು ಪುಸ್ತಕಗಳು ಪ್ರಕಟಗೊಂಡಿವೆ. ಹಾಗೆಯೇ ತ್ರೈಮಾಸಿಕ ಪತ್ರಿಕೆ ‘ಹಿಂಗಾರ’ 34 ಸಂಚಿಕೆ ಪ್ರಕಟಗೊಂಡಿದೆ ಎಂದು…

Read More

ಮಡಿಕೇರಿ ಮಾ.1 NEWS DESK : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಖಂಡಿಸಿ, ಕಾರ್ಮಿಕ ವರ್ಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾ.3 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯಲಿರುವ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ “ವಿಧಾನಸೌಧ ಚಲೋ” ಅಂಗವಾಗಿ ಮಡಿಕೇರಿಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಪ್ರಚಾರ ಆಂದೋಲನ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಾವೇಶಗೊಂಡ ಸಿಐಟಿಯು ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಪ್ರಚಾರ ಆಂದೋಲನಕ್ಕೆ ಚಾಲನೆ ನೀಡಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು, ಕಾರ್ಮಿಕರ ಪರವಾದ ಕಾನೂನುಗಳನ್ನು ಜಾರಿ ಮಾಡಬೇಕು, ಬೆಲೆ ಏರಿಕೆಯ ಸೂಚ್ಯಾಂಕದಲ್ಲಿ ಹೆಚ್ಚಳವಾಗುವ ಪ್ರತಿ ಅಂಶಕ್ಕೂ ಪ್ರತಿದಿನಕ್ಕೆ 6 ಪೈಸೆ ತುಟ್ಟಿಭತ್ಯೆ (ಗಿಆಂ) ಯೊಂದಿಗೆ ಸಮಾನ ಕನಿಷ್ಟ ವೇತನ ಪರಿಷ್ಕರಿಸಿ ಜಾರಿ ಮಾಡಬೇಕು, ಪ್ರತಿ…

Read More

ಮಡಿಕೇರಿ ಮಾ.1 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಮಾ.7 ರಂದು ಮಂಡಿಸುವ ಬಜೆಟ್ ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಬೇಕು ಹಾಗೂ ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ‘ಕೊಡಗು ಜಿಲ್ಲೆಯ ಜನತಾ ಬಜೆಟ್-2025’ ಎಂಬ ಎಸ್‍ಡಿಪಿಐಯ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ‘ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್-2025’ ಎನ್ನುವ ಬೇಡಿಕೆಗಳ ಕೈಪಿಡಿಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದೆ ಎಂದರು. :: ಕೊಡಗು ವಿವಿ ಉಳಿಸಿ ::  ಕೊಡಗು ವಿಶ್ವ ವಿದ್ಯಾಲಯ ಸೇರಿದಂತೆ ರಾಜ್ಯದ ಒಟ್ಟು 9 ನೂತನ ವಿವಿಗಳನ್ನು ಮುಚ್ಚುವ ದೂರದೃಷ್ಟಿ ರಹಿತವಾದ ಚಿಂತನೆಯನ್ನು ಸರ್ಕಾರ ಮಾಡಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಯ ಮೂಲಕ ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದ…

Read More

ಮಡಿಕೇರಿ ಮಾ.1 NEWS DESK : ಮಡಿಕೇರಿ ನಗರದ ವಾರ್ಡ್ ನಂ.10 ರ ಮಾರುಕಟ್ಟೆ ವ್ಯಾಪ್ತಿಯಲ್ಲಿರುವ ಕೋಳಿ ಮಾಂಸದ ಅಂಗಡಿ ಹಾಗೂ ಕಸಾಯಿ ಖಾನೆ ಹಿಂಭಾಗದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ಕಲುಷಿತ ನೀರು ನಿಲುಗಡೆಯಿಂದ ಗ್ರಾಹಕರು, ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದು ಉತ್ತಮ ಚರಂಡಿ ಹಾಗೂ ಸಾರ್ವಜನಿಕರಿಗಾಗಿ ಶೌಚಾಲಯವನ್ನು ನಿರ್ಮಿಸಿಕೊಡುವಂತೆ ನಗರಸಭಾ ಸದಸ್ಯ ಎಂ.ಎ.ಮುಸ್ತಫಾ ಮನವಿ ಮಾಡಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಶಾಸಕ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು. ಮಾರುಕಟ್ಟೆ ವ್ಯಾಪ್ತಿಯಲ್ಲಿರುವ ಕೋಳಿ ಮಾಂಸದ ಅಂಗಡಿ ಹಾಗೂ ಕಸಾಯಿ ಖಾನೆ ಹಿಂಭಾಗದಲ್ಲಿ ಸೂಕ್ತ ಚರಂಡಿ ಹಾಗೂ ಶೌಚಾಲಯದ ವ್ಯವಸ್ಥೆ ಇಲ್ಲದೆ ಗ್ರಾಹಕರು, ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ದುರ್ವಾಸನೆಯಿಂದ ತೊಂದರೆ ಅನುಭವಿಸುತ್ತಿದ್ದು, ಸಾಂಕ್ರಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ. ಆದ್ದರಿಂದ  ಉತ್ತಮ ಚರಂಡಿ ಹಾಗೂ ಸಾರ್ವಜನಿಕರಿಗಾಗಿ ಶೌಚಾಲಯವನ್ನು ಒದಗಿಸಿ ಕೊಡಬೇಕೆಂದು ಮನವಿ ಮಾಡಿದರು.

Read More

ಮಡಿಕೇರಿ ಮಾ.1 NEWS DESK : ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಾಯಮುಡಿ ಕ್ಲಸ್ಟರ್ ನ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಕಲಿಕಾ ಹಬ್ಬವು ಒಂದು. ಇದು ವಿದ್ಯಾರ್ಥಿಗಳ ಕಲಿಕೆಯನ್ನು ಉತ್ತಮಪಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ಕಲಿಕಾ ಹಬ್ಬ, ಗಣಿತ ಆಂದೋಲನ, ಪ್ರತಿಭಾ ಕಾರಂಜಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಸಹಾಯಕವಾಗಿದೆ. ಬಿಸಿಯೂಟದೊಂದಿಗೆ ಆರು ದಿನವೂ ಮೊಟ್ಟೆ, ಹಾಲು, ರಾಗಿ, ಸಿರಿಧಾನ್ಯವನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ವಿದ್ಯಾರ್ಥಿ ವೇತನ, ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್ ಸೌಲಭ್ಯವನ್ನು ಕೂಡ ಕಲ್ಪಿಸುತ್ತಿದೆ. ಇದೆಲ್ಲವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಶೈಕ್ಷಣಿಕ ಗುರಿ ಸಾಧಿಸಬೇಕೆಂದು ಎ.ಎಸ್.ಟಾಟು ಮೊಣ್ಣಪ್ಪ ಕರೆ ನೀಡಿದರು. ಕಲಿಕಾ ಹಬ್ಬದ ವಸ್ತು ಪ್ರದರ್ಶನ ಅತ್ಯುತ್ತಮವಾಗಿ…

Read More

ಮಡಿಕೇರಿ ಮಾ.1 NEWS DESK : ಮಡಿಕೇರಿಯ ಇತಿಹಾಸ ಪ್ರಸಿದ್ಧ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದ್ದು, ದೇವಾಲಯದ ಪ್ರಧಾನ ಅರ್ಚಕರು ಒಳಗೊಂಡಂತೆ ಒಂಭತ್ತು ಮಂದಿ ಸದಸ್ಯರುಗಳನ್ನು ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ. ದೇವಾಲಯದ ಪ್ರಧಾನ ಅರ್ಚಕರಾದ ಸಂತೋಷ್ ಭಟ್, ವಿಶಾಲ್ ನಂದಕುಮಾರ್, ಎ.ಸಿ.ದೇವಯ್ಯ, ಕನ್ನಂಡ ಕವಿತಾ ಕಾವೇರಮ್ಮ, ಕೆ.ವೀಣಾಕ್ಷಿ, ಎಂ.ಎ.ನಿರಂಜನ್, ಜಿ.ರಾಜೇಂದ್ರ, ಅಂಬೆಕಲ್ ಕುಶಾಲಪ್ಪ, ಎ.ಎಸ್.ಪ್ರಕಾಶ್ ಅವರುಗಳನ್ನು ಸಮಿತಿ ಸದಸ್ಯರಾಗಿ ನೇಮಕ ಮಾಡಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ ಡಾ.ಎಂ.ವಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

Read More