ಲೇಖಕ: admin

ಮಡಿಕೇರಿ NEWS DESK ಜ.26 : ಸಂವಿಧಾನದ ಆಶಯಕ್ಕೆ ಬದ್ಧವಾಗಿ ನಾವೆಲ್ಲರೂ ಕರ್ತವ್ಯ ನಿರ್ವಹಿಸಬೇಕು ಎಂದು ಕೊಡಗು ಜಿಲ್ಲಾ ಪಂಚಾಯತ್ ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಕರೆ ನೀಡಿದರು. ನಗರದ ಜಿ.ಪಂ ಕಚೇರಿಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ರಾಷ್ಟ್ರ ನಾಯಕರ ಆಶಯಗಳನ್ನು ಮೈಗೂಡಿಸಿಕೊಂಡು ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಕೊಡಗು ವಿದ್ಯಾಲಯ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ತಂಡ ಮತ್ತು ವಿದ್ಯಾರ್ಥಿನಿಯರು ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಿದ್ದು ಈ ಬಾರಿಯ ವಿಶೇಷವಾಗಿತ್ತು. ಇದೇ ವೇಳೆ ಮಾನ್ಯ ಜಿ.ಪಂ.ಉಪಕಾರ್ಯದರ್ಶಿ ಜಿ.ಧನರಾಜು, ಮಾನ್ಯ ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಮಾನ್ಯ ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ಮಾನ್ಯ ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್ ಮತ್ತು ಜಿ.ಪಂ. ಸಿಬ್ಬಂದಿಗಳು ಇದ್ದರು.

Read More

ವಿರಾಜಪೇಟೆ NEWS DESK ಜ.26 : ವಿರಾಜಪೇಟೆ ತಾಲೂಕು ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕು ಆಡಳಿತ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಶಾಸಕರು ಭಾರತೀಯರ ಬದುಕಿಗೆ ಸಂವಿಧಾನ ನೀಡಿದ ಬಲವನ್ನು ನಾವು ಅರಿತುಕೊಳ್ಳಬೇಕು ಎಂದು ಹೇಳಿದರು. ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಜ.26 : ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 76ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಖಜಾಂಚಿ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಟ್ರಸ್ಟಿ ಶ್ರೀಧರ್ ಹೂವಲ್ಲಿ ಹಾಗೂ ಲಲಿತಾ ತಿಮ್ಮಪ್ಪ, ಪತ್ರಿಕಾ ಭವನದ ಸಿಬ್ಬಂದಿಗಳಾದ ಯಮುನಾ.ಕೆ.ಪಿ, ರಾಜೇಶ್‌ಬಿ.ಪಿ, ಶೈನಿ ಹೆಚ್.ಎಂ, ಪತ್ರಕರ್ತರಾದ ಲ್ಯಾನ್ಸಿ ಮಿನೇಜಸ್, ಪುಟಾಣಿಗಳಾದ ತರುಣ್ ಬಜೆಕೋಡಿ, ಅಹನ್ ಪೂಜಾರಿ, ವರ್ತಕರಾದ ರೆಹಮಾನ್, ಅಶ್ರಫ್ ಮತ್ತಿತರರು ಪಾಲ್ಗೊಂಡಿದ್ದರು.

Read More

*1950 ಜನವರಿ 26 ಸಂವಿಧಾನವನ್ನು ಅಂಗೀಕರಿಸಿ ಶಾಸನವನ್ನಾಗಿ ಒಪ್ಪಿಕೊಂಡ ದಿನ. ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನವೇ ಆಧಾರ. ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು* (ತೇಲಪಂಡ ಶಿವಕುಮಾರ್ ನಾಣಯ್ಯ, ಪ್ರಧಾನ ಸಂಚಾಲಕರು, ಸಾಮಾಜಿಕ ಜಾಲತಾಣ, ಕೊಡಗು ಜಿಲ್ಲಾ ಬಿಜೆಪಿ)

Read More

*ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*

Read More