ಸೋಮವಾರಪೇಟೆ NEWS DESK ಜ.27 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವಾರ್ಡ್ ಸಂಖ್ಯೆ 9ರ ಮಹದೇಶ್ವರ ಬ್ಲಾಕ್ ಸದಸ್ಯರಾದ ನಾಗರತ್ನ (ರಾಣಿ) ಅವರ ಪತಿ ಪ್ರಕಾಶ್ ಅವರು ಇಂದು ಬೆಳಗ್ಗೆ ನಿಧನರಾದರು.
ಲೇಖಕ: admin
ಕುಶಾಲನಗರ ಜ.27 NEWS DESK : ಶಾಲಾ- ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಆದರ್ಶ ವ್ಯಕ್ತಿತ್ವ ಹಾಗೂ ರಾಷ್ಟಪ್ರೇಮ ಬೆಳೆಸಿಕೊಳ್ಳಲು ದೇಶದ ಐಕ್ಯತೆ, ಸಮಗ್ರತೆಗೆ ಪಣ ತೊಡಬೇಕು ಎಂದು 2004 ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಗಾಡ್ ಆಫ್ ಆನರ್ ( ಪಥ ಸಂಚಲನದಲ್ಲಿ ಅತಿಥಿಗಳಿಗೆ ಗೌರವ ಸಲ್ಲಿಸುವ ಪ್ರಕ್ರಿಯೆ) ನಲ್ಲಿ ಕರ್ನಾಟಕ – ಗೋವಾ ಎನ್.ಸಿ.ಸಿ.ವತಿಯಿಂದ ಎನ್.ಸಿ.ಸಿ.ಕೆಡೆಟ್ ಆಗಿ ಪಾಲ್ಗೊಂಡಿದ್ದ ಕುಶಾಲನಗರ ಜೆ.ಸಿ.ಐ.ಕಾವೇರಿ ಸಂಸ್ಥೆಯ ಅಧ್ಯಕ್ಷ ಹಾಗೂ ಜೇಸಿ ತಂಬಂಡ ತೇಜ ದಿನೇಶ್ ಕರೆ ನೀಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಎನ್.ಎಸ್.ಎಸ್.ಘಟಕದ ವತಿಯಿಂದ ಭಾನುವಾರ ( ಜ.26 ರಂದು ) ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಸಹಯೋಗದೊಂದಿಗೆ ಸಂಭ್ರಮ, ಸಾಗರದಿಂದ ಏರ್ಪಡಿಸಿದ್ದ 76 ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಶದ ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿ,…
ಮಡಿಕೇರಿ ಜ.27 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲ್ಲೂಕು ಮೇಕೇರಿಯ ಯುವಕರು ಆಯೋಜಿಸಿದ ಎಂ.ಕೆ.ಎಲ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಫೈನಲ್ ಪಂದ್ಯಾವಳಿಗೆ ಬ್ಯಾಟ್ ಬೀಸುವ ಮೂಲಕ ಕ್ರೀಡಾಪಟುಗಳಿಗೆ ಹುರಿದುಂಬಿಸಿದರು. ನಂತರ ಮಾತನಾಡಿದ ಶಾಸಕರು, ಕ್ರೀಡೆ ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸಲು ಸಹಕಾರಿಯಾಗಿದೆ ಮತ್ತು ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಪಂದ್ಯಾವಳಿಗಳು ವೇದಿಕೆಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಕ್ರೀಡಾ ಆಯೋಜಕರು, ಕ್ರೀಡಾಪಟುಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, PDO, ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.
ಪುತ್ತೂರು ಜ.27 NEWS DESK : ಪ್ರಜೆಗಳಿಗೆ ಸಮಾನ ಅಧಿಕಾರವನ್ನು ನೀಡುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಶ್ವದಲ್ಲಿಯೇ ಅತಿ ಶ್ರೇಷ್ಟವಾದದ್ದು, ಆದರೆ ನೆರೆ ರಾಷ್ಟ್ರಗಳಿಂದ ಮತ್ತು ದೇಶದ ರಾಜಕೀಯ ಮೇಲಾಟಗಳಿಂದ ಈ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಉಂಟಾಗಿದ್ದು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ನಾವು ಹೆಣಗಾಡಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ಮಾಡಿ ಮಾತಾಡಿದರು. ಭದ್ರತೆಗೆ ಒತ್ತುಕೊಟ್ಟು ರಾಷ್ಟ್ರ ರಕ್ಷಣೆ ಮಾಡುವ ಸುಭದ್ರ ಸರ್ಕಾರವನ್ನು ಆರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಯೋಚಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಸಂಭ್ರಮದಿಂದ ಆಚರಿಸಬೇಕಾದ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಗಳು ರಜಾ ದಿನಗಳಾಗುತ್ತಿರುವುದು ದುರಂತ. ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರಿ ಸಂಸ್ಥೆಗಳು ಮಾತ್ರ ಇದನ್ನು ಆಚರಿಸುವಂತಾದುದು ವಿಪರ್ಯಾಸ ಎಂದರು. ಈ ಬಗ್ಗೆ…
ಸುಂಟಿಕೊಪ್ಪ ಜ.27 NEWS DESK : ಸಮಾಜದ ಕಟ್ಟಕಡೆಯ ವ್ಯಕ್ತಿಕೂಡ ರಾಜ್ಯ ಅಥವಾ ರಾಷ್ಟ್ರಮಟ್ಟದ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ಭಾರತದ ಸಂವಿಧಾನ ನೀಡಿರುವುದು ನಮ್ಮ ಸಂವಿಧಾನದ ಹೆಗ್ಗಳಿಕೆಯಾಗಿದೆ ಎಂದು ಕಾಫಿ ಬೆಳೆಗಾರ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದ್ದಾರೆ. ಸುಂಟಿಕೊಪ್ಪ ಗ್ರಾ.ಪಂ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಂಟಿಕೊಪ್ಪ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು, ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ನಮ್ಮ ದೇಶದ ಸಂವಿಧಾನ ಒಂದಾಗಿದ್ದು, ಇದನ್ನು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ್ದಾರೆಂದು ಸ್ಮರಿಸಿದರು. 1947 ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಬಂದಿದ್ದರೂ ಕೂಡ ನಮಗೆ ನಮ್ಮದೆಯಾದ ಮತ್ತು ಆಡಳಿತ ವ್ಯವಸ್ಥೆಗಳು ಇರಲಿಲ್ಲ. ಇದನ್ನು ಮನಗಂಡು ಮೊದಲ ರಾಷ್ಟ್ರಪತಿಗಳಾಗಿದ್ದ ಬಾಬು ರಾಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಂವಿಧಾನ ರಚನಾ ಸಮಿತಿಯನ್ನು ಮಾಡಿ ಕರಡು ಸಮಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು ಎಂದು ಸಾಯಿಕುಮಾರ್ ಸ್ಮರಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದ…
ಮಡಿಕೇರಿ NEWS DESK ಜ.26 : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ 76 ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ನಡೆಯಿತು. ಧ್ವಜಾರೋಹಣ ಮಾಡಿ ಮಾತನಾಡಿದ ಪ್ರಾಂಶುಪಾಲ ಫ್ರೋ ಮೇಜರ್ ರಾಘವ ಭಾರತ ಗಣರಾಜ್ಯವಾದ ಕುರಿತ ಇತಿಹಾಸವನ್ನು ನೆನಪಿಸಿಕೊಂಡರು ಹಾಗು ಕಾಲೇಜಿನ ಆರು ವಿದ್ಯಾರ್ಥಿಗಳು ಭಾರತೀಯ ಸೇನೆಗೆ ಆಯ್ಕೆಯಾದ ಕುರಿತು ಸಂತಸ ಹಂಚಿಕೊಂಡರು. ಪೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ದೇಶಕ್ಕೆ ನೀಡಿದ ಸೇವೆಯನ್ನು ಸ್ಮರಿಸಿಕೊಂಡರು. ಮುಖ್ಯ ಅಥಿತಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ ಡಾ ಬಿ ಆರ್ ಅಂಬೆಡ್ಕರ್ ನೇತೃತ್ವದಲ್ಲಿ ಭಾರತಕ್ಕೆ ಸಂವಿಧಾನ ರಚನೆಯಾಗಿ ಅದರ ಆಧಾರದಲ್ಲಿ ಭಾರತವು ಗಣರಾಜ್ಯವಾದುದು ಇತಿಹಾಸ, ಅಂದಿನಿಂದ ಇಂದಿನವರೆಗಿನ ಜನರು ನಿಶ್ಚಿಂತೆಯಿಂದ ಬದುಕಲು ಭಾರತದ ಸಂವಿಧಾನ ಅವಕಾಶ ಮಾಡಿಕೊಟ್ಟಿದ. ಇದಕ್ಕೆ ನಾವೆಲ್ಲರು ಗೌರವ ನೀಡಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಮವಸ್ತ್ರದಲ್ಲಿ ನೆರೆದಿದ್ದ ಎನ್ ಸಿ ಸಿ ಕೆಡೆಟ್ ಗಳನ್ನು ಗುರುತಿಸಿ, ತಮ್ಮ ಕಾಲೇಜಿನ…
ಮಡಿಕೇರಿ NEWS DESK ಜ.26 : ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವೇದಿಕೆಯ ಅಧ್ಯಕ್ಷ ರವಿ ಗೌಡ ಅವರು ಕುವೆಂಪು ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಸಮಾಜ ಸೇವಕ ಜಾನ್ಸನ್ ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ತಾಲೂಕು ಅಧ್ಯಕ್ಷ ನಾಗೇಶ್, ಉಪ ಕಾರ್ಯದರ್ಶಿ ಅಕ್ಷಿತ್, ಮಡಿಕೇರಿ ನಗರ ಅಧ್ಯಕ್ಷ ಭರತ್, ಮಹಿಳಾ ಘಟಕದ ಕಾರ್ಯದರ್ಶಿ ಪೂರ್ಣಿಮಾ, ನಿರ್ದೇಶಕಿ ಲಿಲ್ಲಿಗೌಡ ಹಾಗೂ ಸದಸ್ಯರು ಹಾಜರಿದ್ದರು.
ಮಡಿಕೇರಿ NEWS DESK ಜ.26 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ರಾಜಾಸೀಟು ಉದ್ಯಾನವನಕ್ಕೆ ಭೇಟಿ ನೀಡಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದರು. ಹಸಿರ ಪ್ರಕೃತಿಯ ನಡುವೆ ಕಂಗೊಳಿಸುತ್ತಿರುವ ಪುಷ್ಪ ರಾಶಿಯನ್ನು ಕಂಡು ಸಚಿವರು ಮನಸೋತರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಇದ್ದರು.
ಮೈಸೂರು NEWS DESK ಜ.26 : ತರಕಾರಿ ಮತ್ತು ಬೆಲ್ಲದ ಆಸೆಗಾಗಿ ಕಾಡಾನೆಯೊಂದು ಗುಂಡ್ಲುಪೇಟೆಯ ಬಂಡೀಪುರ ರಸ್ತೆಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಮೇಲೆ ದಾಳಿ ಮಾಡುತ್ತಿದ್ದು, ಸವಾರರು ಆತಂಕಗೊಂಡಿದ್ದಾರೆ. ಪ್ರತಿದಿನ ಈ ಮಾರ್ಗದಲ್ಲಿ ಕಾಣಿಸಿಕೊಳ್ಳುವ ಕಾಡಾನೆ ಲಾರಿಗಳನ್ನು ಅಡ್ಡಗಟ್ಟುತ್ತಿದೆ, ಅಲ್ಲದೆ ಇತರ ವಾಹನಗಳ ಮೇಲೆ ದಾಳಿಗೆ ಮುಂದಾಗುತ್ತಿದೆ. ಆನೆಯನ್ನು ಕಂಡು ಆತಂಕಗೊಂಡ ಬೈಕ್ ಸವಾರರೊಬ್ಬರು ಬೈಕ್ ಬಿಟ್ಟು ಓಡುವ ಸಂದರ್ಭ ಕಾಡಾನೆ ದಾಳಿ ಮಾಡಲು ಯತ್ನಿಸಿದೆ. ಆದರೆ ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಕಾಡಾನೆಯನ್ನು ಕಾಡಿಗಟ್ಟುವ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗುತ್ತಿದೆ. ವಾಹನಗಳು ಹೆಚ್ಚು ಓಡಾಡುವ ಸಂದರ್ಭ ಕಾರ್ಯಾಚರಣೆ ನಡೆಸಿದರೆ ವಾಹನಗಳ ಮೇಲೆ ದಾಳಿ ಆನೆ ನಡೆಸುವ ಸಾಧ್ಯತೆಗಳಿರುವುದರಿಂದ ಸೂಕ್ತ ಸಮಯಕ್ಕಾಗಿ ಅರಣ್ಯ ಸಿಬ್ಬಂದಿಗಳು ಎದುರು ನೋಡುತ್ತಿದ್ದಾರೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ-766 ಮೂಲಕ ಹಾದು ಹೋಗಿರುವ ಬಂಡೀಪುರ ರಸ್ತೆಯಲ್ಲಿ ಈ ಒಂಟಿ ಸಲಗ ಉಪಟಳ ನೀಡುತ್ತಿದೆ.
ಮಡಿಕೇರಿ NEWS DESK ಜ.26 : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಾಚಾರವಿಲ್ಲದೆ 52 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ನೇರವಾಗಿ ಜನರಿಗೆ ತಲುಪಿಸುತ್ತಿರುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಇಂದು ಮಡಿಕೇರಿ ಜಿಲ್ಲೆಯ ಶನಿವಾರಸಂತೆ ತಾಲ್ಲೂಕಿನ ಕೊಡ್ಲಿಪೇಟೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಅಭಿವೃದ್ದಿಗೊಳಿಸಲಾಗಿರುವ ನಂದಿಪುರ ಕೆರೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಆಗಸ್ಟ್ 2023 ತಿಂಗಳಲ್ಲಿ ಈ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು. ನಮ್ಮ ಇಲಾಖೆಯ ವತಿಯಿಂದ 3.90 ಕೋಟಿ ವೆಚ್ಚದಲ್ಲಿ ನಂದಿಪುರ ಕೆರೆಯನ್ನು ಅಭಿವೃದ್ದಿಗೊಳಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಲಾಖೆಯು ಕೆರೆಗಳ ಸೌಂದರ್ಯಿಕರಣ ಮಾಡಿದ ಏಕೈಕ ಕೆರೆ ಇದಾಗಿದೆ. ನಗರ ಪ್ರದೇಶಗಳಲ್ಲಿ ಅಭಿವೃದ್ದಿಗೊಳಿಸುವ ರೀತಿಯಲ್ಲಿ ವಾಕಿಂಗ್ ಟ್ರ‍್ಯಾಕ್, ಮಕ್ಕಳಿಗೆ ಆಟವಾಡುವ ಪ್ರದೇಶಗಳನ್ನು ಅಭಿವೃದ್ದಿಗೊಳಿಸಲಾಗಿದೆ. ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು. ಹಿರಿಯ ವಕೀಲರಾದ ಕೊಡ್ಲಿಪೇಟೆಯ ಚಂದ್ರಮೌಳಿಯವರು ಈ ಯೋಜನೆಯನ್ನು…






