ಲೇಖಕ: admin

ಮಡಿಕೇರಿ ಫೆ.19 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಬಾಗಿತ್ವದಲ್ಲಿ,  ಫೆ.23 ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ರೋಟರಿ ಜಿಲ್ಲೆ 3181 ಗೆ ಸೇರಿದ ರೋಟರಿ ಕ್ಲಬ್ ತಂಡಗಳ ನಡುವೆ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಧುಸೂದನ್, ಫೆ.23 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಇದೇ ಮೊದಲ ಬಾರಿಗೆ ರೋಟರಿ ಜಿಲ್ಲೆ 3181 ನ ರೋಟರಿ ಸದಸ್ಯರಿಗಾಗಿ ಕಬ್ಬಡಿ ಪಂದ್ಯಾವಳಿ ಆಯೋಜಿಸಲಾಗಿದೆ. ಇದೇ ಸಂದಭ೯ ಮಿಸ್ಟಿ ಹಿಲ್ಸ್ ವತಿಯಿಂದ ರೆಡ್ ಕ್ರಾಸ್ ಕೊಡಗು ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು. ರೋಟರಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿ ಸಮಿತಿ ಅಧ್ಯಕ್ಷ ಜಯಂತ್ ಪೂಜಾರಿ ಮಾಹಿತಿ ನೀಡಿ, ಫೆ.23 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ…

Read More

ಮಡಿಕೇರಿ ಫೆ.19 NEWS DESK : ಚೆಟ್ಟಳ್ಳಿ ಸಮೀಪದ ಕಂಡಕರೆಯ ಸುನ್ನಿ ಮಸ್ಜಿದ್ ತಖ್ವಾ ಕಮಿಟಿಯ ನೂತನ ಅಧ್ಯಕ್ಷರಾಗಿ ಅಲಿ ಮುಸ್ಲಿಯಾರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಎ.ಹುಸೈನ್, ಪ್ರಧಾನ ಕಾರ್ಯದರ್ಶಿಯಾಗಿ ಸರ್ಫುದ್ದೀನ್, ಸಹ ಕಾರ್ಯದರ್ಶಿಯಾಗಿ ಪಿ.ಎಂ.ಅಬ್ದುಲ್ ಗಫೂರ್ , ಖಜಾಂಚಿಯಾಗಿ ಹಾರಿಸ್ ಆಯ್ಕೆಯಾಗಿದ್ದಾರೆ. ರಿಸೀವರ್ ಗಳಾಗಿ ಇಸ್ಮಾಯಿಲ್ ಸಿಎಸ್, ಮೊಹಮ್ಮದ್ ಒ, ಸದಸ್ಯರಾಗಿ ಕೆ.ಹೆಚ್.ಅಬ್ದುಲ್ ಗಫೂರ್‌‌, ಪಿ.ಎಂ.ಅಲಿ, ಕೆ.ಹೆಚ್.ಹಂಸ ರಹ್ಮಾನಿ, ಎ.ಹಂಸ , ಪಿ.ಎಂ.ಮಜೀದ್ , ಕೆ.ಹೆಚ್.ಹುಸೈನ್ , ಮೊಹಮ್ಮದ್ ರಫಿ, ಕೆ.ಹೆಚ್.ಫಾರೂಖ್ , ಹೆಚ್.ಎ.ಆಬಿದ್ , ಎಂ.ವೈ.ರಶೀದ್, ಕೆ.ಎ.ಸಮೀರ್, ಟಿ.ಎ.ನಿಝಾಮ್, ಕೆ.ವೈ.ರಜಾಕ್ ಆಯ್ಕೆಯಾಗಿದ್ದಾರೆ. ಸ್ವಲಾತ್ ಕಮಿಟಿ ಅಧ್ಯಕ್ಷರಾಗಿ ಟಿ.ಎಸ್.ನಜೀರ್ , ಕಾರ್ಯದರ್ಶಿಯಾಗಿ ಪಿ.ಎಂ.ಅಲಿ ಹಾಗೂ ಖಜಾಂಚಿಯಾಗಿ ಕೆ.ಹೆಚ್.ಗಫೂರ್ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಫೆ.19 NEWS DESK : ಶ್ರೀಮಂಗಲ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11ಕೆವಿ ಈ2 ಕುಟ್ಟಮಾರ್ಗದಲ್ಲಿನಿರ್ವಹಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆ.20 ರಂದು ಬೆಳಿಗ್ಗೆ 10.00 ರಿಂದ ಸಂಜೆ 5 ಗಂಟೆಯವರೆಗೆ ಈ ಮಾರ್ಗಗಳ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕಾಯಿಮನೆ, ಮಂಚಳ್ಳಿ, ಪೂಜೆಕಲ್ಲು, ನಾಲ್ಲೂರು, ನಾಥಂಗಾಲ, ತೈಲ, ಕುಟ್ಟ, ಸಿಂಕೋನ, ಕೆ.ಎಂ.ಕೊಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಫೆ.19 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಳೆಯಡ ಕುಟುಂಬಸ್ಥರ ಮೆನೆಗೆ ತೆರಳುವ ಸಂಪರ್ಕ ರಸ್ತೆ ಹಾಗೂ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅಳವಡಿಕೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕುಟುಂಬಸ್ಥರ ಮನವಿಗೆ ಸ್ಪಂದಿಸಿದ ಶಾಸಕರಿಗೆ ಹಾಗೂ ಸಹಕರಿಸಿದ ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟ್ಟಿರ ಕುಶು ಕುಶಾಲಪ್ಪ ಬಾಳೆಯಡ ಕುಟುಂಬಸ್ಥರು  ಅಭಿನಂದನೆ ಸಲ್ಲಿಸಿದ್ದಾರೆ. ನಾಪೋಕ್ಲು ಕೊಡವ ಸಮಾಜದ ಎದುರುಗಡೆ ಹಾದುಹೋಗುವ ರಸ್ತೆಯು ದಶಕಗಳಿಂದ ದುಸ್ಥಿತಿಯಲ್ಲಿದ್ದು ಸಂಚಾರಿಸಲು ದುಸ್ತರವಾಗಿತ್ತು. ಈ ರಸ್ತೆಯು ಬಾಳೆಯಡ ಕುಟುಂಬಸ್ಥರ ಮನೆಗೆ ಹೋಗುವ ಸಂಪರ್ಕ ರಸ್ತೆಯಾಗಿದ್ದು, ದಿನಕ್ಕೆ ನೂರಾರು ವಾಹನಗಳು ಓಡಾಡುವ ರಸ್ತೆಯ ಡಾಂಬರೀಕರಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದ ರೂ.5 ಲಕ್ಷದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಯಿತು. ಹಲವಾರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆಯ ಕಾಮಗಾರಿ ಬಗ್ಗೆ ಶಾಸಕರ ಗಮನಕ್ಕೆ ತಂದಾಗ, ತಕ್ಷಣವೇ ಕಾಮಗಾರಿಯನ್ನು ಕೈಗೊಳ್ಳಲು ನಿರ್ದೇಶಿಸಿದ್ದರು. ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅಳವಡಿಕೆ :: ಈ ಭಾಗದಲ್ಲಿದ್ದ ಮನೆಗಳಿಗೆ…

Read More

ಮಡಿಕೇರಿ ಫೆ.19 NEWS DESK :  ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಫೆ.20 ರಂದು ಆಯೋಜಿತ ಖ್ಯಾತ ಸಾಹಿತಿ ಪಂಜೆ ಮಂಗೇಶರಾಯರ 150 ನೇ ವಷೋ೯ತ್ಸವದಂದು ಹುತ್ತರಿ ಹಾಡಿನ ದೃಶ್ಯ ನಮನ ಅನಾವರಣಗೊಳ್ಳಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್ ತಿಳಿಸಿದ್ದಾರೆ. ನಗರದ ಜೂನಿಯರ್ ಕಾಲೇಜಿನಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಪಂಜೆ ಮಂಗೇಶರಾಯರ ಪ್ರಸಿದ್ದ ಹಾಡಾಗಿರುವ ಹುತ್ತರಿ ಹಾಡಿಗೆ ದೃಶ್ಯ ಸಂಕಲನಗೊಳಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಬಿಡುಗಡೆ ಮಾಡಲಾಗುತ್ತದೆ. ಈ ಮೂಲಕ ಕೊಡಗಿನ ನಾಡಗೀತೆಯಾದ ಹುತ್ತರಿ ಹಾಡು ವಿಶ್ವವ್ಯಾಪಿ ಜನರನ್ನು ತಲುಪಲಿದೆ. ಈ ದೖಶ್ಯ ನಮನವನ್ನು ಪತ್ರಕರ್ತರಾದ ಅನಿಲ್ ಹೆಚ್.ಟಿ ಅವರ ಪರಿಕಲ್ಪನೆ ಮತ್ತು ಜೀವಿತಾ ಶೇಖರ್ ಸಂಕಲನದಲ್ಲಿ ಸಿದ್ದಗೊಳಿಸಿದೆ ಎಂದೂ ಕೇಶವಕಾಮತ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಿತಿ ಜಲಜ ಶೇಖರ್ ಅವರ ಕೃತಿ ಅಗ್ನಿಕುಂಡ ಮತ್ತು ಉಳುವಂಗಡ ಕಾವೇರಿ ಉದಯ ಆವರ ಕೃತಿ ಮುಕ್ತಕ ಮಾಣಿಕ್ಯ ವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ…

Read More

ಮಡಿಕೇರಿ NEWS DESK ಫೆ.18 : ಕ್ರೀಡಾ ಚಟುವಟಿಕೆಗಳ ಮೂಲಕ ಉತ್ತಮ ಆರೋಗ್ಯ ಹಾಗೂ ಪರಸ್ಪರ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಕೂಡಿಗೆ  ಕ್ರೀಡಾಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಕುಂತಿ ಭೋಪಯ್ಯ ಹೇಳಿದರು. ಅವರು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ಕೊಡಗು ಜಿಲ್ಲಾ ಬ್ಯುಟಿಷಿಯನ್ ಅಸೋಸಿಯೇಷನ್ ಆಶ್ರಯದಲ್ಲಿ ತಾಲೂಕು ಸಂಘಗಳ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ  ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕೊಡಗು ಜಿಲ್ಲೆಯ ಸೌಂದರ್ಯ ತಜ್ಞರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು ಒಗ್ಗಟ್ಟಿನ ಮೂಲಕ ತಮ್ಮ ಸಮಸ್ಯೆಗಳ ಪರಿಹಾರ ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ನಗರಸಭಾ ಸದಸ್ಯರಾದ ಸವಿತಾ ರಾಕೇಶ್ ಮಾತನಾಡಿ ಕಟ್ಟುಪಾಡುಗಳನ್ನು ಬಿಟ್ಟು ಸಮಾಜದಲ್ಲಿ ಸ್ವಾವಲಂಬಿ ಬದುಕು ಕಾಣುವ ಮಹಿಳೆಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೂಲಕ ಕುಟುಂಬದಲ್ಲಿ ಆರ್ಥಿಕ ಸಬಲೀಕರಣ ಸಾಧ್ಯ. ಪ್ರತಿ ಮನೆಗಳು ಯಶಸ್ವು ಕಂಡಲ್ಲಿ ಮಾತ್ರ ಸಮಾಜದ ಅಭಿವೃದ್ಧಿ ಏಳಿಗೆ ಕಾಣಬಹುದು ಎಂದರು. ಕ್ರೀಡಾ ಕೂಟಕ್ಕೆ ಚಾಲನೆ ನೀಡಿದ…

Read More

ಮಡಿಕೇರಿ NEWS DESK ಫೆ.18 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯಂಜಯ ಮಾದೇಶ್ವರ ದೇವಾಲಯದ ವಸ್ತ್ರ ಸಂಹಿತೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಅವರ ಸಮ್ಮುಖದಲ್ಲಿ ಗ್ರಾ.ಪಂ ಪ್ರತಿನಿಧಿಗಳು, ಗ್ರಾಮದ ಪ್ರಮುಖರು ಹಾಗೂ ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳ ಸಭೆ ನಡೆಯಿತು. ಕಟ್ಟೆಮಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಭೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶವನ್ನು ಪಾಲಿಸುವಂತೆ ಮತ್ತು ಶಾಂತಿಯನ್ನು ಕಾಪಾಡುವಂತೆ ಅಧಿಕಾರಿಗಳು ಸೂಚನೆ ನೀಡಿದರು. ದೇವಾಲಯದ 200 ಮೀಟರ್ ವ್ಯಾಪ್ತಿಯಲ್ಲಿ ಮಾರ್ಚ್ 13ರವರೆಗೆ 163 ಸೆಕ್ಷನ್ ಪ್ರಕಾರ ನಿಷೇಧಾಜ್ಞೆ ಜಾರಿ ಇರುವುದರಿಂದ ದೇವಾಲಯಕ್ಕೆ 5 ಮಂದಿಗಿಂತ ಹೆಚ್ಚಿನ ಜನರು ತೆರಳುವಂತಿಲ್ಲ. ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆಗೆ ಗ್ರಾಮಸ್ಥರಿಂದ ಸಮಸ್ಯೆಯಾಗದಂತೆ ಸೌಹಾರ್ಧತೆ ಕಾಪಾಡಿಕೊಳ್ಳಬೇಕೆಂದು ತಹಶೀಲ್ದಾರ್ ಪ್ರವೀಣ್ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಮನವಿ ಮಾಡಿದರು. ದೇವಾಲಯ ಸಮಿತಿಯ ಕೆಲವು ಪದಾಧಿಕಾರಿಗಳು, ಮರಗೋಡು ಗ್ರಾ.ಪಂ…

Read More

ಮಡಿಕೇರಿ ಫೆ.18 NEWS DESK : ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ 2025 ರ 2 ನೇ ಆವೃತ್ತಿಯು ಫೆಬ್ರವರಿ 26 ರಿಂದ 28 ರ ವರೆಗೆ ಬೆಂಗಳೂರು ಇಂಟನ್ರ್ಯಾಷನಲ್ ಎಕ್ಸಿಬಿಷನ್ ಸೆಂಟರ್ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ಆಯೋಜಿಸಲಾಗಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವು ರಾಜ್ಯದ ಪ್ರವಾಸೋದ್ಯಮ ವಲಯವನ್ನು ಪ್ರದರ್ಶಿಸಲು, ವ್ಯಾಪಾರ ಅವಕಾಶ ಆಕರ್ಷಿಸಲು ಮತ್ತು ಪ್ರಮುಖ ಜಾಗತಿಕ ಪ್ರಯಾಣ ತಾಣವಾಗಿ ಕರ್ನಾಟಕದ ಸ್ಥಾನ ಬಲಪಡಿಸಲು ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ 2025 ಪ್ರವಾಸೋದ್ಯಮದ ಪ್ರಮುಖ ಪಾಲುದಾರರನ್ನು ಒಟ್ಟುಗೂಡಿಸುತ್ತದೆ, ಇದು ಜಗತ್ತಿನಾದ್ಯಂತದ ಪ್ರಯಾಣ ಮತ್ತು ವ್ಯಾಪಾರ ಸಮುದಾಯದೊಂದಿಗೆ ಸಂಪರ್ಕ ಸಾಧಿಸಲು ಒಂದು ಅನನ್ಯ ಅವಕಾಶ ನೀಡುತ್ತದೆ. ಕಾರ್ಯಕ್ರಮದ ಮುಖ್ಯಾಂಶಗಳು: ಭಾರತ ಮತ್ತು 30 ಕ್ಕೂ ಹೆಚ್ಚು ದೇಶಗಳಿಂದ 400 ಕ್ಕೂ ಹೆಚ್ಚು ಅತಿಥೇಯ ಖರೀದಿದಾರರು, ದೇಶದಲ್ಲಿ ಇದುವರೆಗಿನ ಅತಿದೊಡ್ಡ ಬಿ2ಬಿ ಇನ್ ಬೌಂಡ್ ಮತ್ತು ದೇಶೀಯ ಬಿ2ಬಿ…

Read More

ಮಡಿಕೇರಿ ಫೆ.18 NEWS DESK :  ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ಸು ಮಾಲೀಕರಿಗೆ ತೊಂದರೆಯಾಗಿದೆ. ತೆರಿಗೆ ಪಾವತಿಸಲು ಕೂಡ ಕಷ್ಟವಾಗಿದೆ ಎಂದು ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಖಾಸಗಿ ಬಸ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬಸ್ಸು ಸಂಚಾರಕ್ಕೆ ಸಂಬಂಧಿಸಿದಂತೆ ಎಲ್ಲರ ಹಿತಾಸಕ್ತಿ ಕಾಪಾಡುವುದು ಸಾರಿಗೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಬಸ್ಸು ಸೇವೆ ಒದಗಿಸಲು ಎಲ್ಲರೂ ಮುಂದಾಗಿದ್ದಾರೆ. ಆ ನಿಟ್ಟಿನಲ್ಲಿ ಯಾರಿಗೂ ತೊಂದರೆ ಆಗದಂತೆ ಗಮನ ಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಖಾಸಗಿ ಬಸ್ಸು ಮಾಲೀಕ ಪುಟ್ಟಸ್ವಾಮಿ ಅವರು ಮಾತನಾಡಿ ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳು ಎಲ್ಲೆಲ್ಲಿ ಸಂಚಾರ ಮಾಡುತ್ತಿದೆ ಎಂಬ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು ಎಂದರು. ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ಸು ಮಾಲೀಕರಿಗೆ ತುಂಬಾ ತೊಂದರೆಯಾಗಿದೆ.…

Read More