ವಿರಾಜಪೇಟೆ ಫೆ.8 NEWS DESK : ವಿರಾಜಪೇಟೆ-ಹುಣಸೂರು ಹೆದ್ದಾರಿಯ ಮಂಗಳೂರು ಮಾಳ ಗ್ರಾಮದ ಸೇತುವೆ ಬಳಿ ಅಪರಿಚಿತ ಶವ ಪತ್ತೆಯಾಗಿದೆ. ಮೃತನ ಬಳಿ ಕೆಂಪು ಬಣ್ಣದ ಬ್ಯಾಗ್ ಹಾಗೂ ಹಳದಿ ಚೌಕುಳಿಯ ಹೊಸ ಟವಲ್ ಇದ್ದು, ಕಪ್ಪು ಬಣ್ಣದ ಜೀನ್ಸ್, ತಿಳಿ ನೇರಳೆ ಬಣ್ಣದ ಕಾಟನ್ ಶರ್ಟ್ ಧರಿಸಿದ್ದಾರೆ. ಸಾರ್ವಜನಿಕರ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ವೃತ ವ್ಯಕ್ತಿಯ ಬಗ್ಗೆ ಮಾಹಿತಿ ಉಳ್ಳವರು 9480805056 ಗೆ ಸಂಪರ್ಕಿಸುವಂತೆ ಇನ್ಸ್ ಪೆಕ್ಟರ್ ಮುನಿಸ್ವಾಮಿ ಮನವಿ ಮಾಡಿದ್ದಾರೆ.
ಲೇಖಕ: admin
ಮಡಿಕೇರಿ ಫೆ.8 NEWS DESK : ಕೊಡಗು ಜಿಲ್ಲೆಯಲ್ಲಿ ವಿನೂತ ಕಾರ್ಯಕ್ರಮಗಳೊಂದಿಗೆ ಸಮಾಜ ಸೇವೆ, ಬಡವರಿಗೆ ಸಹಾಯ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನಿಧಿ, ಕ್ರೀಡಾಪಟುಗಳಿಗೆ ನೆರವು ನೀಡುವ ಉದ್ದೇಶದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಅನೂಪ್ ಚಾರಿಟೆಬಲ್ ಟ್ರಸ್ಟ್ ಕೊಡಗು ಇದರ ಲೋಗೋ ಅನಾವರಣ ಕಾರ್ಯಕ್ರಮ ಫೆ.23ರಂದು ವಿರಾಜಪೇಟೆಯಲ್ಲಿ ನಡೆಯಲಿದೆ ಎಂದು ಅನೂಪ್ ಚಾರಿಟೆಬಲ್ ಟ್ರಸ್ಟ್ ಸ್ಥಾಪಕ ಅನೂಪ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಎಲ್ಲರೂ ಜಾತಿ, ಧರ್ಮ ಮತ್ತು ಪಕ್ಷ ಬೇಧ ಮರೆತು ಕೈ ಜೋಡಿಸಬೇಕೆಂದು ಅನೂಪ್ ಕುಮಾರ್ ಸುಂಟ್ಟಿಕೊಪ್ಪ ಮನವಿ ಮಾಡಿದ್ದಾರೆ.
ಮಡಿಕೇರಿ ಫೆ.7 NEWS DESK : ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆಬ್ರವರಿ, 12 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತಲಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಡ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂರವಾಣಿ ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಫೆ.7 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಕಾಯಕ ಶರಣರ ಜಯಂತಿ ಕಾರ್ಯಕ್ರಮವು ಫೆ.10 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಸೋಮವಾರಪೇಟೆ ನಿವೃತ್ತ ಮುಖ್ಯೋಪಾಧ್ಯಾಯರಾದ ಜಲಜಾ ಶೇಖರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಫೆ.7 NEWS DESK : ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ ನೀಡುವ ಯೋಜನೆಗೆ 2024-25ನೇ ಸಾಲಿನಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತ್ವರಿತವಾಗಿ ತಲುಪಿಸುವ ಉದ್ದೇಶದಿಂದ ಅರ್ಹವಿರುವ ನವಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರಿರುವ ನವಕಾನೂನು ಪದವೀಧರರು ಷರತ್ತು ಮತ್ತು ಸೂಚನೆಗಳನ್ವಯ ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ದಾಖಲೆ ಪ್ರತಿಗಳೊಂದಿಗೆ ಸಂಬಂಧಪಟ್ಟ ಹಿರಿಯ ನ್ಯಾಯಾಧೀಶರುಗಳ ಮುಖಾಂತರ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನವಾಗಿದೆ. ಅರ್ಜಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಡಗು-ಮಡಿಕೇರಿ, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಡಗು-ಮಡಿಕೇರಿ(ಕಾರ್ಯ ನಿರ್ವಹಣೆ-ವಿರಾಜಪೇಟೆ), ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಸೋಮವಾರಪೇಟೆ, ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಪೊನ್ನಂಪೇಟೆ ಹಾಗೂ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಕುಶಾಲನಗರ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಈ ಯೋಜನೆಯು 2024-25ನೇ ಸಾಲಿನದ್ದಾಗಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಅರ್ಜಿ…
ಮಡಿಕೇರಿ ಫೆ.7 NEWS DESK : ರಕ್ಷಣಾ ಮಂತ್ರಾಲಯವು ಜಿಲ್ಲಾ ಸೈನಿಕ ಕಚೇರಿಗಳಲ್ಲಿ ಮಾಜಿ ಸೈನಿಕರು ವಿವಿಧ ಸರ್ಕಾರಿ ಸೇವೆ, ಹಾಗೂ ಯೋಜನೆಗಳ ಉಪಲಬ್ದುಗಳನ್ನು ಪಡೆಯಲು ಹಾಗೂ ಪಿಂಚಣಿ ಕುರಿತ ಸ್ಪರ್ಶ ಪೋರ್ಟಲಿನ ಸೇವೆಗಳನ್ನು ಪಡೆಯುವುದಲ್ಲದೇ ನಾಗರಿಕ ಇ ಸೇವೆಗಳಿಗೆ ಕಾಮನ್ ಸರ್ವಿಸ್ ಸೆಂಟರ್‍ಗಳನ್ನು ಸ್ಥಾಪಿಸಲು ಯೋಜಿಸಲಾಗಿದ್ದು, ಈ ರೀತಿಯ ಕಾಮನ್ ಸರ್ವಿಸ್ ಸೆಂಟರ್(ಸಿಎಸ್‍ಸಿ) ಗಳಲ್ಲಿ ಉದ್ಯೋಗಾವಕಾಶಗಳಿದ್ದು, ಆಸಕ್ತ ಮಾಜಿ ಸೈನಿಕರು ಈ ಉದ್ಯೋಗಕ್ಕಾಗಿ ಡಿಜಿಆರ್ ವೆಬ್ ಲಿಂಕ್ https://dgrindia.gov.in/ ರಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
https://www.youtube.com/watch?v=hIo6vPswmGA&authuser=0 ಮಡಿಕೇರಿ ಫೆ.7 NEWS DESK : ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ಕೊಡವಾಮೆ ಬಾಳೋ’ ಕೊಡವರ ಬೃಹತ್ ಪಾದಯಾತ್ರೆ ಜಿಲ್ಲಾ ಕೇಂದ್ರ್ರ ಮಡಿಕೇರಿಯಲ್ಲಿ ಕೊಡವರು ಹಾಗೂ ಕೊಡವ ಭಾಷಿಕರ ‘ಮಹಾಸಂಗಮ’ದೊಂದಿಗೆ ಶಾಂತಿಯುತವಾಗಿ ಸಮಾರೋಪಗೊಂಡಿತು. ಶಾಂತಿಯುತ ಪಾದಯಾತ್ರೆಯ ಮೂಲಕ ಕೊಡವ ಸಮುದಾಯದ ಕೂಗನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮುಟ್ಟಿಸಲಾಯಿತು. ದಕ್ಷಿಣ ಕೊಡಗಿನ ಕುಟ್ಟದಿಂದ ಕಳೆದ ಭಾನುವಾರದಂದು ಆರಂಭಗೊಂಡ ಪಾದಯಾತ್ರೆ ಸತತ ಆರು ದಿನಗಳ ಕಾಲ 84 ಕಿ.ಮೀ. ದೂರವನ್ನು ಕ್ರಮಿಸಿತು. ಇಂದು ಮಡಿಕೇರಿಯ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿಯ ಕೊಡವ ಸಮಾಜದ ಮಂದ್‍ನಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನೆರೆದಿದ್ದ ಕೊಡವ ಸಮುದಾಯದ ಬಾಂಧವರು ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಯನ್ನು ಅಂತಿಮಗೊಳಿಸಿದರು. ::: ಜನಸಾಗರ ::: ಪಾದಯಾತ್ರೆಯ ಕೊನೆಯ ದಿನವಾದ ಶುಕ್ರವಾರ ಬೆಳಗ್ಗೆ ‘ಕೊಡವಾಮೆ ಬಾಳೋ’ ಪಾದಯಾತ್ರೆ ಕಗ್ಗೋಡ್ಲುವಿನ ಶ್ರೀ ಭಗವತಿ ದೇವಸ್ಥಾನದ ಬಳಿಯಿಂದ ಬೆಳಗ್ಗೆ 10.30 ರ ಸುಮಾರಿಗೆ ಆರಂಭಗೊಂಡಿತು. ಸಾಂಪ್ರದಾಯಿಕ ಉಡುಪಿನೊಂದಿಗೆ…
ಮಡಿಕೇರಿ ಫೆ.7 NEWS DESK : ಕತ್ತಲೆಕಾಡು-ಜೇನುಕೊಲ್ಲಿ ಶ್ರೀ ವಿನಾಯಕ ಸೇವಾ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ ಫೆ.9 ರಂದು ನಡೆಯಲಿದೆ. ಸಂಜೆ 4 ಗಂಟೆಗೆ ಟ್ರಸ್ಟ್ ಆವರಣದಲ್ಲಿ ಅಧ್ಯಕ್ಷ ಕೆ.ಕೆ.ಹೊನ್ನಪ್ಪ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಯುವ ಮಹಾಸಭೆಯನ್ನು ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಡಿ.ಎಂ.ಸುಜಾತ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಾರ್ಯಕಾರಿ ಸದಸ್ಯ ಕೆ.ಕೆ.ದಿನೇಶ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಭಾವತಿ ಗ್ರಾ.ಪಂ ಸದಸ್ಯೆ ಪ್ರಭಾವತಿ ಕರ್ಪಸ್ವಾಮಿ, ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ತರಬೇತುದಾರರಾದ ಎಂ.ಕೆ.ಸುಬ್ರಮಣ್ಯ, ಸುರೇಶ್ ಮಾವಟ್ಕರ್, ಟ್ರಸ್ಟ್ ಕಾರ್ಯದರ್ಶಿ ಬ್ರಿಜೇಶ್ ರೈ, ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ.ಯು.ಸುರೇಶ್, ಮಹಿಳಾ ಘಟಕ ಅಧ್ಯಕ್ಷೆ ಪುಷ್ಪ ಜನಾರ್ದನ್, ವಿದ್ಯಾರ್ಥಿ ಘಟಕ ಅಧ್ಯಕ್ಷೆ ಎಂ.ಎಂ.ದೀಕ್ಷಾ ಉಪಸ್ಥಿತರಿರಲಿದ್ದಾರೆಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.
ಬರೇಲಿ ಫೆ.7 NEWS DESK : ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಕ್ವಿಲಾ ಪ್ರದೇಶದಲ್ಲಿ ಗಾಳಿಪಟದ ದಾರ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ ಈ ಸ್ಫೋಟದಲ್ಲಿ ಕಾರ್ಖಾನೆ ಮಾಲೀಕರು ಸಹ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಗಾಳಿಪಟದ ದಾರಗಳಿಗೆ ಲೇಪಿಸಲು ಸಲ್ಫರ್, ಪೊಟ್ಯಾಶ್ ಮತ್ತು ಗಾಜು ಮಿಶ್ರಣ ಮಾಡುವಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಸಂಚಾರ) ತಿಳಿಸಿದ್ದಾರೆ.
https://youtu.be/fClFWQoeASo?si=NtLsMYhmcMFh6zIs ಮಡಿಕೇರಿ ಫೆ.7 NEWS DESK : ಕೊಡವ ಜನಾಂಗ ಹಾಗೂ ಕೊಡವ ಸಂಸ್ಕೃತಿಯ ಸಮಗ್ರ ಅಸ್ತಿತ್ವದ ಮೇಲೆ ನಡೆಯುತ್ತಿರುವ ಜನಾಂಗೀಯ ತಾರತಮ್ಯ, ದಬ್ಬಾಳಿಕೆ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯುವ ಯತ್ನದ ವಿರುದ್ಧ ಪಾದಯಾತ್ರೆ ನಡೆಸಲಾಗಿದೆ ಎಂದು ಅಖಿಲ ಕೊಡವ ಸಮಾಜ ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ತಿಳಿಸಿದೆ. ಸುಳ್ಳು ಇತಿಹಾಸವನ್ನು ಸೃಷ್ಟಿಸಿ ಕೊಡವರ ಅಸ್ತಿತ್ವಕ್ಕೆ ದಕ್ಕೆ ತರುವ ಪ್ರಯತ್ನ ನಡೆದಿದೆ. ದೇಶಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಗಳಿಗೆ ಅಗೌರವ ತೋರಲಾಗಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಮಹಾನ್ ಸೇನಾನಿಗಳನ್ನು ಕೊಡವರು ಎಂಬ ಏಕೈಕ ಕಾರಣಕ್ಕೆ ಅವಹೇಳನ ಮಾಡಲಾಗಿದೆ. ಕೊಡವರನ್ನು ದ್ವೇಷಿಸುವ ಉದ್ದೇಶ ಇದರಲ್ಲಿ ಅಡಗಿದೆ. ದುಷ್ಟಕೂಟ ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ನಿರಂತರವಾಗಿ ಕೊಡವ ಮಹಿಳೆಯರು, ಮಕ್ಕಳ ಅವಹೇಳನ ಮಾಡಲಾಗುತ್ತಿದೆ. ಕೊಡವರ ಸಾಂಪ್ರದಾಯಿಕ ಉಡುಪು ಮತ್ತು ಆಭರಣಗಳನ್ನು ವಿಡಂಬನಾತ್ಮಕವಾಗಿ ದುರ್ಬಳಕೆ ಹಾಗೂ ಉದ್ದೇಶಪೂರ್ವಕವಾಗಿ ಕೊಡವರಿಗೆ ಮತ್ತು ಕೊಡವ ಸಂಸ್ಕೃತಿಗೆ ಅವಮಾನ ಮಾಡಲಾಗುತ್ತಿದೆ. ಕೊಡಗಿನ…






