ಕುಶಾಲನಗರ ಫೆ.6 NEWS DESK : ಕುಶಾಲನಗರ ಪಟ್ಟಣ ಹೃದಯ ಭಾಗದಲ್ಲಿ ನೆಲೆ ಕಂಡಿರುವ ಐತಿಹಾಸಿಕ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಹಿನ್ನಲೆಯಲ್ಲಿ ಭೂಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಫೆ.9 ಮತ್ತು 10 ರಂದು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎಂ.ಕೆ.ದಿನೇಶ್ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 6 ಕೋಟಿ ವೆಚ್ಚದಲ್ಲಿ ದೇವಾಲಯ ನವೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ಹಿನ್ನಲೆಯಲ್ಲಿ ಫೆ. 9 ರಂದು ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ, ಋತ್ವಿಕ್ ವರಣ,12 ಕಾಯಿ ಗಣ ಹೋಮ, ಮುಷ್ಠಿ ಕಾಣಿಕೆ ಸಮರ್ಪಣೆ, ನಂತರದಲ್ಲಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ರಾತ್ರಿ ಪ್ರೇತಾ ಆಕರ್ಷಣೆ ಉಚ್ಚಾಟನೆ, ಅಘೋರ ಬಲಿ ನಡೆಯಲಿದೆ. ಫೆ. 10 ರಂದು ಶತ ರುದ್ರಾಭಿಷೇಕ ಬೆಳಿಗ್ಗೆ 7 ರಿಂದ 10ವರೆಗೆ, ನವಗ್ರಹ ಸಹಿತ ಭೂವರಾಹ ಸ್ವಾಮಿ ಹೋಮ ಬೆಳಿಗ್ಗೆ 9 ರಿಂದ 11.30ವರೆಗೆ, ಮಧ್ಯಾಹ್ನ…
ಲೇಖಕ: admin
ಮಡಿಕೇರಿ ಫೆ.6 NEWS DESK : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಫೆ.7 ರಿಂದ ಚಿತ್ರದುರ್ಗದಲ್ಲಿ ನಡೆಯಲಿರುವ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಯ ಕವ್ವಾಲಿ ಸ್ಪರ್ಧೆಗೆ ಮಡಿಕೇರಿಯ ಸಂತ ಜೋಸೆಫರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಅಹ್ಮದ್ ಮುಝಮಿಲ್, ಶಾಂವಾಜ್, ಎಂ.ಹೆಚ್.ಮೊಹ್ಮದ್ ಮಿಶಾಲ್, ಎಂ.ಬಿ.ಮೊಹ್ಮದ್ ರಿಯಾನ್ , ಎಂ.ಯು.ರೆಹಾನ್ , ಎಂ.ಎಂ.ಮೊಹ್ಮದ್ ಮುಷೀರ್ ಆಯ್ಕೆಯಾಗಿದ್ದಾರೆ.
ಮಡಿಕೇರಿ NEWS DESK ಫೆ.5 : ಕೊಡಗು ಜಿಲ್ಲೆಯ ಗಡಿ ಗ್ರಾಮ ಪಂಚಾಯ್ತಿ ಕರಿಕೆ ವ್ಯಾಪ್ತಿಯ ಪ್ರದೇಶದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರಿ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಭಾಗಮಂಡಲಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳನ್ನು ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಭೇಟಿಯಾದ ಎನ್.ಬಾಲಚಂದ್ರನ್ ನಾಯರ್ ಅವರು ಕರಿಕೆ ಗ್ರಾಮವು ಕರ್ನಾಟಕ- ಕೇರಳ ರಾಜ್ಯಗಳ ಗಡಿಯಲ್ಲಿದ್ದು, ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಕೋರಿದರು. ಕರಿಕೆ ಗ್ರಾಮ ಜಿಲ್ಲಾ ಕೇಂದ್ರವಾದ ಮಡಿಕೇರಿಯಿಂದ 70ಕಿ.ಮೀ ಮತ್ತು ಹೋಬಳಿ ಕೇಂದ್ರವಾದ ಭಾಗಮಂಡಲದಿಂದ 30 ಕಿ.ಮೀ ದೂರದಲ್ಲಿದೆ. ಸಾರಿಗೆ ಸಂಚಾರ ವ್ಯವಸ್ಥೆಯು ದುಸ್ತರವಾಗಿದೆ. ಗ್ರಾಮದ ಜನಸಂಖ್ಯೆಯ ಶೇಕಡಾ 70 ಭಾಗದಷ್ಟು ಜನರು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಶೇಕಡಾ 95 ರಷ್ಟು ಮಂದಿ ಕೃಷಿ ಕೂಲಿ ಕಾರ್ಮಿಕರು ಹಾಗೂ ಅತೀ ಸಣ್ಣ ರೈತರಾಗಿದ್ದಾರೆ.…
ಮಡಿಕೇರಿ ಫೆ.5 NEWS DESK : ಕೊಡಗಿನ ಕೊಡವರು ಹಾಗೂ ಕೊಡವ ಭಾಷಿಕ ಸಮುದಾಯದ ವಿಶಿಷ್ಟ, ಸಂಸ್ಕೃತಿ ಮತ್ತು ಪರಂಪರೆಗಳ ಸಂರಕ್ಷಣೆಯ ಮುಖ್ಯ ಧ್ಯೇಯದೊಂದಿಗೆ ದಕ್ಷಿಣ ಕೊಡಗಿನ ಕುಟ್ಟದಿಂದ ಆರಂಭಗೊಂಡಿರುವ ‘ಬಾಳೋ ಕೊಡವಾಮೆ’ ಬೃಹತ್ ಪಾದಯಾತ್ರೆ ನಾಲ್ಕನೇ ದಿನವೂ ಭಾರೀ ಜನಸ್ತೋಮದೊಂದಿಗೆ ಮಡಿಕೇರಿ ತಾಲ್ಲೂಕು ಗಡಿ ಬೇತ್ರಿಯನ್ನು ತಲುಪಿತು. ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಇಂದು ಬೆಳಗ್ಗೆ ಬಿಟ್ಟಂಗಾಲದ ಹೆಗ್ಗಡೆ ಸಮಾಜದಿಂದ ಆರಂಭಗೊಂಡಿತು. ಸಹಸ್ರಾರು ಸಂಖ್ಯೆಯ ಸಮುದಾಯ ಬಾಂಧವರು ಸಾಂಪ್ರದಾಯಿಕ ಉಡುಪಿನೊಂದಿಗೆ ಅತ್ಯಂತ ಶಿಸ್ತುಬದ್ಧವಾಗಿ ಜಾಥದಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು. ನಾಲ್ಕನೇ ದಿನದ ಪಾದಯಾತ್ರೆ ಬಿಟ್ಟಂಗಾಲದಿಂದ ತಾಲ್ಲೂಕು ಕೇಂದ್ರ ವಿರಾಜಪೇಟೆ ಮೂಲಕ ಕದನೂರು, ಕಾಕೋಟುಪರಂಬುವನ್ನು ಹಾದು ಸಂಜೆ ಬೇತ್ರಿ ಗ್ರಾಮದಲ್ಲಿ ಕೊನೆಗೊಂಡಿತು. ಬೇತ್ರಿಯ ಕಾವೇರಿ ನದಿಗೆ ಅಡ್ಡಲಾಗಿ ಇರುವ ಸೇತುವೆಯಲ್ಲಿ ದಕ್ಷಿಣ ಕೊಡಗಿನಿಂದ ಆರಂಭಗೊಂಡ ಜಾಥವನ್ನು ಮಡಿಕೇರಿ ತಾಲ್ಲೂಕಿನ ಕೊಡವ ಸಮುದಾಯ ಬಾಂಧವರು ಸ್ವಾಗತಿಸಿದರು. ಪಾದಯಾತ್ರೆಯ ಮೂಲಕ ಕೊಡವ ಸಮುದಾಯ ಬಾಂಧವರು ತಮ್ಮ ಜನಾಂಗದ ಅಸ್ತಿತ್ವ ಮತ್ತು…
ಮಡಿಕೇರಿ ಫೆ.5 NEWS DESK : ಬಿಟ್ಟಂಗಾಲದಲ್ಲಿರುವ ಸಮಾಜದ ಕಟ್ಟಡ ಅಭಿವೃದ್ಧಿಯ ಮುಂದುವರಿದ ಕಾಮಗಾರಿಗೆ ಅನುದಾನ ಕೊರಿ ಕೊಡಗು ಹೆಗ್ಗಡೆ ಸಮಾಜದ ನಿಯೋಗವು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರನ್ನು ಭೇಟಿ ಮಾಡಿತು. ಬೆಂಗಳೂರಿನ ವಿಕಾಸಸೌಧದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಪ್ರಮುಖರು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ, ಉಪಾಧ್ಯಕ್ಷ ಕೊರಕುಟ್ಟಿರ ಸರಚಂಗಪ್ಪ, ನಿರ್ದೇಶಕರಾದ ಕೊರಂಡ ಪ್ರಕಾಶ್ ನಾಣಯ್ಯ, ಪ್ರಮುಖರಾದ ಪಡಿಞರಂಡ ಗಿರೀಶ್, ಕಾಕೇರ ರವಿ ಮತ್ತಿತರ ಪ್ರಮುಖರು ಹಾಜರಿದ್ದರು.
ಮಡಿಕೇರಿ ಫೆ.5 NEWS DESK : ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವಿಗೆ ನ್ಯಾಯ ದೊರಕಿಸುವುದರೊಂದಿಗೆ, ಬುಡಕಟ್ಟು ಮಂದಿಯ ಆರೋಗ್ಯ ರಕ್ಷಣೆಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಔಷಧಿಗಳು ಉಚಿತವಾಗಿ ದೊರಕಿಸಿಕೊಡಬೇಕೆಂದು ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘದ ಸಲಹೆಗಾರ ಎ.ಬಿ.ವಿನಯ ಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಡಕಟ್ಟು ಕಾರ್ಮಿಕರ ಸಂಘ ಹಾಗೂ ಸಾರ್ವತ್ರಿಕ ಆರೋಗ್ಯ ಆಂದೋಲನ ಸಂಘಟನೆಗಳು ಒಗ್ಗೂಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಕ್ಕೆ ಆಗ್ರಹಿಸಿ ಸುಮಾರು ಹನ್ನೊಂದು ಜಿಲ್ಲೆಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ ನಡೆಸುತ್ತಿವೆ. ಬೇಡಿಕೆಗಳ ಮನವಿ ಪತ್ರವನ್ನು ಆಯಾ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಆರೋಗ್ಯ ಸಚಿವರಿಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದರು. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಗುಣಮಟ್ಟದ ಔಷಧಿ ಪೂರೈಸಲು ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಹಿಂದೆಯೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತಾದರು, ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು. ರಾಜ್ಯದಲ್ಲಿ ‘ಆರೋಗ್ಯ ಹಕ್ಕು’…
ಮಡಿಕೇರಿ ಫೆ.5 NEWS DESK : ಜಿಲ್ಲಾ ಕೇಂದ್ರ ಮಡಿಕೇರಿ ನಗರದ ಸುದರ್ಶನ ವೃತ್ತದ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಪಟ್ಟಭದ್ರ ಹಿತಾಸಕ್ತಿಗಳಿಂದ ಮುಕ್ತಗೊಳಿಸಿ, ದಲಿತ ಸಮುದಾಯದ ಬಳಕೆಗೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿ ‘ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ’ಯಿಂದ ಫೆ.10 ರಂದು ಅಂಬೇಡ್ಕರ್ ಭವನದ ಎದುರು ಧರಣಿ ನಡೆಸುವುದಾಗಿ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ವ್ಯಾಪ್ತಿಯ ದಲಿತ ಸಂಘಟನೆ, ಸಾರ್ವಜನಿಕರ ಸಹಕಾರ ಮತ್ತು ಸರ್ಕಾರದ ನೆರವಿನಿಂದ ನಿರ್ಮಿಸಲ್ಪಟ್ಟ ಡಾ.ಬಿ.ಆರ್.ಅಂಬೇಡ್ಕರ್ ಭವನ ಇತ್ತೀಚಿನ ದಿನಗಳಲ್ಲಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಇದರಿಂದ ದಲಿತ ಪರವಾದ ಕಾರ್ಯಕ್ರಮಗಳನ್ನು ಭವನದಲ್ಲಿ ಮುಕ್ತವಾಗಿ ನಡೆಸಲು ಅವಕಾಶಗಳು ದೊರಕುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಿಲ್ಲೆಯ ವಿವಿಧೆಡೆಗಳಲ್ಲಿನ ದಲಿತ ಸಂಘಟನೆಗಳು, ಸಾರ್ವಜನಿಕರು ಅಂದಿನ ದಿನಗಳಲ್ಲಿ ತಮ್ಮ ನೆರವನ್ನು ನೀಡಿದ್ದಾರೆ. ಇಂತಹ ವಿಚಾರವನ್ನು ಪ್ರಸ್ತಾಪಿಸಿದ ನನ್ನ ಮೇಲೆ ಅಂಬೇಡ್ಕರ್ ಭವನ ಸಮಿತಿಯ ಕೆಲವರು ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ಹೇಳಿಕೆಗಳಾಗಿವೆ…
ಮಡಿಕೇರಿ ಫೆ.5 NEWS DESK : ಸರ್ವ ಸಮಸ್ಯೆಗಳಿಗೂ ಶಿಕ್ಷಣವು ಪರಿಹಾರವನ್ನು ನೀಡುತ್ತದೆ. ಆ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ಶ್ರಮವಹಿಸಿ ಉತ್ತಮ ಶಿಕ್ಷಣವನ್ನು ಪಡೆಯಬೇಕು. ಆ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳಾ ಕರೆ ನೀಡಿದರು. ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಈ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದಲ್ಲದೆ, ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವಂತಾಗಬೇಕು ಎಂದು ಶುಭಹಾರೈಸಿದರು. ದಂತ ವೈದ್ಯರಾದ ಬೆಳ್ಯನ ರಾಘವೇಂದ್ರ ಮಾತನಾಡಿ, ನಿರಂತರವಾದ ಅಧ್ಯಯನವು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಅಲ್ಲದೆ ನಾವು ಓದಿದ ಶಿಕ್ಷಣ ಸಂಸ್ಥೆ, ರಾಜ್ಯ ಮತ್ತು ರಾಷ್ಟ್ರಕ್ಕೆ ಉತ್ತಮ ಪ್ರಜೆಯಾಗುವ ಮೂಲಕ ಒಳ್ಳೆಯ ರೀತಿಯಲ್ಲಿ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಹುದೇರಿ ರಾಜೇಂದ್ರ, ಗ್ರಾಮೀಣ…
ಮಡಿಕೇರಿ ಫೆ.5 NEWS DESK : ಸವಿತಾ ಮಹರ್ಷಿಗಳು ಇಡೀ ಪ್ರಪಂಚಕ್ಕೆ ಉತ್ತಮ ಸಂದೇಶಗಳನ್ನು ತಿಳಿಸಿಕೊಟ್ಟ ಅದ್ವಿತೀಯರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಬಣ್ಣಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತಾಡಿದರು. ಒಬ್ಬ ಮನುಷ್ಯನ ಮುಖವನ್ನು ನೋಡಿ ಅವನ ಮನಸ್ಸಲ್ಲಿ ಯಾವ ರೀತಿಯ ಭಾವನೆಗಳಿದೆ ಎಂದು ತಿಳಿದುಕೊಳ್ಳುವುದನ್ನು ಕಾಲ ಕಾಲಗಳಿಂದ ಯುಗ ಯುಗಗಳಿಂದ ಇಡೀ ಸಮಾಜದ ಬಾಹ್ಯ ಸೌಂದರ್ಯದ ಮೂಲಕ ಅವರ ಮನಸ್ಸಿನ ಸೌಂದರ್ಯವನ್ನು ಹೆಚ್ಚಿಸುವ ಕೆಲಸವನ್ನು ಸವಿತಾ ಸಮಾಜದವರು ಮಾಡುತ್ತಾ ಬಂದಿದ್ದಾರೆ. ಅಲ್ಲದೆ ಆಯುರ್ವೇದವನ್ನು ಸಹ ಕುಲಕಸುಭಾಗಿಸಿಕೊಂಡಿದ್ದರು. ಆಗಿನ ಸಮಯದಲ್ಲಿ ಪ್ರತಿಯೊಂದು ಹಳ್ಳಿಹಳ್ಳಿಯಲ್ಲಿ ಆಯುರ್ವೇದ ತಿಳಿದಿದ್ದ ಸವಿತ ಸಮಾಜದವರು ಇದ್ದರು. ಒಬ್ಬ ರಾಜನಾದವರಿಗೆ ಒಂದು ರಾಜ್ಯದಲ್ಲಿ ಮಾತ್ರ ಗೌರವ ಇರುತ್ತದೆ. ಆದರೆ ಒಬ್ಬ ಪಂಡಿತರಿಗೆ ಪ್ರಪಂಚದಾದ್ಯಂತ ಗೌರವವನ್ನು ಕೊಡುತ್ತಾರೆ. ಅದಕ್ಕೆ ಒಂದು ಬಹುದೊಡ್ಡ ಉದಾಹರಣೆ ಎಂದರೆ ಆಯುರ್ವೇದ ಪಾಂಡಿತ್ಯ…
ಪುತ್ತೂರು ಫೆ.5 NEWS DESK : ಕಲಿಕೆ ಒಂದು ನಿರಂತರ ಪ್ರಕ್ರಿಯೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ವಿಷಯಗಳನ್ನು ಕಲಿತುಕೊಂಡು ಅದನ್ನು ವಿದ್ಯಾರ್ಥಿಗಳಿಗೆ ಬೋಧಿಸುವುದು ಪ್ರತಿಯೊಬ್ಬ ಅಧ್ಯಾಪಕನ ಕರ್ತವ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಇಂಡಸ್ಟ್ರಿಯಲ್ ಕೆಮಿಸ್ಟ್ರಿ ವಿಭಾಗದ ಪ್ರೊಫೆಸರ್ ಡಾ.ಸರೋಜಿನಿ.ಬಿ.ಕೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆಯುತ್ತಿರುವ 3 ದಿನಗಳ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸೂಕ್ಶ್ಮ ಸನ್ನಿವೇಶದಲ್ಲಿ ಸಮಾಜದಲ್ಲಿ ಬರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು ಆವಶ್ಯಕವಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನವನ್ನು ನೀಡಿ ವಿದ್ಯೆಯ ಜತೆ ನೈತಿಕ ಶಿಕ್ಷಣವನ್ನೂ ನೀಡಿ ಎಂದರು. ಪ್ರಭಾರ ಪ್ರಾಂಶುಪಾಲ ಡಾ.ಶ್ರೀಕಾಂತ್ ರಾವ್ ಮಾತನಾಡಿ ಜ್ಞಾನವನ್ನರಸಿ ಬರುವ ವಿದ್ಯಾರ್ಥಿಗಳ ಭವಿಷ್ಯವನ್ನು ಪುನರ್ರಚಿಸುವ ಮಹತ್ತರ ಜವಾಬ್ಧಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಯ ಆಸಕ್ತಿಯನ್ನು ಗಮನಿಸಿ ಸರಿಯಾದ ಪಥವನ್ನು ನಿರ್ದೇಶಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ…






