ಲೇಖಕ: admin

ನಾಪೋಕ್ಲು ಫೆ.18 NEWS DESK : ಎಲ್ಲಾ ಧರ್ಮಗಳು ವಿದ್ಯೆಗೆ ಮಹತ್ವ ನೀಡಿವೆ. ಇಸ್ಲಾಂ ಧರ್ಮದ ಜೀವನಾಡಿ ಕೂಡ ವಿದ್ಯೆ ಆಗಿದೆ ಎಂದು ಕೊಳಕೇರಿಯ ಸುಹೇಬ್ ಫೈ ಝ ಹೇಳಿದರು. ಚೆರಿಯಪರಂಬು ಮಖಾಂ ಉರೂಸ್ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಭಾಗವಹಿಸಿ ಅವರು ಮಾತನಾಡಿದರು. ಅವರವರ ಧರ್ಮದ ಆಚಾರ ವಿಚಾರಗಳನ್ನು ಅನುಷ್ಠಾನಗಳನ್ನು ಕಲಿತು ಸುಸಂಸ್ಕೃತರಾಗಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ವಿದ್ಯೆ ಅಗತ್ಯ. ಇಸ್ಲಾಂ ಧರ್ಮವು ಕೂಡ ವಿದ್ಯೆಗೆ ಮಹತ್ವ ನೀಡಿದೆ ಎಂದು ಹೇಳಿದರು. ಶಿಕ್ಷಣದಿಂದ ಒಬ್ಬ ಮನುಷ್ಯ ಸಮಾಜದಲ್ಲಿ ಒಳ್ಳೆಯವನಾಗುತ್ತಾನೆ. ಸೌಹಾರ್ದತೆಯಿಂದ ಕೂಡಿದ ಜೀವನವನ್ನು ಕೈಗೊಳ್ಳಲು ವಿದ್ಯೆ ಸಹಕಾರಿ ಎಂದರು. ಸಾಧು, ಸಂತರು, ಪ್ರವಾದಿಗಳು, ಪವಾಡ ಪುರುಷರು ಮಾನವರ ಜೀವನವನ್ನು ಸುಸಂಸ್ಕೃತ ಸಮಾಜ ನಿರ್ಮಾಣಕ್ಕಾಗಿ ದುಡಿದು ಉತ್ತಮ ರೀತಿಯಲ್ಲಿ ಬದುಕುವಂತೆ ಮಾಡಿದರು ಎಂದು ಧಾರ್ಮಿಕ ಪುಣ್ಯ ಪುರುಷರ ಹಿತ ಚಿಂತನೆಯ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ನಾಪೋಕ್ಲು ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ…

Read More

ಮಡಿಕೇರಿ ಫೆ.18 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಬಿದ್ದಾಟಂಡ ವಾಡೆ ಮುಖಾಂತರ ಫುಲ್ಲೇರ, ಅಚ್ಚಾಂಡಿರ, ತಟಂಡ, ಮಲೇಯರ ಕುಟುಂಬಸ್ಥರ ಮನೆಗಳಿಗೆ ಹೋಗುವ ಸಂಪರ್ಕ ರಸ್ತೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ರೂ.5 ಲಕ್ಷದ ಅನುದಾನದಲ್ಲಿ  ಕೈಗೊಳ್ಳಲಾದ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಸುಮಾರು 20 ವರ್ಷದಿಂದ ಅಭಿವೃದ್ಧಿ ಕಾಣದೆ ಇದ್ದ ಈ ರಸ್ತೆಯ ಕಾಮಗಾರಿಯನ್ನು ಮುತುವರ್ಜಿ ವಹಿಸಿ ಶಾಸಕರು ಅನುದಾನವನ್ನು ಬಿಡುಗಡೆಗೊಳಿಸಿದ್ದಕ್ಕೆ ಹಾಗೂ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಕೈಗೊಳ್ಳಲು ಸಹಕರಿಸಿದ ಬ್ಲಾಕ್ ಅಧ್ಯಕ್ಷರಾದ ಕೆ.ಎ. ಇಸ್ಮಾಯಿಲ್ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ  ಮಾಚೇಟ್ಟಿರ ಕುಶು ಕುಶಾಲಪ್ಪನವರಿಗೂ ಕೊಳಕೇರಿ ಗ್ರಾಮಸ್ಥರು ಸಲ್ಲಿಸಿದ್ದಾರೆ.

Read More

https://www.youtube.com/watch?v=VcN70wEYUNY&authuser=0 ಮಡಿಕೇರಿ ಫೆ.18 NEWS DESK : ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚದಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿ ಎಬಿವಿಪಿ ಪ್ರಮುಖರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೊಡಗು ಮತ್ತು ಇತರೆ ಹಿಂದುಳಿದ ಜಿಲ್ಲೆಗಳಲ್ಲಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದರು. ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಬಲಿಷ್ಠಗೊಳಿಸುವ ಕಾಳಜಿ ಮತ್ತು ಇಚ್ಛಾಶಕ್ತಿಯನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಇತ್ತೀಚೆಗೆ ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವುದರಿಂದ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಕೊಟ್ಟಿದೆ. ಆದರೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಣ ಒದಗಿಸುವುದಕ್ಕೆ ಆಗದೆ ವಿಶ್ವವಿದ್ಯಾನಿಯಗಳನ್ನು ಮುಚ್ಚಲು ಮುಂದಾಗಿರುವುದು ಖಂಡನೀಯ. ಈ ನಿರ್ಧಾರವನ್ನು ಹಿಂಪಡೆದು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು…

Read More

ಮಡಿಕೇರಿ ಫೆ.17 NEWS DESK : 2018-19 ನೇ ಸಾಲಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ತೊಂದರೆಗೊಳಗಾದ ಸಂತ್ರಸ್ತ ಕುಟುಂಬಗಳಿಗೆ ‘ಮನೆ ಹಂಚಿಕೆ’ ಸಂಬಂಧ ಫೆಬ್ರವರಿ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಲಾಟರಿ ಮುಖಾಂತರ ಆಯ್ಕೆಮಾಡಿ ‘ಹಕ್ಕುಪತ್ರ’ ವಿತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.18 NEWS DESK : ನಾಡಿನ ಜೀವನದಿ, ಕಾವೇರಿ ನದಿ ಉಗಮಸ್ಥಾನ ತಲಕಾವೇರಿಯ ದೇವಾಲಯಲ್ಲಿ ಸ್ವಚ್ಛತಾ ಕಾರ್ಯದ ಹಿನ್ನೆಲೆ ಫೆಬ್ರವರಿ 19 ರಂದು ಮಧ್ಯಾಹ್ನ 2 ಗಂಟೆ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು, ಭಕ್ತಾಧಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಕೋರಿದ್ದಾರೆ.

Read More

ಮಡಿಕೇರಿ ಫೆ.18 NEWS DESK :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವು ಫೆಬ್ರವರಿ, 20 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್ ಭೋಜೇಗೌಡ, ಡಾ.ಧನಂಜಯ ಸರ್ಜಿ, ಕುಲಾಲ/ಕುಂಬಾರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಕುಶಾಲಪ್ಪ ಮೂಲ್ಯ, ಕುಲಾಲ/ ಕುಂಬಾರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ದಾಮೋದರ್, ಕನ್ನಡ ಅಧ್ಯಾಪಕರಾದ ಡಾ.ಜಮೀರ್ ಅಹಮದ್ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.18 NEWS DESK  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಛತ್ರಪತಿ ಶಿವಾಜಿ ಮಹರಾಜರ ಜಯಂತಿ ಕಾರ್ಯಕ್ರಮವು ಫೆಬ್ರವರಿ, 19 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್ ಭೋಜೇಗೌಡ, ಡಾ.ಧನಂಜಯ ಸರ್ಜಿ, ಮರಾಠ ಸಮಾಜ ಜಿಲ್ಲಾಧ್ಯಕ್ಷರಾದ ಎಸ್.ಆರ್ ಅರುಣ್ ರಾವ್, ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ NEWS DESK ಫೆ.17 : ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ಹೊರವಲಯದ ಕೆ.ಬೋಯಿಕೇರಿ ಗ್ರಾಮದಲ್ಲಿ ನಡೆದಿದೆ. ದಿ.ಪೊನ್ನಪ್ಪ ಹಾಗೂ ದಮಯಂತಿ ದಂಪತಿಯ ಪುತ್ರ ಬಿ.ಪಿ.ಅನಿಲ್ ಕುಮಾರ್ (ಸತೀಶ್)(40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ವ್ಯಕ್ತಿ ಅವಿವಾಹಿತನಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಯಿ ಹಾಗೂ ಸಹೋದರ ಮನೆಯಲ್ಲಿದ್ದಾಗಲೇ ಕೋಣೆಗೆ ತೆರಳಿದ ಅನಿಲ್ ಕುಮಾರ್ ಗುಂಡು ಹೊಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ನವದೆಹಲಿ NEWS DESK ಫೆ.17 : ಪರವಾನಗಿ ರಹಿತ ತಂಬಾಕು ಬೆಳಡಗಾರರಿಗೆ ಮಾರಾಟಕ್ಕೆ ಅವಕಾಶ ನೀಡಬೇಕು ಹಾಗೂ ಅವರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡಬೇಕೆಂದು *ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಮಾಡಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಕರ್ನಾಟಕದ ಬೆಳಗಾರರಿಗೆ ಖುಷಿ ಸುದ್ದಿ ನೀಡಿದೆ. ಪರವಾನಗಿ ರಹಿತ ತಂಬಾಕು ಬೆಳೆಗಾರರು ಎಫ್ ಸಿ ವಿ ತಂಬಾಕು ಮಾರಾಟ ಮಾಡಲು ಅವಕಾಶ ನೀಡಲು ಹಾಗೂ ದಂಡ ವಿಧಿಸದೆ ಇರಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನವದೆಹಲಿಯಲ್ಲಿ ಸಂಸದ ಯದುವೀರ್ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹವಾಗಿದೆ. ಇದರಿಂದ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಎಫ್.ಸಿ.ವಿ. ತಂಬಾಕನ್ನು 53,325 ಹೆಕ್ಟೇರ್ ಪ್ರದೇಶದಲ್ಲಿ ಬೆಳಯಲಾಗುತ್ತಿದ್ದು 40,487 ನೋಂದಾಯಿತ ಹಾಗೂ 12,838 ಪರವಾನಗಿ ರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ. ಕರ್ನಾಟಕ ತಂಬಾಕು ಬೆಳೆಗಾರರ ಸಂಕಷ್ಟವನ್ನು  ನಿವಾರಿಸಲು ಕೇಂದ್ರ ಬಿಜೆಪಿ ಸರ್ಕಾರ…

Read More

ಮಡಿಕೇರಿ NEWS DESK ಫೆ.17 : ವಿವಾಹ ವಾರ್ಷಿಕೋತ್ಸವದ ದಿನದ ಹಿನ್ನೆಲೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕುಂಭಮೇಳದಲ್ಲಿ ಕುಟುಂಬ ಸಹಿತ ಭಾಗಿಯಾದರು. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ತಮ್ಮ ಪತ್ನಿ ದಿವ್ಯಾ ಮಂತರ್ ಹಾಗೂ ಕುಟುಂಬದ ಸದಸ್ಯರುಗಳೊಂದಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ನೆರವೇರಿಸಿದರು. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ನನ್ನ ವಿವಾಹ ವಾರ್ಷಿಕೋತ್ಸವದ ಸುದಿನದಂದೇ ಅವಕಾಶ ಸಿಕ್ಕಿದ್ದು, ನಿಜಕ್ಕೂ ಸಂತಸ ತಂದಿದೆ ಎಂದು ಡಾ.ಮಂತರ್ ಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

Read More