ವಿರಾಜಪೇಟೆ ಮಾ.1 NEWS DESK : ವಿರಾಜಪೇಟೆ ಚಿಕ್ಕಪೇಟೆಯ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಶಾಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಹೆಚ್.ಎಂ.ಗೌರಿ ಅವರನ್ನು ಬ್ಯಾಂಕ್ ನ ಸಿಬ್ಬಂದಿಗಳು ಆತ್ಮೀಯವಾಗಿ ಬೀಳ್ಕೊಟ್ಟರು. ಬ್ಯಾಂಕ್ ಶಾಖೆ ಸಭಾಂಗಣದಲ್ಲಿ ಗೌರಿ ಅವರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಹಾಸನ ವಿಭಾಗದ ಹಾಗೂ ಕೊಡಗು ವಲಯದ ಸಹ ಕಾರ್ಯದರ್ಶಿ ಜೇಮ್ಸ್ ಮೆನೆಜಸ್ ಹಾಜರಿದ್ದರು.
ಲೇಖಕ: admin
ಕುಶಾಲನಗರ ಮಾ.1 NEWS DESK : ಸಂಸ್ಕೃತ ಭಾಷೆ ದೇವರ ಭಾಷೆ, ಜನರ ಭಾಷೆ ಹಾಗೂ ಶ್ರೀಮಂತರ ಭಾಷೆಯಾಗಿತ್ತು. ಜನಸಾಮಾನ್ಯರಿಗೆ ಸಂಸ್ಕೃತ ಭಾಷೆ ಕಬ್ಬಿಣದ ಕಡಲೆಯಾಗಿತ್ತು. ಇಂತಹ ಸಂದರ್ಭದಲ್ಲಿ ಕನ್ನಡ ಭಾಷೆಯನ್ನು ಉಳಿಸಲು ಹಾಗೂ ಬೆಳೆಸಲು ವಿಕ್ರಮಾರ್ಜುನ ವಿಜಯ ಹಾಗೂ ಆದಿ ಪುರಾಣ ಗ್ರಂಥಗಳನ್ನು ಬರೆದ ಪಂಪ ಮಹಾಕವಿ ಕನ್ನಡ ಭಾಷೆಗೆ ಶ್ರೇಷ್ಠತೆಯನ್ನು ತಂದು ಕೊಟ್ಟ ಮೇರು ಕವಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದ ರಾಜ್ ಬಣ್ಣಿಸಿದರು. ಕೊಡಗು ಜಿಲ್ಲಾ ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ” ಸಾಹಿತ್ಯ ಮಂಥನ ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕನ್ನಡ ಮಾತನಾಡಿದರೆ ಕೀಳರಿಮೆ. ಇಂಗ್ಲೀಷ್ ಮಾತನಾಡಿದರೆ ಹಿರಿಮೆ ಎಂದು ಬೀಗುತ್ತಿರುವ ಪರಿಸ್ಥಿತಿ ಅಂದು ಪಂಪನ ಕಾಲಘಟ್ಟದಲ್ಲಿ ಇದ್ದುದರಿಂದ ಮೇಲ್ವರ್ಗದ ಮಂದಿ ಅಂದು ಸಂಸ್ಕೃತ ಭಾಷೆಯನ್ನು ವೈಭವೀಕರಿಸಿ ಕನ್ನಡ ಭಾಷೆಯನ್ನು ಕಡೆಗಣಿಸಿದ್ದರಿಂದಾಗಿ ಪಂಪ ಮಹಾಕವಿ ಮೈಕೊಡವಿ ನಿಂತು ಕನ್ನಡ ಸಾಹಿತ್ಯಕ್ಕೆ ಅಪಾರ ಶ್ರೀಮಂತಿಕೆ…
ವಿರಾಜಪೇಟೆ ಮಾ.1 NEWS DESK : ವಿರಾಜಪೇಟೆ ನಗರದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್.ಘಟಕದ ವಾರ್ಷಿಕ ಶಿಬಿರವು ಮಾ.4 ರಿಂದ ಮಾ.10ರ ವರೆಗೆ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಮಾ.4 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಶಿಬಿರವನ್ನು ಉದ್ಘಾಟಿಸಲಿದ್ದು, ಬೇಟೋಳಿ ಗ್ರಾ.ಪಂ ಅಧ್ಯಕ್ಷ ಅಚ್ಚಪಂಡ ಬೋಪಣ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಆರ್.ರಾಜೇಶ್, ಜಿ.ಪಂ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು, ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಉದ್ಯಮಿಗಳಾದ ಸಜೇಶ್ ಭರತನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಕೆ.ಟಿ.ಹೇಮಲತಾ ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಶಿಬಿರದ ದಿನಗಳಂದು ವಿದ್ಯಾರ್ಥಿಗಳಿಂದ ಶ್ರಮದಾನ, ಸ್ವಚ್ಛತಾ ಅಭಿಯಾನ ಕಾರ್ಯಕ್ರಮ, ಆರೋಗ್ಯ ಜಾಗೃತಿ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು ನಡೆಯಲಿವೆ. ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಡಿ.ಡಿ.ಪಿ.ಐ ಪೆರಿಗ್ರೀನ್ ಎಸ್ ಮಚಡೋ, ವಿರಾಜಪೇಟೆ…
ಕುಶಾಲನಗರ ಮಾ.1 NEWS DESK : ಕುಶಾಲನಗರ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಾಲಯದ 16ನೇ ವಾರ್ಷಿಕೋತ್ಸವ ಪ್ರಯುಕ್ತ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊಂದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು.
ಮಡಿಕೇರಿ ಮಾ.1 NEWS DESK : ಕೆಂಬಟ್ಟಿ ಸ್ಪೋರ್ಟ್ ಫೆಸ್ಟ್ ಆಯೋಜಿರುವ ಟೆನ್ನಿಸ್ ಬಾಲ್ ಕ್ರಿಕೆಟ್ ಲೋಗೋವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆ ಮಾಡಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಉಪಾಧ್ಯಕ್ಷರು, ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕ್ರಮ ಆಯೋಜಕರು ಹಾಜರಿದ್ದರು.
ಮಡಿಕೇರಿ ಮಾ.1 NEWS DESK : ವಿರಾಜಪೇಟೆ ತಾಲೂಕಿನ ಅರಮೇರಿಯಲ್ಲಿ, ಜೇನು ಹುಳ ಕಡಿತಕ್ಕೆ ಬಲಿಯಾಗಿ ಸಾವಿಗಿಡದ ಲೋಹಿತ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾoತ್ವನ ಹೇಳಿ ಸಹಾಯ ಹಸ್ತ ನೀಡಿದರು. ಈ ಸಂದರ್ಭ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ, ಪುರಸಭೆ ಸದಸ್ಯರಾದ ರಾಫಿ, ಮತೀನ್, ಉದಯ್ ಮಾದಪ್ಪ ಹಾಗೂ ಪ್ರಮುಖರು ಹಾಜರಿದ್ದರು.
ಮಡಿಕೇರಿ ಮಾ.1 NEWSDESK : ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿಯ ಪದಕ ವಿಜೇತ ಶ್ವಾನ “ಕಾಪರ್” ಹಾಗೂ ತರಬೇತುದಾರ ಹೆಡ್ ಕಾನ್ಸ್‌ಟೇಬಲ್ ಮನಮೋಹನ್ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿ, ಗೌರವಿಸಿದರು. ನಂತರ ಮಾತನಾಡಿ, ಕೊಡಗಿಗೆ ಹೆಮ್ಮೆ ತರುವಂತ ಪೊಲೀಸ್ ಸಿಬ್ಬಂದಿಗಳ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂಪೊಲೀಸ್ ಪ್ರಮುಖರು, ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಮಾ.1 NEWS DESK : ನಗರದ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಕ್ಲಬ್ ಮಹೀಂದ್ರ ರೆಸಾರ್ಟ್ ಸಹಯೋಗದಲ್ಲಿ ನಗರದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಯ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸಪ್ತಾಹಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿಗಳು ಭಿತ್ತಿ ಫಲಕ ಹಿಡಿದು, ಘೋಷಣೆ ಕೂಗುತ್ತ ಸಂಚಾರಿ ಅರಿವು ಮೂಡಿಸಿದರು. ಜ.ತಿಮ್ಮಯ್ಯ ವೃತ್ತದಿಂದ ಇಂದಿರಾಗಾಂಧಿ ವೃತ್ತದ ತನಕ ಜಾಥಾ ನಡೆಯಿತು. ಅನಂತರ ಮೈತ್ರಿ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ಈ ಸಂದರ್ಭ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಜಿಲ್ಲೆಯಲ್ಲಿ ರಸ್ತೆ ಅವಘಡಗಳು ಹೆಚ್ಚಾಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಇದೆ. ಇದರೊಂದಿಗೆ ಮದ್ಯ ಸೇವಿಸಿ ವಾಹನ ಚಲಾಯಿಸುವ ಪ್ರಕರಣಗಳು ಅಧಿಕವಾಗುತ್ತಿವೆ. ಈ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್‍ರಾಜ್, ಪ್ರೊಬೆಷನರಿ ಎಸ್.ಪಿ.ಡಾ.ಬೆನಕ ಪ್ರಸಾದ್, ಫೀ.ಮಾ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ.ಮೇ.ಬಿ.ರಾಘವ,…
ಮಡಿಕೇರಿ ಮಾ.1 NEWS DESK : ದೇವಸ್ತೂರಿನಲ್ಲಿ ನಡೆದ ಬಸ್ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಬೆನ್ನಲ್ಲೇ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಆಸ್ಪತ್ರೆಗೆ ಭೇಟಿ ನೀಡಿ ಸ್ವತಃ ತಾವೇ ಎಕ್ಸರೇ ಪರಿಶೀಲಿಸಿ ಸೂಕ್ತ ಚಿಕಿತ್ಸೆಗೆ ಸಹಕರಿಸಿದರು ಮಡಿಕೇರಿಯಿಂದ ದೇವಸ್ತೂರು ಕಾಲೂರು ಗ್ರಾಮಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಆಯ ತಪ್ಪಿಬಿದ್ದ ಪರಿಣಾಮ ಶಾಲ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅಭಿವೃದ್ಧಿ ಕಾರ್ಯದ ಪ್ರಗತಿ ಪರಿಶೀಲನೆಯಲ್ಲಿದ್ದ ಡಾ.ಮಂತರ್ ಗೌಡ ಕಾರ್ಯಕ್ರಮ ಮೊಟುಕುಗೊಳಿಸಿ ಆಸ್ಪತ್ರೆಗೆ ಭೇಟಿ ನೀಡಿದರು. ತಾವೇ ಗಾಯಾಳುಗಳ ಎಕ್ಸರೇ ಪರಿಶೀಲಿಸಿ ಚಿಕಿತ್ಸೆಗೆ ಸೂಚನೆ ನೀಡುವ ಮೂಲಕ ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿ ತಮ್ಮ ವೃತ್ತಿ ಪರ ಕರ್ತವ್ಯವನ್ನು ಪಾಲಿಸಿದ್ದಾರೆ. ಬಸ್ ಅತೀ ವೇಗದಲ್ಲಿ ಚಲಿಸಿದ ಕಾರಣ ಅಪಘಾತವಾಗಿದೆ ಎಂದು ಗಾಯಾಳುಗಳು ಶಾಸಕರೊಂದಿಗೆ ವಿವರಣೆ ನೀಡಿದ ಹಿನ್ನಲೆಯಲ್ಲಿ ಬಸ್ ಚಾಲಕನ ಮೇಲೆ ಸೂಕ್ತ ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಗಾಯಾಳುಗಳಿಗೆ ಯಾವುದೇ ರೀತಿಯ…
ಮಡಿಕೇರಿ NEWS DESK ಮಾ.1 : ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಚಿಕ್ಕ ಇಂದುವಾಡಿಯಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಮೈಸೂರಿನ ಲಿಖಿತ, ಶ್ರೀಲಕ್ಷಿö್ಮ, ಮಂಡ್ಯದ ಸುಹಾಸ್, ಶ್ರೇಯಸ್ ಹಾಗೂ ನಿತಿನ್ ಮೃತ ದುರ್ದೈವಿಗಳು. ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮಾ.1ರಂದು (ಇಂದು) ಬೆಳಿಗ್ಗೆ ಮಲೈಮಹದೇಶ್ವರ ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಎದುರಿಗೆ ಬಂದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟರು. ಭೀಕರ ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಟಿಪ್ಪರ್ ಮಗುಚಿಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಘಟನೆಯಿಂದ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.






