ಲೇಖಕ: admin

ಮಡಿಕೇರಿ ಏ.2 NEWS DESK : ಕೊಡಗು ಜಿಲ್ಲಾ ಪೊಲೀಸ್ ಘಟಕ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮವು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ  ನಡೆಯಿತು. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್‍ಕಾನ್ಸ್‍ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎಸ್.ಸುಧೀಶ್ ಕುಮಾರ್ ಅವರಿಗೆ ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ  ಟ್ರೋಫಿಯನ್ನು ವಿತರಿಸಿದರು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಶ್ವಾನದಳ ವಿಭಾಗದಲ್ಲಿ ಹೆಡ್‍ಕಾನ್ಸ್‍ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮನಮೋಹನ್ ಅವರಿಗೆ ಉತ್ತಮ ಸೇವೆ ಸಲ್ಲಿಸಿರುವುದಕ್ಕೆ ಉತ್ತಮ ಪೊಲೀಸ್ ಟ್ರೋಫಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ವಿತರಿಸಿದರು.  ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಪೊಲೀಸ್ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಅವರು ಗೌರವ ವಂದನೆ ಸ್ವೀಕರಿಸಿ ಮಾತನಾಡಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಬದುಕಿಗೆ ಪೊಲೀಸ್ ಇಲಾಖೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಪ್ರಮುಖವಾಗಿದೆ ಎಂದರು.  ಪೊಲೀಸರ ವೃತ್ತಿಯು ದಿನದ 24…

Read More

ಮಡಿಕೇರಿ ಏ.2 NEWS DESK : ಮುದ್ದಂಡ ಕಪ್ ಹಾಕಿ ಉತ್ಸವ : ಏ.2 ರಂದು ನಡೆದ ಪಂದ್ಯಾವಳಿಯ ವಿಜೇತ ತಂಡಗಳ ವಿವರ ಮೈದಾನ 1 :: ಪೊಂಜಂಡ ಮತ್ತು ಪಟ್ಟಮಾಡ ತಂಡಗಳ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪಟ್ಟಮಾಡ ತಂಡ ಗೆಲುವು ದಾಖಲಿಸಿತು. ಪಟ್ಟಮಾಡ ಪರ ದೀಪಕ್ ಪೂವಣ್ಣ, ನಿಖಿಲ್ ತಿಮ್ಮಯ್ಯ ಹಾಗೂ ಶ್ರೀಷ್ಮ ಬೊಳ್ಳಮ್ಮ ತಲಾ 1 ಗೋಲು ದಾಖಲಿಸಿದರು. ದೇಗುಲ್ ಪಿ.ಎನ್. ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುದ್ದಿಯಡ ಮತ್ತು ಚಿಮ್ಮಣಮಾಡ ನಡುವಿನ ಪಂದ್ಯದಲ್ಲಿ ಮುದ್ದಿಯಡ ತಂಡ 3-0 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು. ಮುದ್ದಿಯಡ ತಂಡದ ಧೀರಜ್ 2 ಹಾಗೂ ದಿಶಾಂತ್ 1 ಗೋಲು ಬಾರಿಸಿದರು. ಚಿಮ್ಮಣಮಾಡ ಸಚಿನ್ ಪ್ಲೇಯರ್ ಆಫ್ ಮ್ಯಾಚ್ ಪ್ರಶಸ್ತಿಗೆ ಭಜನರಾದರು. ಬೊಳೆಯಾಡಿರ ಮತ್ತು ಪೆಮ್ಮುಡಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಳೆಯಾಡಿರ 3-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಬೊಳೆಯಾಡಿರ ಚೇತನ್ ಸುಬ್ಬಯ್ಯ 2 ಹಾಗೂ ಸಚಿನ್…

Read More

ಮಡಿಕೇರಿ ಏ.2 NEWS DESK : ಮುದ್ದಂಡ ಕಪ್ ಹಾಕಿ ಉತ್ಸವ : ಏ.2 ರಂದು ನಡೆದ ಪಂದ್ಯಾವಳಿಯ ವಿಜೇತ ತಂಡಗಳ ವಿವರ ಮೈದಾನ 1 :: ಪೊಂಜಂಡ ಮತ್ತು ಪಟ್ಟಮಾಡ ತಂಡಗಳ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪಟ್ಟಮಾಡ ತಂಡ ಗೆಲುವು ದಾಖಲಿಸಿತು. ಪಟ್ಟಮಾಡ ಪರ ದೀಪಕ್ ಪೂವಣ್ಣ, ನಿಖಿಲ್ ತಿಮ್ಮಯ್ಯ ಹಾಗೂ ಶ್ರೀಷ್ಮ ಬೊಳ್ಳಮ್ಮ ತಲಾ 1 ಗೋಲು ದಾಖಲಿಸಿದರು. ದೇಗುಲ್ ಪಿ.ಎನ್. ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುದ್ದಿಯಡ ಮತ್ತು ಚಿಮ್ಮಣಮಾಡ ನಡುವಿನ ಪಂದ್ಯದಲ್ಲಿ ಮುದ್ದಿಯಡ ತಂಡ 3-0 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು. ಮುದ್ದಿಯಡ ತಂಡದ ಧೀರಜ್ 2 ಹಾಗೂ ದಿಶಾಂತ್ 1 ಗೋಲು ಬಾರಿಸಿದರು. ಚಿಮ್ಮಣಮಾಡ ಸಚಿನ್ ಪ್ಲೇಯರ್ ಆಫ್ ಮ್ಯಾಚ್ ಪ್ರಶಸ್ತಿಗೆ ಭಜನರಾದರು. ಬೊಳೆಯಾಡಿರ ಮತ್ತು ಪೆಮ್ಮುಡಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಳೆಯಾಡಿರ 3-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಬೊಳೆಯಾಡಿರ ಚೇತನ್ ಸುಬ್ಬಯ್ಯ 2 ಹಾಗೂ ಸಚಿನ್…

Read More

ಮಡಿಕೇರಿ, ಏ.2 NEWS DESK : ಮಕ್ಕಳು ಜೀವನದಲ್ಲಿ ಕಷ್ಟಪಟ್ಟು ಸಿಕ್ಕುವ ಸೌಲಭ್ಯಗಳನ್ನು ಬಳಸಿಕೊಂಡು ಯಶಸ್ಸುಗಳಿಸಬೇಕೆಂದು ಅಂತರರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ್ತಿ, ಫೀ.ಮಾ. ಕಾರ್ಯಪ್ಪ ಕಾಲೇಜು ನಿವೃತ್ತ ಪ್ರಾಂಶುಪಾಲೆ ಡಾ. ಮಂಡೇಪಂಡ ಪುಷ್ಪ ಕುಟ್ಟಣ್ಣ ಕರೆ ನೀಡಿದರು. ಮಡಿಕೇರಿಯ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕೊಡಗಿನ ಕ್ರೀಡಾ ಕ್ಷೇತ್ರದ ದ್ರೋಣಾಚಾರ್ಯ ಎಂದೇ ಕರೆಯಲ್ಪಡುವ ದಿ. ಸಿ.ವಿ. ಶಂಕರ್‌ಸ್ವಾಮಿ ಅವರ ಸ್ಮರಣಾರ್ಥ ಏರ್ಪಡಿಸಿಕೊಂಡು ಬದಲಾಗುತ್ತಿರುವ 31ನೇ ವರ್ಷದ ಉಚಿತ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜ. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಸರಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೆ ಕ್ರೀಡೆಯಾಗಲಿ, ಇನ್ನಿತರ ಯಾವುದೇ ಕ್ಷೇತ್ರಗಳಲ್ಲಿಯೂ ಅಭ್ಯಸಿಸಲು ಸೌಲಭ್ಯಗಳಿರಲಿಲ್ಲ. ಈಗಿನ ಮಕ್ಕಳು ಅದೃಷ್ಟವಂತರು. ಇಂತಹ ಶಿಬಿರಗಳ ಮೂಲಕ ತರಬೇತಿ ನೀಡಲಾಗುತ್ತಿದೆ. ಇದೊಂದು ವಿಭಿನ್ನ ಶಿಬಿರವಾಗಿದ್ದು, ಇಲ್ಲಿ ಅನೇಕ ವಿಷಯಗಳನ್ನು ಕಲಿಸಿಕೊಡುತ್ತಿರುವುದು ಶ್ಲಾಘನೀಯವಾದುದು. ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳೇ ತರಬೇತುದಾರರಾಗಿ ತೊಡಗಿಸಿಕೊಂಡು ಪ್ರೋತ್ಸಾಹ ನೀಡುತ್ತಿದ್ದಾರೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಹೇಳಿದರು. ಮಕ್ಕಳಲ್ಲಿ ಶ್ರಮ, ಶಿಸ್ತು, ಸಂಯಮ,…

Read More

ಮಡಿಕೇರಿ ಏ.2 NEWS DESK : ಮುದ್ದಂಡ ಕಪ್ ಹಾಕಿ ಉತ್ಸವ : ಏ.3 ರಂದು ನಡೆಯಲಿರುವ ಪಂದ್ಯಾವಳಿ ವಿವರ ಮೈದಾನ 1 :: ಬೆಳಿಗ್ಗೆ 9 ಗಂಟೆಗೆ ಕುಂಧೀರ ಮತ್ತು ಪೊನ್ನಿಮಾಡ, 10 ಗಂಟೆಗೆ ಚಟ್ಟಂಗಡ ಮತ್ತು ಕುಟ್ಟಂಡ (ಅಮ್ಮತ್ತಿ), 11 ಗಂಟೆಗೆ ಕನ್ನಂಬೀರ ಮತ್ತು ಪಾಲೆಂಗಡ, ಮಧ್ಯಾಹ್ನ 12 ಗಂಟೆಗೆ ಕುಟ್ಟೇಟಿರ ಮತ್ತು ಪುಟ್ಟಿಚಂಡ, 1 ಗಂಟೆಗೆ ಬೈರೇಟಿ ಮತ್ತು ಪಳೆಯಂಡ (ಹಮ್ಮಿಯಾಲ), 2 ಗಂಟೆಗೆ ಮಂದಂಗಡ ಮತ್ತು ಐಮಂಡ, 3 ಗಂಟೆಗೆ ಮಂಡೇಡ ಮತ್ತು ದೇಯಂಡ ಮೈದಾನ 2 :: ಬೆಳಿಗ್ಗೆ 9 ಗಂಟೆಗೆ ಬಟ್ಟಕಾಳಂಡ ಮತ್ತು ಅಣ್ಣಾಡಿಯಂಡ, 10 ಗಂಟೆಗೆ  ಚೇರಂಡ ಮತ್ತು ಚೆನ್ನಪಂಡ, 11 ಗಂಟೆಗೆ ನಂದಿನೆರವಂಡ ಮತ್ತು ಐತಿಚಂಡ, ಮಧ್ಯಾಹ್ನ 12 ಗಂಟೆಗೆ ಮುಂಡಂಡ ಮತ್ತು ಅಮ್ಮಂಡ, 1 ಗಂಟೆಗೆ  ಕಟ್ಟೇರ ಮತ್ತು ಮಾಳೇಟಿರ (ಕೆದಮುಳ್ಳೂರು), 2 ಗಂಟೆಗೆ  ಚೇಂದ್ರಿಮಾಡ ಮತ್ತು ಸುಳ್ಳಿಮಾಡ, 3 ಗಂಟೆಗೆ ಮಂಡೋಟಿರ ಮತ್ತು  ಚೋಡುಮಾಡ ಮೈದಾನ 3…

Read More

ಮಡಿಕೇರಿ ಏ.2 NEWS DESK : ಕೊಡವ ಕುಟುಂಬಗಳ ನಡುವಣ 23ನೇ ‘ಚೆಕ್ಕೇರ ಕ್ರಿಕೆಟ್ ಪಂದ್ಯಾವಳಿ’ ಏ.6ರಿಂದ ಹುದಿಕೇರಿಯಲ್ಲಿ ಆರಂಭಗೊಳ್ಳಲಿದ್ದು, ಪ್ರಶಸ್ತಿಗಾಗಿ 281 ತಂಡಗಳ ನಡುವೆ ಸ್ಪರ್ಧೆ ನಡೆಯಲಿದೆಯೆಂದು ಪಂದ್ಯಾವಳಿ ಆಯೋಜನಾ ಸಮಿತಿಯ ಅಧ್ಯಕ್ಷರಾದ ಚೆಕ್ಕೇರ ಚಂದ್ರ ಪ್ರಕಾಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಆಯೋಜಿತ ಕೊಡವ ಕ್ರಿಕೆಟ್ ಪಂದ್ಯಾವಳಿ ಹುದಿಕೇರಿಯ ಜನತಾ ಪ್ರೌಢಶಾಲಾ ಮೈದಾನ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ 41 ದಿನಗಳ ಕಾಲ ನಡೆಯಲಿದೆ ಎಂದರು. ಪುರುಷರ ಕ್ರಿಕೆಟ್‍ನೊಂದಿಗೆ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನೂ ಆಯೋಜಿಸಲಾಗಿದ್ದು, ಇದರಲ್ಲಿ 64 ಕುಟುಂಬ ತಂಡಗಳು ಹೆಸರನ್ನು ನೋಂದಾಯಿಸಿಕೊಂಡಿವೆ. ಈ ಪಂದ್ಯಾವಳಿ ಏ.28ರಿಂದ ಆರಂಭಗೊಳ್ಳಲಿದೆಯೆಂದರು. ಚೆಕ್ಕೇರ ಕ್ರಿಕೆಟ್ ಪಂದ್ಯಾವಳಿಯ ಫೈನಲ್ಸ್ ಮೇ 19 ರಂದು ನಡೆಯಲಿದೆ. ಪುರುಷರ ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ 1 ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ 75 ಸಾವಿರ ರೂ. ಮತ್ತು ಟ್ರೋಫಿ ಹಾಗೂ ಸೆಮಿಫೈನಲ್‍ನಲ್ಲಿ ಪರಾಜಿತ ಎರಡು ತಂಡಗಳಿಗೆ…

Read More

ಪುತ್ತೂರು ಏ.2 NEWS DESK : ಪ್ರತಿಯೊಬ್ಬರೂ ಕೂಡಾ ಸಮಸ್ಯೆಗಳನ್ನು ಸರಿಯಾಗಿ ಗುರುತಿಸಿ ಅದಕ್ಕೆ ವಿಮರ್ಶಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಅಲ್ಲದೆ ಜೀವನದಲ್ಲಿ ನಾವು ಮಾಡುವ ಕೆಲಸವನ್ನು ಪ್ರಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2023-24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಎಂಬಿಎ ಮತ್ತು ಎಂಸಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸ್ನಾತಕೋತ್ತರ ಪದವೀಧರರಾದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭದಲ್ಲಿ ಮಾತಾಡಿದರು. ನಿಮ್ಮ ಜೀವನವನ್ನು ರೂಪಿಸುವಲ್ಲಿ ಅಪಾರ ತ್ಯಾಗವನ್ನು ಮಾಡಿದ ಮಾತಾ ಪಿತರನ್ನು ಮತ್ತು ಕಲಿತ ವಿದ್ಯಾಸಂಸ್ಥೆಯನ್ನು ಸದಾ ನೆನಪಿನಲ್ಲಿಕೊಳ್ಳಿ ಎಂದರು. ಈ ಮಣ್ಣಿನ, ನೆಲ, ಜಲದ ಬಗ್ಗೆ ಪ್ರೀತಿ ಗೌರವವಿರುವ ಪ್ರಜ್ಞಾವಂತ ಪ್ರಜೆಗಳಾಗಿ…

Read More

ವಿರಾಜಪೇಟೆ ಏ.2 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವತಿಯಿಂದ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಶಿಕ್ಷಕಿ ಲಲಿತ ಪ್ರಸನ್ನ, ಮಹಿಳೆ ಮನೆಯಿಂದಲೇ ದೇಶಭಕ್ತಿ, ದೈವಭಕ್ತಿಯ ಜೊತೆಗೆ ಎಲ್ಲ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿದ್ದಾರೆ. ಆದರೆ ಮನ್ನಣೆ ಸಿಗುವುದು ಮಾತ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುವರಿಗೆ. ದೇಶದ ಯಶಸ್ಸಿನ ಹಿಂದೆ ಎಷ್ಟೋ ಕೋಟಿ ಹೆಣ್ಣುಮಕ್ಕಳ ಶ್ರಮವಿದೆ. ಅಂತಹ ಪರಿಶ್ರಮಕ್ಕೆ ಬೆಲೆ ನೀಡಬೇಕು ಎಂದರು. ಆರೋಗ್ಯವಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಹಾಗಾಗಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಲು ಮುಖ್ಯ. ಪ್ರತಿನಿತ್ಯ ಯೋಗವನ್ನು ಮಾಡುವುದರಿಂದ ನಮ್ಮ ಮನಸ್ಸನ್ನು, ದೇಹವನ್ನು ಸಮತೋಲನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಹಾಗೆಯೇ ನಮ್ಮ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಿಕೊಡಬೇಕು. ಇದರಿಂದ ಮಕ್ಕಳು ಸುಸಂಸ್ಕೃತರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು. ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿರ್ದೇಶಕರುಗಳ ಸಹಕಾರದಿಂದ ಸಮಾಜ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸ್ತ್ರೀ…

Read More

ಮಡಿಕೇರಿ ಏ.2 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಏ.5 ಮತ್ತು 6 ರಂದು 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸ್ವಾಗತ ಸಮಿತಿ ಅಧ್ಯಕ್ಷ ವಿ.ಎಸ್.ವಿನೋದ್ ಕುಮಾರ್ ಮನವಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.5 ರಂದು ಸಂಜೆ 4 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದರು. ಮೆರವಣಿಗೆಯಲ್ಲಿ ಚಂಡೆ, ತೈಯಂ ಕುಣಿತ, ಫ್ಲವರ್ ಡ್ಯಾನ್ಸ್, ತಮಟೆ, ರಾಮ, ಆಂಜನೇಯ ವೇಷಧಾರಿಗಳು, ಹುಲಿ ವೇಷ, ಭಜನಾ ತಂಡಗಳು, ಕಳಸ ಹಾಗೂ ರಾಮನ ಪಲ್ಲಕ್ಕಿ ಮೆರವಣಿಗೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಮೆರವಣಿಗೆಯು ನಗರದ ಗಾಂಧಿ ಮೈದಾನ, ಜನರಲ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ ನಿಲ್ದಾಣ, ಚೌಕಿ, ಮಹದೇವಪೇಟೆ, ಮಾರುಕಟ್ಟೆ, ಶ್ರೀಚೌಡೇಶ್ವರಿ ದೇವಾಲಯ ಮೂಲಕ…

Read More

ಮಡಿಕೇರಿ ಏ.2 NEWS DESK : ಭಾರತೀಯ ಜನತಾ ಪಾರ್ಟಿ ಎಸ್.ಸಿ ಮೋರ್ಚಾದಿಂದ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಏ.13 ರಂದು ವಿವಿಧ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ತಿಳಿಸಿದ್ದಾರೆ. ದೇಶಕ್ಕೆ ಮಹತ್ತರವಾದ ಕೊಡುಗೆ ನೀಡಿರುವ ರಾಷ್ಟ್ರ ನಾಯಕರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದ್ದು, ಅಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ 1 ಗಂಟೆಯ ಕಾಲ ಸ್ಪರ್ಧೆ ನಡೆಯಲಿದೆ. 5 ರಿಂದ 7 ತರಗತಿ ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಕುರಿತು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದ್ದು, ಪ್ರಥಮ ಬಹುಮಾನ 2000 ನಗದು, ಆಕರ್ಷಕ ಟ್ರೋಫಿ ಹಾಗೂ ಪ್ರಶಾಂಸನಾ ಪತ್ರ, ದ್ವಿತೀಯ 1,000 ನಗದು, ಟ್ರೋಫಿ ಹಾಗೂ ಪ್ರಶಾಂಸನಾ ಪತ್ರ ನೀಡಲಾಗುವುದು.…

Read More