ಮಡಿಕೇರಿ NEWS DESK ಫೆ.2 : ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳ ಸಂಸ್ಕೃತಿಯ ಭದ್ರತೆಗಾಗಿ ಮತ್ತು ಹಕ್ಕುಗಳಿಗಾಗಿ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕುಟ್ಟದಿಂದ ಮಡಿಕೇರಿಯವರೆಗೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕೊಡವರ ಶಾಂತಿಯುತ ಪಾದಯಾತ್ರೆ ಆರಂಭಗೊಂಡಿತು. ಎಲ್ಲಾ ಕೊಡವ ಸಮಾಜ, ಕೊಡವ ಸಂಘಟನೆಗಳು, ಕೊಡವ ಭಾಷಿಕ ಸಮುದಾಯಗಳ ಸಂಘಟನೆಗಳು, ಎಲ್ಲಾ ಕೊಡವ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕುಟ್ಟದಿಂದ ಇಂದು ಪಾದಯಾತ್ರೆ ಆರಂಭಿಸಿದರು. ಎಲ್ಲಾ ದೇಶತಕ್ಕರು, ಕೊಡವ ಸಮಾಜ, ಭಾಷಿಕ ಸಮುದಾಯಗಳ ಸಮಾಜದ ಮುಖ್ಯಸ್ಥರ ಸಮ್ಮುಖದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕುಟ್ಟ, ಹುದಿಕೇರಿ, ಪೊನ್ನಂಪೇಟೆ, ಗೋಣಿಕೊಪ್ಪ, ವಿರಾಜಪೇಟೆ, ಮೂರ್ನಾಡು ಮೂಲಕ ನಡೆಯುವ ಈ ಬೃಹತ್ ಪಾದಯಾತ್ರೆ ಅಂತಿಮವಾಗಿ ಫೆ.7ರಂದು ಮೇಕೇರಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ತಲುಪಲಿದೆ.
ಲೇಖಕ: admin
ಮಡಿಕೇರಿ NEWS DESK ಫೆ.2 : ನಾಗರಹೊಳೆ ಉದ್ಯಾನದಲ್ಲಿ ಕಡವೆ ಬೇಟೆಯಾಡಲು ಹೊಂಚು ಹಾಕುತ್ತಿದ್ದ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟಂದಿ ಗ್ರಾಮದ ಐವರು ಆರೋಪಿಗಳು ಬಂಧಿಸಲ್ಪಟ್ಟಿದ್ದಾರೆ. ಇವರನ್ನು ಹೆಚ್ಚಿನ ವಿಚಾರಣೆಗೆ ಒಳ ಪಡಿಸಿದಾಗ ಎರಡು ದಿನಗಳ ಹಿಂದೆ ಕಡವೆಯನ್ನು ಬೇಟೆಯಾಡಿ ಮಾಂಸವನ್ನು ಹಂಚಿಕೊಂಡಿರುವ ವಿಚಾರ ತಿಳಿದು ಬಂದಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕುಟ್ಟಂದಿ ಗ್ರಾಮದ ಮೋಟಯ್ಯ, ನಾಚಪ್ಪ, ಸತೀಶ್, ಚಂದನ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು. ಬಂಧಿತರಿಂದ ಕಾರು, ಎರಡು ಎಸ್.ಬಿ.ಬಿ.ಎಲ್. ಒಂಟಿ ನಳಿಕೆಯ ಲೋಡ್ ಮಾಡಿದ್ದ ಬಂದೂಕು, 11ಜೀವಂತ ಕಾಡತೂಸು, ಟಾರ್ಚ್, ಮೊಬೈಲ್‌ಗಳು, ಚೂರಿ, ಪ್ಲಾಸ್ಟಿಕ್ ಚೀಲ, ಕತ್ತಿ, ಅರ, ಟಾರ್ಪಲ್ ಹಾಗೂ ಒಂದು ಬ್ಯಾಗ್‌ನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಫೆ1.ರಂದು ಮುಂಜಾನೆ 3.30ರ ಸುಮಾರಿನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ಬೆನ್ನಟ್ಟಿದ ಗಸ್ತು ನಡೆಸುತ್ತಿದ್ದ ಅರಣ್ಯ ಸಿಬ್ಬಂದಿಗಳು ಆನೆಚೌಕೂರು ಗೇಟ್ ಜಡೆ ಆಲದಮರ ಗೇಟ್ ಸಮೀಪ ಅಡ್ಡಗಟ್ಟಿ ನಿಲ್ಲಿಸಿದರು. ತಪಾಸಣೆ ನಡೆಸಿದ ಸಂದರ್ಭ ಐವರು ಆರೋಪಿಗಳು ಕಾರಿನಲ್ಲಿ ಎರಡು ಒಂಟಿ…
ಮಡಿಕೇರಿ NEWS DESK ಫೆ.2 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ನಾಲ್ಕೇರಿ ಗ್ರಾಮದ ಎಂ.ಬಿ.ಅಯ್ಯಪ್ಪ ಆನಿಲ್ (46) ಎಂ.ಪಿ.ಕಾಳಪ್ಪ (51) ಟಿ.ಎಲ್.ಸುಬ್ಬಯ್ಯ ಸುನಿ (47) ಎಂಬುವವರು ಬಂಧಿತ ಆರೋಪಿಗಳು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಮಡಿಕೇರಿ ಡಿವೈಎಸ್‌ಪಿ ಸೂರಜ್.ಪಿ.ಎ, ಗ್ರಾಮಾಂತರ ಠಾಣೆಯ ಅಧಿಕಾರಿಗಳಾದ ಚಂದ್ರಶೇಖರ್ ಹೆಚ್.ವಿ, ಶ್ರೀನಿವಾಸ, ಎನ್.ಟಿ.ತಮ್ಮಯ್ಯ, ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಹಾಗೂ ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು, ಡಿಸಿಆರ್‌ಬಿ ಸಿಬ್ಬಂದಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಮಡಿಕೇರಿ NEWS DESK ಫೆ.1 : ಕೇಂದ್ರ ಸರಕಾರ ಇಂದು ಮಂಡಿಸಿರುವ ಬಜೆಟ್ ನಲ್ಲಿ ತಳಮಟ್ಟದ ಜನಸಾಮಾನ್ಯರಿಗೆ ಸಹಾಯವಾಗಬಲ್ಲ ಆಶಾದಾಯಕ ಕಾರ್ಯಕ್ರಮಗಳು ಯಾವುದೂ ಇಲ್ಲವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಟೀಕಿಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಬಜೆಟ್ ನಲ್ಲಿ ಯಾವುದೇ ಕೊಡುಗೆಯನ್ನು ನೀಡಿಲ್ಲ. ಅದರಲ್ಲೂ ಕೊಡಗು ಸೇರಿದಂತೆ ಮಲೆನಾಡು ಭಾಗದ ಕಾಫಿ ಬೆಳೆಗಾರರ ಹಾಗೂ ಕಾರ್ಮಿಕರ ಸಮಸ್ಯೆ ಮತ್ತು ವನ್ಯಜೀವಿಗಳ ದಾಳಿಗೆ ಶಾಶ್ವತ ಪರಿಹಾರ ಘೋಷಿಸುವ ಪ್ರಯತ್ನ ಮಾಡಿಲ್ಲ. ತೆರಿಗೆ ವಿನಾಯಿತಿಯನ್ನು ರೂ.12 ಲಕ್ಷಕ್ಕೆ ಏರಿಕೆ ಮಾಡಿದ್ದೇ ದೊಡ್ಡ ಸಾಧನೆ ಎಂದು ಪ್ರತಿಬಿಂಬಿಸಲಾಗುತ್ತಿದೆ, ಇದರಿಂದ ಎಲ್ಲಾ ವರ್ಗದ ಜನರಿಗೆ, ಅದರಲ್ಲೂ ತಳಮಟ್ಟದವರಿಗೆ ಯಾವುದೇ ಪ್ರಯೋಜನವಿಲ್ಲ. ಕೆಲವರನ್ನು ಮೆಚ್ಚಿಸುವ ಅಂಶಗಳಷ್ಟೇ ಈ ಬಜೆಟ್ ನಲ್ಲಿದೆ ಎಂದು ಆರೋಪಿಸಿದ್ದಾರೆ.
ಮಡಿಕೇರಿ NEWS DESK ಫೆ.1 : ಪ್ರತಿಯೊಂದು ವರ್ಗದ ಜನರಿಗೆ ತೃಪ್ತಿ ನೀಡಬಲ್ಲ ಮತ್ತು ಸ್ವಾವಲಂಬಿ ಭಾರತಕ್ಕೆ ಪೂರಕವಾಗಬಲ್ಲ ಅಂಶಗಳನ್ನು ಹೊಂದಿರುವ ಬಜೆಟ್ ನ್ನು ಕೇಂದ್ರ ಸರಕಾರ ಇಂದು ಮಂಡಿಸಿದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ. ಕಳೆದ ವರ್ಷ ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಪರಿಸರ ಸಚಿವಾಲಯಕ್ಕೆ 3,412.82 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದ್ದು, 2024-25ರಲ್ಲಿ 3,125.96 ಕೋಟಿ ರೂ. ಮೀಸಲಿರಿಸಿದ್ದು, ಶೇ.9 ರಷ್ಟು ಹೆಚ್ಚಾಗಿದೆ. ಇದು ಹಸಿರ ಪರಿಸರವನ್ನು ಹೊಂದಿರುವ ಕೊಡಗು ಜಿಲ್ಲೆಗೂ ಸಹಕಾರಿಯಾಗಬಹುದು. 36 ಜೀವ ರಕ್ಷಕ ಔಷಧಗಳ ಸೀಮಾ ಸುಂಕ ಸಂಪೂರ್ಣ ರದ್ದು ಮಾಡಿದ್ದು, ಅಗ್ಗದ ದರದಲ್ಲಿ ಔಷಧ ಸಿಗುವಂತೆ ಮಾಡಿ, ಜನಸಾಮಾನ್ಯರ ಹಿತ ಕಾಯಲಾಗಿದೆ. ಕಳೆದ ಬಾರಿ ಕರ್ನಾಟಕಕ್ಕೆ ರೈಲ್ವೆ ಬಜೆಟ್ ನಲ್ಲಿ ರೂ.7,559 ಕೋಟಿ ನೀಡಲಾಗಿತ್ತು. ಈ ಬಾರಿ ರೂ.7564 ಕೋಟಿ ನೀಡಲಾಗಿದೆ. ಇದರಿಂದ ಕುಶಾಲನಗರದ ವರೆಗಿನ ರೈಲ್ವೆ ಮಾರ್ಗದ ಯೋಜನೆಗೂ ಸಹಾಯವಾಗಬಹುದು. ತೆರಿಗೆ ವಿನಾಯಿತಿಯನ್ನು ರೂ.12 ಲಕ್ಷಗಳಿಗೆ…
ಮಡಿಕೇರಿ ಫೆ.1 NEWS DESK : ಕೇಂದ್ರ ಸರಕಾರ ಇಂದು ಮಂಡಿಸಿರುವ ಬಜೆಟ್ ದೆಹಲಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಜೆಟ್ ಆಗಿದ್ದು, ಕೇವಲ ಬ್ರ್ಯಾಂಡ್ ಗಳಿಗಷ್ಟೇ ಸೀಮಿತವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಟೀಕಿಸಿದ್ದಾರೆ. ಆತ್ಮ ನಿರ್ಭರ್, ವಿಕಾಸ್ ಭಾರತ್ ಎಂದೆಲ್ಲಾ ಪ್ರಸ್ತಾಪಿಸಲಾಗಿದೆ, ಆದರೆ ಕಳೆದ ಹಲವು ವರ್ಷಗಳಿಂದ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ರೈತರ ಸಮಸ್ಯೆಗಳಿಗೆ ಇನ್ನೂ ಕೂಡ ಸ್ಪಂದಿಸಿಲ್ಲ. ಬಡತನ ನಿರ್ಮೂಲನೆ ಮಾಡುವುದಾಗಿ ಕೇಂದ್ರ ಹೇಳಿಕೊಂಡಿದೆ, ಆದರೆ ದೇಶದ ಹಸಿವಿನ ಸೂಚ್ಯಂಕ 106 ನೇ ಸ್ಥಾನದಲ್ಲಿದೆ. ಮಹಿಳಾ ಸುರಕ್ಷತೆಗೆ ಆದ್ಯತೆ ನೀಡಿಲ್ಲ, ಕೋವಿಡ್ ಸಂದರ್ಭದಲ್ಲಿ ಶೇ.80 ರಷ್ಟು ಸಣ್ಣ ಕೈಗಾಗಿಕೆಗಳು ಮುಚ್ಚಿ ಹೋದವು, ಇವುಗಳ ಪುನರ್ ಸ್ಥಾಪನೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ತೆರಿಗೆ ವಿನಾಯಿತಿ ರೂ.12 ಲಕ್ಷಕ್ಕೆ ಏರಿಕೆ ಮಾಡಿದ್ದರೂ ಸ್ಲ್ಯಾಬ್ ಗಳು ರೂ.4 ಲಕ್ಷದಿಂದಲೇ ಆರಂಭಗೊಳ್ಳುತ್ತದೆ. ಒಟ್ಟಿನಲ್ಲಿ ಮೂರನೇ ಅವಧಿಯ ಬಜೆಟ್ ಮಂಡನೆಯ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ…
ಮಡಿಕೇರಿ ಫೆ.1 NEWS DESK : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಶೈಕ್ಷಣಿಕ ಶಾಲಾ ಯೋಜನೆ, ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ(ಟ್ಯಾಕ್ಸಿ), ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದಲ್ಲಿ), ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ ಹೀಗೆ ಹಲವು ಯೋಜನೆಗಳಿದ್ದು, ಇವುಗಳನ್ನು ಬಳಸಿಕೊಂಡು ಸಾಮಾಜಿಕ ಹಾಗೂ ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು. ಮಡಿವಾಳ ಮಾಚಿದೇವರ ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಜಿ.ಪಂ.ಸಿಇಒ ತಿಳಿಸಿದರು. ನಿವೃತ್ತ ಶಿಕ್ಷಕ ಬಿ.ಸಿ.ಶಂಕರಯ್ಯ ಮಾತನಾಡಿ ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿ ನಾಡಿನಲ್ಲಿ ತಮ್ಮದೇ ಆದ ಕ್ರಾಂತಿ ಉಂಟು ಮಾಡಿದ್ದಾರೆ. 12ನೇ ಶತಮಾನದಲ್ಲಿ ಬಸವಾದಿ ಶರಣರ ಜೊತೆ ಮಡಿವಾಳ ಮಾಚಿದೇವರು ತಮ್ಮ…
ವಿರಾಜಪೇಟೆ ಫೆ.1 NEWS DESK : ವಿದ್ಯಾರ್ಥಿ ಜೀವನವು ಅಮೂಲ್ಯವಾಗಿದ್ದು, ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು ಎಂದು ವಿರಾಜಪೇಟೆಯ ಆರಕ್ಷಕ ವೃತ್ತ ನಿರೀಕ್ಷಕ ಪೆಮ್ಮಚಂಡ ಅನೂಪ್ ಮಾದಪ್ಪ ಕರೆ ನೀಡಿದರು. ವಿರಾಜಪೇಟೆ ಕಾವೇರಿ ಪಿ.ಯು. ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕು. ಮೊಬೈಲ್ ನ್ನು ಹಿತ ಮಿತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗದೆ ಉತ್ತಮ ಜೀವನವನ್ನು ನಡೆಸಬೇಕೆಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಯ ಉಪಾಧ್ಯಕ್ಷ ಕುಪ್ಪಂಡ ಮೋತಿ ಬೆಳ್ಳಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಬೇಕು. ಶಿಕ್ಷಕರು ಮತ್ತು ಪೋಷಕರಿಗೆ ಗೌರವವನ್ನು ಕೊಡುವುದರ ಮೂಲಕ ಮಾದರಿ ಪ್ರಜೆಗಳಾಗಬೇಕು ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಸಾಲ್ಡಾನಾ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ.ದಮಯಂತಿ, ಉಪನ್ಯಾಸಕರಾದ ಡಯಾನ ಸೋಮಯ್ಯ,…
ವಿರಾಜಪೇಟೆ ಫೆ.1 NEWS DESK : ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ದೀಪ್ತಿ ದೇಚಮ್ಮಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ದೀಪ್ತಿ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯ ಕಾಲೇಜಿನ ಡೀನ್ ಡಾ. ಜಿ.ಎಂ.ದೇವಗಿರಿ ಅವರ ಮಾರ್ಗದರ್ಶನದಲ್ಲಿ ಸಾದರ ಪಡಿಸಿದ “ಮಧ್ಯ ಪಶ್ಚಿಮ ಘಟ್ಟಗಳಲ್ಲಿನ ಕಾಫಿ ಆಧಾರಿತ ಕೃಷಿ ಅರಣ್ಯದಲ್ಲಿ ಪೋಷಕ ಮತ್ತು ನಿಯಂತ್ರಕ ಪರಿಸರ ವ್ಯವಸ್ಥೆಯ ಸೇವೆಗಳ ಮೌಲ್ಯಮಾಪನ “ಎಂಬ ಸಂಶೋಧನಾ ಪ್ರಭಂದಕ್ಕೆ ಡಾಕ್ಟರೇಟ್ ಲಭಿಸಿದೆ. ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಒಂಬತ್ತನೇ ಘಟಿಕೋತ್ಸವದಲ್ಲಿ ಈ ಪದವಿಯನ್ನು ರಾಜ್ಯಪಾಲರು ಪ್ರದಾನ ಮಾಡಿದರು. ದೀಪ್ತಿ ದೇಚಮ್ಮ ಕಂಡಂಗಾಲದ ನಂಬುಡುಮಾಡ ಲಾಲ ಹಾಗೂ ನಿವೃತ ಶಿಕ್ಷಕಿ ಲತಾ (ತಾಮನೆ ಮೇರಿಯಂಡ )ದಂಪತಿಯ ಪುತ್ರಿ.
ಮಡಿಕೇರಿ ಫೆ.1 NEWS DESK : ಕೇಂದ್ರ ಸರಕಾರದ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರು ಜನಪರ ಮತ್ತು ರೈತಪರ ಬಜೆಟ್ ನ್ನು ಮಂಡಿಸಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಜನಸಾಮಾನ್ಯರಿಗೆ ಹೊರೆಯಾಗದ ಬಜೆಟ್, ತೆರಿಗೆ ಹೊಣೆಗಾರಿಕೆಯ ಮಿತಿಯನ್ನು 12 ಲಕ್ಷ ರೂ.ಗಳಿಗೆ ಏರಿಕೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಮಧ್ಯಮ ವರ್ಗ ಹಾಗೂ ಕೃಷಿಕರಿಗೆ ಹೆಚ್ಚು ಅನುಕೂಲ ಕಲ್ಪಿಸುವ ಬಜೆಟ್ ಆಗಿದೆ. ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯ ಮೂಲಕ 100 ಜಿಲ್ಲೆಗಳನ್ನು ಆಯ್ಕೆ ಮಾಡಿ ಕೃಷಿ ಜಿಲ್ಲೆಯೆಂದು ಘೋಷಿಸುವುದರಿಂದ ಆಯಾ ಜಿಲ್ಲೆಗಳ ರೈತರು ಸರಕಾರದ ಅನೇಕ ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಕೃಷಿಗೆ ಹೆಚ್ಚು ಉತ್ತೇಜನ ನೀಡುವ ಯೋಜನೆ ಇದಾಗಿದ್ದು, ಬೆಂಬಲ ಬೆಲೆ, ಗೊಬ್ಬರ, ಬಿತ್ತನೆ ಬೀಜ, ಕೃಷಿ ಪರಿಕರಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಜೀವರಕ್ಷಕ ಔಷಧಗಳ ಸೀಮಾ ಸುಂಕ ಸಂಪೂರ್ಣ ರದ್ದು ಮಾಡಿರುವುದು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ…






