ಲೇಖಕ: admin

ಮಡಿಕೇರಿ ಮಾ.8 NEWS DESK : ಕೇವಲ 27 ವರ್ಷ ಬದುಕಿದ ಕೊಡಗಿನ ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅತ್ಯಾಧೃತ ಮತ್ತು ಅನನ್ಯವಾದದ್ದು ಎಂದು ಮೈಸೂರು ಯುವರಾಜ ಕಾಲೇಜಿನ ಉಪನ್ಯಾಸಕಿ ಎಚ್ ನಿವೇದಿತಾ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮೂರ್ನಾಡು ಪಿಎಂ ಶ್ರೀ ಮಾದರಿ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡುತ್ತಿದ್ದರು. ತಮ್ಮ ಅತಿ ಸಣ್ಣ ಜೀವಿತಾವಧಿಯಲ್ಲಿ ಅವರು 21 ಕಥೆಗಳನ್ನು ಬರೆದರು. ಅದರಲ್ಲಿ ಮಹಿಳಾ ಸ್ವಾತಂತ್ರ್ಯ, ವಿಧವಾ ವಿವಾಹ, ಬಾಲ್ಯ ವಿವಾಹ, ವಿಧವಾ ಸಮಸ್ಯೆಗಳ ಬಗ್ಗೆ ಬರೆದಿದ್ದಾರೆ. ಅವರು ನೇರವಾಗಿ ಸ್ವಾತಂತ್ರ ಹೋರಾಟಕ್ಕೆ ಇಳಿಯದಿದ್ದರೂ ಗಾಂಧೀಜಿಯವರು 1934 ರಲ್ಲಿ ಹರಿಜನೋದ್ಧಾರಕ್ಕಾಗಿ ನಿಧಿ ಸಂಗ್ರಹಿಸಲು ಕರ್ನಾಟಕದಲ್ಲಿ 12 ದಿನಗಳ ಪ್ರವಾಸವನ್ನು ಕೈಗೊಂಡರು. ಫೆಬ್ರವರಿ 22-23, 1934…

Read More

ವಿರಾಜಪೇಟೆ ಮಾ.8 NEWS DESK :   ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಬೆಟೋಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ಮಣಿ ಸಲಹೆ ನೀಡಿದರು.  ಹೆಗ್ಗಳ ಸ.ಹಿ.ಪ್ರಾ ಶಾಲೆಯಲ್ಲಿ ನಡೆಯುತ್ತಿರುವ ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ಶಿಬಿರದ ಸ್ವಯಂ ಸೇವಾ ವಿದ್ಯಾರ್ಥಿಗಳ  ಗ್ರಾಮ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಚ್ಛತೆ ಎಂಬುವುದು ತನ್ನೊಡನೆ ಆರಂಭವಾಗಬೇಕು. ಪರಿಸರ ಸ್ವಚ್ಛವಾಗಿಟ್ಟರೆ ಆರೋಗ್ಯ ಉತ್ತಮವಾಗಿರಲು ಸಾಧ್ಯ. ಎಲ್ಲರೂ ಪ್ಲಾಸ್ಟಿಕ್ ಮುಕ್ತ ಪರಿಸರದ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಸ್ವಚ್ಛತಾ ಜಾಗೃತಿಯಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳ ಪಾತ್ರ ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬೆಟೋಳಿ ಗ್ರಾ.ಪಂ ಅಧ್ಯಕ್ಷ ಅಚ್ಚಪಂಡ ಬೋಪಣ್ಣ, ಪಂಚಾಯತ್ ಸದಸ್ಯರುಗಳಾದ ಅಮ್ಮಣ ಕುಟ್ಟಂಡ ವಸಂತ, ಸುದೀಶ್, ರಜಾಕ್, ಲತಾ, ರಂಜಿತ್, ಎನ್.ಎಸ್.ಎಸ್ ಅಧಿಕಾರಿ ಶಾಂತಿಭೂಷಣ್, ಉಪನ್ಯಾಸಕಿ ವಿಲೀನ ಗೋನ್ಸಾಲ್ವೇಸ್, ಪಂಚಾಯತ್ ಸಿಬ್ಬಂದಿ ದಿನೇಶ್ ಸಾರ್ವಜನಿಕರು, ಎನ್.ಎಸ್.ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹೆಗ್ಗಳ ಗ್ರಾಮದ ಸ.ಹಿ.ಪ್ರಾ ಶಾಲೆಯ  ಮುಂಭಾಗದಿಂದ ಬೆಟೋಳಿ…

Read More

ಮಡಿಕೇರಿ ಮಾ.8 NEWS DESK : ಸ್ಫರ್ಧಾತ್ಮಕ ಯುಗದಲ್ಲಿ ಸಿಗುವ ಅವಕಾಶಗಳನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಐಟಿಐ ಕಾಲೇಜಿನಲ್ಲಿ ನಡೆದ ಉದ್ಯೋಗಮೇಳ-2025 ನ್ನು ಉದ್ಘಾಟಿಸಿ  ಮಾತನಾಡಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ತಿಳಿಸಿ ಮಾತನಾಡಿದ ಶಾಸಕರು ಪ್ರತಿಯೊಬ್ಬರಲ್ಲಿಯೂ ಒಂದು ಬಗೆಯ ಕೌಶಲ್ಯವಿರುತ್ತದೆ. ಅವುಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ಸಿಗುವ ಉದ್ಯೋಗದ ಬಗ್ಗೆ ಗೌರವ ಮತ್ತು ಪ್ರೀತಿಯನ್ನು ಹೊಂದಿರಬೇಕು ಎಂದು ತಿಳಿಸಿದರು. ‌‌‌‌‌ಈ ದಿನದ ಉದ್ಯೋಗ ಮೇಳದಲ್ಲಿ 24 ಕಂಪನಿಗಳು ರಾಜ್ಯದ ವಿವಿಧ ಭಾಗದಿಂದ ಆಗಮಿಸಿದೆ. ಅರ್ಜಿ ಸಲ್ಲಿಸುವ ಎಲ್ಲರಿಗೂ ಉದ್ಯೋಗ ಸಿಗದಿದ್ದರೂ, ಉದ್ಯೋಗಾಕಾಂಕ್ಷಿಗಳು…

Read More

ಪೊನ್ನಂಪೇಟೆ ಮಾ.8 NEWS DESK : ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ  ಪೊನ್ನಂಪೇಟೆ ತಾಲ್ಲೂಕು ನೂತನ ಪದಾಧಿಕಾರಿಗಳನ್ನು  ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನಿರ್ದೇಶನದ ಮೇರಗೆ ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಅಧ್ಯಕ್ಷೆ ಬೊಟ್ಟಂಗಡ ಸುಮನ್ ಸೀತಮ್ಮ ತಿಳಿಸಿದ್ದಾರೆ.  ಉಪಾಧ್ಯಕ್ಷರಾಗಿ ಚಂಗುಲಂಡ ಅಜಿತ್ ಅಯ್ಯಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಆರ್.ನಳಿನಿ, ಜಿಲ್ಲಾ ಸಮಿತಿ ಸದಸ್ಯರಾಗಿ ಮಲ್ಲಂಡ ಶೃತಿಯ ಮುದ್ದಪ್ಪ, ಸದಸ್ಯರುಗಳಾಗಿ, ಕೋಟ್ರಂಗಡ ಸಜಿನಿ ಸೋಮಯ್ಯ, ಪಿ.ಹೆಚ್.ಅಲಿಮಾ, ಕೊಟ್ಟಂಗಡ ವಿದ್ಯಾ ಕಾರ್ಯಪ್ಪ, ನೂರೇರ ಜೀವನ್ ಅಯ್ಯಪ್ಪ ಹಾಗೂ ತಿತೀರ ಸ್ವರಾಜ್ ಕುಟ್ಟಪ್ಪ ಅವರನ್ನು ಜಿಲ್ಲಾ ಸಮಿತಿಯ ಅನುಮೋದನೆಯೊಂದಿಗೆ ನೇಮಿಸಲಾಗಿದೆ ಎಂದು ಸುಮನ್ ಸೀತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಮಾ.8 : ಪ್ರಾಚೀನ ಆರೋಗ್ಯ ಕಲೆಯಾಗಿರುವ ಯೋಗಾಸನದ ಮೂಲಕ ಈಗಾಗಲೇ ವಿಶ್ವ ದಾಖಲೆ ನಿರ್ಮಿಸಿರುವ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ 5ನೇ ತರಗತಿ ವಿದ್ಯಾರ್ಥಿನಿ ಸಿಂಚನ ಕೀರ್ತಿಕುಮಾರ್, ಇದೀಗ ತನ್ನದೇ ದಾಖಲೆಯನ್ನು ಮುರಿಯಲು ಸಿದ್ಧತೆ ಮಾಡಿಕೊಂಡಿದ್ದಾಳೆ. ತಾನು ವ್ಯಾಸಂಗ ಮಾಡುತ್ತಿರುವ ಮದೆನಾಡಿನ ಬಿಜಿಎಸ್ ಶಾಲೆಯಲ್ಲಿ ಮಾ.12ರಂದು ಬೆಳಿಗ್ಗೆ 10 ಗಂಟೆಗೆ ಮೂರು ರೀತಿಯ ಯೋಗ ಪ್ರದರ್ಶನ ಮಾಡುವ ಮೂಲಕ ಸಿಂಚನ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ನಲ್ಲಿ ಮೂರು ದಾಖಲೆಯನ್ನು ನಿರ್ಮಿಸಲಿದ್ದಾಳೆ. ಡಿಂಪಾಸನದಲ್ಲಿ ಒಂದು ನಿಮಿಷಕ್ಕೆ 15 ಮೀಟರ್ ಚಲಿಸುವುದು, ಉರಬ್ರಾಸನದಲ್ಲಿ ಒಂದು ನಿಮಿಷ ಅದೇ ಸ್ಥಿತಿಯಲ್ಲಿರುವುದು ಮತ್ತು ಮೃಗಮುಖಾಸನದಲ್ಲಿ ಕೂಡ ಒಂದು ನಿಮಿಷ ಏಕಸ್ಥಿತಿಯಲ್ಲಿರುವ ಯೋಗಾಸನವನ್ನು ಸಿಂಚನ ಪ್ರದರ್ಶಿಸಲಿದ್ದಾಳೆ. ಅಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಮಧ್ಯಪ್ರದೇಶದ ಅಧಿಕಾರಿಗಳು ಉಪಸ್ಥಿತರಿದ್ದು, ತೀರ್ಪಿನೊಂದಿಗೆ ಅರ್ಹತಾ ಪತ್ರ ನೀಡಲಿದ್ದಾರೆ. ಈ ಹಿಂದೆಯೂ ಡಿಂಪಾಸನದಲ್ಲಿ ಒಂದು ನಿಮಿಷಕ್ಕೆ 10 ಮೀಟರ್ ಚಲಿಸಿ ವಿಶ್ವ ದಾಖಲೆ ಮೆರೆದಿದ್ದ…

Read More

ನಾಪೋಕ್ಲು ಮಾ.8 NEWS DESK : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ ಕನ್ನಡ ವಿಭಾಗದ ವತಿಯಿಂದ ನಡೆದ ಜನಪದೋತ್ಸವವು ಗಮನ ಸೆಳೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಉಪನ್ಯಾಸಕರಾದ ಕೆ.ಹರಣಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜನಪದದ ಮಹತ್ವ ಮತ್ತು ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಲಾಯಿತು. ನಂತರ ಸಾಂಸ್ಕೃತಿಕ ಸಂಚಾಲಕರಾದ ಡಾ.ಸಹನಾ ದಿನೇಶ್ ಹಾಗೂ ಬೋಧಕ ಬೋಧಕೇತರ ವರ್ಗದವರಿಂದ ಆಯೋಜಿಸಿದ ವಿವಿಧ ಜಾನಪದ ನೃತ್ಯ, ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡು ಜನಪದದ ಸಗಡನ್ನು ಸವಿದರು. ಈ ಸಂದರ್ಭ ಪ್ರಾಂಶುಪಾಲರಾದ ಮನೋಜ್ ಕುಮಾರ್ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ 

Read More

ಸುಂಟಿಕೊಪ್ಪ ಮಾ.8 NEWS DESK : ಗ್ರಾಮ ದೇವರ ಸಮಿತಿ ವತಿಯಿಂದ ಗ್ರಾಮ ದೇವರ 6ನೇ ವಾರ್ಷಿಕ ಪೂಜಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಅರ್ಚಕ ಮಂಜುನಾಥ್ ಶರ್ಮಾಬ ಅವರ ನೇತೃತ್ವದಲ್ಲಿ ಬೆಳಿಗ್ಗೆ ಸ್ಥಳ ಶುದ್ಧಿ ಕಲಶ ಪೂಜೆ ನಡೆಯಿತು. ನಂತರ ಗ್ರಾಮ ದೇವತೆಗೆ ಎಳನೀರು, ಹಾಲು, ಕುಂಕುಮ, ಜೇನು, ಗಂಧ, ತುಪ್ಪದ ಅಭಿಷೇಕ ನೆರವೇರಿತು. ಆ ಬಳಿಕ ದೇವರಿಗೆ ವಸ್ತ್ದಲಂಕಾರ ಮತ್ತು ಹೂವಿನ ಅಲಂಕಾರ ಪೂಜೆ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ನಂತರ ಗ್ರಾಮ ದೇವತೆಗೆ ಅರ್ಪಣೆ ನಡೆದು,  ಮದ್ಯಾಹ್ನದ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ ಸಮಿತಿ, ಶ್ರೀ ರಾಮ ಸೇವಾ ಸಮಿತಿ, ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರ ಸಮಿತಿ, ಗೌರಿ ಗಣೇಶೋತ್ಸವ ಸಮಿತಿ, ಮಸಣಿಕಮ್ಮ ದೇವಸ್ಥಾನ ಸಮಿತಿ, ವೃಕ್ಷೋದ್ಭವ ಮಹಾಗಣಪತಿ ದೇವಾಲಯ ಸಮಿತಿ, ಟಿಸಿಎಲ್ ಚಾಮುಂಡೇಶ್ವರಿ ದೇವಸ್ಥಾನ ಸಮಿತಿ, ಶ್ರೀ ದೇವಿಯ ಅಣ್ಣಪ್ಪ ದೇವಸ್ಥಾನ ಸಮಿತಿ, ಬಾಳೆಕಾಡು ಮುತ್ತಪ್ಪ ದೇವಸ್ಥಾನ, ಗದ್ದೆಹಳ್ಳ…

Read More

ಮೈಸೂರು, ಮಾ.8 NEWS DESK : ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನ ಕೆ.ಆರ್‌. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಡ ಹಾಗೂ ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರಿಗೆ ಜನೌಷಧಿ ಕೇಂದ್ರಗಳಿಂದ ಭಾರಿ ಪ್ರಯೋಜನಗಳಾಗಿವೆ. ಜನೌಷಧಿಗಳ ಬಳಕೆ ಮತ್ತು ಉಪಯೋಗಗಳ ಬಗ್ಗೆ ಈಗಾಗಲೇ ಸಾಕಷ್ಟು ಅಭಿಯಾನ ನಡೆಸಲಾಗಿದೆ ಎಂದು ಒಡೆಯರ್‌ ತಿಳಿಸಿದರು. ಜನೌಷಧಿ ಕೇಂದ್ರಗಳು ಆರಂಭವಾದ ನಂತರ ಮಧ್ಯಮ ವರ್ಗದವರ ಮೇಲೆ ಹೆಚ್ಚಿನ ಹೊರೆ ಆಗುತ್ತಿಲ್ಲ. ಈ ಮೊದಲು ಔಷಧಿಗಳಿಗೆ ಹೆಚ್ಚು ವ್ಯಯಿಸುತ್ತಿದ್ದ ಜನರು ಈಗ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳನ್ನು ಖರೀದಿ ಮಾಡುವ ಮೂಲಕ ಸಾಕಷ್ಟು ಹಣ ಉಳಿಸುತ್ತಿದ್ದಾರೆ ಎಂದು ಹೇಳಿದರು. ಕಡಿಮೆ ಬೆಲೆಯಿಂದಾಗಿ ಬಡ ರೋಗಿಗಳಿಗೆ ಜನೌಷಧಿ ಕೇಂದ್ರಗಳು ಅನುಕೂಲವಾಗಿದೆ. ಜನೌಷಧಿ…

Read More

ಮಡಿಕೇರಿ ಮಾ.8 NEWS DESK : ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ಬಂಬುಕಾಡು ಹಾಡಿಗೆ ಗೋಣಿಕೊಪ್ಪ ಸಿಪಿಐ ಶಿವರಾಜ್ ಮುದೋಳ್ ಮತ್ತು ಅಧಿಕಾರಿಗಳು ಭೇಟಿ ನೀಡಿ ಕಾನೂನು ಅರಿವು ಮೂಡಿಸಿದರು.  ಪ್ರತಿ ಮನೆಗೆ ತೆರಳಿ ಸಾರ್ವಜನಿಕರ ಸಭೆ ನಡೆಸಿ ಹಾಡಿಗೆ ಇರುವ ಸರ್ಕಾರದ ಯೋಜನೆಗಳು, 112, ಮದ್ಯಪಾನ, ಮಾದಕ ವಸ್ತುಗಳ ಬಗ್ಗೆ, ಮಹಿಳೆಯರಿಗೆ ಕಾನೂನು ಅರಿವು, ಮಕ್ಕಳಿಗೆ ರಸ್ತೆ ಸುರಕ್ಷತೆ ಮತ್ತು ಜಾಗೃತಿ, ಪೋಕ್ಸೋ ಕಾಯ್ದೆ, ಸೈಬರ್ ಜಾಗೃತಿ, ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

Read More

ಮಡಿಕೇರಿ, ಮಾ.8 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ಪಾಲ್ಗೊಂಡರು. ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು, ಸರ್ಕಾರಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬಾರದು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಸಂಸದ ಯದುವೀರ್‌, ಮಾಜಿ ಸಚಿವರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಮುಖಂಡರು ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಯದುವೀರ್‌, ನನ್ನ ಕ್ಷೇತ್ರ ವ್ಯಾಪ್ತಿಯ ಕೊಡಗು ಜಿಲ್ಲೆಯ ವತಿಯಿಂದ ಜಿಲ್ಲೆಯ ಜನತೆಯ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ನಾವು ವಿರಮಿಸುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ಸಿಗುವವರೆಗೆ ಹೋರಾಟ ನಡೆಸುತ್ತೇವೆ ಎಂದರು. ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದೆ.…

Read More