ಲೇಖಕ: admin

ಮಡಿಕೇರಿ ಫೆ.4 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.17 ರಿಂದ ಮೇ 4ರ ವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ “ಜಿಪಿಎಲ್ ಗೌಡ ಪ್ರೀಮಿಯರ್ ಲೀಗ್” ಲೆದರ್ ಬಾಲ್ ಟಿ-20 ಕ್ರಿಕೆಟ್ ಪಂದ್ಯಾವಳಿ ನಡೆಸಲು ತೀರ್ಮಾನಿಸಲಾಗಿದೆ ಎಂದು ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಗೌಡ ಯುವ ವೇದಿಕೆ ಕಳೆದ ಹಲವಾರು ವರ್ಷಗಳಿಂದ ಗೌಡ ಜನಾಂಗ ಬಾಂಧವರಿಗೆ ಕ್ರೀಡಾಕೂಟ ಮತ್ತು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಜನಾಂಗದ ಯುವ ಪೀಳಿಗೆ ಲೆದರ್ ಬಾಲ್ ಕ್ರಿಕೆಟ್ ಅನ್ನು ವೃತ್ತಿಪರವಾಗಿ ಅಳವಡಿಸಿಕೊಂಡಿರುವುದು ಗಮನಾರ್ಹ ಎಂದರು. 2025ರ ಸೀಸನ್-03 ರಲ್ಲಿ ಒಟ್ಟು 10 ರಿಂದ 12 ಫ್ರಾಂಚೈಸಿಗಳು ಭಾಗವಹಿಸುತ್ತಿದ್ದು, ಈ ಬಾರಿ ಕೊಡಗು ಮತ್ತು ದಕ್ಷಿಣ ಕನ್ನಡ ಮೂಲದ ಎಲ್ಲಾ ಒಕ್ಕಲಿಗ ಗೌಡ ಜನಾಂಗದವರಿಗೆ ಆಡಲು ಅವಕಾಶ ಕಲ್ಪಿಸಲಾಗುತ್ತಿದೆ. ಒಕ್ಕಲಿಗ ಗೌಡರಲ್ಲಿ ಹಲವು ಉಪಜಾತಿಗಳು ಇದ್ದು, ಕೊಡಗು ಮತ್ತು ದ.ಕ…

Read More

ನಾಪೋಕ್ಲು ಫೆ.4 NEWS DESK : ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪಟ್ರಪಂಡ ಮೋಹನ್ ಮುದ್ದಪ್ಪ, ಉಪಾಧ್ಯಕ್ಷರಾಗಿ ನಾಟೋಳಂಡ ಕಸ್ತೂರಿ ಉತ್ತಪ್ಪ ಮೂರನೇ ಬಾರಿ ಆಯ್ಕೆಯಾಗಿದ್ದಾರೆ. ಗ್ರಾಹಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ನಿರ್ದೇಶಕರುಗಳಾಗಿ ಕುಲ್ಲೇಟಿರ ಎಂ.ಅರುಣ, ನಾಯಕಂಡ ಟಿ.ಮುತ್ತಪ್ಪ, ಬೊಟ್ಟೋಳಂಡ ಕೆ.ಕುಟ್ಟಪ್ಪ, ಬೊಟ್ಟೋಳಂಡ ಎ.ಪೊನ್ನಯ್ಯ, ಕೊಂಬಂಡ ಕೆ.ಗಣೇಶ್, ಹೆಚ್.ಎ.ಬೊಳ್ಳು, ಕೇಟೊಳಿರ ಗಣಪತಿ ಮುತ್ತಮ್ಮ, ಪಾಡಿಯಮ್ಮನ ಎ.ಮಹೇಶ್, ಕೆಲೇಟಿರ ಟಿ. ಗಣಪತಿ ಆಯ್ಕೆ ಆಗಿದ್ದಾರೆ. ಸಂಘದ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ತಿಮ್ಮಯ್ಯ ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಫೆ.4 NEWS DESK : ಕ್ಷೇತ್ರದ ಅಭಿವೃದ್ಧಿ ಕಾಮಗಾರಿಯಲ್ಲಿ ಒಂದಿಂಚು ಕೂಡ ಕಳಪೆಯಾದರೂ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಎಚ್ಚರಿಕೆ ನೀಡಿದ್ದಾರೆ. ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬಳದಾಳು, ಹೊದವಾಡ, ಪಾಲೆಮಾಡು, ಹೊದ್ದೂರು, ಕಬಡಗಕೇರಿ ಗ್ರಾಮಗಳಲ್ಲಿ ಒಟ್ಟು 1 ಕೋಟಿ 36 ಲಕ್ಷ ರೂಗಳ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅನುದಾನ ತರುವುದರ ಜೊತೆಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲು ಬದ್ದನಿದ್ದೇನೆ. ಹಾಗಾಗಿ ಯಾವುದೇ ಕಾಮಗಾರಿಯಲ್ಲಿ ಸ್ವಲ್ಪವೂ ಕೂಡ ಲೋಪವಾಗಬಾರದು ಎಂದು ಎಂಜಿನಿಯರ್ ಗಳಿಗೆ ಎಚ್ಚರಿಕೆ ನೀಡಿದರು. ಅಭಿವೃದ್ಧಿ ವಿಚಾರದಲ್ಲಿ ತಾವು ಯಾವುದೇ ರೀತಿಯ ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಡಾ.ಮಂತರ್ ಗೌಡ ಗ್ರಾಮಸ್ಥರು ಒಮ್ಮತದಿಂದ ಮತ್ತಷ್ಟು ಅವಶ್ಯಕ ಕಾಮಗಾರಿ ಪಟ್ಟಿ ನೀಡಿದರೆ ಅದನ್ನು ಕೂಡ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದರು. ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ…

Read More

ಕುಶಾಲನಗರ ಫೆ.4 NEWS DESK :  ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಿದರೆ ಅದಕ್ಕೆ ಕಾರಣರಾದ ವ್ಯಕ್ತಿಗಳಿಗೆ ಐದು ಸಾವಿರದವರೆಗೆ ದಂಡವನ್ನು ವಿಧಿಸಲಾಗುವುದು ಎಂದು ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು ಎಲ್ಲೆಂದರಲ್ಲಿ ಕಸ ತ್ಯಾಜ್ಯಗಳನ್ನು ಎಸೆಯುವವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ಜೊತೆಗೆ ದಂಡ ವಿಧಿಸಲು ನಿರ್ಣಯ ಕೈಗೊಳ್ಳಲಾಯಿತು ಎಂದು ಹೇಳಿದ್ದಾರೆ. ಪುರಸಭೆ ಮೂಲಕ ಮನೆ ಮನೆಗೆ ತೆರಳಿ ಕಸ ಸಂಗ್ರಹ ಮಾಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಆದರೂ ಕೆಲವು ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಹಾಗೂ ಜಲಮೂಲಗಳನ್ನು ಕಲುಷಿತಗೊಳಿಸುತ್ತಿರುವುದು ಕಂಡು ಬಂದಿದ್ದು ಸ್ವಚ್ಛ ಪಟ್ಟಣ ಹಾಗೂ ಸ್ವಚ್ಛ ಕಾವೇರಿ ಗುರಿಯೊಂದಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದ ಅವರು, ಪಟ್ಟಣದ ಒಳಚರಂಡಿ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಈಗಾಗಲೇ ಪಟ್ಟಣದ ಹಲವು ಕಡೆ ಕಲುಷಿತ ನೀರನ್ನು ಪಂಪ್ ಮೂಲಕ ಒಳಚರಂಡಿ ಯೋಜನೆಯ…

Read More

ಮಡಿಕೇರಿ ಫೆ.4 NEWS DESK : ತಮ್ಮ ಹಕ್ಕುಗಳಿಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ವಿವಿಧ ಕೊಡವ ಸಂಘಟನೆಗಳ ಸಹಯೋಗದಲ್ಲಿ ಕೊಡವ ಭಾಷಿಕ ಸಮುದಾಯಗಳು ಕುಟ್ಟಾದಿಂದ ಮಡಿಕೇರಿಯವರೆಗೆ ಕೈಗೊಂಡ “ಕೊಡವಾಮೆ ಬಾಳೋ” ಪಾದಯಾತ್ರೆಯ ಎರಡನೇ ದಿನ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡು ಪೊನ್ನಂಪೇಟೆ ಕೊಡವ ಸಮಾಜ ತಳಿಯತಕ್ಕಿ ಬೊಳಕ್ ಹಾಗೂ ದುಡಿ ಕೊಟ್ಟ್ ಪಾಟ್’ನೊಂದಿಗೆ ಸ್ವಾಗತಿಸುವ ಮೂಲಕ ಎರಡನೇ ದಿನದ ಪಾದಯಾತ್ರೆ ಸಂಪನ್ನಗೊಂಡಿತು. ಟಿ.ಶೆಟ್ಟಿಗೇರಿ ಪಟ್ಟಣದಲ್ಲಿ ಮಾಜಿ ಸೈನಿಕರು ನಿರ್ಮಿಸಿದ ಅಮರ್ ಜವಾನ್ ಪುತ್ಥಳಿಗೆ ಸ್ಥಳಿಯ ಕೊಡವ ಸಮಾಜದ ಅಧ್ಯಕ್ಷ ಕೈಬುಲೀರ ಹರೀಶ್ ಮಾಲಾರ್ಪಣೆ ಮಾಡಿದ ನಂತರ ಟಿ.ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ಪ್ರಾರ್ಥನೆ ಸಲ್ಲಿಸಿ ನೆಲ್ಲಕ್ಕಿಗೆ ಅಕ್ಕಿ ಹಾಕುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ನಂತರ ತಳಿಯಕ್ಕಿ ಬೊಳಕ್’ನೊಂದಿಗೆ ಶಿಸ್ತುಬದ್ಧವಾಗಿ ಹೊರಟ ಪಾದಯಾತ್ರೆ ನಂತರ ಒಂಟಿಯಂಗಡಿಯ ಇತಿಹಾಸ ಪ್ರಸಿದ್ಧದ ಪೆರುಮಾಳ್ ಪಟ್ಟಿ ದೇವನೆಲೆಯಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಶುಭಕೋರಲಾಯಿತು. ಸಂಭ್ರಮ ಮಹಿಳಾ ಸಂಘ ಸೇರಿದಂತೆ ಮಚ್ಚಮಾಡ ಕುಟುಂಬ,…

Read More

ಮಡಿಕೇರಿ ಫೆ.4 NEWS DESK : ತಮ್ಮ ಹಕ್ಕುಗಳಿಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ವಿವಿಧ ಕೊಡವ ಸಂಘಟನೆಗಳ ಸಹಯೋಗದಲ್ಲಿ ಕೊಡವರು ಆರಂಭಿಸಿರುವ ಬೃಹತ್ ಪಾದಯಾತ್ರೆ ಇಂದು ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಿಂದ ಪೊನ್ನಂಪೇಟೆ ವರೆಗೆ ಸಾಗಿತು. ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆ ನಡೆಸಿದ ಕೊಡವರಿಗೆ ವಿವಿಧೆಡೆ ಬೆಂಬಲ ವ್ಯಕ್ತವಾಯಿತು. ವೀಲ್ ಚೇರ್’ನಲ್ಲಿ ಆಗಮಿಸಿದ ಹಿರಿಯ ಮಹಿಳೆಯೊಬ್ಬರು ಕೊಡವಾಮೆ ಬಾಳೊ ಪಾದಯಾತ್ರೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ಹೈಸೊಡ್ಲೂರು ಗ್ರಾಮದ ಬಯವಂಡ ಸರಸ್ವತಿ ಪೂವಯ್ಯ(86) ಇವರು ನಡೆಯಲು ಆಗದ ಕಾರಣ ವೀಲ್ ಚೇರ್’ನಲ್ಲಿ ಪಾದಯಾತ್ರೆಗೆ ಆಗಮಿಸಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ತಾವಳಗೇರಿ ಮಚ್ಚಮಾಡ ಐನ್ ಮನೆ ಯಲ್ಲಿ ಮಚ್ಚಮಾಡ ಕುಟುಂಬಸ್ಥರು ಪಾದಯಾತ್ರೆಯನ್ನು ಸ್ವಾಗತಿಸಿ ಉಪಚರಿಸಿದರು. ನಂತರ ಐತಿಹಾಸಿಕ ತಾವಳಗೇರಿಯ ಪೆರುಮಾಳ್ ಮಂದಿನಲ್ಲಿರುವ ಪೆರುಮಾಳ್ ಅಚ್ಚ ನಡೆಯಲ್ಲಿ ಪ್ರಾರ್ಥಿಸಿ ಪಾದಯಾತ್ರೆ ಸಂದರ್ಭ ತೊಟ್ಟಿರುವ ಸಂಕಲ್ಪವನ್ನು ಯಶಸ್ವಿಗೊಳಿಸುವಂತೆ ಪ್ರಾರ್ಥಿಸಲಾಯಿತು. ಟಿ-ಶೆಟ್ಟಿಗೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟ ಹಾಗೂ ಸಂಭ್ರಮ ಮಹಿಳಾ ಸಾಂಸ್ಕೃತಿಕ ಕೇಂದ್ರದ ಮಹಿಳೆಯರು ಸಾಂಪ್ರದಾಯಿಕ…

Read More

ಮಡಿಕೇರಿ NEWS DESK ಫೆ.4 : ಕೇವಲ ಮೂರುವರೆ ಸಾವಿರದಷ್ಟಿರುವ ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್ ಇಂಟ್ಯಾಂಜಿಬಲ್ (ಅದೃಶ್ಯ) ಮತ ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ, ಅಥವಾ ಪರ್ಯಾಯವಾಗಿ, ಕೊಡವ ಸಾಂಪ್ರದಾಯಿಕ ಆವಾಸಸ್ಥಾನವನ್ನು ಒಳಗೊಂಡಿರುವ ವಿಶೇಷ ಕೊಡವ ಅಸೆಂಬ್ಲಿ ಮತ್ತು ಸಂಸದೀಯ ಕ್ಷೇತ್ರವನ್ನು ರಚಿಸಬೇಕು. ಆ ಮೂಲಕ ನಮಗೆ ಕೇಂದ್ರ ವಿಸ್ತಾ ಅರ್ಥಾತ್ ಹೊಸ ಪಾರ್ಲಿಮೆಂಟ್ ಹಾಗೂ ರಾಜ್ಯ ವಿಧಾನಸಭೆಯಲ್ಲಿ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಿತು. ಈ ಸಂದರ್ಭ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ, ಆದಿಮಸಂಜಾತ ಕೊಡವರಿಗೆ ಕೊಡವ ಸಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ಅಸಂಬ್ಲಿ…

Read More

ಮಡಿಕೇರಿ ಫೆ.3 NEWS DESK : ಕೇಂದ್ರದ 2024-25ನೇ ಸಾಲಿನ ಬಡ್ಜೆಟ್‍ನಲ್ಲಿ ರಾಜ್ಯಕ್ಕೆ ಕೇವಲ ನಾಮ ತೀಡಿದ ಚೆಂಬು ಮತ್ತು ಚಿಪ್ಪನ್ನಷ್ಟೆ ನೀಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾದ ಎಂ.ಲಕ್ಷ್ಮಣ್ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ನಾಮ ತೀಡಿದ ಚೆಂಬು ಮತ್ತು ಚಿಪ್ಪನ್ನು ಪ್ರದರ್ಶಿಸಿ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡಿಸಿರುವ 50.65 ಲಕ್ಷ ಕೋಟಿಯ ಬಜೆಟ್‍ನಲ್ಲಿ ಶೇ.32 ರಷ್ಟು ಅಂದರೆ 16 ಲಕ್ಷ ಕೋಟಿ ರೂ.ಗಳ ಸಾಲದ ಪ್ರಸ್ತಾವಿದ್ದರೆ, ಸಾಲದ ಮೇಲನ ಬಡ್ಡಿಯ ಮೊತ್ತವೆ 12.7 ಲಕ್ಷ ಕೋಟಿ, ಅಂದರೆ ಶೇ.26 ರಷ್ಟಾಗುತ್ತದೆ. ಒಟ್ಟಾರೆಯಾಗಿ ಒಟ್ಟು ಬಡ್ಜೆಟ್‍ನ ಶೇ.58 ಭಾಗ ಸಾಲ ಮತ್ತು ಬಡ್ಡಿಗೆ ಮೀಸಲಿಡಲಾಗಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ರಾಷ್ಟ್ರವನ್ನು ‘ಸಾಲದ ಕೂಪ’ಕ್ಕೆ ತಳ್ಳುತ್ತಿರುವುದಾಗಿ ಆರೋಪಿಸಿದರು. ಸ್ವಾತಂತ್ರ್ಯಾನಂತರದಿಂದ 2014ರವರೆಗೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಎಲ್ಲಾ ಪಕ್ಷಗಳು ಮಾಡಿರುವ ಸಾಲದ ಮೊತ್ತ 53 ಲಕ್ಷ ಕೋಟಿ. ವಿಶ್ವಗುರು ಪ್ರಧಾನಿಯಾದ ಬಳಿಕ ಕಳೆದ ಹತ್ತೂವರೆ ವರ್ಷಗಳಲ್ಲಿ…

Read More

ಮಡಿಕೇರಿ ಫೆ.4 NEWS DESK : ಕರ್ನಾಟಕ ಸರ್ಕಾರ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ, 05 ರಿಂದ 11 ರವರೆಗೆ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ನಗರದ ಕೊಡವ ಸಮಾಜದ ಪ್ರಾಂಗಣದಲ್ಲಿ ನಡೆಯಲಿದೆ. ಫೆಬ್ರವರಿ, 5 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ…

Read More

ಮಡಿಕೇರಿ NEWS DESK  ಫೆ.3 : ಭಾಗಮಂಡಲ ಮೇಲ್ಸೇತುವೆ ಉದ್ಘಾಟನೆಗೆಂದು ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ನಿರಾಶೆ ಮೂಡಿಸಿದ್ದಾರೆ. ಜಿಲ್ಲೆಯಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ವಿಶ್ವಾಸ ಮೂಡಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾಗಮಂಡಲ ಮೇಲ್ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿಗಳು ರಾಜಕೀಯ ಪ್ರೇರಿತ ಭಾಷಣವನ್ನಷ್ಟೇ ಮಾಡಿ ಹೋಗಿದ್ದಾರೆ ಹೊರತು ಜಿಲ್ಲೆಯನ್ನು ಕಾಡುತ್ತಿರುವ ಸಮಸ್ಯೆಗಳ ಕುರಿತು ಉಲ್ಲೇಖಿಸಿಲ್ಲ ಮತ್ತು ಯಾವುದೇ ಅಭಿವೃದ್ಧಿಪರ ಘೋಷಣೆಗಳನ್ನು ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದ್ದು, ಜಾನುವಾರುಗಳು ಬಲಿಯಾಗುತ್ತಿವೆ, ಮಾನವನ ಮೇಲೂ ದಾಳಿಯಾಗುತ್ತಿದೆ. ಕೃಷಿ ಫಸಲು ನಾಶವಾಗಿ ರೈತಾಪಿ ವರ್ಗ ನಷ್ಟ ಅನುಭವಿಸುತ್ತಿದೆ. ಅಕಾಲಿಕ ಮಳೆಯ ಪರಿಣಾಮ ಕಾಫಿ ಬೆಳೆಗಾರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದ ಗೊಂದಲ ಇನ್ನೂ ಕೂಡ ಇತ್ಯರ್ಥವಾಗಿಲ್ಲ. ರಾಜ್ಯ ಸರ್ಕಾರದಿಂದ ಪರಿಹಾರವಾಗಬಲ್ಲ…

Read More