ಮಡಿಕೇರಿ NEWS DESK ಮಾ.11 : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ , ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75% ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಅಡಿಯಲ್ಲಿ ಪ್ರಾರಭಿಸಲಾಗಿದ್ದು, ಅದರಂತೆ ಸೇವಾಸಿಂಧು ಪೋರ್ಟಲ್‍ನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯAdmission for Morarji Desai Residential Schools ಸೇವೆಯ ವೆಬ್ ಪೋರ್ಟಲ್‍ನಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಮಾರ್ಚ್, 25 ಕೊನೆಯ ದಿನವಾಗಿದೆ. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ…
ಲೇಖಕ: admin
ಮಡಿಕೇರಿ NEWS DESK ಮಾ.11 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದೊಂದಿಗೆ 2024-25ನೇ ಸಾಲಿನ “ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ನಿಯಮ-2006ರ ಅನುಷ್ಟಾನದಲ್ಲಿ ಭಗಿದಾರ ಇಲಾಖೆಗಳ ಪಾತ್ರ ಕುರಿತು ಎರಡು ದಿನಗಳ ಓರಿಯಂಟೇಷನ್ ತರಬೇತಿ ಕಾರ್ಯಗಾರ”ವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಇವರು ಉದ್ಘಾಟಿಸಿ ಮಾತನಾಡಿ ಎಲ್ಲಾ ಹೆಣ್ಣು ಮಕ್ಕಳು ಪೂಜಿಸಲ್ಪಡುವವರಾಗಿದ್ದು, ಇವರಲ್ಲಿ ಅಷ್ಟದೇವತೆಗಳು ನೆಲೆಸುತ್ತಾರೆ. ಪ್ರತಿ ಮನೆಯ ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು, ಸಮಾಜದಲ್ಲಿ ಮಹಿಳೆಯರಿಗೆ ಇರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿ ಮನೆಯಲ್ಲೂ ಹೆಣ್ಣು ಮಕ್ಕಳನ್ನು ಗೌರವಿಸಬೇಕು ಎಂದು ಹೇಳಿದರು. ಸ್ತ್ರೀಶಕ್ತಿ ಒಕ್ಕೂಟದ ರಾಜ್ಯಧ್ಯಕ್ಷರಾದ ರೆಹನಾ ಸುಲ್ತಾನ ಅವರು ಮಾತನಾಡಿ…
ಮಡಿಕೇರಿ NEWS DESK ಮಾ.11 : ಮಡಿಕೇರಿ ನಗರಸಭೆ 2025-26ನೇ ಸಾಲಿನಲ್ಲಿ ಒಟ್ಟು 1.33 ಕೋಟಿ ರೂ. ಉಳಿತಾಯ ಬಜೆಟ್ ಮಂಡಿಸಿದೆ. ನಗರಸಭೆ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜ ಅಧ್ಯಕ್ಷತೆಯಲ್ಲಿ ನಡೆಸಲಾದ ಸಭೆಯಲ್ಲಿ ಪೌರಾಯುಕ್ತ ರಮೇಶ್ ಅವರು ಬಜೆಟ್ ಮಂಡಿಸಿದರು. ಆಸ್ತಿ ತೆರಿಗೆ, ನಗರ ಸಭಾ ಅಂಗಡಿ ಮಳಿಗೆಗಳ ಬಾಡಿಗೆ, ಮಾರುಕಟ್ಟೆ ಹರಾಜು, ಸರಕಾರದ ವಿವಿಧ ನಿಧಿಗಳ ನೆರವು ಸೇರಿದಂತೆ ವಿವಿಧ ಆದಾಯ ಮೂಲಗಳನ್ನು ಉಲ್ಲೇಖಿಸಿ 1 ಕೋಟಿ 33 ಲಕ್ಷದ 88 ಸಾವಿರದ 282 ರೂ.ಗಳ ಬಜೆಟ್ ಅನ್ನು ಇಂದು ಮಂಡಿಸಲಾಯಿತು. *ಚರ್ಚೆಗೆ ಅವಕಾಶ* ಬಜೆಟ್ ಕುರಿತು ಪ್ರತಿಕ್ರಿಯಿಸಿದ ಹಿರಿಯ ಸದಸ್ಯ ಕೆ.ಎಸ್.ರಮೇಶ್ ನಗರ ಸಭೆಯಿಂದ ಉಳಿತಾಯದ ಬಜೆಟ್ ಮಂಡಿಸಿರುವುದನ್ನು ಸ್ವಾಗತಿಸುವುದಾಗಿ ಹೇಳಿದರಲ್ಲದೇ, ಬಜೆಟ್ ಮೇಲಿನ ಚರ್ಚೆ ನಡೆಸಲು ಕನಿಷ್ಟ 15 ದಿನಗಳ ಕಾಲಾವಕಾಶ ನೀಡಬೇಕು ಎಂದು ರಮೇಶ್ ಇದೇ ಸಂದರ್ಭ ಆಡಳಿತಾಧಿಕಾರಿಗಳ ಬಳಿ ಮನವಿ ಮಾಡಿದರು. ಇದಕ್ಕೆ ಇತರ ಸದಸ್ಯರು ಕೂಡ ಧ್ವನಿಗೂಡಿಸಿದರು. ಮಾರ್ಚ್ 29ರ ಒಳಗೆ…
ಕುಶಾಲನಗರ NEWS DESK ಮಾ.11 : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಗಳ ಮೂಲಕ ಸಮಾಜದ ಮುಖ್ಯ ವಾಹಿನಿಯ ಬಗ್ಗೆ ಅರಿವು ಪಡೆಯುವ ಅವಕಾಶಗಳು ಹೇರಳವಾಗಿದೆ ಎಂದು ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್ ವಿ ಗಂಗಾಧರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಸಮೀಪದ ಚಿಕ್ಕ ಅಳುವಾರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ 2024-25 ರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಿಕ್ಷಣದ ಹೊರತಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅವಕಾಶ ಶಿಬಿರದ ಮೂಲಕ ದೊರಕಲಿದೆ. ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪರಿಸರ ಉಳಿಸುವಲ್ಲಿ ಯುವ ಜನತೆಯ ಪಾತ್ರ ವಿಷಯದ ಮೇಲೆ ಉಪನ್ಯಾಸ ನೀಡಿದ ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್.ಚಂದ್ರಮೋಹನ್, ಪರಿಸರವನ್ನು ತಮ್ಮ ಅವಿಭಾಜ್ಯ ಅಂಗವೆಂದು ಪರಿಗಣಿಸುವುದು ಪ್ರತಿಯೊಬ್ಬರ ಆಧ್ಯ ಜವಾಬ್ದಾರಿಯಾಗಿದೆ. ಜಲ ಮೂಲಗಳು ಪ್ರಕೃತಿಯನ್ನು ಸಂರಕ್ಷಿಸುವ ಮೂಲಕ ಅದನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ…
ಮಡಿಕೇರಿ ಮಾ.11 NEWS DESK : ಸಾಹಿತ್ಯ, ಜಾನಪದ ಕಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕೊಡಗು ಜಿಲ್ಲೆ ಶ್ರೀಮಂತಿಕೆ ಹೊಂದಿದ್ದು, ಇವುಗಳನ್ನು ದಾಖಲೀಕರಣ ಮಾಡುವಂತಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ನಿವೃತ್ತ ಮುಖ್ಯಸ್ಥರಾದ ಕೋಡಿರ ಲೋಕೇಶ್ ಅವರು ಸಲಹೆ ಮಾಡಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಲೋಚನಾ ಡಾ.ಎಂ.ಜಿ.ನಾಗರಾಜ್ ದಂಪತಿಯವರ ದತ್ತಿ ಇವರ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲೆಯ ಪುರಾತತ್ವ ಜಾನಪದ ಮತ್ತು ಪರಿಸರ ವಿಚಾರಗೋಷ್ಠಿ-ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕೊಡಗು ಜಿಲ್ಲೆ ಬಹುಸಂಸ್ಕೃತಿ ಒಳಗೊಂಡಿದ್ದು, ಕಲೆ, ಸಾಹಿತ್ಯ, ಸಾಂಸ್ಕೃಕ ಕ್ಷೇತ್ರವನ್ನು ಮತ್ತಷ್ಟು ಪಸರಿಸುವಲ್ಲಿ ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರಾಚೀನ ಸಂಸ್ಕೃತಿ, ಕಲೆಗಳನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಕೋಡಿರ ಲೋಕೇಶ್ ಅವರು ಪ್ರತಿಪಾದಿಸಿದರು. ಸಾಹಿತ್ಯ, ಇತಿಹಾಸ, ಜಾನಪದವು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ. ಅವುಗಳನ್ನು ಮುಂದಿನ ಜನಾಂಗಕ್ಕೂ ಕೊಂಡೊಯ್ಯಬೇಕು…
ಮಡಿಕೇರಿ ಮಾ.11 NEWS DESK : ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ವತಿಯಿಂದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ವಾಟರ್ ಫಿಲ್ಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾವೇರಿ ಜೆಸಿಐ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಜೇಸೀ ಜೆ.ಎಫ್.ಪಿ. ಎಸ್.ಎನ್.ರಾಜೇಂದ್ರ ವೈಯಕ್ತಿಕವಾಗಿ ಬಾಲಕಿಯರ ಪ್ರೌಢಶಾಲೆಗೆ ಶಾಲೆಗೆ ಕೊಡುಗೆಯಾಗಿ ನೀಡಿದ ವಾಟರ್ ಫಿಲ್ಟರ್ ಅನ್ನು ಮುಖ್ಯ ಶಿಕ್ಷಕ ಪಿ.ನವೀನ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಸಂಸ್ಥೆಯ ಅಧ್ಯಕ್ಷೆ ತಂಬಂಡ ತೇಜ ದಿನೇಶ್ ಕಾರ್ಯದರ್ಶಿ ಎ.ಸಿ.ಕಾವ್ಯಶ್ರೀ, ಜೇಸೀಗಳಾದ ಎಂ.ಜೆ.ರಜನೀಕಾಂತ್, ಬಿ.ಜಗದೀಶ್, ಶಿಕ್ಷಕರು ಇದ್ದರು.
ಮಡಿಕೇರಿ ಮಾ.11 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 ಪಂದ್ಯಾವಳಿ ಏ.1 ರಿಂದ ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಟಿ-20 ಮಾದರಿಯಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಸೀಸನ್ 1 ರ ಪ್ರಾಂಚೈಸಿಗಳು ಮುಂದುವರೆಯಲಿದ್ದು, ಇವರೊಂದಿಗೆ ಮತ್ತಷ್ಟು ಪ್ರಾಂಚೈಸಿಗಳು ಪಾಲ್ಗೊಳ್ಳಲಿದ್ದಾರೆ. ಕ್ಯಾಶ್ ಬಿಡ್ಡಿಂಗ್ ಮೂಲಕ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಇತ್ತೀಚೆಗೆ ಮೈಸೂರಿನ “ದಿ ರೂಸ್ಟ್” ಹೊಟೇಲ್ ಸಭಾಂಗಣದಲ್ಲಿ ನಡೆಯಿತು. 10 ಪ್ರಾಂಚೈಸಿಗಳು 175 ಆಟಗಾರರ ಆಯ್ಕೆಯಲ್ಲಿ ತೊಡಗಿಸಿಕೊಂಡರು. ಈ ಬಾರಿಯ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯಲ್ಲಿ ರಣಜಿ ಆಟಗಾರರು ಹಾಗೂ ಓಮನ್ ದೇಶಕ್ಕೆ ಆಟವಾಡಿದ ಆಟಗಾರರು ಕೂಡ ಪಾಲ್ಗೊಳ್ಳುತ್ತಿರುವುದು ವಿಶೇಷ. ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಅಧ್ಯಕ್ಷ ಪೊರುಕೊಂಡ ಸುನಿಲ್, ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ಏ.1 ರಿಂದ 15 ದಿನಗಳ ಕಾಲ ಪಂದ್ಯಾವಳಿ…
ಮಡಿಕೇರಿ ಮಾ.11 NEWS DESK : ಕೊಡಗು ವಿವಿ ವಿಲೀನಗೊಳಿಸುವ ಪ್ರಕ್ರಿಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವತಿಯಿಂದ ಸರ್ಕಾರದ ನೀತಿಯನ್ನು ಖಂಡಿಸಿ ಕೊಡಗು ಬಂದ್ ಮಾಡುವುದು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕುಶಾಲನಗರದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ವಿವಿ ರದ್ದುಪಡಿಸಲು ಹೊರಟಿರುವುದು ಪರಿಶಿಷ್ಟ ಜಾತಿ ಮತ್ತು ಪಂಗಡದ ಹಣ ದುರುಪಯೋಗ ಸಿ ಮತ್ತು ಡಿ ಜಾಗವನ್ನು ಅರಣೀಕರಣ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಗಳು ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಜೆಟ್ ನಲ್ಲಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸುತ್ತಿರುವುದು ಈ ಎಲ್ಲ ನೀತಿಗಳ ವಿರುದ್ಧ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಜೆಟ್ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಶ್ವವಿದ್ಯಾಲಯಗಳನ್ನು ವಿಲೀನಗೊಳಿಸುವ ಬಗ್ಗೆ ಹೇಳಿಕೆ ನೀಡಿರುವುದು ನಂತರ ಬೆಂಗಳೂರಿಗೆ ತೆರಳಿದ ನಿಯೋಗಕ್ಕೆ ಉತ್ತರಿಸಿರುವ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಮಡಿಕೇರಿ ಮಾ.11 NEWS DESK : ‘ಇತಿಹಾಸ’ದ ಊರುಗೋಲನ್ನು ಇರಿಸಿಕೊಂಡು ಇಂದಿನ ಪರಿಸ್ಥಿತಿಗಳ ಅವಲೋಕನ ನಡೆಯಬೇಕಾಗಿದೆಯೆಂದು ಖ್ಯಾತ ಸಂಶೋಧಕರು, ಸಾಹಿತಿಗಳಾದ ಡಾ. ಎಂ.ಜಿ. ನಾಗರಾಜ್ ಅನಿಸಿಕೆ ವ್ಯಕ್ತ್ತಪಡಿಸಿದ್ದಾರೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಂಯುಕ್ತಾಶ್ರಯದಲ್ಲಿ, ಸುಲೋಚನಾ ಡಾ.ಎಂ.ಜಿ.ನಾಗರಾಜ್ ದಂಪತಿಗಳ ದತ್ತಿಯ ಸಹಕಾರದಿಂದ ನಗರದ ಎಫ್‍ಎಂಕೆಎಂಸಿ ಕಾಲೇಜು ಸಭಾಂಗಣದಲ್ಲಿ ಆಯೋಜಿತ ‘ಜಿಲ್ಲೆಯ ಪುರಾತತ್ವ ಜಾನಪದ ಮತ್ತು ಪರಿಸರ ವಿಚಾರಗೋಷ್ಠಿ-ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ’ದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ನಾನು ಕನ್ನಡಿಗನಾಗಿದ್ದು, ಕೊಡಗು ಕನ್ನಡದ ಭಾಗವೇ ಆಗಿರುವ ನೆಲೆಗಟ್ಟಿನಲ್ಲಿ, ಇಲ್ಲಿನ ಇತಿಹಾಸ, ಶಾಸನಗಳು, ಅಪರೂಪದ ಸಂಸ್ಕೃತಿಯ ಬಗ್ಗೆ ಅಧ್ಯಯನ ಮತ್ತು ಸಂಶೋಧನಾ ಗ್ರಂಥಗಳನ್ನು ನಾನು ರಚಿಸಿದ್ದೇನೆ. ಅಶೋಕ ಚಕ್ರವರ್ತಿಯ ಕಾಲದ ಅತ್ಯಪರೂಪದ ಶಾಸನಗಳ ಬಗ್ಗೆ ದಶಕಗಳ ಹಿಂದೆ ಸಂಶೋಧನೆಗಳನ್ನು ನಡೆಸಿ ಕೃತಿ ರಚಿಸಿರುವ ಬಗ್ಗೆ ತಿಳಿಸಿದರು. ನಮಗಿದರ ಅರಿವಿಲ್ಲ :: ಕೊಡಗಿನ ವಿಶಿಷ್ಟ ಸಂಸ್ಕೃತಿ, ಇಲ್ಲಿನ ಆಚರಣೆಗಳು…
ವಿರಾಜಪೇಟೆ ಮಾ.11 NEWS DESK : ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು ಎಂದು ಸಮಾಜ ಸೇವಕಿ ಹಾಗೂ ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಮುಖ್ಯಸ್ಥೆ ಪೂಜಾ ಸಜೇಶ್ ಸಲಹೆ ನೀಡಿದರು. ಹೆಗ್ಗಳದಲ್ಲಿ ಏಳು ದಿನಗಳ ಕಾಲ ನಡೆದ ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳು ಆದರ್ಶ ಪುರುಷರತತ್ವ ಸಿದ್ಧಾಂತಗಳನ್ನು ಅನುಸರಿಸಬೇಕು. ನಮ್ಮ ಭವಿಷ್ಯ ದ ಅಭಿವೃದ್ಧಿ ನಮ್ಮಿಂದಲೇ ಆಗಿದೆ. ಪರಸ್ಪರ ಸ್ನೇಹ, ಸಹಕಾರವಿದ್ದಾಗ ಮಾತ್ರ ಸಮಾಜ ಸೇವೆಗೆ ಅರ್ಥ ಬರುತ್ತದೆ. ಸಮಾಜದ ಸೇವೆಯು ಪುಣ್ಯ ಕೆಲಸ ಮಾಡಿದಂತೆ ಎಂದ ಅವರು, ಗುರು ಹಿರಿಯರನ್ನು ಗೌರವಿಸಿ ಎಂದು ಕರೆ ಕೊಟ್ಟರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು, ಗ್ರಾಮದ ಸರ್ವ ಜನರ ಸಹಕಾರದಿಂದ ಶಿಬಿರವು ಯಶಸ್ವಿಯಾಗಿ ನಡೆದಿದೆ. ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತದನ್ನು ಜೀವನದಲ್ಲಿ ಅಳವಡಿಸುವುದರ…






