ಕುಶಾಲನಗರ ಮಾ.18 NEWS DESK : ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು ನಮ್ಮ ಯುವ ಪೀಳಿಗೆಯನ್ನು ಅಗತ್ಯ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸಿದರೆ, ಮಾನವ ಬಂಡವಾಳದ ದೊಡ್ಡ ಶಕ್ತಿಯಾಗಿ ದೇಶ ಹೊರಹೊಮ್ಮಲಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ವಿಜಯ ಭಾರತಿ ಸಯಾನಿ ಅಭಿಪ್ರಾಯಪಟ್ಟರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪ್ರಾಯೋಜಕತ್ವದಲ್ಲಿ ಕೊಡಗು ವಿಶ್ವವಿದ್ಯಾಲಯ ಸಹಯೋಗದೊಂದಿಗೆ ಮೈಸೂರು ವಿಭಾಗದ ಲಘು ಉದ್ಯೋಗ ಭಾರತಿ ಆಶ್ರಯದಲ್ಲಿ ಕೊಡಗು ವಿವಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಭಾರತ ಸೇರಿದಂತೆ ಪ್ರಪಂಚದಾದ್ಯಂತ ಲಕ್ಷಾಂತರ ಜನರು ನಿರುದ್ಯೋಗ ಮತ್ತು ಅವಕಾಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ವೃತ್ತಿ ಕೌಶಲ್ಯ ಇಲ್ಲದಿರುವುದೇ ಕಾರಣವಾಗಿದೆ. ಭಾರತ ಸಾವಿರಾರು ವರ್ಷಗಳ ಹಿಂದಿನ ಕೌಶಲ್ಯ ಆಧಾರಿತ ಕಲಿಕೆಯ ಶ್ರೀಮಂತ ಸಂಪ್ರದಾಯ ಹೊಂದಿದ್ದು, ಇಲ್ಲಿಯ ಪ್ರಾಚೀನ ಗುರುಕುಲ ವ್ಯವಸ್ಥೆ ಕೇವಲ ಶೈಕ್ಷಣಿಕ ಜ್ಞಾನದ ಬಗ್ಗೆ ಮಾತ್ರವಲ್ಲದೆ ಜೀವನ ಕೌಶಲ್ಯಗಳ ಜತೆಗೆ ಕರಕುಶಲತೆ ಮತ್ತು ವೃತ್ತಿಪರತೆಯೊಂದಿಗೆ ವೃತ್ತಿ ಕೌಶಲ್ಯದ ತರಬೇತಿಯನ್ನೂ ನೀಡುತ್ತಿದ್ದವು. ನಂತರದ ಬೆಳವಣಿಗೆಗಳಲ್ಲಿ…
ಲೇಖಕ: admin
ಮಡಿಕೇರಿ ಮಾ.18 NEWS DESK : ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘ ಮತ್ತು ನ್ಯಾಯಾಂಗ ಇಲಾಖಾ ನೌಕರರ ಸಂಘ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಮಡಿಕೇರಿ ನ್ಯಾಯಾಲಯದ ಪುರುಷರ ಕಬಡ್ಡಿ, ವಾಲಿಬಾಲ್, ಮಹಿಳೆಯರ ಥ್ರೋಬಾಲ್, ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ನ್ಯಾಯಾಂಗ ಇಲಾಖಾ ನೌಕರರ ಕ್ರೀಡಾಕೂಟದಲ್ಲಿ ಸಾಧಿಸಿದ ಗೆಲುವಿನ ಹಿನ್ನಲೆ ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರು ಗೆಲುವಿನ ಸಂಭ್ರಮಾಚರಣೆ ನಡೆಸಿದರು. ಪಂದ್ಯಾವಳಿಯಲ್ಲಿ ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ಸೋಮವಾರಪೇಟೆ ನ್ಯಾಯಾಲಯದ ನೌಕರರು ಅಲ್ಲದೆ ವಕೀಲರು ಮತ್ತು ನ್ಯಾಯಾಧೀಶರು ಕೂಡ ಗುಂಪು ಕ್ರೀಡೆಯಲ್ಲಿ ಭಾಗವಹಿಸಿದ್ದರು. ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಪ್ಪ ಮಾತನಾಡಿ, ಜಿಲ್ಲೆಯ ವಕೀಲರು, ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿಗಳಿಗೆ ಕ್ರೀಡಾಕೂಟ ಆಯೋಜಿಸಿದ್ದು, ತುಂಬಾ ಯಶಸ್ವಿಯಾಗಿ ಕ್ರೀಡಾಕೂಟ ನಡೆಸಲಾಗಿದೆ ಎಂದು…
ಮಡಿಕೇರಿ ಮಾ.26 NEWS DESK : ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಮಾ.27 ಮತ್ತು 28 ರಂದು ದೈವಕೋಲ ಉತ್ಸವ ಜರುಗಲಿದೆ. ಎರಡು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ವಿಶೇಷ ಪೂಜಾಕೈಂಕರ್ಯಗಳು ಜರುಗಲಿದ್ದು, ಮಾ.27ರ ರಾತ್ರಿ 7 ಗಂಟೆಯಿಂದ ಮಾ.28ರ ಅಪರಾಹ್ನದ ವರೆಗೆ ಶ್ರೀ ವಿಷ್ಣುಮೂರ್ತಿ (ತೀ ಚಾಮುಂಡಿ), ರಕ್ತೇಶ್ವರಿ (ರಕ್ತ ಚಾಮುಂಡಿ), ಕುಟ್ಟಿಶಾಸ್ತಾನ್, ಉಚ್ಚಿಟ್ಟ ವೀರನ್ (ಗುರು) ಗುಳಿಗನ್, ಭೂತಂ (ನಕ್ಕಿಚ್ಚು), ಪಾಷಾಣಮೂರ್ತಿ (ಕಲ್ಲುರ್ಟ್ಟಿ) ಮತ್ತು ಅಜ್ಜಪ್ಪ ತೆರೆಗಳ ದೈವಕೋಲ ನಡೆಯಲಿದೆ. ಮಾ.27 ರಂದು ರಾತ್ರಿ ಭಕ್ತಾಧಿಗಳಿಗೆ ಅನ್ನದಾನ ನಡೆಯಲಿದ್ದು, ಮಾ.28ರ ಬೆಳಿಗ್ಗೆ 5 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೈವದ ಮೇಲೇರಿ ಮತ್ತು 9 ಗಂಟೆಗೆ ರಕ್ತೇಶ್ವರಿ ದೈವಕೋಲ ಉತ್ಸವ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಆಡಳಿತ ಮಂಡಳಿ ಟ್ರಸ್ಟಿಗಳು ಕೋರಿದ್ದಾರೆ.
ಮಡಿಕೇರಿ ಮಾ.18 NEWS DESK : ಹುಲಿತಾಳ ಫ್ರೆಂಡ್ಸ್ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾ. 21, 22, 23 ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ. ಒಟ್ಟು ಹತ್ತು ಮಾಲೀಕತ್ವದ ಹತ್ತು ತಂಡಗಳು ಪಾಲ್ಗೊಳ್ಳಲಿದ್ದು, ಟೀಮ್ ಶೀಲ್ಡ್ ಮೇಕೇರಿ, ಟೀಮ್ ವಿರಾಟ್ಸ್ ಮಡಿಕೇರಿ, ಟೀಮ್ ಲೂಸರ್ಸ್ ಕಡಗದಾಳು, ಟ್ಯಾಂಗೋ ಬಾಯ್ಸ್ ಕಾಂತೂರು, ಟೀಮ್ ರೈಡರ್ಸ್ ಮರಗೋಡು, ಪ್ರವೀತ್ ಕ್ರಿಕೆಟರ್ಸ್ ಮರಗೋಡು, ಟೀಮ್ ಎಂ.ಸ್. ಡಿ ಅರೆಕಾಡು, ಟೀಮ್ ಕಾರ್ಣಿಕ ಕೊಡಗು, ಕಿಂಗ್ಸ್ ಎಲೆವೆನ್ ಕಡಗದಾಳು, ಶ್ರೀ ಕುಶಾನಿ ಕ್ರಿಕೆಟರ್ಸ್ ಹುಲಿತಾಳ, ತಂಡಗಳ ನಡುವೆ ಲೀಗ್ ಪಂದ್ಯಗಳು ನಡೆಯಲಿವೆ. ಪಂದ್ಯ ಕೂಟದ ವಿನ್ನರ್ಸ್ ತಂಡಕ್ಕೆ 1ಲಕ್ಷ ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 50,000 ನಗದು ಹಾಗೂ ಆಕರ್ಷಕ ಟ್ರೊಫಿ, ತೃತೀಯ ಬಹುಮಾನವಾಗಿ 10,000 ನಗದು ಹಾಗೂ ಆಕರ್ಷಕ ಟ್ರೊಫಿ, ಚತುರ್ಥ ಬಹುಮಾನವಾಗಿ 5000 ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೂ ಕ್ರೀಡಾ…
ಮಡಿಕೇರಿ ಮಾ.18 NEWS DESK : ಸೆಪಿಎಂಟ್ ಕಾಲೇಜ್ ನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಅಂತರ ಕಾಲೇಜು 5A ಸೈಡ್ ರಿಂಕ್ ಹಾಕಿ ಪಂದ್ಯಾವಳಿ ವಿರಾಜಪೇಟೆ ಕಾವೇರಿ ಕಾಲೇಜಿನ ಹಾಕಿತಂಡವು ದ್ವಿತೀಯ ಸ್ಥಾನ ಪಡೆಯುದರ ಮೂಲಕ ಸಾಧನೆಯನ್ನು ಮಾಡಿದೆ. ಒಟ್ಟು 21 ತಂಡಗಳು ಪಾಲ್ಗೊಂಡಿದ್ದ ಕ್ರೀಡಾಕೂಟದಲ್ಲಿ ಅಂತಿಮ ಪೈನಲ್ ಹಣಾಹಣಿ ವಿರಾಜಪೇಟೆ ಕಾವೇರಿ ಪದವಿ ಕಾಲೇಜಿ ಹಾಗೂ ಎಂ.ಎಂ.ಕಾಲೇಜು ಗದಗ ನಡುವೆ ನಡೆದು 6-7 ಒಂದು ಗೋಲಿನ ಅಂತರದಲ್ಲಿ ಸೋಲನ್ನು ಅನುಭವಿಸಿತ್ತು. ಇದಕ್ಕೂ ಮೊದಲು ಲೀಗ್ ಹಂತದಲ್ಲಿ ರಾಮಯ್ಯ ಕಾಲೇಜನ್ನು 10-3 , ವಿದ್ಯಾ ವಿಕಾಸ ಕಾಲೇಜನ್ನು 8-2 , ಸೆಂಟ್ ಆನ್ಸ್ ಪದವಿ ಕಾಲೇಜನ್ನು 11-1 ಗೋಲುಗಳಿಂದ ಸೋಲಿಸಿ ಸೆಮಿ ಫೈನಲ್ಸ್ ಗೆ ಲಗ್ಗೆ ಇಟ್ಟಿತು. ಸೆಮಿ ಫೈನಲ್ಸ್ ನಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜನ್ನು 3-2 ಗೋಲಿನಲ್ಲಿ ಸೋಲಿಸಿ ಅಂತಿಮವಾಗಿ ಫೈನಲ್ಸ್ ಗೆ ತಲುಪಿ ಎಂ.ಎಂ.ಕಾಲೇಜು ಗದಗದ ನಡುವೆ ನಡೆದ ವಿರೋಚಿತ ಪಂದ್ಯದಲ್ಲಿ 6 -7 ಒಂದು ಗೋಲಿನ…
ಮಡಿಕೇರಿ ಮಾ.18 NEWS DESK : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾ.21 ರಂದು ತಲಕಾವೇರಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ತಲಕಾವೇರಿ ಸನ್ನಿಧಿಗೆ ಆಗಮಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಹಾಗೂ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಶ್ರೀ ಎ.ಎಸ್ ಪೊನ್ನಣ್ಣ ರವರು ಹಾಗು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭಾಗವಹಿಸಲಿದ್ದಾರೆ. ಕಾವೇರಿ ಆರತಿ ಕಾರ್ಯಕ್ರಮದ ಅಂಗವಾಗಿ ಕಾವೇರಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಾಯಿ ಕಾವೇರಿಯ ಪವಿತ್ರ ತೀರ್ಥದೊಂದಿಗೆ ರಾಜಧಾನಿಗೆ ಮರಳಲಿದ್ದಾರೆ. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
ಮಡಿಕೇರಿ ಮಾ.18 NEWS DESK : ಬೈಕಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಪ್ರಾಣಪಾಯದಿಂದ ಪಾರದ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಮುಖ್ಯ ರಸ್ತೆಯಲ್ಲಿ ನಡೆದಿದೆ. ತಟ್ಟಳ್ಳಿಯಿಂದ ಮಾಲ್ದಾರೆ ಮಾರ್ಗವಾಗಿ ವಾಲ್ನೂರು ಗ್ರಾಮಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಅಯ್ಯಪ್ಪ ಮಾಲ್ದಾರೆ- ಸಿದ್ದಾಪುರ ಮುಖ್ಯ ರಸ್ತೆಯ ಕೆರೆಯ ಬಳಿ ಕಾಡಾನೆಯೊಂದು ಕಾಫಿ ತೋಟದಿಂದ ನೇರವಾಗಿ ರಸ್ತೆಗೆ ಬಂದಿದೆ. ಆನೆಯನ್ನು ಕಂಡು ಗಾಬರಿಗೊಂಡ ಸವಾರ ಅಯ್ಯಪ್ಪ ಬೈಕ್ ನ್ನು ಹಿಂಬದಿಗೆ ತಿರುಗಿಸುವಷ್ಟರಲ್ಲಿ ಕಾಡಾನೆ ಏಕಾಏಕಿ ದಾಳಿಗೆ ಯತ್ನಿಸಿದೆ. ತಕ್ಷಣ ಬೈಕನ್ನ ಬಿಟ್ಟು ಓಡಿ ಪ್ರಾಣಪಾಯದಿಂದ ಪರಾದರೆ ಕಾಡಾನೆ ಬೈಕನ್ನ ಸಂಪೂರ್ಣ ಜಖಂ ಗೊಳಿಸಿ ಮುಖ್ಯ ರಸ್ತೆಯಿಂದ ಕಂದಕ್ಕೆ ಎಸದಿದೆ. ಆನೆಯ ಕಿರಿಚಾಟದ ಶಬ್ದ ಕೇಳಿ ಸಮೀಪದಲ್ಲೇ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಹಾಗೂ ಆರ್ ಆರ್ ಟಿ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆನೆಯನ್ನ ಕಾಡಿಗಟ್ಟಿದ್ದಾರೆ. ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ಅವರ ನಿರ್ದೇಶನದಂತೆ…
ಮಡಿಕೇರಿ NEWS DESK ಮಾ.17 : ಮಡಿಕೇರಿ ನಗರದ ಅಶೋಕಪುರದ ಡಾ.ಅಂಬೇಡ್ಕರ್ ಭವನದ ಸಮೀಪ ಮಾ.19ರಂದು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಭೂಮಿಪೂಜೆ ನೆರವೇರಲಿದೆ. ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಗೊಳ್ಳಲಿದೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಡಾ.ಅಂಬೇಡ್ಕರ್ ಭವನ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೌದ್ಧ ಧರ್ಮದ ಆಚರಣೆಯಂತೆ ಗುರುಗಳಾದ ಸುಗಥಪಾಲ ಭಾಂತೇಜಿ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ. ಡಾ.ಅಂಬೇಡ್ಕರ್ ಅವರ ಅಭಿಮಾನಿಗಳು, ಅನುಯಾಯಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಮಡಿಕೇರಿ ಮಾ.17 NEWS DESK : ಜಿಲ್ಲೆಯ ರಸಗೊಬ್ಬರ ಕಂಪನಿ ಪ್ರತಿನಿಧಿಗಳು, ಸಹಕಾರ ಸಂಘಗಳು, ಕೃಷಿ ಪರಿಕರ ಮಾರಾಟ ಸಹಕಾರ ಸಂಘ ಪ್ರತಿನಿಧಿಗಳ ಜೊತೆ ಮುಂಗಾರು ಸಂದರ್ಭದಲ್ಲಿ ರಸಗೊಬ್ಬರ ದಾಸ್ತಾನು ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಗೆ ಪೂರೈಕೆಯಾಗುವ ರಸಗೊಬ್ಬರ ದಾಸ್ತಾನು ಮಾಡುವುದರ ಜೊತೆಗೆ, ಹೊರ ಜಿಲ್ಲೆಗೆ ರಸಗೊಬ್ಬರ ಸಾಗಾಣಿಕೆ ಮಾಡದಂತೆ ಚೆಕ್‍ಪೋಸ್ಟ್‍ಗಳಲ್ಲಿ ಅಗತ್ಯ ತಪಾಸಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸಲಹೆ ಮಾಡಿದರು. ಮಾರುಕಟ್ಟೆ ಫೆಡರೇಷನ್ ಮತ್ತು ಬೀಜ ನಿಗಮದಿಂದ ರಸಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ದಾಸ್ತಾನು ಮಾಡಿಕೊಳ್ಳುವುದು. ಪ್ರಮುಖವಾಗಿ ಯೂರಿಯಾ ಮತ್ತು ಡಿಐಪಿ ರಸಗೊಬ್ಬರವನ್ನು ಬೇಡಿಕೆಯಂತೆ ದಾಸ್ತಾನು ಮಾಡಿಕೊಳ್ಳುವುದು, ಪ್ರತೀ ತಿಂಗಳು ಪೂರೈಕೆಯಾಗುವ ರಸಗೊಬ್ಬರ ಸಂಬಂಧ ಕಾಲ ಕಾಲಕ್ಕೆ ರಸಗೊಬ್ಬರ ಮಾರಾಟಗಾರರು ಹಾಗೂ ಕಂಪನಿ ಮತ್ತು ಸಹಕಾರ ಸೊಸೈಟಿಯವರು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ರಸಗೊಬ್ಬರ ಸಮರ್ಪಕವಾಗಿ…
ಮಡಿಕೇರಿ ಮಾ.17 NEWS DESK : ವಿದ್ಯಾರ್ಥಿಗಳು ಸೂಕ್ತವಾದ ಸಮಯದಲ್ಲಿ ಭವಿಷ್ಯ ರೂಪಿಸಲು ಸರಿಯಾದ ಆಯ್ಕೆಯನ್ನು ಮಾಡಿಕೊಳ್ಳಬೇಕೆಂದು ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ, ಕೊಡಗು ಜಾನಪದ ಪರಿಷತ್‍ನ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಕರೆ ನೀಡಿದರು. ಮಡಿಕೇರಿಯ ನವೋದಯ ವಿದ್ಯಾಲಯದಲ್ಲಿ ನಡೆದ ಪಿಎಂ ಶ್ರೀ ಪತ್ರಿಕೋದ್ಯಮದ ಕುರಿತ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಯ ತುಂಬಾ ಅಮೂಲ್ಯವಾಗಿದ್ದು, ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಆ ಆಯ್ಕೆ ಬೇರೆಯವರ ಪಾಲಾಗಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಒಬ್ಬ ಪತ್ರಕರ್ತ ಸಮಾಜಕ್ಕೆ ಎಷ್ಟು ಅಗತ್ಯ ಮತ್ತು ಪತ್ರಕರ್ತರ ಜವಾಬ್ದಾರಿಗಳೊಂದಿಗೆ ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯ ವ್ಯಕ್ತಡಿಸಿದರು. ಕೊಡಗು ಚಾನಲ್‍ನ ವ್ಯವಸ್ಥಾಪಕ ನಿರ್ದೇಶಕ ಜಿ.ವಿ.ರವಿಕುಮಾರ್ ಮಾತನಾಡಿ, ದೃಶ್ಯ ಮಾಧ್ಯಮ ಎಂದರೆ ಏನು, ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ, ದೃಶ್ಯ ಮಾದ್ಯಮ ಯುವ ಜನತೆ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ವಿವರಿಸಿದರು. ಮಕ್ಕಳು ಪ್ರತೀ ದಿನ ಪತ್ರಿಕೆಗಳ, ಸುದ್ದಿ ವಾಹಿನಿಗಳ…






