ಲೇಖಕ: admin

ಸೋಮವಾರಪೇಟೆ ಮಾ.26 NEWS DESK : ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪ್ರಥಮ ವರ್ಷದ ವಾರ್ಷಿಕ ಮಹಾಸಭೆ ಸೋಮವಾರಪೇಟೆ ಸಂಕಪ್ಪ ಸಭಾಂಗಣದಲ್ಲಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹೋರಾಟ ಸಮಿತಿಯನ್ನು ರಚಿಸಲಾಗಿದ್ದು, ಶಾಸಕಾಂಗ ಮತ್ತು ಕಾರ್ಯಾಂಗದ ಮೂಲಕ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು. ಈಗಾಗಲೇ ಗ್ರಾಮೀಣ ಭಾಗಗಳಿಗೆ ಬಸ್ ಸೇವೆ, ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳ ನಿವಾರಣೆ, ನೂತನ ಹೋಬಳಿ ಕಚೇರಿಗಳ ಸ್ಥಾಪನೆ, ರಸ್ತೆಗಳ ಅಭಿವೃದ್ಧಿ, ಮೂಲಭೂತ ಸೌಕರ್ಯ, ಜಾಗದ ದಾಖಲಾತಿ ಸಮಸ್ಯೆ, ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಇಲಾಖೆ, ಶಾಸಕರು, ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಸಮಿತಿಯ ಕೆಲವೊಂದು ಬೇಡಿಕೆಗಳಿಗೆ ಸ್ಪಂದನೆ ಲಭಿಸಿದ್ದು, ಉಳಿದ ಬೇಡಿಕೆಗಳ ಈಡೇರಿಕೆಗಾಗಿ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದರು. ಸಂಘದ ಆಡಳಿತ ಮಂಡಳಿ ವರದಿಯನ್ನು ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಲೆಕ್ಕಪತ್ರವನ್ನು ಖಜಾಂಚಿ ತ್ರಿಶೂಲ್ ಕಾರ್ಯಪ್ಪ ಮಂಡಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಕೆ.ಎನ್.…

Read More

ಮಡಿಕೇರಿ ಮಾ.26 NEWS DESK : ನಗರದ ವಿವಿಧ ಬಡಾವಣೆಗಳ ಸಹಿತ ಒಟ್ಟು 75 ತಡೆಗೋಡೆಗಳ ನಿರ್ಮಾಣಕ್ಕೆ ಅಂಗೀಕಾರ ನೀಡಲಾಗಿದೆ. ಇದಕ್ಕೆ 13 ಕೋಟಿ ರೂ. ಅನುದಾನ ಬೇಕಿದ್ದು, ಈ ಕುರಿತು ನಗರಸಭೆ ಮೂಲಕ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಸಭಾ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಮಡಿಕೇರಿ ನಗರ ಸಭೆ ಕೆಲವು ದಿನಗಳ ಹಿಂದೆ 2025-26ನೇ ಸಾಲಿನ ಉಳಿತಾಯ ಬಜೆಟ್ ಮಂಡಿಸಿದ್ದು, ಈ ಕುರಿತು ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಸಭೆಯ ಪ್ರಾರಂಭದಲ್ಲಿ ಮಾತನಾಡಿದ ನಗರ ಸಭೆ ಸದಸ್ಯ ಮನ್ಸೂರ್, ನಗರದ ವಿವಿಧ ಕಡೆಗಳಲ್ಲಿ ತಡೆಗೋಡೆಗಳ ನಿರ್ಮಾಣಕ್ಕೆ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಜಿಲ್ಲಾಧಿಕಾರಿಗಳನ್ನು ಕೋರಿದರು. ಇದಕ್ಕೆ ಪ್ರತಿಕ್ರಿಯಸಿದ ನಗರ ಸಭೆ ಆಡಳಿತಾಧಿಕಾರಿ ವೆಂಕಟ್ ರಾಜಾ, ಈಗಾಗಲೇ 75 ಕಡೆಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದಕ್ಕೆ ಎನ್‍ಡಿಆರ್ ಎಫ್ ನಿಧಿಯಿಂದ ಅನುದಾನ ಲಭಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಕ್ಕೆ…

Read More

ಮಡಿಕೇರಿ ಮಾ.26 NEWS DESK : ಹೆಬ್ಬಾಲೆ ಗ್ರಾ.ಪಂ ವ್ಯಾಪ್ತಿಯ ಕಣಿವೆ ಕಾವೇರಿ ನದಿ ತೀರದ ದಂಡೆಯಲ್ಲಿರುವ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ವಾರ್ಷಿಕ ಬ್ರಹ್ಮ ರಥೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಏ.6 ರಂದು ನಡೆಯಲಿದೆ. ಏ. 6.ರಂದು ಮಧ್ಯಾಹ್ನ 1.30 ರಿಂದ 2.18ರ ಶುಭ ಅಭಿಜಿನ್ ಮುಹೂರ್ತದಲ್ಲಿ ವೇದ ಬ್ರಹ್ಮ ನರಹರಿಶರ್ಮಾ ನೇತೃತ್ವದಲ್ಲಿ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನಡೆಯಲಿವೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್ ತಿಳಿಸಿದ್ದಾರೆ. ರಥೋತ್ಸವದ ಅಂಗವಾಗಿ ಏ.4 ರಿಂದಲೇ ದೇವಾನಾಂದಿ, ಅಂಕುರಾರ್ಪಣ, ರಕ್ಷಾಬಂಧನ, ಧ್ವಜಾರೋಹಣ, ನವಗ್ರಹ ಸ್ಧಾಪನೆ, 5 ರಂದು ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಗಣಪತಿ ಹೋಮ, ಸಂಜೆ ಕೂಡಿಗೆ ಮತ್ತು ಶಿರಂಗಾಲ ಗ್ರಾಮಸ್ಥರಿಂದ ಸಂಧ್ಯಾಪೂಜೆ ಮತ್ತು ಸಂಜೆ 7 ಗಂಟೆಗೆ ಸೀತಾ ಕಲ್ಯಾಣೋತ್ಸವ ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ದೇವಾಲಯದ ಆವರಣದಲ್ಲಿ ನಡೆಯಲಿವೆ ಎಂದು ಅಧ್ಯಕ್ಷ ಕೆ.ಎನ್.ಸುರೇಶ್ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.26 NEWS DESK : ಕೊಡಗು ವಿಶ್ವವಿದ್ಯಾನಿಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮಹಾವಿದ್ಯಾಲಯದ ಅಮೃತ ಮಹೋತ್ಸವ ಪ್ರಯುಕ್ತ ಕನ್ನಡದಲ್ಲಿ 5ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನದ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತು ಮೂರು ದಿನದ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಚಾಲನೆ ನೀಡಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಮಾನವನ ಬದುಕಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲ್ಲದೆ ಊಹಿಸಿಕೊಳ್ಳುವುದು ಕಷ್ಟಸಾಧ್ಯ ಎಂದು ಹೇಳಿದರು. ಸರ್ವರಿಗೂ ವಿಜ್ಞಾನ, ಸುಲಭ ವಿಜ್ಞಾನ, ಸುಸ್ಥಿರ ಅಭಿವೃದ್ದಿಗಾಗಿ ವಿಜ್ಞಾನ ಎಂಬ ಆಶಯದೊಂದಿಗೆ ನಾಡಿನಾದ್ಯಂತ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಜ್ಞಾನವನ್ನು ಜನಪ್ರಿಯಗೊಳಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಭೂಮೇಲ್ಮೈ ವಾತಾವರಣ (ಮಳೆ, ಬಿಸಿಲು, ಚಳಿ ಸೇರಿದಂತೆ )ಪ್ರಾಕೃತಿಕವಾಗಿ…

Read More

ಸಿದ್ದಾಪುರ ಮಾ.26 NEWS DESK :  ವಿವಿಧ ಆರೋಗ್ಯ ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದು,  ಅನಾರೋಗ್ಯ ಕೋಳಗಾದವರಿಗೆ ಉಚಿತ ವೈದ್ಯಕೀಯ ಚಿಕಿತ್ಸೆಯೊಂದಿಗೆ ಹಾರೈಕೆ ಮಾಡಿ ಆರೋಗ್ಯ  ಕಾಳಜಿಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ  ಆಲ್ ಇಂಡಿಯಾ ಕೆ ಎಂ ಸಿ ಸಿ ಸಂಘಟನೆಯ ಸೇವ ಕಾರ್ಯದ ಬಗ್ಗೆ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು. ವಿರಾಜಪೇಟೆ ಆರ್ಜಿ ಗ್ರಾಮದ  ಆಶೀರ್ವಾದ ಟರ್ಫ್  ಗ್ರೌಂಡ್ ನಲ್ಲಿ ಕೆಎಂಸಿಸಿ ಸಂಘಟನೆ ವತಿಯಿಂದ  ಆಯೋಜಿಸಲಾಗಿದ್ದ ಇಫ್ತಾರ್  ಕೂಟದಲ್ಲಿ  ಜಿಲ್ಲಾ ಎಸ್.ಕೆ.ಎಸ್.ಎಫ್ ಸಂಘಟನೆ ಅಧ್ಯಕ್ಷ ಶುಹೈಬ್ ಫೈಝಿ ಮಾತನಾಡಿ, ಮನುಷ್ಯ  ಬದುಕಿ ಬಾಳಿದ ದಿನಗಳ ನಂತರ ತೀವ್ರ ಆರೋಗ್ಯ ಸಮಸ್ಯೆಯಿಂದ ಅಂಗ ವೈಕಲ್ಯ ಸೇರಿದಂತೆ  ಹಲವು  ಮಾರಣಾಂತಿಕ ಕಾಯಿಲೆಗಳಿಗೆ ಒಳಪಟ್ಟು ಜೀವನ್ಮರಣ ಸ್ಥಿತಿಯಲ್ಲಿ  ಸುಧರಿಸಿಕೊಳ್ಳಲು ಸಾಧ್ಯವಾಗದಂತಹ  ಸಂದರ್ಭದಲ್ಲಿ ಅನಾರೋಗ್ಯಕೊಳ್ಳಗಾದ ಸಾವಿರಾರು  ಮಂದಿಗೆ ಸಂಪೂರ್ಣ ಉಚಿತ  ಚಿಕಿತ್ಸೆಯನ್ನು   ನೀಡುವ ಮೂಲಕ ಅವರ ಮನೆ ಬಾಗಿಲಿಗೆ ತೆರಳಿ ಆರೈಕೆಯೊಂದಿಗೆ ಮಾನವೀಯ ಸೇವೆಯನ್ನು ನೀಡುತ್ತಿರುವ  ಕೆಎಂಸಿಸಿ ಸಂಘಟನೆಯ  ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಜಾತಿ ಮತ ಭೇದವಿಲ್ಲದೆ …

Read More

ಸಿದ್ದಾಪುರ ಮಾ.26 NEWS DESK : ವಿರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು  ಮುಂದಾಗಿರುವ ಕ್ರಮವನ್ನು ಖಂಡಿಸಿ  ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ  ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು. ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಕಸ ವಿಲೇವಾರಿಗೆ  ಗುರುತಿಸಿರುವ ಜಾಗದ ಸುತ್ತಮುತ್ತಲಿನಲ್ಲಿ ದಲಿತರು, ಬುಡಕಟ್ಟು ಸಮುದಾಯದವರು ಸೇರಿದಂತೆ  ಹಲವು ಕುಟುಂಬಗಳು ವಾಸವಾಗಿದ್ದು, ಜನ ವಸತಿ ಪ್ರದೇಶವಾಗಿದೆ. ಸಮೀಪದಲ್ಲಿ ಅರಣ್ಯ ಪ್ರದೇಶವಿದ್ದು  ತೋಡು ನೀರಿನ ಮೂಲಕ  ಲಕ್ಷ್ಮಣತೀರ್ಥ ನದಿ ಸೇರುತಿದೆ. ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು  ನಡೆದಾಡುವ ರಸ್ತೆಯು ಆಗಿದ್ದು  ತ್ಯಾಜ್ಯ ವಿಲೇವಾರಿಗೆ ಮುಂದಾದಲ್ಲಿ  ಪರಿಸರ ನೀರು ಹಾಳಾಗುವುದರೊಂದಿಗೆ ಸ್ಥಳೀಯ ನಿವಾಸಿಗಳು  ಸಾಂಕ್ರಾಮಿಕ ರೋಗಗಳೊಂದಿಗೆ ಮೂಗು ಮುಚ್ಚಿ ಜೀವನ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮಳೆಗಾಲ ಸಂದರ್ಭದಲ್ಲಿ  ತೋಡಿನ ಮೂಲಕ ನೀರು ತುಂಬುವ ಪ್ರದೇಶವಾಗಿದ್ದು  ತ್ಯಾಜ್ಯ ವಿಲೇವಾರಿ ಮಾಡಿದ್ದಲ್ಲಿ  ನೀರು ಮಲಿನದೊಂದಿಗೆ  ಲಕ್ಷ್ಮಣ ತೀರ್ಥ ನದಿ ಸೇರಲಿದೆ. ಪ್ರಾಣಿಗಳು ಜಾನುವಾರಗಳು ತೋಡು…

Read More

ಮಡಿಕೇರಿ ಮಾ.25 NEWS DESK : ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಜಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಚಿಯಕಪೂವಂಡ ರಂಜು ತಿಮ್ಮಯ್ಯ(55) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇಂದು ಬೆಳಿಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ರಂಜು ತಿಮ್ಮಯ್ಯ ಅವರು ಗುಂಡು ಹೊಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಮಾ.25 NEWS DESK : ಮರದಿಂದ ಬಿದ್ದು ಅಸ್ಸಾಂ ಮೂಲದ ಕಾರ್ಮಿಕ ಸಾವನಪ್ಪಿರುವ ಘಟನೆ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ವಾಜಿದ್ ಅಲಿ(28) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಎಮ್ಮೆಮಾಡು ಕೂರುಳಿ ಗ್ರಾಮದಲ್ಲಿ ವಾಸವಾಗಿದ್ದ ವಾಜಿದ್ ನೆಲಜಿ ಗ್ರಾಮದ ತೋಟವೊಂದರಲ್ಲಿ ಮರ ಕಪಾತು ಮಾಡುತ್ತಿದ್ದಾಗ ಕೆಳಗೆ ಬಿದ್ದಿದ್ದಾರೆ. ತಕ್ಷಣ ತೋಟದ ಮಾಲೀಕರು ಹಾಗೂ ಸಹೋದ್ಯೋಗಿಗಳು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದರಾದರು ಅಷ್ಟರಲ್ಲೆ ವಾಜಿದ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ನಾಪೋಕ್ಲು ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಮಾ.25 NEWS DESK : ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿಯ ಮಧುಕೃಪದ ಆವರಣದಲ್ಲಿ “ಬಾಲಗೋಕುಲ” ಮಡಿಕೇರಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಮಾ.31 ರಿಂದ ಏ.9 ರ ವರೆಗೆ ಮಕ್ಕಳಿಗಾಗಿ “ವಸಂತ ಶಿಬಿರ – 2025” ಹೆಸರಿನಲ್ಲಿ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ನಡೆದ ಈ ಶಿಬಿರವು ಮಕ್ಕಳಿಗೆ ಬಹಳ ಉಪಯುಕ್ತವಾಗಿದ್ದು, ಮಕ್ಕಳು ತುಂಬಾ ಉತ್ಸಾಹದಿಂದ ಭಾಗವಹಿಸುವಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವವರು ನೊಂದಣಿಗಾಗಿ ಬಾಲಗೋಕುಲ ಮಡಿಕೇರಿ: 9448541328 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಮಾ.25 NEWS DESK : ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ ರೂ.10 ಸಾವಿರ ಗೌರವಧನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಆಶಾಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ರಾಜ್ಯ ಉಪಾಧ್ಯಕ್ಷೆ ಉಮಾದೇವಿ ಮಾತನಾಡಿ, ರೂ.15,000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ಬೆಂಗಳೂರಿನ ಫ್ರಿಡಂ ಪಾರ್ಕ್‍ನಲ್ಲಿ ನಡೆಸಿದ ಹೋರಾಟದಲ್ಲಿ ರಾಜ್ಯದ 40,000 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜನವರಿ 10 ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಯ ಉನ್ನತ ಅಧಿಕಾರಿಗಳು, ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆಯಂತೆ…

Read More