ಮಡಿಕೇರಿ ಏ.5 NEWS DESK : ಜಿಲ್ಲೆಯ ಪ್ರತಿಷ್ಠಿತ ಯುವಕ ಮಂಡಲದಲ್ಲಿ ಒಂದಾದ ತಾಳತ್ತಮನೆಯ ನೇತಾಜಿ ಯುವಕ ಮಂಡಲದ ವಾರ್ಷಿಕ ಮಹಾ ಸಭೆಯು ನೇತಾಜಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಯುವ ಸಂಘದ ಅಧ್ಯಕ್ಷ ಕೊಂಡಿರ ಪಿ. ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಭಾರಿ ಸಂಘದ ವಾರ್ಷಿಕೋತ್ಸವವನ್ನು ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿ ಬಾಲ್ ಪಂದ್ಯಾಟದೊಂದಿಗೆ ಯಶಸ್ವಿಯಾಗಿ ನಡೆಸಿರುವುದನ್ನು ಹಿರಿಯ ಸದಸ್ಯರು ಶ್ಲಾಘಿಸಿದರು. ಕಾರ್ಯದರ್ಶಿ ಬಿ.ಬಿ.ದಿವೇಶ್ ರೈ ವಾರ್ಷಿಕ ವರದಿಯನ್ನು ವಾಚಿಸಿದರು. ನಂತರ ಸಂಘದ 2024-25 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರಗಳನ್ನು ಮಂಡಿಸಲಾಯಿತು. ಇದೇ ಸಂದರ್ಭ ಕ್ರೀಡಾ ಕೂಟವನ್ನು ನಡೆಸಲು ಸಹಕರಿಸಿದ ಸರ್ವರಿಗೂ ಹಾಗು ಕ್ರೀಡಾ ಕೂಟ ಯಶಸ್ವಿಗೆ ಶ್ರಮಿಸಿದ ಸದಸ್ಯರಿಗೂ ಅಧ್ಯಕ್ಷರು ಧನ್ಯವಾದ ಅರ್ಪಿಸಿದರು. ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ :: ಸಭೆಯಲ್ಲಿ 2025-26 ಸಾಲಿಗೆ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಕೊಂಡಿರ ಪಿ. ಕಾರ್ಯಪ್ಪ, ಉಪಾಧ್ಯಕ್ಷರಾಗಿ ಸಿ.ಸುರೇಶ್ ಕುಮಾರ್, ಕಾರ್ಯದರ್ಶಿಯಾಗಿ ಬಿ.ಬಿ.ದಿವೇಶ್…
ಲೇಖಕ: admin
ಮಡಿಕೇರಿ ಏ.5 NEWS DESK : ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ತೆರಿಗೆ ಹೊರೆಯನ್ನು ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ. ದೇಶದ ಜನಸಾಮಾನ್ಯರ ಹಿತ ಕಾಪಾಡಲು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಕೇಂದ್ರ ಸರ್ಕಾರ ನಿರಂತರವಾಗಿ ತೆರಿಗೆಯನ್ನು ಏರಿಕೆ ಮಾಡುತ್ತಿದೆ ಮತ್ತು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ದುಬಾರಿಗೊಳಿಸುತ್ತಿದೆ. ದೇಶದ ಜನರು ನೆಮ್ಮದಿ ಕಳೆದುಕೊಂಡಿದ್ದು, ಆರ್ಥಿಕ ಸಂಕಷ್ಟದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ, ವಾಹನ ನೋಂದಣಿ ಶುಲ್ಕ, ನಂದಿನಿ ಹಾಲಿನ ಬೆಲೆ, ಬಸ್ ಪ್ರಯಾಣ ದರ, ಮದ್ಯದ ಬೆಲೆ, ವಿದ್ಯುತ್ ಶುಲ್ಕ, ವ್ಯಾಸಂಗ ಶುಲ್ಕ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು…
ಕುಶಾಲನಗರ ಏ.5 NEWS DESK : ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ನಮ್ಮ ತಂಡ ವಿದ್ಯಾರ್ಥಿ ನ್ಯಾಯ ಜಾತ್ರೆ ಎಂಬ ಆಂದೋಲನ ಆರಂಭಿಸಿದೆ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್ ಹೇಳಿದರು.ಪಟ್ಟಣದ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ನ್ಯಾಯ ಯಾತ್ರೆ ಎಂಬ ಆಂದೋಲನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರ ಹಾಗೂ ರಕ್ಷಣೆಗಾಗಿ ಕರ್ನಾಟಕ ವಿದ್ಯಾರ್ಥಿ ಹಿತ ಮಸೂದೆ ಜಾರಿಗೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಬದಲಾವಣೆ, ಸಮರ್ಪಕ ವಿದ್ಯಾರ್ಥಿ ವೇತನ ವಿತರಣೆ, ಹಾಸ್ಟೆಲ್ ವ್ಯವಸ್ಥೆಯ ಸುಧಾರಣೆ, ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗಾವಕಾಶಗಳ ಹೆಚ್ಚಳ,ಡ್ರಗ್ಸ್ ಮತ್ತು ರ್ಯಾಗಿಂಗ್ ಪಿಡುಗು ನಿರ್ಮೂಲನೆ, ವಿದ್ಯಾರ್ಥಿ ನಿಯರ ಸುರಕ್ಷತೆ,ಸರ್ಕಾರಿ ವಿದ್ಯಾಸಂಸ್ಥೆಗಳ ಬಲವರ್ಧನೆ ಹಾಗೂ ಪೇಪರ್ ಲೀಕ್ ತಡೆಗಟ್ಟುವಿಕೆ ಇನ್ನಿತರ ಪ್ರಮುಖ ವಿಷಯಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕಾಗಿ ಮನವಿ…
ಮಡಿಕೇರಿ ಏ.5 NEWS DESK : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿನಾಕಾರಣ ಎಫ್‍ಐಆರ್ ದಾಖಲಿಸಿ ಮಾನಸಿಕ ಕಿರುಕುಳ ನೀಡಿದ ಪರಿಣಾಮ ಅಮಾಯಕ ಯುವಕ ವಿನಯ್ ಸಾವನ್ನಪ್ಪಿದ್ದಾರೆ. ಇದು ವಿಷಾದನೀಯ ಮತ್ತು ಖಂಡನೀಯ. ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಹಿಂದೂ ಮುಖಂಡ ಕುಟ್ಟಪ್ಪ ಹಾಗೂ ಡಿವೈಎಸ್‍ಪಿ ಗಣಪತಿ ಸಾವನ್ನಪ್ಪಿದ್ದರು. ಇದೀಗ ಬಿಜೆಪಿ ಕಾರ್ಯಕರ್ತ ವಿನಯ್ ಸಾವಿಗೆ ಶರಣಾಗಿದ್ದಾರೆ, ಈ ಬೆಳವಣಿಗೆಗಳಿಗೆ ಕಾಂಗ್ರೆಸ್ ಸರ್ಕಾರದ ದುರಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ. ವಿನಯ್ ಕುಟುಂಬಕ್ಕೆ ನ್ಯಾಯ ಸಿಗಬೇಕಾದರೆ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು, ರಾಜ್ಯದ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವ ವಿಶ್ವಾವಿಲ್ಲ. ಕೊಡಗು ಜಿಲ್ಲೆಯಲ್ಲಿ ದ್ವೇಷದ ರಾಜಕಾರಣ ಚಿಗುರೊಡೆದಿರುವುದು ಮತ್ತು ರಾಜಕೀಯ ಪ್ರೇರಿತ ಕೇಸ್ ದಾಖಲಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿನಯ್…
ಮಡಿಕೇರಿ ಏ.5 NEWS DESK : ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 118ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವಿರಾಜಪೇಟೆಯ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ದಿವಂಗತ ಮಾಜಿ ಉಪ ಪ್ರಧಾನಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕರು, ಡಾ.ಜಗಜೀವನ್ ರಾಮ್ ರವರು ಬಡವರ, ಹಿಂದುಳಿದ ವರ್ಗದವರ ಹಾಗೂ ದಲಿತರ ಕಲ್ಯಾಣಕ್ಕಾಗಿ ಹೋರಾಡಿದ ಒಬ್ಬ ರಾಷ್ಟ್ರ ನಾಯಕ. ಸ್ವಾತಂತ್ರ ಹೋರಾಟದಲ್ಲೂ ಪ್ರಮುಖ ಪಾತ್ರ ವಹಿಸಿದ್ದ ಇವರು, ದೇಶದಲ್ಲಿ ಹಸಿರು ಕ್ರಾಂತಿ ತರುವ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣವಾಗಬೇಕೆಂದು ಹೋರಾಡಿದ ಮುತ್ಸದಿ ರಾಜಕಾರಣಿ. ಹಲವಾರು ಕ್ರಾಂತಿಕಾರಿ ಯೋಜನೆಗಳೊಂದಿಗೆ ಸಮಾಜಮುಖಿಯಾಗಿ ಕೆಲಸ ಮಾಡಿದ ಇವರು ನಮ್ಮೆಲ್ಲರಿಗೂ ಆದರ್ಶಪ್ರಾಯರು ಎಂದು ಬಣ್ಣಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ಪುರಸಭೆ ಅಧ್ಯಕ್ಷೆ ದೇಚಮ್ಮ…
ಮಡಿಕೇರಿ ಏ.5 NEWS DESK : ಮಕ್ಕಳ ಪೋಷಣೆ ಮತ್ತು ರಕ್ಷಣೆ(ಬಾಲ ನ್ಯಾಯ ಕಾಯ್ದೆ) ಸಂಬಂಧಿಸಿದಂತೆ ಮಾಹಿತಿ ಶಿಕ್ಷಣ, ಮಾರ್ಗದರ್ಶನದ ಮೂಲಕ ಹೆಚ್ಚಿನ ಜಾಗೃತಿ ಮೂಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಹಾಡಿಗಳಲ್ಲಿ, ಲೈನ್ ಮನೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಹೆಚ್ಚಿನ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು. ಮಕ್ಕಳ ರಕ್ಷಣೆ ಮತ್ತು ಪೋಷಣೆಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಎಲ್ಲೆಡೆ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಸಲಹೆ ಮಾಡಿದರು. ಬಾಲನ್ಯಾಯ ಕಾಯ್ದೆಯ ವಿಶೇಷ ಪಾಲನೆಯಡಿ 18 ವರ್ಷದೊಳಗಿನ ಮಕ್ಕಳ ವಿಶೇಷ ಪಾಲನೆ ಯೋಜನೆ ಜಾರಿಗೆ ಬಂದಿದ್ದು, ತಂದೆ ತಾಯಂದಿರು ಎಚ್‍ಐವಿ ರೋಗಕ್ಕೆ ತುತ್ತಾಗಿ ಮರಣ ಹೊಂದಿದ್ದಲ್ಲಿ ಅಥವಾ ಮಕ್ಕಳನ್ನು ನೋಡಿಕೊಳ್ಳಲು ಅಸಕ್ತರಾಗಿದ್ದರೆ ಅಂತಹ ಮಕ್ಕಳ ಪಾಲನೆ ಮತ್ತು ಪೋಷಣೆ…
ನಾಪೋಕ್ಲು ಏ.5 NEWS DESK : ಇಂದಿರಾ ನಗರದಲ್ಲಿ ಶಾಸಕರ ಅನುದಾನದಿಂದ ಬಿಡುಗಡೆಯಾದ 20 ಲಕ್ಷ ರೂ.ನ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಬೇತು ಮುಖ್ಯ ರಸ್ತೆಯಿಂದ ಇಂದಿರಾನಗರಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಇಂದಿರಾನಗರದಲ್ಲಿ 20 ಲಕ್ಷ ರೂ.ಶಾಸಕರ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ರಸ್ತೆ ನಿರ್ಮಾಣದಿಂದ ಸ್ಥಳೀಯ ಬಹಳಷ್ಟು ಸಮಸ್ಯೆ ಪರಿಹಾರವಾಗಿ ಪ್ರಯೋಜನವಾಗಲಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎ.ಇಸ್ಮಾಯಿಲ್ ಮಾತನಾಡಿ, ಇಂದಿರಾ ನಗರದಲ್ಲಿ 150-200 ಮನೆಗಳಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತರು ವಾಸಿಸುತ್ತಿರುವುದನ್ನು ಮನಗಂಡು ಶಾಸಕರ ಮುತುವರ್ಜಿಯಿಂದ ಕಾಂಕ್ರಿಟ್ ರಸ್ತೆ ನಿರ್ಮಾಣವಾಗಲಿದ್ದು, ನಾಗರಿಕರಿಗೆ ಪ್ರಯೋಜನವಾಗಲಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಶಾಸಕ ಎ.ಎಸ್.ಪೆÇನ್ನಣ್ಣ ಉದ್ಘಾಟಿಸಲಿದ್ದಾರೆ ಎಂದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕಂಗಂಡ ಶಶಿ ಮಂದಣ್ಣ, ಕಾಂಗ್ರೆಸ್ ವಲಯ ಅಧ್ಯಕ್ಷ ಹಾಗೂ…
ನಾಪೋಕ್ಲು ಏ.5 NEWS DESK : ಇಂದಿರಾ ನಗರದ ವಿವೇಕಾನಂದ ಸಂಘ ಹಾಗೂ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಎಂ.ಪಿ.ಹರಿದಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿರಾನಗರದ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಬಿ.ಸುದೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ.ಸುನಿಲ್, ಉಪಾಧ್ಯಕ್ಷರಾಗಿ ಯು.ಕೆ.ಶಶಿ, ಖಜಾಂಚಿಯಾಗಿ ವಿನಿಲ್ ಪಪ್ಪು, ಸಹಕಾರ್ಯದರ್ಶಿಯಾಗಿ ಕೆ.ಎಮ್.ಸಜಿತ್ (ಅನಿಲ್), ಗೌರವಾಧ್ಯಕ್ಷರಾಗಿ ಡಿ.ಪಿ.ರೇಣುಕೇಶ್ ಸಮಿತಿ ಸದಸ್ಯರಾಗಿ ಕೆ.ಬಿ.ಸುಧೀಶ್ , ಕೆ.ಟಿ.ರೋಷನ್, ರವಿ, ವಿಕ್ರಂ, ಕಾರ್ತಿಕ್, ಪ್ರಕಾಶ್, ವಿನಾಯಕ ಟಿ.ಎಂ.ಗಣೇಶ್, ಸಂದೇಶ್, ಜಲೇಂದ್ರ ಆಯ್ಕೆಯಾದರು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಏ.5 NEWSDESK : ವಿರಾಜಪೇಟೆಯ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಜ್ಞಾನಗಂಗಾ ಭವನ’ದಲ್ಲಿ ಏ.6 ರಿಂದ 8 ರವರೆಗೆ ಚಿಣ್ಣರ ಬೇಸಿಗೆ ಸಂಭ್ರಮ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ‘ಜ್ಞಾನಗಂಗಾ ಭವನ’ ಸೇವಾ ಕೇಂದ್ರದ ಮುಖ್ಯ ಸಂಚಾಲಕಿ ಬಿ.ಕೆ.ಕೋಮಲ ತಿಳಿಸಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಶಿಬಿರದಲ್ಲಿ 8 ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬುದಾಗಿದೆ. ಶಿಬಿರವು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ವ್ಯಾಯಾಮ, ದ್ಯಾನ, ಸ್ವಚ್ಚ ಮನಸ್ಸು, ಸ್ವಚ್ಛ ಜೀವನದಿಂದ ಸ್ವಚ್ಚ ಭಾರತ, ಗೇಮ್ಸ್, ವ್ಯಕ್ತಿತ್ವ ವಿಕಸನ, ಆಲೋಚನೆಯ ನೆಲೆ, ಏಕಾಗ್ರತೆಯ ಕಲೆ, ಭಯದ ನಿವಾರಣೆ, ಧ್ಯಾನದ ಮಹತ್ವಿಕೆ, ಕ್ರಿಯೆಯಲ್ಲಿ ಆಲೋಚನೆಗಳು, ಮೌಲ್ಯಗಳು, ಗುಂಪು ಚಟುವಟಿಕೆಗಳು, ಒಳಾಂಗಣ, ಹೊರಾಂಗಣ ಆಟೋಟಗಳು ಸೇರಿದಂತೆ ಇತರ ಚಟುವಟಿಕೆಗಳು ನಡೆಯಲಿದೆ. ಆಸಕ್ತ ಮಕ್ಕಳು ನೋಂದಾವಣೆಗಾಗಿ 8105419822 ಸಂಖ್ಯೆಗೆ ಸಂಪರ್ಕಿಸುವಂತೆ ಕೋರಿದ್ದಾರೆ.
ಮೈದಾನ 1 :: ಮುಕ್ಕಾಟಿರ (ಬೇತ್ರಿ) ಮತ್ತು ಚೌರೀರ ತಂಡಗಳ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಚೌರೀರ ತಂಡ ಜಯ ಸಾಧಿಸಿತು. ಚೌರೀರ ತಂಡದ ಪರ ಪ್ರತಾಪ್ ಅಚ್ಚಯ್ಯ ಹ್ಯಾಟ್ರೀಕ್ ಗೋಲು ದಾಖಲಿಸಿದದರೆ, ಪೆಮ್ಮಯ್ಯ 1 ಗೋಲು ಬಾರಿಸಿದರು. ಮುಕ್ಕಾಟಿರ ಉತ್ತಮ್ ಬೋಪಣ್ಣ 1 ಗೋಲು ದಾಖಲಿಸಿ, ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಶಿವಾಚಾಳಿಯಂಡ ಮತ್ತು ಚೆರಿಯಪಂಡ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ತಲಾ 1 ಗೋಲು ದಾಖಲಿಸುವ ಮೂಲಕ ಡ್ರಾ ಆದ ಕಾರಣ ಟೈ ಬ್ರೇಕರ್‍ನಲ್ಲಿ ಚೆರಿಯಪಂಡ ತಂಡ 3 ಗೋಲು ದಾಖಲಿಸಿ ಗೆಲುವಿನ ನಗೆ ಬೀರಿತು. ಚೆರಿಯಪಂಡ ತಂಡದ ಪರ ದೀಪಕ್ ಸೋಮಯ್ಯ 1, ಟೈ ಬ್ರೇಕರ್‍ನಲ್ಲಿ ಜಾಲಿ ಪೊನ್ನಣ್ಣ, ಗಗನ್ ನಂಜಪ್ಪ ಹಾಗೂ ದೀಪಕ್ ಸೋಮಯ್ಯ ತಲಾ 1 ಗೋಲು ದಾಖಲಿಸಿದರು. ಶಿವಾಚಾಳಿಯಂಡ ಪರ ವಿಜು ಪೂಣಚ್ಚ 1 ಗೋಲು ಬಾರಿಸಿದರು. ಶಿವಾಚಾಳಿಯಂಡ ಯಶವಂತ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.…






