ಲೇಖಕ: admin

ಮಡಿಕೇರಿ ಮಾ.1 NEWS DESK : ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕೊಡಗು ಜಿಲ್ಲೆ ಡಿಎಆರ್ ಘಟಕದ ಹೆಡ್ ಕಾನ್ಸ್‍ಟೇಬಲ್ ಮನಮೋಹನ್ ಅವರ ಗರಡಿಯಲ್ಲಿ ತರಬೇತಿ ಪಡೆಯುತ್ತಿರುವ ಶ್ವಾನ “ಕಾಪರ್” ಬೆಳ್ಳಿಯ ಪದಕ (ದ್ವಿತೀಯ ಬಹುಮಾನ) ಪಡೆದಿರುವ ನಿಟ್ಟಿನಲ್ಲಿ ಮನಮೋಹನ್ ಅವರನ್ನು ಸನ್ಮಾನಿಸಲಾಯಿತು. ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್‍ರಾಜ್ ಅವರ ಮಾರ್ಗದರ್ಶನದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಸಶಸ್ತ್ರ ಘಟಕ ಮಡಿಕೇರಿಯ ನಿರೀಕ್ಷಕ ಆರ್‍ಪಿಐ ಚೆನ್ನನಾಯಕ್, ಆರ್‍ಎಸ್‍ಐ ಹನುಮಂತ ಕೌಜಲಗಿ, ಸಿಬ್ಬಂದಿಗಳಾದ ಅನಿಲ್, ಸುಧೀರ್, ವಿಜಯ್, ಶಶಿಕುಮಾರ್, ಮಂಜುನಾಥ್ ಮತ್ತು ಮಹಾವೀರ ಇತರ ಸಿಬ್ಬಂದಿಗಳು ಹಾಜರಿದ್ದರು. ಶಾಸಕರಿಂದ ಶ್ಲಾಘನೆ :: ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟ ದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕೊಡಗು ಜಿಲ್ಲೆ ಡಿಎಆರ್ ಘಟಕದ ಹೆಡ್ ಕಾನ್ಸ್ಟೇಬಲ್ ಮನಮೋಹನ್ ಅವರ ಗರಡಿಯಲ್ಲಿ ತರಬೇತಿ ಪಡೆಯುತ್ತಿರುವ ಶ್ವಾನ “ಕಾಪರ್“ ಬೆಳ್ಳಿಯ ಪದಕ (ದ್ವಿತೀಯ ಬಹುಮಾನ) ಪಡೆದಿರುವ ನಿಟ್ಟಿನಲ್ಲಿ ಮನಮೋಹನ್ ಅವರನ್ನು ಶಾಸಕ…

Read More

ವಿರಾಜಪೇಟೆ ಮಾ.1 NEWS DESK : ವಿಕಸಿತ ಭಾರತದ ಗುರಿ ತಲುಪಲು ವಿಜ್ಞಾನದ ಪಾತ್ರ ಅತೀ ಮಹತ್ವದ್ದಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.  ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾಗತಿಕ ನಾಯಕತ್ವದಲ್ಲಿ ಭಾರತೀಯ ಯುವಕರು ತನ್ನದೇಯಾದ ಕೊಡುಗೆಯನ್ನು ನೀಡುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಗುರುತಿಸುವುದರ ಮೂಲಕ ವಿಕಸಿತ ಭಾರತಕ್ಕೆ ಮುನ್ನಡಿಯಾಗಿರುತ್ತಾರೆ ಎಂದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹಾಗೂ ಉಪನ್ಯಾಸಕಿ ಹೇಮ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ವಿಜ್ಞಾನ ವಿಭಾಗದ ಉಪನ್ಯಾಸಕರಾದ ನಿಶಾ, ಜೋಶಿಕಾ, ಸೌಮ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆ ಗಳು ನಡೆಯಿತು.

Read More

ಮಡಿಕೇರಿ ಮಾ.1 NEWS DESK : ಕೊಡಗು ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಗೃಹ ರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯು ಖಾಲಿ ಇದ್ದು ತುರ್ತಾಗಿ ಅರ್ಹರನ್ನು ಅರ್ಹತೆಯ ಮೇರೆಗೆ ಸರ್ಕಾರದ ಮಟ್ಟದಲ್ಲಿ ಆಯ್ಕೆ ಮಾಡಬೇಕಾಗಿರುತ್ತದೆ. ಈ ಗೌರವ ಹುದ್ದೆಗೆ ಇಚ್ಛೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಚ್ಛೆಯುಳ್ಳ ಅಭ್ಯರ್ಥಿಗಳು ಜಿಲ್ಲಾಧಿಕಾರಿಗಳಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ 2025ರ ಏ.4 ರೊಳಗೆ ಸಲ್ಲಿಸುವಂತೆ ಪೌರರಕ್ಷಣೆ ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು, ಆರಕ್ಷಕ ಮಹಾ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.1 NEWS DESK  : ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಲು ತಿಳಿಸಿದ್ದು, ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾ.8 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದು,್ದ ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ  ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.1 NEWS DESK : ಕೊಡಗು ಜಿಲ್ಲೆಯಲ್ಲಿ ಕೊಡವ, ಅರೆಭಾಷಿಕರು ಸೇರಿದಂತೆ ಹಲವು ಸಣ್ಣ ಸಣ್ಣ ಭಾಷಿಕ ಸಮಾಜದವರು ಬದುಕಿನ ಬಂಡಿ ಸಾಗಿಸುತ್ತಿದ್ದು, ಎಲ್ಲಾ ಭಾಷಿಕರೂ ಕೊಡಗಿನ ಇತಿಹಾಸ ತಿಳಿದು, ಅಭಿವೃದ್ಧಿಯತ್ತ ಮುನ್ನಡೆಯಬೇಕು. ಸಣ್ಣ ಭಾಷೆಗಳನ್ನು ಉಳಿಸಿ ಬೆಳೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಕರೆ ನೀಡಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ ಶುಕ್ರವಾರ ನಡೆದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಜಾತಿ, ಭಾಷೆ ಮೇಲೆ ಸಂಘರ್ಷ ಮಾಡದೆ ಸಾಮರಸ್ಯದ ಬದುಕು ಕಾಣಬೇಕಿದೆ. ಎಲ್ಲರೂ ಒಂದಾಗಿ ಸಾಗಬೇಕಿದೆ. ಯಾವುದೇ ಸಣ್ಣ ಭಾಷೆಯಾದರೂ ಅದು ಉಳಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರತಿಪಾದಿಸಿದರು.’ ಮಕ್ಕಳಿಗೆ ಅರೆಭಾಷೆ ಜೊತೆಗೆ ನಾಡಿನ ಭಾಷೆ ಕನ್ನಡ ಹಾಗೆಯೇ ಸಂಪನ್ಮೂಲ ಭಾಷೆಯಾದ ಇಂಗ್ಲೀಷ್ ಭಾಷೆ ಕಲಿಸೋಣ. ಆದರೆ…

Read More

ಮಡಿಕೇರಿ ಮಾ.1 NEWS DESK : ಇದೇ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ-1 ನಡೆಯಲಿZ್ವ.  ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈ ಬಾರಿ 5240 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತೆಗೆದುಕೊಂಡಿದ್ದು, 4865 ಹೊಸ ವಿದ್ಯಾರ್ಥಿಗಳು, 375 ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 5, ಸೋಮವಾರಪೇಟೆ ತಾಲ್ಲೂಕಿನಲ್ಲಿ 8 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ :: ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಮಾರ್ಚ್, 21 ರಿಂದ ಏಪ್ರಿಲ್, 04 ರವರೆಗೆ ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಶಾಲೆಗಳ ಸಂಖ್ಯೆ 171. ಕೊಡಗು ಜಿಲ್ಲೆಯಲ್ಲಿ ಈ ಬಾರಿ 6997 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ವಾರ್ಷಿಕ…

Read More

ಕುಶಾಲನಗರ ಫೆ.28 NEWS DESK : ಗ್ಯಾರಂಟಿ ಯೋಜನೆಗಳಿಂದ ದಿವಾಳಿಯಾಗಿರುವ ರಾಜ್ಯ ಸರ್ಕಾರ ಈಗ ಶಿಕ್ಷಣ ಕ್ಷೇತ್ರವನ್ನು ಹೊಸಕಿ ಹಾಕಲು ಮುಂದಾಗಿದ್ದು, ಹೊಸದಾಗಿ ಸ್ಥಾಪಿಸಲಾಗಿರುವ ಹತ್ತು ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತನ್ನು ಮುಚ್ಚಲು ನಿರ್ಧರಿಸಿರುವುದು ಸರಿಯಲ್ಲ. ನಮ್ಮ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಲು ನಿರ್ಧರಿಸಿವುದನ್ನು ಖಂಡಿಸಿ ಕುಶಾಲನಗರದಲ್ಲಿ ಪಾದಯಾತ್ರೆ ನಡೆಸಲಾಗಿದೆ. ಈ ನಿರ್ಧರ ಹಿಂತೆಗೆದುಕೊಳ್ಳುವವರೆಗೂ ನಮ್ಮ ದನಿಯನ್ನು ಗಟ್ಟಿಗೊಳಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ವಿಶ್ವವಿದ್ಯಾಲಯದಿಂದ ಕುಶಾಲನಗರದವರೆಗೂ ನಡೆದ ಪಾದಯಾತ್ರೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಸಂಸದ ಯದುವೀರ್ ಮಾತನಾಡಿದರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ. ಇಂಥ ನಿರ್ಧಾರಗಳನ್ನು ಕೈಗೊಂಡಿರುವ ಸರ್ಕಾರಕ್ಕೆ ಆಡಳಿತ ನಡೆಸುವ ನೈತಿಕತೆ ಇಲ್ಲ. ಆಡಳಿತ ನಡೆಸಲು ಆಗದಿದ್ದರೆ ಕೆಳಗಿಳಿಯಲಿ ಎಂದು ಸಂಸದ ಯದುವೀರ್ ಗುಡುಗಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಅತ್ತ ಫಲಾನುಭವಿಗಳಿಗೆ ಹಣ ನೀಡುತ್ತಿಲ್ಲ, ಇತ್ತ ಅಭಿವೃದ್ಧಿ…

Read More

ಮಡಿಕೇರಿ ಫೆ.28 NEWS DESK : ವಿವಿಧ ಕ್ಷೇತ್ರದಲ್ಲಿ ಆಯ್ಕೆಯಾದ ಮಡಿಕೇರಿ ಕೊಡವ ಸಮಾಜದ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ಸಮಾಜದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಯಿತು. ಸೌಹಾರ್ಧ ಸಹಕಾರ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಲಾ ಗೌರವ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಹಾಗೂ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದ ಪಾಧಿಕಾರಿಗಳಾಗಿ ಆಯ್ಕೆಯಾದ ಕನ್ನಂಡ ಕವಿತ ಬೊಳ್ಳಪ್ಪ ಅವರನ್ನು ಆಡಳಿತ ಮಂಡಳಿಯವರು ಸನ್ಮಾನಿಸಿ ಗೌರವಿಸಿದರು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಕೇಕಡ ವಿಜುದೇವಯ್ಯ, ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಬೊಪ್ಪಂಡ ಸರಳಾ ಕರುಂಬಯ್ಯ, ಮಂಡಿರ ಸದಾಮುದ್ದಪ್ಪ, ಪುತ್ತರಿರ ಕರುಣ್ ಕಾಳಯ್ಯ, ಕಾಳಚಂಡ ಅಪ್ಪಣ್ಣ, ಶಾಂತೆಯಂಡ ವಿಶಾಲ್ ಕಾರ್ಯಪ್ಪ,ಕಾಂಡೆರ ಲಲ್ಲು ಕುಟ್ಟಪ್ಪ, ವ್ಯವಸ್ಥಾಪಕಿ ಮೈನಾ ಬೋಜಮ್ಮ ಹಾಜರಿದ್ದರು.

Read More

ಮಡಿಕೇರಿ ಫೆ.28 NEWS DESK : ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮವನ್ನು ವಿರೋಧಿಸಿ ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.  ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಸಂಘದ ಪ್ರಮುಖರು, ದೈವ ಆರಾಧಕರು ಹಾಗೂ ದೈವ ನರ್ತಕರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.  ಜಿಲ್ಲಾ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಮಾತನಾಡಿ, ಮನೋರಂಜನೆಯ ಕಲೆಯ ಸಾಲಿಗೆ ದೈವ ಆರಾಧನೆಯನ್ನು ಸೇರಿಸುವ ಕ್ರಮ ಸರಿಯಲ್ಲವೆಂದರು. ದೈವ ಆರಾಧನೆಯು ಕರಾವಳಿ ಸೇರಿದಂತೆ ಕೊಡಗು ಜಿಲ್ಲೆಯಲ್ಲು ಬಹುಮುಖ್ಯ ನಂಬಿಕೆ ಮತ್ತು ಆರಾಧನೆ ಪದ್ದತಿಯಾಗಿದ್ದು, ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ ಈಗಿನ ಸರ್ಕಾರ ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿರುವುದು ದೈವಾರಾಧನೆ ಮಾಡುವ ಕ್ಷೇತ್ರದ ಜನರಿಗೆ ನೋವುಂಟಾಗಿದೆ. ದೈವ ನರ್ತನ ಸೇವೆ ಮಾಡುವ ಕೆಲವೇ ಸೀಮಿತ ವರ್ಗದ…

Read More

ಮಡಿಕೇರಿ ಫೆ.28 NEWS DESK : ಕೊಡಗು ವಿಶ್ವವಿದ್ಯಾನಿಲಯವನ್ನು ರದ್ದುಗೊಳಿಸುವುದು ಹಾಗೂ ಇತರ ವಿಶ್ವ ವಿದ್ಯಾನಿಲಯದ ಜೊತೆ ವಿಲೀನಗೊಳಿಸುವ ಸರಕಾರದ ಚಿಂತನೆಯ ಬಗ್ಗೆ ಮಡಿಕೇರಿ ಕೊಡವ ಸಮಾಜ ಖಂಡನೆ ವ್ಯಕ್ತಪಡಿಸಿದೆ. ಮಡಿಕೇರಿ ಕೊಡವ ಸಮಾಜದಲ್ಲಿ ಅಧ್ಯಕ್ಷರಾದ ಮಂಡುವಂಡ ಪಿ.ಮುತ್ತಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆಮಾಡಬೇಕೆಂಬ ಶ್ರಮದ ಫಲವಾಗಿ ಇಂದು ಕೊಡಗು ವಿಶ್ವವಿದ್ಯಾನಿಲಯ ಪ್ರಾರಂಭಗೊಂಡು ಹೆಗ್ಗಳಿಕೆಗೆ ಕಾರಣವಾಗಿತ್ತು . ಆದರೆ ಏಕಾಏಕಿ ರದ್ದುಗೊಳಿಸುವ ತೀರ್ಮಾನ ಸರಿಯಲ್ಲ, ನಾವೆಲ್ಲ ರಾಜಕೀಯ ಬಿಟ್ಟು ಹೋರಾಡಬೇಕಿದೆ. ಕೊಡಗಿನ ಈರ್ವ ಶಾಸಕರು ಇದರ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಸರಕಾರದ ಗಮನಕ್ಕೆ ತಂದು ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಿಕೊಳ್ಳಬೇಕೆಂದರು. ಅಬ್ಕಾರಿ ಇಲಾಖೆಯ ನೂತನ ಸುತ್ತೋಲೆಯಂತೆ ಯಾವುದೇ ಸಮಾಜದ ಸಭೆ ಸಮಾರಂಭಗಳಲ್ಲಿ ಮದ್ಯ ಬಳಸಲು ಅನುಮತಿ ಪಡೆಯಬೇಕೆಂಬ ಕ್ರಮ ಸರಿಯಲ್ಲ. ಕೊಡಗಿನಲ್ಲಿ ಯಾವುದೇ ಹಬ್ಬಹರಿದಿನ, ಮದುವೆ, ಸಮಾರಂಭಗಳಲ್ಲಿ ಗುರುಕಾರೊಣನಿಗೆ ಮಧ್ಯವನ್ನು ಎಡೆ ಇಟ್ಟು ಎಲ್ಲರು ಸೇವಿಸುವುದು ಸಂಪ್ರದಾಯ. ದೇಶ ಸೇವೆಯಲ್ಲಿ ಸೇವೆಸಲ್ಲಿಸಿದ…

Read More