ಲೇಖಕ: admin

ಮಡಿಕೇರಿ NEWS DESK ಏ.3 : ತಾಳತ್ತಮನೆಯಲ್ಲಿ ಏ.5 ರಂದು ಕಲ್ಲುರ್ಟಿ ದೈವ ಹಾಗೂ ಸ್ವಾಮಿ ಕೊರಗಜ್ಜ ದೈವದ ವರ್ಷಾವಧಿ ನೇಮೋತ್ಸವ ನಡೆಯಲಿದೆ.  ಬೆಳಿಗ್ಗೆ 7 ಗಂಟೆಗೆ ಗಣಹೋಮ, 11 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 6.30 ಗಂಟೆಗೆ ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ಅವರ ಉಪಸ್ಥಿಯಲ್ಲಿ ಭಂಡಾರ ತೆಗೆಯುವುದು, ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ, 9 ಗಂಟೆಗೆ ಕಲ್ಲುರ್ಟಿ ದೈವದ ನೇಮೋತ್ಸವ, ರಾತ್ರಿ 2 ಗಂಟೆಗೆ ಕೊರಗಜ್ಜ ಕೋಲಸೇವೆ ಹಾಗೂ ಪ್ರಸಾದ ವಿತರಣೆಯಾಗಲಿದೆ. ತಾಳತ್ತಮನೆಯ ದಿ.ರಾಧಾಕೃಷ್ಣ ರೈ ಹಾಗೂ ದಿ.ದೇವಕ್ಕಿ ರೈ ಅವರ ಮನೆಯಲ್ಲಿ ನಡೆಯುವ ನೇಮೋತ್ಸವದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗುತ್ತಿಗೆದಾರ ಸದಾಶಿವ ರೈ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 9480290688 ನ್ನು ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಏ.3 : ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಬೇಕು ಮತ್ತು ಇದರ ಪ್ರಗತಿಗೆ ಅಗತ್ಯವಿರುವ ಅನುಕೂಲವನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಉನ್ನತ ಶಿಕ್ಷಣ ಸಚಿವ ಸುಧಾಕರ ಅವರಿಗೆ ಮನವಿ ಸಲ್ಲಿಸಿದೆ. ಈ ಕುರಿತು ಮಾಹಿತಿ ನೀಡಿರುವ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು, ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುವುದಲ್ಲದೆ ಜಿಲ್ಲೆಯ ಆರ್ಥಿಕ ಪ್ರಗತಿಗೂ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಕೊಡಗು ಜಿಲ್ಲೆ ಬೆಟ್ಟಗುಡ್ಡಗಳಿಂದ ಕೂಡಿದ ಪ್ರದೇಶವಾಗಿದ್ದು, ಅನೇಕ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿನ ಹಿನ್ನಡೆಯಿಂದ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹೊರ ಜಿಲ್ಲೆಗಳನ್ನೇ ಅವಲಂಬಿಸಬೇಕಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಮಂದಿ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಾಲ ಮಾಡಿ, ಆಸ್ತಿ ಮತ್ತು ಚಿನ್ನಾಭರಣಗಳನ್ನು ಅಡವಿಟ್ಟು ಹಣ ಹೊಂದಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುತ್ತಿದೆ. ದಕ್ಷಿಣ ಕೊಡಗು ಭಾಗದಲ್ಲಿ ಶಿಕ್ಷಣದ ವಿಚಾರದಲ್ಲಿ ಪೋಷಕರು ಹೆಚ್ಚು ಕಷ್ಟ ಪಡುತ್ತಿದ್ದಾರೆ. ಕೊಡಗು…

Read More

ನಾಪೋಕ್ಲು ಏ.3 NEWS DESK : ಕೊಡಗಿನ ಪ್ರಥಮ ಪೊನ್ನು ಮುತ್ತಪ್ಪ ದೇವಸ್ಥಾನ ಹಾಗೂ ಎರಡನೇ ಪರಶಿನಿ ಎಂದು ಪ್ರಖ್ಯಾತವಾಗಿರುವ ನಾಪೋಕ್ಲುವಿನ ಶ್ರೀ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವವು ಆರಂಭಗೊಂಡಿದ್ದು, ಇಂದಿನಿಂದ(ಏ.3) ಏ.5ರವರೆಗೆ ಶ್ರದ್ಧಾಭಕತಿಯಿಂದ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ ಚಂದ್ರನ್ ಹೇಳಿದರು. ದೇವಾಲಯದ ಆವರಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸವದ ಅಂಗವಾಗಿ ಕೇರಳ ನೀಲೇಶ್ವರದ ಮುರಳಿ ಕೃಷ್ಣ ತಂತ್ರಿಗಳಿಂದ ಗಣಪತಿ ಹೋಮ ಮತ್ತು ಶುದ್ಧ ಕಳಸ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಇಂದು ರಾತ್ರಿ 8.30 ಗಂಟೆಗೆ ಗುರು ಪೂಜೆ ಹಾಗೂ ಶ್ರೀದೇವಿ ಪೂಜೆ ನಡೆಯಲಿದೆ. ಏ.4 ರಂದು ಪೈಂಗುತ್ತಿ ಹಾಗೂ ಸಂಜೆ ಶ್ರೀ ಮುತ್ತಪ್ಪ ದೇವರ ಕಳಸ ನಡೆಯಲಿದೆ. ಪವಿತ್ರ ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳ ಚಂಡಗಳೊಂದಿಗೆ ನಾಪೋಕ್ಲು ಪೇಟೆಯ ಮುಖ್ಯಬೀದಿಯಲ್ಲಿ ಸನ್ನಿಧಾನಕ್ಕೆ ಮೆರವಣಿಗೆ ಮೂಲಕ ಆಗಮನವಾಗಲಿದೆ. ರಾತ್ರಿ ವೆಳ್ಳಾಟಂ ಬಳಿಕ ಕುಟ್ಟಿಚಾತ ಮತ್ತು ಗುಳಿಗ ದೇವರ…

Read More

ಮಡಿಕೇರಿ NEWS DESK ಏ.3 : ವಾರದ ಹಿಂದೆ ನಾಪತ್ತೆಯಾಗಿದ್ದ ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಮಲ್ಲಿಕಮ್ಮ ಅವರು ಇಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪತ್ತೆಯಾಗಿದ್ದಾರೆ ಎಂದು ಕುಟುಂಬ ವರ್ಗ ತಿಳಿಸಿದೆ. ಇದೇ ಮಾ.26ರಂದು ಮಡಿಕೇರಿ ಪಟ್ಟಣಕ್ಕೆ ಹೋದವರು ಮರಳಿ ಮನೆಗೆ ಬಂದಿರಲಿಲ್ಲವೆAದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

Read More

ವಿರಾಜಪೇಟೆ ಏ.3 NEWS DESK : ಭಾರತದ ಜಾನಪದ ಇತಿಹಾಸದಲ್ಲಿ ಪ್ರಪ್ರಥಮ ಜಾನಪದ ಆಧಾರಿತ ಸಂಗ್ರಹ ಪುಸ್ತಕ ಪಟ್ಟೋಲೆ ಪಳಮೆಯನ್ನು ಪ್ರಕಟಿಸಿದ, ಜಾನಪದ ಬ್ರಹ್ಮ ಎಂದೇ ಖ್ಯಾತರಾಗಿರುವ, ದಿ. ನಡಿಕೇರಿಯಂಡ ಚಿಣ್ಣಪ್ಪ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ, ಕೊಡವಾಮೆರ ಕೊಂಡಾಟ ಸಂಘಟನೆ ವತಿಯಿಂದ ಏ.4 ರಂದು ಕೊಡವ ಜಾನಪದ ನಾಳ್ ಮತ್ತು ಕೊಡವಾಮೆಗಾಗಿ ಎಲೆಮರೆಯಲ್ಲಿ ದುಡಿಯುತ್ತಿರುವ ಸುಮಾರು 250 ಜನರಿಗೆ, ದಿವಂಗತ ಮುಕ್ಕಾಟಿರ ಶಿವು ಮಾದಪ್ಪ ನೆನಪಿನಲ್ಲಿ ಸ್ಮರಣಿಕೆ ವಿತರಣಾ ಕಾರ್ಯಕ್ರಮ ನಡೆಯಲಿದೆ.  ವಿರಾಜಪೇಟೆ ಕೊಡವ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ, ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ, ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣೂ ಅಪ್ಪಣ್ಣ, ಅಖಿಲ ಅಮ್ಮ ಕೊಡವ ಸಮಾಜ ಅಧ್ಯಕ್ಷ ಬಾನಂಡ ಪ್ರತ್ಯು,…

Read More

ಮಡಿಕೇರಿ ಏ.3 NEWS DESK : ದೇವರ ದಾಸಿಮಯ್ಯ  ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 5 ಲಕ್ಷ ರೂ.ಬಿಡುಗಡೆ ಮಾಡಲಾಗುವುದು. ಈ ಸಂಬಂಧ ಜಾಗ ಎಲ್ಲಿ ಎಂಬ ಬಗ್ಗೆ ನಿರ್ಧರಿಸುವಂತೆ ಸಮಾಜದ ಪ್ರಮುಖರಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾಗ ಅಂತಿಮಗೊಳಿಸಿದ ಕೂಡಲೇ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟವರಿಗೆ ಶಾಸಕರು ಸಲಹೆ ಮಾಡಿದರು.  ದೇವರ ದಾಸಿಮಯ್ಯ ಕುರಿತು ಹೆಚ್ಚಿನ ಅಧ್ಯಯನಗಳು ನಡೆಯಬೇಕು. ಜೊತೆಗೆ ಪುಸ್ತಕವನ್ನು ಹೊರತರುವಂತಾಗಬೇಕು. ಆ ನಿಟ್ಟಿನಲ್ಲಿ ದೇವರ ದಾಸಿಮಯ್ಯ ಅವರ ಸಂಶೋಧನಾ ಅಧ್ಯಯನಕ್ಕಾಗಿ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ಹೆಚ್ಚಿನ ಅನುದಾನ ಬಿಡುಗಡೆಗೆ ಮುಂದಾಗಲಾಗುವುದು ಎಂದು ಡಾ.ಮಂತರ್ ಗೌಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.  ಸಮಾಜದಲ್ಲಿ ಅಭಿವೃದ್ಧಿ ಮತ್ತು ಬದಲಾವಣೆ ಕಾಣಬೇಕಾದರೆ ಶಿಕ್ಷಣವೇ ಅತೀಮುಖ್ಯ.…

Read More

ಕುಶಾಲನಗರ, ಏ.3 NEWS DESK : ಕುಶಾಲನಗರ ತಾಲ್ಲೂಕಿನ ತೊರೆನೂರು ಹಾಲು ಉತ್ಪಾದಕರ ಸಹಕಾರ ಸಂಘ ( ಹಾಲಿನ ಡೇರಿ ) ದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಟಿ.ಟಿ.ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಟಿ.ಡಿ.ಉದಯ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೊರೆನೂರು ಹಾಲಿನ ಡೇರಿಯ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಹಕಾರ ಇಲಾಖೆಯ ಬಿ.ಜಿ.ಸಂದೀಪ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಹಾಲಿನ ಡೇರಿಯ ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿ ಟಿ.ಎಲ್.ಪುಟ್ಟಸ್ವಾಮಿ, ಎ.ಎಂ.ಅಣ್ಣಯ್ಯ, ಟಿ.ಎನ್.ಗಿರೀಶ್, ಟಿ.ಎಂ.ಚಂದ್ರ, ಟಿ.ಟಿ.ಹನುಮಪ್ಪ, ನಾಗಮ್ಮ ಗಣೇಶ್, ಕುಮಾರಿ ಸೋಮಶೇಖರ್ ಆಯ್ಕೆಯಾಗಿದ್ದಾರೆ. ಡೇರಿಯ ನೂತನ‌ ಅಧ್ಯಕ್ಷ ಟಿ.ಟಿ. ಪ್ರಕಾಶ್ ಮಾತನಾಡಿ, ಹಾಲಿನ ಡೇರಿಯ ಮೂಲಕ ಹೈನುಗಾರಿಕೆ ಕ್ಷೇತ್ರದ ಅಭಿವೃದ್ಧಿಯೊಂದಿಗೆ ರೈತರ ಆರ್ಥಿಕಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಡೇರಿಯ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಟಿ.ಎಲ್.ಮಹೇಶ್ ಕುಮಾರ್ ಅಭಿನಂದಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

Read More

ಸುಂಟಿಕೊಪ್ಪ ಏ.2 NEWS DESK : ವೊಲ್ ವೊ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಸುಂಟಿಕೊಪ್ಪ ಸಮೀಪದ ಕೆದಕಲ್ ವ್ಯಾಪ್ತಿಯ 7ನೇ ಮೈಲ್ ತಿರುವಿನಲ್ಲಿ ನಡೆದಿದೆ. ಸುಂಟಿಕೊಪ್ಪ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ವೊಲ್‍ವೊ ಬಸ್ ಮತ್ತು ಮಡಿಕೇರಿಯಿಂದ ಸುಂಟಿಕೊಪ್ಪದ ಕಡೆಗೆ ಆಗಮಿಸುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಬಸ್ ಚಾಲಕ ಶಿವಾನಂದ ಹಾಗೂ ಲಾರಿ ಚಾಲಕ ಪ್ರತಾಪ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ರೀತಿಯ ನೋವುಗಳು ಸಂಭವಿಸಿಲ್ಲ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಜಗದೀಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಏ.3 NEWS DESK : ನಕಲಿ ಜಾತಿ ಪ್ರಮಾಣ ಪತ್ರಗಳ ಮೂಲಕ ಸರ್ಕಾರದ ಸೌಲಭ್ಯಗಳಿಂದ ನೈಜ ಆದಿವಾಸಿಗಳನ್ನು ವಂಚಿಸಲಾಗುತ್ತಿದೆಯೆಂದು ಆರೋಪಿಸಿ, ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಏ.4 ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆಯೆಂದು ಆದಿವಾಸಿ ಸಂಘಟನೆಗಳ ಒಕ್ಕೂಟ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಜೇನುಕುರುಬರ ಅಭಿವೃದ್ಧಿ ಸಮಿತಿಯ ಸಂಘಟನಾ ಸಂಚಾಲಕರಾದ ಜೆ.ಟಿ.ಕಾಳಿಂಗ ಮಾತನಾಡಿ, ವಿವಿಧ ಆದಿವಾಸಿ ಸಂಘಟನೆಗಳು, ದಲಿತ ಪರ ಸಂಘಟನೆUಳು, ಪ್ರಗತಿಪರ ಸಂಘಟನೆಗಳನ್ನು ಒಳಗೊಂಡಂತೆ ಏ.4ರಂದು ಬೆಳಗ್ಗೆ ನಗರದ ಸುದರ್ಶನ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದೆಂದು ತಿಳಿಸಿದರು. ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಬಳಸಿಕೊಂಡು ಪ್ರಸ್ತುತ ಸರ್ಕಾರದಿಂದ ಆದಿವಾಸಿಗಳಿಗೆ ಮೀಸಲಾದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇದರಿಂದ ಆದಿವಾಸಿಗಳ ಅಭ್ಯುzಯಕ್ಕಾಗಿ ಮೀಸಲಾದ ಶೈಕ್ಷಣಿಕವಾದ, ಸಾಮಾಜಿಕವಾದ ಹತ್ತಾರು ಸರ್ಕಾರಿ ಯೋಜನೆಗಳು ನೈಜ ಆದಿವಾಸಿಗಳಿಗೆ ತಲುಪುತ್ತಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತನಿಖೆಗೆ ಆಗ್ರಹ :: ಕರ್ನಾಟಕ ರಾಜ್ಯ…

Read More

ಮಡಿಕೇರಿ ಏ.3 NEWS DESK :  ‘ಶೂನ್ಯ’ ಬಡ್ಡಿದರದ ಕೃಷಿ ಸಾಲ ವಿತರಣೆಗೆ ಸರ್ಕಾರದ ‘ಸಿಂಗಲ್ ಆರ್‍ಟಿಸಿ’ ಷರತ್ತು ತೊಡಕಾಗಿ ಪರಿಣಮಿಸಿದ್ದು, ಇದನ್ನು ಸರಳೀಕರಿಸಿ, ಕೃಷಿಕ ಬಾಂಧವರಿಗೆಲ್ಲ ಸಾಲ ಸೌಲಭ್ಯ ದೊರಕುವಂತೆ ಮಾಡಬೇಕೆಂದು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದ ಸಾಲ ವಿತರಣೆಗೆ ಸಿಂಗಲ್ ಆರ್‍ಟಿಸಿ, ಅಂದರೆ ಒಬ್ಬರ ಹೆಸರಿನಲ್ಲೆ ಮಾತ್ರ ಇರುವ ಆರ್‍ಟಿಸಿಯನ್ನಷ್ಟೆ ಪರಿಗಣಿಸಬೇಕೆನ್ನುವ ಆದೇಶವನ್ನು ಸರ್ಕಾರ 2021ರಲ್ಲೆ ಹೊರಡಿಸಿತ್ತು. ಹೀಗಿದ್ದೂ ಕಳೆದ ಸಾಲಿನವರೆಗೂ ನಿಯಮಗಳ ಸರಳೀಕರಣದ ಹಿನ್ನೆಲೆ ಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಸಾಲವನ್ನು ಒದಗಿಸಲಾಗಿದೆ. ಆದರೆ, ಈ ಸಾಲಿನಲ್ಲಿ ಸಿಂಗಲ್ ಆರ್‍ಟಿಸಿಯನ್ನು ಕಡ್ಡಾಯ ಗೊಳಿಸಿರುವುದು ಸಹಕಾರ ಸಂಘದಿಂದ ಸಾಲ ವಿತರಣೆಗೆ ತೊಡಕನ್ನು ಉಂಟುಮಾಡುತ್ತಿದೆಯೆಂದು ಕಳವಳ ವ್ಯಕ್ತಪಡಿಸಿದರು. ಜಂಟಿ ಖಾತೆಯ ತೊಡಕು :: ಕೊಡಗು ಜಿಲ್ಲೆಯಲ್ಲಿ ಈ ಹಿಂದಿನಿಂದಲೂ ಆಸ್ತಿಗಳು ‘ಜಂಟಿ ಖಾತೆ’, ಅಂದರೆ ಒಂದು ಜಾಗದ ಆರ್‍ಟಿಸಿಯಲ್ಲಿ ಕುಟುಂಬದ…

Read More