ಲೇಖಕ: admin

ಮಡಿಕೆಕೇರಿ ಫೆ.24 NEWS DESK : ರಕ್ತದಾನವು ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು, ಮತ್ತೊಂದು ಜೀವವನ್ನು ಉಳಿಸುವ ಪುಣ್ಯ ಕೆಲಸ ಮಾಡಿದಂತೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್.ಎಸ್.ಎಸ್.ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ಮೈಸೂರಿನ ಸಂತ ಜೋಸೆಫರ ರಕ್ತನಿಧಿ ಘಟಕದ ಸಹಯೋಗದಲ್ಲಿ ವಿರಾಜಪೇಟೆ ನಗರದ ಸಂತ ಅನ್ನಮ್ಮ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.  ಇಂದಿನ ಯುಗದಲ್ಲಿ ರಕ್ತದಾನವು ಶ್ರೇಷ್ಠದಾನವಾಗಿದ್ದು, ಹಲವು ಜನರ ಜೀವ ರಕ್ಷಣೆ ಮಾಡುವುದರಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಾನ ಮಾಡುವುದರೊಂದಿಗೆ ದಾನಿಗಳ ಆರೋಗ್ಯ ವೃದ್ಧಿಸುವುದರೊಂದಿಗೆ ಒಂದು ಪುಣ್ಯ ಕಾರ್ಯದಲ್ಲಿ ಭಾಗವಹಿಸಿದ ಸಂತೃಪ್ತಿ ರಕ್ತದಾನಿಗಳಿಗೆ ಒದಗಲಿದೆ ಎಂದು ಹೇಳಿದರು. ಇಂತಹ ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸಿದ ಆಯೋಜಕರಿಗೆ ಅಭಿನಂದನೆ ಸಲ್ಲಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿ ಎಂದು ಹಾರೈಸಿದರು. ವಿದ್ಯಾರ್ಥಿಗಳು ಉತ್ತಮ ಪರಿಸರ…

Read More

ಮಡಿಕೇರಿ NEWS DESK  ಫೆ.24 : ಬೇಂಗ್ ನಾಡ್ ಕೊಡವ ಸಮಾಜದ ನೂತನ ಪ್ರವೇಶದ್ವಾರ ಮತ್ತು ಅಡುಗೆ ಮನೆಯನ್ನು ದಾನಿಗಳಾದ ತೇಲಪಂಡ ಪ್ರದೀಪ್ ಪೂವಯ್ಯ ಹಾಗೂ ನೂರೆರ ಮಿಟ್ಟು ಸುಬ್ಬಯ್ಯ ಅವರು ಉದ್ಘಾಟಿಸಿದರು. ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಸಮಾಜದ ಸದಸ್ಯರು ಮತ್ತಿತರರು ಹಾಜರಿದ್ದರು. *ವಾರ್ಷಿಕ ಮಹಾಸಭೆ* ಇದೇ ಸಂದರ್ಭ ಬೇಂಗ್ ನಾಡ್ ಕೊಡವ ಸಮಾಜದ ವಾರ್ಷಿಕ ಮಹಾಸಭೆ ಬಾಚರಣಿಯಂಡ ದಿನೇಶ್ ಗಣಪತಿ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಮಾಜದ ಸ್ಥಾಪಕ ಅಧ್ಯಕ್ಷರನ್ನು, ಇಲ್ಲಿಯವರೆಗೆ ಕಾರ್ಯನಿರ್ವಹಿಸಿದ ಅಧ್ಯಕ್ಷರನ್ನು ಹಾಗೂ ಬೇರೆ ಸಂಘ ಸಂಸ್ಥೆಗಳಲ್ಲಿ ಚುನಾಯಿತರಾಗಿ ಅಧಿಕಾರದಲ್ಲಿರುವ ಸಮಾಜದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ಥಾಪಕ ಅಧ್ಯಕ್ಷ ದಿ.ಕಲ್ಮಾಡಂಡ ಅಯ್ಯಣ್ಣ ಅವರ ಪರವಾಗಿ ಪುತ್ರ ಕೆ.ಎ.ರವಿ ದೇವಯ್ಯ, ಮಾಜಿ ಅಧ್ಯಕ್ಷ ದಿ.ಮಂದಪಂಡ ತಿಮ್ಮಯ್ಯ ಅವರ ಪುತ್ರ ಎಂ.ಟಿ.ಸುಬ್ಬಯ್ಯ, ಮಾಜಿ ಅಧ್ಯಕ್ಷ ದಿ.ಪಟ್ಟಮಾಡ ಜೋಯಪ್ಪ ಅವರ ಪುತ್ರ ಪಿ.ಜೆ.ಗವಿನ್, ಮಾಜಿ ಅಧ್ಯಕ್ಷ ದಿ.ಕಲ್ಮಾಡಂಡ ಕೆ.ಗಣಪತಿ ಅವರ ಪುತ್ರ ಕೆ.ಜಿ.ಕುಟ್ಟಪ್ಪ, ಮಾಜಿ ಅಧ್ಯಕ್ಷರುಗಳಾದ…

Read More

ಮಡಿಕೇರಿ NEWS DESK  ಫೆ.24 : ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳಲ್ಲಿ ಅಡಗಿರುವ ಕಲಾಪ್ರತಿಭೆಯನ್ನು ಅನಾವರಣಗೊಳಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಸದ್ಬಳಕೆಯಾಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಕರೆ ನೀಡಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ನ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ವತಿಯಿಂದ ತಿಂಗಳಿಗೊಂದು ಕಾರ್ಯಕ್ರಮದಡಿ ಮಿಡಿದ ಪೊಲೀಸ್ ಹೃದಯಗಳಿಂದ ಘೋಷವಾಕ್ಯದ “ಪ್ರತಿಭೋತ್ಸವ” ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಯಿತು. ಜನಪದ ಗೀತೆ ಮತ್ತು ಭಾವಗೀತೆಗಳ ಸಂಗಮದ “ಪ್ರತಿಭೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂ.ಪಿ.ಕೇಶವ ಕಾಮತ್, ಕಾನೂನನ್ನು ಕಾಪಾಡುವ ಪೊಲೀಸರಲ್ಲಿ ಕೂಡ ಕಲಾವಿದನಿರುತ್ತಾನೆ. ಈ ಕಲಾವಿದನ ಪ್ರತಿಭೆಯನ್ನು ಪ್ರತಿಬಿಂಬಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಹೆಚ್ಚು ಉಪಯುಕ್ತವಾಗಿದೆ. ಇದೇ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳ ಪ್ರತಿಭೆ ಕೂಡ ಅನಾವರಣಗೊಳ್ಳಬೇಕು. ಇದರಿಂದ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ದೊರೆತಂತ್ತಾಗುತ್ತದೆ ಮತ್ತು ಶಾಲಾ, ಕಾಲೇಜುಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ…

Read More

ಸುಂಟಿಕೊಪ್ಪ NEWS DESK  ಫೆ.24 : ಸುಂಟಿಕೊಪ್ಪ ನಗರದಲ್ಲಿ ಸುಂಟಿಕೊಪ್ಪ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ದ್ವಿಚಕ್ರ ವಾಹನ ಸವಾರರಿಗೆ ಚಾಲನಾ ಸುರಕ್ಷತೆ, ರಸ್ತೆ ಸುರಕ್ಷತೆ ಮತ್ತು ವಾಹನ ಚಾಲನೆಯ ಕುರಿತು ಜಾಗೃತಿ ಮೂಡಿಸಿದರು. ವಾಹನ ಚಾಲನೆಯ ಸಮಯದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ತಿಳಿಸಿದ ಅಧಿಕಾರಿಗಳು ಮಕ್ಕಳು ಕೂಡ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದು ಸಲಹೆ ನೀಡಿದರು.

Read More

ಸೋಮವಾರಪೇಟೆ NEWS DESK ಫೆ.24 : ಕೊಡಗು ವಿಶ್ವವಿದ್ಯಾನಿಲಯ ಮುಚ್ಚುವ ಸರ್ಕಾರದ ಕ್ರಮ ಖಂಡನೀಯ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ದಶಕಗಳ ಕೊಡಗು ವಿ.ವಿ ಕನಸನ್ನು ಈ ಹಿಂದಿನ ಸರ್ಕಾರ ಸಾಕಾರಗೊಳಿಸಿದೆ.  ಯಾವುದೇ ಸರ್ಕಾರವಾದರು ಅನುದಾನ ಒದಗಿಸಿ ಅವುಗಳನ್ನು ಉಳಿಸಿಕೊಳ್ಳಬೇಕಾಗಿರುವುದು ಅದರ ಕರ್ತವ್ಯ, ಅನುದಾನ ನೀಡದೆ ವಿ.ವಿ ಮುಚ್ಚುವ ಕ್ರಮ ಸರಿಯಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಲವಾರು ವರ್ಷಗಳಿಂದ ಕೊಡಗಿನ ವಿದ್ಯಾರ್ಥಿಗಳು ಮಂಗಳೂರು ವಿ.ವಿ.ಯನ್ನು ಅವಲಂಬಿಸಿ ಹೈರಾಣಾಗಿದ್ದಾರೆ ಎಂದಿರುವ ಅವರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕೊಡಗು ಜಿಲ್ಲೆ ಈ ವಿ.ವಿ.ಪ್ರಾರಂಭದಿಂದಾಗಿ ಅಭಿವೃದ್ಧಿಯ ಹೊಸ ಚಿಗುರು ಕಂಡಂತಾಗಿತ್ತು ಆದರೆ ಸರ್ಕಾರದ ಈ ಕ್ರಮದಿಂದಾಗಿ ಜಿಲ್ಲೆಯ ಜನತೆಯ ಕನಸಿಗೆ ತಣ್ಣೀರೆರೀಚಿದಂತಾಗಿದೆ ಎಂದಿದ್ದಾರೆ. ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಲೋಕಸಭಾ ಸದಸ್ಯರು ಪಕ್ಷಾತೀತವಾಗಿ ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಕೊಡಗು ವಿವಿ ಯನ್ನ ಉಳಿಸಿಕೊಳ್ಳುವುದರೊಂದಿಗೆ ಮುಂದಿನ ಬಜೆಟ್ ನಲ್ಲಿ ಅನುದಾನ ಒದಗಿಸಲು ಶ್ರಮವಹಿಸಬೇಕೆಂದು…

Read More

ಪುತ್ತೂರು NEWS DESK  ಫೆ.24 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಪಯನೀಯರಿಂಗ್ ಫೇಶಿಯಲ್ ಇಮೋಶನ್ ಅನಾಲಿಟಿಕ್ಸ್; ಏನ್ ಇನೋವೇಟಿವ್ ಫ್ಯೂಷನ್ ಆಫ್ ಡೀಪ್ ಲರ್ನಿಂಗ್ ಎಂಡ್ ವೈಟ್ ನಾರ್ಮಲೈಸ್ಡ್ ಗ್ರೇಡಿಯೆಂಟ್ ಬೂಸ್ಟಿಂಗ್ ಟೆಕ್ನಿಕ್ (Pioneering facial emotion analytics: An innovative fusion of deep learning and weight normalized gradient boosting technics) ಎನ್ನುವ ವಿಷಯದ ಬಗ್ಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಸುರೇಶ.ಡಿ ಹಾಗೂ ಎ.ಜೆ ಇನ್ಸ್‌ ಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಕೃಷ್ಣಪ್ರಸಾದ್.ಡಿ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಮಾಡಿದ್ದಾರೆ. 21 ವರ್ಷಗಳ ಬೋಧನಾ ಅನುಭವವನ್ನು ಹೊಂದಿರುವ ಇವರು ಕಾಲೇಜಿನ ಎಂಸಿಎ ವಿಭಾಗದ ವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನದ ಬಗ್ಗೆ ತಮ್ಮ ಅಪಾರ ತಿಳುವಳಿಕೆಯನ್ನು…

Read More

ಮಡಿಕೇರಿ ಫೆ.24 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಟ್ಟೋಳಿ ಗ್ರಾಮದ ಪ್ರಸಿದ್ಧ ಧಾರ ಮಹೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ಸಂದರ್ಭದಲ್ಲಿ ಸಮಸ್ತ ನಾಡಿನ ಜನತೆಗೆ ಒಳಿತಾಗಲಿ ಎಂದು ಆಶಿಸಿದ ಶಾಸಕರು ತಾನು ಹಲವು ಸಮಯದಿಂದ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಭಗವಂತನ ಸನ್ನಿಧಿಯಲ್ಲಿ ಸಮಯ ಕಳೆಯಬೇಕೆಂದು ಯೋಚಿಸುತಿದ್ದೆ. ಆ ಸಮಯ ಈಗ ಒದಗಿ ಬಂದಿರುವುದು ತನ್ನನ್ನು ಪಾವನವಾಗಿಸಿದೆ ಎಂದು ಹೇಳಿದರು.

Read More

ನಾಪೋಕ್ಲು ಫೆ.24 NEWS DESK : ಶ್ರೀ ಕೃಷ್ಣನ ಕೊಳಲಿನ ಹಬ್ಬವೆಂದು ಖ್ಯಾತಿ ಪಡೆದ ಅಯ್ಯಂಗೇರಿ ಗ್ರಾಮದ ಶ್ರೀ ಚಿನ್ನತಪ್ಪ ಉತ್ಸವ ಸಂಪನ್ನಗೊಂಡಿತು. ಮೂರು ದಿನಗಳ ಕಾಲ ನಡೆದ ಶ್ರೀ ಕೃಷ್ಣನ ಕೊಳಲ ಹಬ್ಬದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಅಯ್ಯಂಗೇರಿ ಗ್ರಾಮದಲ್ಲಿ ವರ್ಷಂಪ್ರತಿ ಗ್ರಾಮಸ್ಥರು ವಿಜ್ರಂಭಣೆಯಿಂದ ಆಚರಿಸಿಕೊಂಡು ಬರುತ್ತಿರುವ ಚಿನ್ನತಪ್ಪ ಉತ್ಸವದ ಪಟ್ಟಣಿಹಬ್ಬ ಜರುಗಿತು. ಅಧಿಕ ಸಂಖ್ಯೆಯಲ್ಲಿ ಭಕ್ತರು ಉತ್ಸವಕ್ಕೆ ಆಗಮಿಸಿ ಶ್ರೀ ಕೃಷ್ಣನ ಕೊಳಲಿನ ನಾದವನ್ನು ಆಲಿಸಿ ದೇವಾಲಯದಲ್ಲಿ ಹರಕೆ, ಪೂಜೆ ಸಲ್ಲಿಸಿದರು. ಚಿನ್ನತಪ್ಪ ದೇವರ ವಾರ್ಷಿಕ ಉತ್ಸವ ಮುಂಜಾನೆ ಅನುರಾಧ ನಕ್ಷತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿತು. ಶನಿವಾರ ದೇವಾಲಯದಿಂದ ಶ್ರೀಕೃಷ್ಣನದು ಎನ್ನಲಾದ ಕೊಳಲನ್ನು ಭಕ್ತಿಪೂರ್ವಕವಾಗಿ ಹೊರತೆಗೆಯಲಾಯಿತು. ಹಬ್ಬಕ್ಕೆ ನಿಗದಿಪಡಿಸಿದ ಕುಟುಂಬದ ಹಿರಿಯರಾದ ಬಿದ್ದಂಡ ಹರೀಶ್ ಕೊಳಲನ್ನು ಹಿಡಿದು ನಿರ್ದಿಷ್ಟ ಸ್ಥಳಗಳಲ್ಲಿ ಮೂರು ಬಾರಿ ನುಡಿಸುತ್ತಾ ಊರ ಮಂದ್ ಗೆ ಆಗಮಿಸಿದರು. ಅಶ್ವತ್ಥ ವೃಕ್ಷದ ಕೆಳಗೆ ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಕೃಷ್ಣನ ಕೊಳಲನ್ನು ನುಡಿಸಲಾಯಿತು. ಶ್ವೇತವಸ್ತ್ರಧರಿಸಿದ ಮಹಿಳೆಯರು…

Read More

ಮಡಿಕೇರಿ ಫೆ.24 NEWS DESK : ನೆರೆಯ ಕೇರಳ ರಾಜ್ಯದ ಇರಿಕ್ಕುರ್ ಶಾಸಕ ಸಜೀವ್ ಜೋಸೆಫ್  ಅವರು ಮುಖ್ಯಮಂತ್ರಿಗಳ ಕಾನೂನು ಸಲಹಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು. ಶಾಸಕರ ಗೃಹ ಕಚೇರಿಯಲ್ಲಿ ಸಜೀವ್ ಜೋಸೆಫ್  ಅವರನ್ನು ಬರಮಾಡಿಕೊಂಡ ಶಾಸಕರು ಹಲವು ಪ್ರಮುಖ ವಿಷಯಗಳು ಬಗ್ಗೆ ಸಮಾಲೋಚನೆ ನಡೆಸಿದರು.  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಮುಖಂಡರಾದ ಪಿ.ಸಿ.ಹಸ್ಸೈನಾರ್  ಹಾಜರಿದ್ದರು.

Read More

ಮಡಿಕೇರಿ ಫೆ.24 NEWS DESK : ವಿರಾಜಪೇಟೆ ತಾಲ್ಲೂಕು ಮೈದಾನದಲ್ಲಿ ಸಿಸಿಬಿ ವತಿಯಿಂದ ಆಯೋಜಿಸಿದ ಫುಟ್ಬಾಲ್ ಪಂದ್ಯಾವಳಿಯನ್ನು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಫುಟ್ಬಾಲ್ ಆಟಗಾರರನ್ನು ಅಭಿನಂದಿಸಿ ಶುಭ ಕೋರಿದರು. ಚೆಂಡನ್ನು ಒದೆಯುವ ಮೂಲಕ ವಿಶಿಷ್ಟ ರೀತಿಯಲ್ಲಿ ಶುಭ ಹಾರೈಸಿದ ಶಾಸಕರು, ಕ್ರೀಡೆಯು ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಗೆಲುವು-ಸೋಲನ್ನು ಸಮಾನವಾಗಿ ಸ್ವೀಕರಿಸಿ, ಗೆದ್ದವರನ್ನು ಅಭಿನಂದಿಸುತ್ತಾ ಹಾಗು ಸೋತವರನ್ನು ಮರು ಪ್ರಯತ್ನಕ್ಕಾಗಿ ಹುರಿದುಂಬಿಸುವುದೇ ನಿಜವಾದ ಕ್ರೀಡಾ ಸ್ಪೂರ್ತಿ  ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.  ಕ್ರೀಡೆಯು ಪ್ರತಿಯೊಬ್ಬ ವ್ಯಕ್ತಿಯ ವೈಯುಕ್ತಿಕ ಬೆಳವಣಿಗೆ ಹಾಗೂ ಬಲವರ್ಧನೆಗೆ ಸಹಕಾರಿಯಾಗಿದ್ದು, ಅನೇಕ ರೀತಿಯಲ್ಲಿ ವ್ಯಕ್ತಿತ್ವ ವಿಕಾಸನಕ್ಕೆ ಪೂರಕವಾಗಿರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವುದಕ್ಕೂ ಮಿಗಿಲಾಗಿ ಕ್ರೀಡಾ ಮನೋಭಾವದಿಂದ ಆಟವನ್ನು ಆಸ್ವಾದಿಸಿ ಜಯಗಳಿಸುವುದು ನಮ್ಮೆಲ್ಲರ ಪ್ರಮುಖ ಗುರಿಯಾಗಿರಬೇಕು ಎಂದು ಪುನರುಚ್ಚರಿಸಿದರು. ಈ ಪಂದ್ಯಾಟವು, ನಾಡಿನ ಹಲವು ಫುಟ್ಬಾಲ್ ಪ್ರತಿಭೆಗಳು ಅನಾವರಣಗೊಳ್ಳಲು ಸಹಕಾರಿಯಾಗಿ ಕ್ರೀಡಾಂಗದಲ್ಲಿ ಉತ್ತಮ ಹೆಸರು ಗಳಿಸಲು ನಾಂದಿಯಾಗಲಿ ಎಂದು ಶುಭ ಕೋರಿದರು.…

Read More