ಮಡಿಕೇರಿ ಫೆ.19 NEWS DESK : ಕಳೆದ ಎರಡು ದಶಕಗಳ ನಿರಂತರ ಪರಿಶ್ರಮದಿಂದ ಪಡೆದುಕೊಂಡ ‘ಕೊಡಗು ವಿಶ್ವ ವಿದ್ಯಾನಿಲಯ’ಯನ್ನು ಮುಚ್ಚುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು, ತಪ್ಪಿದಲ್ಲಿ ಕೊಡಗು ಬಂದ್ ನಂತಹ ಹೋರಾಟಕ್ಕೂ ಸಿದ್ಧವಿರುವುದಾಗಿ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1994ರಲ್ಲಿ ತಾನು ಶಾಸಕನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರು ವಿಶ್ವ ವಿದ್ಯಾಲಯದ ಸೆನೆಟ್ ಸದಸ್ಯನಾಗಿ ಮೂರು ಅವಧಿ ಕಾರ್ಯ ನಿರ್ವಹಿಸಿದ್ದೇನೆ. ಈ ಅವಧಿಯಲ್ಲಿ ವಿಶ್ವ ವಿದ್ಯಾಲಯದ ಸ್ಥಾಪನೆಯ ವಿಚಾರವನ್ನು ಮಂಡಿಸುತ್ತಲೆ ಬಂದಿದ್ದೆ. ಇದರ ಫಲಸ್ವರೂಪವಾಗಿ 2010ರಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಚಿಕ್ಕಅಳುವಾರದಲ್ಲಿ ಸ್ನಾತಕೋತ್ತರ ಕೇಂದ್ರಕ್ಕೆ ಭೂಮಿಪೂಜೆ ನೆರವೇರಿಸಿ 15 ಕೋಟಿ ರೂ. ಅನುದಾನವನ್ನು ಒದಗಿಸಿದ್ದರು. ನಮ್ಮ ನಿರೀಕ್ಷೆಯಂತೆ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಕೊಡಗನ್ನು ಒಳಗೊಂಡಂತೆ ರಾಜ್ಯದಲ್ಲಿ 10 ನೂತನ ವಿವಿಗಳ ಆರಂಭಕ್ಕೆ ಹಸಿರು ನಿಶಾನೆ ತೋರಿದ್ದರು. ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಚಿಕ್ಕಾಸನ್ನು ನೀಡದಿದ್ದರು…
ಲೇಖಕ: admin
ವಿರಾಜಪೇಟೆ ಫೆ.19 NEWS DESK : ಸೇವೆಗೆ ಕೊನೆಯಿಲ್ಲ. ಸೇವೆ ಎಂಬುವುದು ಏನು ಎಂಬುದನ್ನು ಅರಿತಲ್ಲಿ ಮಾತ್ರ ಗಾಂಧಿಜೀ ಕಂಡ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ಹೆಚ್.ಎನ್.ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜು ಶಿಕ್ಷಣ ಇಲಾಖೆ, ಕೊಡಗು ವಿಶ್ವವಿದ್ಯಾನಿಲಯ, ವಿರಾಜಪೇಟೆ ಕಾವೇರಿ ಪದವಿ ಕಾಲೇಜು ಸಹಯೋಗದಲ್ಲಿ ಬಿ.ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸೇವಾ ಮನೋಭಾವವು ವಿದ್ಯಾರ್ಥಿ ಜೀವನ ದಿಸೆಯಲ್ಲಿ ಆರಂಭವಾಗಬೇಕು ಎಂಬ ಪರಿಕಲ್ಪನೆಯಿಂದ ಗಾಂಧಿಜೀ ಅವರು ಕಾಲೇಜುಗಳಲ್ಲಿ ಸೇವಾ ಘಟಕವನ್ನು ಆರಂಭಿಸಿದರು. ನಾಯಕತ್ವ ಗುಣಗಳನ್ನು ವಿದ್ಯಾರ್ಥಿ ಜೀವನದಿಂದಲೇ ಆರಂಭವಾದಲ್ಲಿ ಮಾತ್ರ ಉತ್ತಮ ನಾಯಕನಾಗಬಹುದು. ಸಾಮಾಜಿಕ ಪ್ರಜ್ಞೆ ಸರ್ವರಲ್ಲಿ ಜಾಗೃತವಾಗಬೇಕು. ದೇಶದಲ್ಲಿ ಹಲವು ರೀತಿಯಲ್ಲಿ ಸಂಭವಿಸಿದ್ದ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಸೇವಾ ಸಂಸ್ಥೆಗಳು ನಡೆಸಿದ ಕಾರ್ಯಗಳು ದೇಶ ಮೆಚ್ಚಿದೆ. ಅದರಂತೆ ಶಿಬಿರದಲ್ಲಿ ಕಲಿಯುವ ಪ್ರತಿಯೊಂದು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸುಸಂಸ್ಕೃತವಾದ ಸಮಾಜ ನಿರ್ಮಾಣ…
ಬೆಂಗಳೂರು ಫೆ.19 NEWS DESK : ಬೆಂಗಳೂರಿನಲ್ಲಿ ನಡೆದ ಏರ್ ಶೋ ಅತ್ಯಂತ ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಸೇನೆಯ ಹಿರಿಯ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಮಡಿಕೇರಿ ಫೆ.19 NEWS DESK : ಮಕ್ಕಳ ವಿಶೇಷ ಪೊಲೀಸ್ ಘಟಕ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದೊಂದಿಗೆ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು. ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯ ಸಿ.ಜೆ.ರೋಹಿತ್ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆಗಳು, ಮಕ್ಕಳ ಹಕ್ಕುಗಳು ಮತ್ತು ಇತರೆ ಕಾನೂನು ಪ್ರಕ್ರಿಯೆಗಳ ಬಗ್ಗೆ ತರಬೇತಿ ನೀಡಿದರು. ಈ ಸಂದರ್ಭ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಮಡಿಕೇರಿ ಫೆ.19 NEWS DESK : ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 21 ನೆರೆ ಸಂತ್ರಸ್ತ ಕುಟುಂಬಸ್ಥರಿಗೆ ನೀಡಲಾದ ಜಾಗದಲ್ಲಿ ಹಾಕತ್ತೂರು ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ನಮ್ಮ ವಿರೋಧವಿದೆ ಹೊರತು ಶಾಸಕರು ಭೂಮಿಪೂಜೆ ಮಾಡಿದ ಜಾಗದಲ್ಲಿ ಕಟ್ಟಡ ನಿರ್ಮಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಮೇಕೇರಿ ಗ್ರಾ.ಪಂ ಸದಸ್ಯ ಎ.ಎ.ಅಬ್ದುಲ್ ಖಾದರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಳಿಗೇರಿ ಗ್ರಾಮದಲ್ಲಿ 21 ನೆರೆ ಸಂತ್ರಸ್ತ ಕುಟುಂಬಗಳಿಗೆ ಮೀಸಲಿಟ್ಟಿರುವ ಜಾಗದಲ್ಲಿ ಹಾಕತ್ತೂರು ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಮಾಡಲು ಹೊರಟಿದೆ ಎಂದು ಮೇಕೇರಿ ಗ್ರಾ.ಪಂ ಗ್ರಾಮ ಸಭೆಯಲ್ಲಿ ಬಿಳಿಗೇರಿ ಗ್ರಾಮದ ವಾರ್ಡ್ ನಂ.2ರ ಸಾರ್ವಜನಿಕರು ಆರೋಪಿಸಿದ್ದಾರೆ. ಈ ಬಗ್ಗೆ ಮೇಕೇರಿ ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ 1 ಏಕರೆ 88 ಸೆಂಟ್ ಹಾಗೂ ಹಾಕತ್ತೂರು ಪಂಚಾಯಿತಿ ಕಟ್ಟಡಕ್ಕೆಂದು 20 ಸೆಂಟ್ ಜಾಗವನ್ನು ಹದ್ದುಬಸ್ತು ಸರ್ವೆ ಮಾಡಲಾಗಿದೆ. 20 ಸೆಂಟು ಜಾಗದಲ್ಲಿ ಹಾಕತ್ತೂರು ಪಂಚಾಯಿತಿಯ ಕಟ್ಟಡ ನಿರ್ಮಿಸಲು ನಮ್ಮ ಅಭ್ಯಂತರವಿಲ್ಲ ಎಂದು ಸರ್ವ ಸದಸ್ಯರು…
ಮಡಿಕೇರಿ ಫೆ.19 NEWS DESK : ಹುಲಿ ಉಗುರು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸುಮಾರು 12 ಹುಲಿ ಉಗುರುಗಳ ಮಾರಾಟಕ್ಕೆ ವ್ಯವಹಾರ ಕುದುರಿಸುತ್ತಿರುವಾಗಲೇ ದಾಳಿ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ದಾಳಿ ಸಂದರ್ಭ ಪರಾರಿಯಾಗಿದ್ದಾನೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬಿ-ಶೆಟ್ಟಿಗೇರಿಯ ಪಿ.ಎನ್.ರಾಜಪ್ಪ ಹಾಗೂ ಬೆಂಗಳೂರು ನಗರದ ಬನಶಂಕರಿಯ ಗೀತಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. 12 ಹುಲಿ ಉಗುರು ಮತ್ತು ಕೃತ್ಯಕ್ಕೆ ಬಳಸಿದ್ದ ಮಾರುತಿ ವ್ಯಾನ್ ನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ಬೀರುಗ ಗ್ರಾಮದ ಸಂಜು ಎಂಬಾತ ಪರಾರಿಯಾಗಿದ್ದಾನೆ. ಪೊನ್ನಂಪೇಟೆಯ ಟಿ-ಶೆಟ್ಟಿಗೇರಿ-ಬೀರುಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಮಾರುತಿ ಓಮಿನಿ ಕಾರಿನ ಬಳಿ ಓರ್ವ ಮಹಿಳೆ ಸೇರಿದಂತೆ ಮೂವರು ವ್ಯವಹರಿಸುತ್ತಿರುವ ಕುರಿತು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗಕ್ಕೆ ಬಂದ ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಲಾಯಿತು. ಈ ಸಂದರ್ಭ ಸಂಜು ತಲೆ ಮರೆಸಿಕೊಂಡಿದ್ದಾನೆ. ಕಾರಿನ ಬಳಿ…
ಪೊನ್ನಂಪೇಟೆ ಫೆ.19 NEWS DESK : ಕೇಂದ್ರ ಸರ್ಕಾರ 13ನೇ ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ ಪಕ್ಷ ಕಟುವಾಗಿ ವಿರೋಧಿಸುತ್ತದೆ. ಈ ಮಸೂದೆ ಪಕ್ಷಪಾತದಿಂದ ಕೂಡಿದ್ದು, ಅಸಾಂವಿಧಾನಿಕ ಮತ್ತು ಮುಸ್ಲಿಂ ವಿರೋಧಿಯಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ.ಹನೀಫ್ ದೂರಿದ್ದಾರೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಸಂಘಟನೆಗಳ, ಜನ ಪ್ರತಿನಿಧಿಗಳ ಅಭಿಪ್ರಾಯವನ್ನು ಪರಿಗಣಿಸದೇ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗುತ್ತಿದೆ. ಆದ್ದರಿಂದ ಕೇಂದ್ರದ ಈ ಅಸಂವಿಧಾನಿಕ ನಡೆಯ ವಿರುದ್ಧ ಪ್ರಜ್ಞಾವಂತರು ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಧ್ವನಿ ಎತ್ತಬೇಕು ಎಂದರು. ಕೇಂದ್ರ ಸರ್ಕಾರದ ಉದ್ದೇಶಿತ ನೂತನ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದರೆ ಅದು ಸಂವಿಧಾನ ಬಾಹಿರವಾಗುತ್ತದೆ. ವಕ್ಫ್ ಆಸ್ತಿ ವಶಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಹುನ್ನಾರ ಮಾಡಿದೆ ಎಂದು ಪಿ. ಎ. ಹನೀಫ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಘಟಕದ ಉಪಾಧ್ಯಕ್ಷ…
ಮಡಿಕೇರಿ NEWS DESK ಫೆ.19 : ಕುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಚೂರಿಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಬೊಮ್ಮಾಡು ಗಿರಿಜನ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ, ಕುಟ್ಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮಕ್ಕಳ ಹಕ್ಕುಗಳು ಮತ್ತು ಪೊಕ್ಸೊ ಕಾಯ್ದೆಗಳ ಕುರಿತು ಕಾನೂನು ತಿಳುವಳಿಕೆ ನೀಡಿದರು.
ಮಡಿಕೇರಿ ಫೆ.19 NEWS DESK : ಪೆರುಂಬಾಡಿ ಶಂಸುಲ್ ಉಲಮಾ ಎಜುಕೇಶನ್ ಅಕಾಡೆಮಿಯ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಯಾದ ಮೊಬೈಲ್ ಬಳಕೆ, ಶಿಕ್ಷಣದ ಭವಿಷ್ಯವನ್ನೇ ಹಾಳು ಮಾಡುತ್ತಿರುವ ಸಾಮಾಜಿಕ ಜಾಲತಾಣ, ಪರಿಸರ ಉಳಿವಿಗಾಗಿ ಜಾಗೃತಿ, ದುಶ್ಚಟಗಳಿಂದ ದೂರವಾಗಿ ಆರೋಗ್ಯವಂತ ಸಮಾಜ ನಿರ್ಮಾಣವಾಗಲಿ ಎಂಬ ಸಂದೇಶ, ತಂದೆ ತಾಯಿಯ ಪ್ರೀತಿಯ ವಾತ್ಸಲ್ಯದ ಮಕ್ಕಳಾಗೋಣ, ಆಚಾರ ವಿಚಾರ ಸಂಸ್ಕೃತಿ ಪರಂಪರೆಯನ್ನ ಬಿಂಬಿಸುವ ಕಿರು ನಾಟಕ ಪ್ರದರ್ಶನದೊಂದಿಗೆ ಯೋಧರ ಸ್ಮರಣೆ, ಸೇವಾ ಮನೋಭಾವದ ಸಾಮಾಜಿಕ ಕಳಕಳಿಯ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಗಮನ ಸೆಳೆಯಿತು. ಇದೇ ಸಂದರ್ಭ ಸಾಹಿತ್ಯ ಸಂಸ್ಕೃತಿಯನ್ನು ಬಿಂಬಿಸುವ ಯಕ್ಷಗಾನ, ಕೋಲಾಟ, ಕೊಡವ ನೃತ್ಯ, ಆದಿವಾಸಿ ನೃತ್ಯ ಸೇರಿದಂತೆ ವಿವಿಧ ಭಾಷಾ ಸಂಸ್ಕೃತಿಯ ಹಾಡು, ನೃತ್ಯೋತ್ಸವ ರಂಜಿಸಿತು. ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ರೀಡೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡ ಶಾಲಾ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿಗಳನ್ನು…
ಮಡಿಕೇರಿ NEWS DESK ಫೆ.19 : ಮಾದಕ ವಸ್ತು ಎಂಡಿಎAಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶ್ವಿಯಾಗಿದ್ದಾರೆ. ಕುಶಾಲನಗರದ ಮದಲಾಪುರ ಗ್ರಾಮದ ನಿವಾಸಿ ಅಜರುದ್ದೀನ್ (29) ಹಾಗೂ ಗುಮ್ಮನಕೊಲ್ಲಿ ನಿವಾಸಿ ಮೊಹಮದ್ ಮುಸ್ತಾಕ್ (29) ಬಂಧಿತ ಆರೋಪಿಗಳು. ಬಂಧಿತರ ಬಳಿಯಿಂದ 13 ಗ್ರಾಂ ಮಾದಕ ವಸ್ತು ಎಂಡಿಎಂಎ, ಒಂದು ದ್ವಿಚಕ್ರ ವಾಹನ ಮತ್ತು 3 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗುಮ್ಮನಕೊಲ್ಲಿಯಲ್ಲಿ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು. ಸೋಮವಾರಪೇಟೆ ಡಿವೈಎಸ್‌ಪಿ ಗಂಗಾಧರಪ್ಪ ಆರ್.ವಿ, ಕುಶಾಲನಗರ ಸಿಪಿಐ ರಾಜೇಶ್ ಕೆ., ಪಿಎಸ್‌ಐ ಗೀತಾ ಹಾಗೂ ಸಿಬ್ಬಂದಿಗಳ ತನಿಖಾ ತಂಡ ಕಾರ್ಯಾಚರಣೆ ನಡೆಸಿತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಿಷೇಧಿತ ಮಾದಕ ವಸ್ತುಗಳನ್ನು…






