ಮಡಿಕೇರಿ ಮಾ.26 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಅಧಿಕಾರಿಗಳ ಸಭೆಯು ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಚಿವರು ಹಾಗೂ ಶಾಸಕರು ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ವರದಿಯನ್ನು ಪಡೆದರು ಹಾಗೂ ಪ್ರಗತಿ ಪರಿಶೀಲನೆ ನಡೆಸಿದರು. ಇಲಾಖೆಗಳಲ್ಲಿಯ ಕೆಲಸಗಳನ್ನು ಮತ್ತಷ್ಟು ಚುರುಕುಗೊಳಿಸುವಂತೆ ಸಲಹೆ ನೀಡಿದರು. ಮಾನವ-ಪ್ರಾಣಿ ಸಂಘರ್ಷ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಣ ಮೀಸಲಿಟ್ಟಿದ್ದು, ಜನರ ಸುರಕ್ಷತೆಯ ಬಗ್ಗೆಯೂ ಗಮನಹರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ಇಲಾಖೆಗಳ ನೂನ್ಯತೆಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಜನಸಾಮಾನ್ಯರಿಗೆ ಅನುಕೂಲ ಆಗುವಂತೆ ಕಾರ್ಯನಿರ್ವಹಿಸದೇ ಇದ್ದಲ್ಲಿ ಕಠಿಣ ಕ್ರಮ ಎದುರಿಸಬೇಕಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದರು. ಈ ಸಂದರ್ಭ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವಿರಾಜಪೇಟೆ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಪಿ.ವಿ.ಜಾನ್ಸನ್, ಅಧಿಕಾರಿಗಳು…
ಲೇಖಕ: admin
ಸೋಮವಾರಪೇಟೆ ಮಾ.26 NEWS DESK : ಕೊಡಗಿನ ಮತದಾರರು ವಿದ್ಯಾವಂತ ಯುವಕರನ್ನು ಶಾಸಕರನ್ನು ಆಯ್ಕೆ ಮಾಡಿರುವ ಕಾರಣದಿಂದ ಜಿಲ್ಲೆಯಲ್ಲಿ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಜಿಲ್ಲಾ ಹಾಗೂ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೊಡವ ಸಮಾಜದಲ್ಲಿ ನಡೆದ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕಾಗಿ ತ್ಯಾಗ ಮಾಡಿದವರು ಪಕ್ಷದ ಆಸ್ತಿಯಾಗಿದ್ದಾರೆ. ಅಂತಹವರಿಗೆ ಪಕ್ಷ ಯಾವತ್ತು ಚಿರರುಣೆಯಾಗಿರುತ್ತದೆ. 1919ರಿಂದ ನಾನು ಕಾಂಗ್ರೆಸ್‍ಗಾಗಿ ದುಡಿದಿದ್ದೇನೆ. ನನಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಕಾರ್ಯಕರ್ತರೇ ಪಕ್ಷದ ಜೀವಾಳ ಎಂದು ಬಣ್ಣಿಸಿದರು. ಪಂಚ ಗ್ಯಾರೆಂಟಿಗಳು ಎಲ್ಲ ಮನೆಗಳಿಗೆ ತಲುಪಿವೆ. ಪ್ರತಿ ಕುಟುಂಬಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಯ ಉದ್ದೇಶಗಳನ್ನು ಪ್ರತಿ ಕುಟುಂಬಗಳಿಗೂ ತಿಳಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಈ ಮೂಲಕ ಪಕ್ಷದ ಸಂಘಟನೆ ಮಾಡಬೇಕು ಎಂದು ಹೇಳಿದರು. ಕೊಡಗಿನಲ್ಲಿ ಬಿಜೆಪಿ ಶಾಸಕರು 25 ವರ್ಷ ಅಧಿಕಾರ ನಡೆಸಿದ್ದಾರೆ. ಆದರೆ ಅಭಿವೃದ್ಧಿ ಕಡೆ ಹೆಚ್ಚಿನ…
ಸೋಮವಾರಪೇಟೆ ಮಾ.26 NEWS DESK : ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪ್ರಥಮ ವರ್ಷದ ವಾರ್ಷಿಕ ಮಹಾಸಭೆ ಸೋಮವಾರಪೇಟೆ ಸಂಕಪ್ಪ ಸಭಾಂಗಣದಲ್ಲಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹೋರಾಟ ಸಮಿತಿಯನ್ನು ರಚಿಸಲಾಗಿದ್ದು, ಶಾಸಕಾಂಗ ಮತ್ತು ಕಾರ್ಯಾಂಗದ ಮೂಲಕ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು. ಈಗಾಗಲೇ ಗ್ರಾಮೀಣ ಭಾಗಗಳಿಗೆ ಬಸ್ ಸೇವೆ, ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳ ನಿವಾರಣೆ, ನೂತನ ಹೋಬಳಿ ಕಚೇರಿಗಳ ಸ್ಥಾಪನೆ, ರಸ್ತೆಗಳ ಅಭಿವೃದ್ಧಿ, ಮೂಲಭೂತ ಸೌಕರ್ಯ, ಜಾಗದ ದಾಖಲಾತಿ ಸಮಸ್ಯೆ, ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಇಲಾಖೆ, ಶಾಸಕರು, ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಸಮಿತಿಯ ಕೆಲವೊಂದು ಬೇಡಿಕೆಗಳಿಗೆ ಸ್ಪಂದನೆ ಲಭಿಸಿದ್ದು, ಉಳಿದ ಬೇಡಿಕೆಗಳ ಈಡೇರಿಕೆಗಾಗಿ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದರು. ಸಂಘದ ಆಡಳಿತ ಮಂಡಳಿ ವರದಿಯನ್ನು ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಲೆಕ್ಕಪತ್ರವನ್ನು ಖಜಾಂಚಿ ತ್ರಿಶೂಲ್ ಕಾರ್ಯಪ್ಪ ಮಂಡಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಕೆ.ಎನ್.…
ಮಡಿಕೇರಿ ಮಾ.26 NEWS DESK : ನಗರದ ವಿವಿಧ ಬಡಾವಣೆಗಳ ಸಹಿತ ಒಟ್ಟು 75 ತಡೆಗೋಡೆಗಳ ನಿರ್ಮಾಣಕ್ಕೆ ಅಂಗೀಕಾರ ನೀಡಲಾಗಿದೆ. ಇದಕ್ಕೆ 13 ಕೋಟಿ ರೂ. ಅನುದಾನ ಬೇಕಿದ್ದು, ಈ ಕುರಿತು ನಗರಸಭೆ ಮೂಲಕ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಸಭಾ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಮಡಿಕೇರಿ ನಗರ ಸಭೆ ಕೆಲವು ದಿನಗಳ ಹಿಂದೆ 2025-26ನೇ ಸಾಲಿನ ಉಳಿತಾಯ ಬಜೆಟ್ ಮಂಡಿಸಿದ್ದು, ಈ ಕುರಿತು ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಸಭೆಯ ಪ್ರಾರಂಭದಲ್ಲಿ ಮಾತನಾಡಿದ ನಗರ ಸಭೆ ಸದಸ್ಯ ಮನ್ಸೂರ್, ನಗರದ ವಿವಿಧ ಕಡೆಗಳಲ್ಲಿ ತಡೆಗೋಡೆಗಳ ನಿರ್ಮಾಣಕ್ಕೆ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಜಿಲ್ಲಾಧಿಕಾರಿಗಳನ್ನು ಕೋರಿದರು. ಇದಕ್ಕೆ ಪ್ರತಿಕ್ರಿಯಸಿದ ನಗರ ಸಭೆ ಆಡಳಿತಾಧಿಕಾರಿ ವೆಂಕಟ್ ರಾಜಾ, ಈಗಾಗಲೇ 75 ಕಡೆಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದಕ್ಕೆ ಎನ್‍ಡಿಆರ್ ಎಫ್ ನಿಧಿಯಿಂದ ಅನುದಾನ ಲಭಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಕ್ಕೆ…
ಮಡಿಕೇರಿ ಮಾ.26 NEWS DESK : ಹೆಬ್ಬಾಲೆ ಗ್ರಾ.ಪಂ ವ್ಯಾಪ್ತಿಯ ಕಣಿವೆ ಕಾವೇರಿ ನದಿ ತೀರದ ದಂಡೆಯಲ್ಲಿರುವ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ವಾರ್ಷಿಕ ಬ್ರಹ್ಮ ರಥೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಏ.6 ರಂದು ನಡೆಯಲಿದೆ. ಏ. 6.ರಂದು ಮಧ್ಯಾಹ್ನ 1.30 ರಿಂದ 2.18ರ ಶುಭ ಅಭಿಜಿನ್ ಮುಹೂರ್ತದಲ್ಲಿ ವೇದ ಬ್ರಹ್ಮ ನರಹರಿಶರ್ಮಾ ನೇತೃತ್ವದಲ್ಲಿ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನಡೆಯಲಿವೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್ ತಿಳಿಸಿದ್ದಾರೆ. ರಥೋತ್ಸವದ ಅಂಗವಾಗಿ ಏ.4 ರಿಂದಲೇ ದೇವಾನಾಂದಿ, ಅಂಕುರಾರ್ಪಣ, ರಕ್ಷಾಬಂಧನ, ಧ್ವಜಾರೋಹಣ, ನವಗ್ರಹ ಸ್ಧಾಪನೆ, 5 ರಂದು ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಗಣಪತಿ ಹೋಮ, ಸಂಜೆ ಕೂಡಿಗೆ ಮತ್ತು ಶಿರಂಗಾಲ ಗ್ರಾಮಸ್ಥರಿಂದ ಸಂಧ್ಯಾಪೂಜೆ ಮತ್ತು ಸಂಜೆ 7 ಗಂಟೆಗೆ ಸೀತಾ ಕಲ್ಯಾಣೋತ್ಸವ ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ದೇವಾಲಯದ ಆವರಣದಲ್ಲಿ ನಡೆಯಲಿವೆ ಎಂದು ಅಧ್ಯಕ್ಷ ಕೆ.ಎನ್.ಸುರೇಶ್ ತಿಳಿಸಿದ್ದಾರೆ.
ಮಡಿಕೇರಿ ಮಾ.26 NEWS DESK : ಕೊಡಗು ವಿಶ್ವವಿದ್ಯಾನಿಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮಹಾವಿದ್ಯಾಲಯದ ಅಮೃತ ಮಹೋತ್ಸವ ಪ್ರಯುಕ್ತ ಕನ್ನಡದಲ್ಲಿ 5ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನದ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತು ಮೂರು ದಿನದ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಚಾಲನೆ ನೀಡಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಮಾನವನ ಬದುಕಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲ್ಲದೆ ಊಹಿಸಿಕೊಳ್ಳುವುದು ಕಷ್ಟಸಾಧ್ಯ ಎಂದು ಹೇಳಿದರು. ಸರ್ವರಿಗೂ ವಿಜ್ಞಾನ, ಸುಲಭ ವಿಜ್ಞಾನ, ಸುಸ್ಥಿರ ಅಭಿವೃದ್ದಿಗಾಗಿ ವಿಜ್ಞಾನ ಎಂಬ ಆಶಯದೊಂದಿಗೆ ನಾಡಿನಾದ್ಯಂತ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಜ್ಞಾನವನ್ನು ಜನಪ್ರಿಯಗೊಳಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಭೂಮೇಲ್ಮೈ ವಾತಾವರಣ (ಮಳೆ, ಬಿಸಿಲು, ಚಳಿ ಸೇರಿದಂತೆ )ಪ್ರಾಕೃತಿಕವಾಗಿ…
ಸಿದ್ದಾಪುರ ಮಾ.26 NEWS DESK : ವಿವಿಧ ಆರೋಗ್ಯ ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದು, ಅನಾರೋಗ್ಯ ಕೋಳಗಾದವರಿಗೆ ಉಚಿತ ವೈದ್ಯಕೀಯ ಚಿಕಿತ್ಸೆಯೊಂದಿಗೆ ಹಾರೈಕೆ ಮಾಡಿ ಆರೋಗ್ಯ ಕಾಳಜಿಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಆಲ್ ಇಂಡಿಯಾ ಕೆ ಎಂ ಸಿ ಸಿ ಸಂಘಟನೆಯ ಸೇವ ಕಾರ್ಯದ ಬಗ್ಗೆ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು. ವಿರಾಜಪೇಟೆ ಆರ್ಜಿ ಗ್ರಾಮದ ಆಶೀರ್ವಾದ ಟರ್ಫ್ ಗ್ರೌಂಡ್ ನಲ್ಲಿ ಕೆಎಂಸಿಸಿ ಸಂಘಟನೆ ವತಿಯಿಂದ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಜಿಲ್ಲಾ ಎಸ್.ಕೆ.ಎಸ್.ಎಫ್ ಸಂಘಟನೆ ಅಧ್ಯಕ್ಷ ಶುಹೈಬ್ ಫೈಝಿ ಮಾತನಾಡಿ, ಮನುಷ್ಯ ಬದುಕಿ ಬಾಳಿದ ದಿನಗಳ ನಂತರ ತೀವ್ರ ಆರೋಗ್ಯ ಸಮಸ್ಯೆಯಿಂದ ಅಂಗ ವೈಕಲ್ಯ ಸೇರಿದಂತೆ ಹಲವು ಮಾರಣಾಂತಿಕ ಕಾಯಿಲೆಗಳಿಗೆ ಒಳಪಟ್ಟು ಜೀವನ್ಮರಣ ಸ್ಥಿತಿಯಲ್ಲಿ ಸುಧರಿಸಿಕೊಳ್ಳಲು ಸಾಧ್ಯವಾಗದಂತಹ ಸಂದರ್ಭದಲ್ಲಿ ಅನಾರೋಗ್ಯಕೊಳ್ಳಗಾದ ಸಾವಿರಾರು ಮಂದಿಗೆ ಸಂಪೂರ್ಣ ಉಚಿತ ಚಿಕಿತ್ಸೆಯನ್ನು ನೀಡುವ ಮೂಲಕ ಅವರ ಮನೆ ಬಾಗಿಲಿಗೆ ತೆರಳಿ ಆರೈಕೆಯೊಂದಿಗೆ ಮಾನವೀಯ ಸೇವೆಯನ್ನು ನೀಡುತ್ತಿರುವ ಕೆಎಂಸಿಸಿ ಸಂಘಟನೆಯ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಾತಿ ಮತ ಭೇದವಿಲ್ಲದೆ …
ಸಿದ್ದಾಪುರ ಮಾ.26 NEWS DESK : ವಿರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು. ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಕಸ ವಿಲೇವಾರಿಗೆ ಗುರುತಿಸಿರುವ ಜಾಗದ ಸುತ್ತಮುತ್ತಲಿನಲ್ಲಿ ದಲಿತರು, ಬುಡಕಟ್ಟು ಸಮುದಾಯದವರು ಸೇರಿದಂತೆ ಹಲವು ಕುಟುಂಬಗಳು ವಾಸವಾಗಿದ್ದು, ಜನ ವಸತಿ ಪ್ರದೇಶವಾಗಿದೆ. ಸಮೀಪದಲ್ಲಿ ಅರಣ್ಯ ಪ್ರದೇಶವಿದ್ದು ತೋಡು ನೀರಿನ ಮೂಲಕ ಲಕ್ಷ್ಮಣತೀರ್ಥ ನದಿ ಸೇರುತಿದೆ. ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ನಡೆದಾಡುವ ರಸ್ತೆಯು ಆಗಿದ್ದು ತ್ಯಾಜ್ಯ ವಿಲೇವಾರಿಗೆ ಮುಂದಾದಲ್ಲಿ ಪರಿಸರ ನೀರು ಹಾಳಾಗುವುದರೊಂದಿಗೆ ಸ್ಥಳೀಯ ನಿವಾಸಿಗಳು ಸಾಂಕ್ರಾಮಿಕ ರೋಗಗಳೊಂದಿಗೆ ಮೂಗು ಮುಚ್ಚಿ ಜೀವನ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮಳೆಗಾಲ ಸಂದರ್ಭದಲ್ಲಿ ತೋಡಿನ ಮೂಲಕ ನೀರು ತುಂಬುವ ಪ್ರದೇಶವಾಗಿದ್ದು ತ್ಯಾಜ್ಯ ವಿಲೇವಾರಿ ಮಾಡಿದ್ದಲ್ಲಿ ನೀರು ಮಲಿನದೊಂದಿಗೆ ಲಕ್ಷ್ಮಣ ತೀರ್ಥ ನದಿ ಸೇರಲಿದೆ. ಪ್ರಾಣಿಗಳು ಜಾನುವಾರಗಳು ತೋಡು…
ಮಡಿಕೇರಿ ಮಾ.25 NEWS DESK : ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಜಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಚಿಯಕಪೂವಂಡ ರಂಜು ತಿಮ್ಮಯ್ಯ(55) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇಂದು ಬೆಳಿಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ರಂಜು ತಿಮ್ಮಯ್ಯ ಅವರು ಗುಂಡು ಹೊಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಮಾ.25 NEWS DESK : ಮರದಿಂದ ಬಿದ್ದು ಅಸ್ಸಾಂ ಮೂಲದ ಕಾರ್ಮಿಕ ಸಾವನಪ್ಪಿರುವ ಘಟನೆ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ವಾಜಿದ್ ಅಲಿ(28) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಎಮ್ಮೆಮಾಡು ಕೂರುಳಿ ಗ್ರಾಮದಲ್ಲಿ ವಾಸವಾಗಿದ್ದ ವಾಜಿದ್ ನೆಲಜಿ ಗ್ರಾಮದ ತೋಟವೊಂದರಲ್ಲಿ ಮರ ಕಪಾತು ಮಾಡುತ್ತಿದ್ದಾಗ ಕೆಳಗೆ ಬಿದ್ದಿದ್ದಾರೆ. ತಕ್ಷಣ ತೋಟದ ಮಾಲೀಕರು ಹಾಗೂ ಸಹೋದ್ಯೋಗಿಗಳು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದರಾದರು ಅಷ್ಟರಲ್ಲೆ ವಾಜಿದ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.






