ಸುಂಟಿಕೊಪ್ಪ ಫೆ.14 NEWS DESK : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸಬೇಕೆಂದು ಸಾರಿಗೆ ಪ್ರಾಧಿಕಾರದ ಅಧಿಕಾರಿ ಶಿವಕುಮಾರ್ ಹೇಳಿದರು. ಸುಂಟಿಕೊಪ್ಪ ವಾಹನ ಚಾಲಕರ ನಿಲ್ದಾನದಲ್ಲಿ 36ನೇ ರಾಷ್ಟ್ರೀಯ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಸಾರಿಗೆ ಪ್ರಾಧಿಕಾರದ ಅಧಿಕಾರಿ ಉದ್ಘಾಟಿಸಿ ವಾಹನ ಚಾಲಕರನ್ನು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ವಾಹನ ಮಾಲಿಕರು ಹಾಗೂ ಚಾಲಕರು ಎಲ್ಲಾ ದಾಖಲಾತಿಯೊಂದಿಗೆ ಜಾಗೃತೆಯಿಂದ ವಾಹನ ಚಾಲನೆ ಮಾಡುವಂತೆ ಮಡಿಕೇರಿ ಸಾರಿಗೆ ಪ್ರಾಧಿಕಾರದ ಅಧಿಕಾರಿಗಳು ಸಾರ್ವಜನಿಕರಿಗೆ ಹಾಗೂ ಚಾಲಕರಿಗೆ ವಾಹನ ಚಾಲನಾ ಪರವನಾಗಿಯನ್ನು ಹೊಂದದೆ. ವಾಹನ ಚಾಲನೆ ಮಾಡುವುದು ಕಾನೂನು ರೀತಿಯಲ್ಲಿ ಅಪರಾಧವಾಗಿದೆ. ವಾಹನಕ್ಕೆ ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ವಾಹನದಲ್ಲಿರಿಸಿಕೊಳ್ಳಬೇಕು. ಮೋಜಿಗಾಗಿ ವಾಹನ ಚಲಾಯಿಸಿ ಜೀವಕ್ಕೆ ಕುತ್ತು ತರದಂತೆ ಜಾಗೃತೆ ವಹಿಸಿ ಚಾಲನೆಯಲ್ಲಿ ಮೊಬೈಲ್ ಬಳಸದಿರಿ ಮುಂದೆ ಸಾಗುತ್ತಿರುವ ವಾಹನವನ್ನು ಹಿಂದಿಕ್ಕುವಾಗ ಜಾಗೃತೆ ವಹಿಸಬೇಕು. ಇಲ್ಲದಿದ್ದಲ್ಲಿ ಅಪಘಾತ ಸಂಭವಿಸಿ ಪ್ರಾಣ ಹಾನಿಯಾದರೆ ನಿಮ್ಮನ್ನು ನಂಬಿದ ಕುಟುಂಬದವರನ್ನು ನಡು ನೀರಿನಲ್ಲಿ ಕೈಬಿಟ್ಟು ಅವರ ಜೀವನವನ್ನು…
ಲೇಖಕ: admin
ಮಡಿಕೇರಿ ಫೆ.14 NEWS DESK : ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ ಏಕಕಾಲದಲ್ಲಿ ಜಿಲ್ಲೆಯ ನದಿ ಪಾತ್ರದ 15 ಕಡೆ ಮಹಾ ಆರತಿ ಕಾರ್ಯಕ್ರಮ ನಡೆಯಿತು. ನಮಾಮಿ ಕಾವೇರಿ ಬಳಗದ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಹಯೋಗದೊಂದಿಗೆ ಭಾಗಮಂಡಲ ಸಂಗಮ ದಿಂದ ಜಿಲ್ಲೆಯ ಗಡಿ ಭಾಗ ಶಿರಂಗಾಲ ತನಕ ನದಿ ತಟಗಳಲ್ಲಿ ಆರತಿ ಬೆಳಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಭಾಗಮಂಡಲ, ನಾಪೋಕ್ಲು, ಗುಹ್ಯ, ಕರಡಿಗೋಡು, ಬಲಮುರಿ, ಕುಶಾಲನಗರ, ಮಾದಾಪಟ್ಟಣ, ಕೂಡು ಮಂಗಳೂರು, ತೊರೆನೂರು, ಮುಳ್ಳುಸೋಗೆ, ಕೊಪ್ಪ ಸೇರಿದಂತೆ ವಿವಿಧ ಕಡೆಗಳಲ್ಲಿ ನದಿಗೆ ಆರತಿ ಬೆಳಗುವ ಮೂಲಕ ನದಿ ತಟದ ಜನರಿಗೆ ನದಿ ಸಂರಕ್ಷಣೆ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಯಿತು. ತೊರೆನೂರು ಗ್ರಾಮದಲ್ಲಿ ಇದೇ ಪ್ರಥಮ ಬಾರಿಗೆ ಕಾವೇರಿಗೆ ಆರತಿ ಬೆಳಗುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಲ್ಲ ಕಡೆಗಳಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು, ಪ್ರಮುಖರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ಕುಶಾಲನಗರದ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ 169ನೇ…
ಮಡಿಕೇರಿ ಫೆ.14 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಕಾರದಲ್ಲಿ ಕ್ಲಬ್ ಮಹೀಂದ್ರ ವತಿಯಿಂದ ರಕ್ತದಾನ ಶಿಬಿರವು ಫೆಬ್ರವರಿ, 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಹೊರವಲಯದಲ್ಲಿರುವ ಕ್ಲಬ್ ಮಹೀಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಫೆ.13 NEWS DESK : 14 ದಿನಗಳ ಹಸುಗೂಸನ್ನು ಹೊಂದಿರುವ ಬಾಣಂತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ.ದಿನೇಶ್ ಎಂಬುವವರ ಪತ್ನಿ, ಕರಡ ಗ್ರಾಮದ ದಿ.ಕಟ್ಟಿ ಬಿದ್ದಪ್ಪ ಹಾಗೂ ಶೀಲಾ ದಂಪತಿಯ ಪುತ್ರಿ ಕಾವೇರಮ್ಮ (24) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಕೊಟ್ಟೋಳಿ ನಿವಾಸಿ ದಿನೇಶ್ ಹಾಗೂ ಕಾವೇರಮ್ಮ ಅವರು ವಿವಾಹವಾಗಿ ನಾಲ್ಕು ವರ್ಷಗಳಷ್ಟೆ ಕಳೆದಿದೆ. ಮನೆಯಲ್ಲಿ ಪತಿ ಹಾಗೂ ಅತ್ತೆ ಇಲ್ಲದ ಸಂದರ್ಭ ಸಾಧಿಸಿ ಕಾವೇರಮ್ಮ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಫೆ.13 : ದಕ್ಷಿಣ ಕೊಡಗಿನಲ್ಲಿ ಕಾಡಾನೆಗಳ ಹಾವಳಿ ತಾರಕಕ್ಕೇರಿದೆ. ಕಾಡಾನೆಯೊಂದರ ದಾಳಿಗೆ ಸಿಲುಕಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ. ಚನ್ನಂಗೊಲ್ಲಿ ಗ್ರಾಮದ ಪೈಸಾರಿ ನಿವಾಸಿ ಜಾನಕಿ(52) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಗ್ರಾಮದ ಬಳಿಯ ಕಾಫಿ ತೋಟವೊಂದರಲ್ಲಿ ಕಾರ್ಯನಿರ್ವಹಿಸಿ ಸಂಜೆ ಮನೆಗೆ ಮರಳುವ ಸಂದರ್ಭ ಕಾಡಾನೆ ದಿಢೀರ್ ದಾಳಿ ಮಾಡಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಜಾನಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾಫಿ ತೋಟಗಳಲ್ಲಿ ನೆಲೆ ನಿಂತಿರುವ ಕಾಡಾನೆಗಳನ್ನು ತಕ್ಷಣ ಅರಣ್ಯಕ್ಕೆ ಓಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಫೆ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, “ಸಮಗ್ರ ಮಕ್ಕಳ ಲೈಂಗಿಕ ಶಿಕ್ಷಣದ ಕುರಿತು” ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಹಿರಿಯ ಮೇಲ್ವಿಚಾರಕಿ ಸಾವಿತ್ರವ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಾಯಿಯ ಗರ್ಭದಿಂದ 18 ವರ್ಷದವರೆಗೆ ಮಕ್ಕಳು ಎಂದು ಹೇಳಲಾಗುತ್ತದೆ. ಮಕ್ಕಳು ಉತ್ತಮ ಆರೋಗ್ಯವನ್ನು ಪಡೆಯಬೇಕಾದರೆ ಉತ್ತಮ ಪೌಷ್ಠಿಕಯುಕ್ತ ಆಹಾರವನ್ನು ಸೇವಿಸಬೇಕು. ಸರ್ಕಾರ ಇಂದು ಮಕ್ಕಳ ಆರೋಗ್ಯ, ದೈಹಿಕ ಬೆಳವಣಿಗೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಕ್ಕಳು ಶಿಕ್ಷಣವನ್ನು ಪಡೆಯುವುದರ ಮೂಲಕ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಹಾಗೆಯೇ ಮಹಿಳಾ ಮತ್ತು…
ಮಡಿಕೇರಿ ಫೆ.13 NEWS DESK : ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಕುಟುಂಬದ ಜನಸಂಖ್ಯೆಯು ಸುಮಾರು 58,765 ಇದ್ದು, ಇವರಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷರಾದ ಜಿ.ಪಲ್ಲವಿ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯಲ್ಲಿ 9,066 ಅಲೆಮಾರಿ ಜನಸಂಖ್ಯೆ ಇದೆ. ಪರಿಶಿಷ್ಟ ವರ್ಗ ಅಲೆಮಾರಿ 32,702 ಜನಸಂಖ್ಯೆ ಇದೆ. ಹಾಗೆಯೇ ಆದಿವಾಸಿ ಬುಡಕಟ್ಟುಗಳಲ್ಲಿ 16,997 ಜನಸಂಖ್ಯೆ ಇದೆ ಎಂದು ಅವರು ವಿವರಿಸಿದರು. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಅವರು ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಬಳಿಯ ಜೇನುಕುರುಬ ಮತ್ತು ಮೇದಾ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಪುನರ್ ವಸತಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಕುಂದುಕೊರತೆ ಆಲಿಸಿದರು. ಬಳಿಕ ದಿಡ್ಡಳ್ಳಿ ಆದಿವಾಸಿಗಳು ವಾಸಿಸುವ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ದೊಡ್ಡಬೆಟ್ಟಗೇರಿಯಲ್ಲಿ…
ಮಡಿಕೇರಿ ಫೆ.13 NEWS DESK : ಫೆಬ್ರವರಿ 12 ರನ್ನು ಇನ್ನು ಮುಂದೆ ಜಾಗತಿಕ ‘ಕೊಡವ ಹೆಣ್ಣುಮಕ್ಕಳ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಯುನೈಟೆಡ್ ಕೊಡವ ಆರ್ಗನೈಜೇಷನ್ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಘೋಷಿಸಿದ್ದಾರೆ. ಯುಕೊ ಸಂಘಟನೆಯ 6ನೇ ವರ್ಷದ ‘ಬೇದ ಚಂಗ್ರಾಂದಿ’ ಪ್ರಯುಕ್ತ ಸಾಂಪ್ರದಾಯಿಕವಾಗಿ ನಡೆದ ‘ನಡುಬೇದ’ ಆಚರಣೆಯ ನಂತರ ನಡೆದ ಸಭೆಯಲ್ಲಿ ಮಾತನಾಡುತ್ತಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ. ಕೊಡವರ ಸಾಂಪ್ರದಾಯಿಕವಾದ ಬೇದ ಚಂಗ್ರಾಂದಿ ಆಚರಣೆಯಲ್ಲಿ ‘ನಡುಬೇದ’ವನ್ನು ಭೂಮಿಗೆ ಮುಟ್ಟಾದ ದಿನವೆಂಬ ನಂಬಿಕೆಯೊಂದಿಗೆ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಮೊದಲಿಗೆ, ಯುಕೊ ಸಂಘಟನೆಯ ನೇತೃತ್ವದಲ್ಲಿ, ಕೊಡವ ಮಹಿಳೆಯರೆಲ್ಲಾ ಸೇರಿ ಕಿರುಗೂರಿನ ಚೆಪ್ಪುಡಿರ ಸುಜು ಕರುಂಬಯ್ಯನವರ ಭತ್ತದ ಗದ್ದೆಗೆ ತೆರಳಿ, ಸಂಪ್ರದಾಯದಂತೆ ಭೂಮಿಗೆ ‘ತೋರ ತೊಪ್ಪು’ ಎಂದು ಕರೆಯಲ್ಪಡುವ ವಿಶೇಷ ಎಲೆಯಲ್ಲಿ ಅಕ್ಕಿಯನ್ನು ಇಟ್ಟು, ಭೂಮಿಗೆ ಕೈ ಎಣ್ಣೆ ಸುರಿದು, ಪಕ್ಕದಲ್ಲಿ ಮಿಳ್ಳಿಯಲ್ಲಿ ನೀರು, ಮರದ ಬಾಚಣಿಕೆಯನ್ನಿಟ್ಟು “ಭೂಮಿತಾಯಿ, ನೀಡ ಉಟ್ಟಿ ಮಂಡೆ ಕಾಂಜದ್ ತಂಪಾಡ್, ಕುಂಬ್ಯಾತ್ ಮಳೆಯಾಯಿತ್, ಕುಂದ್’ಲೂ ಕೂಳಾಡ್”…
ಮಡಿಕೇರಿ NEWS DESK ಫೆ.13 : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದ ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿ ಎಂ.ಅಮಿತ್(17)ನ ಮೃತದೇಹ ಸಮೀಪದ ಕುಟುಹೊಳೆಯಲ್ಲಿ ಗುರುವಾರ ಪತ್ತೆಯಾಗಿದೆ. ನವೋದಯ ವಿದ್ಯಾಸಂಸ್ಥೆಯ ಸಿಬ್ಬಂದಿ ಆನಂದ್ ಎಂಬುವವರ ಪುತ್ರ ಎಂ.ಎ.ಅಮಿತ್ ಫೆ.11ರಂದು ಬೆಳಗ್ಗೆ 7 ಗಂಟೆಗೆ ಶಾಲಾ ಆವರಣದಲ್ಲಿರುವ ಸಿಬ್ಬಂದಿಗಳ ವಸತಿ ಗೃಹದಿಂದ ಶಾಲೆಗೆಂದು ತೆರಳಿದಾತ ಮುಖ್ಯ ದ್ವಾರದ ಮೂಲಕ ರಸ್ತೆಯತ್ತ ಸಾಗಿದ್ದಾನೆ ಎಂದು ತಿಳಿದು ಬಂದಿತ್ತು. ಇದನ್ನು ಗಮನಿಸಿದ ವಿದ್ಯಾಸಂಸ್ಥೆಯ ರಕ್ಷಣಾ ಸಿಬ್ಬಂದಿಯೊಬ್ಬರು, ಆನಂದ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಆನಂದ್ ಸ್ಥಳಕ್ಕೆ ಆಗಮಿಸಿದರಾದರು, ಪುತ್ರನ ಪತ್ತೆಯಾಗಿರಲಿಲ್ಲ. ಬಳಿಕ ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ವಿದ್ಯಾಸಂಸ್ಥೆಯ ಬಳಿಯಲ್ಲೆ ಮಡಿಕೇರಿ ನಗರಕ್ಕೆ ನೀರು ಸರಬರಾಜು ಮಾಡುವ ಕೂಟುಹೊಳೆ ಜಲಾಗಾರವಿದೆ. ಇದರ ಹಿನ್ನೇರಿನ ದಡದಲ್ಲಿ ವಿದ್ಯಾರ್ಥಿ ಅಮಿತ್‌ನ ಚಪ್ಪಲಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ರ‍್ಯಾಫ್ಟರ್ ಮೂಲಕ ಕಾರ್ಯಾಚರಣೆ ನಡೆಸಿದರು.…
ವಿರಾಜಪೇಟೆ ಫೆ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ ಬಿ,ಸಿ ಟ್ರಸ್ಟ್ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಪೊನ್ನಂಪೇಟೆ ವಲಯದ ಟಿ-ಶೆಟ್ಟಿಗೇರಿ ಕಾರ್ಯಕ್ಷೇತ್ರದಲ್ಲಿ ನೆಲ ಜಲ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದ ತಡಿಯಂಗಡ ಸೌಮ್ಯ, ನೀರು ಮಾನವನ ಆರೋಗ್ಯವನ್ನು ಕಾಪಾಡುವ ಅವಶ್ಯಕವಾದ ಜೀವ. ಹನಿ ನೀರಿಲ್ಲದೆ ಸಕಲ ಜೀವಿಗಳ ಬದುಕು ಅಸಾಧ್ಯ. ನೆಲ ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್ ಪ್ರಾಸ್ತವಿಕವಾಗಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷರಾದ ಸುಶೀಲ, ಒಕ್ಕೂಟದ ಪದಾಧಿಕಾರಿಗಳಾದ ಸರಸ್ವತಿ, ಎಂ.ಡಿ.ಲತಾ, ಉಷಾ, ಸೇವಾ ಪ್ರತಿನಿಧಿ ಗೀತಾ, ರಂಜಿತಾ ಸಂಘದ ಸದಸ್ಯರು ಊರಿನ ಗ್ರಾಮಸ್ಥರು ಹಾಜರಿದ್ದರು.






