ಲೇಖಕ: admin

ಮಡಿಕೇರಿ ಫೆ.10 NEWS DESK : ಜಿಲ್ಲೆಯ ಪ್ರಮುಖ ಸಹಕಾರಿ ಸಂಸ್ಥೆಯಾಗಿರುವ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಫೆ.16 ರಂದು ನಡೆಯಲಿದ್ದು, ಸಂಘವನ್ನು ಸಹಕಾರಿ ತತ್ವದಡಿ ಸದೃಢವಾಗಿ ಬೆಳೆಸಲು ಅರ್ಹತೆಯಿರುವವರನ್ನು ಚುನಾಯಿಸುವಂತೆ ಸಂಘದ ಸದಸ್ಯ ಎಂ.ಕೆ.ಅಪ್ಪಚ್ಚು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯರ ದೂರದೃಷ್ಟಿಯ ಫಲವಾಗಿ ಸಹಕಾರಿ ತತ್ವದಡಿ ಅಸ್ತಿತ್ವಕ್ಕೆ ಬಂದ ಈ ಸಂಸ್ಥೆಯೊಂದಿಗೆ ಜಿಲ್ಲೆಯ ಕಾಫಿ ಬೆಳೆಗಾರರಿಗೆ ಭಾವನಾತ್ಮಕ ಸಂಬಂಧವಿದೆ. ಕೊಡಗಿನ ಕಾಫಿ ಉದ್ಯಮದ ಬೆಳವಣಿಗೆಗೆ ಈ ಸಂಘ ಮಹತ್ತರ ಕೊಡುಗೆ ನೀಡಿದೆ ಎಂದರು. ಕೊಡಗಿನ ಸಣ್ಣ ಬೆಳೆಗಾರರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ನೀಡದಿದ್ದ ಅವಧಿಯಲ್ಲಿ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಸಾಲ ನೀಡಿ ಕಾಫಿ ಬೆಳೆಗಾರರ ಅಭ್ಯುದಯಕ್ಕೆ ಸಹಕಾರಿಯಾಗಿತ್ತು. ಆದರೆ ಸಮರ್ಥ ಸಹಕಾರಿ ನಾಯಕತ್ವದ ಕೊರತೆ, ರಾಜಕೀಯ ಹಸ್ತಕ್ಷೇಪ ಮತ್ತು ದುರಾಡಳಿತದ ಫಲವಾಗಿ ಈ ಸಂಘ ಅವನತಿಯ ಹಾದಿಯಲ್ಲಿದೆ. 6314 ಸದಸ್ಯರಲ್ಲಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಮತ ಚಲಾಯಿಸಲು…

Read More

https://www.youtube.com/watch?v=U7CXsPSjld0&authuser=0 ಮಡಿಕೇರಿ ಫೆ.10 NEWS DESK :  ಕ್ರೀಡಾಪಟುಗಳು ಯಾವುದೇ ದುಶ್ಚಟಗಳಿಗೆ ಆಕರ್ಷಿತರಾಗದೆ ಕ್ರೀಡೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು ಎಂದು ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಕರೆ ನೀಡಿದ್ದಾರೆ. ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಮತ್ತು ಚಿಲ್ ಬಾಯ್ಸ್ ಮಡಿಕೇರಿ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.16ರ ವರೆಗೆ ನಡೆಯಲಿರುವ 20ನೇ ವರ್ಷದ ಕೊಡಗು “ಮುಸ್ಲಿಂ ಕಪ್” ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆಗಳು ಮಾನಸಿಕ ದೃಢತೆ ಮತ್ತು ಆರೋಗ್ಯ ವೃದ್ಧಿಗೆ ಸಹಕಾರಿಯಾಗಿವೆ. ಮುಸ್ಲಿಂ ಸಮಾಜದಲ್ಲಿ ಉತ್ತಮ ಪ್ರತಿಭೆಗಳಿದ್ದರೂ ಸೂಕ್ತ ವೇದಿಕೆಗಳು ಸಿಗುತ್ತಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಕೊಡಗಿನಲ್ಲಿರುವ ಗ್ರಾಮೀಣ ಪ್ರದೇಶದ ಎಲ್ಲಾ ಕ್ರೀಡಾಪಟುಗಳನ್ನು ಒಂದೇ ವೇದಿಕೆಯಡಿ ತರುವ ಮತ್ತು ಪ್ರೋತ್ಸಾಹಿಸುವ ಕಾರ್ಯ ಆಗಬೇಕು ಎಂದರು. ಕಳೆದ 19 ವರ್ಷಗಳಿಂದ ಕೊಡಗು ಮುಸ್ಲಿಂ ಕಪ್ ಕ್ರೀಡಾಕೂಟವನ್ನು ನಡೆಸಿಕೊಂಡು ಬರಲಾಗುತ್ತಿದೆ. ಎಲ್ಲಾ…

Read More

ಸಿದ್ದಾಪುರ  ಫೆ.10 NEWS DESK : ಕೊಡಗು ಜಿಲ್ಲಾ, ತಾಲ್ಲೂಕು, ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಮ್ಮತ್ತಿ ಪ್ರೌಢಶಾಲೆ  ಸಂಯುಕ್ತ ಆಶ್ರಯದಲ್ಲಿ ಸಾಹಿತಿ ವಿ.ಎಸ್.ರಾಮಕೃಷ್ಣ ಮತ್ತು ಕೆ.ಟಿ.ಸುಬ್ಬರಾವ್ ದತ್ತಿ ಉಪನ್ಯಾಸ ಕಾರ್ಯಕ್ರಮ ಫೆ.11 ರಂದು ನಡೆಯಲಿದೆ. ಅಮ್ಮತ್ತಿ ಪ್ರೌಢಶಾಲೆಯ ಸಭಾಂಗಣದಲ್ಲಿ  ಬೆಳಿಗ್ಗೆ 11ಗಂಟೆಗೆ ನಡೆಯಲಿರುವ  ಕಾರ್ಯಕ್ರಮವನ್ನು  ಅಮ್ಮತ್ತಿ ಪ್ರೌಢಶಾಲೆ ಸಮಿತಿ ಅಧ್ಯಕ್ಷ ಕರ್ನಲ್ ಕಂಡ್ರತಂಡ ಸಿ. ಸುಬ್ಬಯ್ಯ  ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಮ್ಮತ್ತಿ ಹೋಬಳಿ ಘಟಕದ ಅಧ್ಯಕ್ಷ ಟಿ.ಹೆಚ್.ಮಂಜುನಾಥ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್,ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ, ದೇವಣಗೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹೆಚ್.ಡಿ ಲೋಕೇಶ್,ಮಾಕುಟ್ಟ ನಿವೃತ್ತ ಮುಖ್ಯ ಶಿಕ್ಷಕ ಎ.ವಿ.ಮಂಜುನಾಥ್, ರಾಮಕೃಷ್ಣ, ಶ್ರೀಮತಿ ಕಂಜರ್ಪಣೆ ತಿಮ್ಮಪಯ್ಯ ನಾಗರತ್ನ, ದೊಡ್ಡತಮ್ಮಯ್ಯ, ಕಾವಾಡಿಚಂಡ ಯು. ಗಣಪತಿ, ಐನಂಡ ಪ್ರಕಾಶ್, ಸುಬ್ರಮಣಿ,ಎಂ ಬಿಜೊಯ್,ಟೋಮಿ ಥೋಮಸ್ (ನಾ ಕನ್ನಡಿಗ) ಸಾವಿತ್ರಿ, ಶಭರೀಶ್ ಶೆಟ್ಟಿ, ವಿ.ಎಸ್. ಗುರುಧರ್ಶನ್, ಸಿ.ವಿಜಯಲಕ್ಷ್ಮೀ, ಕೆ.ಆರ್.ಸೂರಜ್, ಮುನೀರ್ ಅಹಮ್ಮದ್, ರೇವತಿ…

Read More

https://youtu.be/NNk6UA0-VGQ?si=DsZbOglgVjNnNvMs ಮಡಿಕೇರಿ ಫೆ.10 : ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ಮಾದೇಶ್ವರ ದೇವಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಾ ಕಾರಣ ನನ್ನ ವಿರುದ್ಧ ಆರೋಪ ಹೊರಿಸಿ ತೇಜೋವಧೆ ಮಾಡಬೇಡಿ ಎಂದು ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಮಹಾ ಮೃತ್ಯುಂಜಯ ಮಾದೇಶ್ವರ ದೇವಾಲಯದ ಆಡಳಿತ ಮಂಡಳಿ ಸಂಭಾವನೆ ನೀಡಿ ನನ್ನನ್ನು ಅರ್ಚಕನನ್ನಾಗಿ ನೇಮಿಸಿಕೊಂಡಿದೆ. ನಾನು ದೇವಾಲಯದಲ್ಲಿ ಅರ್ಚಕ ವೃತ್ತಿಯನ್ನಷ್ಟೇ ಮಾಡುತ್ತಿದ್ದು, ಆಡಳಿತ ಮಂಡಳಿ ತೆಗೆದುಕೊಳ್ಳುವ ನಿರ್ಧಾರಗಳಿಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದರು. ಭಕ್ತಾದಿಗಳು ಅಪೇಕ್ಷಿಸಿದ ಸೇವೆ, ಪ್ರಾರ್ಥನೆಯನ್ನು ಸಲ್ಲಿಸುವುದರೊಂದಿಗೆ ದೇವರ ಪೂಜಾ ವಿಧಿ ವಿಧಾನಗಳನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರುವುದು ಮಾತ್ರ ನನ್ನ ಕಾಯಕವಾಗಿದೆ. ಅರ್ಚಕನಾಗಿ ನನಗೆ ನನ್ನದೇ ಆದ ಗೌರವವಿದೆ, ಕಟ್ಟೆಮಾಡಿನಲ್ಲಿ ನಡೆದ ಮತ್ತು ನಡೆಯುತ್ತಿರುವ ಯಾವುದೇ ಪ್ರಕರಣಗಳಲ್ಲಿ ನನ್ನನ್ನು ಶಾಮೀಲು ಮಾಡಿ ತೇಜೋವಧೆ ಮಾಡಬೇಡಿ ಎಂದು ಕೋರಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಘ್ನೇಶ್ ಭಟ್ ಅಷ್ಟಮಂಗಲ ಪ್ರಶ್ನೆಯ ಮೂಲಕ ಜ್ಯೋತಿಷಿಗಳು ನೀಡಿದ…

Read More

ನಾಪೋಕ್ಲು ಫೆ.10 NEWS DESK : ಮೂರ್ನಾಡು ಆಪ್ತಮಿತ್ರ ಬಳಗದ ವತಿಯಿಂದ ಮೂರ್ನಾಡಿನಲ್ಲಿ ಎರಡನೇ ವರ್ಷದ “ಸಾಕೇತ ಸಾಮ್ರಾಜ್ಞೆ” ಯಕ್ಷೋತ್ಸವ ಗಮನ ಸೆಳೆಯಿತು. ಮೂರ್ನಾಡಿನ ಪಾಂಡಾಣೆ ಮೈದಾನದಲ್ಲಿ ನಡೆದ ಯಕ್ಷೋತ್ಸವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ `ಗಜಮೇಳ” ಎಂದೇ  ಪ್ರಖ್ಯಾತಿ ಪಡೆದ ಹನುಮಗಿರಿಯ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಖ್ಯಾತ ಕಲಾವಿದರು “ಸಾಕೇತ ಸಾಮ್ರಾಜ್ಞೆ” ಎಂಬ ಯಕ್ಷ ಪ್ರಸಂಗವನ್ನು ನಡೆಸಿಕೊಟ್ಟರು. ನಾಪೋಕ್ಲು-ಮೂರ್ನಾಡು ಸೇರಿದಂತೆ ವಿವಿಧ ಭಾಗಗಗಳಿಂದ ಬಂದಿದ್ದ ಸಾವಿರಾರು  ಪ್ರೇಕ್ಷಕರಿಗೆ ಸಂಜೆ ಕಾಫಿ, ಲಘು ಉಪಾಹಾರ ಮತ್ತು ರಾತ್ರಿ ವೇಳೆ ಊಟ ಹಾಗೂ ಕಾಫಿ ವ್ಯವಸ್ಥೆಯನ್ನೂ ಮಾಡಲಾಗಿತ್ತು. ನುರಿತ ಕಲಾವಿದರ ವೇಷ-ಭೂಷಣಗಳು, ಭಾಗವತಿಕೆ, ನೃತ್ಯ, ತಾಳ- ಮೇಳ ಹಾಗೂ ಮಾತುಗಾರಿಕೆಗೆ ಮಾರು ಹೋದ ಪ್ರೇಕ್ಷಕರು,  ಚಪ್ಪಾಳೆ, ವಿಷಲ್‍ಗಳ ಸರಿಮಳೆಯೊಂದಿಗೆ ಕಲಾವಿದರಿಗೆ ಹಾಗೂ ಮೇಳಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ  ಪ್ರೋತ್ಸಾಹಿಸಿದರು. ಆಪ್ತಮಿತ್ರ ಬಳಗದ ಪರವಾಗಿ ವಿಜಯ್ ಎಲ್ಲರನ್ನು ಸ್ವಾಗತಿಸಿ ವಂದಿಸಿದರು. ಅಭಿಪ್ರಾಯ :: ಆಪ್ತಮಿತ್ರ ಬಳಗ ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. 6…

Read More

ನಾಪೋಕ್ಲು ಫೆ.10 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪಾಜೆ ವಲಯ ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿಯನ್ನು ಹಸ್ತಾಂತರ ಮಾಡಲಾಯಿತು. ಮಡಿಕೇರಿ ತಾಲ್ಲೂಕು ಚೆಂಬು ಗ್ರಾಮದ ಉಂಬಳೆ ಭಾಸ್ಕರ ಮತ್ತು ಜಯಂತಿ ದಂಪತಿಗಳ ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಪರಿಹಾರ ಧನವಾಗಿ ದೊರಕಿದ 25,000 ರೂಪಾಯಿಗಳನ್ನು ಯೋಜನಾಧಿಕಾರಿ ಪುರುಷೋತ್ತ ಹಸ್ತಾಂತರಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕರಾದ ಸಂತೋಷ್, ಸೇವಾ ಪ್ರತಿನಿಧಿ ಚಿದಾನಂದ, ಎಂ.ಚೆಂಬು ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿ ವಿಜಯಕುಮಾರ್, ಎಂ.ಟಿ.ರಾಮಮೂರ್ತಿ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಕಣಿವೆ ಫೆ.10 NEWS DESK : ಮಡಿಕೇರಿ ಅರಣ್ಯದ ಮೇಲೆ ನಗರೀಕರಣದ ಪರಿಣಾಮ ಎಂಬ ಪ್ರಬಂಧಕ್ಕೆ ಕುಶಾಲನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಹೆಚ್.ಎ.ಚಿಂತನಾ ಗೆ ಹರಿಯಾಣದ ಅಮೇಥಿ ವಿಶ್ವವಿದ್ಯಾಲಯ ಒಂದು ಲಕ್ಷ ರೂಗಳ ನಗದು ನೀಡಿ ಗೌರವಿಸಿದೆ. ಕುಶಾಲನಗರದ ಉದ್ಯಮಿ ಹೆಚ್.ಎಸ್.ಅಶೋಕ್ ಹಾಗೂ ಸುಮಾ ದಂಪತಿಗಳ ಪುತ್ರಿಯಾಗಿರುವ ಚಿಂತನಾ ಹರಿಯಾಣದ ಅಮೇಥಿಯ ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪ್ಲಾನಿಂಗ್ ಅರ್ಬನ್ ಹಾಗೂ ರೀಜನಲ್ ಎಂಬ ಕೋರ್ಸ್ ಪೂರ್ಣಗೊಳಿಸಿದ್ದು, ಇಡೀ ವಿಶ್ವವಿದ್ಯಾಲಯಕ್ಕೆ ಮೊದಲ ಸ್ಥಾನದಲ್ಲಿ ಸಾಧನೆ ತೋರಿದ ಕಾರಣ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಗಾಳಿಬೀಡು ನವೋದಯ ಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿದ ಚಿಂತನಾ, ಮಂಗಳೂರಿನ ನಿಟ್ಟೆ ಕಾಲೇಜಿನಲ್ಲಿ ಬಿಇ ಆರ್ಟಿಟೆಕ್ಚರ್ ಪದವಿ ಪೂರೈಸಿದ್ದರು. ಬಳಿಕ ಹರಿಯಾಣದ ಅಮೇಥಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳ ಉನ್ನತ ಶಿಕ್ಷಣದಲ್ಲಿ ಪ್ರಥಮ ಹಂತದಲ್ಲಿ ತೇರ್ಗಡೆಯಾದ ಕಾರಣ ದೆಹಲಿಯ ಮನೇಕ್ಷಾ ಸೆಂಟರ್ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರ ಸಾಧನೆಗೆ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ.

Read More

ನಾಪೋಕ್ಲು ಫೆ.10 NEWS DESK : ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹೊದ್ದೂರು ಗ್ರಾ.ಪಂಯ ಹೊದವಾಡ ಗ್ರಾಮದ ರಾಫಲ್ಸ್ ಇಂಟನ್ರ್ಯಾಷನಲ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿಗಳು ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಮುಖ್ಯ ಕಾರ್ಯದರ್ಶಿ ರಫೀಕಲಿ ಕುಂಡಂಡ ಕುಂಜಿಲ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ, ಪಾರಿತೋಷಕ ಮತ್ತು ನಗದು ನೀಡಿ ಗೌರವಿಸಿದರು. ಅಲ್ಲದೇ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಶಂಸನಾ ಪತ್ರ ಹಸ್ತಾಂತರಿಸಿದರು. ಕಾರ್ಯಕ್ರಮಕ್ಕೆ ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಕೆಡುಕುಗಳ ಬಗ್ಗೆ ಮತ್ತು ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕುಂಜಿಲ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಉಪಾಧ್ಯಾಯರಾದ ಗಂಗಮ್ಮ,…

Read More

https://www.youtube.com/watch?v=BYsC2nQ2Lpc&authuser=0 ಮಡಿಕೇರಿ NEWS DESK ಫೆ.9 : ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸೂಚನೆ ನೀಡಿದ್ದಾರೆ. ಶಾಸಕರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಅವರು ಆಸ್ಪತ್ರೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಲಭಿಸಬೇಕು, ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಚಿಕಿತ್ಸೆಗಾಗಿ ಬಂದ ಸಾರ್ವಜನಿಕರ ಆರೋಗ್ಯ ವಿಚಾರಿಸಿದ ಶಾಸಕರು, ವೈದ್ಯ ಡಾ.ಜಮೀರ್ ಅಹಮ್ಮದ್ ಅವರೊಂದಿಗೆ ಆಸ್ಪತ್ರೆಯ ಪ್ರತಿ ವಿಭಾಗಗಳಿಗೆ ತೆರಳಿ ಮಾಹಿತಿ ಪಡೆದರು. ಒಳರೋಗಿಗಳ ಬಳಿಗೆ ಹೋದ ಅವರು ಚಿಕಿತ್ಸೆಯ ಕುರಿತು ವಿಚಾರಿಸಿದರು. ಸೋಮವಾರಪೇಟೆ ಪ.ಪಂ ನಾಮ ನಿರ್ದೇಶಿತ ಸದಸ್ಯ ಡಿ.ಯು.ಕಿರಣ್ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ NEWS DESK ಫೆ.9 : ಮಡಿಕೇರಿ ನಗರ ಪೋಲೀಸ್ ಠಾಣೆಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಮಂಡ್ಯ ಜಿಲ್ಲೆಯ ಮಳವಳ್ಳಿ ಹುಲಗೂರು ಠಾಣೆಗೆ ವರ್ಗಾವಣೆಯಾಗಿರುವ ಲೋಕೇಶ್ ಅವರನ್ನು ನಗರದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ಆತ್ಮೀಯವಾಗಿ ಬೀಳ್ಕೊಟ್ಟರು. ನಗರ ಠಾಣೆಯಲ್ಲಿ ಲೋಕೇಶ್ ಅವರನ್ನು ಸನ್ಮಾನಿಸಿ ಗೌರವಿಸಿದ ಪ್ರಮುಖರು ಮುಂದಿನ ವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ ಲೋಕೇಶ್ ಅವರು 2023 ರಲ್ಲಿ ಮಡಿಕೇರಿ ನಗರ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡು ಜನಸ್ನೇಹಿ ಅಧಿಕಾರಿಯಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದರು. ವಿಶ್ವವಿಖ್ಯಾತ ಮಡಿಕೇರಿ ದಸರಾ ಸೇರಿದಂತೆ ಅನೇಕ ಜನದಟ್ಟಣೆಯ ಕಾರ್ಯಕ್ರಮಗಳ ಸಂದರ್ಭ ಲೋಕೇಶ್ ಹಾಗೂ ಅವರ ಸಿಬ್ಬಂದಿಗಳ ತಂಡ ಉತ್ತಮ ರೀತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಆದ್ದರಿಂದ ಅವರನ್ನು ಆತ್ಮೀಯವಾಗಿ ಬೀಳ್ಕೋಡುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.…

Read More