ನಾಪೋಕ್ಲು ಫೆ.3 NEWS DESK : ಚೇರಂಬಾಣೆ ಕೋಪಟ್ಟಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಬಿ.ಎನ್.ಜಯಂತಿ ಅವರನ್ನು ಶಾಲೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಸದಸ್ಯರಾದ ಮೀನಾಕ್ಷಿ, ಶಾಂತಿ, ನಂದ ಕುಮಾರ್ ಹಾಗೂ ನಿವತ್ತ ಶಿಕ್ಷಕಿಯವರಾದ ಡಿ.ಕೆ.ಶಾಂತ, ದಾಯನ ಸರೋಜ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ನಿಶಾ ಸೇರಿದಂತೆ ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಶಿಕ್ಷಕಿ ರೇಖಾ ಸ್ವಾಗತಿಸಿ, ನಿವೃತ್ತ ಶಿಕ್ಷಕಿಯ ಪರಿಚಯವನ್ನು ಮಾಡಿದರು. ವಿದ್ಯಾರ್ಥಿನಿ ಎನ್.ಪಿ.ಇಂಚರಾ ವಂದಿಸಿದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಸುಂಟಿಕೊಪ್ಪ ಜ.3 NEWS DESK : ಗ್ರಾಮೀಣ ಮುಖ್ಯ ರಸ್ತೆಗಳು ಸೇರಿದಂತೆ ಎಲ್ಲಾ ರೀತಿಯ ಸಂಪರ್ಕ ರಸ್ತೆಯನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು. ಕೆದಕಲ್ ಗ್ರಾ.ಪಂ ವ್ಯಾಪ್ತಿಯ ಹೊರೂರು ಗ್ರಾಮದ ಕೆದಕಲ್-ಹೊರೂರು-ಚೆಟ್ಟಳ್ಳಿ ಸಂಪರ್ಕ ರಸ್ತೆಯನ್ನು ರೂ.45 ಲಕ್ಷ ವೆಚ್ಚದಲ್ಲಿ ಹಂತದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೆದಕಲ್ ಗ್ರಾಮ ಪಂಚಾಯಿತಿಯು ದೊಡ್ಡ ವ್ಯಾಪ್ತಿಯನ್ನು ಹೊಂದಿದ್ದು, ಜನ ಸಂಖ್ಯೆ ಕಡಿಮೆ ಇದೆ. ಈಗಾಗಲೇ ಹಲವು ಇಲಾಖಾ ಅನುದಾನಗಳ ಅಡಿಯಲ್ಲಿ ಒಟ್ಟು ರೂ ತೊಂಬತ್ತು ಲಕ್ಷದಷ್ಟು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕೆಲವು ಕಾಮಗಾರಿಗಳು ಮುಗಿದಿದ್ದು, ಕೆಲವು ಕಾಮಗಾರಿಗಳನ್ನು ಮುಂದುವರಿದ ಕಾಮಗಾರಿಯೆಂದು ಪರಿಗಣಿಸಬೇಕಾಗಿದೆ. ಅಭಿವೃದ್ಧಿ ಕಾಮಗಾರಿಗಳನ್ನು ನಿರ್ವಹಿಸುವ ಸಂದರ್ಭ ತೋಟದ ಮಾಲೀಕರು ರಸ್ತೆಯ 2 ಬದಿಯ ಮರಗಳನ್ನು ತೋಟದ ಬೇಲಿಗಳನ್ನು ತೆರವುಗೊಳಿಸಿಕೊಡುವುದರೊಂದಿಗೆ ಅಭಿವೃದ್ಧಿಗೆ ತಮ್ಮ ಸಹಕಾರ ನೀಡುವುದರಿಂದ ಕಾಮಗಾರಿಗಳು ಹೆಚ್ಚು ಕಾಲ ಉಪಯೋಗಕ್ಕೆ ಬರುತ್ತದೆ ಎಂದರು. ಕೆದಕಲ್ ಗ್ರಾಮ ಪಂಚಾಯಿತಿಯ ಕೆಲವು ಹಳ್ಳಿಗಳಲ್ಲಿ…
ಮಡಿಕೇರಿ ಫೆ.3 NEWS DESK : ಭಾರತದ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 33ನೇ ವಾರ್ಷಿಕೋತ್ಸವವು ತಾಳತ್ತಮನೆಯಲ್ಲಿ ಸಂಭ್ರಮದಿಂದ ಆಚರಿಯಲಾಯಿತು. ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ಮಡಿಕೇರಿ ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಮತ್ತು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಆಕ್ಷಿರಿಚ್ ಮಾಲೀಕ ಪಿ.ಟಿ.ಉಣ್ಣಿ ಕೃಷ್ಣ ಉದ್ಘಾಟಿಸಿದರು. ನೇತಾಜಿ ಮಂಡಳಿಯ ಅಧ್ಯಕ್ಷ ಕೊಂಡಿರ ಪಿ.ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜೀವ್ ಲೋಚನ, ಮದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೆಚ್.ಜೆ.ಯಾದವ್, ಉದ್ಯಮಿ ಮುದ್ಯನ ಕಿಶನ್, ಮದೆ ಪಂಚಾಯತ್ ಅಧ್ಯಕ್ಷೆ ವಿಮಲಾಕ್ಷಿ, ನಾಪೋಕ್ಲು ಗ್ರಾಮ ಪಂಚಾಯತ್…
ಕುಶಾಲನಗರ ಫೆ.3 NEWS DESK : ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಹುದ್ದೆಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಹಿರಿಯ ಉಪನ್ಯಾಸಕ (ಎ- ದರ್ಜೆಯ ಅಧಿಕಾರ ಹುದ್ದೆ) ರಾಗಿ ಮುಂಬಡ್ತಿ ಹೊಂದಿದ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ ಅವರಿಗೆ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳು ಪುಷ್ಪ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, 25 ವರ್ಷಗಳ ಕಾಲ ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾಗಿ ಉತ್ತಮ ಸೇವೆ ಸಲ್ಲಿಸಿರುವ ಪುಷ್ಪ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಉತ್ತಮ ಸಾಧನೆ ಮಾಡಲಿ ಎಂದು ಶುಭಹಾರೈಸಿದರು. ಶಿಕ್ಷಕರ ಪರಿಶ್ರಮ ಮತ್ತು ವಿಶೇಷ ಕಾಳಜಿಯಿಂದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಅಭಿವೃದ್ಧಿ ಸಾಧ್ಯ ಎಂದರು. ಸನ್ಮಾನಿತರಾದ ಬಿ.ಎನ್.ಪುಷ್ಪ ಮಾತನಾಡಿ…
ಮಡಿಕೇರಿ ಫೆ.3 NEWS DESK : ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ ಗ್ರಾಮ ಪಂಚಾಯತಿಯಲ್ಲಿ 69.5 ಲಕ್ಷ ರೂಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕರು, ಕ್ಷೇತ್ರದ ಗ್ರಾಮೀಣ ಭಾಗಗಳಿಗೆ ಮೂಲಭೂತ ಸೌಕರ್ಯವನ್ನು ಶೇ.100 ರಷ್ಟು ಒದಗಿಸುವುದು ತಮ್ಮ ಆದ್ಯತೆಯಾಗಿದ್ದು ಇದನ್ನು ಪೂರ್ಣಗೊಳಿಸಲು ಬದ್ದನಿದ್ದೇನೆ ಎಂದು ತಿಳಿಸಿದರು. ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿಯವರು ಸೇರಿದಂತೆ ಸಚಿವ ಸಂಪುಟದ ಎಲ್ಲಾ ಸದಸ್ಯರು ಕೊಡಗಿನ ಅಭಿವೃದ್ಧಿ ಬಗ್ಗೆ ಸಂಪೂರ್ಣವಾಗಿ ಸಹಕಾರ ನೀಡುತ್ತಿದ್ದು ಅವರ ಸಹಕಾರಕ್ಕೆ ಧನ್ಯವಾದ ಹೇಳಬಯಸುತ್ತೇನೆ ಎಂದು ತಿಳಿಸಿದರು. ನೂತನವಾಗಿ ನಿರ್ಮಾಣವಾಗುತ್ತಿರುವ ಹೊಸ್ಕೇರಿ ಪಂಚಾಯತಿ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ ಎಂದರು. ಈಗಾಗಲೇ ಪಂಚಾಯತ್ ಭವನ ನಿರ್ಮಾಣಕ್ಕೆ ಈಗಿನ ಸರ್ಕಾರದಿಂದ ಹತ್ತು ಲಕ್ಷ ರೂಗಳ ಅನುದಾನ ಒದಗಿಸಲಾಗಿದ್ದು, ಹೆಚ್ಚುವರಿ ಅನುದಾನ ನೀಡುವ ಭರವಸೆಯನ್ನು ನೀಡಿದರು. ಈ ಸಂಧರ್ಭದಲ್ಲಿ ಹೆಚ್.ಎ.ಹಂಸ, ಗ್ಯಾರೆಂಟಿ ಅನುಷ್ಠಾನ ಸಮಿತಿ…
ಮಡಿಕೇರಿ ಫೆ.3 NEWS DESK : ತಾಳತ್ತಮನೆ ಶ್ರೀ ದುರ್ಗಾಭಗವತಿ ದೇವಾಲಯದ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ದೇವಾಲಯದ ವಾರ್ಷಿಕೋತ್ಸವದ ಆಹ್ವಾನ ಪತ್ರಿಕೆಯನ್ನು ಚೌಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಸತ್ಯೇಶ್ ಭಟ್ ಅನಾವರಣಗೊಳಿಸಿದರು. ಸಭೆಯಲ್ಲಿ ದೇವಾಲಯದ ಮುಖ್ಯ ಅರ್ಚಕ ಕೃಷ್ಣ ಪ್ರಸಾದ್ ಹಾಗೂ ದೇವಾಲಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು.
ಸೋಮವಾರಪೇಟೆ ಫೆ.3 NEWS DESK : ಆಲೆಕಟ್ಟೆ ರಸ್ತೆಯ ಸಾರ್ವಜನಿಕ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ವಾರ್ಷಿಕ ಪೂಜೆ ಮತ್ತು ವೈಕುಂಠ ಏಕಾದಶಿ ಕಾರ್ಯಕ್ರಮ ಫೆ.10 ರಿಂದ 12ರ ತನಕ ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಹೆಚ್.ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.10 ರಂದು ವೈಕುಂಟ ಏಕಾದಶಿ ಅಂಗವಾಗಿ ಬೆಳಿಗ್ಗೆ 6.30 ರಿಂದ 10 ರವರೆಗೆ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ. ಸಂಜೆ 6 ರಿಂದ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ ಎಂದು ತಿಳಿಸಿದರು. ಫೆ.12ರಂದು ವಾರ್ಷಿಕ ಪೂಜಾ ಮಹೋತ್ಸವ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಬೆಳಿಗ್ಗೆ 9 ರಿಂದ ನವ ಪ್ರಧಾನ ಕಲಾ ಕಲಶಪ್ರತಿಷ್ಠೆ, ವೆಂಕಟರಮಣ ಸ್ವಾಮಿಗೆ ಕಲಾತತ್ವಾಧದಿ ವಾಸ ಹೋಮ, ಶಿಖರಕ್ಕೆ ಕಲಶಾಭಿಷೇಕ, ಸ್ವಾಮಿ ಕಲಶಾಭಿಷೇಕ, ಮಹಾಪೂಜೆ ಮತ್ತು ಮಹಾ ಮಂಗಳಾರತಿ ನಡೆಯುವುದು. ಸಂಜೆ 5 ಗಂಟೆಯಿಂದ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ದೇವಾಲಯಕ್ಕೆ ಆಗಮಿಸಿದ ಭಕ್ತಾರಿಗೆ ಊಟದ ವ್ಯವಸ್ಥೆ…
ಮಡಿಕೇರಿ NEWS DESK ಫೆ.2 : ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳ ಸಂಸ್ಕೃತಿಯ ಭದ್ರತೆಗಾಗಿ ಮತ್ತು ಹಕ್ಕುಗಳಿಗಾಗಿ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕುಟ್ಟದಿಂದ ಮಡಿಕೇರಿಯವರೆಗೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕೊಡವರ ಶಾಂತಿಯುತ ಪಾದಯಾತ್ರೆ ಆರಂಭಗೊಂಡಿತು. ಎಲ್ಲಾ ಕೊಡವ ಸಮಾಜ, ಕೊಡವ ಸಂಘಟನೆಗಳು, ಕೊಡವ ಭಾಷಿಕ ಸಮುದಾಯಗಳ ಸಂಘಟನೆಗಳು, ಎಲ್ಲಾ ಕೊಡವ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕುಟ್ಟದಿಂದ ಇಂದು ಪಾದಯಾತ್ರೆ ಆರಂಭಿಸಿದರು. ಎಲ್ಲಾ ದೇಶತಕ್ಕರು, ಕೊಡವ ಸಮಾಜ, ಭಾಷಿಕ ಸಮುದಾಯಗಳ ಸಮಾಜದ ಮುಖ್ಯಸ್ಥರ ಸಮ್ಮುಖದಲ್ಲಿ ಕುಟ್ಟ ಬಸ್ ನಿಲ್ದಾಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕುಟ್ಟದಿಂದ ಟಿ.ಶೆಟ್ಟಿಗೇರಿ ವರೆಗೆ 15 ಕಿ.ಮೀ ದೂರ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಯಾವುದೇ ಘೋಷಣೆಗಳನ್ನು ಕೂಗದೆ ಸಾಗಿದರು. ಸುಮಾರು 4 ರಿಂದ 5 ಕಿ.ಮೀ ದೂರದ ವರೆಗೆ ಸಾವಿರಾರು ಸಂಖ್ಯೆಯ ಕೊಡವರ ಸಾಲು ಕಂಡು ಬಂತು. ಪಾದಯಾತ್ರೆಯಲ್ಲಿ ಸಾಗುವವರಿಗೆ ಅಲ್ಲಲ್ಲಿ ಆಹಾರ ಮತ್ತು…
ಮಡಿಕೇರಿ NEWS DESK ಫೆ.2 : ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಬಾಡಿ ಜಂಕ್ಷನ್ ಬಳಿ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿ ಸುಮಾರು 3.90 ಕೆ.ಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿವಾಸಿ ನಿಧಿನ್ (28) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ವಿರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಪಿಎಸ್‌ಐ ಪ್ರಮೋದ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಅಧಿಕಾರಿಗಳ ಹಾಗೂ ಪೊಲೀಸರ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಮಾಡುತ್ತಿರುವವರ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.
ಮಡಿಕೇರಿ NEWS DESK ಫೆ.2 : ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟçಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನೀಡಿರುವ “ಬಡಪಾಯಿ ಮಹಿಳೆ” ಎಂಬ ಹೇಳಿಕೆ ಖಂಡನೀಯ ಮತ್ತು ಇದು ಬುಡಕಟ್ಟು ಸಮುದಾಯಕ್ಕೆ ಮಾಡಿದ ಅಪಮಾನವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರಿಶಿಷ್ಟರ ಮತಬ್ಯಾಂಕ್ ನಿಂದ ಶ್ರೀಮಂತ ರಾಜಕಾರಣ ಮಾಡಿ ದೇಶದ ಎಲ್ಲಾ ಅಧಿಕಾರವನ್ನು ಅನುಭವಿಸಿದ ಕಾಂಗ್ರೆಸ್ಸಿಗರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ಆರಂಭಗೊಂಡು ಇಲ್ಲಿಯವರೆಗೆ ಪರಿಶಿಷ್ಟ ಸಮುದಾಯವನ್ನು ಅಪಮಾನಿಸುತ್ತಲೇ ಬಂದಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷ ಪರಿಶಿಷ್ಟರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ರಾಷ್ಟ್ರಪತಿಗಳ ಕುರಿತು ಸೋನಿಯಾಗಾಂಧಿ ಅವರು ನೀಡಿರುವ ಕೀಳು ಅಭಿರುಚಿಯ ಹೇಳಿಕೆಯೇ ಸಾಕ್ಷಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ಸಿಗರ ಮತಬ್ಯಾಂಕ್ ರಾಜಕಾರಣದ ಬಣ್ಣ ಬಯಲಾಗುತ್ತಿದ್ದು, ಪರಿಶಿಷ್ಟರು ಜಾಗೃತರಾಗುತ್ತಿದ್ದಾರೆ. ದೇಶದ ಉನ್ನತ ಹುದ್ದೆಯನ್ನು ಶ್ರೀಮಂತರು ಹಾಗೂ ಮೇಲ್ವರ್ಗದವರು ಮಾತ್ರ ಅಲಂಕರಿಸಬೇಕೆ, ಪರಿಶಿಷ್ಟರು…






