ಲೇಖಕ: admin

ಕುಶಾಲನಗರ ಮಾ.27 NEWS DESK :  ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಬೆಂಗಳೂರಿನಲ್ಲಿ ಏ.5 ರಂದು ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಕೆ ಟಿ ಚಂದ್ರು ತಿಳಿಸಿದರು. ಅವರು ಕುಶಾಲನಗರದ ಗೌಡ ಯುವಕ ಸಂಘ ಸಭಾಂಗಣದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ವಿತರಿಸಿ ಮಾತನಾಡಿ ಏಪ್ರಿಲ್ 5 ರಂದು ಬೆಂಗಳೂರಿನ ಕೆ ಆರ್ ರಸ್ತೆಯ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಗಾರವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ ನಿರ್ಮಲಾನಂದ ಮಹಾ ಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ.  ಸಿದ್ದಗಂಗಾ ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವುದರೊಂದಿಗೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಸಮಿತಿಯ ಉಪಾಧ್ಯಕ್ಷರಾದ ಯಶೋಧ ರಾಜಣ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಮಿತಿಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ಒದಗಿಸಿದರು. ಈ ಸಂದರ್ಭ…

Read More

ಮೂರ್ನಾಡು ಮಾ.27 NEWS DESK : ಕೊಡಗು ಜಿಲ್ಲೆಯ ಐರಿ ಜನಾಂಗದ ನಡುವಿನ 11ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಈ ಬಾರಿ ಮೂರ್ನಾಡು ಹೋಬಳಿ, ಹೊದ್ದೂರು ಗ್ರಾಮದ ಅಮ್ಮಣಂಡ ಕುಟುಂಬಸ್ಥರು ಆತಿಥ್ಯವಹಿಸಲಿದ್ದು, ಏ.25, 26 ಮತ್ತು 27 ರಂದು ಮೂರ್ನಾಡುವಿನ ದಿ. ಬಾಚೆಟ್ಟಿರ ಲಾಲೂ ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಮ್ಮಣಂಡ ಕಪ್ ಕ್ರಿಕೆಟ್ ಕ್ರೀಡಾಕೂಟದ ಸಂಚಾಲಕ ಅಮ್ಮಣಂಡ ದೀಪಕ್ ಮತ್ತು ಅಮ್ಮಣಂಡ ನಿಖಿಲ್, ಕ್ರಿಕೆಟ್ ಸ್ಪರ್ಧೆಯ ಜೊತೆಗೆ ಮಹಿಳೆಯರಿಗೆ ಹಗ್ಗಜಗ್ಗಾಟ, ಹಿರಿಯರಿಗೆ ಹಾಗೂ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನೂ ಆಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಕ್ರಿಕೆಟ್ ಪಂದ್ಯಾವಳಿಯಲ್ಲಿ 20ಕ್ಕೂ ಅಧಿಕ ಕುಟುಂಬಗಳು ಭಾಗವಹಿಸುವ ನಿರೀಕ್ಷೆ ಇದೆ. ಐರಿ ಜನಾಂಗದಲ್ಲಿ 80ಕ್ಕು ಹೆಚ್ಚು ಮನೆತನಗಳಿದ್ದು, ಎಲ್ಲಾ ಕುಟುಂಬಗಳು ಕ್ರಿಕೆಟ್ ಹಾಗೂ ಹಗ್ಗ ಜಗ್ಗಾಟದಲ್ಲಿ ಪಾಲ್ಗೊಳ್ಳುವ ಮೂಲಕ ಜನಾಂಗ ಬಾಂಧವರು ಪರಸ್ಪರ ಅರಿಯಲು ನೆರವಾಗುವಂತೆ ಕರೆ ನೀಡಿದರು. ಕ್ರೀಡಾ ಹಬ್ಬದ ಸಂದರ್ಭ ಐರಿ ಜನಾಂಗದಲ್ಲಿ ಆಯ್ದ 10 ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಗುತ್ತದೆ.…

Read More

ಮಡಿಕೇರಿ ಮಾ.27 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲವು ಪ್ರತಿವರ್ಷದಂತೆ ಈ ಬಾರಿ ಕೂಡ ಮಾ.28 ಮತ್ತು 29ರಂದು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿ ಕೋರಿದೆ.

Read More

ಮಡಿಕೇರಿ ಮಾ.27 NEWS DESK : ಹೊದ್ದೂರು ಗ್ರಾಮದಲ್ಲಿ ರೈತರ ಪಿತ್ರಾರ್ಜಿತ ಆಸ್ತಿ ಮತ್ತು ಸರಕಾರಿ ಜಾಗದಲ್ಲಿ ಕೆಲವರು ಅಕ್ರಮವಾಗಿ ನಿರ್ಮಿಸಿಕೊಂಡಿರುವ ಶೆಡ್ ಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಹೊದ್ದೂರಿನಿಂದ ಮಡಿಕೇರಿಯವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಹೊದ್ದೂರು ಘಟಕ ಎಚ್ಚರಿಕೆ ನೀಡಿದೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊದ್ದೂರು ರೈತ ಸಂಘದ ಸದಸ್ಯ ಚೆಟ್ರುಮಾಡ ಎಂ.ಬಾಲಕೃಷ್ಣ, ಹೊದ್ದೂರು ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ರೈತರ ಪಿತ್ರಾರ್ಜಿತ ಆಸ್ತಿ ಮತ್ತು ಸರಕಾರಿ ಜಾಗದಲ್ಲಿ ಹೊದ್ದೂರು ಗ್ರಾ.ಪಂ ಸದಸ್ಯರೊಬ್ಬರು ಅಕ್ರಮ ಶೆಡ್ ನಿರ್ಮಿಸಿ ಕಿರುಕುಳ ನೀಡುತ್ತಿದ್ದಾರೆ. ಅಕ್ರಮ ಶೆಡ್ ಗಳ ನಿರ್ಮಾಣದ ಕುರಿತು ಸಂಬಂಧಪಟ್ಟ ಇಲಾಖೆಗಳಿಗೆ ದೂರು  ಸಲ್ಲಿಸಿದರೂ ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.  ಕಳೆದ ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ನ್ಯಾಯಯುತವಾಗಿ ಜೀವನ ಸಾಗಿಸುತ್ತಿರುವವರನ್ನು ಒಕ್ಕಲೆಬ್ಬಿಸಲು ನಡೆಸುತ್ತಿರುವ ಪ್ರಯತ್ನಗಳು ಖಂಡನೀಯ ಮತ್ತು ಈ ಪ್ರಕರಣವನ್ನು ಆಡಳಿತ…

Read More

ಪುತ್ತೂರು ಮಾ.27 NEWS DESK : ಬೆಂಕಿ ನಮ್ಮ ಮಿತ್ರನೂ ಹೌದು ಶತ್ರುವೂ ಹೌದು. ಆದರೆ ಅದನ್ನು ಬಳಸುವಲ್ಲಿ ವ್ಯತ್ಯಯ ಉಂಟಾದರೆ ಅದರಿಂದ ಸಾವು ನೋವುಗಳು, ಕಷ್ಟ ನಷ್ಟಗಳು ಉಂಟಾಗಬಹುದು. ಹಾಗಾಗಿ ಇದರ ಬಗ್ಗೆ ಸೂಕ್ತ ಮುನ್ನೆಚ್ಚರಿಕೆಯ ಜತೆಗೆ ಅಗ್ನಿ ಅವಘಡಗಳ ನಿಯಂತ್ರಣದ ಬಗ್ಗೆಯೂ ನಾವು ಜಾಗೃತರಾಗಿರಬೇಕು ಎಂದು ಪುತ್ತೂರು ಅಗ್ನಿಶಾಮಕ ಮತ್ತು ತುರ್ತುಸೇವಾ ಠಾಣೆಯ ಪ್ರಮುಖ ಅಗ್ನಿಶಾಮಕ ರುಕ್ಮಯ ಗೌಡ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಎಂಬಿಎ ಮತ್ತು ಎನ್‍ಎಸ್‍ಎಸ್ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು. ಬೆಂಕಿಯ ತೀವ್ರತೆಗಳಿಗೆ ಅನುಗುಣವಾಗಿ ಅದನ್ನು ಅನೇಕ ವಿಭಾಗಗಳಾಗಿ ವಿಂಗಡಿಸಿದ್ದಾರೆ. ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ ನಿವಾರಕ ವಿಧಾನಗಳನ್ನು ಅನುಸರಿಸಬೇಕು. ಬೆಂಕಿ ಉರಿಯುವುದಕ್ಕೆ ದಹ್ಯ ವಸ್ತು, ಶಾಖ ಮತ್ತು ಗಾಳಿಯ ಅಗತ್ಯವಿದೆ. ಇದರಲ್ಲಿ ಒಂದನ್ನು ನಿವಾರಿಸಿದರೆ ಬೆಂಕಿಯನ್ನು ನಂದಿಸಬಹುದು ಎಂದರು. ಸಂದರ್ಭಕ್ಕೆ ತಕ್ಕಂತೆ…

Read More

ಮಡಿಕೇರಿ ಮಾ.27 NEWS DESK  : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಡಿಕೇರಿ ಘಟಕವು ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನ ದಿನವನ್ನು ಆಚರಿಸಿದರು. ನಗರದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಮಹಾನ್ ಕ್ರಾಂತಿಕಾರಿಗಳ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆ ಮೂಲಕ ಗೌರವ ಸೂಚಿಸಿದರು. ನಂತರ, ನಗರದ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಅಲ್ಲಿಯೂ ಪುಷ್ಪ ನಮನ ಸಲ್ಲಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಎಬಿವಿಪಿ ಸದಸ್ಯ ಪ್ರಮೋದ್, ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಜೀವನ ಮತ್ತು ಹೋರಾಟದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅವರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುವ ಮೂಲಕ ದೇಶಭಕ್ತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕು ಸಂಚಾಲಕರಾದ ಮಂಜು, ನಗರ ಕಾರ್ಯದರ್ಶಿ ಸಂತೋಷ್, ನಗರ ಸಹ ಕಾರ್ಯದರ್ಶಿ ಸೌಜನ್ಯ ಮತ್ತು ಇತರ ಎಬಿವಿಪಿ ಸದಸ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.27 NEWS DESK : ಚೆಟ್ಟಳ್ಳಿಯ ಕಾಫಿ ಬೋರ್ಡ್ ಜಾಗದಲ್ಲಿರುವ ಶ್ರೀ ಶಕ್ತಿ ಗಣಪತಿ ದೇವಾಲಯದ 25ನೇ ವರ್ಷದ ಬೆಳ್ಳಿ ಮಹೋತ್ಸವ ಮತ್ತು ದೇವಾಲಯ ನವೀಕರಣ, ಅಷ್ಟಬಂಧ, ಬ್ರಹ್ಮ ಕಲಶಾಭಿಷೇಕ ಮಾ.29 ಮತ್ತು 30 ರಂದು ನೆರವೇರಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶ್ರೀ ಶಕ್ತಿ ಗಣಪತಿ ದೇವಾಲಯ ಸಮಿತಿ ಕಾರ್ಯದರ್ಶಿ ಪಿ.ಅಪ್ಪುಕುಟ್ಟನ್, ಮಾ.29 ಮತ್ತು 30 ರಂದು ಎರಡು ದಿನಗಳ ಕಾಲ ಕೇರಳದ ಬ್ರಹ್ಮರ್ಷಿ ವೇದಮೂರ್ತಿ ಶಿವಸುಬ್ರಹ್ಮಣ್ಯ ಭಟ್ಟ ಶುಳುವಾಲ ಮೂಲೆ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಲಿದೆ. ಮಾ.29 ರಂದು ಬೆಳಗ್ಗೆ 9 ಗಂಟೆಗೆ ಸಪ್ತಶುದ್ಧಿ ಪುಣ್ಯಕ್ಷದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಸಾದ ಶುದ್ಧಿ ಅನುಜ್ಞಾ ಕಲಶ, ಕಲಶ ಪ್ರತಿಷ್ಠೆ, ವೇದಪಾರಾಯಾಣ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆಯೆಂದು ತಿಳಿಸಿದರು. ಅಂದು ಸಂಜೆ 5 ಗಂಟೆಗೆ ಶ್ರೀ ಲಕ್ಷೀ ಸಹಿತ ಶ್ರೀ ಸತ್ಯನಾರಾಯಣ ಪೂಜೆ, ರಕ್ತೋಘ್ನ ಹವನ, ವಾಸ್ತು ಪೂಜೆ, ವಾಸ್ತು…

Read More

ಮಡಿಕೇರಿ ಮಾ.27 NEWS DESK : ಇಬ್ನಿವಳವಾಡಿ ಗ್ರಾಮದ ಶ್ರೀ ಭದ್ರಕಾಳಿ ದೇವಿಯ ವಾರ್ಷಿಕ ಉತ್ಸವವು ಮಾ.29 ಮತ್ತು 30ರಂದು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ.  ಮಾ.29 ರಂದು ಮಧ್ಯಾಹ್ನ 1.30 ಗಂಟೆಗೆ ಕೊಡಿಆಟ್, 2 ಗಂಟೆಗೆ ಆಂಗೋಲ, ಪೊಂಗೋಲ, 2.30 ಗಂಟೆಗೆ ಪೀಲಿ ಆಟ್, 3 ಗಂಟೆಗೆ ಕೊಂಬಾಟ್ ಜರುಗಲಿದೆ. ನಂತರ ದೇವಿಯ ದರ್ಶನ ಹಾಗೂ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಲಿದೆ.  ಮಾ.30 ರಂದು ಸಂಜೆ 5 ಗಂಟೆಗೆ ಕೊಂಬಾಟ್, ದೇವಿಯ ದರ್ಶನ, ದೇವರ ಜಳಕ ಜರುಗಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಕ್ಕಮುಖ್ಯಸ್ಥರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಮಾ.27 NEWS DESK : ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿಯ ಮಧುಕೃಪದ ಆವರಣದಲ್ಲಿ “ಬಾಲಗೋಕುಲ” ಮಡಿಕೇರಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಮಾ.31 ರಿಂದ ಏಪ್ರಿಲ್ 9 ರ ವರೆಗೆ ಮಕ್ಕಳಿಗಾಗಿ “ವಸಂತ ಶಿಬಿರ – 2025” ಹೆಸರಿನಲ್ಲಿ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ನಡೆದ ಈ ಶಿಬಿರವು ಮಕ್ಕಳಿಗೆ ಬಹಳ ಉಪಯುಕ್ತವಾಗಿದ್ದು, ಮಕ್ಕಳು ತುಂಬಾ ಉತ್ಸಾಹದಿಂದ ಭಾಗವಹಿಸುವಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವವರು ನೊಂದಣಿಗಾಗಿ ಬಾಲಗೋಕುಲ ಮಡಿಕೇರಿ: 9448541328 ಸಂಪರ್ಕಿಸ ಬಹುದಾಗಿದೆ.

Read More

ಮಡಿಕೇರಿ ಮಾ.27 NEWS DESK :  ಚೆಟ್ಟಳ್ಳಿ ಕಾಫಿ ಬೋಡ್೯ನಲ್ಲಿರುವ ಶ್ರೀ ಶಕ್ತಿ ಗಣಪತಿ ದೇವಾಲಯದ 25ನೇ ವಷ೯ದ ಬೆಳ್ಳಿ ಮಹೋತ್ಸವದ ಅಂಗವಾಗಿ ಮಾ.29 ಮತ್ತು 30 ರಂದುದೇವಾಲಯ ನವೀಕರಣ ಅಷ್ಟಬಂಧ ಬ್ರಹ್ಮ ಕಲಶಾಭಿಷೇಕ ನಡೆಯಲಿದೆ. ಮಾ.29 ಮತ್ತು 30 ರಂದು ಎರಡು ದಿನಗಳ ಕಾಲ ಕೇರಳದ ಬ್ರಹ್ಮಷಿ೯ ವೇದಮೂತಿ೯ ಶಿವಸುಬ್ರಹ್ಮಣ್ಯ ಭಟ್ಟ ಶುಳುವಾಲಮೂಲೆ ಅವರ ನೇತೃತ್ವದಲ್ಲಿ ಪೂಜಾ ಕಾಯ೯ಗಳು ನೆರವೇರಲಿದ್ದು, ಮಾ.29 ರಂದು ಬೆಳಗ್ಗೆ 9 ಗಂಟೆಗೆ ಸಪ್ತುಶುದ್ದಿ ಪುಣ್ಯಕ್ಷದೇವತಾ ಪ್ರಾಥ೯ನೆ, ಆಚಾಯ೯ ಪಠಣ, ಪ್ರಸಾದಶುದ್ದಿ, ಅನುಜ್ಞ ಕಳಶ. ಕಳಶ ಪ್ರತಿಷ್ಟೆ, ವೇದಪಾರಾಯಾಣ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಗೆ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತಪ೯ಣೆ ನೆರವೇರಲಿದೆ. ಸಂಜೆ 5 ಗಂಟೆಗೆ ಶ್ರೀ ಲಕ್ಷ್ಮಿಸಹಿತ ಶ್ರೀ ಸತ್ಯನಾರಾಯಣ ಪೂಜೆ, ರಕ್ತೋಘ್ನ ಹವನ, ವಾಸ್ತು ಪೂಜೆ, ವಾಸ್ತು ಬಲಿ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತಪ೯ಣೆ ನಡೆಯಲಿದೆ.  ಮಾ.30 ರಂದು ಭಾನುವಾರ ಬೆಳಗ್ಗೆ 6 ಗಂಟೆಯಿಂದ 48 ತೆಂಗಿನಕಾಯಿ ಅಷ್ಟದ್ರವ್ಯದಿಂದ ಗಣಪತಿ…

Read More