ಮಡಿಕೇರಿ ಮಾ.11 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನಿಂದ ಸಹಕಾರ ಕ್ಷೇತ್ರದ ವಿವಿಧ ವಲಯಗಳ ಬವಲರ್ಧನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯ ಸಹಕಾರ ಸಂಘಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಎನ್.ಎಂ.ಉಮೇಶ್ ಉತ್ತಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಸಹಕಾರ ಸಂಘಗಳ ನಿರ್ವಹಣೆಗೆ ಅಗತ್ಯವಿರುವ ಕಾಯ್ದೆ-ಕಾನೂನು ಮತ್ತು ಸೈಬರ್ ಭದ್ರತೆ ಕುರಿತು ನಗರದ ಮಯೂರ ವ್ಯಾಲಿ ವ್ಯೂ ಹೊಟೇಲ್‍ನಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಕ್ಷೇತ್ರದೊಂದಿಗೆ ಸಾಮಾಜಿಕ ವಲಯದ ಹಲವು ಸಮಸ್ಯೆಗಳಿಗೂ ಸರ್ಕಾರದ ಮಟ್ಟಿನಲ್ಲಿ ಪರಿಹರಿಸಲು ಸಹ ಪ್ರಯತ್ನಿಸಲಾಗುತ್ತಿರುವ ಯೂನಿಯನ್ ಅಧ್ಯಕ್ಷರ ಕಾರ್ಯ ಶ್ಲಾಘನೀಯ ಎಂದರು. ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆ. ಉತ್ತಮ ಜೀವನಕ್ಕಾಗಿ ಸದಾ ಕಾಲ ನಾವು ಕಲಿಯುತ್ತಿದಲ್ಲಿ…
ಲೇಖಕ: admin
ಮಡಿಕೇರಿ ಮಾ.10 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎಸ್ ಎಸ್ ಎಸ್ ಘಟಕ ಉದ್ಘಾಟಿಸಲಾಯಿತು. ಕಾಲೇಜಿನ ಆಡಿಟೋರಿಯಂ ನಲ್ಲಿ ನಡೆದ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ಲೋಗೋ ಅನಾವಣಗೊಳಿಸುವ ಮೂಲಕ ಉದ್ಘಾಟಿಸಿದರು. ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 1969 ರಲ್ಲಿ ಎನ್ ಎಸ್ ಎಸ್ ಆರಂಭವಾಯಿತು. ಅಂದಿನಿಂದ ಇಂದಿನವರೆಗೆ ರಾಷ್ಟ್ರ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ, ದೇಶದ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯ. ಎನ್ ಎಸ್ ಎಸ್ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದ್ದು, ಅದೆಷ್ಟೋ ನಾಯಕರನ್ನು ರಾಷ್ಟ್ರಕ್ಕೆ ನೀಡಿದೆ. ನನಗಲ್ಲ ನಿನಗೆ ಎನ್ನುವ ಧ್ಯೇಯವನ್ನಿಟ್ಟುಕೊಂಡು ಸಮಾಜವನ್ನು ತಿದ್ದುವುದರೊಂದಿಗೆ, ಯಾವುದೇ ಆಕಾಂಕ್ಷೆಯನ್ನಿಟ್ಟುಕೊಳ್ಳದೆ ಇತರರಿಗಾಗಿ ಬದುಕುವುದನ್ನು ಧಾರೆಯೆರೆಯುವ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರ ಕುರಿತು ಹೆಮ್ಮೆಯೆನಿಸುತ್ತದೆ ಎಂದರು. ಸೂಕ್ಷ್ಮಾಣು ಜೀವ ವಿಜ್ಞಾನ ವಿಭಾಗದ ಸಹಾಯಕ ಪ್ರಾದ್ಯಾಪಕಿ ಡಾ. ಪಿ.ಎ.ಗೀತಾಂಜಲಿ ಮಾತನಾಡಿ ಎನ್ ಎಸ್ ಎಸ್ ನಾನು ಸೇವೆಗೆ ಸಿದ್ದ ಎನ್ನುವುದನ್ನು…
ಮಡಿಕೇರಿ ಮಾ.10 NEWS DESK : ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿದ್ದ ರಾಜ್ಯದ ಆರ್ಥಿಕ ಸ್ಥಿತಿಯನ್ನು ಸರಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 2 ವರ್ಷಗಳನ್ನು ತೆಗೆದುಕೊಂಡಿದ್ದು, ರಾಜ್ಯ ಪ್ರಗತಿಯತ್ತ ಸಾಗುತ್ತಿದೆ. ಆದರೂ ಸರ್ಕಾರದ ವಿರುದ್ಧ ಬಿಜೆಪಿ ಸುಳ್ಳು ಆರೋಪಗಳನ್ನು ಮಾಡಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರೀ ಪ್ರಮಾಣದ ಸಾಲವನ್ನು ಪಡೆದಿರುವುದಾಗಿ ಪ್ರತಿಪಕ್ಷ ಬಿಜೆಪಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಯಮಗಳನ್ನು ಮೀರಿ 350 ಲಕ್ಷ ಕೋಟಿ ರೂ. ಸಾಲವನ್ನು ಮಾಡಲಾಗಿತ್ತು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಬಾರಿ 1.16 ಲಕ್ಷ ಕೋಟಿ ರೂ. ಸಾಲ ಪಡೆಯುವ ಉದ್ದೇಶವನ್ನು ಹೊಂದಿತ್ತು. ಆದರೆ ಪಡೆದದ್ದು 65 ಸಾವಿರ ಕೋಟಿ ರೂ. ಸಾಲ ಮಾತ್ರವೆಂದು ಪ್ರತಿಪಾದಿಸಿದರು. ಬಿಜೆಪಿಯ ಪ್ರಮುಖರಾದ ಆರ್.ಅಶೋಕ್, ಚಲವಾದಿ…
ಮಡಿಕೇರಿ ಮಾ.10 NEWS DESK : ಕೊಡಗಿನ ಪ್ರವಾಸೋದ್ಯಮವನ್ನು ಪರಿಸರ ಸ್ನೇಹಿಯಾಗಿ ಮುನ್ನಡೆಸುವುದು ಮತ್ತು ಸ್ಥಳೀಯ ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸುವ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೂರ್ಗ್ ಹೊಟೇಲ್ಸ್ ಮತ್ತು ರೆಸಾರ್ಟ್ಸ್ ಅಸೋಸಿಯೇಷನ್ ಕಾರ್ಯಯೋಜನೆ ರೂಪಿಸಿದೆ ಎಂದು ಸಂಘಟನೆಯ ಅಧ್ಯಕ್ಷ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಸೋಸಿಯೇಷನ್ 1990ರಿಂದ ಕಾರ್ಯನಿರ್ವಹಿಸುತ್ತಿದ್ದು, ಪ್ರವಾಸೋದ್ಯಮವನ್ನು ಪರಿಸರ ಸ್ನೇಹಿಯಾಗಿ ಬೆಳೆಸಲು ಮುಂದಾಗಿದೆ. ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಕಾರದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಮಡಿಕೇರಿ ನಗರಸಭೆ ‘ಪ್ಲಾಸ್ಟಿಕ್ ಮುಕ್ತ ನಗರ’ ಚಿಂತನೆಯಡಿ ಯೋಜನೆಗಳನ್ನು ರೂಪಿಸುತ್ತಿದ್ದು, ಇದಕ್ಕೆ ಸಂಘಟನೆ ಸಹಕರಿಸಲಿದೆ. ಇಡೀ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡುವ ಹಾಗೂ ಪ್ಲಾಸ್ಟಿಕ್‍ಗೆ ಬದಲು ಪರ್ಯಾಯ ವ್ಯವಸ್ಥೆಗಳನ್ನು ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಸರ್ಕಾರ ಮತ್ತು ಪ್ರತಿಷ್ಠಿತ ಸಂಸ್ಥೆಗಳ ಸಹಕಾರದೊಂದಿಗೆ ‘ಪ್ರೈವೇಟ್ ಪಬ್ಲಿಕ್ ಪ್ರೋಗ್ರಾಂ’ನಡಿ ಜಿಲ್ಲೆಯ ಪ್ರವಾಸಿತಾಣಗಳನ್ನು ಅಭಿವೃದ್ಧಿಪಡಿಸುವ ಮತ್ತು ಹೊಸ ಪ್ರವಾಸಿ ಕೇಂದ್ರಗಳನ್ನು ಗುರುತಿಸುವ ಕಾರ್ಯ ನಡೆಯಲಿದೆ ಎಂದು ತಿಳಿಸಿದರು. ಅಸೋಸಿಯೇಷನ್…
ಮಡಿಕೇರಿ ಮಾ.10 NEWS DESK : ಕೊಡಗು ಗೌಡ ಯುವ ವೇದಿಕೆ ಆಯೋಜಿಸುತ್ತಿರುವ GPL ಸೀಸನ್ 3 ಒಕ್ಕಲಿಗರ ಲೆದರ್ ಬಾಲ್ ಕ್ರೀಡಾಕೂಟಕ್ಕೆ ಆಟಗಾರರ ಹರಾಜು ಪ್ರಕ್ರಿಯೆ ಗೌಡ ಸಮಾಜದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೊಡಗು ಗೌಡ ಸಮಾಜ ಮಡಿಕೇರಿಯ ಕಾರ್ಯದರ್ಶಿ ಕೋಳುಮುಡಿಯನ ಅನಂತಕುಮಾರ್ ಉದ್ಘಾಟಿಸಿ ಶುಭಹಾರೈಸಿದರು. ಕೊಡಗು ಜಿಲ್ಲಾ ಒಕ್ಕಲಿಗ ಯುವ ವೇದಿಕೆಯ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ, ಎಒಎಲ್ಇ ಯ ಜನರಲ್ ಸೆಕ್ರೆಟರಿ ಕುರುಂಜಿ ಅಕ್ಷಯ್ ಚಿದಾನಂದ ಭಾಗವಹಿಸಿ ಕ್ರೀಡಾಕೂಟದ ಯಶಸ್ಸಿಗೆ ಹಾರೈಸಿ ಯುವ ವೇದಿಕೆಯ ಕಾರ್ಯವನ್ನು ಶ್ಲಾಘಿಸಿದರು. ಮಡಿಕೇರಿಯ ಯುವ ವಕೀಲರಾದ ಕೊಟ್ಟಕೇರಿಯನ ಶ್ರೀಜಾ ದಯಾನಂದ್ ಗಂಟೆ ಬಾರಿಸುವ ಮೂಲಕ ಬಿಡ್ಡಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದರು. ಯುವ ವೇದಿಕೆಯ ಅಧ್ಯಕ್ಷರಾದ ಪಾಣತ್ತಲೆ ಜಗದೀಶ್ ಮಂದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನವೀನ್ ದೇರಳ ಸ್ವಾಗತಿಸಿದರು. ಪರಿಚನ ಸತೀಶ್ ವಂದಿಸಿದರು. ಈ ಬಾರಿ 10 ಫ್ರಾಂಚೈಸಿಗಳು, 180 ಆಟಗಾರರನ್ನು ಹರಾಜು…
ವಿರಾಜಪೇಟೆ ಮಾ.10 NEWS DESK : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೊಡವ ಕೂಟಾಳಿಯಡ ಕೂಟದಿಂದ ಬಾಸ್ಕೆಟ್ ಬಾಲ್ ಆಟಗಾರ್ತಿ ತಾತಂಡ ಜ್ಯೋತಿ ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆ ಜೂನಿಯರ್ ಕಾಲೇಜ್ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುವ ಜೊತೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಾಸ್ಕೆಟ್ ಬಾಲ್ ಆಟಗಾರ್ತಿಯಾಗಿಯೂ ಗುರುತಿಸಿ ಕೊಂಡಿರುವ ತಾತಂಡ ಜ್ಯೋತಿ ಪ್ರಕಾಶ್ ಅವರ ಸಾಧನೆಯನ್ನು ಪರಿಗಣಿಸಿ ಕೊಡವ ಕೂಟಾಳಿಯಡ ಕೂಟದ ಸದಸ್ಯರು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜ್ಯೋತಿ ಪ್ರಕಾಶ್, ಇದಕ್ಕಿಂತಲೂ ಮೊದಲು ನಾನು ಸನ್ಮಾನಗೊಂಡಿದ್ದರೂ ಕೂಡ ಇದು ನನಗೆ ವಿಶೇಷ ಸನ್ಮಾನವಾಗಿರುತದೆ. ಕೊಡವಾಮೆಯನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿರುವ ನೀವು ಯಾರಿಂದಲೂ ಏನನ್ನೂ ನಿರೀಕ್ಷಿಸದೆ ಎಲೆ ಮರೆಯ ಕಾಯಿಯಂತೆ ಇರುವವರನ್ನು ಹುಡುಕಿ ಅವರ ಮನೆ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನ ಮಾಡುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭ ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್…
ಮಡಿಕೇರಿ ಮಾ.10 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಾಗೂ ಸುಲೋಚನಾ ಡಾ. ಎಂ.ಜಿ.ನಾಗರಾಜ್ ದಂಪತಿ ದತ್ತಿ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಸಾಹಿತ್ಯ, ಕಲೆ, ಜಾನಪದ, ಪರಿಸರ ಮತ್ತು ಪುರಾತತ್ವ ಕುರಿತ ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾ.11 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಮಡಿಕೇರಿಯ ಎಫ್.ಎಂ.ಸಿ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ವಿಭಾಗದ ಮಾಜಿ ಮುಖ್ಯಸ್ಥ ಡಾ.ಕೋಡಿರ ಲೋಕೇಶ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿರಾಜಪೇಟೆಯ ಸಂತ ಅನಮ್ಮ ಪದವಿ ಕಾಲೇಜಿನ ಉಪನ್ಯಾಸಕರಾದ ಪ್ರತಿಮಾ ರೈ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ, ಖ್ಯಾತ…
ಬೆಂಗಳೂರು ಮಾ.10 NEWS DESK : ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಪತ್ರ ಮತ್ತು 10 ಲಕ್ಷದ ಚೆಕ್ ನೀಡಿ, ಗೌರವಿಸಿದರು. ವಿಶ್ವ ವಿಖ್ಯಾತ ಕವಿ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾದುಕೋಕಿಲ, ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಉಪಸ್ಥಿತರಿದ್ದರು.
ಮಡಿಕೇರಿ ಮಾ.10 NEWS DESK : ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಬೇಕೆಂದು ಒತ್ತಾಯಿಸಿ ಕೊಡಗು ವಿವಿ ಹಿತರಕ್ಷಣಾ ಬಳಗ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿತು. ಉಪ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ವಿವಿ ಕುರಿತು ಸಮಾಲೋಚನೆ ನಡೆಸಿದ ನಿಯೋಗ ಕೊಡಗಿನ ಏಕೈಕ ವಿಶ್ವವಿದ್ಯಾನಿಲಯವನ್ನು ಉಳಿಸುವಂತೆ ಕೋರಿ ಮನವಿ ಸಲ್ಲಿಸಿದರು. ನಂತರ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ನಿಯೋಗ ಕೊಡಗು ವಿವಿಯನ್ನು ರದ್ದುಗೊಳಿಸದಂತೆ ಕೋರಿತು. ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು, ಕೊಡಗು ವಿವಿಯನ್ನು ಉಳಿಸುವ ವಿಶ್ವಾಸವಿದೆ ಎಂದು ನಿಯೋಗ ತಿಳಿಸಿದೆ. ಶಾಸಕ ಡಾ.ಮಂತರ್…
ವಿರಾಜಪೇಟೆ ಮಾ.10 NEWS DESK : ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದ ಕುಂದ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವೀಣಾ ಹಾಗೂ ರಮ್ಯಾ ಅವರು ತೀವ್ರ ತೊಂದರೆಗೆ ಒಳಗಾದ ಸಂದರ್ಭ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ವೈಯುಕ್ತಿಕ ಸಹಾಯ ಹಸ್ತ ಚಾಚಿದರು. ಬಾಡಿಗೆ ಮನೆಯ ಮಾಲೀಕರಿಗೆ ನೆರವಾಗುವ ಉದ್ದೇಶದಿಂದ ಶಾಸಕರ ಸೂಚನೆ ಮೇರೆಗೆ ಅವರ ಜೇಷ್ಠ ಸಹೋದರ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರೀರ ನವೀನ್ ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಅಲಿರಾ ರಶೀದ್ ಅವರು ಶಾಸಕರಿಗೆ ವೈಯುಕ್ತಿಕ ಸಹಾಯ ಹಸ್ತ ಹಸ್ತಾಂತರಿಸುವ ಮೂಲಕ, ಮನೆಯವರಿಗೆ ಉಪಯೋಗವಾಗಲಿ ಎಂದು ಸಂಪೂರ್ಣ ಮನೆಯ ಮೇಲ್ಚಾವಣಿಯ ದುರಸ್ತಿಗೆ ಅಗತ್ಯವಿರುವ ಟಾಟಾ ಶೀಟ್‍ಗಳನ್ನು ಒದಗಿಸಿದರು.






