ಲೇಖಕ: admin

ಮಡಿಕೇರಿ ಫೆ.18 NEWS DESK : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಸ್ತುವಾರಿಯಲ್ಲಿರುವ ಸೈನಿಕ ವಿಶ್ರಾಂತಿ ಗೃಹಕ್ಕೆ ಹೊರಗುತ್ತಿಯ ಆಧಾರದ ಮೇಲೆ ಒಬ್ಬ ಮೇಟಿ ಕ0-ವಾಚ್ ಮೆನ್ ಹುದ್ದೆ ಖಾಲಿ ಇದ್ದು, ಆಸಕ್ತ ಮಾಜಿ ಸೈನಿಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರ್ಯಾಲಯ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.

Read More

ಮಡಿಕೇರಿ ಫೆ.18 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಹಯೋಗದೊಂದಿಗೆ. ಜಿಲ್ಲೆಯ ಸಹಕಾರ ದವಸ ಭಂಡಾರಗಳ ಅಧ್ಯಕ್ಷರು. ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯದರ್ಶಿಗಳಿಗೆ ಲೆಕ್ಕಪರಿಶೋಧನೆ, ಲೆಕ್ಕಪತ್ರ ನಿರ್ವಹಣೆ ಮತ್ತು ಸಹಕಾರ ಕಾಯ್ದೆ ಕಾನೂನು ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮವು ಫೆಬ್ರವರಿ 19 ರಂದು ಬೆಳಗ್ಗೆ 11 ಗಂಟೆಗೆ ವಿರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್ ಮತ್ತು ಮುದ್ರಣಾಲಯದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಲಯದ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಲಯದ ಉಪಾಧ್ಯಕ್ಷರಾದ ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಲಯದ ನಿರ್ದೇಶಕರಾದ ಎನ್.ಎ.ರವಿ ಬಸಪ್ಪ, ಕೆ.ಎಂ.ತಮ್ಮಯ್ಯ, ಸಿ.ಎಸ್.ಕೃಷ್ಣ ಗಣಪತಿ, ಎಂ.ಕೆ ರೋಹಿತ್, ಕೆ.ಐ.ಸಿ.ಎಂ ಮೈಸೂರು ಉಪನ್ಯಾಸಕರಾದ ಎಸ್. ಮಹದೇವಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.18 NEWS DESK :  ಅರಮೇರಿ ಕಳಂಚೇರಿ ಮಠದ 228ನೇ ತತ್ತ್ವ ಚಿಂತನಾಗೋಷ್ಠಿಯ ಅಂಗವಾಗಿ ‘ಮಕ್ಕಳ ಭವಿಷ್ಯದ ನಿರ್ಧಾರದಲ್ಲಿ ಪೋಷಕರ ಶಿಕ್ಷಕರ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಬಳಗದ ಸದಸ್ಯೆ ಕೆ.ಜಯಲಕ್ಷ್ಮಿ 65ನಿಮಿಷಗಳ ಉಪನ್ಯಾಸ ನೀಡಿ ವಿದ್ಯಾರ್ಥಿಗಳು ಹಾಗೂ ಹಿರಿಯ ಸಭಾ ಸದಸ್ಯರ ಗಮನ ಸೆಳೆದರು. ಕೇಳುಗರ ಮೆಚ್ಚುಗೆಯನ್ನು ಗಳಿಸಿದ ಕೆ.ಜಯಲಕ್ಷ್ಮಿ ಅವರಿಗೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕೃತಜ್ಞತೆ ಸಲ್ಲಿಸಿದರು. ವರದಿ : ಕಿಗ್ಗಾಲು ಎಸ್.ಗಿರೀಶ್ 

Read More

https://www.youtube.com/watch?v=VcN70wEYUNY&authuser=0 ಮಡಿಕೇರಿ ಫೆ.18 NEWS DESK : ‘ಕೊಡಗು ವಿಶ್ವ ವಿದ್ಯಾಲಯ’ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ವಿವಿಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‍ನ ನೇತೃತ್ವದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ‘ವಿದ್ಯಾರ್ಥಿಗಳ ಸ್ಥಿತಿ ಅಯೋಮಯ, ಮೈಮರೆತರೆ ವಿವಿಗಳೆ ಮಾಯ’, ‘ನಿಲ್ಲಿಸಿ ಶಿಕ್ಷಣದ ವ್ಯಾಪಾರೀಕರಣ’ ಮೊದಲಾದ ಭಿತ್ತಿ ಫಲಕಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳು, ‘ವಿ ವಾಂಟ್ ಜಸ್ಟಿಸ್’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದರು. ನಂತರ ಮೆರವಣಿಗೆಯಲ್ಲಿ ಜಿಲ್ಲಾಡಳಿತದ ಭವನಕ್ಕೆ ತೆರಳಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಎಬಿವಿಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ಕೊಡಗು ವಿಶ್ವ ವಿದ್ಯಾಲಯ ನಮ್ಮ…

Read More

ಮಡಿಕೇರಿ ಫೆ.18 NEWS DESK : ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ಮಡಿಕೇರಿ ಕ್ಷೇತ್ರದ ಶಾಸಕರನ್ನು ಹೊಗಳುವ ಭರದಲ್ಲಿ ಈ ಹಿಂದಿನ ಶಾಸಕರು ನಗರದ ಅಭಿವೃದ್ಧಿಗೆ ದೊಡ್ಡ ಮೊತ್ತದ ಅನುದಾನ ತರಲಿಲ್ಲವೆಂದು ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಬಿಜೆಪಿ ಎಸ್‍ಸಿ ಮೋಚಾದ ನಗರಾಧ್ಯಕ್ಷ ಹೆಚ್.ಜಿ.ಮುಕುಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಿನ ಶಾಸಕರು 3 ಕೋಟಿ ರೂ. ನೀಡಿದರು ಎನ್ನುವ ವಿಚಾರವನ್ನೇ ದೊಡ್ಡದು ಮಾಡಿ ಪ್ರಚಾರಕ್ಕಾಗಿ ಹೇಳಿಕೆ ನೀಡಿರುವ ಪ್ರಕಾಶ್ ಆಚಾರ್ಯ ಅವರು, ಮೊದಲು ದಸರಾ ಅನುದಾನವನ್ನು ದಸರಾ ಸಮಿತಿಗಳಿಗೆ ಬಿಡುಗಡೆ ಮಾಡಿಸಿಕೊಡಲಿ ಎಂದು ಸವಾಲು ಹಾಕಿದ್ದಾರೆ. ಶಾಸಕರ ಪರ ಪ್ರಚಾರ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ, ಆದರೆ ಮಾಜಿ ಶಾಸಕರು ಹೆಚ್ಚಿನ ಅನುದಾನ ತರಲಿಲ್ಲ ಎಂದು ಸುಳ್ಳು ಆರೋಪ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ. ಮಡಿಕೇರಿ ನಗರದ ಅಭಿವೃದ್ಧಿಗೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅವರು ತಮ್ಮ ಅಧಿಕಾರವಧಿಯಲ್ಲಿ ದಾಖಲೆ ಮೊತ್ತದ ಅನುದಾನವನ್ನು…

Read More

ಕುಶಾಲನಗರ ಫೆ.18 NEWS DESK :  ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆಗಳುಳ್ಳ ಮಕ್ಕಳ ಕಲಿಕಾ ಹಬ್ಬವು ಮಕ್ಕಳ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ ಹೇಳಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಸೋಮವಾರಪೇಟೆ ‌ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಕ್ಲಸ್ಟರ್ ಕೇಂದ್ರದ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ( ಫೆ.18 ರಂದು ) ಎಫ್.ಎಲ್.ಎನ್.: “ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ(Foundation literacy and Numeracy) ಕುರಿತು ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಸಂಭ್ರಮದ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು. ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಹಾಗೂ ಅವರಲ್ಲಿ ಸಂತಸದ ಕಲಿಕೆಯೊಂದಿಗೆ ಅವರ ಪ್ರತಿಭಾನ್ವೇಷಣೆಗೆ ಸಹಕಾರಿಯಾಗಿದೆ…

Read More

ಸುಂಟಿಕೊಪ್ಪ,ಫೆ.18 NEWS DESK : ಮಾದಾಪುರ ಗ್ರೇಡ್ 1 ಗ್ರಾಮ ಪಂಚಾಯಿತಿಯ ಗ್ರಾಮ ಸಭೆಗೆ ಪ್ರಮುಖ ಇಲಾಖೆಯ ಅಧಿಕಾರಿಗಳು ಗೈರಾಗಿದ್ದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮ ಸಭೆಯನ್ನು ಮುಂದೂಡಲಾಯಿತು.  ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ  ಜಾಲಿಸೋಮಣ್ಣ ಅಧ್ಯಕ್ಷತೆಯಲ್ಲಿ ಕೃಷಿಪತ್ತಿನ ಸಹಕಾರ ಸಂಘ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆದರೆ ಸಭೆಗೆ ಪ್ರಮುಖ ಇಲಾಖೆಗಳಾದ ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಆಹಾರ ಇಲಾಖಾಧಿಕಾರಿಗಳು ಗ್ರಾಮಸ್ಥರಾದ ಕೊಪ್ಪತ್ತಂಡ ಗಣೇಶ, ಮಾಜಿ ಸದಸ್ಯ ಮಜೀದ್, ಮಠದ ಗಣೇಶ್, ಮಾಜಿ ಸದಸ್ಯ ಹೆಚ್.ಕೆ.ಸೋಮಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಭೆಯನ್ನು ಮುಂದೂಡುವಂತೆ ಒತ್ತಾಯಿಸಿದರು. ಗ್ರಾಮಸಭೆಗೆ ಹಾಜರಾಗುವಂತೆ 32 ಇಲಾಖೆಗಳಿಗೆ ನೋಟಿಸ್ ಕಳುಹಿಸಲಾಗಿದೆ. ಆದರೆ ಪ್ರಮುಖ ಇಲಾಖೆ ಬಾರದಿರುವುದ್ದರಿಂದ 15 ದಿನದಲ್ಲಿ ಗ್ರಾಮಸಭೆಯನ್ನು ನಡೆಸದಿದ್ದಲ್ಲಿ ಗ್ರಾಮ ಪಂಚಾಯಿತಿ ಮುತ್ತಿಗೆ ಹಾಕಿ ರಸ್ತೆ ತಡೆ ನಡೆಸುವುದಾಗಿ ಸಭೆ ಸೂಚಿಸಿದಾಗ ಸಭೆಗೆ ಆಗಮಿಸಿದ್ದ ಸರ್ವ ಗ್ರಾಮಸ್ಥರು ಸಹಮತ ವ್ಯಕ್ತಪಡಿಸಿದರು. ಇದೇ ಸಂದರ್ಭ ಗ್ರಾಮ ಪಂಚಾಯಿತಿ ವತಿಯಿಂದ ಮನೆಗಳಿಗೆ ಸರಬರಾಜು…

Read More

ಮಡಿಕೇರಿ ಫೆ.18 NEWS DESK  : ನಗರದ  ಸಂತ ಮೈಕೆಲರ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಬಿ.ಸಿ.ಅವನಿಕಾ ರಾಜ್ಯ ಮಟ್ಟದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನಗಳಿಸಿದ್ದಾಳೆ. ಈಕೆ ಸಂತ ಮೈಕಲರ ಕಾಲೇಜಿನ ಉಪನ್ಯಾಸಕಿ ಹೇಮಾ ಹಾಗೂ ಚಂದನ್ ದಂಪತಿಗಳ ಪುತ್ರಿ.

Read More

ಮಡಿಕೇರಿ ಫೆ.18 NEWS DESK  : ಸಾಮಾಜಿಕ ಕಳಕಳಿಯೊಂದಿಗೆ ಸಾಹಿತ್ಯ ಕ್ಷೇತ್ರದ ಪ್ರಗತಿಗೆ ಅಪಾರ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ 12ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ಇಂದು ಲೇಖಕಿ ಮುಕ್ಕಾಟಿರ ಮೌನಿ ನಾಣಯ್ಯ ಅವರು ರಚಿಸಿರುವ “ಆ ಒರ್ ಬೈಟ್…?” ಎಂಬ ಕೊಡವ ಮಕ್ಕಡ ಕೂಟದ 109ನೇ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಬಯವಂಡ ಮಹಾಬಲ ಪೂವಯ್ಯ ಪುಸ್ತಕ ಬಿಡುಗಡೆ ಮಾಡಿದರು. ಸಾಹಿತಿ ಹಾಗೂ ಕೊಡವ ಮಕ್ಕಡ ಕೂಟದ ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ ಮಾತನಾಡಿ, ಭಾಷೆಯ ಬೆಳೆವಣಿಗೆಗೆ ಸಾಹಿತ್ಯದ ಅಗತ್ಯವಿದೆ, ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಯುವ ಪೀಳಿಗೆ ಮುಂದಾಗಬೇಕು ಎಂದು ಕರೆ ನೀಡಿದರು. ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಲೇಖಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಕೊಡವ ಮಕ್ಕಡ ಕೂಟ ಕೊಡವ ಭಾಷೆ ಮಾತ್ರವಲ್ಲದೆ ಇತರ ಭಾಷೆಗಳ ಸಾಹಿತ್ಯ ಬೆಳವಣಿಗೆಗೂ ಸಹಕಾರ ನೀಡುತ್ತಿರುವುದು ಶ್ಲಾಘನೀಯವೆಂದರು. ‘ಆ ಒರ್…

Read More

ಬೆಂಗಳೂರು ಫೆ.18 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ ಎಂದರು. ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ.‌ ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ…

Read More