ಕುಶಾಲನಗರ NEWS DESK ಫೆ.23 : ಜಿಲ್ಲೆಯ ಕುಶಾಲನಗರ ಸಮೀಪ ಅಳುವಾರ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ಇತರೆ ವಿಶ್ವವಿದ್ಯಾಲಯಗಳಿಗೆ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ಕುಶಾಲನಗರ ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಾಜದ ಅಧ್ಯಕ್ಷರಾದ ವಾಂಚೀರ ಮನು ನಂಜುಂಡ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು ಕೊಡಗು ವಿಶ್ವವಿದ್ಯಾಲಯದಲ್ಲಿ ಕುಶಾಲನಗರ ಮತ್ತು ಸುತ್ತಮುತ್ತ ಜಿಲ್ಲೆಯ ಹಲವೆಡೆ ನೆಲೆಸಿರುವ ಬಡತನ ರೇಖೆಯ ಹಾಗೂ ಮಧ್ಯಮ ವರ್ಗದ ಹಿಂದುಳಿದ ಜನರಿಗೆ ಉನ್ನತ ಶಿಕ್ಷಣವನ್ನು ಜಿಲ್ಲೆಯಲ್ಲೇ ನೀಡುವ ನಿಟ್ಟಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿವಿಯನ್ನು ಕಲ್ಪಿಸಿದೆ. ಈ ಮೂಲಕ ನೂರಾರು ಸಂಖ್ಯೆಯ ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ಅನುಕೂಲ ಕಲ್ಪಿಸುವುದರೊಂದಿಗೆ ವಿದ್ಯಾರ್ಥಿಗಳ ಹಾಗೂ ಪೋಷಕರ ಕನಸು ನನಸಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಇದನ್ನು ರದ್ದುಗೊಳಿಸಿ ಬೇರೆ ವಿಶ್ವವಿದ್ಯಾಲಯಕ್ಕೆ ವಿಲೀನಗೊಳಿಸುವ ಚಿಂತನೆ ಮಾಡಿರುವುದು ವಿಪರ್ಯಾಸ. ಸರ್ಕಾರದ ನಿರ್ಧಾರದ ವಿರುದ್ಧ ಕುಶಾಲನಗರ ಕೊಡವ ಸಮಾಜ ಸೇರಿದಂತೆ ಜಿಲ್ಲೆಯ…
ಲೇಖಕ: admin
ಮಡಿಕೇರಿ NEWS DESK ಫೆ.23 : ಹಲವು ವರ್ಷಗಳ ನಂತರ ಕೊಡಗು ಜಿಲ್ಲೆಗೆ ವರದಾನವಾಗಿ ಸಿಕ್ಕಿರುವ ಕೊಡಗು ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾಗಿ ಬೆಳವಣಿಗೆಯ ಹಾದಿಯಲ್ಲಿರುವಾಗಲೇ ಇದನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿಗಳ ಸಂಘ ತೀವ್ರವಾಗಿ ವಿರೋಧಿಸುವುದಾಗಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಗತ್ತಿನ ಯಾವುದೇ ದೇಶದಲ್ಲಿ ಹಣಕಾಸಿನ ಕ್ಷುಲ್ಲಕ ಕಾರಣ ನೀಡಿ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರ ಮುಚ್ಚಿದ ನಿದರ್ಶನಗಳು ಇಲ್ಲ. ಆದ್ದರಿಂದ ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಉಪಸಮಿತಿಯ ಈ ಅವೈಜ್ಞಾನಿಕ ಹಾಗೂ ಅವಾಸ್ತವಿಕ ಪ್ರಸ್ತಾವನೆಯನ್ನು ತಕ್ಷಣ ತಿರಸ್ಕರಿಸಬೇಕು. 2025ರ ಆಯವ್ಯಯದಲ್ಲಿ ಅಗತ್ಯ ಅನುದಾನ ಕೊಡಗು ವಿಶ್ವವಿದ್ಯಾಲಯಕ್ಕೆ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಗುಣಮಟ್ಟದ ನಾಗರಿಕ ಮೂಲಭೂತ ಸೌಕರ್ಯಗಳಿಲ್ಲ. ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರಗಳು ಇಲ್ಲ. ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು…
ಕುಶಾಲನಗರ NEWS DESK ಫೆ.22 : ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ 50ನೇ ಕಾರ್ಯಕ್ರಮವಾಗಿ ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಅವರ ನುಡಿನಮನ ಹಾಗೂ ಮಾಜಿ ಮುಖ್ಯಮಂತ್ರಿ ದಿ.ವೀರೇಂದ್ರ ಪಾಟೀಲರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಫೆ.25 ರಂದು ರೈತ ಸಹಕಾರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕುಶಾಲನಗರ ತಾಲ್ಲೂಕಿನ ಅಭಿವೃದ್ಧಿ ಹರಿಕಾರ ದಿ.ಗುಂಡೂರಾವ್ ಹಾಗೂ ರೈತರ ಜೀವನಾಡಿ ಹಾರಂಗಿ ಜಲಾಶಯದ ನಿರ್ಮಾತೃ ವೀರೇಂದ್ರ ಪಾಟೀಲರನ್ನು ಸ್ಮರಿಸುವ ಕಾರ್ಯಕ್ರಮ ಇದಾಗಿದ್ದು,ಅಂದು ಬೆಳಿಗ್ಗೆ 8 ಗಂಟೆಗೆ ಕೊಡಗು ಮೈಸೂರು ಗಡಿಭಾಗದ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭವ್ಯ ಮಂಟಪದ ಮೆರವಣಿಗೆ ನಡೆಯಲಿದೆ.ಈ ಮೆರವಣಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡುವರು. ಬೆಳಿಗ್ಗೆ 10.30 ಗಂಟೆಗೆ ರೈತ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರು ಆದ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು.ಶಾಸಕ ಡಾ.ಮಂತರ್ ಗೌಡ…
ಕುಶಾಲನಗರ NEWS DESK ಫೆ.22 : ಕೊಡಗು ವಿಶ್ವ ವಿದ್ಯಾಲಯವನ್ನು ಬಂದ್ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಅಖಿಲಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ ಹೇಳಿದರು. ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು ಕೊಡಗು ಗುಡ್ಡಗಾಡು ಪ್ರದೇಶ ಹಾಗೂ ಇಲ್ಲಿನ ಬಹುತೇಕ ಸಮುದಾಯ ಕೂಲಿಕಾರ್ಮಿಕರಾಗಿದ್ದಾರೆ. ಗ್ರಾಮೀಣ ಹಾಗೂ ಜನಸಾಮಾನ್ಯರ ಮಕ್ಕಳಿಗೆ ಕೊಡಗು ವಿವಿ ರಚನೆಯಿಂದ ಮನೆ ಬಾಗಿಲಲ್ಲಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣ ದೊರೆಯುತ್ತಿದೆ.ಕೊಡಗು ವಿವಿ ಬಂದ್ ಮಾಡಿದರೆ ಉನ್ನತ ಶಿಕ್ಷಣಕ್ಕಾಗಿ ಮಂಗಳೂರು ಹಾಗೂ ಮೈಸೂರು ಅವಲಂಬಿಸಬೇಕಾಗುತ್ತದೆ. ಜೊತೆಗೆ ಉನ್ನತ ಶಿಕ್ಷಣಕ್ಕೆ ಅವಕಾಶಗಳು ಕಡಿಮೆ ಇರುತ್ತವೆ. ಆದ್ದರಿಂದ ಇಲ್ಲಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ವಿವಿಯನ್ನು ಅಳುವಾರದಲ್ಲಿ ಉಳಿಸಿ ಮುಂದುವರೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು. ಕೊಡಗು ವಿವಿ ಉಳಿವಿಗಾಗಿ ಹಿತರಕ್ಷಣಾ ಬಳಗದ ಹೋರಾಟಕ್ಕೆ ನಮ್ಮ ಸಂಘಟನೆ ವತಿಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಕೊಡಗು ವಿವಿ ಮುಂದುವರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
ಕುಶಾಲನಗರ NEWS DESK ಫೆ 22: ಕುಶಾಲನಗರ ಲಯನ್ಸ್ ಕ್ಲಬ್ ಗೆ ಲಯನ್ಸ್ ಜಿಲ್ಲಾ ಗವರ್ನರ್ ಬಿ.ಎಂ.ಭಾರತಿ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು. ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಅವರು, ಕುಶಾಲನಗರ, ಮಡಿಕೇರಿ, ಸುಂಟಿಕೊಪ್ಪ, ಸೋಮವಾರಪೇಟೆ ಕ್ಲಬ್ ಪ್ರಮುಖರೊಂದಿಗೆ ಚರ್ಚೆ ನಡೆಸಿದರು. ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯಾ ಕ್ಲಬ್ ಗಳ ಕಾರ್ಯದರ್ಶಿ ಗಳು ತಮ್ಮ ಕ್ಲಬ್ ನ ವಾರ್ಷಿಕ ವರದಿ ವಾಚಿಸಿದರು. ಇದೇ ಸಂದರ್ಭ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ಗವರ್ನರ್ ಬಿ.ಎಂ.ಭಾರತಿ, ಜಿಲ್ಲೆಯ ಲಯನ್ಸ್ ಕ್ಲಬ್ ಗಳ ಪದಾಧಿಕಾರಿಗಳು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಮತ್ತಷ್ಟು ತೊಡಗಿಸಿಕೊಂಡು ಸಾಧನೆ ತೋರಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರ ಶ್ರಮ ಅಗತ್ಯ. ಜಿಲ್ಲೆಯಲ್ಲಿ ಹೆಚ್ಚಿನ ಸದಸ್ಯತ್ವಕ್ಕೆ ಕೂಡ ಎಲ್ಲರೂ ಒತ್ತು ನೀಡಬೇಕಿದೆ. ಮಕ್ಕಳನ್ನು ಸುಶಿಕ್ಷಿತರಾಗಿಸುವುದೇ ಅವರಿಗೆ ನೀಡುವ ನಿಜವಾದ ಸಂಪತ್ತು. ಆಸ್ತಿ…
ಮಡಿಕೇರಿ ಫೆ.22 NEWS DESK : ಕಡಗದಾಳು ಗ್ರಾಮದಲ್ಲಿರುವ ಶ್ರೀ ಬೊಟ್ಲಪ್ಪೇಶ್ವರ ದೇವಾಲಯದಲ್ಲಿ ಫೆ.26 ಮತ್ತು 27 ರಂದು ಮಹಾಶಿವರಾತ್ರಿಯ ವಾರ್ಷಿಕ ಮಹಾಪೂಜೆ ನಡೆಯಲಿದೆ. ಫೆ.26 ಬಿಲ್ವಪತ್ರೆ ಅರ್ಚನೆ, ಎಳೆನೀರು ಅಭಿಷೇಕ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ರಾತ್ರಿ ಜಾಗರಣೆ ನಡೆಯಲಿದೆ. ಫೆ.27 ರಂದು ಬೆಳಿಗ್ಗೆ 10 ಗಂಟೆಯಿಂದ ವಿವಿಧ ಪೂಜಾ ಕೈಂಕರ್ಯಗಳು ಆರಂಭಗೊಂಡು ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಬೊಟ್ಲಪ್ಪ ಯುವ ಸಂಘದ ಪ್ರಮುಖರು ಮನವಿ ಮಾಡಿದ್ದಾರೆ.
ಮಡಿಕೇರಿ ಫೆ.22 NEWS DESK : ದಕ್ಷಿಣ ಕೊಡಗು ಲೇಖಕಿಯರ ಮತ್ತು ಕಲಾವಿದರ ಬಳಗ ವಿರಾಜಪೇಟೆ ಹಾಗೂ ಶ್ರೀಜಿತ್ ಸಂಸ್ಥೆ ಕೊಡಗು ಸಹಯೋಗದಲ್ಲಿ ಖ್ಯಾತ ಸಾಹಿತಿ ದಿ.ಕೆ.ಎ.ತಂಗವೇಲು ಮತ್ತು ದಿ.ಗೌರಮ್ಮ ಅವರ ಜ್ಞಾಪಕಾರ್ಥವಾಗಿ ಲೇಖಕಿ ಕೆ.ಟಿ.ವಾತ್ಸಲ್ಯ ಅವರ “ಮೂರನೇ ಮಹಾಯುದ್ಧ ಮತ್ತು ಶಾಂತಿ” ಪುಸ್ತಕವು ಫೆ.26 ರಂದು ಬಿಡುಗಡೆಯಾಗಲಿದೆ. ವಿರಾಜಪೇಟೆಯ ಪುರಭವನ(ಟೌನ್‍ಹಾಲ್)ನಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸಾಹಿತಿ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ.ಮುಲ್ಲೇಂಗಡ ರೇವತಿ ಪೂವಯ್ಯ ಉದ್ಘಾಟಿಸಲಿದ್ದು, ನಿವೃತ್ತ ಪ್ರಾಂಶುಪಾಲರಾದ ಡಾ.ಜೆ.ಸೋಮಣ್ಣ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. ದಕ್ಷಿಣ ಕೊಡಗು ಲೇಖಕಿಯರ ಮತ್ತು ಕಲಾವಿದರ ವೇದಿಕೆಯ ಅಧ್ಯಕ್ಷರಾದ ಎಂ.ಪಿ.ಪುಷ್ಪಲತ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲರಾದ ಲತೀಶ್, ಸಾಹಿತಿ ಅಪರ್ಣ ಹುಲಿತಾಳ, ಕೊಡಗು ಹಿಂದೂ ಮಲಯಾಳಿ ಮಹಿಳಾ ಅಸೋಸಿಯೇಷನ್‍ನ ಶೀಬಾ ಪೃಥ್ವಿನಾಥ್, ಹಿರಿಯ ಸಾಹಿತಿ ಗಿರೀಶ್ ಕಿಗ್ಗಾಲು ಪಾಲ್ಗೊಳ್ಳಲಿದ್ದಾರೆ. ಸೋಮೆಯಂಡ ಕೌಸಲ್ಯ ಸತೀಶ್ ಪುಸ್ತಕ ವಿಮರ್ಶೆ ಮಾಡಲಿದ್ದಾರೆ.
ಮಡಿಕೇರಿ ಫೆ.22 NEWS DESK : ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಟ್ಟ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ, ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳು, ಸಂಚಾರ ಸುರಕ್ಷತೆ, ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಪೊಕ್ಸೊ ಕಾಯ್ದೆಗಳ ಕುರಿತು ಅರಿವು ಮೂಡಿಸಿದರು.
ಮಡಿಕೇರಿ ಫೆ.22 NEWS DESK : ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೊಡಗು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕೊಡವ ವಿದ್ಯಾರ್ಥಿಗಳಿಗೆ ಮಡಿಕೇರಿಯ ಕೊಡವ ದೀನಬಂಧು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಕಟ್ಟೇರ ಎ.ಅಯ್ಯಪ್ಪ ವಿದ್ಯಾರ್ಥಿಗಳಿಗೆ ಚೆಕ್ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ನಮ್ಮ ಟ್ರಸ್ಟ್ ವತಿಯಿಂದ ನೀಡಲಾಗುತ್ತಿರುವ ಈ ವಿದ್ಯಾರ್ಥಿವೇತನವನ್ನು ವಿದ್ಯಾರ್ಜಗೆ ಅಗತ್ಯವಾದ ಶುಲ್ಕ ಪಾವತಿಗೆ ಅಥವಾ ಪುಸ್ತಕ ಕೊಳ್ಳಲು, ಇನ್ನಿತರ ಶೈಕ್ಷಣಿಕ ಉಪಯೋಗಕ್ಕೆ ಬಳಸಿಕೊಳ್ಳಬೇಕು, ವಿದ್ಯಾರ್ಥಿಗಳು ತಾವು ಮುಂದೆ ಜೀವನದಲ್ಲಿ ಯಾವ ಮಾರ್ಗದಲ್ಲಿ ಸಾಗಬೇಕು ಎಂಬ ಗುರಿಯನ್ನು ಇಟ್ಟುಕೊಂಡು, ಸಮಯ ಪಾಲನೆಯೊಂದಿಗೆ ವಿದ್ಯಾಭ್ಯಾಸ ಮುಗಿಸಿ ಜೀವನದ ಉತ್ತುಂಗವನ್ನು ಏರಬೇಕು ಎಂದು ಸಲಹೆ ನೀಡಿದರು. ನಾವು ನಮ್ಮ ಹೆತ್ತವರಿಗೆ, ವಿದ್ಯೆ ಕೊಟ್ಟ ಗುರುಗಳಿಗೆ, ಸರಿಯಾದ ಮಾರ್ಗ ತೋರಿದ ಹಿರಿಯರನ್ನು ಗೌರವದಿಂದ ಕಾಣಬೇಕು ಮತ್ತು ಜೀವನದ ಮೌಲ್ಯವನ್ನು ಜಾಗೃತ ಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದ…
ನಾಪೋಕ್ಲು ಫೆ.22 NEWS DESK : ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಸೆ.24 ರಂದು ನಡೆಯಲಿರುವ ಸಾರ್ವಜನಿಕ ಸಮ್ಮೇಳನಕ್ಕೆ ಜಿಲ್ಲೆ ಮತ್ತು ಹೊರ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬರುವುದರಿಂದ ಅಲ್ಲದೇ ನಾಪೋಕ್ಲುವಿನಲ್ಲಿ ಸಂತೆ ನಡೆಯಲಿರುವುದರಿಂದ ನಾಪೋಕ್ಲು ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆ ಆಗುವ ಸಂಭವ ಇರುತ್ತದೆ. ಆದ್ದರಿಂದ ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿಗಳು ಕೋರಿದ್ದಾರೆ. ನಾಪೋಕ್ಲು ನಗರದಲ್ಲಿ ಸುಗಮ ಸಂಚಾರಕ್ಕಾಗಿ ಎಮ್ಮೆಮಾಡು ಮಖಾಂ ಉರೂಸ್ ಗೆ ಭಾಗವಹಿಸಲು ಬರುವವರು ಹಾಗೂ ಸಾರ್ವಜನಿಕರು ತಮ್ಮ ತಮ್ಮ ವಾಹನವನ್ನು ಕೊಟ್ಟಮುಡಿ ಜಂಕ್ಷನ್ ನಿಂದ ಎಮ್ಮೆಮಾಡು ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ನಿಲ್ಲಿಸದಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕರಿಗೆ ಪಾರ್ಕಿಂಗ್ ಸ್ಥಳ: 1) ಪೊಲೀಸ್ ಮೈದಾನ 2) ಕಂದಾಯ ಇಲಾಖೆಯ ಮುಂಭಾಗ 3) ಹಳೆ ಪೊಲೀಸ್ ವಸತಿ ತೆರವು ಮಾಡಿದ ಸ್ಥಳ 4)…






