ಮಡಿಕೇರಿ ಮಾ.29 NEWS DESK : ಸುಳ್ಯ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಮೂರು ಧರ್ಮ ಗುರುಗಳನ್ನು ಸನ್ಮಾನಿಸಲಾಯಿತು. ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ಇಪ್ಪತ್ತನೇ ವರ್ಷದ ಸರ್ವಧರ್ಮ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮರ್ಕಂಜ ಅನ್ನಪೂರ್ಣೇಶ್ವರಿ ಕ್ಷೇತ್ರದ ಯೋಗೇಶ್ವರ ಸಿದ್ದ ಪುರುಷ ಮಠದ ಧರ್ಮದರ್ಶಿ ರಾಜೇಶ್ ನಾಥ್ ಜಿ., ಸುಳ್ಯ ಬೀರಮಂಗಲ ಸೈಂಟ್ ವಿಕ್ಟರ್ ಚರ್ಚ್‍ನ ಧರ್ಮ ಗುರು ಫಾದರ್ ವಿಕ್ಟರ್ ಡಿ’ಸೋಜಾ, ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಅವರನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಶಾಲು ಹೊದಿಸಿ ಸನ್ಮಾನಿಸಿದರು. ಇಫ್ತಾರ್ ಬಿಡುವ ಸಂದರ್ಭದಲ್ಲಿ ಧರ್ಮದರ್ಶಿ ರಾಜೇಶ್ ನಾಥ್ ಜಿ ಖರ್ಜುರವನ್ನು ಫಾದರ್ ವಿಕ್ಟರ್ ಡಿ’ಸೋಜ ಹಣ್ಣು ಹಂಪಲುಗಳನ್ನು ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ತಿನ್ನಿಸುವ ಮೂಲಕ ಭಾವೈಕ್ಯತೆಯ ಸಂದೇಶವನ್ನು ಸಾರಿದರು. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸುಳ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್…
ಲೇಖಕ: admin
ಮಡಿಕೇರಿ ಮಾ.29 NEWS DESK : ತಿಗಳ ಸಮಾಜದ ಮೂಲಪುರುಷ ಶ್ರೀ ಅಗ್ನಿಬನ್ನಿರಾಯ ಅವರ ಆದರ್ಶಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವಂತಾಗಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಶ್ರೀ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಗ್ನಿ ಬನ್ನಿರಾಯರಂತಹ ಮಹಾನ್ ಚೇತನಗಳ ಜೀವನಾದರ್ಶಗಳು ಮನುಕುಲದ ಹಾದಿಗೆ ಬೆಳಕಾಗಿದೆ ಎಂದು ಮಂಜುಳ ನುಡಿದರು. ಬೆಂಗಳೂರಿನ ಲಾಲ್‍ಬಾಗ್ ನಿರ್ಮಾಣಕ್ಕೆ ತಿಗಳ ಸಮಾಜ ಮೂಲ ಕಾರಣಕರ್ತರಾಗಿದ್ದಾರೆ. ತಿಗಳ ಸಮಾಜವು ಬೆಂಗಳೂರು, ತುಮಕೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಅವರು ಹೇಳಿದರು. ಪುರಾಣ, ಐತಿಹ್ಯಗಳಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಅವರ ಬಗ್ಗೆ ಉಲ್ಲೇಖವಿದ್ದು, ಸಮಾಜದಲ್ಲಿ ಶಾಂತಿ, ನೆಮ್ಮದಿಗೆ ಹಲವು ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪಿ.ಪಿ.ಕವಿತ ಮಾತನಾಡಿ ಸಮಾಜದಲ್ಲಿ ಪ್ರತಿಯೊಬ್ಬರೂ ಸಾಮಾಜಿಕವಾಗಿ,…
ಕುಶಾಲನಗರ ಮಾ.29 NEWS DESK : ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವುದರ ಜೊತೆಗೆ ತಮ್ಮ ಜೀವನದ ಗುರಿ ಸಾಧಿಸುವ ಛಲ ಹೊಂದಬೇಕೆಂದು ಐಗೂರು ಗ್ರಾಮ ಪಂಚಾಯಿತಿ ಸದಸ್ಯ ಬಿ.ಪಿ.ಜೋಯಪ್ಪ ಹೇಳಿದರು. ಕುಶಾಲನಗರ ಸಮೀಪದ ಯಡವನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕುಶಾಲನಗರ ಮಹಾತ್ಮಾ ಗಾಂಧಿ ಸ್ಮಾರಕ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024-25ರ ವಾರ್ಷಿಕ ವಿಶೇಷ ಶಿಬಿರದ ಎನ್.ಎನ್.ಎಸ್ ಜ್ಯೋತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಣದ ನಂತರ ಯುವ ಜನಾಂಗ ಸರಕಾರಿ ಉದ್ಯೋಗಕ್ಕೆ ಅವಲಂಬಿಸದೆ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅನ್ನದಾತರಾಗಬೇಕೆಂದು ಆಶಯ ವ್ಯಕ್ತಪಡಿಸಿದರು. ಕಾವೇರಿ ಸ್ವಚ್ಛತಾ ಅಭಿಯಾನದ ಸಂಚಾಲಕ ಎಂ.ಎನ್.ಚಂದ್ರಮೋಹನ್, ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಶಿಕ್ಷಣದೊಂದಿಗೆ ಶಿಕ್ಷಣೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಬೇಕು. ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಇದೇ ಸಂದರ್ಭ ಶಿಬಿರಕ್ಕೆ ಸಹಾಯ ಹಸ್ತ…
ಕುಶಾಲನಗರ, ಮಾ.29 NEWS DESK : ಅಸ್ಪೃಶ್ಯತೆ , ಅಸಮಾನತೆ ನಿವಾರಣೆಗೆ ಸಾಹಿತ್ಯ ಸಹಕಾರಿ. ಸಾಹಿತ್ಯವು ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಅಸಮಾನತೆಯನ್ನು ತೊಡೆದು ಹಾಕಿ ಜಾತ್ಯತೀತ ನೆಲೆಗಟ್ಟಿನ ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಖ್ಯಾತ ಸಾಹಿತಿ ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷ ಕಾಳೇಗೌಡ ನಾಗವಾರ ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕುಶಾಲನಗರ ಕನ್ನಡ ಭಾರತ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಚಕೋರ ಕೊಡಗು ಸಾಹಿತ್ಯ ವಿಚಾರ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಜಾತಿ ತಾನೊಂದೇ ವಲಂ ಎಂದು ಸಾರಿದ ಆದಿಕವಿ ಪಂಪ ನಮಗೆಲ್ಲಾ ಆದರ್ಶವಾಗಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಸಂದೇಶವನ್ನು ಸಾಕಾರಗೊಳಿಸುವುದು ಯುವ ಜನಾಂಗದ ಮೊದಲ ಆದ್ಯತೆಯಾಗಿದೆ ಎಂದು ಆಶಿಸಿದರು. ಮೌಢ್ಯ ಮತ್ತು ಅಸ್ಪೃಶ್ಯತಾ ರಹಿತ ಸಮಾಜ ಕಟ್ಟಲು ಪಂಪನಿಂದ ಮೊದಲು ಗಂಡು ವಚನಕಾರಾದಿಯಾಗಿ ಕನ್ನಡದ ಎಲ್ಲ ಸಾಹಿತಿಗಳು ಶ್ರಮಿಸಿದರು ಎಂದು ಹಿರಿಯ ಸಾಹಿತಿ…
ಮಡಿಕೇರಿ ಮಾ.29 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಅಮ್ಮತ್ತಿ ಕೊಡವ ಸಮಾಜದ ಸಹಯೋಗದಲ್ಲಿ ಎರಡು ದಿನಗಳ ಕಾಲ ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆಯುವ ಕೊಡವ ಬಲ್ಯನಮ್ಮೆ (ಕೊಡವ ಅಕಾಡೆಮಿ ಗೌರವ ಪ್ರಶಸ್ತಿ, ಪುಸ್ತಕ ಪ್ರಶಸ್ತಿ ಮತ್ತು ದುಡಿ-ತಾಳ ಕೊಡ್‍ಪ ಆಯಿಮೆ) ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಹೊಸೂರು ಜಂಕ್ಷನ್‍ನಿಂದ ಕೊಡವ ಸಮಾಜದವರೆಗೆ ಕೊಡವ ಸಾಂಸ್ಕೃತಿಕ ಜಾನಪದ ಮೆರವಣಿಗೆ ನಡೆಯಿತು. ಅಮ್ಮತ್ತಿ ನಾಡಿನ ಹಿರಿಯರು ಹಾಗೂ ಸಮಾಜ ಸೇವಕ ನೆಲ್ಲಮಕ್ಕಡ ಶಂಭು ಸೋಮಯ್ಯ, ಕಾವಾಡಿಚಂಡ ಯು.ಗಣಪತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ ಇದ್ದರು.
ಮಡಿಕೇರಿ ಮಾ.29 NEWS DESK : ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ ಗೌಡ ಜನಾಂಗಬಾಂಧವರ ನಡುವೆ 8ನೇ ವರ್ಷದ ಗೌಡ ಫುಟ್ಬಾಲ್ ಪಂದ್ಯಾವಳಿ ಮೇ 10 ರಂದು ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದೆ ಎಂದು ಅಕಾಡೆಮಿ ಕಾರ್ಯದರ್ಶಿ ಇಟ್ಟಣಿಕೆ ನವನೀತ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ 70 ತಂಡಗಳು ಪಾಲ್ಗೊಂಡಿತ್ತು. ಈ ಬಾರಿ 90 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸುಮಾರು 15 ಲಕ್ಷ ವೆಚ್ಚದಲ್ಲಿ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಏ.25 ತಂಡಗಳ ನೋಂದಾಣಿಗೆ ಕೊನೆ ದಿನವಾಗಿದ್ದು, ಆಸಕ್ತ ಜನಾಂಗಬಾಂಧವರು 9591711032, 9611502270 ಸಂಖ್ಯೆಯನ್ನು ಸಂಪರ್ಕಿಸಿ ಹೆಚ್ಚಿನ ತಂಡಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು. ಪ್ರಥಮ ಸ್ಥಾನ ಪಡೆದತಂಡಕ್ಕೆ 1 ಲಕ್ಷ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 50 ಸಾವಿರ ಹಾಗೂ ತೃತೀಯ, ಚತುರ್ಥ ಸ್ಥಾನ ಪಡೆದ ತಂಡಕ್ಕೆ ತಲಾ 15 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಜತೆಗೆ ವೈಯುಕ್ತಿಕ…
ಮಡಿಕೇರಿ ಮಾ.29 NEWS DESK : ಕೊಡವ ಕೌಟುಂಬಿಕ ‘ಮುದ್ದಂಡ ಕಪ್ ಹಾಕಿ ನಮ್ಮೆ’ಯ ಉದ್ಘಾಟನಾ ಸಮಾರಂಭದ ಆಕರ್ಷಕ ಪ್ರದರ್ಶನ ಪಂದ್ಯಗಳಲ್ಲಿ ಹಾಕಿ ಉತ್ಸವದ ಆಯೋಜಕ ತಂಡ ಮತ್ತು ಕೊಡವ ಹಾಕಿ ಅಕಾಡೆಮಿ ಇಲೆವೆನ್ ತಂಡಗಳು ಸೊಗಸಾದ ಆಟದ ಮೂಲಕ ಗೆಲುವು ಸಾಧಿಸಿದವು. ಪಂದ್ಯಾವಳಿ ಆಯೋಜಕ ತಂಡವು ಮೊದಲ ಪ್ರದರ್ಶನ ಪಂದ್ಯದಲ್ಲಿ ಕೊಡಗು ಜಿಲ್ಲಾಡಳಿತ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿತು. ವಿಜೇತ ತಂಡದ ಪರವಾಗಿ ಅಮ್ಮುಣಿಚಂಡ ವಿಘ್ನೇಶ್ ಬೋಪಣ್ಣ, ಮುದ್ದಂಡ ಆದ್ಯ ಪೂವಣ್ಣ ಹಾಗೂ ನೆಲ್ಲಮಕ್ಕಡ ಚಂಗಪ್ಪ ತಲಾ 1 ಗೋಲು ಸಿಡಿಸಿ ಗಮನ ಸೆಳೆದರು. ದ್ವಿತೀಯ ಪ್ರದರ್ಶನ ಪಂದ್ಯದಲ್ಲಿ ಕೊಡವ ಹಾಕಿ ಅಕಾಡೆಮಿ ಇಲೆವೆನ್ ತಂಡ 3-0 ಗೋಲುಗಳ ಅಂತರದಿಂದ ಕರ್ನಾಟಕ ಇಲೆವೆನ್ ತಂಡವನ್ನು ಪರಾಭವಗೊಳಿಸಿತು. ರೋಚಕತೆಯಿಂದ ಕೂಡಿದ್ದ ಪಂದ್ಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಪಂದ್ಯಗಳ ವೀಕ್ಷಕ ವಿವರಣೆಯನ್ನು ಚೆಪ್ಪುಡಿರ ಕಾರ್ಯಪ್ಪ ಹಾಗೂ ಮಾಳೇಟಿರ ಶ್ರೀನಿವಾಸ್ ನೀಡಿದರು.
ಮಡಿಕೇರಿ NEWS DESK ಮಾ.29 : ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮದಲ್ಲಿ ಪತ್ನಿ ಸೇರಿದಂತೆ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಗಿರೀಶ್ ನನ್ನು ಮಿಂಚಿನ ಕಾರ್ಯಾಚರಣೆಯ ಮೂಲಕ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಕೇರಳ ರಾಜ್ಯದ ತಲಪುಳ ಎಂಬ ಪ್ರದೇಶದಲ್ಲಿ ಗಿರೀಶ್ (38) ನನ್ನು ವಶಕ್ಕೆ ಪಡೆದಿದ್ದಾರೆ. ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ಒಂಟಿ ಗುಡಿಸಿಲಿನಲ್ಲಿ ವಾಸವಿದ್ದ ಬುಡಕಟ್ಟು ಜನಾಂಗದ ಕರಿಯ (75), ಗೌರಿ (70), ನಾಗಿ(30) ಹಾಗೂ ನಾಗಿಯ ಪುತ್ರಿ ಕಾವೇರಿ(7)ಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಗಿರೀಶ್ ತಲೆ ಮರೆಸಿಕೊಂಡಿರುವ ಆರೋಪದಡಿ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮೈಸೂರು ದಕ್ಷಿಣ ವಲಯ ಐಪಿಎಸ್ ಡಾ||ಎಂ.ಬಿ.ಬೋರಲಿAಗಯ್ಯ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಐಪಿಎಸ್, ಅಪರ ಪೊಲೀಸ್ ಅಧೀಕ್ಷಕ ಸುಂದರ್ ರಾಜ್.ಕೆ.ಎಸ್ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್.ಎಸ್, ಗೋಣಿಕೊಪ್ಪ ವೃತ್ತದ ಸಿಪಿಐ ಶಿವರಾಜ್ ಮುಧೋಳ್,…
ಮಡಿಕೇರಿ ಮಾ.28 NEWS DESK : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಬೆಳ್ಳಿ ಮಹೋತ್ಸವದ ‘ಮುದ್ದಂಡ ಕಪ್ ಹಾಕಿ ಉತ್ಸವ-2025’ಕ್ಕೆ ಶುಕ್ರವಾರ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ವಿದ್ಯುಕ್ತ ಚಾಲನೆ ದೊರಕಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ ಅವರು ‘ಬೆಳ್ಳಿಯ ಸ್ಟಿಕ್’ನಿಂದ ‘ಬೆಳ್ಳಿಯ ಚೆಂಡು’ ತಳ್ಳುವ ಮೂಲಕ ತಿಂಗಳ ಕಾಲ ದಾಖಲೆಯ 396 ತಂಡಗಳ ನಡುವೆ ನಡೆಯುವ ಹಾಕಿ ಉತ್ಸವವನ್ನು ಉದ್ಘಾಟಿಸಿದರು. ಕೊಡವ ಸಂಸ್ಕೃತಿ ಸಂರಕ್ಷಣೆಯ ‘ಹೆಜ್ಜೆ’ : ಕೊಡವ ಕುಟಂಬಗಳ ಅತ್ಯಂತ ವಿಶಿಷ್ಟವಾದ ‘ಐನ್ ಮನೆ’ ವಿನ್ಯಾಸದ ಅತ್ಯಾಕರ್ಷಕ ವೇದಿಕೆಯಲ್ಲಿ ಜ್ಯೋತಿಯನ್ನು ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಕೊಡವ ಹಾಕಿ ಅಕಾಡೆಮಿ ಸ್ಥಾಪನೆಗೆ ಕಾರಣರಾದ ಪಾಂಡಂಡ ಕುಟ್ಟಪ್ಪ ಅವರು 1997 ರಲ್ಲಿ ಆರಂಭಿಸಿದ ‘ಕೊಡವ ಕೌಟುಂಬಿಕ ಹಾಕಿ ನಮ್ಮೆ’ ಇದೀಗ ಇಪ್ಪತ್ತೈದು ವಸಂತಗಳನ್ನು ಪೂರೈಸಿದೆ. ಈ…
ಮಡಿಕೇರಿ ಮಾ.28 NEWS DESK : ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ದೈವಕೋಲ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಎರಡು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ವಿಶೇಷ ಪೂಜಾಕೈಂಕರ್ಯಗಳೊಂದಿಗೆ ಶ್ರೀ ವಿಷ್ಣುಮೂರ್ತಿ (ತೀ ಚಾಮುಂಡಿ), ರಕ್ತೇಶ್ವರಿ (ರಕ್ತ ಚಾಮುಂಡಿ), ಕುಟ್ಟಿಶಾಸ್ತಾನ್, ಉಚ್ಚಿಟ್ಟ ವೀರನ್ (ಗುರು) ಗುಳಿಗನ್, ಭೂತಂ (ನಕ್ಕಿಚ್ಚು), ಪಾಷಾಣಮೂರ್ತಿ (ಕಲ್ಲುಟ್ರ್ಟಿ) ಮತ್ತು ಅಜ್ಜಪ್ಪ ತೆರೆಗಳ ದೈವಕೋಲ ನಡೆಯಿತು. ಇಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವದ ಮೇಲೇರಿ ಮತ್ತು ರಕ್ತೇಶ್ವರಿ ದೈವಕೋಲ ಉತ್ಸವ ಜರುಗಿತು. ನೆರೆದಿದ್ದ ಭಕ್ತಾಧಿಗಳಿಗೆ ರಾತ್ರಿ ಅನ್ನದಾನ ನೆರವೇರಿತು. ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಆಡಳಿತ ಮಂಡಳಿ ಟ್ರಸ್ಟಿಗಳುಗಳು ಪಾಲ್ಗೊಂಡಿದ್ದರು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.






