ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಕೊಡಗಿನ ಮಟ್ಟಿಗೆ ನಿರಾಶಾದಾಯಕವಾಗಿದೆ ಮತ್ತು ಅಲ್ಪಸಂಖ್ಯಾತರನ್ನು ಓಲೈಸಿ ಪರಿಶಿಷ್ಟರನ್ನು ಕಡೆಗಣಿಸಲಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಆರೋಪಿಸಿದ್ದಾರೆ. ಬಜೆಟ್ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು ಕೆಲವು ಆಸ್ಪತ್ರೆಗಳು ಮತ್ತು ರಸ್ತೆಗಳ ಅಭಿವೃದ್ಧಿಯ ಕುರಿತು ಬಜೆಟ್ ನಲ್ಲಿ ಉಲ್ಲೇಖಿಸಲಾಗಿದೆಯೇ ಹೊರತು ಕೊಡಗು ಜಿಲ್ಲೆಗೆ ಬೇರೆ ಯಾವುದೇ ವಿಶೇಷ ಕೊಡುಗೆಯನ್ನು ನೀಡಿಲ್ಲ. ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸುವ ಭರವಸೆ ನೀಡಿಲ್ಲ. ಮಿತಿ ಮೀರಿರುವ ವನ್ಯಜೀವಿಗಳ ದಾಳಿ ತಡೆಗೆ ಯಾವುದೇ ಯೋಜನೆಯನ್ನು ಘೋಷಿಸಿಲ್ಲ. ಕಾಫಿ ಬೆಳೆಗಾರರ ಹಾಗೂ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ರಾಜ್ಯಕ್ಕೆ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನದಿಯ ಸ್ವಚ್ಛತೆಯನ್ನು ಕಾಪಾಡಲು ಅನುದಾನ ಮೀಸಲಿಟ್ಟಿಲ್ಲ. ಪ್ರವಾಸೋದ್ಯಮದ ಬೆಳವಣಿಗೆಗೆ ಅನುದಾನ ಘೋಷಣೆ ಮಾಡಿಲ್ಲ. ಜಿಲ್ಲೆಯಲ್ಲಿರುವ ಕಾಲೇಜುಗಳ ಅಭಿವೃದ್ಧಿಗೆ ಆಸಕ್ತಿ ತೋರಿಲ್ಲ ಎಂದು ಟೀಕಿಸಿದ್ದಾರೆ. ಅಲ್ಪಸಂಖ್ಯಾತರನ್ನು ಓಲೈಸುವ ಭರದಲ್ಲಿ ಪರಿಶಿಷ್ಟರನ್ನು ಕಡೆಗಣಿಸಲಾಗಿದೆ,…
ಲೇಖಕ: admin
ಮಡಿಕೇರಿ ಮಾ.7 NEWS DESK : 16ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶುಭಕೋರಿದರು.
ಮಡಿಕೇರಿ ಮಾ.7 NEWS DESK : ಇತಿಹಾಸ ಪ್ರಸಿದ್ಧ ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿಯ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವವು ಮಾ.8 ರಿಂದ 19ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಹನ್ನೆರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.8 ರಂದು ಬೆಳಿಗ್ಗೆ 6 ಗಂಟೆಗೆ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ, ಊರಿನವರು ಮತ್ತು ಊರಿನ ಮಹಿಳೆಯರಿಂದ 12 ತಳಿಯತಕ್ಕಿ, ಬೊಳ್‍ಚ್ಚ, ದುಡಿಕೊಟ್ಟ್ ಪಾಟ್‍ನೊಂದಿಗೆ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಬೆಳಿಗ್ಗೆ 6.30 ಗಂಟೆಯಿಂದ ಊರಿನ ಪರವಾಗಿ ಶತರುದ್ರಾಭಿಷೇಕ, ಪ್ರಸಾದ ವಿತರಣೆ ನಡೆಯದ್ದು, ರಾತ್ರಿ 8 ಗಂಟೆಗೆ ಆರಿದ್ರ ನಕ್ಷತ್ರದ ಮೂಹೂರ್ತದಲ್ಲಿ “ಕೊಡಿಮರ” ನಿಲ್ಲಿಸುವುದು, ಶುದ್ಧ ಕಲಶ, ಉತ್ಸವ ಮೂರ್ತಿ ದರ್ಶನ, ಪ್ರಸಾದ ವಿತರಣೆ ಹಾಗೂ ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ಜರುಗಲಿದೆ. ಮಾ.9 ರಂದು ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ, ಸಂಜೆ 7 ಗಂಟೆಗೆ ತೂಚಂಬಲಿ ನಡೆಯಲಿದೆ. ಮಾ.10 ರಂದು ಪ್ರಾತಃಕಾಲ 5 ಗಂಟೆಗೆ ಉತ್ಸವ ಮೂರ್ತಿದರ್ಶನ, ಪೂರ್ವಾಹ್ನ 11 ಗಂಟೆಯಿಂದ ನಿತ್ಯಪೂಜೆ,…
ಮಡಿಕೇರಿ ಮಾ.7 NEWS DESK : ವಿನಾಕಾರಣ ಟೀಕೆಗೆ ಗುರಿಯಾಗುತ್ತಿರುವ ಖ್ಯಾತ ಚಲನಚಿತ್ರ ನಟಿ, ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಸರ್ಕಾರ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದ ರಶ್ಮಿಕಾ ಮಂದಣ್ಣ ಅವರು ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಅನಾವರಣದ ಮೂಲಕ ಭಾರತೀಯ ಚಲನಚಿತ್ರೋದ್ಯಮದಲ್ಲಿ ಅಪಾರ ಯಶಸ್ಸನ್ನು ಸಾಧಿಸಿದ್ದಾರೆ. ಇವರ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನು ಅರಿಯದ ಶಾಸಕರು ವಿನಾಕಾರಣ ಟೀಕೆ ಮಾಡುವ ಮೂಲಕ ಮಾನಸಿಕ ಕಿರುಕುಳ ನೀಡಿರುವುದು ಘೋರ ಸ್ವರೂಪ ಮತ್ತು ಬೆದರಿಕೆಗೆ ಸಮವಾಗಿದೆ ಎಂದು ಆರೋಪಿಸಿದ್ದಾರೆ. ಅಮಿತಾಬ್ ಬಚ್ಚನ್, ಸಲ್ಮಾನ್ ಖಾನ್ ರಂತಹ ಮೇರು ನಟರೊಂದಿಗೆ ಅಭಿನಯಿಸಿ ಸೈ ಎನಿಸಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು ಭಾರತೀಯ ಚಲನಚಿತ್ರ ರಂಗಕ್ಕೆ ದೊರೆತ ಅಪೂರ್ವ ಕೊಡುಗೆ ಹಾಗೂ ಶ್ರೇಷ್ಠ ನಟಿಯಾಗಿದ್ದಾರೆ. ಅವರ ಸ್ವಂತ ನಿರ್ಧಾರದ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವು…
ವಿರಾಜಪೇಟೆ ಮಾ.7 NEWS DESK : ಕದನೂರು ಗ್ರಾಮದ ಶ್ರೀ ಚೈತನ್ಯ ಮಠಪುರ ಆದಿ ಮುತ್ತಪ್ಪ ದೇವಾಲಯದ ವಾರ್ಷಿಕ ತೆರೆ ಮೋಹೊತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ಬಳಿಕ ಪೈಂಗುತ್ತಿ ಕಾರ್ಯಕ್ರಮ ನಡೆಯಿತು. ಸಂಜೆ ಶ್ರೀ ಮುತ್ತಪ್ಪನ್ ವೆಳ್ಳಾಟಂ, ಗುಳಿಗ ವೆಳ್ಳಾಟಂ ತೆರೆಗಳು ನಡೆಯಿತು. ಸಂಜೆ 6.30ಕ್ಕೆ ಆರಂಭವಾದ ತೆರ ಪ್ರದರ್ಶನಗಳು ರಾತ್ರಿ 11 ಗಂಟೆಯ ವೇಳೆಗೆ ಸಮಾಪ್ತಿಯಾಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಮತ್ತು ಉತ್ಸವ ಸಮಿತಿಯಿಂದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ
ವಿರಾಜಪೇಟೆ ಮಾ.7 NEWS DESK : ಸಮುದಾಯಗಳ ನಡುವೆ ಉತ್ತಮ ಬಾಂಧವ್ಯ ವೃದ್ಧಿಸಲು ಕ್ರೀಡೆ ಸಹಕಾರಿಯಾಗಿದೆ ಎಂದು ಅಂತರ್ ರಾಷ್ಟ್ರೀಯ ರಗ್ಬಿ ಪಟು ಮತ್ತು ಪ್ರಗತಿ ಆಂಗ್ಲ ಮಾದ್ಯಮ ಶಾಲೆಯ ಆಡಳಿತಾಧಿಕಾರಿ ಮಾದಂಡ ತಿಮ್ಮಯ್ಯ ಹೇಳಿದರು. ವಿರಾಜಪೇಟೆಯ ಹಿಂದೂ ಮಲಯಾಳಿ ಅಸೋಶಿಯೇಷನ್ ವತಿಯಿಂದ ನಗರದ ಎಫ್.ಎಂ.ಸಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಎರಡನೆ ವರ್ಷದ ಮುಕ್ತ ಹೊನಲು ಬೆಳಕಿನ ಕಾಲ್ಚೆಂಡು ಪಂದ್ಯಾವಳಿಯ ಪೊಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ಸಮುದಾಯದ ಏಳಿಗೆಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಕಳಕಳಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಸಮಾಜಕ್ಕೆ ಪೂಕರವಾಗಿರುವ ವಿಷಯವಾಗಿದೆ. ವಿಶು ಹಬ್ಬದ ಪ್ರಯುಕ್ತ ಎಲ್ಲಾ ಸಮುದಾಯ ಬಾಂಧವರಿಗಾಗಿ ಕಾಲ್ಚೆಂಡು ಪಂದ್ಯಾವಳಿಯನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು. ಹಿಂದೂ ಮಲಯಾಳಿ ಅಸೋಶಿಯೇಷನ್ ನ ಅಧ್ಯಕ್ಷ ಎ.ವಿನೂಪ್ ಕುಮಾರ್ ಮಾತನಾಡಿ, ವಿಶು ಹಬ್ಬವು ಮಲಯಾಳಂ ಭಾಷಿಕರ ಸಮೂದಾಯದ ಹಬ್ಬವಾಗಿದೆ. ಜನಾಂಗ ಬಾಂಧವರ ನಡುವಿನ ಬಾಂಧವ್ಯ ಬಲಪಡಿಸಲು ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದ್ದು, ಹಬ್ಬದ ಪ್ರಯುಕ್ತ ಹೊನಲು ಬೆಳಕಿನ 5+2 ಪುರುಷರ ಮುಕ್ತ ಕಾಲ್ಚೆಂಡು ಪಂದ್ಯಾವಳಿಯನ್ನು ಏ.18, 19 ಮತ್ತು…
*ನವ ಕರ್ನಾಟಕ ಬಜೆಟ್ : ಮುಖ್ಯಾಂಶಗಳು ಇಲ್ಲಿದೆ*
ವಿರಾಜಪೇಟೆ ಮಾ.7 NEWS DESK : ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಶಿಬಿರ ಪ್ರಯುಕ್ತ ಸೆಂಟ್ ಆನ್ಸ್ ಪದವಿ ಕಾಲೇಜು ಎನ್ ಎಸ್ ಎಸ್ ಘಟಕ ಹಾಗೂ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಹೆಗ್ಗಳ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ವಿರಾಜಪೇಟೆ ದಂತ ವೈದ್ಯಕೀಯ ಮಹಾ ವಿದ್ಯಾಲಯದ ಸಹಯೋಗದಲ್ಲಿ ಉಚಿತ ದಂತ ಪರೀಕ್ಷೆ ನಡೆಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಳ, ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು, ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಶಿಬಿರಾರ್ಥಿಗಳು ಹಾಗೂ ಸಾರ್ವಜನಿಕರು ಉಚಿತ ಆರೋಗ್ಯ ಹಾಗೂ ದಂತ ತಪಾಸಣೆಯನ್ನು ಮಾಡಿಸಿಕೊಂಡರು. ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಹೇಮಪ್ರಿಯ, ಡಾ.ಶಮೀರ್, ಕೊಡಗು ದಂತ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ.ಅಸ್ಮಿನ್ ತಂಡವು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ನಡೆಸಿತು. ಈ ಸಂದರ್ಭ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್, ಶಾಲಾ ಮುಖ್ಯ…
ಮಡಿಕೇರಿ ಮಾ.7 NEWS DESK : ತನ್ನ ಉಪಟಳದ ಮೂಲಕವೇ ಸೋಮವಾರಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳ ಜನರ ನಿದ್ದೆಗೆಡಿಸಿದ್ದ “ಕಾಜೂರು ಕರ್ಣ”ನೆಂದೇ ಹೆಸರುವಾಸಿಯಾಗಿದ್ದ ಕಾಡಾನೆಗೆ ಈಗ ನೋವಿನಿಂದ ನರಳುವ ಮತ್ತು ಕಣ್ಣೀರಿನಲ್ಲೇ ಕಾಲ ಕಳೆಯುವ ದುಸ್ಥಿತಿ ಬಂದೊದಗಿದೆ. ಅರಣ್ಯದಲ್ಲಿ ಅರಸನಂತೆ ಮೆರೆದು ಸೋಮವಾರಪೇಟೆಯ ಕಾಜೂರು ಗ್ರಾಮಸ್ಥರಲ್ಲಿ ನಿತ್ಯ ಆತಂಕ ಮೂಡಿಸುತ್ತಿದ್ದ ಒಂಟಿಸಲಗ ಕಳೆದ ಒಂದು ತಿಂಗಳಿನಿಂದ ದುಬಾರೆ ಸಾಕಾನೆ ಶಿಬಿರದಲ್ಲಿ ನರಕಯಾತನೆ ಅನುಭವಿಸುತ್ತಿದ್ದಾನೆ. ಬಲಾಢ್ಯ ದೇಹವನ್ನು ಹೊಕ್ಕಿರುವ ಮದ್ದುಗುಂಡುಗಳೇ ಕರ್ಣನ ಕಣ್ಣೀರಿಗೆ ಪ್ರಮುಖ ಕಾರಣವಾಗಿದೆ. ಇದೇ ಫೆ.1 ರಂದು ಬಂಧಿಯಾದ ಕರ್ಣ ದುಬಾರೆ ಸಾಕಾನೆ ಶಿಬಿರದ ಕ್ರಾಲ್ ನಲ್ಲಿ ರೋಧಿಸುತ್ತಿದ್ದ. ಈತನನ್ನು ಪರೀಕ್ಷೆಗೆ ಒಳಪಡಿಸಿದಾಗ ಕಾಲುಗಳಲ್ಲಿ ಗುಂಡು ಇರುವುದು ಗೋಚರಿಸಿದೆ. ನಂತರದ ದಿನಗಳಲ್ಲಿ ಎರಡೂ ಕಾಲುಗಳು ಸ್ವಾಧೀನ ಕಳೆದುಕೊಳ್ಳುತ್ತಾ ಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯರು ಸಾಕಾನೆ ಶಿಬಿರದ ಕ್ರಾಲ್ ಒಳಗೆಯೇ ಕರ್ಣನಿಗೆ ಚಿಕಿತ್ಸೆ ಆರಂಭಿಸಿದರು. ಗುಂಡೇಟಿನಿಂದ ಹಿಂಬದಿಯ ಕಾಲಿನಲ್ಲಿ ದೊಡ್ಡ ಗಾಯವಾಗಿ ಆ ಭಾಗ ಕೊಳೆಯುತ್ತಿತ್ತು.…
ನಾಪೋಕ್ಲು ಮಾ.7 NEWS DESK : ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದು ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಸೀರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಡಿಕೇರಿ ವಲಯ, ಜಿಲ್ಲಾ ಪಂಚಾಯತ್ ಕೊಡಗು, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರೌಢಶಾಲೆ ಕಡಗದಾಳು ಸಂಯುಕ್ತ ಆಶ್ರಯದಲ್ಲಿ ಕಡಗದಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರೌಢಾವಸ್ಥೆ ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ವಯಸ್ಸಿನಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವ ಅನಿವಾರ್ಯತೆ ಇದೆ ಎಂದು ಹೇಳಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಶಿಬಿರಾಧಿಕಾರಿ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಪಿ.ಪಿ.ನಂದಕುಮಾರ್ ಮಾತನಾಡಿ ಇದುವರೆಗೆ ಕರ್ನಾಟಕ ರಾಜ್ಯದ 19,500…






