ಲೇಖಕ: admin

ಮಡಿಕೇರಿ NEWS DESK ಮಾ.28 : ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ ಹಾಗೂ ಪತ್ನಿಯ ಅಜ್ಜ, ಅಜ್ಜಿಯನ್ನು ಭೀಕರವಾಗಿ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಘಟನೆ ಇಂದು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಗಿರೀಶ್(35) ಎಂಬಾತ ಕೊಲೆ ಆರೋಪಿಯಾಗಿದ್ದು, ಘಟನೆ ಬಳಿಕ ತಲೆ ಪರೆಸಿಕೊಂಡಿದ್ದಾನೆ. ಜೇನು ಕುರುಬರ ಕರಿಯ(75), ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(5) ಕತ್ತಿಯಿಂದ ಹತ್ಯೆಗೀಡಾದವರಾಗಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಗಿರೀಶ್ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ.

Read More

ಮಡಿಕೇರಿ NEWS DESK ಮಾ.28 : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ‘ಮುದ್ದಂಡ ಕಪ್ ಹಾಕಿ ಉತ್ಸವ’ ಇಂದು ಮಡಿಕೇರಿಯಲ್ಲಿ ಅದ್ದೂರಿಯಾಗಿ ಉದ್ಘಾಟನೆಗೊಂಡಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರು, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಬೋಪಣ್ಣ ಅವರು ಬೆಳ್ಳಿಯ ಸ್ಟಿಕ್ ನಿಂದ ಬೆಳ್ಳಿಯ ಚೆಂಡನ್ನು ತಳ್ಳುವ ಮೂಲಕ ‘ಮುದ್ದಂಡ ಕಪ್ ಹಾಕಿ ಉತ್ಸವ’ ವನ್ನು ಉದ್ಘಾಟಿಸಿದರು. ಒಲಂಪಿಯನ್ ಎ.ಬಿ.ಸುಬ್ಬಯ್ಯ ಅವರು ಕ್ರೀಡಾಜ್ಯೋತಿ ಬೆಳಗಿದರು. ಇದಕ್ಕೂ ಮೊದಲು ಜನರಲ್ ತಿಮ್ಮಯ್ಯ ವೃತ್ತದಿಂದ ಕ್ರೀಡಾಜ್ಯೋತಿಯನ್ನು ಮೆರವಣಿಗೆ ಮೂಲಕ ಮೈದಾನಕ್ಕೆ ತರಲಾಯಿತು. ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿದ್ದ ಕೊಡವರು ಮೆರವಣಿಗೆಗೆ ಮೆರುಗು ನೀಡಿದರು. ಧ್ವಜಾರೋಹಣದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಇದೇ ಸಂದರ್ಭ ಗಣ್ಯರು ಹಾಕಿ ಉತ್ಸವದ ಸ್ಮರಣ ಸಂಚಿಕೆಯನ್ನು ಕೂಡ ಬಿಡುಗಡೆ ಮಾಡಿದರು. ಮೈಸೂರು, ಕೊಡಗು ಕ್ಷೇತ್ರದ ಸಂಸದ ಯದುವೀರ್…

Read More

ಮಡಿಕೇರಿ ಮಾ.28 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ( ಕೊಡಗು ಜಿಲ್ಲಾ ಆಸ್ಪತ್ರೆ. ಮಡಿಕೇರಿ) ಯಲ್ಲಿ ಸದ್ಯದಲ್ಲಿಯೇ ಹೃದ್ರೋಗ ಚಿಕಿತ್ಸೆ ಲಭ್ಯವಾಗಲಿದೆ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾಹಿತಿ ನೀಡಿದ್ದಾರೆ. ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ” ಅವೆನ್ಸಿಸ್ 2025″ ಎಂಬ ಬೃಹತ್ ಅರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಆಸ್ಪತ್ರೆ ಯನ್ನು ಅತ್ಯಂತ ಸುಸಜ್ಜಿತ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು ತಾವು ಬದ್ದರಾಗಿದ್ದು, ಪ್ರಸ್ತುತ ಹೃದ್ರೋಗ ಚಿಕಿತ್ಸೆ ಕೇಂದ್ರ ಸ್ಥಾಪನೆಗೆ ಸರ್ಕಾರ ಒಪ್ಪಿದೆ ಎಂದು ತಿಳಿಸಿದರು. ಮೆಡಿಕಲ್ ವಿಧ್ಯಾರ್ಥಿಗಳ ಕಲಿಕೆಗೆ ಆರೋಗ್ಯ ಪ್ರದರ್ಶನ ಮೇಳ ಅತ್ಯಂತ ಅಗತ್ಯ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಕೂಡ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. ದಸರಾ ಸಾಂಸ್ಕೃತಿಕ ಸಮಿತಿಯ ಸಂಚಾಲಕ ತೆನ್ನಿರ ಮೈನಾ ಮಾತನಾಡಿ, ಜನರ ಆರೋಗ್ಯ ದ ಬಗ್ಗೆ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಿದ ಮೆಡಿಕಲ್…

Read More

ಮಡಿಕೇರಿ ಮಾ.28 NEWS DESK : ಕರ್ನಾಟಕ ರಾಜ್ಯ ಸರ್ಕಾರ, ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕೈಗಾರಿಕಾ ವಿಭಾಗ ವತಿಯಿಂದ 2024-25ನೇ ಸಾಲಿಗೆ ಮಂಜೂರಾದ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ವಿವಿಧ ವಿದ್ಯುತ್ ಚಾಲಿತ ಉಪಕರಣಗಳನ್ನು ವಿತರಿಸಲಾಯಿತು. ಮುಖ್ಯಮಂತ್ರಿಗಳಿಗೆ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿರಾಜಪೇಟೆಯ ತಮ್ಮ ಗೃಹ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಸಲಕರಣೆ ವಿತರಿಸಿ, ಮಾತನಾಡಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವರ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮೀಣ ಜನತೆ ಇದರ ಸದುಪಯೋಗ ಪಡಿಸಿಕೊಳ್ಳುವುದರೊಂದಿಗೆ ತಮ್ಮ ಜೀವನ ಮಟ್ಟ ಏರಿಸಿಕೊಳ್ಳುವುದು ಹಾಗೂ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಮುಂದೆ ಬರಬೇಕೆಂದು ಕರೆ ನೀಡಿದರು. ಕರ್ನಾಟಕ ಕಾಂಗ್ರೆಸ್ ಸರಕಾರದ ಇಂತಹ ಕಾರ್ಯಕ್ರಮಗಳು ಪ್ರಾಚೀನ ಕಾಲದ ಕಲೆಯನ್ನು ಪೋಷಿಸುವುದರೊಂದಿಗೆ ಗ್ರಾಮೀಣ ಭಾಗದ ಜನತೆಗೆ ಮುನ್ನಡೆಗೆ ಬರಲು ತುಂಬಾ ಸಹಕಾರಿಯಾಗಲಿದೆ. ಗ್ರಾಮೀಣ ಕುಶಲಕರ್ಮಿಗಳು ತಮ್ಮ ತಲಾತಲಾಂತರದಿಂದ ಬಂದಂತಹ ಕೆಲಸ ಕಾರ್ಯಗಳನ್ನು ಮುಂದುವರೆಸುತ್ತಾ…

Read More

ಮಡಿಕೇರಿ ಮಾ.28 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿ.ಬಾಡಗ ಗ್ರಾಮದ ಕೊಕ್ಕ ಎಂಬಲ್ಲಿ ನೂತನವಾಗಿ ವಿದ್ಯುತ್ ಪರಿವರ್ತಕ ಘಟಕ ಉದ್ಘಾಟಿಸಿದರು. ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ವಿ.ಬಾಡಗದ ಮುಖ್ಯ ರಸ್ತೆಯಿಂದ ಪಡವಟ್ಟು-ಪೆಗ್ಗರೆಮಾಡು ಈಶ್ವರ ಅಂಬಾಲಕ್ಕಾಗಿ, ಕೋಲತಂಡ ಹಾಗೂ ಮುಲ್ಲೆಂಗಡ ಕುಟುಂಬಸ್ಥರ ಭಾಗಕ್ಕೆ ಹೋಗುವ ರಸ್ತೆಯ ಅಭಿವೃದ್ಧಿ ಕಾಮಗಾರಿ, ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯ ಪೆರುಂಬಾಡಿ-ಬಿಟ್ಟಂಗಾಲ ಭಾಗದ ಸುಮಾರು 3-80 ರಿಂದ 5-10ರ ಕಿಲೋಮೀಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿ, ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನ್ವರುದ್ದ ಮಸೀದಿ ಹಾಗೂ ಚರ್ಚೆಗೆ ಸಂಬಂಧ ಪಟ್ಟ ಕೃಷಿ ಜಮೀನಿನ ಬಳಿ ಹರಿಯುತ್ತಿರುವ ನದಿಗೆ ಸಂರಕ್ಷಣೆ ಹಾಗು ಜಮೀನಿಗೆ ಹಾನಿಯಾಗದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ, ಹೆಗ್ಗಳ ಹಾಗೂ ಬೇಟೋಳಿ ಗ್ರಾಮಗಳ ಹಲವು ಭಾಗಗಳಲ್ಲಿ, ಮಳೆಗಾಲದಲ್ಲಿ ನದಿಯಲ್ಲಿ ಹರಿಯುವ ರಭಸದ…

Read More

ಮಡಿಕೇರಿ ಮಾ.27 NEWS DESK : ಇದೇ ಏ.5 ರಂದು ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 118 ನೇ ಮತ್ತು ಏ.14 ರಂದು ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ತೊಡಗಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರು ಒಂದು ಸಮಾಜ ಅಥವಾ ಸಮುದಾಯಕ್ಕೆ ಸೀಮಿತವಲ್ಲ. ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ…

Read More

ಮಡಿಕೇರಿ ಮಾ.27 NEWS DESK : ಸರ್ವಧರ್ಮ ಸೌಹಾರ್ದ ಇಫ್ತಾರ್ ಕೂಟಗಳಿಂದ ದೇಶದ ಭಾವೈಕ್ಯತೆಗೆ ಮತ್ತು ಸಮಾಜಕ್ಕೆ ಉತ್ತಮ ಸಂದೇಶ ದೊರೆಯಲಿದೆ ಎಂದು ಮರ್ಕಂಜದ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೇಶ್ವರ ಸಿದ್ಧಪುರುಷಮಠದ ಧರ್ಮದರ್ಶಿ ಹಾಗೂ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಮುಖ್ಯ ಕಾರ್ಯದರ್ಶಿ ರಾಜೇಶ್‍ನಾಥ್ ಜಿ ಹೇಳಿದರು. ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ 20ನೇ ವರ್ಷದ ಸರ್ವಧರ್ಮ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಎಲ್ಲಾ ಧರ್ಮದ ಗುರುಗಳು ಒಟ್ಟಾಗಿದ್ದರೆ ಸಮಾಜವು ಒಟ್ಟುಗೂಡುತ್ತದೆ. ಎಲ್ಲಾ ಧರ್ಮದ ಧರ್ಮ ಗ್ರಂಥಗಳು ಒಳ್ಳೆದನ್ನು ಬೋಧಿಸುತ್ತದೆ. ಅಮಲು ಪದಾರ್ಥದಿಂದಾಗಿ ಎಷ್ಟೋ ಮನೆಗಳು ಹಾಳಾಗುತ್ತಿದೆ, ಇಸ್ಲಾಂ ಧರ್ಮದಲ್ಲಿ ಅಮಲು ಪದಾರ್ಥ ಸೇವನೆಯನ್ನು ನಿಷೇಧಿಸಲಾಗಿದೆ, ನಾವುಗಳು ವ್ಯಸನಿಗಳನ್ನು ವ್ಯಸನದಿಂದ ಮುಕ್ತಗೊಳಿಸಿ ಅವರ ಮನೆಗಳನ್ನು ಬೆಳಗಿಸಬೇಕೆಂದರು. ತಿಂಗಳಿಗೊಮ್ಮೆ ಎಲ್ಲಾ ಧರ್ಮಗುರುಗಳು ಒಟ್ಟಿಗೆ ಸೇರಿ ಸಮಾಜ ಸುಧಾರಣೆ, ಕೋಮು ಸೌಹಾರ್ದತೆ ಬಗ್ಗೆ ಬೈಠಕ್ ಮಾಡಬೇಕೆಂದು ವಿನಂತಿಸಿದರು. ಟಿ.ಎಂ.ಶಾಹಿದ್ ತೆಕ್ಕಿಲ್…

Read More

ಮಡಿಕೇರಿ ಮಾ.27 NEWS DESK : ತೂಚಮಕೇರಿ ಗ್ರಾಮದ ಆರಾಧ್ಯ ದೈವ ಶ್ರೀ ಮಹಾದೇವರ ಉತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಅರ್ಚಕರಾದ ಶ್ರೀಕಂಠ ಭಟ್ ನೇತೃತ್ವದಲ್ಲಿ ಬ್ರಹ್ಮವಾಹಕರಾದ ಜಯಚಂದ್ರ ಉತ್ಸವ ನೆರವೇರಿಸಿದರು. ಜಿಲ್ಲೆಯ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮ0ಡಳಿ ಸದ್ಯಸರು, ಊರಿನಾ ತಕ್ಕ ಮುಖ್ಯಸ್ಥರು ಹಾಜರಿದ್ದರು.

Read More